ಮಂಡ್ಯ: ರೈಲ್ವೆ ಸಿಬ್ಬಂದಿ ಹಾಗೂ ಪೊಲೀಸರ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಲ್ಲಿ ಮೂರ್ಛೆ ರೋಗಿ ನರಳಿ ನರಳಿ ಪ್ರಾಣ ಬಿಟ್ಟಿರುವ ಘಟನೆ ಮೈಸೂರು (Mysuru) ಹಾಗೂ ಮಂಡ್ಯ (Mandya) ನಡುವಿನ ರೈಲು (Train) ಪ್ರಯಾಣದಲ್ಲಿ ಜರುಗಿದೆ. ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ (83) ಸಾವನ್ನಪ್ಪಿರುವ ವ್ಯಕ್ತಿ. ಭಾನುವಾರ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೆಂಜರ್ ರೈಲಿನಲ್ಲಿ ಸ್ವಾಮಿ ಪ್ರಯಾಣಿಸುತ್ತಿದ್ದರು. ಮೈಸೂರಿನಲ್ಲಿ ರೈಲು ಹತ್ತುತ್ತಿದ್ದಂತೆ ಮೂರ್ಛೆ ಬಂದು ಕುಸಿದು ಬಿದ್ದಿದ್ದಾರೆ. ಸಹ ಪ್ರಯಾಣಿಕರು ಮೈಸೂರಿನಲ್ಲೆ ರೈಲ್ವೆ ಪೊಲೀಸರಿಗೆ, ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಕೊಟ್ಟರೂ ಚಿಕಿತ್ಸೆ ಕೊಡಿಸಲು ಸಿಬ್ಬಂದಿ ಬಂದಿಲ್ಲ. ಮೈಸೂರಿನಲ್ಲಿ ಮೂರ್ಛೆ ರೋಗಿಯನ್ನು ಇಳಿಸದೇ, ಮೈಸೂರಿನಿಂದ ಮಂಡ್ಯವರೆಗೆ ಚಿಕಿತ್ಸೆ ನೀಡದೆ ಕರೆತರಲಾಗಿದೆ. ರೈಲಿನಲ್ಲಿ ಮಂಡ್ಯ ಸಮೀಪ ಬರುತ್ತಿದ್ದಂತೆ ಸ್ವಾಮಿ ಸಾವನ್ನಪ್ಪಿದ್ದಾರೆ. ರೈಲಿನ ಎಲ್ಲ ನಿಲ್ದಾಣದಲ್ಲಿಯೂ ರೈಲ್ವೆ ಪೊಲೀಸರಿಗೂ ತಿಳಿಸಿದರೆ ಚಿಕಿತ್ಸೆ ಕೊಡಿಸಲಿಲ್ಲ ಎಂದು ಸಹ ಪ್ರಯಾಣಿಕರು ಆರೋಪ ಮಾಡಿದ್ದಾರೆ. ಈ ಸಾವಿಗೆ ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು…
Author: Prajatv Kannada
ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಅಪಘಾತ (Accident) ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಜನ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡಿದೆ. ಕಾರಿನ ಟೈರ್ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತ ದುರ್ದೈವಿಗಳು. ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಲಾಗುತ್ತಿದೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.ಡಿಕ್ಕಿಯ ರಭಸಕ್ಕೆ ಇಂಡಿಕಾ ಕಾರು ನಜ್ಜುಗುಜ್ಜಾಗಿದೆ. ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದಾಗ ಭೀಕರ ಅಪಘಾತ ಸಂಭವಿಸಿದೆ.
ವಿಜಯಪುರ : 45 ವರ್ಷಗಳ ಕಾಲ ಜೋಡೆತ್ತಿನಂತೆ ಬದುಕಿನ ಬಂಡಿ ಎಳೆದಿದ್ದ ಜೋಡಿ, ವಯೋವೃದ್ಧ ದಂಪತಿ ಇದೀಗ ಸಾವಿನಲ್ಲೂ ಜತೆಯಾಗಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದಲ್ಲಿ ಈ ಅಪರೂಪದ ದಂಪತಿಯ ಸಾವು ಸಂಭವಿಸಿದೆ. ರಾಮಪ್ಪ ಟಕ್ಕಳಕಿ ಹಾಗೂ ಶಾಂತವ್ವ ಟಕ್ಕಳಕಿ ಸಾವಲ್ಲಿ ಒಂದಾದ ವೃದ್ಧ ದಂಪತಿ.ಅನಾರೋಗ್ಯದ ಕಾರಣ ಪತ್ನಿ ಶಾಂತವ್ವ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದರು. ಪತ್ನಿ ಶಾಂತವ್ವಳ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ರಾಮಪ್ಪ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರೂ ಮೃತಪಟ್ಟಿದ್ದಾರೆ. ಕುಟುಂಬದ ಹಿರಿಯ ಜೋಡಿಯ ಅಗಲಿಕೆಯಿಂದ ಕಂಗಾಲಾರುವ ಕುಟುಂಬ ಸದಸ್ಯರು, ಬಂಧುಗಳ ಆಕ್ರಂದನ ಮುಗಿಲು ಮುಟ್ಟಿದೆ. ವೃದ್ಧ ದಂಪತಿ ಅಂತ್ಯಸಂಸ್ಕಾರವನ್ನು ಒಂದೇ ಕಡೆ ನೆರವೇರಿಸಿದ್ದಾರೆ.
