ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದೆ. ಮುಡಾದ ಮಾಜಿ ಆಯುಕ್ತರನ್ನು ಅಮಾನತು ಮಾಡುವ ಮೂಲಕ ಹಿಂದಿನ ನಿರ್ಣಯಗಳು ಹಾಗೂ ನಿರ್ದೇಶನಗಳು ತಪ್ಪಾಗಿವೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ. ಇದು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದರ ಮಧ್ಯ ಮುಡಾ ಅಧ್ಯಕ್ಷ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದುಕೊಂಡು ಬಳಿಕ ಮತ್ತೆ ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮರೀಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಮರೀಗೌಡ ಅವರ ಆಪ್ತ ಸಹಾಯಕರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರಾಗಿರುವ ಮರೀಗೌಡ ಅವರು ಮುಡಾ ಅಧ್ಯಕ್ಷರಾದ ಬಳಿಕ ಬೆಳಕಿಗೆ ಬಂದ ಮುಡಾ ಹಗರಣದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯನವರ ಹೆಸರು ತಳಕು ಹಾಕಿಕೊಂಡಿತ್ತು. ಪ್ರತಿಪಕ್ಷಗಳ ನಾಯಕರಿಂದ ಸಾಕಷ್ಟು ರಾಜಕೀಯ ಟೀಕೆಯನ್ನು ಎದುರಿಸುತ್ತಿದ್ದಾರೆ.
Author: Prajatv Kannada
ಯುದ್ಧ ಪೀಡಿತಾ ಗಾಝಾದಲ್ಲಿ ಮಗುವಿಗೆ ಪೋಲಿಯೋ ಕಾಣಿಸಿಕೊಂಡ ಬಳಿಕ ಮಕ್ಕಳಿಗೆ ಲಸಿಕೆ ಹಾಕುವ ಅಭಿಯಾನ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ. ಸುಮಾರು 2 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗಿದ್ದು ಗಾಝಾದಲ್ಲಿ ಪರಿಸ್ಥಿತಿ ಸುಧಾರಿಸಲು ಶಾಶ್ವತ ಕದನ ವಿರಾಮದ ಅಗತ್ಯವಿದೆ ಎಂದು ವಿಶ್ವ ಸಂಸ್ಥೆ ಹೇಳಿದೆ. ಮಧ್ಯ ಗಾಝಾದ ಪ್ರದೇಶದಲ್ಲಿ ಮೂರು ದಿನಗಳ ಅಭಿಯಾನದಲ್ಲಿ ಸುಮಾರು 1,87,000 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಗಿದೆ. ಎರಡನೇ ಹಂತದಲ್ಲಿ ಅಭಿಯಾನವನ್ನು ಫೆಲೆಸ್ತೀನ್ ನ ಪ್ರದೇಶದ ಇತರ ಸ್ಥಳಗಳಿಗೆ ವಿಸ್ತರಿಸಲಾಗುವುದು. ಪೋಲಿಯೊ ಲಸಿಕೆ ಹಾಕಿಸಲು ಸಂಘರ್ಷಕ್ಕೆ ಮಾನವೀಯ ವಿರಾಮ ನೀಡಿರುವುದರಿಂದ ಜನ ಸ್ವಲ್ಪ ನಿರಾಳಗೊಂಡರೂ ಈಗ ಶಾಶ್ವತ ಕದನ ವಿರಾಮ, ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಮತ್ತು ಮಾನವೀಯ ನೆರವನ್ನು ಒದಗಿಸಲು ಅವಕಾಶ ಮಾಡಿಕೊಡುವ ತುರ್ತು ಅಗತ್ಯವಿದೆ ಎಂದು ಫೆಲೆಸ್ತೀನ್ ಪ್ರದೇಶಗಳಿಗೆ ಸಂಬಂಧಿಸಿದ ವಿಶ್ವಸಂಸ್ಥೆ ಏಜೆನ್ಸಿ `ಯುಎನ್‍ಆರ್‍ಡಬ್ಲ್ಯೂಎ’ದ ಮುಖ್ಯಸ್ಥ ಫಿಲಿಪ್ ಲಾಝರಿನಿ ಆಗ್ರಹಿಸಿದ್ದಾರೆ.
