ಬೆಂಗಳೂರು: ಕಾಂಗ್ರೆಸ್ ಸರ್ಕಾರದಕ್ಕೆ 5 ಗ್ಯಾರಂಟಿ (5 guarantees)ಯೋಜನೆಗಳ ಜಾರಿಯೇ ದೊಡ್ಡ ಸವಾಲಾಗಿದೆ. ಆದರೂ ಕೊಟ್ಟ ಮಾತನ್ನು ಉಳಿಸಿಕೊಳ್ಳಲೇಬೇಕಿದೆ. ಹೀಗಾಗಿ ಐದೂ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಚಾಲೆಂಜ್ ಆಗಿ ತೆಗೆದುಕೊಂಡಿದೆ. ಈಗಾಗಲೇ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಎಲ್ಲಾ ಸಾಧಕ ಬಾಧಕಗಳನ್ನ ಚರ್ಚೆ ಮಾಡಿದ್ದಾರೆ. ನಾಳೆ ಸಚಿವರ ಜೊತೆ ಸಮಾಲೋಚನೆ ನಡೆಯಲಿದ್ದು, ನಾಡಿದ್ದು ಅಂದ್ರೆ, ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಸರಳವಾಗಿ ಗೃಹಲಕ್ಷ್ಮೀ ಯೋಜನೆಯಡಿ ಮನೆ ಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸಲು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮನೆಯೊಡತಿ ಅತ್ತೆನೋ, ಸೊಸೆನೋ ಎಂದು ವಿಪಕ್ಷ ಬಿಜೆಪಿ ಪ್ರಶ್ನಿಸಿದೆ. ಹೀಗಾಗಿ ಮನೆಯೊಡತಿಯನ್ನೇ ಫಲಾನುಭವಿ ಎಂದು ಘೋಷಣೆ ಮಾಡುವ ಸಾಧ್ಯತೆ ಇದೆ. ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ರಾಜ್ಯದ ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕಿದೆ. ವಿಪಕ್ಷಗಳ ಬಾಯಿ ಮುಚ್ಚಿಸಬೇಕಿದೆ. ಲೋಕಸಭೆ ಚುನಾವಣೆಯೂ ಹತ್ತಿರವಾಗುತ್ತಿದೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೆ ಒದ್ದಾಡುತ್ತಿದೆ. ನಿನ್ನೆಯಷ್ಟೇ (ಮೇ 29) ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಶಕ್ತಿಭವನದಲ್ಲಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ರು. ಸಾರಿಗೆ, ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೌಶಲ್ಯಾಭಿವೃದ್ಧಿ, ಇಂಧನ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ರು. ಯಾವ ಗ್ಯಾರಂಟಿ ಯೋಜನೆ ಜಾರಿಗೆ ಎಷ್ಟು ಹಣ ಖರ್ಚಾಗುತ್ತೆ..? ಫಲಾನುಭವಿಗಳ ಸಂಖ್ಯೆ ಎಷ್ಟು..? ಸರ್ಕಾರಕ್ಕೆ ಎಷ್ಟು ಹೊರೆಯಾಗುತ್ತೆ ಅನ್ನೋ ಮಾಹಿತಿಯನ್ನ ಸಂಗ್ರಹಿಸಿದ್ರು. 5 ಗ್ಯಾರಂಟಿ ಜಾರಿಗೆ 50 ಸಾವಿರ ಕೋಟಿ ರೂ.! ಕಾಂಗ್ರೆಸ್ ಘೋಷಣೆ ಮಾಡಿರುವ 5 ಗ್ಯಾರಂಟಿ ಯೋಜನೆಗಳ ಜಾರಿ ದೊಡ್ಡ ಸವಾಲಾಗಿದೆ. 