ದಾವಣಗೆರೆ: ಚುನಾವಣೆ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಪೂಜೆ ಮಾಡಲಿ, ನಾವೂ ಪೂಜೆ ಮಾಡುತ್ತೇವೆ. ಕೊನೆಗೆ ದೇವರು ಯಾರಿಗೆ ಆಶೀರ್ವಾದ ಮಾಡುತ್ತಾನೆ ನೋಡೋಣ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆಗೆ ಆಗಮಿಸಿದ್ದ ಸಂದರ್ಭದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಡಿ ಕೆ ಶಿವಕುಮಾರ್ ಅವರ ಪೂಜೆ ಅವರು ಮಾಡಲಿ, ದೇವರು ಯಾರಿಗೆ ಆಶೀರ್ವಾದ ಮಾಡುತ್ತಾನೆ ಎಂಬುದು ಮೇ.13 ರಂದು ಗೊತ್ತಾಗಲಿದೆ. ಡಿ ಕೆ ಶಿವಕುಮಾರ್ ಅವರೇ ಭಾವನೆಗಳ ಜೊತೆಗೆ ಆಟವಾಡುತ್ತಾರೆ. ಲಿಂಗಾಯತ ಡ್ಯಾಂ ಹಾಗೂ ಲಿಂಗಾಯತ ಸರೋವರ ಇವೆಲ್ಲ ಭಾವನೆಗಳು. ಹೀಗಾಗಿ, ಡಿ ಕೆ ಹೇಳುವುದೊಂದು ಮಾಡುವುದು ಇನ್ನೊಂದು. ಅವರ ಮಾತನ್ನ ಸಿರಿಯಸ್ಸಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದರು. ಇನ್ನು, ಎಐಸಿಸಿ ನಾಯಕ ರಾಹುಲ್ ಗಾಂಧಿ ಲಿಂಗಾಯತ ಮಠಕ್ಕೆ ಹೋಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಅವರು ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿದ್ದಾರಲ್ಲ ಅದಕ್ಕೆ ಧನ್ಯವಾದಗಳು ಎಂದಿದ್ದಾರೆ. ಹಿಂದೆ ಸಿಎಂ ಆಗಬೇಕು ಎಂದು ನಾನು ಅಂದುಕೊಂಡರಲಿಲ್ಲ. ಹೈಕಮಾಂಡ್ ತೀರ್ಮಾನ…
Author: Prajatv Kannada
ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ಸಿದ್ಧಾಂತ ಬಿಟ್ಟು ಮದ್ದೂರು, ಚಿತ್ರದುರ್ಗದಲ್ಲಿ ಕ್ಯಾಸಿನೊ, ಇಸ್ಟೀಟ್ ಆಡಿಸುವವರಿಗೆ ಟಿಕೆಟ್ ನೀಡಿದ್ದು, ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೀರೆಂದ್ರ ಪಪ್ಪಿ ಠೇವಣಿ ಕಳೆದುಕೊಳ್ಳುತ್ತಾರೆ ಎಂದು ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಹೇಳಿದ್ದಾರೆ. ನಗರದಲ್ಲಿನ ತಮ್ಮ ನಿವಾಸದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಉತ್ತಮ ವಿದ್ಯಾಭ್ಯಾಸ ಬೇಕಿದೆ. ಆದರೆ ನಗರದ ಮಲ್ಲಾಪುರ ಕೆರೆಯಲ್ಲಿ ಕ್ಯಾಸಿನೊ ಪ್ರಾರಂಭಿಸುತ್ತೆವೆ ಎಂದು ಹೇಳಲಾಗುತ್ತಿದ್ದು, 17ವರ್ಷದ ಯುವಕರು ಕ್ಯಾಸಿನೊಗೆ ಹೋದರೆ ಗತಿಯೇನು ? ಕ್ಷೇತ್ರದ ಮತದಾರರು ಇಸ್ಪೀಟ್ ಕ್ಲಬ್ ಬೇಕೋ, ಎಜುಕೇಶನ್ ಬೇಕೋ ಎಂಬುದನ್ನು ತೀರ್ಮಾನಿಸುತ್ತಾರೆ ಎಂದು ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವಿರೇಂದ್ರ ಪಪ್ಪಿಗೆ ಟಾಂಗ್ ನೀಡಿದರು. ನಿನ್ನೆ ದಿನ ಕಾರು ಅಡ್ಡಗಟ್ಟಿ ಗಲಾಟೆ ಪ್ರಕರಣ ಸಂಬಂಧ ಮಾತನಾಡಿದ ರಘು ಆಚಾರ್, ನಾಲ್ಕು ಜನ ಪುಂಡ ಹೈಕಳು ಕಟ್ಟಿಕೊಂಡು ಗಲಾಟೆ ಮಾಡಿದರೆ ನಾನು ಹೆದರುವವನು ಅಲ್ಲ. ನಾವು ಗಲಾಟೆ ಶುರು ಮಾಡಿದರೆ ನೀವು ಹಳ್ಳಿಗೆ ಹೋಗಲು ಸಾಧ್ಯವಾಗಲ್ಲ. ಗಲಾಟೆನೇ ಮಾಡ್ತೀವಿ ಅಂದರೆ ನಾನು ಗಲಾಟೆ…
ರಾಮನಗರ: ರಾಜ್ಯದ ಸುಸಜ್ಜಿತ ಹೆದ್ದಾರಿ ಎಂದು ಹೇಳುವ ಬೆಂಗಳೂರು-ಮ್ಯಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಕನಿಷ್ಠ ಸುರಕ್ಷತಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿಲ್ಲ. ಪರಿಣಾಮ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರ ಜೀವಕ್ಕೆ ಗ್ಯಾರಂಟಿಯೇ ಇಲ್ಲದಂತಾಗಿದೆ. ನೂತನ ಬೆಂಗಳೂರು-ಮೈಸೂರು ಹೆದ್ದಾರಿ ಪ್ರಯಾಣಕ್ಕೆ ಮುಕ್ತವಾದ ಬಳಿಕ ಅಪಘಾತಗಳು ಹೆಚ್ಚಾಗಿವೆ. ಮೊದಲ ಹಂತದ ಹೆದ್ದಾರಿ ಉದ್ಘಾಟನೆಗೊಂಡು ಟೋಲ್ ಶುಲ್ಕ ಸಂಗ್ರಹಿಸಲು ಆರಂಭಿಸಿದೆಯಾದರೂ, ಎಕ್ಸ್‌ಪ್ರೆಸ್ ಹೈವೇಯಲ್ಲಿ ಪ್ರಯಾಣಿಕರಿಗೆ ದೊರೆಯ ಬೇಕಾದ ಕನಿಷ್ಠ ಸುರಕ್ಷತಾ ಸೌಲಭ್ಯಗಳು ಇಲ್ಲ ಎಂಬ ಸಂಗತಿ ಏಪ್ರಿಲ್ 22 ರಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಮಯದಲ್ಲಿ ನಡೆದ ಪ್ರಸಂಗಗಳಿಂದ ಅನಾವರಣ ಗೊಂಡಿದೆ. ಆಂಬ್ಯುಲೆನ್ಸ್ ವ್ಯವಸ್ಥೆ ಇಲ್ಲ ಹೆದ್ದಾರಿಯಲ್ಲಿ ಅಪಘಾತಗಳು ಸಂಭವಿಸಿದ ಸಮಯದಲ್ಲಿ ಗಾಯಾಳುಗಳಿಗೆ ತ್ವರಿತವಾಗಿ ವೈದ್ಯಕೀಯ ಚಿಕಿತ್ಸೆ ದೊರೆಯಬೇಕಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ತುರ್ತು ಆಂಬ್ಯುಲೆನ್ಸ್ ಸೇವೆ ಅತ್ಯಗತ್ಯ. ಆದರೆ, ಮೊದಲ ಹಂತದ 60 ಕಿಮೀ ನಷ್ಟು ರಸ್ತೆಯಲ್ಲಿ ಬಿಡದಿ ಟೋಲ್ ಬಳಿ ಮಾತ್ರ ಒಂದು ಆಂಬ್ಯುಲೆನ್ಸ್ ಇದ್ದು, ಹೈವೇನಲ್ಲಿ ಎಲ್ಲೇ ಅಪಘಾತ ಸಂಭವಿಸಿದರೂ ಅಲ್ಲಿಂದಲೇ ವಾಹನ ಬರಬೇಕಿದೆ. ಹೆದ್ದಾರಿ ಮಧ್ಯದಲ್ಲಿ…
