Author: Prajatv Kannada

ಬೀದರ್ (ಏ.24): ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ಕಾರ್ಯಕರ್ತರೇ ನಮ್ಮ ಶಕ್ತಿ, ಅವರಿಂದಲೇ ನಮ್ಮ ಪಕ್ಷ ಗಟ್ಟಿಯಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಕ್ಷೇತ್ರದ ಆಣದೂರು, ಆಣದೂರುವಾಡಿ, ಸಿಖೇನಪೂರ ಸೇರಿದಂತೆ ವಿವಿಧ ಗ್ರಾಮಗಳ ವಿವಿಧ ಪಕ್ಷಗಳ ಮುಖಂಡರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಕಾರ್ಯಕರ್ತರು ಸ್ವಾಭಿಮಾನಿಗಳಾಗಿದ್ದಾರೆ. ಅವರೇ ನಮ್ಮ ಪಕ್ಷಕ್ಕೆ ಶಕ್ತಿ ತುಂಬುತ್ತಿದ್ದಾರೆ. ಅವರಿಂದಲೇ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿಯಲ್ಲಿ ಏನು ಇಲ್ಲ, ಈಗ ಅಧಿಕಾರದಲ್ಲಿರುವುದು ಉದ್ರಿ ಸರ್ಕಾರ. ಕಾಂಗ್ರೆಸ್ ನವ್ರು ತಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದ ರಾಜ್ಯದಲ್ಲಿ ಗ್ಯಾರಂಟಿ ಕೊಟ್ಟಿಲ್ಲ. ಅಧಿಕಾರದಲ್ಲಿ ಇಲ್ಲದ ನಮ್ಮ ರಾಜ್ಯದಲ್ಲಿ ಗ್ಯಾರಂಟಿ ಕೊಡ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದಮೇಲೆ ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೇ ನಾವು…

Read More

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು (ಏ.24) ಮತ್ತು ನಾಳೆ (ಏ.25) ರಾಜ್ಯ ಪ್ರವಾಸದಲ್ಲಿದ್ದಾರೆ. ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಮಿತ್ ಶಾ ಅವರಿಗೆ ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಾಯಕ ರಾಮದಾಸ್​ ಸಾಥ್​ ನೀಡಿದರು.

Read More

ಬೆಂಗಳೂರು: ಕರ್ನಾಟಕ 2023 ರ ವಿಧಾನಸಭಾ ಚುನಾವಣೆಗೆ(Karnataka Assembly Election) ಕೆಲವೇ ದಿನಗಳು ಬಾಕಿ ಇದ್ದು, ರಾಜಧಾನಿ ಬೆಂಗಳೂರಿನಲ್ಲಿ ರೌಡಿಶೀಟರ್ ಗಳ  (Rowdysheeters in Bangalore)ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗಾಗಲೇ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಗರದ ಅನೇಕ ರೌಡಿಶೀಟರ್​ಗಳನ್ನ ಗಡಿಪಾರು ಮಾಡಲಾಗಿದೆ. ಇದೀಗ ಬೆಂಗಳೂರು ಪೂರ್ವ ವಿಭಾಗ ಪೊಲೀಸರಿಂದ ಡಿ.ಜೆ ಹಳ್ಳಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ಸ್ ಮನೆಗಳ ಮೇಲೆ ದಾಳಿ (Police Raid)ಮಾಡಲಾಗಿದ್ದು, ರೌಡಿಶೀಟರ್​​​​​ ಆಸಿಫ್​​ ಮನೆಯಲ್ಲಿ 105 KG ಗಾಂಜಾ, ಮಾರಕಾಸ್ತ್ರವನ್ನ ವಶಕ್ಕೆ ಪಡೆಯಲಾಗಿದೆ. ಜೊಲ್ಲು ಇಮ್ರಾನ್​​, ಅನಿಸ್​, ಅಬ್ಬಾಸ್​​, ಸಾಧಿಕ್​​​, ಶಾಕಿರ್​​​​, ಇರ್ಫಾನ್​, ಯೂಸೂಫ್​​ ಸೇರಿ 100 ರೌಡಿಶೀಟರ್​​ಗಳ​​ ಮನೆಗಳ ಮೇಲೆ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಮನೆಗಳಲ್ಲಿದ್ದ ಡ್ರಗ್ಸ್​​, ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More

ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್ ಪುಷ್ಪ 2 ಚಿತ್ರದ ಟ್ರೆಂಡಿಂಗ್ ಪೋಸ್ಟರ್‌ಗೆ ತಮ್ಮ ಮುಖವನ್ನು ಮಾರ್ಫ್ ಮಾಡಿದ್ದಾರೆ. ಕ್ರಿಕೆಟ್ ಜೊತೆಗೆ ಡೇವಿಡ್ ವಾರ್ನರ್ ದಕ್ಷಿಣ ಭಾರತದ ಚಲನಚಿತ್ರಗಳ ಮೇಲಿನ ಒಲವಿಗಾಗಿ ಜನಪ್ರಿಯರಾಗಿದ್ದಾರೆ. ಪುಷ್ಪ 2 ಪೋಸ್ಟರ್ ನಂತೆ ಸಂಪೂರ್ಣವಾಗಿ ರೂಪಾಂತರಗೊಂಡ ತಮ್ಮ ನೋಟವನ್ನು ವಾರ್ನರ್ ಇನ್ ಸ್ಟಾಗ್ರಾಂನಲ್ಲಿ ಬಹಿರಂಗಪಡಿಸಿದ್ದಾರೆ. ವಾರ್ನರ್ ಪೋಸ್ಟರ್‌ನಲ್ಲಿ ಅಲ್ಲು ಅರ್ಜುನ್ ಧರಿಸಿದ್ದ ಅದೇ ಆಭರಣಗಳು ಮತ್ತು ಸೀರೆಯೊಂದಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿದೆ. ವಾರ್ನರ್ ಅವರ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹಲವಾರು ಅಭಿಮಾನಿಗಳು ವಾರ್ನರ್ ನೋಟಕ್ಕೆ ಫಿದಾ ಆಗಿದ್ದು ‘ಸರ್ ಮೊದಲು ನೀವು ಹೈದರಾಬಾದ್‌ಗೆ ಬಂದು ಪುಷ್ಪಾ ಚಿತ್ರದಲ್ಲಿ ನಟಿಸಿ’ ಎಂದು ಹೇಳಿದ್ದಾರೆ. ಏಪ್ರಿಲ್ 7 ರಂದು ಅಲ್ಲು ಅರ್ಜುನ್ ವಿಭಿನ್ನವಾಗಿ ಕಾಣಿಸಿಕೊಂಡಿರುವ ಫಸ್ಟ್ ಲುಕ್ ಬಿಡುಗಡೆಯಾಯಿತು.

Read More

ಬೆಂಗಳೂರು: ಕ್ಷೇತ್ರದ ಅಭಿವೃದ್ಧಿಯೇ ನನ್ನ ಧ್ಯೇಯ ಎಂದು ಸಚಿವ ಕೆ ಗೋಪಾಲಯ್ಯ(Minister K Gopaliah) ಹೇಳಿದ್ದಾರೆ. ಮಹಾಲಕ್ಷ್ಮಿ ಲೇಔಟ್(Mahalakshmi Layout) ವಿಧಾನಸಭಾ ಕ್ಷೇತ್ರದ, ಮಾರಪ್ಪನಪಾಳ್ಯದ ಅಶೋಕ್ ಪುರಂನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ನಡೆಸಿ. ಅವರು ಮಾತನಾಡಿ, ಕ್ಷೇತ್ರದಲ್ಲಿನ ಮಳೆ ಬಂದಂತಹ ಸಂದರ್ಭದಲ್ಲಿ ನೂರಾರು ಮನೆಗಳಿಗೆ ನೀರು ಸೇರುತ್ತಿತ್ತು. ಅವುಗಳಿಗೆ ಸೂಕ್ತ ಕ್ರಮವನ್ನು ವಹಿಸಿ ಸರಿಪಡಿಸಲಾಗಿದೆ. ದೇವಸ್ಥಾನಗಳ ಹಿಂಭಾಗ ಒಳಚರಂಡಿ ಮಾಡಿರುವುದರಿಂದ ಯಾವುದೇ ಮನೆಗೆ ನೀರು ಹೋಗದ ರೀತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಮೂರು ಬಾರಿ ಶಾಸಕರಾಗಲು ಅವಕಾಶವನ್ನು ಮಾಡಿಕೊಟ್ಟ ತಮ್ಮೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಅಶೋಕ್ ಪುರಂ ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿನ ಕಲ್ಯಾಣ ಮಂಟಪ ನಿರ್ಮಾಣ, ನಮ್ಮ ಕ್ಲಿನಿಕ್ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಕೂಲಿ ಮಾಡಿ ಬದುಕುತ್ತಿರುವ ಬಡ ಕುಟುಂಬದವರಿಗೆ ಸೌಕರ್ಯವನ್ನು ಮಾಡಿದ್ದೇವೆ ಎಂದರು. ಕುಡಿಯುವ ನೀರಿನ ಘಟಕವನ್ನು ಅತಿ ಶೀಘ್ರದಲ್ಲೇ ಮಾಡಿಕೊಡುತ್ತೇನೆ. ಚುನಾವಣೆ ಮುಗಿದ ನಂತರ ಈ ಭಾಗಕ್ಕೆ ನೀರು ಕೊಡುವಂತಹ ಕೆಲಸವನ್ನು ಮಾಡುತ್ತೇನೆ…

