ಹೊಸದಿಲ್ಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಮಂಗಳವಾರ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು, ಜನಾಂಗೀಯ ಘರ್ಷಣೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ ಘೋಷಣೆ ಮಾಡಿದರು. ಮೂರು ದಿನಗಳ ಮಣಿಪುರ ಪ್ರವಾಸ ಕೈಗೊಂಡಿರುವ ಕೇಂದ್ರ ಸಚಿವ ಶಾ ಅವರು ಮಂಗಳವಾರ ಬೆಳಗ್ಗೆ ಸಿಎಂ ಬಿರೇನ್ ಸಿಂಗ್, ರಾಜ್ಯ ಸಚಿವರು, ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್, ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳು ಜತೆ ಮಹತ್ವದ ಸಭೆ ನಡೆಸಿದರು. ಕಳೆದ 27 ದಿನಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಅದಕ್ಕೆ ಕಾರಣವಾದ ಅಂಶಗಳು, ಕ್ಷಿಪ್ರವಾಗಿ ಶಾಂತಿ ಸ್ಥಾಪನೆಯ ಸೂತ್ರಗಳ ಬಗ್ಗೆ ಅವಲೋಕಿಸಿದರು. ಈ ವೇಳೆ ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗೆ ನಾಲ್ಕು ನಿರ್ಣಯ ಕೈಗೊಳ್ಳಲಾಯಿತು. ನಾಲ್ಕು ನಿರ್ಣಯಗಳು 1. ಶಾಂತಿ ಕದಡುವ ದಂಗೆಕೋರರು ಅಥವ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಪೊಲೀಸ್…
Author: Prajatv Kannada
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಬಸ್ ಚಾಲಕನಿಂದ ಅವಘಡ ನಡೆದಿದ್ದು ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪಾರಾಗಿದ್ದಾರೆ. ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್ ಬಂಕ್ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ (ಮೇ.30) ರಂದು ನಡೆದಿದೆ.
ಕೊಪ್ಪಳ: ತನ್ನ ಗಂಡನ ಅಕ್ರಮ ಸಂಬಂಧದ ಹಿನ್ನೆಲೆಯನ್ನು ಪ್ರಶ್ನೆ ಮಾಡಿದ್ದಕ್ಕೆ ಪ್ರೇಯಸಿ ಜೊತೆ ಸೇರಿ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಷ್ಟಗಿ ತಾಲೂಕು ಮಾಲಗಿತ್ತಿ ಗ್ರಾಮದಲ್ಲಿ ನಡೆದಿದೆ. ಮಾಲಗಿತ್ತಿ ಗ್ರಾಮದ ವಿವಾಹಿತ ಟ್ರಾಕ್ಟರ್ ಡ್ರೈವರ್ ಪೀರಸಾಬ್ ನಧಾಪ್ ನೊಂದಿಗೆ ಅದೇ ಗ್ರಾಮದ ಶಾರವ್ವ ಶರಣಪ್ಪ ಬಸಾಪೂರ ಜೊತೆ ಅಕ್ರಮ ಸಂಬಂಧ ಇತ್ತು. ಈ ಅಕ್ರಮ ಸಂಬಂಧದ ವಿಷಯ ಪೀರಸಾಬ್ ನ ಪತ್ನಿಗೆ ಗೊತ್ತಾಗಿದೆ.ಗಂಡನ ಅಕ್ರಮದ ಬಗ್ಗೆ ಕುಪಿತಗೊಂಡ ಪತ್ನಿ, ಗಂಡನ ಪ್ರೇಯಸಿ ಶಾರವ್ವ ಜೊತೆ ಕ್ಯಾತೆ ತೆಗೆದಿದ್ದು, ಗಂಡನನ್ನು ಪ್ರಶ್ನೆ ಮಾಡಿದ್ದಾಳೆ.