ಬೆಳಗಾವಿ: ಮಾರಿಹಾಳ ಗ್ರಾಮದ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು. ಬೆಳಗಾವಿ (Belagavi) ಜಿಲ್ಲೆ ಮಾರಿಹಾಳ ಸರ್ಕಾರಿ ಕನ್ನಡ ಶಾಲಾ ಕೊಠಡಿಯ ಎದುರು ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮಹಾಂತೇಶ ರುದ್ರಪ್ಪ ಕರಲಿಂಗನವರ್ (23) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು. ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಹಳೆಯ ದ್ವೇಷದ ಹಿನ್ನಲೆ ಯುವಕನನ್ನು ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆಯಾದರು. ಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಮುಂಜಾನೆಯ ಹೊತ್ತನಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನ ಮೃತದೇಹ ಕಂಡು ಗ್ರಾಮಸ್ಥರು ಒಂದು ಕ್ಷಣ ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್‍ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಕಾರ್ಯಕ್ಕೆ ಬಲೆ ಬೀಸಿದ್ದು ಮಾರೀಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: Prajatv Kannada
ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಕಾರ್ಯಕರ್ತರಲ್ಲಿ, ನಾಯಕರು ಫುಲ್ ಖುಷ್ ಆಗಿದ್ದಾರೆ. ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರಿಂದ ಎಲ್ಲೆಡೆ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಇದರ ಮಧ್ಯೆ ಕಾಂಗ್ರೆಸ್ ಗೆದ್ದ ಖುಷಿಗೆ ಕಾರ್ಯಕರ್ತರೊಬ್ಬರು ಜನರೊಗೆ ಹೋಳಿಗೆ ಹಂಚಿ ಹರ್ಷ ವ್ಯಕ್ತಪಡಿಸಿದ್ದಾರೆ. ಹೌದು.. ಮೈಸೂರಿನ ಇಂದಿರಾ ಕ್ಯಾಂಟೀನ್ನಲ್ಲಿ ಹೋಳಿಗೆ ವಿತರಣೆ ಮಾಡಲಾಗಿದೆ. ಮೈಸೂರು ಅರಮನೆ ಬಳಿಯ ಇಂದಿರಾ ಕ್ಯಾಂಟಿನ್ ಊಟ ಮಾಡಲು ಬಂದವರಿಗೆ ಕಾಂಗ್ರೆಸ್ ಕಾರ್ಯಕರ್ತ ಬ್ಯಾಂಕ್ ಬಸಪ್ಪ ಅವರು ಹೋಳಿಗೆ ವಿತರಣೆ ಮಾಡಿ ಗಮನಸೆಳೆದರು.
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರು ಪ್ರಭಾವಿ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಹೌದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಸತತ ಮೂರು ಬಾರಿ ಗೆದ್ದು ಶಾಸಕರಾಗಿರೋದ್ರಿಂದ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದ್ದು.. ಹಾಗೆಯೇ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ ಎಂ ಸಿ ಸುಧಾಕರ್ ಗೆ ಸಹ ಸಚಿವ ಸ್ಥಾನ ಕೊಡಲೇಬೇಕು ಎಂದು ಅವರ ಅಭಿಮಾನಿಗಳು ಹಾಗೂ ಸ್ಥಳೀಯ ಮುಖಂಡರು ಒತ್ತಾಯಿಸಿದ್ದಾರೆ. ಇಂದು ಸಂಜೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಇವರಿಬ್ಬರಿಗೆ ಸಚಿವ ಸ್ಥಾನ ಸಿಗುವ ಬಗ್ಗೆ ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಬೆಂಗಳೂರು: ಡಿಕೆ ಶಿವಕುಮಾರ್ ಅವರು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ.(Karnataka Politics) ಅಣ್ಣ ಮುಖ್ಯಮಂತ್ರಿ ಆಗಲು ಸಾಕಷ್ಟು ಶ್ರಮ ಹಾಕಿದರು. ಆದರೆ ಉಪಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ. ಅಣ್ಣ ಮುಖ್ಯಮಂತ್ರಿ ಆಗಿದ್ದರೆ ಇನ್ನೂ ಸಂತೋಷವಾಗುತ್ತಿತ್ತು ಈಗಲೂ ಖುಷಿ ಇದೆ. ಸಣ್ಣ ವಯಸ್ಸಿನಿಂದಲೂ ಸಾಕಷ್ಟು ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಹೋರಾಟದಿಂದಲೇ ಮೇಲೆ ಬಂದಿದ್ದಾರೆ. ಅವರು ಫ್ಯಾಮಿಲಿ ಮತ್ತು ವೈಯಕ್ತಿಕ ಜೀವನಕ್ಕೆ ಸಮಯವನ್ನು ಕೊಟ್ಟಿಲ್ಲ. ಅವರು ಜೈಲಿಗೆ ಹೋದ ಘಟನೆಯನ್ನು ಮರೆಯಲು ಆಗಲ್ಲ. ಆದರೂ ಛಲ ಬಿಡದೆ ಹೋರಾಟವನ್ನು ಮಾಡಿ ಈ ಹಂತಕ್ಕೆ ಬಂದಿದ್ದಾರೆ ಎಂದು ಡಿಕೆ ಶಿವಕುಮಾರ್ ಬಗ್ಗೆ ಸಹೋದರಿ ಮಂಜುಳಾ ಬಾವುಕರಾಗಿ ಹೇಳಿದ್ದಾರೆ.