5 ಗ್ಯಾರಂಟಿಗಳನ್ನ ಜಾರಿ ಮಾಡ್ಬೇಕು ಅಂದ್ರೆ ಸರ್ಕಾರದ ಬೊಕ್ಕಸದಿಂದ ವಾರ್ಷಿಕವಾಗಿ 50 ಸಾವಿರ ಕೋಟಿ ರೂ. ಖರ್ಚು ಮಾಡಬೇಕಾಗುತ್ತೆ. ಈ ಸಂಬಂಧ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್‌ರಿಂದ ಸಿಎಂ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಗ್ಯಾರಂಟಿಗಳನ್ನ ಹೇಗೆ ಜಾರಿ ಮಾಡಬಹುದು ಎಂಬ ಬಗ್ಗೆಯೂ ಚರ್ಚಿಸಿದ್ದಾರೆ. ಜೂನ್ 1ರಿಂದ 5 ‘ಗ್ಯಾರಂಟಿ’ ಫಿಕ್ಸಾ? ರಾಜ್ಯಾದ್ಯಂತ ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಪಕ್ಕಾ ಅಂತ ಹೇಳಲಾಗ್ತಿದೆ. ಈಗಾಗಲೇ ಅಧಿಕಾರಿಗಳು ಯಾವ್ಯಾವ ಯೋಜನೆಗೆ ಎಷ್ಟು ಹಣ ಖರ್ಚಾಗುತ್ತೆ ಅಂತ ಎಳೆಎಳೆಯಾಗಿ ಮಾಹಿತಿ ಕೊಟ್ಟಿದ್ದಾರೆ. ಜೂನ್ 1 ರಂದು ಸಿದ್ದರಾಮಯ್ಯ ಸರ್ಕಾರದ ಸಂಪುಟ ಸಭೆ ನಡೆಯಲಿದೆ. ಅಧಿಕಾರಿಗಳು ಕೊಟ್ಟಿರುವ ಎಲ್ಲಾ ಮಾಹಿತಿ, ಅಂಕಿ–ಅಂಶಗಳನ್ನ ಸಿಎಂ ಸಿದ್ದರಾಮಯ್ಯ ಸಂಪುಟದ ಮುಂದಿಡಲಿದ್ದಾರೆ. ಅದೇ ಸಭೆಯಲ್ಲಿ ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಹಾಕುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ. BPL ಕುಟುಂಬಕ್ಕೆ ಗೃಹಲಕ್ಷ್ಮೀ ಗ್ಯಾರಂಟಿ? ಇನ್ನು ಮನೆಯೊಡತಿಯರ ಬಗ್ಗೆ ಮಾಹಿತಿ ಸಮರ್ಪಕವಾಗಿಲ್ಲ. ಮನೆಯೊಡತಿಯರ ಬಗ್ಗೆ ಮಾಹಿತಿ ಸಂಗ್ರಹಿಸೋದೇ ಕಾಂಗ್ರೆಸ್‌ಗೆ ಸವಾಲಾಗಿದೆ. ಹೀಗಾಗಿ ಷರತ್ತುಗಳೊಂದಿಗೆ BPL ಕುಟುಂಬದವರಿಗೆ ಗೃಹಲಕ್ಷ್ಮೀ ಗ್ಯಾರಂಟಿ ನೀಡುವ ಸಾಧ್ಯತೆ ಇದೆ. ಆದ್ರೆ, ರಾಜ್ಯದ ಪ್ರತೀ ಮನೆಯೊಡತಿಗೆ 2000 ನೀಡುವುದಾಗಿ ಘೋಷಣೆ ಮಾಡಿದ್ದ ಕಾಂಗ್ರೆಸ್, ಸದ್ಯ ಮಾತು ಉಳಿಸಿಕೊಳ್ಳಬೇಕಾದ ಒತ್ತಡದಲ್ಲಂತೂ ಇದೆ. ಯುವನಿಧಿ ಜಾರಿಗೆ ಸರ್ಕಸ್ ಯುವನಿಧಿ ಜಾರಿಗೆ ಇಲಾಖೆ ಮತ್ತೆ ಮಾಹಿತಿ ಸಮಸ್ಯೆ ಇದ್ದು, ಪದವೀಧರರ ನಿರೋದ್ಯೋಗ ನಿವಾರಣೆ ಮಾಡಲು ಕಾಂಗ್ರೆಸ್ ನಾಯಕರಿಗೆ ಕಠಿಣ ಹಾದಿ ಎದುರಾಗಿದೆ. ಕಾರ್ಮಿಕ ಇಲಾಖೆ ಮೂಲಕ ಮಾಹಿತಿಗಳನ್ನ ಸಂಗ್ರಹಿಸಬೇಕೋ, ಉನ್ನತ ಶಿಕ್ಷಣ ಇಲಾಖೆ ಮೂಲಕ ಮಾಹಿತಿ ಪಡೀಬೇಕೋ ಎನ್ನುವ ಗೊಂದಲವಿದ್ದು, ಹಾಲಿ ಪದವೀಧರ ನಿರುದ್ಯೋಗಿಗಳನ್ನ ಗುರುತಿಸುವುದು ಕಷ್ಟವಾಗಿದೆ. ಹೀಗಾಗಿ ಕೆಲ ಮಾನದಂಡ ನಿಗದಿಪಡಿಸಿ ಸರ್ಕಾರದಿಂದ ಅರ್ಜಿ ಆಹ್ವಾನ ಸಾಧ್ಯತೆ ಇದ್ದು, ನಿಗದಿತ ಇಲಾಖೆ ಮೂಲಕ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡುವುದು ದೊಡ್ಡ ಸವಾಲಾಗಿದೆ. 