Author: Prajatv Kannada

ಬೆಂಗಳೂರು : ಬೆಂಗಳೂರು ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪುನರ್‌ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಪ್ರಾಮಾಣಿಕವಾಗಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಿದ್ದೆವು. ಶೇ.50ಕ್ಕೂ ಹೆಚ್ಚು ಒತ್ತುವರಿಗಳನ್ನು ಮುಲಾಜಿಲ್ಲದೆ ತೆರವುಗೊಳಿಸಿದ್ದೆವು. ಇದೀಗ ಮತ್ತೆ ಒತ್ತುವರಿ ತೆರವು ಕಾರ್ಯಾಚರಣೆ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದರು.  ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೆಂಗಳೂರು ನಗರದಲ್ಲಿ ಮಳೆಯಿಂದ ಆಗುವ ಹಾನಿ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ನೀರು ನಿಂತ ಕೆಳ ಸೇತುವೆಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರ ನಿರ್ಬಂಧಿಸುವಂತೆ ಸೂಚನೆ ನೀಡಲಾಗಿದೆ. ಜತೆಗೆ ಅವುಗಳನ್ನು ವೈಜ್ಞಾನಿಕವಾಗಿ ಸರಿಪಡಿಸುವಂತೆಯೂ ತಿಳಿಸಲಾಗಿದೆ. ಚರಂಡಿ ಮಾರ್ಗಗಳಲ್ಲಿ ಹೂಳೆತ್ತಿ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ಮಾಡಬೇಕು ಎಂದು ಹೇಳಿದರು.

Read More

ಬೆಂಗಳೂರು: ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯ ನೈಸ್ ರಸ್ತೆಯ ಕಾಚೋಹಳ್ಳಿ ಅಂಡರ್‌ ಪಾಸ್‌ ನಲ್ಲಿ(Underpass Water) ಬೈಕ್ ಸವಾರ ಮೃತಪಟ್ಟಿದ್ದಾರೆ. ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಸವಾರ ಫಕ್ರುದ್ದೀನ್ ಎಂಬವರು ಮೃತಪಟ್ಟಿದ್ದಾರೆ. ಇನ್ನೂ ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಕಾಚೋಹಳ್ಳಿ ಅಂಡರ್‌ಪಾಸ್ ಮೂಲಕ ರಾಮನಗರ ಕಡೆ ಹೋಗುತ್ತಿದ್ದರು. ಇದೇ ವೇಳೆ ಭಾರೀ ಮಳೆ ಬೀಳುತ್ತಿದ್ದರಿಂದ ಅಂಡರ್‌ಪಾಸ್‌ನಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಸ್ಥಳೀಯರು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಮಾರ್ಗ ಮಧ್ಯೆಯೇ ಫಕ್ರುದ್ದೀನ್ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಅಂತಾ ಸಂಚಾರ ಪೊಲೀಸರು ಹೇಳಿದ್ದಾರೆ.