ಈ ಪ್ರಕರಣ ಇಷ್ಟಕ್ಕೆ ಬೀಡದೇ ಊರಿನ ಹಿರಿಯರ ಮುಂದೆ ಪ್ರಸ್ತಾಪಿಸಿದ್ದಾಳೆ. ಊರಿನ ಹಿರಿಯರು ಈ ಜಗಳ ಬುಧವಾರ ಬೆಳಗ್ಗೆ ಇತ್ಯಾರ್ಥಗೊಳಿಸುವುದಾಗಿ ತಿಳಿಸಿದ್ದಾರೆ. ಇವರ ಅಕ್ರಮದ ಗುಟ್ಟು ಪತ್ನಿಯಿಂದ ರಟ್ಟಾಗಿರುವ ಬಗ್ಗೆ ಮನನೊಂದ ಪಾಗಲ್ ಪ್ರೇಮಿಗಳು, ಡ್ರೈವರ್ ಪೀರಸಾಬ್ ನ ಚಿಕ್ಕಪ್ಪ ಹುಸೇನಸಾಬ್ ನದಾಫ್ ಊರಿನ ಹಿರಿಯರ ಸಮ್ಮುಖದಲ್ಲಿ ಇತ್ಯಾರ್ಥವಾಗುವ ಮೊದಲೇ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಕ್ರಮ ಜೋಡಿಯ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ ತಾಲೂಕು ಸಹಿತ 16 ಕಡೆಗಳಲ್ಲಿ ಎನ್ಐಎ (ರಾಷ್ಟ್ರೀಯ ತನಿಖಾ ದಳ) ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಕೇರಳ, ಬಿಹಾರದಲ್ಲೂ ದಾಳಿ ನಡೆದಿದೆ. ಎನ್‌ಐಎ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆಯನ್ನು ನಡೆಸಿದ್ದು, ಈ ಸಂದರ್ಭ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಿದ್ದಾರೆ. ಬಿಹಾರದ ಫುಲ್ವಾರಿ ಶರೀಫ್ ಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನಿಷೇಧಿತ ಪಿಎಫ್‌ಐ ನಡೆಸುತ್ತಿದ್ದ ಹಲವು ಕೃತ್ಯಗಳಿಗೆ ಸಂಬಂಧಿಸಿದಂತೆ ಎನ್‌ಐಎ ಕಳೆದ ವರ್ಷದಿಂದಲೇ ತೀವ್ರ ವಿಚಾರಣೆ ನಡೆಸುತ್ತಿದ್ದು, ಇದರ ಮುಂದುವರಿದ ಭಾಗವಾಗಿ ದಾಳಿ ನಡೆದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಹತ್ಯೆಗೆ…
ಹುಬ್ಬಳ್ಳಿ: ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಸ್ಥಾನ ಸಿಗದ ಹಿನ್ನೆಲೆ ಬೇಸರಗೊಂಡಿದ್ದ ಅಭಿಮಾನಿಗಳು ಶೆಟ್ಟರ್ ಭೇಟಿಯಾಗಿ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡುವ ಭರವಸೆ ಕೊಡಲಿರುವ ಡಿಕೆಶಿ ಲೋಕಸಭಾ ಚುನಾವಣೆಗೆ ಸಹ ತಯಾರಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಹಾಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ಶೆಟ್ಟರ್ ಕಣಕ್ಕೆ ಇಳಿಸಲು ಚಿಂತನೆ ನಡೆದಿದ್ದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಶೆಡ್ಡು ಹೊಡಿಸಲು ಪಕ್ಷದ ಚಿಂತನೆ ಎಲ್ಲ ವಿಚಾರಗಳ ಕುರಿತು ಚರ್ಚೆ ನಡೆಸಲಿರುವ ಉಭಯ ನಾಯಕರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು ಈಗಾಗಲೇ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಹೋದ್ಯೋಗಿಗಳು ಪ್ರಮಾಣವಚನ ಸ್ವೀಕರಿಸಿದ್ದು, ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದ ಗ್ಯಾರಂಟಿಗಳ ಜಾರಿಗೆ ಸಿದ್ಧತೆ ನಡೆದಿದೆ. ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರಿಗೆ ಸೂಕ್ತ…
ಧಾರವಾಡ: ಯುವಕನೋರ್ವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡದ ನಾಗಲಾವಿ ಕರೆಯಲ್ಲಿ ನಡೆದಿದ್ದು, ಆತನಿಗಾಗಿ ಸುಮಾರು ಐದು ಗಂಟೆ ಹುಡುಕಾಟ ನಡೆಸಿ ಕೊನೆಗೆ ಯುವಕನ ಮೃತ ದೇಹವನ್ನು ಹೊರತೆಗೆಯುವಲ್ಲಿ ಅಗ್ನಿ ಶಾಸಮಕದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಧಾರವಾಡದ ಕಂಠಿಗಲ್ಲಿಯ ನಿವಾಸಿ ಮಲ್ಲಿಕ್ ಎಂಬ ಮೂವತ್ತು ವರ್ಷದ ಯುವಕ ಮೃತನೆಂದು ಗುರುತಿಸಲಾಗಿದೆ. ಇನ್ನೂ ಶವವಾಗಿ ಪತ್ತೆಯಾಗಿರುವ ಮಲಿಕನಿಗೆ ಜೂನ್ ತಿಂಗಳಲ್ಲಿ ಮದುವೆ ನಿಶ್ಚಿಯವಾಗಿತ್ತೆಂದು ಹೇಳಲಾಗುತ್ತಿದೆ. ಕಳೆದೆರಡು ದಿನಗಳಿಂದ ಮಲಿಕ ಮನೆಯಿಂದ ನಾಪತ್ತೆಯಾಗಿದ್ದು, ನಾಗಲಾವಿ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇನ್ನೂ ನಾಗಲಾವಿ ಗ್ರಾಮದ ಕೆರೆಯಲ್ಲಿ ಯುವಕನೋರ್ವ ಶವ ಪತ್ತೆಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರ ಮಲಿಕ್‌ನ ಮೃತ ದೇಹ ನೋಡಿ ಅಕ್ರಂದನ ಮುಗಿಲು ಮುಟ್ಟಿತ್ತು. ಯುವಕನಿಗಾಗಿ ಮಂಗಳವಾರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೋಟ್ ಮೂಲಕ ಕಾರ್ಯಾಚರಣೆ ನಡೆಸಿದ್ದರು. ಸುಮಾರು ಹೊತ್ತಿನ ನಾಲ್ಕು ಗಂಟೆ ಅಧಿಕ ಸಮಯ ಕಾರ್ಯಾಚರಣೆ ನಡೆಸಿದ ಅಗ್ನು ಶಾಮಕ ದಳದ ಸಿಬ್ಬಂದಿ ಕೊನೆಗೂ ತಡ ಸಂಜೆ ವೇಳೆ ಮೃತದೇಹ ಹೊರತೆಗೆದಿದ್ದು, ಮರಣೋತ್ತರ…
ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಬಿ ದಯಾನಂದ್ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅಧಿಕಾರ ವಹಿಸಿಕೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದಯಾನಂದ ಅವರು, ಪೊಲೀಸ್ ಇಲಾಖೆ ಮೇಲೆ ಜನರಿಗೆ ನಂಬಿಕೆ ಇದೆ, ಆ ನಂಬಿಕೆ ಉಳಿಸಿಕೊಳ್ಳಲು ಶ್ರಮಿಸುತ್ತೇನೆ. ಪೊಲೀಸ್ ಆಯುಕ್ತರಾಗಿ ಬೆಂಗಳೂರಿಗೆ ಸಂಬಂಧಪಟ್ಟಂತೆ ಹಲವು ಸವಾಲುಗಳಿದ್ದು, ಅವುಗಳನ್ನು ಆದ್ಯತೆ ಮೇಲೆ ತೆಗೆದುಕೊಳ್ಳಲಾಗುವುದು. ನಗರದಲ್ಲಿ ಸಂಚಾರ ನಿರ್ವಹಣೆಗೆ ನಾಗರಿಕ ಸಂಸ್ಥೆಗಳಿಂದ ಸಮನ್ವಯತೆ ಅಗತ್ಯ. ಸಂಚಾರ ದಟ್ಟಣೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಇಲಾಖೆಯು ಏಜೆನ್ಸಿಗಳೊಂದಿಗೆ ಕೆಲಸ ಮಾಡುತ್ತದೆ ಎಂದರು. ಟೋಯಿಂಗ್ ವ್ಯವಸ್ಥೆಯನ್ನು ಹಿಂಪಡೆಯುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಇಲಾಖೆಯು ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ. ಇನ್ನೂ ನಿರ್ಗಮಿತ ಕಮಿಷನರ್ ಸಿ.ಎಚ್. ಪ್ರತಾಪ್ ರೆಡ್ಡಿ ಅವರು ಅಧಿಕೃತವಾಗಿ ಲಾಠಿ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿದ ಬಿ. ದಯಾನಂದ ಅವರು ಬೆಂಗಳೂರಿನಲ್ಲಿ ಸಂಚಾರ ನಿರ್ವಹಣೆ ಮತ್ತು ಸೈಬರ್ ಕ್ರೈಮ್ ಮೇಲೆ ಆದ್ಯತೆಯಿಂದ ಗಮನ ಹರಿಸುವುದಾಗಿ ಹೇಳಿದ್ದಾರೆ.
ಬೆಂಗಳೂರು: ಐದು ಗ್ಯಾರಂಟಿ ಘೋಷಣೆಗಳ ಜಾರಿ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಬುಧವಾರ ಡಿಸಿಎಂ ಹಾಗೂ ಸಚಿವರುಗಳ ಜೊತೆಗೆ ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಗ್ಯಾರಂಟಿ ಘೋಷಣೆ ಜಾರಿ ಮಾಡುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಪ್ರತಿ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2000, ಹತ್ತು ಕೆಜಿ ಅಕ್ಕಿ ಉಚಿತ ಹಾಗೂ ಪದವಿ ಮತ್ತು ಡಿಪ್ಲೊಮಾ ನಿರುದ್ಯೋಗಿಗಳಿಗೆ ಭತ್ಯೆ ನೀಡುವ ಐದು ಘೋಷಣೆಯನ್ನು ಕಾಂಗ್ರೆಸ್ ಮಾಡಿತ್ತು. ಮೊದಲ ಕ್ಯಾಬಿನೆಟ್ ನಲ್ಲಿ ಈ ಪಂಚ ಘೋಷಣೆಗಳಿಗೆ ತಾತ್ವಿಕ ಒಪ್ಪಿಗೆ ನೀಡಿತ್ತು. ಆದರೆ ಜಾರಿ ವಿಳಂಬ ಆಗುತ್ತಿರುವ ನಿಟ್ಟಿನಲ್ಲಿ ಬಿಜೆಪಿಗೂ ಗ್ಯಾರಂಟಿ ಘೋಷಣೆಗಳು ರಾಜಕೀಯ ಅಸ್ತ್ರಗಳಾಗಿದ್ದವು. ಕೂಡಲೇ ಗ್ಯಾರಂಟಿ ಘೋಷಣೆಗಳನ್ನು ಜಾರಿಗೆ ತರಬೇಕು ಎಂಬ ಒತ್ತಾಯವನ್ನು ಬಿಜೆಪಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವರ ಜೊತೆಗೆ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರು: ಕೃಷಿ ಇಲಾಖೆ ಜವಾಬ್ದಾರಿ ವಹಿಸಿಕೊಂಡ ಬಳಿಕ ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಕೃಷಿ ಸಚಿವ ಚಲುವರಾಯಸ್ವಾಮಿ ನಿನ್ನೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಇಲಾಖೆಯ ಯೋಜನೆಗಳು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಪೂರ್ವ ಮುಂಗಾರಿನಲ್ಲಿ ವಾಡಿಕೆಯಾಗಿ 108 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 108 ಮಿಮೀ ಮಳೆಯಾಗಿದ್ದು, ಯಾವುದೇ ಕೊರತೆ ಆಗಿರುವುದಿಲ್ಲ. 2022-23ನೇ ಸಾಲಿನ ಮೂರನೇ ಮುಂಗಡ ಅಂದಾಜಿನಂತೆ 139.28 ಲಕ್ಷ ಟನ್‌ಗಳಷ್ಟು ಆಹಾರ ಧಾನ್ಯಗಳ ಉತ್ಪಾದನೆಯನ್ನು ಅಂದಾಜಿಸಲಾಗಿದೆ. 2023ರ ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ. ರೈ ತರ ಸಮಸ್ಯೆ ನಮ್ಮ ಮೊದಲ ಆದ್ಯತೆಯಾಗಿದೆ. ರೈತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದೇವೆ. ಪೂರ್ವ ಮುಂಗಾರು ಬೆಳೆಗಳ 2.95 ಲಕ್ಷ ಹೆಕ್ಟೇರ್ ಗುರಿಯಿದ್ದು, ಇದುವರೆಗೆ 2.48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೈಗೊಳ್ಳಲಾಗಿರುತ್ತದೆ. 5.54 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳ…
ಬೆಂಗಳೂರು: ಸೂಕ್ತ ಆಡಳಿತ ನೀಡುವಲ್ಲಿ ಎನ್‌ಡಿಎ ಸರ್ಕಾರ ಸಂಪೂರ್ಣ ಎಡವಿದೆ ಎಂದು ಕೇಂದ್ರದ ಮಾಜಿ ಸಚಿವ ಮನೀಶ್ ತಿವಾರಿ ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರ ಈ ಎಲ್ಲಾ ಮಾನದಂಡವನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಇಂದು ಭಾರತವು ಹಿಂದೆಂದಿಗಿಂತಲೂ ಬಾಹ್ಯ ಶಕ್ತಿಗಳಿಂದ ಭದ್ರತೆಯ ಸವಾಲನ್ನು ಎದುರಿಸುತ್ತಿದೆ ಎಂದರು. ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿತ್ತು ಈಗ ಗೃಹ ಸಚಿವರು ಮಣಿಪುರಕ್ಕೆ ಭೇಟಿ ನೀಡುವ ಮನಸು ಮಾಡಿದ್ದಾರೆ. 2015ರಲ್ಲಿ ಕೈಗೊಂಡ ನಾಗಾಲ್ಯಾಂಡ್ ಒಪ್ಪಂದ ಏನಾಯ್ತು ಎಂದು ಯಾರಿಗೂ ಗೊತ್ತಿಲ್ಲ. ಜಮ್ಮು ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ರಾಜ್ಯವನ್ನಾಗಿ 2019ರಲ್ಲಿ ಮಾಡಿದ್ದಾರೆ. ಆದಷ್ಟು ಬೇಗ ಚುನಾವಣೆ ನಡೆಸಲಾಗುವುದು ಎಂದು ಭರವಸೆ ನೀಡಿ ಇದುವರೆಗೂ ಅಲ್ಲಿ ಚುನಾವಣೆ ನಡೆಸಿಲ್ಲ ಎಂದು ಹೇಳಿದರು. ಕೇಂದ್ರ ಸರ್ಕಾರ ಸರಿಯಾದ ಉತ್ತರ ತೆಗೆದುಕೊಂಡಿದ್ದೆ, ಆಗಿದ್ದಲ್ಲಿ ಅವರು ಚುನಾವಣೆ ನಡೆಸಲು ಯಾಕೆ ಹಿಂದೇಟು ಹಾಕುತ್ತಿದ್ದಾರೆ? 2014ರಿಂದ 2019ರವರೆಗೆ ಬಿಜೆಪಿಯು ಯಾವುದೇ ರಾಜ್ಯಗಳಲ್ಲಿ ತನ್ನ ಅಭಿವೃದ್ಧಿಯ ಕೆಲಸದ ಆಧಾರದ ಮೇಲೆ ಚುನಾವಣೆ ನಡೆಸಿಲ್ಲ. ಅದಕ್ಕೆ…