ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ನಡೆದ ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ. ಪಿಎಸ್ಐ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎಂಬುದು ತಿಳಿಯುತ್ತದೆ. ಪೊಲೀಸ್ ಇಲಾಖೆ ಘನತೆಯನ್ನು ನೀವು ಹಾಳು ಮಾಡಿದ್ದೀರಿ. ಇದನ್ನು ನಾವು ಸಹಿಸುವುದಿಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲವೂ ಸ್ವಚ್ಛವಾಗಿರಬೇಕು. ಜನ ದೊಡ್ಡ ಬದಲಾವಣೆ ನಿರೀಕ್ಷೆ ಮಾಡಿದ್ದಾರೆ. ಅದರಂತೆ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ನೀವು ಯಾರೂ ನಮಗೆ ಹಣ ಕೊಡುವುದು ಬೇಡ. ಉತ್ತಮವಾಗಿ ಕೆಲಸ ಮಾಡಿದರೆ ಸಾಕು ಎಂದು ಹಿರಿಯ ಪೊಲೀಸರಿಗೆ ಡಿಕೆ ಶಿವಕುಮಾರ್ ಖಡಕ್ ಸಂದೇಶ ರವಾನಿಸಿದರು.
Author: Prajatv Kannada
ಪೊಲೀಸರು ಕೇಸರಿ ಶಾಲು ಹಾಕಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ನೂತನ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಹಿಂದೆ ಇದ್ದ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಿದ್ದರು. ನಳಿನ್ ಕುಮಾರ್ ಕಟೀಲು ವಾಹನವನ್ನು ಹೋಗಲು ಬಿಟ್ಟಿರಲಿಲ್ಲ. ಇಡೀ ಪೊಲೀಸ್ ಇಲಾಖೆಯನ್ನೇ ಕೇಸರೀಕರಣ ಮಾಡಲಾಗಿತ್ತು. ಯಾವ ಮಟ್ಟಕ್ಕೆ ಇದೆ ಅಂದ್ರೆ ಪೊಲೀಸರೇ ಕೇಸರಿ ಶಾಲು ಹಾಕಿದ್ರು. ಸರ್ಕಾರಿ ಕೆಲಸ ಮಾಡ್ತಿದ್ರಾ ಅಥವಾ RSSನಲ್ಲಿ ಕೆಲಸ ಮಾಡ್ತಿದ್ರಾ? ಹೀಗಾಗಿ ನಿನ್ನೆ ಸರ್ಕಾರಿ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಸೂಚಿಸಿದ್ದಾರೆ ಎಂದರು.
ನೂತನ ಸ್ಪೀಕರ್ ಖಾದರ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು. ಯು.ಟಿ.ಖಾದರ್ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ. ಈ ಹಿಂದೆ ಸ್ಪೀಕರ್ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್ ಸ್ಥಾನ. ನಿಷ್ಪಕ್ಷಪಾ ತವಾಗಿ ತಾವು ಸದನವನ್ನು ನಡೆಸಬೇಕು. ವಿಪಕ್ಷ ಸದಸ್ಯರ ಹೇಳಿಕೆಗೆ ಸ್ಪೀಕರ್ ಹೆಚ್ಚು ಅವಕಾಶ ಕೊಡಬೇಕು. ಚರ್ಚೆ ವೇಳೆ ಕೊನೆಯ ಸಾಲಿನವರಿಗೆ ಹೆಚ್ಚು ಅವಕಾಶ ಕೊಡಬೇಕು. ಸ್ಪೀಕರ್ ಹೊಸ ವಿಚಾರಕ್ಕೆ ಅವಕಾಶ ಮಾಡಿಕೊಡುವ ವಿಶ್ವಾಸವಿದೆ. ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದರು.