ಹುಬ್ಬಳ್ಳಿ: ಬಿ.ಎಲ್ ಸಂತೋಷ್ (BL Santhosh) ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅವರು ತಮ್ಮ ಕುಟುಂಬ, ಸಂಸಾರ ತ್ಯಾಗ ಮಾಡಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು. ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಈಗಾಗಲೇ ಕಿತ್ತೂರು ಭಾಗದಲ್ಲಿ ಒಂದು ಮೋದಿ ಕಾರ್ಯಕ್ರಮ ನಿಗದಿಯಾಗಿದೆ. ಮೋದಿ ಕಾರ್ಯಕ್ರಮ ಇನ್ನೂ ಎರಡು, ಮೂರು ಜಾಸ್ತಿ ಮಾಡುವಂತೆ ಮನವಿ ಮಾಡಿದ್ದೇವೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸಹ ಬರಲಿದ್ದಾರೆ ಎಂದರು. ಅಮಿತ್ ಶಾ ಇಂದು ಸಂಜೆ 6 ಗಂಟೆಗೆ ಹುಬ್ಬಳ್ಳಿಗೆ ಬರಲಿದ್ದಾರೆ. ನಮ್ಮ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಮತ್ತು ಇತರೆ ಪ್ರಮುಖ ನಾಯಕರ ಜೊತೆಗೆ ಸಭೆಯಿದೆ. ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಪ್ರಮುಖರ ಸಭೆ ನಡೆಯಲಿದೆ. ಸದ್ಯದ ಚುನಾವಣಾ ಮಾಹಿತಿಯನ್ನು ಶಾ ಪಡೆಯಲಿದ್ದಾರೆ. ಬಳಿಕ ಸುದ್ದಿಗೊಷ್ಠಿ ನಡೆಸಲಿದ್ದಾರೆ ಎಂದು ತಿಳಿಸಿದರು
ಮತ ಪ್ರಚಾರಕ್ಕಿಳಿದ ವಿರೂಪಾಕ್ಷಪ್ಪ ಬಳ್ಳಾರಿ ಬ್ಯಾಡಗಿ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿಯಿಂದ ಕ್ಯಾಂಡಲ್ ಕ್ಯಾನ್ವಾಸ್ ಮಾಡಲಾಯಿತು, ದೇವಸ್ಥಾನ ಸೇರಿದಂತೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೀಪ ಹಚ್ಚಿ ಮತಯಾಚನೆ ಮಾಡಿದ ವಿರೂಪಾಕ್ಷಪ್ಪ ಬಳ್ಳಾರಿ, ತಾಲ್ಲೂಕಿನ ಕಲ್ಲೇದೇವರ ತಾಂಡಾದಲ್ಲಿ ವಿಶಿಷ್ಟ ರೀತಿಯ ಗಮನ ಸೇಳದರು. ಬಸವೇಶ್ವರರು ಸಮಾನತೆಯ ಹರಿಕಾರರು ಮತದಾರರ ಬದುಕಿನಲ್ಲಿ ಬೆಳಕನ್ನು ಚೆಲ್ಲುವ ವ್ಯವಸ್ಥೆಯನ್ನು ಮನದಟ್ಟು ಮಾಡುವ ಕಾರ್ಯ ಮಾಡುತ್ತಿದ್ದೇನೆ ಹಿಂದಿನ ಗೆಲುವಿಗಿಂತ ಈ ಬಾರಿ ಹೆಚ್ಚಿನ ಬೆಂಬಲ ಜನ ನೀಡುತ್ತಿದ್ದಾರೆ ಮತ್ತೊಮ್ಮೆ ಶಾಸಕನಾಗಿ ಆಯ್ಕೆಯಾಗುವ ಮೂಲಕ ಜನಸೇವೆ ಮಾಡುತ್ತನೆ ಎಂದು ಬ್ಯಾಡಗಿ ತಾಲ್ಲೂಕಿನ ಕಲ್ಲೆದೇವರ ತಾಂಡಾದಲ್ಲಿ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು
ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಕ್ಷೇತ್ರದಿಂದ ಹೊರಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಗ್ರಾಮೀಣದಿಂದ ಜಯ ಸಾಧಿಸಲಿ ಎಂದು ಅಭಿಮಾನಿಯೋರ್ವ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿನಯ ಅಭಿಮಾನಿ ಕಲಘಟಗಿ ಸಾತೋ ಸಹೀದ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ…ವಿನಯ್ ಕುಲಕರ್ಣಿ ಬಾರಿ ಮತಗಳ ಅಂತರದಿಂದ ಈ ಬಾರಿ ಗೆಲುವು ಸಾಧಿಸಲಿ.