Read More

ಬೆಂಗಳೂರು: ವಿಧಾನಸಭಾ ಕಲಾಪ ಇಂದು ಕೊನೆಗೊಳ್ಳಲಿದ್ದು ಆ ನಂತರ ಇಂದು ಸಂಜೆ 6.30ಕ್ಕೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಸಿಎಂ ಆಗಿ ಸಿದ್ದರಾಮಯ್ಯ(Siddaramaiah), ಡಿಸಿಎಂ ಆಗಿ ಡಿಕೆ ಶಿವಕುಮಾರ್(DK Shivakumar) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಐದು ವರ್ಷ ಪೂರ್ತಿ ಸಿದ್ದರಾಮಯ್ಯರೇ ಸಿಎಂ ಆಗಿರ್ತಾರಾ, ಅಥವಾ ಬದಲಾಗ್ತಾರಾ. ಡಿಸಿಎಂ ಆಗಿರೋ ಡಿಕೆಶಿ ಮುಂದೆ ಸಿಎಂ ಆಗ್ತಾರಾ. ಈ ರೀತಿ ಅನೇಕ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಲೇ ಇದ್ವು. ಆದ್ರೆ, ಸಚಿವ ಎಂ.ಬಿ.ಪಾಟೀಲ್(MB Patil) ಸಿಡಿಸಿರುವ ಬಾಂಬ್, ಪ್ರಚಂಡ ಬಹುಮತ ಪಡೆದು ಅಧಿಕಾರಕ್ಕೆ ಏರಿರೋ ಕಾಂಗ್ರೆಸ್ ಮನೆಯಲ್ಲಿ ಕಂಪನ ಎಬ್ಬಿಸಿದೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ವರುಣ ಅಬ್ಬರಿಸಿದ್ದು ಸಾಲು ಸಾಲು ಅನಾಹುತಗಳು ಸಂಭವಿಸುತ್ತಿವೆ(Karnataka Rain). ಕಳೆದ ಮೂರ್ನಾಲ್ಕು ದಿನದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ಮರ-ವಿದ್ಯುತ್ ಕಂಬಗಳು ಧರೆಗುರುಳುತ್ತಿವೆ. ಮಳೆ ನೀರು ಮನೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿಯಾಗುತ್ತಿದೆ. ಹೊಲ-ಗದ್ದೆ ಕೆರೆಯಂತಾಗಿದೆ

Read More

ಬೆಂಗಳೂರು: ಡಿಸಿಎಂ ಹಾಗೂ 5 ಮಂದಿ ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಕೊನೆಗೂ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದ ಲಕ್ಕಿ ನಿವಾಸವೆಂದು ಅದೇ ನಿವಾಸವನ್ನು ಈಗ ಹಾಲಿ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದ ನಿವಾಸವನ್ನೇ ಪಡೆದ ಡಿ.ಕೆ.ಶಿವಕುಮಾರ್. ಬೆಂಗಳುರಿನ ಗಾಂಧಿ ಭವನ ರಸ್ತೆಯಲ್ಲಿರುವ ಕುಮಾರಕೃಪ ನಿವಾಸ ಪಡೆದುಕೊಂಡ ಡಿಸಿಎಂ ಡಿ.ಕೆ.ಶಿವಕುಮಾರ. ಜ್ಯೋತಿಷಿಗಳ ಸಲಹೆ ಪಡೆದು ಸಿಎಂ ಸಿದ್ದರಾಮಯ್ಯ  ನಿವಾಸವಿದ್ದ ಕುಮಾರಕೃಪಾಗೆ ಶಿಫ್ಟ್ ಆಗಿರುವ ಕನಕಪುರ ಬಂಡೆ. ಅಂದ ಹಾಗೆ ಇನ್ನುಳಿದ ಐವರು ನೂತನ ಸಚಿವರು ರೇಸ್ ವ್ಯೂ ರಸ್ತೆಯಲ್ಲಿರುವ ಸರ್ಕಾರಿ ನಿವಾಸ ಪಡೆದ ಎಂ.ಬಿ ಪಾಟೀಲ್, ಕೆ.ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೆ ಸದಾಶಿವನಗರದ ಸರ್ಕಾರಿ ನಿವಾಸವನ್ನು ಡಾ.ಜಿ ಪರಮೇಶ್ವರ್ ಗೆ ನಿವಾಸ ಹಂಚಿಕೆಯಾಗಿ ನೀಡಲಾಗಿದೆ

Read More

ರಾಜ್ಯದಲ್ಲಿ ಇನ್ನೂ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ. ದೇವರ ಚಿಕ್ಕನಹಳ್ಳಿಯಲ್ಲಿ ಚರಂಡಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಚರಂಡಿಯಲ್ಲಿ ಹರಿದು ಹೋಗುತ್ತಿದ್ದ ನೀರು ಮನೆಗೆ ಬಂದಿದೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳೆಲ್ಲವೂ ಮುಳುಗಿ ಹೋಗಿದೆ. ಸಮಸ್ಯೆಯಾದರೂ ಬಿಬಿಎಂಪಿ ಅಧಿಕಾರಿಗಳು ಬಂದಿಲ್ಲವೆಂದು ಆಕ್ರೋಶ ಹೊರ ಹಾಕಿದರು. ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 24ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ.ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು, ಕರಾವಳಿಯ ದಕ್ಷಿಣ…

Read More

ಬೆಂಗಳೂರು: ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಜಾರಿಗೆ ದಿನಗಣನೆ ಶುರುವಾಗಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ  ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಗೆ ಸಾರಿಗೆ ಇಲಾಖೆ ಸಿದ್ಧತೆ ನಡೆಸುತ್ತಿದೆ. ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಕಲ್ಪಿಸಲು ಸರ್ಕಾರ ಸಿದ್ದತೆ ನಡೆಸಿದ್ದು, ಫ್ರೀ ಬಸ್ ಭಾಗ್ಯಕ್ಕೆ ಕಂಡೀಷನ್ ಹಾಕಿಯೇ ಫ್ರೀ ಬಸ್ ಸೇವೆ ನೀಡಲು ಪ್ಲಾನ್ ಮಾಡಿದೆ. ಶೀಘ್ರದಲ್ಲೇ ಷರತ್ತು ಮತ್ತು ನಿರ್ಬಂಧ ಗಳಿಗ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಆಗಲಿದ್ದು, ಒಂದೆರಡು ದಿನದಲ್ಲಿ ಫ್ರೀ ಬಸ್ ಸ್ಕೀಂ ಮಾರ್ಗಸೂಚಿಯು, ಸರ್ಕಾರದ ಕೈ ಸೇರಲಿದೆ. ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಮಾರ್ಗಸೂಚಿಯ ರೆಡಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದು, ಈ ಯೋಜನೆಯ ಫಲಾನುಭವಿಗಳು, ಐಷಾರಾಮಿ  ಬಸ್ ಗಳಲ್ಲಿ ಫ್ರೀ ಓಡಾಟ  ಮಾಡುವಂತಿಲ್ಲ. ಸರ್ಕಾರಿ ಬಸ್ ನಲ್ಲಿ ಓಡಾಟ ನಡೆಸುವ ಮಹಿಳೆಯರಿಗೆ ಪ್ರತ್ಯೇಕ ಪಾಸ್ ನೀಡಲಾಗುತ್ತದೆ. ಇನ್ನೂ ಉಚಿತ ಪ್ರಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಉಚಿತ ವೆಚ್ಚದ ಬಸ್…

Read More

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿ ಇನ್ನೂ ನಾಲ್ಕು ದಿನ ಕಳೆದಿಲ್ಲ.. ಆಗಲೇ ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ರಂಪಾಟ ಜೋರಾಗಿಬಿಟ್ಟಿದೆ. ಸಿದ್ದರಾಮಯ್ಯನವ್ರು ಐದು ವರ್ಷವೂ ಸಿಎಂ ಆಗಿರ್ತಾರೆ ಎಂಬ ಒಂದೇ ಒಂದು ಹೇಳಿಕೆ, ಡಿ‌.ಕೆ. ಶಿವಕುಮಾರ್ ಆಪ್ತ ಬಣವನ್ನ ರೊಚ್ಚಿಗೆಬ್ಬಿಸಿದೆ. ಕೆಲವರು ಬಹಿರಂಗವಾಗಿಯೇ ತೊಡೆ ತಟ್ಟುತ್ತಿದ್ರೆ, ಇನ್ನೂ ಕೆಲವರು ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ. ಬೂದಿ ಮುಚ್ಚಿದ ಕೆಂಡದಂತಿದ್ದ ಕಾಂಗ್ರೆಸ್ ಸಿಎಂ ಕುರ್ಚಿ ಕಿತ್ತಾಟ, ಈಗ ಹೊತ್ತಿಕೊಂಡಂತೆ ಕಾಣ್ತಿದೆ. ಸಿಎಂ ಕುರ್ಚಿ ಮೇಲೆ ಕಣ್ಣಾಕಿದ್ದ ಡಿ.ಕೆ. ಶಿವಕುಮಾರ್ ಗೆ, ಸಿದ್ದು ಆಪ್ತ ಬಣ ಟಕ್ಕರ್ ಕೊಟ್ಟಿತ್ತು. ಆಗಿನಿಂದ ಇಬ್ಬರ ನಡುವಿನ ಬಣ ಎಸ್ ರಾಜಕೀಯ ತಾರಕಕ್ಕೇರಿಬಿಟ್ಟಿದೆ. ಹೈಕಮಾಂಡ್ ಹಂತದಲ್ಲಿ ಅಧಿಕಾರ ಹಂಚಿಕೆ ಮಾತಾಗಿದೆ. ಎರಡೂವರೆ ವರ್ಷ ಆದ್ಮೇಲೆ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ ಕಾಲರ್ ಎಗರಾಕಿಕೊಂಡು ಮಾತಾಡ್ತಿದ್ದ ಡಿಕೆಶಿ ಆಪ್ತರಿಗೆ, ಸಿದ್ದು ಟೀಂ ಸಿಡಿಲಿನಂತ ಮಾತಿನೇಟು ಕೊಟ್ಟಿದೆ. ಐದು ವರ್ಷವೂ ಸಿದ್ದರಾಮಯ್ಯನವ್ರೇ ಸಿಎಂ ಆಗಿರ್ತಾರೆ. ಹೈಕಮಾಂಡ್ ನಾಯಕರೂ ನಮಗೆ ಇದನ್ನೇ ಹೇಳಿದ್ದಾರೆ ಅಂತಾ…

Read More

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಅನುಭವಿಸಿದ ಬಳಿಕ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರಾಗ್ತಾರೆ ಎಂಬ ಚರ್ಚೆ ಜೋರಾಗಿದೆ. ಅದಲ್ಲದೇ ವಿಪಕ್ಷ ನಾಯಕನ ಸ್ಥಾನ ಪಡೆಯಲು ಕರ್ನಾಟಕ ಬಿಜೆಪಿಯಲ್ಲಿ ಭಾರೀ ಪೈಪೋಟಿ ನಡೆಯುತ್ತಿರುವುದು ಕಂಡುಬಂದಿದೆ. ಈಗಾಗಲೇ ಬಿಜೆಪಿಯ ರಾಷ್ಟ್ರೀಯ ನಾಯಕರು ಬಿಜೆಪಿ ಶಾಸಕರ ಜೊತೆ ಅನೌಪಚಾರಿಕ ಸಭೆ ನಡೆಸಿ ಅಭಿಪ್ರಾಯವನ್ನು ಕಲೆಹಾಕುತ್ತಿದ್ದಾರೆ. ಆದರೆ, ಅಂತಿಮ ನಿರ್ಧಾರವನ್ನು ಜುಲೈನಲ್ಲಿ ನಡೆಯುವ ಬಜೆಟ್ ಅಧಿವೇಶನಕ್ಕೂ ಮುನ್ನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಆದರೆ, ವಿಪಕ್ಷ ನಾಯಕರ ಸ್ಥಾನಕ್ಕೆ ಪೈಪೋಟಿ ಹೆಚ್ಚಿರುವುದು ಬಿಜೆಪಿ ವರಿಷ್ಠರ ತಲೆನೋವಿಗೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಆರ್ ಅಶೋಕ್, ಮಾಜಿ ಸಚಿವ ಸುನೀಲ್ ಕುಮಾರ್ ಹಾಗೂ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕ ಸ್ಥಾನದ ರೇಸ್ನಲ್ಲಿ ಮುಂದೆ ಇದ್ದಾರೆ. ವಿಪಕ್ಷ ನಾಯಕನ ಸ್ಥಾನ…

