ಇಂಫಾಲ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ ಪ್ರಕರಣಕ್ಕೆ (Manipur violence) ಸಂಬಂಧಿಸಿದಂತೆ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ. ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ ಮತ್ತು ಶಾಂತಿ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ ಅಮಿತ್ ಶಾ ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ನಿರಾಶ್ರಿತರನ್ನು ಅವರ ಮನೆಗಳಿಗೆ ಹಿಂದಿರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಮಣಿಪುರ ಶಾಂತವಾಗಿದೆ . ನಾವು ಜನರಿಗೆ ಅಭಿವೃದ್ಧಿ ಮತ್ತು ಕಲ್ಯಾಣವನ್ನು ತಲುಪಿಸುತ್ತಿದ್ದೇವೆ ಎಂದು ಹೇಳಿದರು. ಮಣಿಪುರದಲ್ಲಿ ಕುಕಿ ಮತ್ತು ಮೇಟಿ ಸಮುದಾಯದ ನಡುವಿನ ಸಂಘರ್ಷಕ್ಕೆ ಕಾರಣವಾದ ಆತುರದ ನಿರ್ಧಾರದಿಂದ ಮೀಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನವನ್ನು ನೀಡಲು ರಾಜ್ಯ ಸರ್ಕಾರವನ್ನು…
Author: Prajatv Kannada
ಗಾಂಧಿನಗರ: ಗುಜರಾತ್‍ನ ರಾಜುಲಾ ನಗರದ ಬಿಜೆಪಿ ಶಾಸಕ ಹೀರಾ ಸೋಲಂಕಿ (BJP MLA Hira Solanki) ಅವರು ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ರಕ್ಷಿಸುವ ಮೂಲಕ ಎಲ್ಲರ ಪ್ರಸಂಶೆಗೆ ಪಾತ್ರರಾಗಿದ್ದಾರೆ. ನಾಲ್ವರನ್ನು ಕಲ್ಪೇಶ್ ಶಿಯಾ, ನಿಕುಲ್ ಗುಜಾರಿಯಾ, ವಿಜಯ್ ಗುಜಾರಿಯಾ ಮತ್ತು ಜೀವನ್ ಗುಜಾರಿಯಾ ಎಂದು ಗುರುತಿಸಲಾಗಿದೆ. ಈ ನಾಲ್ವರು ಸಮೀಪದ ಪಟ್ವಾ ಗ್ರಾಮದ ಸಮುದ್ರ ತೀರದಲ್ಲಿರುವ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದರು. ಹೀಗೆ ಈಜುತ್ತಾ ಈಜುತ್ತಾ ಅವರು ಮುಳುಗಲು ಪ್ರಾರಂಭಿಸಿದರು. ಇತ್ತ ಘಟನೆಯ ಬಗ್ಗೆ ತಿಳಿದ ಶಾಸಕ ಸೋಲಂಕಿ ತಕ್ಷಣ ಸ್ಥಳಕ್ಕಾಗಮಿಸಿ ಇತರರ ಸಹಾಯದಿಂದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ್ದಾರೆ. ಅಲ್ಲದೆ ನಾಲ್ವರಲ್ಲಿ ಮೂವರನ್ನು ರಕ್ಷಿಸಿದ್ದಾರೆ. ಆದರೆ ಓರ್ವನನ್ನು ಉಳಿಸಲು ಸಾಧ್ಯವಾಗಲಿಲ್ಲ. ದೀರ್ಘ ಕಾಲದ ಹುಡುಕಾಟದ ನಂತರ ಆತನ ಶವವನ್ನು ನೀರಿನಿಂದ ಮೇಲಕ್ಕೆತ್ತಲಾಯಿತು. ಸದ್ಯ ಸೋಲಂಕಿ ಯುವಕರನ್ನು ರಕ್ಷಿಸಿದ ವೀಡಿಯೋ ಸಾಮಾಜಿಕ ಜಾಲತಾಣ (Social Media) ಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದ ಬಳಿಕ ಎಲ್ಲರೂ ಶಾಸಕರಿಗೆ ಶಹಬ್ಬಾಸ್ ಗಿರಿ…
