ಬೆಂಗಳೂರು: ಸಿಎಂ ಮನೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಆರೋಪಿಗೆ ಬೆಂಗಳೂರಿನ ಹೈಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಜಿ. ಬಸವರಾಜ ಅವರಿದ್ದ ನ್ಯಾಯಪೀಠ ಪುರಸ್ಕರಿಸಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪ್ರಕರಣದಲ್ಲಿ ಆರೋಪಿ ಪ್ರದೀಪ್ ಅವರ ಖಾತೆಗೆ ದೂರುದಾರರಿಂದ ಹಣ ಬಂದಿಲ್ಲ. ಇದರ ಬದಲಿಗೆ ಅವರ ಭಾಮೈದುನ ಅರುಣ್ ಕುಮಾರ್ ಎಂಬುವರ ಖಾತೆಗೆ ಹಣ ಕಳುಹಿಸಿದ್ದಾರೆ. ಅಲ್ಲದೇ, ಪ್ರಕರಣದ ಮೂರನೇ ಆರೋಪಿ ಈಗಾಗಲೇ ಜಾಮೀನು ಪಡೆದುಕೊಂಡಿದ್ದಾರೆ. ಹೀಗಾಗಿ ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡುತ್ತಿರುವುದಾಗಿ ನ್ಯಾಯಪೀಠ ತಿಳಿಸಿದೆ. 50 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಭದ್ರತೆ ಒದಗಿಸಬೇಕು. ಸಾಕ್ಷ್ಯಗಳ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪ್ರಭಾವ ಬೀರಬಾರದು. ತನಿಖಾಧಿಕಾರಿಗೆ ಕರೆದಲ್ಲಿ ಹಾಜರಾಗಬೇಕು ಎಂಬುದಾಗಿ ಷರತ್ತುಗಳನ್ನು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Author: Prajatv Kannada
ಬೆಂಗಳೂರು: ಮನೆ ಮಹಡಿಯಿಂದ ಆಯತಪ್ಪಿ ಬಿದ್ದ ಬಾಲಕಿಯ ಮೆದುಳು ನಿಷ್ಕ್ರಿಯಗೊಂಡಿದ್ದು, ಸಾವಿನಲ್ಲೂ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆಯಲ್ಲಿ ವಾಸವಿರುವ ಕೃತಿ ಜೈನ್, ಕಳೆದ ಮೇ 24 ರಂದು ಮನೆಯ ಮಹಡಿ ಮೇಲೆ ತನ್ನ ಸಹೋದರ ಸಂಬಂಧಿಗಳೊಂದಿಗೆ ಆಟ ಆಡುತ್ತಿದ್ದರು. ಈ ವೇಳೆ ಆಯತಪ್ಪಿ 8 ರಿಂದ 10 ಅಡಿ ಮೇಲಿನಿಂದ ಬಿದ್ದಿದ್ದಳು. ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರ ಸತತ ಪರಿಶ್ರಮದ ನಡುವೆಯೂ ಮೇ 28 ರಂದು ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಆಕೆಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಲಾಯಿತು. ಕೃತಿ ಅಗಲಿಕೆಯ ದುಃಖದಲ್ಲೂ ಕುಟುಂಬಸ್ಥರು ಆಕೆಯ ಅಂಗಾಂಗಳನ್ನು ದಾನ ಮಾಡುವ ಧೈರ್ಯದ ನಿರ್ಧಾರ ಮಾಡಿದ್ದಾರೆ. ಜೀವ ಸಾರ್ಥಕತೆ ಸಂಸ್ಥೆಯೊಂದಿಗೆ ಸಮನ್ವಯದಿಂದ ಅಂಗಾಂಗಗಳ ದಾನ ಪ್ರಕ್ರಿಯೆ ನಡೆಸಲಾಗಿದೆ. ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆ ಯಶಸ್ವಿಯಾಗಿ ಕೃತಿ ಅವರ ಶ್ವಾಸಕೋಶ, ಯಕೃತ್, ಮೂತ್ರಪಿಂಡಗಳು, ಹೃದಯದ ಕವಾಟ ಮತ್ತು ಅಕ್ಷಿಪಟಲಗಳನ್ನು ಪಡೆದುಕೊಂಡಿದೆ. ಅಪಾಯಕಾರಿ ಪರಿಸ್ಥಿತಿಯಲ್ಲಿದ್ದವರಿಗೆ…