Read More

ಬೆಂಗಳೂರು: ನಾನು ಮತ್ತೆ ಸಿಎಂ ಆದರೆ ರಾಜ್ಯದಲ್ಲಿ ಅಮುಲ್(Amul) ಹಾಲು ಮಾರಾಟಕ್ಕೆ ಕಡಿವಾಣ ಹಾಕುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮುಸ್ಲಿರ ಮೀಸಲಾತಿಯನ್ನು ರದ್ದುಗೊಳಿಸಿ ಅದನ್ನು ಒಕ್ಕಲಿಗರು ಹಾಗೂ ಲಿಂಗಾಯತರಿಗೆ(Okkaligas and Lingayats) ನೀಡಿದೆ. ರಾಜ್ಯದಲ್ಲಿ ಮತ್ತೆ ನಾನು ಸಿಎಂ ಆದರೆ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡುತ್ತೇನೆ, ರಾಜ್ಯದಲ್ಲಿ ಅಮುಲ್ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜ್ಯದಲ್ಲಿ ಅಮುಲ್ ಪ್ರವೇಶದಿಂದ ನಂದಿನಿ ಉತ್ಪನ್ನಗಳಿಗೆ ತೊಂದರೆಯಾಗುತ್ತಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ನಾನು ರಾಜ್ಯಕ್ಕೆ ಅಮುಲ್ ಪ್ರವೇಶವನ್ನು ವಿರೋಧಿಸುತ್ತೇನೆ, ನಾನು ಸಿಎಂ ಆದರೆ ರಾಜ್ಯದಲ್ಲಿ ಅಮುಲ್ ಹಾಲು ಖರೀದಿಸದಂತೆ ಆದೇಶಿಸುತ್ತೇನೆ , ಸಿಎಂ ಆದರೆ ಅಮುಲ್ ಹಾಲು ಖರೀದಿಸಬೇಡಿ ಎಂದು ಮನವಿ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

Read More

ಬೆಂಗಳೂರು: ಆಂಟಿಗಳಿಗೆ ಮೆಸೇಜ್ ಮಾಡ್ತೀಯಾ ಎಂದು ವ್ಯಕ್ತಿಯೊಬ್ಬನನನ್ನು ಇಬ್ಬರು ಅಪರಿಚಿತರು ಹಿಗ್ಗಾಮುಗ್ಗ ಥಳಿಸಿರುವ ಘಟನೆ (Bangalore) ನಗರದಲ್ಲಿ ನಡೆದಿದೆ. ನಾಗಮೋಹನ್‌ ಎಂಬ ವ್ಯಕ್ತಿಯ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ. ಯಲಹಂಕ (Yelahanka)ನ್ಯೂಟೌನ್ ಬಳಿ ಇರುವ ಆಂಜನೇಯ ದೇವಸ್ಥಾನದ ಮುಂದೆ ಘಟನೆ ನಡೆದಿದೆ. ದೇವಸ್ಥಾನದಿಂದ ಹೊರ ಬರುತ್ತಿದ್ದಂತೆ ಮುಖಾಮೂತಿ ನೋಡದೆ ಹಲ್ಲೆ ಮಾಡಿದ್ದಾರೆ. ನಾಗಮೋಹನ್‌ ಅವರು ತನ್ನ ಪುತ್ರನೊಂದಿಗೆ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಇಬ್ಬರು ಅಪರಿಚಿತರು, ಆಂಟಿಗಳಿಗೆ ಮೆಸೇಜ್‌ ಮಾಡ್ತೀಯಾ ಎಂದು ನಾಗಮೋಹನ್‌ ಅವರನ್ನು ಪ್ರಶ್ನಿಸಿದ್ದಾರೆ. ಬಳಿಕ ಏಕಾಏಕಿ ಹಲ್ಲೆ ನಡೆಸಿದ್ದಾರೆ. ದೃಶ್ಯವನ್ನು ಕಂಡು ಸಾರ್ವಜನಿಕರು ಸ್ಥಳಕ್ಕೆ ಬರುತ್ತಿದ್ದಂತೆ ಇಬ್ಬರೂ ಎಸ್ಕೇಪ್‌ ಆಗಿದ್ದಾರೆ. ಹಲ್ಲೆಗೊಳಗಾದ ನಾಗಮೋಹನ್‌ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ 341, 504,323,324 ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಬೆಂಗಳೂರು: ವರನಟ ಡಾ.ರಾಜ್ ಕುಮಾರ್(actor Dr. Raj Kumar) ಅವರು ನಾಡು ನುಡಿಗೆ ಅಪಾರವಾದಂತಹ ಕೊಡುಗೆಯನ್ನು ನೀಡಿದ್ದಾರೆ. ಅವರ ಹುಟ್ಟು ಹಬ್ಬವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೆ, ಅಭಿಮಾನಿಗಳಾದ ನಾವೆಲ್ಲರೂ ಪ್ರತಿದಿನ ಅವರನ್ನು ಸ್ಮರಿಸಿಕೊಳ್ಳುತ್ತೇವೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು(Minister K. Gopaliah) ತಿಳಿಸಿದರು. ಮಹಾಲಕ್ಷ್ಮಿ ಲೇಔಟ್ (Mahalakshmi Layout)ವಿಧಾನಸಭಾ ಕ್ಷೇತ್ರದ ನಂದಿನಿ ಬಡಾವಣೆಯ ಕಂಠೀರವ ಸ್ಟುಡಿಯೋದಲ್ಲಿ (Kantheerava Studio)ಡಾ.ರಾಜ್ ಕುಮಾರ್ ಅವರ 94 ನೇ ಜನ್ಮ ಜಯಂತಿಯ ಅಂಗವಾಗಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಇಂದು ವರನಟ ಡಾ.ರಾಜಕುಮಾರ್ ರವರ ಹುಟ್ಟು ಹಬ್ಬವನ್ನು(Dr. Rajkumar’s birthday) ಆಚರಣೆ ಮಾಡಲಾಗುತ್ತಿದೆ. (Kantheerava Studio)ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಕುಮಾರ್ ಅವರ ಸ್ಮಾರಕ ವೀಕ್ಷಣೆಗಾಗಿ ಪ್ರತಿದಿನ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ ಎಂದರು. ಸ್ಮಾರಕವನ್ನು ಅಭಿವೃದ್ಧಿ ಮಾಡಲು ಮುಖ್ಯಮಂತ್ರಿಗಳಯವರು ಹಾಗೂ ರಾಜಕುಮಾರ್ ಅವರ ಕುಟುಂಬಸ್ಥರೊಂದಿಗೆ ಚರ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿಯ…