ಕಳೆದ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ದೂರವಾಣಿ ಮಾತುಕತೆ ನಡೆಸಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಬಾಂಗ್ಲಾದೇಶದ ಜನರ ಸುರಕ್ಷತೆ ಹಾಗೂ ಅಲ್ಲಿನ ಪ್ರಜಾಪ್ರಭುತ್ವ ಸಂಸ್ಥೆಗಳ ಬಗ್ಗೆ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಕಿರ್ಬಿ ಹೇಳಿದ್ದಾರೆ. ಶ್ವೇತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಕಿರ್ಬಿ ಈ ವಿಷಯ ತಿಳಿಸಿದ್ದಾರೆ. ಈ ಬಗ್ಗೆ ಆಗಸ್ಟ್ 26ರಂದು ಪ್ರಕಟಣೆ ಬಿಡುಗಡೆ ಮಾಡಿದ್ದ ಶ್ವೇತಭವನ, ಬಾಂಗ್ಲಾದೇಶದ ಬಗ್ಗೆ ಯಾವುದೇ ಉಲ್ಲೇಖ ಮಾಡಿರಲಿಲ್ಲ. ಆದರೆ ಪ್ರಧಾನಿ ಮೋದಿಯವರ ಕಚೇರಿಯ ಎಕ್ಸ್ ಪೋಸ್ಟ್‌ನಲ್ಲಿ ಬಾಂಗ್ಲಾದೇಶದ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಹೇಳಲಾಗಿತ್ತು. ‘ಉಭಯ ನಾಯಕರು ಬಾಂಗ್ಲಾದೇಶ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಮತ್ತು ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಾತರಿಪಡಿಸುವ ಬಗ್ಗೆ ಒತ್ತು ನೀಡಿದರು’ ಎಂದು ಪ್ರಧಾನಮಂತ್ರಿ ಕಚೇರಿ ಈ ಹಿಂದೆ…
ಹೈಸ್ಕೂಲ್‌ನಲ್ಲಿ ವಿದ್ಯಾರ್ಥಿಯೋರ್ವ ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿರುವ ಘಟನೆ ಅಮೆರಿಕದ ಜಾರ್ಜಿಯಾದಲ್ಲಿ ನಡೆದಿದೆ. ಗುಂಡು ಹಾರಿಸಿದ ವಿದ್ಯಾರ್ಥಿಯನ್ನು ಜಾರ್ಜಿಯಾದ ವಿಂಡರ್‌ನಲ್ಲಿರುವ ಅಪಾಲಾಚಿ ಹೈಸ್ಕೂಲ್‌ನ ವಿದ್ಯಾರ್ಥಿ 14 ವರ್ಷದ ಕೋಲ್ಟ್ ಕ್ರೇ ಎಂದು ಗುರುತಿಸಲಾಗಿದೆ. ಸದ್ಯ ವಿದ್ಯಾರ್ಥಿಯನ್ನು ಬಂಧಿಸಿರೋ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೃತರಲ್ಲಿ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಸೇರಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು, ವಿದ್ಯಾರ್ಥಿಯೊಬ್ಬ ಗುಂಡಿನ ದಾಳಿ ನಡೆಸಲು ಪ್ರಚೋದನೆ ನೀಡಿದ್ದು ಯಾರು ಎನ್ನುವುದನ್ನು ಪತ್ತೆ ಮಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಜೂನ್ ತಿಂಗಳ ಹಣ ಬಿಡುಗಡೆಯಾಗಿದ್ದು, ಕೆಲವರಿಗೆ ಇನ್ನೂ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಶೀಘ್ರವೇ ಜೂನ್ ತಿಂಗಳ ಜೊತೆಗೆ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. https://youtu.be/2CFQhrEVB44?si=JSidCWnpr2kP4sFg