ಬೆಂಗಳೂರು: ಬಿಜೆಪಿಗರು ಪರಪ್ಪನ ಅಗ್ರಹಾರಕ್ಕೆ ತೆರಳಲು ತಯಾರಾಗಿರಲಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಬಿಎಂಪಿಯಲ್ಲಿ ನಡೆದಿರುವ ಎಲ್ಲಾ ಅಕ್ರಮಗಳನ್ನು ತನಿಖೆ ನಡೆಸಿ ದಾಖಲೆ ಸಲ್ಲಿಸಲು ಡಿಸಿಎಂ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ. ಬಿಜೆಪಿಗರು ಪರಪ್ಪನ ಅಗ್ರಹಾರಕ್ಕೆ ತೆರಳಲು ತಯಾರಾಗಿರಲಿ! ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಚುನಾವಣೆ ನಡೆಸಲಾಗದ ಬಿಜೆಪಿ ಸರ್ಕಾರದಿಂದಾಗಿ ಚುನಾಯಿತ ಜನಪ್ರತಿನಿಧಿಗಳಿಲ್ಲದ ಬಿಬಿಎಂಪಿಗೆ ಚುರುಕು ಮುಟ್ಟಿಸಲಾಗಿದೆ. ಬಿಬಿಎಂಪಿಯಲ್ಲಿ ಜನಸ್ನೇಹಿ ಹಾಗೂ ಭ್ರಷ್ಟಾಚಾರ ಮುಕ್ತ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದುವರೆಗೂ ನಡೆದ ಎಲ್ಲಾ ಅಕ್ರಮಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.
ಬೆಂಗಳೂರಿನಲ್ಲಿ 35 ಸಾವಿರ ಅನಧಿಕೃತ ಜಾಹೀರಾತು ಫಲಕ ತೆರವು ಮಾಡಲಾಗಿದೆ ಎಂದು ಬಿಬಿಎಂಪಿ ಬೆಂಗಳೂರಿನ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಬಿಬಿಎಂಪಿ ಪರ ವಕೀಲರು, ಈ ಹಿಂದೆ ಹೈಕೋರ್ಟ್ ನೀಡಿದ್ದ ನಿರ್ದೇಶನದನ್ವಯ ಅನಧಿಕೃತ ಜಾಹೀರಾತು ತೆರವು ಮತ್ತು ಅವುಗಳನ್ನು ತಡೆಗಟ್ಟುವ ಸಂಬಂಧ ಕೈಗೊಂಡ ಕ್ರಮಗಳ ಕುರಿತಾದ ಅನುಪಾಲನಾ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ನಗರದ ಎಂಟು ವಲಯಗಳಲ್ಲಿ 2023ರ ಮಾರ್ಚ್ ನಿಂದ ಮೇ 25ರವರೆಗೆ ಅಳವಡಿಸಲಾಗಿದ್ದ ಒಟ್ಟು 35,137 ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಇತರೆ ಜಾಹೀರಾತುಗಳನ್ನು ಗುರುತಿಸಲಾಗಿದೆ. ಅವುಗಳ ಪೈಕಿ 34,541 ಫಲಕಗಳನ್ನು ತೆರವುಗೊಳಿಸಲಾಗಿದೆ. ಅನಧಿಕೃತ ಜಾಹೀರಾತು ಅಳವಡಿಕೆ ಸಂಬಂಧ ಒಟ್ಟು 37 ದೂರುಗಳು ಸಲ್ಲಿಕೆಯಾಗಿದ್ದವು. ಈ ಸಂಬಂಧ 40 ಎಫ್ಐಆರ್ಗಳನ್ನು ದಾಖಲಿಸಲಾಗಿದೆ’ ಎಂದು ಅನುಪಾಲನಾ ವರದಿಯಲ್ಲಿ ತಿಳಿಸಲಾಗಿದೆ.