ಜೈಪುರ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election) ಸಂದರ್ಭ ಕಾಂಗ್ರೆಸ್ (Congress) ಹೊಸ ಗ್ಯಾರಂಟಿ ಸೂತ್ರವನ್ನು (Guarantee Formula) ಹೆಣೆದಿದೆ. ಕಾಂಗ್ರೆಸ್‌ನವರ ಈ ಗ್ಯಾರಂಟಿಗಳು ದೇಶವನ್ನು ದಿವಾಳಿಯಾಗಿಸಬಹುದು (Bankrupt) ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ರಾಜಸ್ಥಾನದ (Rajasthan) ಅಜ್ಮೀರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ರಾಜ್ಯ ಚುನಾವಣೆಗಳಿಗಾಗಿ ಗ್ಯಾರಂಟಿ ಸೂತ್ರಗಳನ್ನು ಸೃಷ್ಟಿಸಿದೆ. ಆದರೆ ಅವರು ತಾವು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತಾರಾ? ಕಲ್ಯಾಣಕ್ಕಾಗಿ ಅವರಿಗೆ ಇಷ್ಟೊಂದು ಹಣ ಎಲ್ಲಿಂದ ಬರುತ್ತದೆ ಎಂದು ಜನರು ಆಶ್ಚರ್ಯಪಡುತ್ತಿದ್ದಾರೆ. ಆದರೆ ಅವರಿಗೆ ಎಂದಿಗೂ ಹಣದ ಸಮಸ್ಯೆಯೇ ಆಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 50 ವರ್ಷಗಳ ಹಿಂದೆ ಕಾಂಗ್ರೆಸ್ ದೇಶದಲ್ಲಿ ಬಡತನ ತೊಡೆದುಹಾಕುತ್ತದೆ ಎಂದು ಭರವಸೆ ನೀಡಿತ್ತು. ಆದರೆ ಇದು ಅವರು ಬಡವರಿಗೆ ಬಗೆದಿರುವ ದೊಡ್ಡ ದ್ರೋಹವಾಗಿದೆ. ಬಡವರ ದಾರಿ ತಪ್ಪಿಸುವುದು ಮತ್ತು ಅವರನ್ನು ವಂಚಿತರನ್ನಾಗಿ ಮಾಡುವುದು ಕಾಂಗ್ರೆಸ್‌ನ ನೀತಿಯಾಗಿದೆ. ಇದರಿಂದ ರಾಜಸ್ಥಾನದ ಜನರು ಕೂಡಾ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜಸ್ಥಾನಕ್ಕೆ ಏನು ಸಿಕ್ಕಿದೆ?…
ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ (Election) ನಡೆಯಲಿರುವ ಹಿನ್ನೆಲೆ ರಾಜಸ್ಥಾನದ (Rajasthan) ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಬುಧವಾರ ರಾಜ್ಯದ ಜನರಿಗೆ 100 ಯೂನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದ್ದಾರೆ. ತಿಂಗಳಿಗೆ 100 ಯೂನಿಟ್‌ವರೆಗೆ ವಿದ್ಯುತ್ ಬಳಸುವ ಜನರಿಗೆ ವಿದ್ಯುತ್ ಬಿಲ್ ಶೂನ್ಯವಾಗಿರುತ್ತದೆ. ಮೊದಲ 100 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುವುದು. ಎಷ್ಟೇ ಬಿಲ್ ಬಂದರೂ ಮೊದಲ 100 ಯೂನಿಟ್ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ಅವುಗಳಲ್ಲಿ ಒಂದು ಪ್ರತಿ ಮನೆಗೆ 200 ಯೂನಿಟ್‌ಗಳ ವರೆಗೆ ಉಚಿತ ವಿದ್ಯುತ್ ಅನ್ನು ನೀಡುವುದಾಗಿ ಘೋಷಿಸಿತ್ತು. ಇದೀಗ ರಾಜಸ್ಥಾನದಲ್ಲೂ ಗೆಹ್ಲೋಟ್ ಚುನಾವಣೆ ಸಮೀಪಿಸುತ್ತಿದ್ದಂತೆ ಉಚಿತ ವಿದ್ಯುತ್ ಘೋಷಣೆ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಸಾಂಬಾದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳು ಕೋರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಸಾಂಬಾ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ಪ್ರವೇಶಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ, ಪಾಕಿಸ್ತಾನದಿಂದ ನಿರಂತರ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಬುಧವಾರ ತಡರಾತ್ರಿ ಐಬಿಯಲ್ಲಿ ಕೆಲವು ಚಲನವಲನಗಳನ್ನು ಯೋಧರು ಗಮನಿಸಿದ್ದಾರೆ. ಹಾಗಾಗಿ ಅಲರ್ಟ್ ಆಗಿದ್ದರು. ಆ ವ್ಯಕ್ತಿಯ ಬಳಿ ಎಷ್ಟೇ ಪ್ರಶ್ನೆ ಮಾಡಿದರು ಉತ್ತರಿಸದೆ ಮುನ್ನುಗ್ಗುತ್ತಿದ್ದ ಹೀಗಾಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಪೂಂಚ್ನಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಗಾಯಗೊಂಡಿದ್ದ ಆತನಿಂದ ಎಕೆ 56 ರೈಫಲ್, ಎರಡು ಪಿಸ್ತೂಲ್, ಆರು ಗ್ರೆನೇಡ್ ಮತ್ತು 30 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿತ್ತು.
ದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮೇ 19 ರಂದು 2,000 ರೂ. ಮುಖಬೆಲೆಯ ನೋಟುಗಳನ್ನು (Rs. 2000 Note) ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ಇದಾದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) ಇದುವರೆಗೆ ಅಂದಾಜು 17,000 ಕೋಟಿ ರೂ. ಮೌಲ್ಯದ 2,000 ರೂ.ಯ ನೋಟುಗಳನ್ನು ಠೇವಣಿ ಹಾಗೂ ವಿನಿಮಯ ಮಾಡಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ. ಆರ್‌ಬಿಐ ಮೇ 19 ರಂದು ಚಲಾವಣೆಯಲ್ಲಿದ್ದ 2,000 ರೂ. ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಂಡಿತು. ಸಾರ್ವಜನಿಕರು 2,000 ರೂ.