ಚಿತ್ರದುರ್ಗ: ಸಿಎಂ ಆಯ್ಕೆ ಬಿಡಿಸಲಾಗದ ಕಗ್ಗಂಟಾಗಿದ್ದು ಇಲ್ಲಿ ನಾನಾ ನೀನಾ ಎಂಬ ವಿಚಾರ ಭುಗಿಲೆದ್ದಿದ್ದು ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಹೈಕಮಾಂಡ್ಗೆ ಸಂಪುಟ ರಚನೆ ಮಾಡುವ ಸವಾಲ್ ಎದುರಾಗಿದೆ. ಸಚಿವ ಸ್ಥಾನಕ್ಕಾಗಿ ಭರ್ಜರಿ ಸ್ಪರ್ಧೆ ನಡೆಸುತ್ತಿರುವ ಪ್ರತಿಯೊಬ್ಬ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳಿದ್ದಾರೆ. ಜಿಲ್ಲೆಯ 6ಕ್ಷೇತ್ರಗಳಲ್ಲಿ 5ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆ ತಮಗೆ ಸಚಿವ ಸ್ಥಾನ ನೀಡುವಂತೆ ಶಾಸಕರು ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ. ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹಿರಿಯೂರು ಶಾಸಕ ಡಿ.ಸುಧಾಕರ್, ಚಿತ್ರದುರ್ಗ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ದೆಹಲಿಗೆ ಹೋಗಿದ್ದಾರೆ.
ಮಂಗಳೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಹಲ್ಲೆ ನಡೆಸಲು ಪೊಲೀಸರ ಮೇಲೆ ಒತ್ತಡ ಹಾಕಿದ ವಿಚಾರವಾಗಿ ರಾಜಕೀಯ ಕೆಸರೆರೆಚಾಟ ಶರುವಾಗಿದೆ. ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ದೌರ್ಜನ್ಯ ನಡೆದಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರೇ, ಬಿಜೆಪಿ ನಾಯಕರ ಒತ್ತಡದಿಂದಲೇ ಪೊಲೀಸರು ದೌರ್ಜನ್ಯವೆಸಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಈ ನಡುವೆ ಹಿಂದೂ ಕಾರ್ಯಕರ್ತರ ಮೇಲಿನ ಪೊಲೀಸ್ ದಾಳಿಯು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮುಂದಿನ 5 ವರ್ಷ ಹಿಂದೂಗಳ ಮೇಲೆ ಏನು ಮಾಡುತ್ತೆ ಅನ್ನೋದರ ಸ್ಯಾಂಪಲ್ ಎಂದ ಕಲ್ಲಡ್ಕ ಪ್ರಭಾಕರ್ ಭಟ್. ನಾಳೆಯೇ ಸಿದ್ದರಾಮಯ್ಯನವರು ಸಿಎಂ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಕಟೀಲ್ ಲೋಕಸಭಾ ಸದಸ್ಯನಾಗಿ ಕಾರ್ಯಕರ್ತರಿಗೆ ಸಾಯುವ ಹಾಗೆ ಹೊಡಿಸ್ತಾರೆ ಅಂದ್ರೆ ಅವರಿಗೆ ಮಾನವೀಯತೆ ಇದ್ಯಾ? ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮುಂದಿನ 5 ವರ್ಷ ಹಿಂದೂಗಳ ಮೇಲೆ ಏನು ಮಾಡುತ್ತೆ ಎನ್ನುವುದಕ್ಕೆ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಹಲ್ಲೆ ಮಾಡಿರುವ ಈ ಘಟನೆಯೆ ಒಂದು ಸಾಕ್ಷಿ…
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ್ದೇ ತಡ, ರಾಷ್ಟ್ರ ರಾಜಕಾರಣದ ಸಮೀಕರಣವೇ ಬದಲಾಗುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿನ ಗೆಲುವು ಮುಂಬರುವ ಲೋಕಸಭಾ ಚುನಾವಣೆಗೂ ಸಹಕಾರಿಯಾಗಬೇಕು ಅನ್ನೋ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ತಂತ್ರಗಾರಿಕೆ ರೂಪಿಸುತ್ತಿದೆ. ಇದಕ್ಕಾಗಿಯೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಮಾಣ ವಚನ ಸಮಾರಂಭಕ್ಕೆ ದೇಶಾದ್ಯಂತ ಇರುವ ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗುತ್ತಿದೆ. ಬಿಜೆಪಿಯೇತರ ಸರ್ಕಾರ ಇರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಂದು ಕಡೆ ಸೇರಿಸಿ ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ ಮಾಡಲು ಕಾಂಗ್ರೆಸ್ ಮುಂದಾಗಿದೆ. 2024ರಲ್ಲಿ ದಿಲ್ಲಿ ಗದ್ದುಗೆ ಏರಲು ಬೆಂಗಳೂರಿನಿಂದಲೇ ಹೋರಾಟದ ಪಾಂಚಜನ್ಯ ಮೊಳಗಿಸಲು ನಿರ್ಧರಿಸಿದೆ. ಆದ್ರೆ, ಇದು ಅಷ್ಟು ಸುಲಭವೇ? ವಿಪಕ್ಷಗಳ ನಾಯಕನಾಗಲು ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಸಿಗುತ್ತಾ? ಈ ಕುರಿತ ಸಮಗ್ರ ವಿಶ್ಲೇಷಣೆ ಇಲ್ಲಿದೆ: ವಿಪಕ್ಷಗಳ ನಾಯಕನಾಗುವ ಕಾಂಗ್ರೆಸ್ ಕನಸು ಈಡೇರುತ್ತಾ ದೇಶದಲ್ಲಿ ಬಿಜೆಪಿಯೇತರ ವಿರೋಧ ಪಕ್ಷಗಳ ಪೈಕಿ ಪ್ರಬಲ ರಾಷ್ಟ್ರೀಯ ಪಕ್ಷವಾಗಿ ನಿಂತಿರೋದು ಕಾಂಗ್ರೆಸ್. ಇನ್ನುಳಿದ ಬಹುತೇಕ ಎಲ್ಲಾ ಪಕ್ಷಗಳು ಆಯಾ ರಾಜ್ಯಗಳಿಗೆ ಸೀಮಿತ. ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಸಾರಥ್ಯದ ಟಿಎಂಸಿ, ತಮಿಳುನಾಡಿನಲ್ಲಿ ಎಂ. ಕೆ. ಸ್ಟಾಲಿನ್ ನಾಯಕತ್ವದ ಡಿಎಂಕೆ, ಬಿಹಾರದಲ್ಲಿ ಜೆಡಿಯು ನಾಯಕ ಸಿಎಂ ನಿತೀಶ್ ಕುಮಾರ್, ತೆಲಂಗಾಣದಲ್ಲಿ ಕೆಸಿಆರ್.. ಹೀಗೆ ಹಲವು ರಾಜ್ಯಗಳಲ್ಲಿ ಆಯಾ ಪ್ರದೇಶಕ್ಕೆ ಸೀಮಿತವಾದ ನಾಯಕರು ಹಾಗೂ ಪಕ್ಷಗಳಿವೆ. ಈ ಎಲ್ಲಾ ಪಕ್ಷಗಳು ಬಿಜೆಪಿಗೆ ಪ್ರಬಲ ಪೈಪೋಟಿಯನ್ನೇನೋ ನೀಡುತ್ತಿವೆ. ಆದ್ರೆ, ಒಗ್ಗಟ್ಟು ಕಷ್ಟ ಕಷ್ಟ ಎನ್ನುವಂತಾಗಿದೆ. ಇದೀಗ ಕರ್ನಾಟಕದ ನೂತನ ಸಿಎಂ ಹಾಗೂ ಡಿಸಿಎಂ ಪಟ್ಟಾಭಿಷೇಕದ ವೇಳೆ ಈ ಎಲ್ಲಾ ನಾಯಕರನ್ನೂ ಒಗ್ಗೂಡಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಈ ಮೂಲಕ ಬಿಜೆಪಿ ವಿರುದ್ಧ ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ ಮಾಡಿ, ಪರೋಕ್ಷವಾಗಿ ವಿಪಕ್ಷಗಳ ನಾಯಕ ನಾನು ಎಂದು ಸಾಬೀತು ಮಾಡೋಕೆ ಕಾಂಗ್ರೆಸ್ ಹೊರಟಿದೆ. ಹಾಗೆ ನೋಡಿದ್ರೆ,…
ಬೆಂಗಳೂರು: ಬೆಂಗಳೂರಿನ ಮಹದೇವಪುರದಲ್ಲಿ (Mahadevpur)ಅನೈತಿಕ ಸಂಬಂಧಕ್ಕೆ ಮತ್ತೊಂದು ಕೊಲೆಯಾಗಿದೆ. ಬೆಂಗಳೂರಿನಲ್ಲಿ ಮಹದೇವಪುರದ ಶಿವ ದೇವಾಲದ ಬಳಿ ನಿನ್ನೆ ರಾತ್ರಿ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಈತನು ಕಾರು ಹಾಗೂ ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುಕೊಂಡಿದ್ದನು. ಇನ್ನು ಈತನು ತನ್ನ ಪತ್ನಿ ಪ್ರಿಯಾ ಹಾಗೂ ಮಕ್ಕಳೊಂದಿಗೆ ಸುಖವಾಗಿ ಸಂಸಾರ ಮಾಡಿಕೊಂಡಿದ್ದನು. ಕಾರು ಹಾಗೂ ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಉದಯ್ ಕುಮಾರ್ (Uday Kumar)ಪತ್ನಿಯ ಮೇಲೆ ಕಣ್ಣು ಹಾಕಿದ್ದ ಮುಸ್ಲಿಂ ಯುವಕ ಅನ್ವರ್ ಆಂಟಿಯ ಹಿಂದೆ ಬೆನ್ನುಬಿದ್ದು ಲವ್ ಮಾಡುವುದಾಗಿ ಹೇಳಿಕೊಂಡಿದ್ದಾನೆ. ಆಗ ಗೃಹಿಣಿ ಪ್ರಿಯಾ ನನಗೆ ಮದುವೆಯಾಗಿದ್ದು, ಮಕ್ಕಳು ಕೂಡ ಇವೆ ಎಂದು ಹೇಳಿದ್ದಾಳೆ. ಆದರೂ, ಪದೇ ಪದೆ ಪ್ರೀತಿಯ ಬಲೆಗೆ ಬೀಳಿಸಿಕೊಳ್ಳಲು ಅನ್ವರ್ ಪ್ರಯತ್ನ ಮುಂದುವರೆಸಿದ್ದು, ಸ್ನೇಹಿತನಾಗಿರುವುದಾಗಿ ಸಲುಗೆ ಬೆಳೆಸಿಕೊಂಡಿದ್ದಾನೆ. ನಂತರ, ಪ್ರಿಯಾ ತನ್ನ ಗಂಡ ಕುಡಿದು ಗಲಾಟೆ ಮಾಡುತ್ತಾನೆ ಎಂದು ಹೇಳಿಕೊಂಡಿದ್ದಾನೆ. ಇದನ್ನೇ ಬಂಡವಾಳ ಮಾಡಿಕೊಂಡ ಅನ್ವರ್, ಮದುವೆಯಾಗೊದ್ದ…