10 ಕೆಜಿ ಉಚಿತ ಅಕ್ಕಿ.. ಅಷ್ಟು ಸುಲಭವಲ್ಲ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ 10 ಕೆಜಿ ಉಚಿತ ಅಕ್ಕಿಯಂತೂ ಕೊಟ್ಟೇ ಕೊಡುತ್ತೇವೆ ಅಂತಿದ್ದಾರೆ. ಆದ್ರೆ, ಅನ್ನಭಾಗ್ಯ ಯೋಜನೆ ಜಾರಿಗೂ ನೂರೆಂಟು ಸವಾಲುಗಳಿವೆ. ಸದ್ಯ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿಯನ್ನ ಉಚಿತವಾಗಿ ಕೊಡುತ್ತಿದೆ. ಈಗ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನ ಖರೀದಿ ಮಾಡಬೇಕಿರುವುದು ಸವಾಲಾಗಿದೆ. ಫ್ರೀ ಅಕ್ಕಿ.. 1400 ಕೋಟಿ ರೂ. ಹೊರೆ ಪ್ರತಿಯೊಬ್ಬರಿಗೂ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಆದ್ರೆ ಅಕ್ಕಿ ಖರೀದಿಗೆ ಅಂದಾಜು 1 ಸಾವಿರದ 400 ಕೋಟಿ ರೂಪಾಯಿ ವ್ಯಯ ಮಾಡಬೇಕಾಗುತ್ತೆ. ಕೇಂದ್ರ ಸರ್ಕಾರ ಕೊಡುತ್ತಿರುವ 5 ಕೆಜಿ ಅಕ್ಕಿಗೆ ಏನಾದ್ರೂ ಕಂಡಿಷನ್ ಹಾಕಿದ್ರೆ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಮಸ್ಯೆ ಮತ್ತಷ್ಟು ಜಟಿಲವಾಗಬಹುದು. ಅಲ್ಲದೇ, ಕೇಂದ್ರ ಸರ್ಕಾರದ 5 ಕೆಜಿ ಹೊರತಾಗಿ 10 ಕೆಜಿ ನೀಡುವಂತೆ ವಿಪಕ್ಷ ಪಟ್ಟು ಹಿಡಿದಿದ್ದು, ಬಿಪಿಎಲ್ ಕುಟುಂಬಗಳ ಮಾಹಿತಿ ಅಧರಿಸಿ ಅಕ್ಕಿ ನೀಡಲು ಕಾಂಗ್ರೆಸ್ ಲೆಕ್ಕಾಚಾರ ಮಾಡುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪಾಸ್ ಕಸರತ್ತು ಉಚಿತ ಬಸ್ ಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣದ ಮಿತಿಯನ್ನು ಮಾನದಂಡ ಹಾಕಲು ಸರ್ಕಾರ ಚಿಂತನೆ ನಡೆಸ್ತಿದೆ. ಈ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಅಧಿಕಾರಿಗಳಿಂದ ಸಿಎಂ ಮಾಹಿತಿ ಸಂಗ್ರಹಿಸಿದ್ದಾರೆ. ಉಚಿತ ಬಸ್ ಪಾಸ್ ಫಲಾನುಭವಿಗಳ ಪಟ್ಟಿ ಕೊಡುವಂತೆ ಸೂಚಿಸಿದ್ದಾರೆ. ಇದೀಗ ಸಾಧಕ ಬಾಧಕಗಳ ಚರ್ಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿಗಮಗಳ ಸಭೆ ಕರೆದಿದ್ದಾರೆ. ಇವತ್ತು ಸಾರಿಗೆ ನಿಗಮಗಳ ಸಭೆ ಇವತ್ತು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿರುವ KSRTC ಕಚೇರಿಯಲ್ಲಿ ಸಭೆ ನಡೆಯಲಿದೆ. ಕರ್ನಾಟಕ ಸಾರಿಗೆ, ವಾಯುವ್ಯ, ಈಶಾನ್ಯ, ನೈಋತ್ಯ ಸಾರಿಗೆ ಹಾಗೂ BMTC ಸೇರಿ ರಾಜ್ಯದ ನಾಲ್ಕೂ ನಿಗಮಗಳ ಎಂಡಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಿಗಮದಿಂದ ಯೋಜನೆ ಇಲ್ಲ.. ಸರ್ಕಾರದ್ದೇ ಹಣ! ಫ್ರೀ ಬಸ್ ಪಾಸ್ ಯೋಜನೆ ಸರ್ಕಾರದ್ದೇ ಆಗಿರುವ ಕಾರಣ ಸರ್ಕಾರವೇ ನಾಲ್ಕೂ ನಿಗಮಗಳಿಗೆ ಉಚಿತ ಬಸ್ ಪಾಸ್ನ ಸಬ್ಸಿಡಿ ಕೊಡಬೇಕಿದೆ. ನಿಗಮಗಳ ಆದಾಯದಲ್ಲಿ ಬಸ್ ಪಾಸ್ ಕೊಡಲು ಸಾಧ್ಯವಿಲ್ಲ ಅಂತ ಈಗಾಗಲೇ ಅಧಿಕಾರಿಗಳು ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. 4 ನಿಗಮಗಳ ಲಾಭ, ನಷ್ಟ ಗಮನಿಸಿ ಯೋಜನೆಗೆ ಅಷ್ಟೂ ಹಣವನ್ನ ಸರ್ಕಾರವೇ ಕೊಡಬೇಕಾ? ಫ್ರೀ ಪಾಸ್ ಯಾವ ಮಾದರಿಯಲ್ಲಿ ಇರಬೇಕು? ತಿಂಗಳ ಪಾಸಾ? ವಾರ್ಷಿಕ ಪಾಸಾ? ಎಂಬ ಚರ್ಚೆಯೂ ನಡೆಯಲಿದೆ. ಒಟ್ಟಿನಲ್ಲಿ ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದ್ದು, ಇದಕ್ಕೆ ಏನೆಲ್ಲ ಷರತ್ತುಗಳನ್ನು ವಿಧಿಸಲಾಗುತ್ತದೆ ಎಂದು ಕಾದುನೋಡಬೇಕಿದೆ.
Author: Prajatv Kannada
ಬೆಂಗಳೂರು: ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಇಂದು ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸಂಬಂಧ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಸಾರಿಗೆ ಇಲಾಖೆಯ 4 ನಿಗಮಗಳೊಂದಿಗೆ ಚರ್ಚೆ ಮಾಡಲಿದ್ದಾರೆ. ನಿಗಮಗಳ ಆದಾಯದಲ್ಲಿ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ. ಸರ್ಕಾರದ ಯೋಜನೆಯಾದ್ದರಿಂದ ನಿಗಮಗಳಿಂದ ಹಣ ಭರಿಸಲು ಆಗಲ್ಲ. ಈಗಾಗಲೇ ಈ ಅಂಶಗಳನ್ನು ಸಿಎಂ ಸಿದ್ಧರಾಮಯ್ಯ ಗಮನಕ್ಕೆ ಸಾರಿಗೆ ಸಚಿವರು ಮತ್ತು ಅಧಿಕಾರಿಗಳು ತಂದಿದ್ದಾರೆ. ಇಂದು 4 ಸಾರಿಗೆ ನಿಗಮಗಳ ಹಣಕಾಸಿನ ಸ್ಥಿತಿ ಬಗ್ಗೆ ಅವಲೋಕಿಸಲಿರುವ ಸಚಿವರು, ಬಸ್ ಪಾಸ್ ಸಬ್ಸಿಡಿ ಬಗ್ಗೆ ನಿರ್ಧರಿಸಲಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ವ್ಯವಸ್ಥೆ ಏಕಿಲ್ಲ? ಎಂದು ರಾಜ್ಯ ಸರ್ಕಾರವನ್ನು ಬೆಂಗಳೂರಿನ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್ ಕಮಲ್ ಅವರಿದ್ದ ನ್ಯಾಯಪೀಠ ರಾಜ್ಯ ಸರ್ಕಾರವನ್ನು ಕಟುವಾಗಿ ಪ್ರಶ್ನಿಸಿದೆ. ವಿಚಾರಣೆ ವೇಳೆ ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿರುವ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು ರಾಜ್ಯದ ಸುಮಾರು ನಾಲ್ಕು ಸಾವಿರ ಶಾಲೆಗಳಲ್ಲಿ ಕುಡಿಯುವ ನೀರು, ಹೆಣ್ಣು ಮಕ್ಕಳಿಗೆ ಶೌಚಾಲಯ, ತಡೆಗೋಡೆ, ಆಟದ ಮೈದಾನದ ವ್ಯವಸ್ಥೆ ಇಲ್ಲ ಎಂಬ ಅಂಶವನ್ನು ದಾಖಲೆಗಳ ಸಮೇತ ನ್ಯಾಯಪೀಠಕ್ಕೆ ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಹಲವು ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬುದು ಗಂಭೀರ ವಿಷಯ. ಈ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಲಾಗಿದೆ?. ಯಾವಾಗ ಈ ಶಾಲೆಗಳನ್ನು ಆರಂಭಿಸಲಾಗಿದೆ. ಶಿಕ್ಷಕರು ಇಲ್ಲ, ಕೊಠಡಿಗಳು ಇಲ್ಲ ಎಂದರೆ ಹೇಗೋ ಹೊಂದಾಣಿಕೆ ಮಾಡಿಕೊಳ್ಳಬಹುದು. ಆದರೆ ಹೆಣ್ಣು ಮಕ್ಕಳಿಗೆ ಶೌಚಾಲಯವಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬುದು…
ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ನಿನ್ನೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ 40ಕ್ಕೂ ಹೆಚ್ಚು ಮಂದಿ ಹಿರಿಯ ಸಾಹಿತಿಗಳು, ಬರಹಗಾರರು ಹಾಗೂ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಕನ್ನಡ ನಾಡಿನ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ದ್ವೇಷ ರಾಜಕಾರಣವನ್ನು ಬಲಿ ಹಾಕಿ, ಭಯದ ವಾತಾವರಣ ಅಳಿಸಲಾಗುವುದು’ ಎಂದು ತಿಳಿಸಿದರು. ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ, ಈ ಮಣ್ಣಿನ ಬಹುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು ಸ್ವಯಂಪ್ರೇರಿತವಾಗಿ ಚುನಾವಣೆಯಲ್ಲಿ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಕ್ಕಾಗಿ ಸಾಹಿತಿ-ಬರಹಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ…
ಬೆಂಗಳೂರು: ನ್ಯಾಯಾಲಯದ ಸೂಚನೆ ಮೇರೆಗೆ ಬೆಂಗಳೂರಿನ ಪುಲಿಕೇಶಿನಗರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ವಿರುದ್ಧ FIR ದಾಖಲಾಗಿದೆ. ಇನ್ಸ್ಪೆಕ್ಟರ್ ಕಿರಣ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿರುವುದು ತಿಳಿದು ಬಂದಿದೆ. ಹರೀಶ್ ಫರ್ನಾಂಡೀಸ್ ಎಂಬುವರು ಇನ್ಸ್ಪೆಕ್ಟರ್ ಕಿರಣ್ ಅವರು ವಾರೆಂಟ್ ಇಲ್ಲದೆ ಮನೆಗೆ ಪ್ರವೇಶಿಸಿ ಗಲಾಟೆ ಮಾಡಿದ್ದಾರೆ ಎಂದು 2016ರಲ್ಲಿ ನ್ಯಾಯಾಲಯಕ್ಕೆ ಪಿಸಿಆರ್ ಸಲ್ಲಿದ್ದರು. ಈ ಹಿನ್ನೆಲೆ ಕೋರ್ಟ್ ಸೂಚನೆ ಮೇರೆಗೆ FIR ದಾಖಲಾಗಿದೆ. ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸಹೋದರರಾದ ಹರೀಶ್ ಫರ್ನಾಂಡೀಸ್ ಮತ್ತು ವಸಂತ್ ಫರ್ನಾಂಡೀಸ್ ಎಂಬವರ ನಡುವೆ 2016ರಲ್ಲಿ ಮನೆ ಖಾಲಿ ಮಾಡುವ ವಿಚಾರಕ್ಕೆ ಜಗಳ ನಡೆದಿತ್ತು. ಈ ಗಲಾಟೆಯಲ್ಲಿ ಇನ್ಸ್ಪೆಕ್ಟರ್ ಕಿರಣ್ ಮಧ್ಯಪ್ರವೇಶಿಸಿದ್ದಾರೆ ಎಂದು ನ್ಯಾಯಾಲಯದಲ್ಲಿ ಪಿಸಿಆರ್ ಸಲ್ಲಿಸಿದ್ದರು. ಇದೀಗ ನ್ಯಾಯಾಲಯದ ಸೂಚನೆ ಮೇರೆಗೆ 2023ರ ಮೇ 19ರಂದು ಆಶೋಕ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರದಲ್ಲಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆಯನ್ನು ನೀಡಿದೆ. ಸೋಮವಾರ ಬಂಗಾಳಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮುಂಗಾರು ಸಂಬಂಧ ಪೂರಕ ಹವಾಗುಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ನಾನು ಗ್ರಾಮೀಣ ಭಾಗದಿಂದ ಬಂದಿದ್ದರೂ, ಬೆಂಗಳೂರು ನಗರದ ಬಗ್ಗೆ ಅರಿತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಗರ ಈ ಮಟ್ಟಕ್ಕೆ ಬೆಳೆಯಲು ಸಾಕಷ್ಟು ಜನರು ಶ್ರಮವಹಿಸಿದ್ದಾರೆ. ಬೆಂಗಳೂರು ಕಟ್ಟಿದ ಕೆಂಪೇಗೌಡರು, ನಂತರ ಕೆಂಗಲ್ ಹನುಮಂತಯ್ಯ ಸೇರಿದಂತೆ ಅನೇಕ ನಾಯಕರು ಬೆಂಗಳೂರು ಅಭಿವೃದ್ಧಿಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ಕಾರ್ಪೊರೇಟರ್ ಗಳು, ಹಲವು ನಾಯಕರು ಸಹ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಒಂದು ಕೋಟಿಗಿಂತ ಹೆಚ್ಚು ಜನರು ಇಲ್ಲಿ ವಾಸ ಮಾಡುತ್ತಾ ಇದ್ದಾರೆ. 40 ರಿಂದ 50 ಲಕ್ಷ ಜನ ಹೊರಗಿನಿಂದ ಬಂದು ಹೋಗುವುದನ್ನು ಮಾಡುತ್ತಾ ಇದ್ದಾರೆ ಎಂದು ಹೇಳಿದರು. ವಿಶ್ವದ ಅನೇಕ ನಾಯಕರಿಗೆ, ಉದ್ಯಮಿಗಳಿಗೆ ಬೆಂಗಳೂರಿನ ಮೂಲಕ ಭಾರತವನ್ನು ನೋಡುವಂತಾಗಿದೆ. ಹಾಗಾಗಿ ಇಲ್ಲಿ ಹಚ್ಚಿನ ಸೌಲಭ್ಯವನ್ನ ಒದಗಿಸುವ ಕೆಲಸ ಆಗಬೇಕಿದೆ. ಇವತ್ತು ನಾನು ಈ ಸಭೆಯ ಮೂಲಕ ನಗರದ ಅಭಿವೃದ್ಧಿಯ ಕುರಿತು ಪಾಠ ಕಲಿತಿದ್ದೇನೆ. ಬಿಬಿಎಂಪಿ ಬೆಂಗಳೂರಿನ ಅಭಿವೃದ್ಧಿಗಾಗಿ ಹಾಕಿಕೊಂಡಿರುವ…
