ಬೆಂಗಳೂರು: ಕ್ವಾರಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹೆಬ್ಬಗೋಡಿಯ ಹುಲಿಮಂಗಲದ ಕ್ವಾರಿಯಲ್ಲಿ ಘಟನೆ ಜರುಗಿದೆ. 12 ವರ್ಷದ ಹಾಸನ ಮೂಲದ ತೀರ್ತೇಶ್ ಹಾಗೂ 14 ವರ್ಷದ ಫೈಸಲ್ ಖಾನ್ ಮೃತ ಬಾಲಕರು ಎಂದು ಗುರುತಿಸಲಾಗಿದೆ. ಮೃತರು, ಎಲೆಕ್ಟ್ರಾನಿಕ್ ಸಿಟಿ ಬಳಿಯ ಮಾರಗೊಂಡನ ಹಳ್ಳಿ ಯಲ್ಲಿ ವಾಸವಾಗಿದ್ದರು. ನೆನ್ನೆ ಸಂಜೆ 5 ಗಂಟೆಯಲ್ಲಿ ಹೆಬ್ಬಗೋಡಿಯ ಹುಲಿಮಂಗಲದ ಕ್ವಾರಿಯಲ್ಲಿ ಈಜಲು ಬಂದಿದ್ದರು. ಈ ವೇಳೆ ಅವರು ನೀರು ಪಾರಾಗಿದ್ದಾರೆ. ಇನ್ನೂ ಮೃತ ದೇಹಗಳಿಗೆ ಅಗ್ನಿಶಾಮಕ ದಳದ ಸಿಬ್ಬಂದಿ, ಶೊಧ ಕಾರ್ಯ ನಡೆಸುತ್ತಿದ್ದು, ಹೆಬ್ಬಗೋಡಿ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. 9008568033
Author: Prajatv Kannada
ಬೆಂಗಳೂರು: ಕುಸ್ತಿಪಟುಗಳ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದು ಮಾಜಿ ಶಾಸಕ ಸಿಟಿ ರವಿ ಆರೋಪಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಕುಸ್ತಿಪಟುಗಳ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೊಂದು ಹೀನಾಯ ಸೋಲನ್ನು ದಿಟ್ಟಿಸಿ ನೋಡುತ್ತಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಪ್ರತಿಷ್ಠೆಯನ್ನು ಹಾಳು ಮಾಡಲು ಕುಸ್ತಿಪಟುಗಳನ್ನು ಬಳಸಿಕೊಳ್ಳುತ್ತಿದೆ. ತುಕ್ಡೆ ತುಕ್ಡೆ ಗ್ಯಾಂಗ್” ನಾಯಕನಾಗಿ ತನ್ನನ್ನು ತಾನು ಕುಗ್ಗಿಸಿಕೊಂಡ ಪಕ್ಷಕ್ಕೆ ಭಾರತೀಯರು ತಕ್ಕ ಪಾಠ ಕಲಿಸುತ್ತಾರೆ.’ ಎಂದು ಕುಸ್ತಿಪಟುಗಳ ಪ್ರತಿಭಟನೆಯ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು: ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು ಅಹವಾಲುಗಳನ್ನು ಸ್ವೀಕರಿಸಿದರು. ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಗಿ ಬೆಳೆಗಾರರಿಗೆ ಹಣ ಪಾವತಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ರೈತರಿಗೆ ಅನಾನುಕೂಲ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು: ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಎಂದು ಸರ್ಕಾರಕ್ಕೆ ಮಾಜಿ ಸಚಿವ ಗೋವಿಂದ ಕಾರಜೋಳ ಒತ್ತಾಯ ಮಾಡಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂದು ಕಾಂಗ್ರೆಸ್‍ನವರು, ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷ ಹಾಗೂ ಈಗಿನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ನಾಡಿನ ಜನತೆಗೆ 5 ಗ್ಯಾರಂಟಿಗಳನ್ನು ಕೊಟ್ಟಿದ್ದರು. ಅಲ್ಲದೆ, ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷವು ಮೋಸ, ವಂಚನೆ, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಯಾವ ಮಟ್ಟಕ್ಕಾದರೂ ಹೋಗುವುದನ್ನು ಸ್ವಾತಂತ್ರ್ಯಾನಂತರದ 60 ವರ್ಷಗಳಲ್ಲಿ ಮಾಡುತ್ತಲೇ ಬಂದಿದೆ. ಮೊದಲ 60 ವರ್ಷಗಳಲ್ಲಿ ಜಾತಿ, ಜಾತಿ, ಧರ್ಮ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ಆಡಳಿತ ಮಾಡಿದ್ದರು ಎಂದು ಕಿಡಿಕಾರಿದರು.
