ಬೆಂಗಳೂರು: ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಗುರುವಾರ ನಿಗದಿ ಪಡಿಸಲಾಗಿದ್ದ ಸಚಿವ ಸಂಪುಟ ಶುಕ್ರವಾರಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಡೆಯಲಿದೆ. ಐದು ಗ್ಯಾರಂಟಿಗಳ ಜಾರಿ ಸಂಬಂಧ ಮತ್ತಷ್ಟು ತಯಾರಿ ಅಗತ್ಯ ಹಿನ್ನೆಲೆ ನಾಳೆಯೂ ಕೂಡ ಅಧಿಕಾರಿಗಳು, ಸಚಿವರು ಪ್ರತ್ಯೇಕ ಸಭೆ ಮಾಡಲಿದ್ದಾರೆ.
Author: Prajatv Kannada
ಚಿತ್ರದುರ್ಗ: ಗ್ಯಾರಂಟಿ ಕಾರ್ಡ್‌ಗೆ ‘ನಗದು ರೂಪ’ ಕೊಡುವ ಜವಾಬ್ದಾರಿಯ ಸ್ಥಾನದಲ್ಲಿ ಕಾಂಗ್ರೆಸ್ ಇದೆ. ಚುನಾವಣೆಗೆ ಮೊದಲು ಇದು ಭರವಸೆಯಷ್ಟೇ ಆಗಿತ್ತು. ಇದನ್ನು ಲಾಗೂ ಮಾಡಲು ಜನರು ಅಧಿಕಾರ ಕೊಟ್ಟಾಗಿದೆ. ಹಾಗಾಗಿ ಕಾಂಗ್ರೆಸ್ ಸರಕಾರಕ್ಕೆ ಈ ವಾಗ್ದಾನ ಈಡೇರಿಸುವುದು ಪ್ರಾಶಸ್ತ್ಯವಾಗಬೇಕಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳ (Congress guarantees)ಬಗ್ಗೆ ಇದೀಗ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಕೊಟ್ಟ ಮಾತಿನಿಂತೆ ಈ ಗ್ಯಾರಂಟಿಗಳನ್ನು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಇನ್ನು ನಿರುದ್ಯೋಗಿ ಪದವೀಧರರಿಗೆ 3 ಸಾವಿರ ರೂ. ನೀಡುವ ಬಗ್ಗೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ(Taralabalu Shivamurthy Shivacharya Swamiji) ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರ ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಸಿರಿಗೆರೆ ತರಳಬಾಳು ಮಠಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿದ ವೇಳೆ ಸಲಹೆ ನೀಡಿರುವ ಸ್ವಾಮೀಜಿ, ನಿರುದ್ಯೋಗ ಭತ್ಯೆಯನ್ನು ನೀಡಿ ಯುವಕರಿಂದ ಕೆಲಸ ಮಾಡಿಸಿ. ಟ್ಯಾಕ್ಸ್ ಪೇಯರ್ ಮನಿ ಸದ್ಬಳಕೆ ಆಗಲಿ ಎಂದು ಸಲಹೆ ನೀಡಿದ್ದಾರೆ. ನಿರುದ್ಯೋಗಿ ಯುವಕರಿಗೆ 3000…
ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಉಂಟು ಮಾಡಿದ್ದ ಜಗದೀಶ್ ಶೆಟ್ಟರ್ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋತಿದ್ದರು. ಆದರೂ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರೊಂದಿಗೆ ಗೌಪ್ಯ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಡಿಕೆ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.