ಮಾರ್ಚ್‌ನಲ್ಲಿ ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣದಲ್ಲಿ ಭುಗಿಲೆದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದ ಎಂಟು ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಜೂನ್ 8ರವರೆಗೆ ಜಾಮೀನು ಮಂಜೂರು ಮಾಡಿದೆ. ಮಾರ್ಚ್ 18 ರಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರು ನ್ಯಾಯಾಂಗ ಸಂಕೀರ್ಣದಲ್ಲಿ ನ್ಯಾಯಾಲಯಕ್ಕೆ ಹಾಜರಾದಾಗ ಪೊಲೀಸರು ಮತ್ತು ಅವರ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದ ನಂತರ 70 ವರ್ಷದ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಇಮ್ರಾನ್ ಖಾನ್ ಅವರ ಮಧ್ಯಂತರ ಜಾಮೀನನ್ನು ಜೂನ್ 8 ರವರೆಗೆ ವಿಸ್ತರಿಸಲಾಯಿತು ಮತ್ತು ಬುಶ್ರಾ ಬೀಬಿಗೆ ಮೇ 31 ರವರೆಗೆ ಜಾಮೀನು ನೀಡಲಾಯಿತು. ಹಿಂದಿನ ದಿನ, ಅವರು ರಾಷ್ಟ್ರೀಯ ಉತ್ತರದಾಯಿತ್ವ ಬ್ಯೂರೋ (NAB) ನಿಂದ ತನ್ನ ಬಂಧನವನ್ನು ತಡೆಯಲು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅಲ್-ಖಾದಿರ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಟಿಐ ಮುಖ್ಯಸ್ಥರು ಇಸ್ಲಾಮಾಬಾದ್‌ನಲ್ಲಿ ಎನ್‌ಎಬಿ ಮುಂದೆ ಹಾಜರಾಗುವ ನಿರೀಕ್ಷೆಯಿದೆ.…
ನವದೆಹಲಿ: 2,000 ರೂ. ಮುಖಬೆಲೆಯ ನೋಟುಗಳನ್ನು (Rs. 2000 Note) ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಿಂಪಡೆದಿದ್ದು, ಮಂಗಳವಾರದಿಂದ ಸಾರ್ವಜನಿಕರಿಗೆ ಬ್ಯಾಂಕುಗಳಿಂದ (Bank) ನೋಟ್ ವಿನಿಮಯ ಮಾಡಿಕೊಳ್ಳು ಅನುಮತಿಸಿದೆ. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ED) ಹಾಗೂ ಆದಾಯ ತೆರಿಗೆ ಇಲಾಖೆ (IT) ಹವಾಲಾ ಹಣದ (Hawala Money) ಮೇಲೆ ಕಣ್ಣಿಟ್ಟಿದೆ. ಸದ್ಯ ಆರ್‌ಬಿಐ 3 ತಿಂಗಳು ನೋಟು ವಿನಿಮಯಕ್ಕೆ ಅವಕಾಶ ಕೊಟ್ಟಿದೆ. ಈ ನಡುವೆ ಹವಾಲಾ ದಂಧೆಕೋರರಿಂದ ನೋಟು ವಿನಿಮಯದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹೀಗಾಗಿ ಇಡಿ ಹಾಗೂ ಐಟಿ ಇಲಾಖೆಗಳು ಹವಾಲಾ ದಂಧೆಕೋರರ ಮೇಲೆ ನಿಗಾ ಇರಿಸಿದ್ದು, ಈ ಕುರಿತು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಹವಾಲಾ ದಂಧೆಕೋರರು ಅಪಾರ ಪ್ರಮಾಣದಲ್ಲಿ ಹಣ ಸಂಗ್ರಹಿಸಿದ್ದು, ಹೀಗಾಗಿ ನೋಟು ಹಿಂಪಡೆಯಲು ಮುಂದಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಕಾಳಸಂತೆಯಲ್ಲಿ ಹವಾಲಾ ದಂಧೆಕೋರರ ಮೇಲೆ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಹೀಗಾಗಿ ನಗರ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪ್ರಮುಖವಾಗಿ ಪೆಟ್ರೋಲ್ ಬಂಕ್‌ಗಳ…
