ಡೆಲ್ಲಿ: 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 67ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ಆರಂಭವಾದ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಲಲಿತ್ ಯಾದವ್ ಹಾಗೂ ಚೇತನ್ ಸಕಾರಿಯಾ ತಂಡ ಕೂಡಿಕೊಂಡಿದ್ದಾರೆ. ಎರಡು ಬಲಿಷ್ಠ ಸ್ಪಿನ್ ಪಡೆಗಳ ನಡುವೆ ಪೈಪೋಟಿ ಏರ್ಪಡುವ ನಿರೀಕ್ಷೆ ಇದ್ದು, ಡೆಲ್ಲಿಗೆ ಹೋಲಿಸಿದರೆ ಚೆನ್ನೈನ ಬ್ಯಾಟಿಂಗ್ ಸದೃಢವಾಗಿದೆ. ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯಾವುದೇ ಅಡೆತಡೆಗಳಿಲ್ಲದೆ ಗೆಲ್ಲಲು ಚೆನ್ನೈ ಸೂಪರ್ ಕಿಂಗ್ಸ್ ಎದುರು ನೋಡುತ್ತಿದೆ. ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಒಟ್ಟು 28 ಬಾರಿ ಮುಖಾಮುಖಿಯಾಗಿದ್ದು,…
Author: Prajatv Kannada
ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್ ಟಿ ಆರ್ ಗೆ ಇಂದು ಬರ್ತಡೇ ಸಂಭ್ರಮ. ಈ ಹಿನ್ನೆಲೆಯಲ್ಲಿ ಜೂನಿಯರ್ ಎನ್ ಟಿ ಆರ್ ನಟನೆಯ ಕೊರಟಾಲ ಶಿವ ನಿರ್ದೇಶನದ ದೇವರ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಜ್ಯೂನಿಯರ್ ಎನ್.ಟಿ.ಆರ್ ಕಪ್ಪು ಬಣ್ಣದ ಲುಂಗಿ ಮತ್ತು ಶರ್ಟ್ ತೊಟ್ಟು, ಸಮುದ್ರದ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುತ್ತಿದ್ದಾರೆ. ಕಳೆಗೆ ಹೆಣಗಳ ರಾಶಿ ಇದೆ. ಪಕ್ಕದಲ್ಲಿ ಮುರಿದು ಬಿದ್ದ ದೋಣಿಯೊಂದನ್ನೂ ಕಾಣಬಹುದು. ಈ ಪೋಸ್ಟರ್ ಈಗಾಗಲೇ ಜ್ಯೂನಿಯರ್ ಎನ್.ಟಿ.ಆರ್ ಅವರ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ತೀವ್ರ ಕುತೂಹಲ ಮೂಡಿಸಿದ್ದು, ಅವರ ಮಾಸ್ ಲುಕ್ ಕುರಿತು ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ‘ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಬಾಲಿವುಡ್ನ ಖ್ಯಾತ ನಟ ಸೈಫ್ ಅಲಿ ಖಾನ್ ಸಹ ಖಳನಟನಾಗಿ ಈ ಚಿತ್ರದಲ್ಲಿ…
ನಿಮಗೆ ನೀವೇ ನೀಡಬಹುದಾದ ಅತ್ಯುತ್ತಮ ಔಷಧಿ ಎಂದರೆ ಆರೋಗ್ಯಕರ ಆಹಾರ. ಆಹಾರವೇ ಔಷಧಿಯಾಗಲು ಸಾಧ್ಯವಿಲ್ಲ, ಆದರೆ ಇದು ಖಂಡಿತವಾಗಿಯೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಸೋಂಕುಗಳು ಮತ್ತು ರೋಗಗಳ ವಿರುದ್ಧ ಹೋರಾಡುವ ನಿಮ್ಮ ದೇಹದ ಸಾಮರ್ಥ್ಯವನ್ನು ಉತ್ತಮಗೊಳಿಸುತ್ತದೆ. ಡ್ರೈ ಫ್ರೂಟ್ಸ್: ಇದರಲ್ಲಿರುವ ವಿಟಮಿನ್ ಇ ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ, ಇದು ಸೋಂಕುಗಳು ನಿಮ್ಮ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತದೆ. ಡ್ರೈ ಫ್ರೂಟ್ಸ್: ಇದರಲ್ಲಿರುವ ವಿಟಮಿನ್ ಇ ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ, ಇದು ಸೋಂಕುಗಳು ನಿಮ್ಮ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತದೆ. ಮೊಟ್ಟೆ: ಇದರಲ್ಲಿ ವಿಟಮಿನ್ ಡಿ ಅಗತ್ಯ ಪ್ರಮಾಣದಲ್ಲಿ ಇರುತ್ತದೆ. ಇದನ್ನು ಸೇವಿಸುವುದರಿಂದ ಶ್ವಾಸಕೋಶದ ಸಮಸ್ಯೆಗಳು ಬರುವುದಿಲ್ಲ. ಅಲ್ಲದೇ, ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ದೊಡ್ಡ ಮೆಣಸು: ಈ ದೊಡ್ಡ ಮೆಣಸಿನಲ್ಲಿ ಸಹ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದನ್ನು ವಿವಿಧ ರೀತಿಯ ಆಹಾರಗಳಲ್ಲಿ ಬಳಸುವುದು ಸಹಾಯ ಮಾಡುತ್ತದೆ. ಡಾರ್ಕ್ ಚಾಕೊಲೇಟ್: ಥಿಯೋಬ್ರೋಮಿನ್ ಎಂಬ ಆ್ಯಂಟಿ ಆಕ್ಸಿಡೆಂಟ್ ಅನ್ನು ಈ ಡಾರ್ಕ್ ಚಾಕೊಲೇಟ್ ಹೊಂದಿರುತ್ತದೆ, ಇದು…
ದೆಹಲಿ: ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉಕ್ರೇನಿಯಾ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವಿನ ದ್ವಿಪಕ್ಷೀಯ ಸಭೆಯ ಸಾಧ್ಯತೆಯನ್ನು ಭಾರತ ಮತ್ತು ಉಕ್ರೇನ್‌ನ ಹಿರಿಯ ರಾಜತಾಂತ್ರಿಕರು ಎದುರು ನೋಡುತ್ತಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಒಂದು ವೇಳೆ ಸಭೆ ನಡೆದರೆ, ಕಳೆದ ವರ್ಷ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನಂತರ ಉಭಯ ನಾಯಕರ ನಡುವಿನ ಮೊದಲ ಸಭೆ ಇದಾಗಲಿದೆ. ಮೂರು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಜಿ7 ಶೃಂಗಸಭೆಯಲ್ಲಿ ಮೂರು ಸೆಷನ್‌ಗಳಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೇ 19ರಂದು ಜಪಾನ್ ತಲುಪಿದ್ದಾರೆ. ಅಲ್ಲಿಂದ ಅವರು ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ಹೋಗಲಿದ್ದಾರೆ. ಇಂದು ಮೋದಿ ಮತ್ತು ಝೆಲೆನ್ಸ್ಕಿ ಭೇಟಿಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದು ಅದರ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭಿಸಿಲ್ಲ. ಪ್ರಸ್ತಾಪವನ್ನು ಅಂತಿಮಗೊಳಿಸಲು ಎರಡೂ ಕಡೆಯವರು ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ವರದಿ ಹೇಳಿದೆ. ಪ್ರಬಲ ಗುಂಪಿನ ಪ್ರಸ್ತುತ ಅಧ್ಯಕ್ಷ ಜಪಾನ್‌ನ ಆಹ್ವಾನದ ಮೇರಿಗೆ ಉಕ್ರೇನಿಯನ್…
ಟೋಕಿಯೊ: ಭಾರತವು ಪಾಕಿಸ್ತಾನದೊಂದಿಗೆ (Pakistan) ಸಾಮಾನ್ಯ ಮತ್ತು ನೆರೆಹೊರೆಯ ಸಂಬಂಧವನ್ನು ಬಯಸುತ್ತದೆ ಆದರೆ ಭಯೋತ್ಪಾದನೆಯಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಇಸ್ಲಾಮಾಬಾದ್‌ನ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ನಿಕ್ಕಿ ಏಷ್ಯಾಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ದ್ವಿಪಕ್ಷೀಯ ಬಾಂಧವ್ಯವನ್ನು ಬಯಸುತ್ತದೆ ಎಂದು ಹೇಳಿದ ಪ್ರಧಾನಿ ಮೋದಿ, ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಅವರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ ಎಂದಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲದ ಬಗ್ಗೆ ಭಾರತವು ತನ್ನ ಕಳವಳವನ್ನು ಪದೇ ಪದೇ ವ್ಯಕ್ತಪಡಿಸುತ್ತಿದೆ . ಅದೇ ವೇಳೆ ಭಯೋತ್ಪಾದನೆ ಮತ್ತು ಮಾತುಕತೆಗಳು ಒಟ್ಟಿಗೆ ಹೋಗಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಈ ತಿಂಗಳ ಆರಂಭದಲ್ಲಿ ಗೋವಾದಲ್ಲಿ ನಡೆದ ಎಸ್‌ಸಿಒ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿ ಸಿದ್ದರು. ಆದರೆ ವಿದೇಶಾಂಗ ಸಚಿವ ಎಸ್…
ಬೆಂಗಳೂರು: ನಮ್ಮ ತಂದೆ ಡಿಸಿಎಂ ಆಗಿದ್ದು ತುಂಬಾ ಖುಷಿಯಾಗುತ್ತೆ ಹಾಗೆ ಒಂದಲ್ಲ ಒಂದು ದಿನ ನಮ್ಮ ತಂದೆ ರಾಜ್ಯದ ಸಿಎಂ ಆಗೇ ಆಗುತ್ತಾರೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಹೇಳಿದ್ದಾರೆ. ನಮ್ಮ ತಂದೆ ಡಿಕೆಶಿ ಮುಖ್ಯಮಂತ್ರಿ ಆಗುವುದನ್ನು ನೋಡುತ್ತೇವೆ ಎಂದರು. ಇದೇ ವೇಳೆ ಮಾತನಾಡಿದ ಶಿವಕುಮಾರ್ ಪತ್ನಿ ಉಷಾ, ಯಾಕೋ ಸಿಎಂ ಸ್ಥಾನ ಸಿಗಲಿಲ್ಲ, ದೇವರ ಆಶೀರ್ವಾದ ಇದ್ರೆ ಆಗೇ ಆಗ್ತಾರೆ ಬೇಗ ಆ ದಿನಗಳು ಬರಲಿ ನೋಡೋಣ ಕಾಯುತ್ತೇವೆ ಎಂದರು.
ಬೆಂಗಳೂರು: ಉಪ ಮುಖ್ಯಮಂತ್ರಿಯಾಗಿ ಅಜ್ಜಯ್ಯ ಹೆಸರಿನಲ್ಲಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ ಅವರು ವಿಧಾನಸೌಧದಲ್ಲಿ ನಡೆಯಲಿರುವಂತ ಮೊದಲ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ ವೇಳೆಯಲ್ಲಿ, ವಿಧಾನಸೌಧದ ಮೆಟ್ಟಿಲಿಗೆ ದೀರ್ಘ ದಂಡ ನಮಸ್ಕಾರ ಮಾಡಿ, ಅಡ್ಡಬಿದ್ದು ನಮಿಸಿದರು. ಬೆಂಗಳೂರಿನ ಕಂಠೀರವ ಕ್ರೀಢಾಂಗಣದಲ್ಲಿ ಇಂದು ಕಾಂಗ್ರೆಸ್ ನೂತನ ಸರ್ಕಾರದ ಸಿಎಂ, ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಇವರ ನಂತ್ರ 8 ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನವನ್ನು ಸ್ವೀಕರಿಸಿದರು. ಕಂಠೀರವ ಕ್ರೀಢಾಂಗಣದಿಂದ ವಿಧಾನಸೌಧಕ್ಕೆ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಆಗಮಿಸಿದರು. ಮೊದಲ ಬಾರಿಗೆ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಂತ್ರ ವಿಧಾನಸೌಧಕ್ಕೆ ಆಗಮಿಸಿದ ಅವರು, ವಿಧಾನಸೌಧದದ ಮೆಟ್ಟಿಲಿಗೆ ಅಡ್ಡಬಿದ್ದು ನಮಿಸಿ ಒಳಗೆ ತೆರಳಿದರು. ಇನ್ನೂ ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, 5 ಗ್ಯಾರಂಟಿ ಭರವಸೆಗಳನ್ನು ಜಾರಿಗೊಳಿಸಲಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಬ್ಬರದ ಭಾಷಣ ಮಾಡಿದ್ದಾರೆ. ಕರ್ನಾಟಕದ ಜನರಿಗೆ ನನ್ನ ಮನಃಪೂರ್ವಕವಾಗಿ ಅಭಿನಂದನೆಗಳು. ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಕ್ಕೆ ಅಭಿನಂದನೆಗಳು. ಭಾರತ್ ಜೋಡೋ ಯಾತ್ರೆಯಿಂದ ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ನೀಡಿತ್ತು. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವನಿಧಿ ಗ್ಯಾರಂಟಿಗಳನ್ನು ನಾವು ನೀಡಿದ್ದೆವು, ಎಲ್ಲವನ್ನೂ ಈಡೇರಿಸುತ್ತೇವೆ. ಕೆಲವೇ ಹೊತ್ತಿನಲ್ಲಿ ನೂತನ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಗ್ಯಾರಂಟಿಗಳು ಅನುಮೋದನೆ ಆಗಲಿದೆ. ಜನರು ಪ್ರೀತಿ, ಶಕ್ತಿ ಕಾಂಗ್ರೆಸ್ಗೆ ನೀಡಿದ್ದನ್ನು ಮರೆಯಲು ಸಾಧ್ಯವಿಲ್ಲ ಎಂದರು. ಗೃಹಲಕ್ಷ್ಮಿ ಯೋಜನೆ – ಪ್ರತಿತಿಂಗಳು ಮಹಿಳೆಯರಿಗೆ 2 ಸಾವಿರ ರೂ. ಗೃಹಜ್ಯೋತಿ- 200 ಯುನಿಟ್ ವಿದ್ಯುತ್ ಉಚಿತ ಅನ್ನಭಾಗ್ಯ-10 ಕೆಜಿ ಅಕ್ಕಿ ಉಚಿತ ಶಕ್ತಿ-ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ ಯುವನಿಧಿ- ಪದವಿಧರರಿಗೆ 3,000 ರೂ. ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ.…
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವಂತ 5 ಭರವಸೆ ಗ್ಯಾರಂಟಿಗಳನ್ನು ಇಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲೇ ಜಾರಿಗೊಳಿಸುವುದಾಗಿ ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K Shivakumar) ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ (Deputy Chief Minister), 8 ಮಂದಿ ಶಾಸಕರು ಸಚಿವರಾಗಿ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 8 ಮಂದಿ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ಮಾತನಾಡಿದ ನೂತನ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕ ಜಯ, 7 ಕೋಟಿ ಕನ್ನಡಿಗರಿಗೆ ಸಿಕ್ಕ ಜಯ, ಜನರ ಆಶೀರ್ವಾದದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ,…
ಬೆಂಗಳೂರು: ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಅಜ್ಜಯನ ಹೆಸರಿನಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ, 6 ಮಂದಿ ಸಚಿವರಾಗಿ ಇಬ್ಬರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಿಎಂ, ಡಿಸಿಎಂ ಪ್ರಮಾಣವಚನದ ಬಳಿಕ ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಂತ ಡಾ.ಜಿ ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರ ಬಳಿಕ ಕೆಹೆಚ್ ಮುನಿಯಪ್ಪ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಆ ನಂತರ ಕೆಜೆ ಜಾರ್ಜ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ರೆ, ಶಾಸಕ ಎಂ.ಬಿ ಪಾಟೀಲ್ ಅವರು ಕೂಡ ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಶಾಸಕ ಸತೀಶ್ ಜಾರಕಿಹೊಳಿ ಅವರು ಸಂಪುಟ ದರ್ಜೆಯ ಸಚಿವರಾಗಿ ಬುದ್ಧ ಬಸವನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಶಾಸಕ ಪ್ರಿಯಾಂಕ್ ಖರ್ಗೆ ಅವರು ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಜಯನಗರ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕರಾಗಿ, ಬಿಟಿಎಂ…