ಸುದ್ದಿಗಾರರೊಂದಿಗೆ ಮಾತಾನಾಡಿರುವ ಲಕ್ಷ್ಮಿ ಹೆಬ್ಬಾಳ್ಕಾರ್ ಹಣವನ್ನ ಬಿಡುಗಡೆ ಮಾಡಿದ್ದೇವೆ. ಕೆಲವೊಬ್ಬರಿಗೆ ಹಣ ಬಂದಿದೆ. ಕೆಲವೊಬ್ಬರಿಗೆ ಹಣ ಬಂದಿಲ್ಲ. ಸದ್ಯ ಎಲ್ಲಾ ಖಾತೆಗಳಿಗೂ ಹಣ ಹಾಕಲು ಎಲ್ಲಾ ಪ್ರಕ್ರಿಯೆಗಳನ್ನ ಮಾಡಲಾಗುತ್ತಿದೆ. ಸದ್ಯ ಒಂದು ತಿಂಗಳ ಹಣವನ್ನ ಹಾಕಿದ್ದೇವೆ. ಶೀಘ್ರವೇ 2 ತಿಂಗಳ ಹಣವನ್ನು ಒಟ್ಟಿಗೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ಇದುವರೆಗೂ ಜೂನ್ ಮಾಹೆಯವರೆಗಿನ ಗೃಹಲಕ್ಷ್ಮೀ ಹಣವನ್ನು ಜಮೆ ಮಾಡಲಾಗಿದೆ. ಬಾಕಿ ಇರುವ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು 5 ರಿಂದ 10 ದಿನದೊಳಗೆ ಜಮೆ ಮಾಡುವುದಾಗಿ ಹೇಳಿದರು. ಗೃಹಲಕ್ಷ್ಮೀ ಯೋಜನೆ ಮೂಲಕ ಇದುವರೆಗೂ ₹26,260 ಕೋಟಿ ಹಣವನ್ನು ಮಹಿಳೆಯರ ಖಾತೆಗೆ ಜಮೆಯನ್ನು ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯ…
ಯುದ್ಧಪೀಡಿತ ಗಾಝಾದಲ್ಲಿ ದೊಡ್ಡ ಪ್ರಮಾಣದಲ್ಲಿ ಪೋಲಿಯೊ ಲಸಿಕೆ ಅಭಿಯಾನ ಆರಂಭವಾಗಿದೆ. ಅದರ ಮೊದಲ ಹಂತವು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಫೆಲೆಸ್ತೀನ್ ಪ್ರದೇಶದ ಮಧ್ಯಭಾಗದಲ್ಲಿರುವ ಸುಮಾರು 2 ಲಕ್ಷ ಮಕ್ಕಳಿಗೆ ಮೊದಲ ಡೋಸ್ ಅನ್ನು ನೀಡಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿಕೊಂಡಿದೆ. ನಿತ್ಯ ನಡೆಯುತ್ತಿರುವ ಯುದ್ಧದಿಂದಾಗಿ ಸುಮಾರ 2.4 ಮಿಲಿಯನ್ ನಾಗರಿಕರು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಿದ್ದು, ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯವನ್ನು ಪಡೆದುಕೊಂಡಿದ್ದಾರೆ. 25 ವರ್ಷಗಳ ಬಳಿಕ ಗಾಝಾದಲ್ಲಿ ಮೊದಲ ಪೋಲಿಯೊ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಪೋಲಿಯೊ ಲಸಿಕೆ ಅಭಿಯಾನವನ್ನು ಆರಂಭಿಸಲಾಗಿದೆ. ಸುಮಾರು 11 ತಿಂಗಳ ಯುದ್ಧದಿಂದ ಧ್ವಂಸಗೊಂಡಿರುವ ಗಾಝಾದಲ್ಲಿ 6.4 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಸಂಪೂರ್ಣವಾಗಿ ಲಸಿಕೆ ಹಾಕುವ ಗುರಿಯನ್ನು ಈ ಅಭಿಯಾನ ಹೊಂದಿದೆ. ಸೆಂಟ್ರಲ್ ಗಾಝಾದಲ್ಲಿ ಸೆ.1 ರಿಂದ 3ರವರೆಗೆ ನಡೆಸಿದ ಮೊದಲ ಹಂತದ ಅಭಿಯಾನದಲ್ಲಿ 10 ವರ್ಷದೊಳಗಿನ 1.87 ಲಕ್ಷಕ್ಕೂ ಹೆಚ್ಚಿನ ಮಕ್ಕಳನ್ನು ತಲುಪಲಾಗಿದೆ ಎಂದು WHO ಹೇಳಿಕೆಯಲ್ಲಿ ತಿಳಿಸಿದೆ. ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡಿರುವ…