ಬೆಂಗಳೂರು: ನಗರದ ರಾಜಭವನ ರಸ್ತೆಯಲ್ಲಿರುವ ಪ್ರಧಾನ ಅಂಚೆ ಕಚೇರಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ನಾಯಕರು ಪ್ರಧಾನಿ ಕಚೇರಿಗೆ 15 ರೂಗಳನ್ನು ಅಂಚೆ ಮೂಲಕ ಕಳುಹಿಸಿಕೊಟ್ಟರು. ಈ ಸಂದರ್ಭದಲ್ಲಿ ಎಸ್. ಮನೋಹರ್ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ 9 ವರ್ಷದ ಅಚ್ಛೇ ದಿನ್ ಸರ್ಕಾರದಲ್ಲಿ 15 ಲಕ್ಷ ಹಣ ಯಾರ ಖಾತೆಗೂ ಹಾಕಲಿಲ್ಲ, ಹಾಗೂ ಬರಲೇ ಇಲ್ಲ. ಅದಕ್ಕಾಗಿ ಸಾರ್ವಜನಿಕರ ಹಾಗೂ ಕಾಂಗ್ರೆಸ್ ಪಕ್ಷದಿಂದ ನಾವೆಲ್ಲರೂ ಸೇರಿ ಅವರಿಗೆ 15 ರೂಪಾಯಿಯನ್ನು ಮನಿ ಆರ್ಡರ್ ಮಾಡಿದ್ದು, ಕಳುಹಿಸಿ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ. 9 ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ರವರು ರಾಷ್ಟ್ರದ ಜನತೆಗೆ ನೀಡಿದ ಎಲ್ಲ ಭರವಸೆಗಳು ಇಂದು ಸುಳ್ಳಾಗಿವೆ. ಹೊರ ದೇಶದಲ್ಲಿರುವ ಕಪ್ಪು ಹಣ ತರಲಿಲ್ಲ. ಪ್ರತಿಯೊಬ್ಬ ಖಾತೆಗೂ 15 ಲಕ್ಷ ಹಾಕುತ್ತೇವೆ ಎಂದು ಹೇಳಿದರು. ಯಾರ ಖಾತೆಗೂ 15 ರೂ ಸಹ ಇದುವರೆಗೂ ಬಂದಿಲ್ಲ. ಪ್ರತಿ ವರ್ಷ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲಿಯೇ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರನ್ನಾಗಿ ಬಿ.ದಯಾನಂದ್ ಅವರನ್ನು ನೇಮಕ ಮಾಡಲಾಗಿದೆ. ಇಲ್ಲಿವರೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಸಿಎಚ್ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬಿ.ದಯಾನಂದ್ ಅವರು ಇಂಟಲಿಜೆನ್ಸ್ ADGPಯಾಗಿದ್ದರು ಹಾಗೂ ಬೆಂಗಳೂರು ಟ್ರಾಫಿಕ್ ಕಮೀಷನರ್ ಆಗಿ ಕೂಡ ಸೇವೆ ಸಲ್ಲಿಸಿದ್ದಾರೆ. ರಾಣೆಬೆನ್ನೂರು ಮೂಲದ ದಯಾನಂದ್ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಹೆಸರು ಗಳಿಸಿದವರು. ಸರ್ಕಾರವು ಹಾಲಿ ಕಮಿಷನರ್ ಪ್ರತಾಪ್ ರೆಡ್ಡಿ ಆಂತರಿಕ ಭದ್ರತೆ DGPಯಾಗಿ ನೇಮಕ ಹಾಗೂ ಡಾ.