ಬೆಳಗಾವಿ: ಕಾಂಗ್ರೆಸ್ ಚುನಾವಣೆಯುಲ್ಲಿ ಭಾರಿ ಅಂತರದಿಂದ ಗೆದ್ದು ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಕೂಡ ಹಿಡಿದಿದ್ದು ಸಚಿವರುಗಳಿಗೂ ಸ್ಥಾನ ಮಾನ ಸಿಕ್ಕಿದ್ದು ಆದರೆ ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರಿದ್ದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿಗೆ ಸ್ಥಾನ ಮಾನ ನೀಡದಿದ್ದಕ್ಕೆ ಭಾರೀ ಚರ್ಚೆ ನಡೆಯುತ್ತಿತ್ತು ಈ ಹಿನ್ನೆಲೆಯಲ್ಲಿ ಇಂದು ಭೇಟಿ ಮಾಡಲು ಬೆಳಗಾವಿಗೆ ಬಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಂತರ ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು ಬೆಳಗಾವಿಯಲ್ಲಿ ಹೇಳಿದ್ದಾರೆ. ಯಾರು ನಮ್ಮ ಜೊತೆ ಧೈರ್ಯ ಮಾಡಿ ಕೈ ಜೋಡಿಸಿದ್ದಾರೆ ಯಾರನ್ನೂ ಕೈ ಬಿಡುವ ಪ್ರಶ್ನೆ ಬರಲ್ಲ,…
ಚೆನ್ನೈ : ಆತಿಥೇಯ ಗುಜರಾತ್ ಟೈಟನ್ಸ್ ವಿರುದ್ಧದ ರೋಚಕ ಫೈನಲ್ ಪಂದ್ಯದಲ್ಲಿ 5 ವಿಕೆಟ್ಗಳ ಜಯ ದಾಖಲಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಐದನೇ ಟ್ರೋಫಿ ಎತ್ತಿ ಹಿಡಿಯುವ ಮೂಲಕ ದಾಖಲೆ ಬರೆಯಿತು. ಟ್ರೋಫಿ ಗೆದ್ದು ಮನೆಯಂಗಣಕ್ಕೆ ಮಂಗಳವಾರ (ಮೇ 30) ಹಿಂದಿರುಗುತ್ತಿದ್ದಂತೆಯೇ ಸಿಎಸ್ಕೆ ಫ್ರಾಂಚೈಸಿ ವಿಶೇಷ ಪೂಜೆ ಕೈಗೊಂಡಿದೆ. ಚೆನ್ನೈನ ತ್ಯಾಗರಾಯ ನಗರದಲ್ಲಿ ಇರುವ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ದೇವಸ್ಥಾನದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ಪಾದದಡಿ ಟ್ರೋಫಿಯನ್ನಿಟ್ಟು ವಿಶೇಷ ಪೂಜೆ ಸಲ್ಲಿಸಲಾಗಿದೆ. ಇದರ ಫೋಟೊಗಳು ಸೋಷಿಯಲ್ ಮೀಡಿಯಾಗಳಲ್ಲಿ ಭಾರಿ ಸದ್ದು ಮಾಡಿದೆ. ಚೆನ್ನೈನ ವಿಮಾನ ನಿಲ್ದಾಣದಿಂದ ಸಿಎಸ್ಕೆ ಅಧಿಕಾರಿಗಳು ಟ್ರೋಫಿಯನ್ನು ನೇರವಾಗಿ ದೇವಸ್ಥಾನಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸಿದ್ದಾರೆ. ಅಂದಹಾಗೆ ಸಿಎಸ್ಕೆ ತಂಡದ ಆಟಗಾರರು ಹಾಗೂ ಸಿಬ್ಬಂದಿ ವರ್ಗ ಈ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿರಲಿಲ್ಲ. ಫ್ರಾಂಚೈಸಿಯ ಅಧಿಕಾರಿಗಳಷ್ಟೇ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸಿದ್ದಾರೆ.
ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಜೀವನದಲ್ಲಿ ಗುರಿಗಳನ್ನು ಸಾಧಿಸಲು ಫಿಟ್ನೆಸ್ ಬಗ್ಗೆ ಅರಿವು ಮತ್ತು ಶಿಸ್ತು ಬಹಳ ಮುಖ್ಯ ಎಂದು ನಂಬಿಕೊಂಡು ಬಂದಿದ್ದಾರೆ. ತಂಬಾಕು ಉತ್ಪನ್ನಗಳನ್ನು ಪ್ರೋತ್ಸಾಹಿಸಿ ಸಾಕಷ್ಟು ಅವಕಾಶಗಳು ಬಂದಿದ್ದವು ಆದರೆ ನಾನದನ್ನೆಲ್ಲಾ ನಿರಾಕರಿಸಿದ್ದೇನೆ ಎಂದು ಸಚಿನ್ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಮೌಖಿಕ ನೈರ್ಮಲ್ಯ- ಸ್ವಚ್ಛ ಮುಖ್ ಅಭಿಯಾನದ “ಸ್ಮೈಲ್ ಅಂಬಾಸಿಡರ್” ಆಗಿರುವ ಸಚಿನ್ ತೆಂಡೂಲ್ಕರ್ ಎಂದಿಗೂ ತಂಬಾಕು , ಆಲ್ಕೋಹಾಲ್ ಜಾಹೀರಾತಿಗೆ ಪ್ರೋತ್ಸಾಹ ನೀಡುವುದಿಲ್ಲ ಎನ್ನುವುದನ್ನು ತಿಳಿಸಿದ್ದಾರೆ. ಆಲ್ಕೋಹಾಲ್ ಜಾಹೀರಾತನ್ನೂ ತ್ಯಜಿಸಿದ್ದರು ನಿಮಗೆಲ್ಲಾ ನೆನಪಿರಬಹುದು IPL ಸಮಯದಲ್ಲಿ ಕ್ರಿಕೆಟಿಗರ ‘ಊ ಲಾ ಲಾ ಲಾ ಲೆ ಓ’ ಜಾಹೀರಾತು ಬಹಳ ಫೇಮಸ್ ಆಗಿತ್ತು. ಆದರೆ ಆ ಜಾಹೀರಾತಿನಲ್ಲಿ ತೆಂಡೂಲ್ಕರ್ ಕಾಣಿಸಿಕೊಂಡಿರಲಿಲ್ಲ ಅದಕ್ಕೆ ಕಾರಣ ಅದು ಆಲ್ಕೋಹಾಲ್ ಸಂಬಂಧಿತ ಜಾಹೀರಾತು ಆಗಿತ್ತು. ಫಿಟ್ನೆಸ್ ಕಡೆಗೆ ಗಮನ ನೀಡುವ ಸಚಿನ್ ನೋಟದಲ್ಲಿ ಮಾತ್ರವಲ್ಲ, ಮಾನಸಿಕವಾಗಿಯೂ ಹಾಗೂ ಮೌಖಿಕ ಆರೋಗ್ಯದಲ್ಲೂ ಫಿಟ್ ಆಗಿರಬೇಕು ಎನ್ನುತ್ತಾರೆ. 50 ಪ್ರತಿಶತದಷ್ಟು ಮಕ್ಕಳು ಮೌಖಿಕ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಬಾಯಿಯ…
ಇತ್ತೀಚೆಗೆ ಗಾಯದಿಂದ ಸಂಪೂರ್ಣವಾಗಿ ಗುಣಮುಖರಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದ ವೇಗಿ ಜಾಶ್ ಹೇಝಲ್‌ವುಡ್ ಅವರು 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಆಡುವ ಆಸ್ಟ್ರೇಲಿಯಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯ ಜೂನ್ 7 ರಿಂದ 11ರವರೆಗೆ ಲಂಡನ್ ದಿ ಓವಲ್ ಮೈದಾನದಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯಕ್ಕಾಗಿ ಈ ಎರಡೂ ತಂಡಗಳು ಸಜ್ಜಾಗುತ್ತಿವೆ. ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ 15 ಆಟಗಾರರ ಆಸ್ಟ್ರೇಲಿಯಾ ತಂಡವನ್ನು ಸೋಮವಾರ ಖಚಿತಪಡಿಸಿದೆ. ಅಂದ ಹಾಗೆ ಗಾಯದಿಂದ ಗುಣಮುಖರಾಗುತ್ತಿದ್ದ ಕಾರಣ ಜಾಶ್ ಹೇಝಲ್‌ವುಡ್ 2023ರ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಆಡುವುದು ಬಹುತೇಕ ಅನುಮಾನ ಎಂದು ಹೇಳಲಾಗಿತ್ತು. ಆದರೆ, 2023ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಂದರ್ಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೊತೆ ಇದ್ದ ಜಾಶ್ ಹೇಝಲ್‌ವುಡ್ ಸಂಪೂರ್ಣವಾಗಿ ಗುಣಮುಖರಾಗಿದ್ದರು. ಆ ಮೂಲಕ ಆರ್‌ಸಿಬಿ ಪರ ಕೆಲವೇ…
ಅಹಮದಾಬಾದ್: ಗುಜರಾತ್ ಟೈಟನ್ಸ್ ವಿರುದ್ಧ 5 ವಿಕಟ್‌ಗಳಿಂದ ಅಭೂತಪೂರ್ವ ಗೆಲುವು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿತು. ಆ ಮೂಲಕ ಕಳೆದ ಎರಡು ತಿಂಗಳುಗಳಿಂದ ನಡೆದಿದ್ದ 2023ರ ಐಪಿಎಲ್ ಟೂರ್ನಿಗೆ ಅಧಿಕೃತ ತೆರೆ ಬಿದ್ದಿತು. ಚಾಂಪಿಯನ್ ಆಗಿವ ಮೂಲಕ ಸಿಎಸ್‌ಕೆ, ಇಷ್ಟೇ ಬಾರಿ ಪ್ರಶಸ್ತಿ ಗೆದ್ದಿರುವ ಮುಂಬೈ ಇಂಡಿಯನ್ಸ್ ದಾಖಲೆಯನ್ನು ಸರಿಗಟ್ಟಿತು. ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಳೆಯ ಹೊರತಾಗಿಯೂ ನಡೆದಿದ್ದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಗುಜರಾತ್ ಟೈಟನ್ಸ್, ಸಾಯಿ ಸುದರ್ಶನ್ (96 ರನ್) ಮತ್ತು ವೃದ್ಧಿಮಾನ್ ಸಹಾ(54 ರನ್) ಅವರ ಸಿಡಿಲಬ್ಬರದ ಅರ್ಧಶತಕಗಳಿಂದ ನಿಗದಿತ 20 ಓವರ್‌ಗಳಿಗೆ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆ ಹಾಕಿತ್ತು. ಮಳೆಯ ಬಂದ ಕಾರಣ ಡಿಎಲ್‌ಎಸ್ ನಿಯಮದಡಿ ಚೆನ್ನೈ ಸೂಪರ್ ಕಿಂಗ್ಸ್‌ಗೆ 15 ಓವರ್‌ಗಳಿಗೆ 171 ರನ್ ಗುರಿ ನೀಡಲಾಯಿತು. ಡೆವೋನ್ ಕಾನ್ವೇ (47 ರನ್) ಸ್ಫೋಟಕ ಬ್ಯಾಟಿಂಗ್ ಹಾಗೂ ಅಂತಿಮ…
ಅಹಮದಾಬಾದ್: ಕೊನೆಯ ಎರಡು ಎಸೆತಗಳಲ್ಲಿ ಸಿಕ್ಸರ್ ಹಾಗೂ ಬೌಂಡರಿ ಸಿಡಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಗೆಲುವಿನ ದಡ ಸೇರಿಸಿದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ತಮ್ಮ ನಾಯಕ ಎಂಎಸ್ ಧೋನಿಯನ್ನು ಕೊಂಡಾಡಿದರು. ಸಿಎಸ್‌ಕೆ ತಂಡದ ಈ 5ನೇ ಟ್ರೋಫಿ ಎಂಎಸ್ ಧೋನಿಗೆ ಸಮರ್ಪಿಸುತ್ತೇನೆಂದು ಹೇಳಿದ್ದಾರೆ. ಸೋಮವಾರ ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಫೈನಲ್ ಪಂದ್ಯ ಸಾಕಷ್ಟು ನಾಟಕೀಯ ಬೆಳವಣಿಗೆಗಳನ್ನು ಕಂಡಿತ್ತು. ಭಾನುವಾರ ಮಳೆಯಿಂದ ಪಂದ್ಯ ನಡೆಸಲು ಸಾಧ್ಯವಾಗಿರಲಲ್ಲ. ಆದರೆ, ಸೋಮವಾರ ಪ್ರಥಮ ಇನಿಂಗ್ಸ್ ಬಳಿಕವೂ ಮಳೆ ಬಂದಿದ್ದರಿಂದ ಪಂದ್ಯವನ್ನು ನಿಲ್ಲಿಸಲಾಗಿತ್ತು. ಅಂತಿಮವಾಗಿ ಡಿಎಲ್‌ಎಸ್ ನಿಯಮದ ಪ್ರಕಾರ ಸಿಎಸ್‌ಕೆಗೆ 15 ಓವರ್‌ಗಳಿಗೆ 171 ರನ್ ಗುರಿ ನೀಡಲಾಗಿತ್ತು. ಈ ಮೊತ್ತವನ್ನು ಸಿಎಸ್‌ಕೆ ಕೊನೆಯ ಎಸೆತದಲ್ಲಿ ಮುಟ್ಟಿತ್ತು. ಈ ಗೆಲುವಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿತು. ಆ ಮೂಲಕ ಇಷ್ಟೇ ಬಾರಿ ಪ್ರಶಸ್ತಿ ಗೆದ್ದಿದ್ದ ಮುಂಬೈ ಇಂಡಿಯನ್ಸ್ ದಾಖಲೆಯನ್ನು ಸಿಎಸ್‌ಕೆ ಸರಿಗಟ್ಟಿತು. ಗೆಲುವಿನ…
ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಹತ್ತು ವರ್ಷ ಕಳೆದಿದೆ. ಹತ್ತು ವರ್ಷಗಳಲ್ಲಿ ಸಾಕಷ್ಟು ಸಾಧನೆ ಮಾಡಿರುವ ಡಾಲಿ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ಶಾಲೆಗೆ ಡಾಲಿ ಭೇಟಿ ನೀಡಿ, ಮಕ್ಕಳಿಗೆ ಚಾಕ್ಲೇಟ್ ಹಾಗೂ ಹೂವು ನೀಡಿ ಸ್ವಾಗತಿಸಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಲುವರಸನಕೊಪ್ಪಲು ಗ್ರಾಮದಲ್ಲಿ ಕಾಂಗ್ರೆಸ್ ಸರ್ಕಾರ ಉಚಿತ ಭಾಗ್ಯಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಾಲಿ ಧನಂಜಯ್, ಸುಮ್ಮನೆ ನನಗೆ ರಾಜಕೀಯ ಪ್ರಶ್ನೆ ಕೇಳಿ ತಗಲಾಕಿಸುತ್ತೀರಾ. ನಾನು ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ಮಾತಡಲ್ಲ. ಸಾಮಾನ್ಯ ಮನುಷ್ಯನಾಗಿ ಹೇಳ್ತೀನಿ. ತಿಂಗಳಿಗೆ 10 ಕೆಜಿ ಅಕ್ಕಿ ಕೊಟ್ಟರೆ ಅಡುಗೆ ಮಾಡಿ, ಊಟ ಮಾಡಿಕೊಂಡು ಮನೆಯಲ್ಲಿ ಇರೋಕೆ ಆಗಲ್ಲ. ಅಕ್ಕಿ ಕೊಟ್ಟರೆ ಹಸಿವನ್ನು ನೀಗಿಸುತ್ತೆ ಇತರೆ ಖರ್ಚಿಗೆ ಜನ ದುಡಿಯಲೇ ಬೇಕು. ಬಡ ಮನುಷ್ಯನಿಗೆ ಅಕ್ಕಿ ಕೊಟ್ಟರೆ ಸೋಮಾರಿ ಆಗುತ್ತಾನೆ ಅನ್ನೋದು ತಪ್ಪು, ಇಲ್ಲದವರಿಗೆ ಸಹಾಯ ಮಾಡುವುದು ತಪ್ಪಲ್ಲ ಎಂದು ಧನಂಜಯ್ ಹೇಳಿದ್ದಾರೆ. ತಿಂಗಳ ಆದಾಯಕ್ಕಿಂತ ಕಡಿಮೆ…