ಸೆಪ್ಟೆಂಬರ್ 7ರಂದು ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ಹೀಗಾಗಿ ಬೆಸ್ಕಾಂ ಕೆಲ ಸುರಕ್ಷಿತ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾರ್ವಜನಿಕರು ಗಣೇಶೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಸಿದ್ದು, ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ವೇಳೆ ವಿದ್ಯುತ್ ಅವಘಡಗಳು ಸಂಭವಿಸದಂತೆ ಸುರಕ್ಷತೆಗೆ ಆದ್ಯತೆವಂತೆ ಬೆಸ್ಕಾಂ ತಿಳಿಸಿದೆ. ಜೊತೆಗೆ 1912 ಸಹಾಯವಾಣಿ ಬಿಡುಗಡೆ ಮಾಡಲಾಗಿದೆ. https://youtu.be/PSG6elyNPrI?si=vWCchR-Y7VH_EArc ಈಗಾಗಲೇ ಸಾರ್ವಜನಿಕರು ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದು, ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ವೇಳೆ ವಿದ್ಯುತ್ ಅವಘಡಗಳ ಬಗ್ಗೆ ಎಚ್ಚರವಹಿಸುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕೆಲ ಮಾರ್ಗ ಸೂಚನೆಗಳನ್ನು ಬಿಡುಗಡೆ ಮಾಡಿದೆ. ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್ ಹಾಕುವಾಗ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರವಹಿಸಬೇಕು. ಸೀರಿಯಲ್ ಲೈಟ್ ತಂತಿ ಸಮರ್ಪಕ ಇನ್ಸುಲೇಟ್ ಆಗಿರಬೇಕು. ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯಬಾರದು. ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟಬಾರ್ದು. ಮೆರವಣಿಗೆ ವೇಳೆ ರಸ್ತೆ ಬದಿ ವಿದ್ಯುತ್ ತಂತಿಗಳನ್ನು ಮೇಲಕ್ಕೆತ್ತಲು ಪ್ರಯತ್ನಿಸಬೇಡಿ. ಮೆರವಣಿಗೆ ಮಾರ್ಗವನ್ನ ಮುಂಚಿತ…
ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯ ಕೆಲ ಪ್ರಮುಖ ಅಂಶಗಳು ಒಂದೊಂದಾಗಿ ಹೊರ ಬೀಳುತ್ತಿದೆ. ಈ ಮೊದಲು ರೇಣುಕಾಸ್ವಾಮಿ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ಮುಂದೆ ಅಂಗಲಾಚುತ್ತಿರುವ ಫೋಟೋ ವೈರಲ್ ಆಗಿದ್ದು ಇದೀಗ ಮತ್ತೊಂದು ಫೋಟೋ ವೈರಲ್ ಆಗಿದೆ. ಸ್ಟೋನಿ ಬ್ರೂಕ್ನಲ್ಲಿ ದರ್ಶನ್ ಹಾಗೂ ಗೆಳೆಯರು ಪಾರ್ಟಿ ಮಾಡಿದ್ದ ಜಾಗದಲ್ಲಿಯೇ ಅವರನ್ನೆಲ್ಲ ಕೂರಿಸಿ ಪೊಲೀಸ್ ಸಿಬ್ಬಂದಿಯೊಬ್ಬರು ಅವರ ಮುಂದೆ ಕೂತು ಲ್ಯಾಪ್ಟಾಪ್ನಲ್ಲಿ ಎಲ್ಲ ಅಂಶಗಳನ್ನು ನೋಟ್ ಮಾಡಿಕೊಳ್ಳುತ್ತಿರುವ ದೃಶ್ಯ ಚಿತ್ರದಲ್ಲಿ ಸೆರೆಯಾಗಿದೆ. ದರ್ಶನ್ ಮುಖ ಸಪ್ಪೆ ಮಾಡಿಕೊಂಡು ಕೂತಿದ್ದಾರೆ. ಫೋಟೋದಲ್ಲಿ ನಟ ಚಿಕ್ಕಣ್ಣ ಸಹ ದರ್ಶನ್ರ ಪಕ್ಕ ಕೂತಿದ್ದಾರೆ. ಚಿಕ್ಕಣ್ಣ ಸಹ ತೀವ್ರ ಆತಂಕದಲ್ಲಿರುವುದು ತಿಳಿಯುತ್ತಿದೆ. ಸ್ಟೋನಿ ಬ್ರೂಕ್ ಮಾಲೀಕ ವಿನಯ್ ಸಹ ಚಿತ್ರದಲ್ಲಿದ್ದು ಆ ವ್ಯಕ್ತಿ ಸಹ ಆತಂಕದಲ್ಲಿದ್ದಾನೆ. ಇತರೆ ಕೆಲವು ಪೊಲೀಸ್ ಸಿಬ್ಬಂದಿ ಸಹ ಚಿತ್ರದಲ್ಲಿದ್ದಾರೆ. ಸ್ಟೋನಿ ಬ್ರೂಕ್ನಲ್ಲಿ A2 ದರ್ಶನ್, A3 ಪವನ್, A10 ವಿನಯ್, A11 ನಾಗರಾಜ್, A14 ಪ್ರದೋಷ್ ಅವರುಗಳನ್ನು…
ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಮತ್ತೊಮ್ಮೆ ಅಮ್ಮನಾದ ಖುಷಿಯಲ್ಲಿದ್ದಾರೆ. ಈ ಮೊದಲು ಹೆಣ್ಣು ಮಗುವನ್ನು ಬರ ಮಾಡಿಕೊಂಡಿದ್ದ ನಟಿ ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತುಂಬಾ ಖುಷಿಯಾಗುತ್ತಿದೆ, ಪುಟ್ಟ ಮಗುವನ್ನು ನೋಡಿ ಮಗಳು ಆರ್ನಾ ಆಕಾಶದಲ್ಲಿ ತೇಲುತ್ತಿದ್ದಾಳೆ. ಆಕೆ ತಮ್ಮನನ್ನು ಬೇಬಿ ಎಂದು ಕರೆಯುತ್ತಿದ್ದಾಳೆ ಎಂದು ಪ್ರಣೀತಾ ಸಂತಸ ವ್ಯಕ್ತಪಡಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಅಂದಹಾಗೆ, 2021ರಲ್ಲಿ ಉದ್ಯಮಿ ನಿತಿನ್ ರಾಜು ಅವರನ್ನು ಪ್ರಣಿತಾ ಮದುವೆಯಾದರು. 2022ರಲ್ಲಿ ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದರು. ಆ ಮಗುವಿಗೆ ಆರ್ನಾ ಎಂದು ಹೆಸರಿಟ್ಟಿದ್ದು ಇದೀಗ ಮನಗೆ ಮತ್ತೊಂದು ಮುದ್ದು ಮಗುವಿನ ಆಗಮನವಾಗಿದೆ.
ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಜೋಡಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ನಟಿ ಮಿಲನಾ ನಾಗರಾಜ್ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಮೊದಲ ಮಗುವನ್ನು ಪಡೆದುಕೊಂಡು ಡಾರ್ಲಿಂಗ್ ಕೃಷ್ಣ ಕುಟುಂಬ ಸಂಭ್ರಮದಲ್ಲಿದೆ. ನಾರ್ಮಲ್ ಡೆಲಿವರಿ ಮೂಲಕ ಮಿಲನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗಳು ಬಂದಿರುವುದು ಬಹಳ ಖುಷಿ ನೀಡಿದೆ. ತಾಯಿ ಮತ್ತು ಮಗಳು ಆರೋಗ್ಯವಾಗಿದ್ದಾರೆ ಎಂದು ಡಾರ್ಲಿಂಗ್ ಕೃಷ್ಣ ಬರೆದುಕೊಂಡಿದ್ದಾರೆ. ಈ ಜರ್ನಿಯಲ್ಲಿ ಮಿಲನಾ ನಾಗರಾಜ್ ಅನುಭವಿಸಿದ ನೋವು, ಮಾಡಿದ ತ್ಯಾಗ, ತೋರಿದ ಧೈರ್ಯದ ಬಗ್ಗೆ ನನಗೆ ಹೆಮ್ಮೆ ಇದೆ. ಈ ಜರ್ನಿಯಲ್ಲಿ ಸಾಗುವ ಎಲ್ಲ ತಾಯಂದಿರಿಗೆ ನನ್ನ ಸೆಲ್ಯೂಟ್. ಇದನ್ನು ನೋಡಿ ನನಗೆ ಮಹಿಳೆಯರ ಮೇಲೆ ಇದ್ದ ಗೌರವ ದುಪ್ಪಟ್ಟಾಗಿದೆ. ಇಂದು ಮಗಳು ಜನಿಸಿರೋದು ನನಗೆ ಹೆಮ್ಮೆಯಿದೆ. ನಾನೊಬ್ಬ ಅದೃಷ್ಟವಂತ ತಂದೆ” ಎಂದು ಡಾರ್ಲಿಂಗ್ ಕೃಷ್ಣ ಪೋಸ್ಟ್ ಹಂಚಿಕೊಂಡಿದ್ದಾರೆ.