Read More

ಬೆಂಗಳೂರು: ರಾಜಧಾನಿ ಬೆಂಗಳೂರು (Bangalore)ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ(Rainfall) ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಗ್ರಾಮಾಂತರ(Bangalore Rural), ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಉಳಿದೆಡೆ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸ್ವಲ್ಪ ಬಿಸಿಲಿನ ಪ್ರಮಾಣ ಕಡಿಮೆಯಾಗಿದೆ. ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಕಾರಣ ಬೆಂಗಳೂರು ಸೇರಿ ರಾಜ್ಯದ ಹಲವಡೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Read More

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Election) ಮೇ.10 ರಂದು ಮತದಾನ (Voting) ನಡೆಯಲಿದ್ದು, 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಈಗಾಗಲೇ ನಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, ಉಮೇದುವಾರಿಕೆ ವಾಪಸ್ ಪಡೆಯಲು ಇಂದೇ (ಏ.24) ಕೊನೆಯ ದಿನವಾಗಿದೆ. ಅಧಿಕೃತವಾಗಿ ಕಣದಲ್ಲಿ ಉಳಿಯುವವರು ಯಾರು ಎಂಬುದು ಇಂದು ಸ್ಪಷ್ಟವಾಗಲಿದೆ. ಪ್ರಸ್ತುತ ಕಣದಲ್ಲಿ ಒಟ್ಟು 3130 ಅಭ್ಯರ್ಥಿಗಳಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ (Congress), ಬಿಜೆಪಿ (BJP), ಎಎಪಿ (AAP) ಹಾಗೂ ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರವಾಗಿ ಸರ್ಧಿಸಿರುವ ಅಭ್ಯರ್ಥಿಗಳ ಅಂಕಿ-ಸಂಖ್ಯೆ ಇಲ್ಲಿದೆ.. ಕಾಂಗ್ರೆಸ್ನಿಂದ 223 ಅಭ್ಯರ್ಥಿಗಳು, ಬಿಜೆಪಿಯಿಂದ 224, ಎಎಪಿಯಿಂದ 212, ಜೆಡಿಎಸ್ನಿಂದ 211, ಬಿಎಸ್ಸಿಯಿಂದ 137, ಸಿಪಿಐಎಂಯಿಂದ 4, ಎನ್ಪಿಪಿಯಿಂದ 4, ನೋಂದಾಯಿತ ಮತ್ತು ಮಾನ್ಯತೆರಹಿತ 736 , ಸ್ವತಂತ್ರ ಅಥವಾ ಪಕ್ಷೇತರ 1379, ಒಟ್ಟು 3130 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ್ದರಿಂದ, ಅಖಾಡಕ್ಕಿಳಿದ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದರೇ, ಸಂಜೆ ವೇಳೆಗೆ ಕಣದಲ್ಲಿ…

Read More