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಶಾಸಕ ಲಕ್ಷ್ಮಣ್ ಸವಧಿ ಅವರು ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಶತಾಯಗತಾಯ ಜಗದೀಶ್ ಶೆಟ್ಟರ್ ಸೋಲಿಸಲು ಹಣದ ಹೊಳೆಯನ್ನೇ ಹರಿಸಿದ್ದಾರೆ. ಅವರು ಅಥಣಿ ಮತ್ತು ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ್ರು. ಅವೆರಡೂ ಕ್ಷೇತ್ರಗಳಲ್ಲಿ ಕೇಂದ್ರ ನಾಯಕರನ್ನು ಕರೆಸಿದ್ರು. ಅಮಿತ್ ಶಾ, ನರೇಂದ್ರ ಮೋದಿ ರೋಡ್ ಶೋ ಮಾಡಿದ್ರು. ಅವರಿಗೆ ಗ್ರೌಂಡ್ ರಿಯಾಲಿಟಿ ಇರಲಿಲ್ಲ. ರಾಜ್ಯ ಬಿಜೆಪಿ ನಾಯಕರು ಅವರನ್ನು ಕರೆಸಿ ಮುಜುಗರ ತರಿಸಿಬಿಟ್ರು. ಪಾಪ ಅವರನ್ನು ಕರೆಸಿ ಮುಜುಗರ ತರಿಸಬಾರದಿತ್ತು. ನಾನು ಕೇಂದ್ರ ನಾಯಕರ ಜೊತೆ ಅನೇಕ ವರ್ಷಗಳ ಒಡನಾಟವಿದೆ ಹೀಗಾಗಿ ನನಗೆ ನರೇಂದ್ರ ಮೋದಿ, ಅಮಿತ್ ಶಾರ ಮೇಲೆ ಗೌರವ ಇದೆ ಎಂದರು. ಸೋತವರನ್ನು ಉಪಮುಖ್ಯಮಂತ್ರಿ ಮಾಡಿದ್ದೇವೆ ಎಂದು ಬಿಜೆಪಿಗರು ಹೇಳುತ್ತಿರುವ ವಿಚಾರ ಪ್ರಸ್ತಾಪಿಸಿದ ಸವದಿ, ಪದೇಪದೆ ಹೇಳ್ತಾರೆ. ಸೋತವನ ಮಂತ್ರಿ ಮಾಡಿದ್ದೇವೆ ಎಂದು. ಅವರು ಇನ್ನೂ 25 ವರ್ಷ ಹೀಗೆ ಹೇಳ್ತಾನೆ ಇರ್ತಾರೆ. ಹೇಳೋದು…
ಬೆಂಗಳೂರು: ನಾಳೆ (ಮೇ.20) ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪ್ರತಿಜ್ಞಾವಿಧಿ ಸಮಾರಂಭಕ್ಕೆ ಕಂಠೀರವ ಕ್ರೀಡಾಂಗಣ ರೆಡಿಯಾಗಿದ್ದು, ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ವಿವಿಐಪಿ ಎಂಟ್ರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಿರುವ ಪೊಲೀಸರು, 2 ಗೇಟ್ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ನಾಳೆ(ಮೇ.20) ರಾಜಧಾನಿಯಲ್ಲಿ ಮಳೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. 9೦೦ ಮೀಟರ್ ಸಮುದ್ರ ಮಟ್ಟದಿಂದ ಉತ್ತರ ಪ್ರದೇಶದಲ್ಲಿ ವಾಯು ಭಾರ ಕುಸಿತವಾಗಿದ್ದು, ಈ ಹಿನ್ನಲೆ ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಐದು ದಿನಗಳ ಮಳೆಯಾಗಲಿದೆ. ನಾಳಿನ ಸಿಎಂ ಪ್ರಮಾಣ ವಚನಕ್ಕೆ ನೆರೆ ರಾಜ್ಯಗಳ ಸಿಎಂಗಳಿಗೆ ಆಹ್ವಾನ ಹಿನ್ನಲೆ ತಮಿಳುನಾಡು ಸಿಎಂ ಬೆಂಗಳೂರಿನ ವೆದರ್ ಫೋರ್ಕ್ಯಾಸ್ಟ್ ಕೇಳಿದ್ದಾರೆ. ನಾಳೆ ಮಧ್ಯಾಹ್ನದ ನಂತರ ಸಾಧಾರಣ ಮಳೆ ಸಾಧ್ಯತೆಯಿದ್ದು, ಬೆಳಗ್ಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.