ಕಲಬುರಗಿ: ನ್ಯಾಯಕ್ಕಾಗಿ ಅಂಗಲಾಚಿ ಸಿಮೆಂಟ್ ಕಂಪನಿ ಎದುರು ಧರಣಿ ಸತ್ಯಾಗ್ರಹ ಕುಳಿತಿದ್ದ ರೈತನೊರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.ಸೇಡಂ ತಾಲೂಕಿನ ಶ್ರೀ ಸಿಮೆಂಟ್ ಕಂಪನಿ ಎದುರು ಘಟನೆ ನಡೆದಿದ್ದು ಬೆನಕನಹಳ್ಳಿ ನಿವಾಸಿ ದೇವೇಂದ್ರಪ್ಪ ಮೃತ ದುರ್ದೈವಿ ಎಂದು ಹೇಳಲಾಗ್ತಿದೆ. ಕಂಪನಿಗೆ ಭೂಮಿ ನೀಡಿ ನೌಕರಿ ಸಿಗದ ಹಿನ್ನಲೆ ಹಂಗನಳ್ಳಿ ಬೆನಕನಹಳ್ಳಿ ಸೇರಿ ಸುತ್ತಮುತ್ತಲ ರೈತರು ಕಂಪನಿ ಎದುರು ಧರಣಿ ಸತ್ಯಾಗ್ರಹ ಕುಳಿತಿದ್ದರು. ಇದೇವೇಳೆ ಧರಣಿಯಲ್ಲಿ ಭಾಗಿಯಾಗಿದ್ದ ರೈತ ದೇವೇಂದ್ರಪ್ಪ ಇವತ್ತು ಸಾವನ್ನಪ್ಪಿದ್ದಾನೆ.ಇಷ್ಟಾದ್ರೂ ಯಾವೊಬ್ಬ ಅಧಿಕಾರಿ ಬಂದು ನೋವು ಆಲಿಸಿಲ್ಲ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ..
ಬೆಂಗಳೂರು: ನಾವು ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಕ್ರಮಬದ್ಧವಾಗಿ ಜಾರಿ ಮಾಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ನಾವು ಮಾತು ಕೊಟ್ಟಂತೆ ಜಾರಿ ಮಾಡ್ತೇವೆ. ಇವತ್ತು ಸಿಎಂ ಅಧಿಕಾರಿಗಳ ಜತೆ ಚರ್ಚೆ ಮಾಡ್ತಾರೆ. ಸಿಎಂ ಹತ್ರ ಹಣಕಾಸು ಇಲಾಖೆ ಇದೆ. ಕೊಟ್ಟ ಮಾತು ಉಳಿಸ್ಕೋತೇವೆ. ಕ್ರಮಬದ್ಧವಾಗಿ ಗ್ಯಾರಂಟಿ ಜಾರಿ ಮಾಡ್ತೇವೆ. ನಮ್ಮದು ಜವಾಬ್ದಾರಿಯುತ ಸರ್ಕಾರ. ಎಲ್ಲರಿಗೂ ಏನು ಮಾತು ಕೊಟ್ಟಿದ್ದೇವೆಯೋ ಅದನ್ನು ಉಳಿಸ್ಕೋತೇವೆ. ನೀವೇನೂ ಗಾಬರಿ ಪಟ್ಕೋಬೇಡಿ ಎಂದರು, ಇವತ್ತು ಸಿಎಂ ಪರಿಶೀಲನಾ ಸಭೆ ನಡೆಸ್ತಾರೆ. ಸಂಪುಟ ಸಭೆಗೆ ಬೇಕಿರುವ ಮಾಹಿತಿ ಪಡ್ಕೋತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು: ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಹೇಳುತ್ತಿದ್ದ ಬೆಂಗಳೂರು ಸೇರಿ ರಾಜ್ಯದ ಜನತೆಗೆ ಇಂಧನ ಇಲಾಖೆ ಶಾಕ್ ನೀಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗೃಹಜ್ಯೋತಿ ಯೋಜನೆ ಇನ್ನೂ ಜಾರಿಯಾಗಿಲ್ಲ. ಆದರೆ ಜನರು ಕರೆಂಟ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಸೂಚನೆ ನೀಡಿದೆ. ಜನರು ಬಾಕಿ ಇರುವ, ಪ್ರಸ್ತುತ ವಿದ್ಯುತ್ ಬಿಲ್ ಪಾವತಿಸಬೇಕು. ಬಳಸಿರುವ ವಿದ್ಯುತ್ ಬಿಲ್ ಪಾವತಿಸಬೇಕು ಎಂದು ಸೂಚನೆ ನೀಡಿದೆ. ಕರೆಂಟ್ ಬಿಲ್ ಪಾವತಿ ವಿಳಂಬ ಮಾಡಿದ್ರೂ ದಂಡ ಹಾಕಲಾಗುವುದು. 3 ತಿಂಗಳ ಬಿಲ್ ಬಾಕಿ ಕಟ್ಟದಿದ್ದರೆ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ. ಕಾಂಗ್ರೆಸ್ ಚುನಾವಣೆಗೂ ಮುನ್ನ 200 ಯುನಿಟ್ ವಿದ್ಯುತ್ ಉಚಿತ ಎಂದು ಘೋಷಿಸಿತ್ತು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಈವರೆಗೂ ಗೃಹಜ್ಯೋತಿ ಯೋಜನೆಯ ಆದೇಶ ಹೊರಡಿಸಿಲ್ಲ. ಆದೇಶ ಬರೋವರೆಗೂ ಕರೆಂಟ್ ಬಿಲ್ ಪಾವತಿಸದಿದ್ದರೆ…