ಬೆಂಗಳೂರು: ಕಿದ್ವಾಯಿ ಆಸ್ಪತ್ರೆಯಲ್ಲಿ ರಾತ್ರಿ ಸಮಯದಲ್ಲಿ ಐಸಿಯು ನಲ್ಲಿ ವೈದ್ಯರು ಇರೋದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಆಸ್ಪತ್ರೆಯಲ್ಲಿನ ಸಿಬ್ಬಂದಿ ಮತ್ತು ವೈದ್ಯರು ಪ್ರಭಾವಿ ವ್ಯಕ್ತಿಗಳು ಮತ್ತು ಲಂಚಕೋರರಿಗೆ ಆದ್ಯತೆಯ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ವೈದ್ಯಕೀಯ ವರದಿಗಳನ್ನು ನೀಡಲು ಒಂದು ತಿಂಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಬಾಯಿಯ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಲು ನಾನು ಸುಮಾರು 2 ತಿಂಗಳು ಕಾಯುತ್ತಿದ್ದೆ. ಅಲ್ಲದೆ, ಆಸ್ಪತ್ರೆಯಲ್ಲಿ ಸರಿಯಾದ ಮೂಲಸೌಕರ್ಯಗಳ ಕೊರತೆಯಿದೆ ರೋಗಿಯೊಬ್ಬರು ದೂರಿದ್ದಾರೆ. ಇನ್ನೂ ಆಸ್ಪತ್ರೆ ಆವರಣದ ಬಳಿ ಕಸದ ರಾಶಿ ಮತ್ತು ಎಂಎನ್ಸಿಯಿಂದ ನೀಡಲಾದ ವಸತಿ ನಿಲಯದ ಅವ್ಯವಸ್ಥೆಯ ಬಗ್ಗೆ ಇತರ ದೂರುಗಳು ಸಹ ಕೇಳಿಬಂದವು.
ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಿಧಾನಸೌಧದಲ್ಲಿ ಮಂಗಳವಾರ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಸಚಿವರು ಸಭೆ ನಡೆಸಿದರು. 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನದಿಂದಾಗುವ ಸಾಧಕ-ಬಾಧಕಗಳ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ 200 ಯೂನಿಟ್ವರೆಗೂ ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡುವ ಗ್ಯಾರಂಟಿಯನ್ನು ಕಾಂಗ್ರೆಸ್ ನೀಡಿತ್ತು. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗಳಿಸುವಂತೆ ಸಾರ್ವಜನಿಕರಿಂದ ಒತ್ತಡ ತೀವ್ರಗೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಎಲ್ಲಾ ಸಚಿವರ ಸಭೆ ಕರೆದಿದ್ದಾರೆ. ಸಭೆಗೆ ಪೂರಕ ಮಾಹಿತಿಯೊಂದಿಗೆ ಹಾಜರಾಗುವ ಉದ್ದೇಶದಿಂದ ಸಚಿವ ಜಾರ್ಜ್ ಅವರು, ಇಂಧನ ಇಲಾಖೆಯ ಹಿರಿಯ ಆಧಿಕಾರಿಗಳ ಜತೆ ಸಭೆ ನಡೆಸಿ ಅಂಕಿ-ಅಂಶಗಳ ಸಹಿತ ಮಾಹಿತಿ ಪಡೆದುಕೊಂಡರು. ಗ್ಯಾರಂಟಿ ಜಾರಿಗೆ ಹಣಕಾಸು ಇಲಾಖೆ ಅಧಿಕಾರಿಗಳ ವಿರೋಧ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಜಾರಿ ಸದ್ಯಕ್ಕೆ ಕಷ್ಟ ಅಂತಾ ಅಧಿಕಾರಿಗಳ…