ಯ ನೋಟುಗಳನ್ನು ತಮ್ಮ ಖಾತೆಗಳಲ್ಲಿ ಠೇವಣಿ ಇಡಲು ಹಾಗೂ ಎಕ್ಸ್‌ಚೇಂಜ್ ಮಾಡಿಕೊಳ್ಳಲು ಮೇ 23 ರಿಂದ ಅನುಮತಿ ನೀಡಿದ್ದು, ಸೆಪ್ಟೆಂಬರ್ 30ರ ವರೆಗೆ ಕಾಲಾವಕಾಶ ನೀಡಿದೆ. ನೋಟುಗಳನ್ನು ಬದಲಿಸಿಕೊಳ್ಳಲು (Note Exchange) ಅನುಮತಿ ನೀಡಿದ ವಾರದ ಬಳಿಕ ಮಂಗಳವಾರ ಮಾಹಿತಿ ನೀಡಿರುವ ಎಸ್‌ಬಿಐ ಅಧ್ಯಕ್ಷ ದಿನೇಶ್ ಕುಮಾರ್ ಖಾರಾ, ತಮ್ಮ ಬ್ಯಾಂಕ್‌ನಲ್ಲಿ ಇಲ್ಲಿಯವರೆಗೆ ಸುಮಾರು 14,000 ಕೋಟಿ ರೂ. ಮೌಲ್ಯದ 2,000 ರೂ.ಯ ನೋಟುಗಳನ್ನು ಠೇವಣಿಯಾಗಿ ಸ್ವೀಕರಿಸಲಾಗಿದೆ. ಸುಮಾರು…
ದೆಹಲಿ: 2024 ರ ಸಾರ್ವತ್ರಿಕ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಾಗಲೇ ಸಿದ್ದತೆ ನಡೆಸುತ್ತಿವೆ. ಇದಕ್ಕೆ ಪೂರ್ವಭಾವಿಯಾಗಿ ಬಿಜೆಪಿ ಮತ್ತೆ ‘ಮೋದಿ ಬ್ರ್ಯಾಂಡ್’ ಅನ್ನು ಮತ್ತೆ ಬಳಸಿಕೊಳ್ಳುವ ಚಿಂತನೆ ನಡೆಸಿದೆ. ಆದರೆ, ಇದರ ಮೇಲೆ ಸಂಪೂರ್ಣ ಅವಲಂಬನೆಯಾಗುವುದು ತುಂಬಾ ಅಪಾಯಕಾರಿ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ. ಇದು ಕೇಸರಿ ಪಾಳಯದಲ್ಲಿ ಆತಂಕವನ್ನು ಹೆಚ್ಚಿಸಿದೆ. ‘ದಿ ಟೆಲಿಗ್ರಾಪ್’ ಪತ್ರಿಕೆ ಪ್ರಕಟಿಸಿರುವ ಈ ವರದಿಯನ್ನು ಓದಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮ್ಮ ಸರ್ಕಾರದ ಒಂಬತ್ತನೇ ವಾರ್ಷಿಕೋತ್ಸವವನ್ನು ಟ್ವೀಟ್ ಮಾಡುವ ಮೂಲಕ, ‘ಇನ್ನಷ್ಟು ಕಷ್ಟಪಟ್ಟು ಕೆಲಸ ಮಾಡುತ್ತೇನೆ’ ಎಂದು ಭರವಸೆ ನೀಡಿದ್ದಾರೆ. ಇಂದು ನಾವು ರಾಷ್ಟ್ರದ ಸೇವೆಯಲ್ಲಿ 9 ವರ್ಷಗಳನ್ನು ಪೂರೈಸುತ್ತಿದ್ದೇವೆ. ನಾನು ನಮ್ರತೆ ಹಾಗೂ ಕೃತಜ್ಞತೆಯಿಂದ ತುಂಬಿ ಹೋದಿದ್ದೇನೆ. ನಮ್ಮ ಪ್ರತಿಯೊಂದು ನಿರ್ಧಾರ, ಪ್ರತಿಯೊಂದು ಕ್ರಿಯೆಯು ಜನರ ಜೀವನವನ್ನು ಸುಧಾರಿಸುವ ಬಯಕೆಯಿಂದ ಮಾರ್ಗದರ್ಶಿಸಲ್ಪಟ್ಟಿದೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಾವು ಇನ್ನೂ ಹೆಚ್ಚು ಶ್ರಮಿಸುತ್ತೇವೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಸರ್ಕಾರ ಮತ್ತು…
ಚಾಮರಾಜನಗರ: ಲಘು ವಿಮಾನವೊಂದು ಪತನಗೊಂಡಿರುವ(Aircraft crash) ಘಟನೆ ಇಂದು ಚಾಮರಾಜನಗರದ (chamarajanagar) ಎಚ್ ಮೂಕಳ್ಳಿ ಬಳಿ ನಡೆದಿದೆ. ವಿಮಾನದಲ್ಲಿದ್ದ ಇಬ್ಬರು ಪ್ಯಾರಾಚೂಟ್ ಮೂಲಕ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳದುಬಂದಿದೆ. ಹೀಗಾಗಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ವಿಮಾನ ಛಿದ್ರ ಛಿದ್ರವಾಗಿದ್ದು, ಅದರ ಬಿಡಿ ಭಾಗಗಗಳು ಎಲ್ಲೊಂದರಲ್ಲಿ ಬಿದ್ದಿವೆ.