ಬೆಂಗಳೂರು: ಪಬ್ಲಿಕ್ ಲೈಬ್ರರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಪುಸ್ತಕಗಳು ಸ್ಥಳಕ್ಕೆ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸಲು ಮುಂದಾಗಿದ್ದು, ಆದರೂ ಲಕ್ಷಾಂತರ ರೂ. ಮೌಲ್ಯದ ಪುಸ್ತಕಗಳು ಬೆಂಕಿಗಾಹುತಿಯಾದವು. ಈ ಬಗ್ಗೆ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮನ ಮೇಲೆ ಮಹಿಳೆಯಿಂದ ಬಿಸಿ ನೀರು ಎರಚಿ ಬಿಯರ್ ಬಾಟಲ್ ನಿಂದ ಮುಖಕ್ಕೆ ಹೊಡೆದು ಮನೆ ಲಾಕ್ ಮಾಡಿಕೊಂಡು ಕಾಲ್ಕಿತ್ತ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. 25ರ ರಾತ್ರಿ ಘಟನೆ ನಡೆದಿದ್ದು ಇಂದು ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಕೆಲಸಕ್ಕೆ ಬಂದಿದ್ದ ಕಲಬುರಗಿ ಜಿಲ್ಲೆಯ ಭೀಮಾಶಂಕರ ಆರ್ಯ ಹಾಗೂ ಮಹಿಳೆ ಪರಿಚಯವಾಗಿದ್ದು ಆ ನಂತರ ಇಬ್ಬರ ನಡುವೆ ಪ್ರೀತಿ ಹುಟ್ಟಿದೆ, ಆ ಬಳಿಕ ಮಹಿಳೆಗೆ ಈ ಮೊದಲೇ ಮದುವೆಯಾಗಿದೆ ಎಂದು ತಿಳಿದ ಭೀಮಾಶಂಕರ ಮಹಿಳೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದ. ಇದರಿಂದ ರೊಚ್ಚಿಗೆದ್ದ ಮಹಿಳೆ ನಿನ್ನ ಹತ್ತಿರ ಮಾತನಾಡಬೇಕು ಬಾ ಎಂದು ರೂಮಿಗೆ ಕರೆಸಿಕೊಂಡು ಕುದಿ ಕುದಿ ಬಿಸಿ ನೀರು ಮೈ ಮೇಲೆ ಎರಚಿದ್ದಾಳೆ. ಇದರಿಂದ ಪ್ರಿಯಕರ ಭೀಮಾಶಂಕರ ಆರ್ಯಗೆ ಮೈಯೆಲ್ಲ ಸುಟ್ಟು ಬೊಕ್ಕೆ ರೀತಿ ಬಂದಿದೆ. ಕಲಬುರಗಿ ಮೂಲದ ಭೀಮಾಶಂಕರ ಆರ್ಯ ಹಾಗೂ ಕಲಬುರಗಿ ಜಿಲ್ಲೆ ಅಫಜಲಪುರ ಮೂಲದ ಮಹಿಳೆ ಬೆಂಗಳೂರಿನಲ್ಲಿ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿದೆ. ಅಲ್ಲದೇ…
ಬಾಲ್ಯ ವಿವಾಹದ ಬಗ್ಗೆ ಸೂಕ್ತ ಅರಿವಿಲ್ಲದೆ ಅಪ್ರಾಪ್ತೆಯನ್ನು ಮದುವೆ ಮಾಡಿ ಕೊಡುತ್ತಿದ್ದ ಕುಟುಂಬಕ್ಕೆ ಅಧಿಕಾರಿಗಳು ತಿಳಿ ಹೇಳಿ ಮದುವೆ ನಿಲ್ಲಿಸಿದ ಘಟನೆ ಕುಂದಗೋಳ ತಾಲೂಕಿನ ರಟಗೇರಿ ಗ್ರಾಮದಲ್ಲಿ ಇಂದು ನಡೆದಿದೆ. ಹೌದು ! ಕುಂದಗೋಳ ತಾಲೂಕಿನ ರಟಗೇರಿ ಗ್ರಾಮದ ಕುಟುಂಬವೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯೋರ್ವಳನ್ನು ಇಂದು ಮದುವೆ ನಿಶ್ಚಿಯಿಸಿ ವಿವಾಹ ಮಾಡಿಕೊಡಲು ಕುಟುಂಬಸ್ಥರು ನಿರ್ಧರಿಸಿದ್ದರು. ಈ ಬಗ್ಗೆ ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಬಾಲಕಿಯ ಮನೆಗೆ ಧಾವಿಸಿ ಮದುವೆಯನ್ನು ತಡೆದು ಕುಟುಂಬಸ್ಥರಿಂದ ಮುಚ್ಚಳಿಕೆ ಪತ್ರ ಬರೆಯಿಸಿಕೊಂಡು, ಬಾಲ್ಯ ವಿವಾಹ ಕೈಗೊಂಡಲ್ಲಿ ಆಗಬಹುದಾದ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.