ಬೆಳಗಾವಿ: ನನ್ನ ಮಾತುಗಳನ್ನು ತಿರುಚುತ್ತಲೇ ಇದ್ದಾರೆ. ವೀರಶೈವ ಲಿಂಗಾಯತರನ್ನು (Veerashaiva Lingayats) ನನ್ನ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಗೋಕಾಕ್‌ನಲ್ಲಿ ಶೆಟ್ಟರ್ ಹಾಗೂ ಸವದಿ ಪಕ್ಷ ಬಿಟ್ಟಿದ್ದು ಸಮುದ್ರದಲ್ಲಿನ ಒಂದು ಲೋಟ ನೀರು ತಗೆದಂತೆ ಎಂಬ ಬಿಜೆಪಿಗರ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಬಿಜೆಪಿಯವರು ಹತಾಶರಾಗಿ ಆ ರೀತಿಯ ಮಾತನ್ನಾಡುತ್ತಿದ್ದಾರೆ. ಶೆಟ್ಟರ್ ಟಿಕೆಟ್ ಕೈ ತಪ್ಪೋಕೆ ಕಾರಣ ಸಂತೋಷ್ ಅಲ್ಲ ಪ್ರಧಾನಿಗಳು ಎಂಬ ಜೋಶಿ ಹೇಳಿಕೆ ವಿಚಾರಕ್ಕೆ ಶೆಟ್ಟರ್ ಹೇಳೋದು ನಂಬಬೇಕೊ? ಜೋಶಿ ಹೇಳೋದು ನಂಬಬೇಕೊ? ಎಂದು ಪ್ರಶ್ನೆ ಮಾಡಿದರು. ನಾನು ನಂಬೋದು ಶೆಟ್ಟರ್ ಹೇಳೋದನ್ನು. ಜೋಶಿ ಸುಳ್ಳು ಹೇಳ್ತಾನೆ ಎಂದು ಟಾಂಗ್ ನೀಡಿದರು. ಸಮ್ಮಿಶ್ರ ಸರ್ಕಾರ ಪತನ ಮಾಡಿದ ರಮೇಶ್ ಜಾರಕಿಹೊಳಿ ಕ್ಷೇತ್ರಕ್ಕೆ ಬಂದಿದ್ದೀರಿ, ಹೇಗಿದೆ ವಾತಾವರಣ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಾರಿ ಕ್ಷೇತ್ರದಲ್ಲಿ ರಮೇಶ್ ವಿರುದ್ಧ ಬಲವಾದ ವಿರೋಧ ಇದೆ. ಅದರಿಂದ ಈ ಬಾರಿ ನಮ್ಮ…
ಮಂಡ್ಯ: ಅಂಬರೀಶ್ ಮೃತ ದೇಹ ಮಂಡ್ಯಕ್ಕೆ ತಂದ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ವಿರುದ್ಧ ಗರಂ ಆದ ಸಂಸದೆ ಸುಮಲತಾ(Sumalatha Ambareesh), ತುಂಬಾ ಹೇಸಿಗೆ ಅನಿಸುತ್ತೆ ಕುಮಾರಸ್ವಾಮಿ(Kumarswamy)ಯವರ ಈ ರೀತಿ ಮಾತುಗಳು. ಅಂಬರೀಶ್ ಅವರಿಗೆ ಗೌರವ ಸಿಕ್ಕಿದ್ದು ಒಬ್ಬ ನಾಯಕನಿಂದ ಅಲ್ಲ. ರಾಜ್ಯದ ಜನತೆ ಅವರಿಗೆ ಗೌರವ ಸ್ಥಾನಮಾನ ಕೊಟ್ಟಿರುವುದು. ನಾನೇ ನಾನೇ ಎಂದು ಕುಮಾರಸ್ವಾಮಿ ಹೇಳೋದು ಅವರಿಗೆ ಶೋಭೆ ತರಲ್ಲ ಎಂದರು. ನಾನು ಅವರಿಗೆ ಏನು ಅನ್ಯಾಯ ಮಾಡಿದ್ದೇನೆ ಎಂದು ಈ ರೀತಿ ದ್ವೇಷ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ದ್ವೇಷ ಮಾಡಿದ್ದು ನಾನಾ, ಅವರ ಎಂದು ಜನ ನೋಡಿಕೊಂಡು ಬಂದಿದ್ದಾರೆ. ಒಂದೊಂದು ದಿನ ಒಂದೊಂದು ಹೇಳಿಕೆ ಕೊಡುವ ಮೂಲಕ ದಾರಿ ತಪ್ಪಿಸಲು ಹೊರಟಿದ್ದಾರೆ. ದ್ವೇಷದ ರಾಜಕಾರಣ ಅವರು ಮತ್ತು ಅವರ ಕಡೆಯವರು ಮಾಡಿಕೊಂಡು ಬಂದಿದ್ದಾರೆ. ಅಂಬರೀಶ್ ಹಾಗೂ ಅವರ ಕುಟುಂಬ ಪ್ರೀತಿಯಿಂದನೇ ಎಲ್ಲರನ್ನ ಗೆದ್ದಿರೋದು. ಹಿಂದಿನ ರೆಕಾರ್ಡ್ ತೆಗೆದು ನೋಡಿಕೊಂಡು ಆಮೇಲೆ ಈ ರೀತಿ ಹೇಳಿಕೆ ನೀಡಲಿ.…
ಚಿಕ್ಕಮಗಳೂರು: ಜೆಡಿಎಸ್‍ಗೆ (JDS) ಬಿಟ್ಟು ಕಾಂಗ್ರೆಸ್‍ಗೆ (Congress) ಮತ ಹಾಕಿ ಎನ್ನುವ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ (SL Bhojegowda) ಶಾಕ್ ನೀಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳು ತಮ್ಮ ತಮ್ಮ ಪಕ್ಷದ ಗೆಲುವಿಗೆ ಭರ್ಜರಿ ಸಿದ್ಧತೆ ನಡೆಸಿವೆ. ಆದರೆ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಎಸ್.ಎಲ್. ಭೋಜೇಗೌಡ ಅವರು ಜೆಡಿಎಸ್ ಕಾರ್ಯಕರ್ತರೊಂದಿಗೆ ಮಾತನಾಡಿರುವ ವೀಡಿಯೋ ವೈರಲ್ ಆಗುತ್ತಿದ್ದು, ಕಾಂಗ್ರೆಸ್‍ಗೆ ಮತ ಹಾಕಿ ಎನ್ನುವ ಮೂಲಕ ಅಚ್ಚರಿಯನ್ನು ಮೂಡಿಸಿದ್ದಾರೆ. ವೈರಲ್ ವೀಡಿಯೋದಲ್ಲಿ ಏನಿದೆ?: ಭೋಜೇಗೌಡ ಕಾರ್ಯಕರ್ತರ ಜೊತೆ ಮಾತನಾಡಿರುವ ವೀಡಿಯೋ ಇದಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯನ ಪರ ಬ್ಯಾಟಿಂಗ್ ಬೀಸಿದ ಅವರು, ಜೆಡಿಎಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಕರೆ ನೀಡಿದರು. ಈ ಬಾರಿ ನೀವೆಲ್ಲಾ ಸೇರಿ ಕಾಂಗ್ರೆಸ್‍ಗೆ ವೋಟ್ ಹಾಕಬೇಕು. ಇದು ಒಂದು ಬಾರಿ ಈ ರೀತಿ ಮಾಡಿ ಎಂದು ಹೇಳಿದ್ದಾರೆ. ಜೆಡಿಎಸ್ ಅಭ್ಯರ್ಥಿ ತಿಮ್ಮಶೆಟ್ಟಿ ಕಣದಲ್ಲಿದ್ದರೂ…
ಬಳ್ಳಾರಿ: ಕಂಪ್ಲಿ ಕ್ಷೇತ್ರದಲ್ಲಿ ಮಂಗಳ ಮುಖಿ ಸ್ಪರ್ಧೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ತಲೆ ನೋವಾಗುವ ಸಾಧ್ಯತೆ ಇದೆ. ಕಾರಣ ಇವರು ಹಳ್ಳಿ ಹಳ್ಳಿಗಳಲ್ಲಿ ನಡೆಸಿರುವ ಪ್ರಚಾರಕ್ಕೆ ಜನರಿಂದ ದೊರೆಯುತ್ತಿರುವ ಪ್ರತಿ ಸ್ಪಂದನೆ ಇವರು ಪಡೆಯುವ ಮತ ಶಾಸಕ ಗಣೇಶ್ ಇಲ್ಲ ಮಾಜಿ ಶಾಸಕ ಸುರೇಶ್ ಬಾಬು ಇವರಲ್ಲಿ ಯಾರ ಸೋಲಿಗೆ ಕಾರಣವಾಗುತ್ತೆ ಎಂಬುದನ್ನು ಕಾದು ನೋಡಬೇಕಿದೆ. ಸಮಾಜ ಸುಧಾರಣೆ ಮಾಡ್ತೇವೆ. ಜನರಿಗೆ ಮೂಲಭೂತ ಸೌಲಭ್ಯಗಳನ್ನು ನೀಡ್ತೇವೆ ಎನ್ನುವ ಆಶ್ವಾಸನೆಯೊಂದಿಗೆ ಚುನಾವಣೆ ಕಣಕ್ಕೆ ಇಳಿಯೊದು ಸಹಜ. ಇದರೊಂದಿಗೆ ಈ ಮಂಗಳ ಮುಖಿ. ಮಂಗಳ ಮುಖಿಯರಿಗೆ ನ್ಯಾಯಯುತವಾದ ಸೌಲಭ್ಯಗಳನ್ನು ಸರಗಕಾರದಿಂದ ಕೊಡಿಸಲೆಂದೇ ಚುನಾವಣೆ ಅಖಾಡಕ್ಕೆ ಇಳಿದಿದ್ದಾರಂತೆ. ದೇಶ ಪ್ರೇಮ ಪಾರ್ಟಿಯ ಅಭ್ಯರ್ಥಿಯಾಗಿ ಮಂಗಳಮುಖಿ ಟಿ.ರಾಮಕ್ಕ ಕಣಕ್ಕಿಳಿದಿದ್ದಾರೆ. ಜಿಲ್ಲೆಯಲ್ಲಿ ಸ್ಪರ್ಧಾಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಇವರೊಬ್ಬರೇ ಮಂಗಳ ಮುಖಿಯಾಗಿದ್ದಾರೆ. ಸಮಾಜದಲ್ಲಿ ಮಂಗಳಮುಖಿ ಯರಿಗೆ ಸೂಕ್ತ ಸಮಾನತೆ ಸಿಗುತ್ತಿಲ್ಲ. ಸಮಾಜದಲ್ಲಿ ಗೌರವ ನೀಡುತ್ತಿಲ್ಲ. ಇದರಿಂದಾಗಿ ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುವಂತಹ ದುಸ್ಥಿತಿಯಲ್ಲಿದ್ದಾರೆ. ಹೀಗಾಗಿ ಶಾಸಕಿಯಾಗುವ ಮೂಲಕ …