ಯಾದಗಿರಿ: ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣದ ಗ್ಯಾರಂಟಿ ಭರವಸೆ ಹಿನ್ನೆಲೆ ಯಾದಗಿರಿಯ ಶಹಾಪುರ ನಗರದಲ್ಲಿ ಬಸ್ ಟಿಕೆಟ್ ಪಡೆಯಲು ಮಹಿಳೆಯರು ನಿರಾಕರಿಸುತ್ತಿದ್ದಾರೆ. ಬಸ್ ಪ್ರಯಾಣ ಫ್ರೀ ಅಂತಾ ಹೇಳಿದ್ದಾರೆ, ಆದ್ರೆ ಇದುವರೆಗೂ ಆಗಿಲ್ಲ. ಯಾವಾಗ ಬಸ್ ಪ್ರಯಾಣ ಫ್ರೀ ಆಗುತ್ತದೆಂದು ಕಂಡಕ್ಟರ್ ಗೆ ಮಹಿಳೆಯರು ಪ್ರಶ್ನೆ ಮಾಡಿದ್ದಾರೆ. ಶಹಾಪುರದಿಂದ ಕಲಬುರಗಿಗೆ ತೆರಳುವ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಮಹಿಳೆಯರು ಕಂಡಕ್ಟರ್ ಗೆ ಪ್ರಶ್ನೆ ಮಾಡಿದ್ದಾರೆ.
ಗಡಿ ಜಿಲ್ಲೆ ಬೀದರ್‌ನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು, ೪೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಬಿಸಿಲಿನ ಜಳಕ್ಕೆ ಜನರೇ ತತ್ತರಿಸಿ ಹೋಗುತ್ತಿದ್ದು ಇನ್ನು ಮೂಕ ಪ್ರಾಣಿಗಳ ವೇದನೆ ಹೇಲತಿರದ್ದಾಗಿದೆ. ಹೀಗಾಗಿ ಕಾಡುಪ್ರಾಣಿಗಳ ನೀರಿನ ದಾಹ ತಣಿಸಲು ಮುಂದಾಗಿರುವ ಬೀದರ್‌ನ ಸ್ವಾಭಿಮಾನಿ ಗೆಳೆಯರ ಬಳಗ ಮೀಸಲು ಅರಣ್ಯ ಪ್ರದೇಶದಲ್ಲಿ ನೀರಿನ ತೊಟ್ಟಿಗಳನ್ನು ನಿರ್ಮಿಸಿ ನಿರುಣಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಶಹಾಪುರ, ಅಮಲಾಪುರ, ನಾಗೂರ, ನಿರ್ಣಾ ಗ್ರಾಮದ ಬಳಿಇರುವ ಮೀಸಲು ಅರಣ್ಯ ಪ್ರದೇಶದಲ್ಲಿ ಕೋತಿ, ಜಿಂಕೆ, ಉಡಾ ಸೇರಿದಂತೆ ವಿವಿಧ ಜಾತಿಯ ಪ್ರಾಣಿ ಪಕ್ಷಿಗಳ ಕಂಡುಬರುತ್ತವೆ. ಬಿಸಿಲಿನ ಧಗೆಗೆ ಬೆಂಡಾದ ಪ್ರಾಣಿಗಳು ನೀರಿಗಾಗಿ ಪರಿತಪಿಸುತ್ತವೆ. ಇದನ್ನ ಅರಿತ ಸ್ವಾಭಿಮಾನಿ ಗೆಳೆಯರ ಬಳಗವು ಕಾಡು ಪ್ರದೇಶದಲ್ಲಿ ತೊಟ್ಟಿಗಳನ್ನ ನಿರ್ಮಾಣ ಮಾಡಿದ್ದು, ಪ್ರತಿನಿತ್ಯ ಪಾಳೆ ಆಧಾರದ ಮೇಲೆ ತೊಟ್ಟಿಗಳಿಗೆ ನೀರು ಹಾಕಿ ಪ್ರಾಣಿಗಳ ನೀರಿನ ದಾಹ ತಿರಿಸುವ ಕೆಲಸಕ್ಕೆ ಮುಂದಾಗಿದ್ದು ಪ್ರಶಂಶನೀಯ ಕೆಲಸವಾಗಿದೆ. ಇನ್ನು ಈ ಕುರಿತು ಸ್ವಾಭಿಮಾನಿ ಗೆಳೆಯರ ಬಳಗದ ಸದಸ್ಯರೊಬ್ಬರು ಮಾತನಾಡಿ, ಇಲ್ಲಿ…