ಬೆಂಗಳೂರು: ಕಾಂಗ್ರೆಸ್ ಗೆ ಜನತೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಶಾಸಕ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಕೆಶಿ (DKS)ಅವರು ನಿನ್ನೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜತೆಗೆ ಕೇಸರೀಕರಣದ ವಿರುದ್ಧವೂ ಮಾತನಾಡಿದ್ದಾರೆ. ರಾಷ್ಟ್ರದ ಧ್ಚಜದಲ್ಲಿ ಕೇಸರಿ ಬಣ್ಣ ಇದೆ. ಇಂತಹ ಕೇಸರಿ ಬಗ್ಗೆ ಕಾಂಗ್ರೆಸ್ನವರಿಗೆ ಸಿಟ್ಟು ಯಾಕೆಂದು ಗೊತ್ತಿಲ್ಲ. ಇಡೀ ದೇಶದಲ್ಲೇ ಅಧಿಕಾರಕ್ಕೆ ಬಂದಿದ್ದೇವೆ ಎನ್ನುವ ಭ್ರಮೆಯಲ್ಲಿ ಕಾಂಗ್ರೆಸ್ನವರು ಇದ್ದಾರೆ. ಇಂತಹ ಭ್ರಮೆಯಲ್ಲಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನ ಅವರಿಗೆ ಪಾಠ ಕಲಿಸುತ್ತಾರೆ ಎಂದು ಶಾಸಕ ವಿಜಯೇಂದ್ರ ಹೇಳಿದರು. ಇನ್ನೂ ರಾಜ್ಯದ ಮುಖ್ಯಮಂತ್ರಿ ಮುಂದಿನ ಐದು ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತಾರೋ, ಇಲ್ಲವೋ ಎಂಬುದೇ ಗ್ಯಾರಂಟಿ ಇಲ್ಲ ಎಂದು ವ್ಯಂಗ್ಯವಾಡಿದರು. ಸದ್ಯ ಆಡಳಿತಕ್ಕೆ ಬಂದಿರುವುದು ಡಬಲ್ ಸ್ಟೇರಿಂಗ್ ಸರ್ಕಾರ. ಮುಖ್ಯಮಂತ್ರಿಗೊಂದು ಸ್ಟೇರಿಂಗ್, ಉಪಮುಖ್ಯಮಂತ್ರಿಗೊಂದು ಸ್ಟೇರಿಂಗ್ ಇದೆ. ಯಾರು ಯಾವ ಕಡೆ ಸ್ಟೇರಿಂಗ್ ಎಳೆಯುತ್ತಾರೆ ಎಂಬುದೇ ಗೊತ್ತಿಲ್ಲ. ಬಸ್ ಯಾವ…
ಬೆಂಗಳೂರು: ಬಡವರು, ನಿರ್ಗತಿಕರು, ಹಸಿದವರ ಪಾಲಿಗೆ ಅನ್ನಕೇಂದ್ರವಾಗಿದ್ದ ಇಂದಿರಾ ಕ್ಯಾಂಟೀನ್(Indira canteen) ಮರು ಆರಂಭಕ್ಕೆ ಇದೀಗ ಸರ್ಕಾರ ಸೂಚಿಸಿದೆ ಎಂದು ಬಿಬಿಎಂಪಿ(BBMP) ವಿಶೇಷ ಆಯುಕ್ತ ಜಯರಾಂ ರಾಯ್‌ಪುರ(Jayaram Raipura) ಹೇಳಿದ್ದಾರೆ. ಇನ್ನು ಕೆಲವು ಕಡೆ ಕ್ಯಾಂಟೀನ್‌ನಲ್ಲಿ ಡಿಮಾಂಡ್ ಕಡಿಮೆ ಆಗಿತ್ತು. ಈ ಕಾರಣಕ್ಕೆ ಇರುವ ಕ್ಯಾಂಟೀನ್‌ಗಳ ಪೈಕಿ 10 ಮೊಬೈಲ್ ಕ್ಯಾಂಟೀನ್ ಕ್ಲೋಸ್ ಮಾಡಲಾಗಿತ್ತು. ಇದೀಗ 243 ಸ್ಥಳಗಳಲ್ಲೂ ಕ್ಯಾಂಟೀನ್ ಆರಂಭಿಸ್ತೇವೆ. ಈಗಾಗಲೇ ಇಂದಿರಾ ಕ್ಯಾಂಟೀನ್ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕ್ಯಾಂಟೀನ್ ಅಡುಗೆ ಕೋಣೆ ವಸ್ತುಗಳನ್ನು ರೀಪ್ಲೇಸ್ ಮಾಡಬೇಕಿದೆ. ಉಪಾಹಾರ ಬೆಲೆ 5 ರಿಂದ 10 ರೂಪಾಯಿಗೆ ಏರಿಕೆ ಮಾಡ ಲಾಗುತ್ತೆ. ರಾತ್ರಿ ಊಟಕ್ಕೆ ಬೇಡಿಕೆ ಕಡಿಮೆ, ಅದು ಹಾಗೆಯೇ ಮುಂದುವರಿದಿದೆ. ಜೊತೆಗೆ ಇನ್ನು ಹಣ ಪಾವತಿಯಾಗಿಲ್ಲ ಅನ್ನೋ ದೂರು ಕೇಳಿಬಂದಿದೆ. ನಾವು ಮಾರ್ಷಲ್ಸ್ ನೀಡುವ ಆಧಾರದ ಮೇಲೆ ಮೊತ್ತ ಪಾವತಿ ಮಾಡಿದ್ದೇವೆ. 