Read More

ಗದಗ: ಕಪ್ಪತಗುಡ್ಡ ವನ್ಯಜೀವಿಧಾಮ ಪ್ರದೇಶದ ಅಂಚಿನಲ್ಲಿರುವ ಶೆಟ್ಟಿಕೆರೆ ಪ್ರದೇಶದಲ್ಲಿ ನಕ್ಷತ್ರಾಕಾರದ ಕೂರ್ಮ ಪ್ರತ್ಯಕ್ಷ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೆರೆ ಪ್ರದೇಶ ವ್ಯಾಪ್ತಿಯಲ್ಲಿ ಟೆಸ್ಟುಡಿನಿಡೆ ಕುಟುಂಬಕ್ಕೆ ಸೇರಿದ ನಕ್ಷತ್ರ ಆಮೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ಪ್ರತ್ಯಕ್ಷವಾಗಿರೋ ವಿಶೇಷ ತಳಿಯ ಆಮೆ ಇದರ ವೈಜ್ಞಾನಿಕ ಹೆಸರು ಜಿಯೋಚಲೋನ್ ಎಲಗನ್ಸ್  ಅವಾಸ ಸ್ಥಾನ ನಾಶ ಮತ್ತು ಕಳ್ಳಬೇಟೆಯಿಂದಾಗಿ ಅಳಿವಿನಂಚಿನಲ್ಲಿರುವ ಆಮೆ 10 ಇಂಚಿನವರೆಗೂ ಉದ್ದದಷ್ಟು ಬೆಳೆಯುವ ನಕ್ಷತ್ರ ಆಮೆ ದೇಹದ ಮೇಲೆ ನಕ್ಷತ್ರ ಆಕಾರದ ಗಾಢವಾದ ಬಣ್ಣದ ವಿನ್ಯಾಸ. ಇವುಗಳನ್ನ ಮನೆಯಲ್ಲಿ ಸಾಕಿದರೆ ಮನೆಯಲ್ಲಿ ಸಂಪತ್ತು ವೃದ್ಧಿ ಎಂಬ ನಂಬಿಕೆ.ಆದ್ರೆ ಮನೆಯಲ್ಲಿ ಸಾಕಿದರೆ ಬಹಳಷ್ಟು ದಿನ ಇದು ಬದಕೋದಿಲ್ಲ.ಕೆಲವರು ಚಿಪ್ಪು ಮತ್ತು ಅದರ ಮಾಂಸಕ್ಕಾಗಿ ಕಳ್ಳಭೇಟೆಯಾಡ್ತಾರೆ.ಹೀಗಾಗಿ ಈ ಪ್ರಾಣಿ ಅಳಿವಿನಂಚಿನಲ್ಲಿರುವುದು ಎಂಬ ಅರಣ್ಯ ಇಲಾಖೆಯ ಮಾಹಿತಿ ಇಂದು ವಿಶ್ವ ಆಮೆ ದಿನ ಹೀಗಾಗಿ ಅದರ ಬಗ್ಗೆ ಜಾಗೃತಿ ಮೂಡಿಸಿ ರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರದು ಎಂಬ ಅಭಿಪ್ರಾಯ ಅರಣ್ಯ ಇಲಾಖೆಯದು

Read More

ಬೆಂಗಳೂರು: ಇತ್ತೀಚೆಗೆ ಸಚಿವರುಗಳ ಪ್ರಮಾಣವಚನ ಟೈಮಲ್ಲಿ ಮಧು ಬಂಗಾರಪ್ಪ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರ ಹೊರಹಾಕಿದ್ದರು ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ದಂಪತಿ ಕೂಡ ಬೇಸರಪಟ್ಟಿದ್ದರು. ಹಾಗಾಗಿ ಇಂದು  ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್​ಕುಮಾರ್ ನಿವಾಸಕ್ಕೆ ಸುರ್ಜೇವಾಲ ಭೇಟಿ ನೀಡಿದ್ದಾರೆ. ಮಧು ಬಂಗಾರಪ್ಪಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ದಂಪತಿ ಬೇಸರ ವ್ಯಕ್ತಪಡಿಸಿದ್ದರು. ಬೇಸರಗೊಂಡಿದ್ದ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿ ಮಾಡಿ ಸುರ್ಜೇವಾಲ ಮಾತುಕತೆ ನಡೆಸಿದ್ದಾರೆ. ಪಕ್ಷಕ್ಕೆ ಪ್ರಚಾರ ಸಮಯದಲ್ಲಿ ಕೈಗೂಡಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Read More