ಬೆಂಗಳೂರು: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಸಹೋದರಿ ವೈ. ಎಸ್. ಶರ್ಮಿಳಾ ರೆಡ್ಡಿ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು. ಸದಾಶಿವನಗರದ ಗೃಹ ಕಚೇರಿಯಲ್ಲಿ ಭೇಟಿಯಾಗಿ ಶುಭ ಹಾರೈಸಿದರು. ಜಗನ್ ಮೋಹನ್ ರೆಡ್ಡಿ ಸಹೋದರಿ ವೈ. ಎಸ್. ಶರ್ಮಿಳಾ ರೆಡ್ಡಿ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ವೈ. ಎಸ್. ಆರ್. ತೆಲಂಗಾಣ ಪಕ್ಷದ ಸಂಸ್ಥಾಪಕರು ಅವರು. ಕೆ. ಚಂದ್ರಶೇಖರಾವ್ ಸರ್ಕಾರದ ವಿರುದ್ಧ ಹೋರಾಟಗಳನ್ನು ಮಾಡುವ ಮೂಲಕ ಈ ವರ್ಷ ನಡೆಯುವ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ, ಅವರ ಕುಟುಂಬ ರಾಜಕೀಯದ ಹೊರತಾಗಿಯೂ ಕರ್ನಾಟಕದ ಜೊತೆ ಉತ್ತಮ ಬಾಂಧವ್ಯ ಹೊಂದಿದೆ. ಬೆಂಗಳೂರಿನಲ್ಲಿ ಐಷಾರಾಮಿ ಬಂಗಲೆಯನ್ನು ಜಗನ್ ಹೊಂದಿದ್ದಾರೆ. ರಾಜ್ಯದಲ್ಲಿ ಅನೇಕ ಉದ್ಯಮಗಳನ್ನು ನಡೆಸುತ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ವೈ. ಎಸ್. ಶರ್ಮಿಳಾ ರೆಡ್ಡಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್…
ಬೆಂಗಳೂರು: ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆ ಜಾರಿಗೆ ಒತ್ತಡ ಹೆಚ್ಚಾಗುತ್ತಿದ್ದು, ಈ ಬಗ್ಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿತ ಇಲಾಖೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆಯಲಿರುವ ಸಭೆಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಬೇಕಿರುವ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗುತ್ತದೆ. ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹ ಜ್ಯೋತಿ ಯೋಜನೆ, ಪ್ರತಿ ಮನೆಯ ಯಜಮಾನಿ ಮಹಿಳೆಗೆ 2,000 ರೂ. ನೀಡುವ ಗೃಹಲಕ್ಷ್ಮಿ, 10 ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಪ್ರಯಾಣ, ಯುವಕರಿಗೆ ನಿರುದ್ಯೋಗಿ ಭತ್ಯೆ ನೀಡುವ ಯುವನಿಧಿ ಯೋಜನೆಗಳ ಬಗ್ಗೆ ಇಂದು ಸಿಎಂ ಇಂಧನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಹಾರ ಇಲಾಖೆ, ಸಾರಿಗೆ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ಯೋಜನೆಗೆ ಫಲಾನುಭವಿಗಳ ಆಯ್ಕೆ, ಆರ್ಥಿಕ ವೆಚ್ಚ, ಅನುಷ್ಠಾನ ಮತ್ತಿತರ ಮಾಹಿತಿಗಳ ಸಹಿತ ಸಭೆಗೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸೂರ್ಯೋದಯ: 05.52 AM, ಸೂರ್ಯಾಸ್ತ : 06.42 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ನವಮಿ 11:49 AM ತನಕ ನಂತರ ದಶಮಿ ನಕ್ಷತ್ರ: ಇವತ್ತು ಪುಬ್ಬಾ 02:20 AM ತನಕ ನಂತರ ಉತ್ತರ ಫಾಲ್ಗುಣಿ ಯೋಗ: ಇವತ್ತು ವಜ್ರ 09:01 PM ತನಕ ನಂತರ ಸಿದ್ಧಿ ಕರಣ: ಇವತ್ತು ಕೌಲವ 11:49 AM ತನಕ ನಂತರ ತೈತಲೆ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 08.38 PM to 10.23 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:47 ನಿಂದ ಮ.12:39 ವರೆಗೂ ಮೇಷ ರಾಶಿ ( ಅಶ್ವಿನಿ ಭರಣಿ ಕೃತಿಕ 1) ನಿರ್ವಹಣಾ ಅಧಿಕಾರಿಗಳಿಗೆ ಧನ ಲಾಭ ಮತ್ತು ಜಾಗ್ರತೆ ಇರಲಿ, ಪುರೋಹಿತರಿಗೆ ಧನ ಲಾಭ, ತಾತ್ಕಾಲಿಕ…
ಬೆಂಗಳೂರು: ಸಾರಿಗೆ ಖಾತೆ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಸಚಿವ ರಾಮಲಿಂಗಾರೆಡ್ಡಿ(ramalinga reddy) ಅವರನ್ನು ಮನವೊಲಿಸುವಲ್ಲಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಯಶಸ್ವಿಯಾಗಿದ್ದಾರೆ. ಇನ್ನು ರಾಮಲಿಂಗರೆಡ್ಡಿ ಅವರಿಗೆ ಸಾರಿಗೆ ಜೊತೆ ಮುಜರಾಯಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಸ್ವತಃ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರತಿಕ್ರಿಯಿಸಿದ್ದು, ಸಮಾಧಾನ,ಅಸಮಾಧಾನ ಪ್ರಶ್ನೆ ಇಲ್ಲ. ಯಾವ ಖಾತೆ ಕೊಟ್ಟರು ಕೆಲಸ ಮಾಡಬೇಕು. ಸಚಿವ ಸ್ಥಾನ, ಖಾತೆ ಎನ್ನುವುದು ಶಾಶ್ವತ ಅಲ್ಲ. ಮಂತ್ರಿಗಳು ಕೂಡ ಬದಲಾಗುತ್ತಾರೆ. ಖಾತೆ ಕೂಡ ಬದಲಾಗುತ್ತೆ. ಸಚಿವ ಸ್ಥಾನಕ್ಕೆ ನಾನು ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಬೇಕಿದ್ರೆ ಸಿದ್ದರಾಮಯ್ಯರವರನ್ನೇ ಕೇಳಿ. ಈ ಹಿಂದೆ ನಾಲ್ಕು ತಿಂಗಳು ಸಾರಿಗೆ ಇಲಾಖೆಯ ಸಚಿವನಾಗಿದ್ದೆ. ಹಲವು ಪ್ರಶಸ್ತಿ ನಮ್ಮ ಸಂಸ್ಥೆಗೆ ಬಂದಿದ್ದವು ಎಂದು ಹೇಳಿದರು. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು ತೀರ್ಮಾನಿಸಲಾಗಿದೆ. ಎಷ್ಟು ಜನ ಪ್ರಯಾಣ ಮಾಡುತ್ತಾರೆ ಎನ್ನುವುದಕ್ಕೆ ಸರ್ಕಾರ ಕೆಆರ್ಟಿಸಿಗೆ ಹಣ ಕೊಡಬೇಕು. ಸೋಮವಾರ ಸಭೆ ಇದ್ದು, ಎಲ್ಲಾ ತೀರ್ಮಾನಿಸಲಾಗುತ್ತೆ/ ವಿರೋಧ ಪಕ್ಷದವರ ಬಾಯಿ…