1 ತಿಂಗಳಲ್ಲಿ ಟೆಂಡರ್, ಗುತ್ತಿಗೆ ದಾರರಿಗೆ ಹಳೇ ಪೇಮೆಂಟ್ ಆಗಲಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಹೇಳಿದರು. 2013 ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆದಾಗ ಕೊಟ್ಟ 168 ಭರವಸೆಗಳಲ್ಲಿ ಅತೀ ಹೆಚ್ಚು ಮಹತ್ವ ಪಡೆದುಕೊಂಡಿದ್ದು, ಬಡವರು, ನಿರ್ಗತಿಕರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್ ನಿರೀಕ್ಷೆಯಂತೆ ಎಲ್ಲ ವರ್ಗದ ಜನರ ಹಸಿವು ನೀಗಿಸಿತ್ತು. ಆ ನಂತರ ಸಮ್ಮಿಶ್ರ ಸರ್ಕಾರದಲ್ಲಿ ಈ ಯೋಜನೆ ಮುಂದುವರೆಸಲಾಗಿತ್ತಾದ್ರೂ, ಬಿಜೆಪಿ ಆಡಳಿತದಲ್ಲಿ ಕೆಲವು ಕಡೆಗಳಲ್ಲಿ ಬಂದ್ ಮಾಡಿಸಲಾಗಿತ್ತು. ಸದ್ಯ ಸಿದ್ದರಾಮಯ್ಯ ಘೋಷಿಸಿದ್ದ ಯೋಜನೆ ಮತ್ತೆ ಮುನ್ನೆಲೆಗೆ ಬಂದಿದ್ದು, 5ರೂಗೆ ಉಪಹಾರ, 10 ರೂ ಗೆ ಊಟ, ಎಂತಹ ಬಡವರಾದ್ರೂ ಸಹ ಇಷ್ಟು ಹಣದಲ್ಲಿ ಮೂರು ಹೊತ್ತು ಹೊಟ್ಟೆ ತುಂಬಿಸಿಕೊಳ್ಳಬಹುದಾಗಿದೆ.
ಬೆಂಗಳೂರು: ಪೊಲೀಸರು ಎಫ್ಐಆರ್(FIR) ಹಾಕಿ ನನ್ನನ್ನು ಎ೧ ಮಾಡಿದ್ದಾರೆ. ನಾನು ಕದ್ದುಮುಚ್ಚಿ ಓಡಾಡುವಂತಾಗಿತ್ತು ಎಂದು ಕೆಜಿಎಫ್ ಶಾಸಕಿ ರೂಪಾ ಶಶಿಧರ್(Rupa Sashidhar) ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬಳಿ ಕಷ್ಟ ಹೇಳಿಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಹೊಸ ಸರ್ಕಾರವನ್ನು ರಚಿಸಿದೆ. ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಸಿ ಪಕ್ಷದ ಬಲವರ್ಧನೆ ಮಾಡಬೇಕಾದ ಯೋಜನೆ ಹಾಗೂ ಹಲವು ವಿಚಾರಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ (ಸಿಎಲ್ಪಿ) ಸಭೆ ಮುಗಿಸಿ ಬೇರೆ ಶಾಸಕರು ಹೊರಡುವಾಗ, ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಮಾತ್ರ ಅಲ್ಲೇ ಕುಳಿತಿದ್ದರು. ಈ ವೇಳೆ ಅವರ ಡಿಕೆಶಿ ಅವರ ಬಳಿ ಕೋಲಾರ (ಕೆಜಿಎಫ್) ಶಾಸಕಿ ರೂಪಾ ಶಶಿಧರ್ ಕಷ್ಟವನ್ನು ಹೇಳಿಕೊಂಡಿದ್ದಾರೆ. ಕಾರ್ಮಿಕರಿಗೆ ಫುಡ್ ಕಿಟ್ ಕೊಟ್ಟಿದ್ದಕ್ಕೆ ಪೊಲೀಸರು ಎಫ್ಐಆರ್ ಹಾಕಿ ನನ್ನನ್ನು ಎ೧ ಮಾಡಿದ್ದಾರೆ. ನಾನು ಕದ್ದುಮುಚ್ಚಿ ಓಡಾಡುವಂತಾಗಿತ್ತು. ಚುನಾವಣಾ ಅಧಿಕಾರಿಗಳ ಮಾತು ಕೇಳಿಕೊಂಡು. ಪೊಲೀಸರು ತುಂಬಾ ಹರಾಸ್ ಮೆಂಟ್ ಮಾಡಿದ್ದಾರೆ ಎಂದು…