ಎಂ.ಎ ಸಲೀಂಗೆ CID ಡಿಜಿ ಹುದ್ದೆ ನೀಡಲಾಗಿದೆ. ಇಂಟಲಿಜೆನ್ಸ್ ADGPಯಾಗಿ K.V. ಶರತ್ಚಂದ್ರ ನೇಮಕ ಮಾಡಲಾಗಿರುವ ಆದೇಶವನ್ನು ಹೊರಡಿಸಿದೆ ಬೆಂಗಳೂರು ನಗರದ ಎಡಿಜಿಪಿ ಮತ್ತು ವಿಶೇಷ ಆಯುಕ್ತ (ಸಂಚಾರ) ಡಾ. ಎಂ.ಎ. ಸಲೀಂ ಅವರನ್ನು ಬೆಂಗಳೂರಿನ ಅಪರಾಧ ತನಿಖಾ ಇಲಾಖೆ (ಸಿಐಡಿ), ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಡಿಜಿಪಿಯಾಗಿ ಬಡ್ತಿ…
ಬೆಂಗಳೂರಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್ ಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ವಾರ್ ರೂಮ್ ಮೂಲಕ ಕಟ್ಟೆಚ್ಚರ ವಹಿಸಬೇಕು. ಸಂಭವನೀಯ ಮಳೆ ಅನಾಹುತಗಳ ಬಗ್ಗೆಯೂ ನಿಗಾ ವಹಿಸಬೇಕು. ಎಲ್ಲೇ ಏನೇ ಅನಾಹುತವಾದರೂ ಸಮಾರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರು ನಾಗರಿಕರಿಗೆ ತೊಂದರೆ ಆಗದಂತೆ ಪೊಲೀಸ್, ಬೆಸ್ಕಾಂ, ಜಲ ಮಂಡಳಿ ಮತ್ತಿತರ ಇಲಾಖೆಗಳ ಜತೆ ಪರಸ್ಪರ ಸಮನ್ವಯ, ಸಹಕಾರ ಸಾಧಿಸಬೇಕು ಎಂದು ಅವರು ಪಾಲಿಕೆ ಹಿರಿಯ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ.
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹರಪನಹಳ್ಳಿ, ಕುಷ್ಟಗಿ, ಹಗರಿಬೊಮ್ಮನಹಳ್ಳಿ, ಯಲಬುರ್ಗಾ, ಹಿರೆಕೆರೂರು, ಹಡಗಲಿ, ತ್ಯಾಗರ್ತಿ, ಶಿಗ್ಗಾಂವಿ, ಕೋಣಂದೂರು, ಶಿವಮೊಗ್ಗ, ಆನವಟ್ಟಿ, ವಿರಾಜಪೇಟೆ, ಪೊನ್ನಂಪೇಟೆ, ಮುರ್ನಾಡು, ಕೊಟ್ಟಿಗೆಹಾರ, ಜಯಪುರ, ಧರ್ಮಸ್ಥಳ, ಬನವಾಸಿ, ಬೇವೂರು, ಮುನಿರಾಬಾದ್, ಕವಡಿಮಟ್ಟಿ, ಹುಂಚದಕಟ್ಟೆ, ಹೊನ್ನಾಳಿ, ಗೋಣಿಕೊಪ್ಪಲು, ರಾಯಲ್ಪಾಡು, ಕಿರವತ್ತಿ, ಯಡ್ರಾಮಿ, ಕಲಘಟಗಿ, ದಾವಣಗೆರೆ, ಅಜ್ಜಂಪುರ, ಹೊಸಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ನಾಯಕನಹಟ್ಟಿ, ಗೋಪಾಲ್ನಗರ, ಬೇಲೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 33.6…
ತುಮಕೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು KIADB ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ದಾಳಿ ನಡೆಸಲಾಗಿದೆ.ತುಮಕೂರು ನಗರದ ಆರ್.ಟಿ. ನಗರದಲ್ಲಿರುವ KIADB ಅಧಿಕಾರಿ ನರಸಿಂಹಮೂರ್ತಿ ಮನೆ ಮನೆ ಮೇಲೆ ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಡಿಎಸ್ ಪಿ ಗಳಾದ ಮಂಜುನಾಥ್ ಹಾಗೂ ಹರೀಶ್ ತಂಡದಿಂದ ರೇಡ್ ನಡೆದಿದ್ದು ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ: ತಂಬಾಕಿನಿಂದ ಹೃದಯಕ್ಕೆ ಹಾನಿ ತಂಬಾಕು ಹೃದಯ ಮತ್ತು ರಕ್ತ ಅಪಧಮನಿಗಳಿಗೆ ಹಾನಿ ಮಾಡುವ ವಿಷವನ್ನು ಹೊಂದಿರುತ್ತದೆ, ಇದು ಅಸಮರ್ಪಕ ಕಾರ್ಯಕ್ಕೆ ಕಾರಣವಾಗುತ್ತದೆ. ತಂಬಾಕು ಸೇವನೆಯಿಂದ ಕ್ರಮೇಣ ರಕ್ತ ಅಪಧಮನಿಗಳನ್ನು ಸಂಕುಚಿತಗೊಳಿಸುತ್ತಾ ಹೋಗುತ್ತದೆ, ದೇಹದಾದ್ಯಂತ ರಕ್ತ ಮತ್ತು ಆಮ್ಲಜನಕದ ನೈಸರ್ಗಿಕ ಹರಿವು ನಿಧಾನಗೊಳ್ಳುತ್ತದೆ. ಜೊತೆಗೆ ಹೃದಯದ ಬಡಿತವು ಹೆಚ್ಚಾಗುವುದು ಹಾಗೂ ಹಿಗ್ಗುವುದು. ಈ ಅಸಹಜ ಕಾರ್ಯಚಟುವಟಿಕೆಯು ಅಧಿಕ ರಕ್ತದೊತ್ತಡ ಮತ್ತು ಹೃದಯರಕ್ತನಾಳದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ನೀವು ಧೂಮಪಾನವನ್ನು ಒಂದೇ ದಿನ ಏಕಾಏಕಿ ನಿಲ್ಲಿಸಿದ್ರೆ ಸಮಸ್ಯೆಯಾಗುತ್ತದೆ. ನಿಕೋಟಿನ್ ಸಿಗದೆ ನಿಮಗೆ ಅನೇಕ ಅನಾರೋಗ್ಯ ಕಾಡಬಹುದು. ತಲೆನೋವು ಕಾಣಿಸಿಕೊಳ್ಳಬಹುದು. ಉತ್ಸಾಹ ಕಡಿಮೆಯಾಗುತ್ತದೆ. ಕಿರಿಕಿರಿ, ಕೋಪ ಬರುತ್ತದೆ. ಹಾಗಾಗಿ ಸಿಗರೇಟ್ ಬದಲು ನೀವು ನಿಕೋಟಿನ್ ಬದಲಿ ಚಿಕಿತ್ಸೆ ಶುರು ಮಾಡಬಹುದು. ನಿಕೋಟಿನ್ ಗಮ್ ಬಳಸಬಹುದು. ಬೀಡಿ, ಸಿಗರೇಟು ಸೇರಿದಂತೆ ತಂಬಾಕನ್ನು ಬೇರೆ ಬೇರೆ ರೂಪಗಳಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ, ಇದು ಕೇವಲ ಜೀವನ ನಷ್ಟವಷ್ಟೇ ಆಲ್ಲ; ಆರ್ಥಿಕ ನಷ್ಟವನ್ನೂ ತರುತ್ತದೆ ಎಂದು…