ಬೆಂಗಳೂರು: ಮಳೆಯಿಂದಾಗಿ ಎದುರಾಗುವ ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. ಈ ಸಂಬಂಧ ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿದ ಅವರು,ಎಲ್ಲಾ ವಲಯ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಇಂಜಿನಿಯರ್ಗಳು, ಕಾರ್ಯನಿರ್ವಾಹಕ ಇಂಜಿನಿಯರ್ಗಳು ಮತ್ತು ಅರಣ್ಯ ವಿಭಾಗದ ಅಧಿಕಾರಿಗಳು ಕ್ಷೇತ್ರದಲ್ಲಿ ಹೆಚ್ಚಿನ ಜಾಗರೂಕರಾಗಿರುವಂತೆ ಮತ್ತು ನಿರಂತರವಾಗಿ ಮಳೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ನಿರ್ದೇಶಿಸಲಾಗಿದೆ. ಯಂತ್ರೋಪಕರಣಗಳನ್ನು ಸಿದ್ಧವಾಗಿರುವಂತೆ, ಯಾವುದೇ ಸಮಯದಲ್ಲಿ ಯಾವುದೇ ರೀತಿಯ ಪರಿಸ್ಥಿತಿ ನಿಭಾಯಿಸಲು ಸಿದ್ಧರಾಗಿರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿಗಳ ಆದೇಶದಂತೆ ನಿಯಂತ್ರಣ ಕೊಠಡಿಗಳು ವಲಯದಿಂದ ಉಪ-ವಿಭಾಗ ಮಟ್ಟದವರೆಗೆ 2*7 ಕಾರ್ಯನಿರ್ವಹಿಸುತ್ತಿವೆ. ಅಗತ್ಯ ಉಪಕರಣಗಳು, ವಾಹನಗಳು ಮತ್ತು ಇತರ ಸಾಮಗ್ರಿಗಳು ಸನ್ನದ್ಧ ಸ್ಥಿತಿಯಲ್ಲಿರಸಲಾಗುತ್ತಿದೆ. ಯಾವುದೇ ಸಿಬ್ಬಂದಿ ಅಸಡ್ಡೆ, ಆಲಸ್ಯ ಅಥವಾ ಬೇಜವಾಬ್ದಾರಿ ವರ್ತನೆ ತೋರಿದ್ದೇ ಆದರೆ, ಅಮಾನತು ಸೇರಿದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಚ್ಚರಿಕೆ ನೀಡಿದರು.
ಬೆಂಗಳೂರು: ಕಾಂಗ್ರೆಸ್ ಭರ್ಜರಿ ಗೆದ್ದ ಬಳಿಕ ಜನ ಗ್ಯಾರಂಟಿಗಳನ್ನ ಯಾವಾಗ ನೀಡುವುದೆಂದು ಪ್ರಶ್ನೆ ಮಾಡುತ್ತಲೇ ಇದ್ದಾರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ 5 ಗ್ಯಾರಂಟಿಗಳ ಜಾರಿ ಬಗ್ಗೆ ಸಭೆಯಲ್ಲಿ ಸಂಪೂರ್ಣವಾಗಿ ಚರ್ಚೆ ಆಗಿದೆ ಎಂದು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಗ್ಯಾರಂಟಿಗಳನ್ನು ಜಾರಿ ಮಾಡೇ ಮಾಡುತ್ತೇವೆ. 5 ಗ್ಯಾರಂಟಿಗಳ ವಿಚಾರವಾಗಿ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಮಾನದಂಡ ಇಲ್ಲದೆ ಯಾವ ಯೋಜನೆ ಇದೆ ಹೇಳಿ ನೋಡೋಣ. ಜನರಿಗೆ ನಾವು ಲೆಕ್ಕ ಕೊಡಬೇಕು ಅಲ್ವಾ ಎಂದಿದ್ದಾರೆ.
ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಿಧಾನಸೌಧದಲ್ಲಿ ಮಂಗಳವಾರ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಸಚಿವರು ಸಭೆ ನಡೆಸಿದರು. 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನದಿಂದಾಗುವ ಸಾಧಕ-ಬಾಧಕಗಳ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ 200 ಯೂನಿಟ್ವರೆಗೂ ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡುವ ಗ್ಯಾರಂಟಿಯನ್ನು ಕಾಂಗ್ರೆಸ್ ನೀಡಿತ್ತು. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗಳಿಸುವಂತೆ ಸಾರ್ವಜನಿಕರಿಂದ ಒತ್ತಡ ತೀವ್ರಗೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಎಲ್ಲಾ ಸಚಿವರ ಸಭೆ ಕರೆದಿದ್ದಾರೆ. ಸಭೆಗೆ ಪೂರಕ ಮಾಹಿತಿಯೊಂದಿಗೆ ಹಾಜರಾಗುವ ಉದ್ದೇಶದಿಂದ ಸಚಿವ ಜಾರ್ಜ್ ಅವರು, ಇಂಧನ ಇಲಾಖೆಯ ಹಿರಿಯ ಆಧಿಕಾರಿಗಳ ಜತೆ ಸಭೆ ನಡೆಸಿ ಅಂಕಿ-ಅಂಶಗಳ ಸಹಿತ ಮಾಹಿತಿ ಪಡೆದುಕೊಂಡರು.
ದೊಡ್ಡಬಳ್ಳಾಪುರ: ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ಕೊಡಿಗೇಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗಸ್ವಾಮಿ ಮನೆಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ದೊಡ್ಡಬಳ್ಳಾಪುರದ ಟಿ.ಬಿ.ನಾರಾಯಣಪ್ಪ ಬಡಾವಣೆಯಲ್ಲಿರುವ ರಮಗಸ್ವಾಮಿ ಅವರ ನಿವಾಸ, ವಾಣಿಜ್ಯ ಸಂಕೀರ್ಣ, ಪಾಲನಜೋಗಹಳ್ಳಿಯ ನಿವಾಸಗಳ ಮೇಲೂ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೇ ಸ್ವಂತ ಊರಾದ ತೂಬಗೆರೆ ಹೋಬಳಿಯ ಸೋತೇನಹಳ್ಳಿ ಗ್ರಾಮದ ನಿವಾಸ, ರಾಜಾನುಕುಂಟೆಯ ಕಾಕೋಳು ರಸ್ತೆಯಲ್ಲಿರುವ 7 ಕೋಟಿ ಬೆಲೆ ಬಾಳುವ ನಿವಾಸ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಬಳಿಯ ಜಮೀನು ಸೇರಿದಂತೆ ಹಲವೆಡೆ ಪೊಲೀಸರು ದಾಳಿ ಮಾಡಿದ್ದಾರೆ. ಸುಮಾರು 20 ಅಧಿಕಾರಿಗಳ ತಂಡ ಬೆಳಿಗ್ಗೆ 5.30ಕ್ಕೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅದಾಯಕ್ಕಿಂತ ಹೆಚ್ಚು ಆಸ್ತಿ ಹಾಗೂ ಬೇನಾಮಿ ಹೆಸರಿನಲ್ಲಿ ಆಸ್ತಿ ಹೊಂದಿರುವ ಆರೋಪದ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲಿದ್ದಾರೆ. ಪಿಎಒ ರಂಗಸ್ವಾಮಿಅವರ ಪತ್ನಿ…