ಬೆಂಗಳೂರು: ಎಂ.ಬಿ ಪಾಟೀಲ್ (MB Patil)ಮಾತಿಗೆ ಸಂಸದ ಡಿ.ಕೆ ಸುರೇಶ್ (DK Suresh)ಅಂತೂ ಫುಲ್ ಗರಂ ಆಗಿದ್ದರು. ಅವರಿಗೆ ನಾನು ತೀಕ್ಷ್ಣವಾಗಿ ಹೇಳಬಲ್ಲೇ ಆದ್ರೆ ಇದೆಲ್ಲಾ ಬೇಡ ಎಂದು ಹೇಳಿ ಕೆಂಡವಾಗಿದ್ದರು. ಇದೀಗ ಮತ್ತೆ ಎದುರಿಗೆ ಬಂದಾಗ ಬಹಿರಂಗವಾಗಿಯೇ ವಾರ್ನಿಂಗ್ ಮಾಡಿದ್ದು, ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಹೌದು..ಇಂದು(ಮೇ 24) ವಿಧಾನಸೌಧದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದ ಹೊರ ಬಾಗಿಲಿನಲ್ಲಿ ಸಂಸದ ಡಿಕೆ ಸುರೇಶ್ ಹಾಗೂ ಎಂ.ಬಿ ಪಾಟೀಲ್ ಮುಖಾಮುಖಿಯಾಗಿದ್ದು, ಈ ವೇಳೆ ಡಿಕೆ ಸುರೇಶ್ ಅವರು ಎಂ.ಬಿ ಪಾಟೀಲ್ಗೆ ಗುರಾಯಿಸಿಕೊಂಡು ಸ್ವಲ್ಪ ಬಿಗಿಯಾಗಿರಲಿ ಎಂದು ಬಹಿರಂಗವಾಗಿಯೇ ಎಲ್ಲರ ಮುಂದೆ ವಾರ್ನ್ ಮಾಡಿದ್ದಾರೆ. ಬಳಿಕ ಬನ್ನಿ ಚೇಂಬರ್ಗೆ ಹೋಗೋಣ ಎಂದು ಎಂ.ಬಿ ಪಾಟೀಲ್, ಡಿಕೆ ಸುರೇಶ್ ಕೈ ಹಿಡಿದು ಕರೆದುಕೊಂಡು ಹೋಗಲು ಪ್ರಯತ್ನಿಸಿದರು. ಆದ್ರೆ, ಸುರೇಶ್ ಮತ್ತೆ ಗುರಾಯಿಸಿದ್ದಾರೆ. ನಂತರ ಎಂ.ಬಿ ಪಾಟೀಲ್ ಕೈಬಿಟ್ಟು ಆಮೇಲೆ ಮಾತನಾಡುವೆ ಎಂದು ಅಲ್ಲಿಂದ ಮೌನವಾಗಿ ತೆರಳಿದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್(Speaker UT Khader) ಹೆಸರು ಪ್ರಸ್ತಾವನೆ ಮಾಡಿದ್ದಾರೆ. ಸಿಎಂ ಪ್ರಸ್ತಾವವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ (DCM D.K. Shivakumar) ಅನುಮೋದಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಇಂದು ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ನೂತನ ಸಭಾಧ್ಯಕ್ಷರ ಆಯ್ಕೆಗಾಗಿ ಪ್ರಕ್ರಿಯೆಗಳು ನಡೆಯಿತು. ಈ ವೇಳೆ ಸರ್ವಾನುಮತದಿಂದ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ ಮಾಡಲಾಗಿದೆ. ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆಯಾಗುತ್ತಿದ್ದಂತೆ, ಹಂಗಾಮಿ ಸ್ಪೀಕರ್ ಆಗಿದ್ದಂತ ಆರ್ ವಿ ದೇಶಪಾಂಡೆ ಅವರು ತಮ್ಮ ಅಧಿಕಾರವನ್ನು ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ನೂತನ ಸ್ಪೀಕರ್ ಆಗಿ ಆಯ್ಕೆಯಾದಂತ ಯು.ಟಿ ಖಾದರ್ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ವಿವಿಧ ಸದನದ ಸದಸ್ಯರು ಶುಭಾಶಯಗಳನ್ನು ಕೋರಿದರು.