ಮುಂಬೈ: ಮಸ್ಕತ್‌ನಿಂದ (Muscat) ಭಾರತಕ್ಕೆ (India) ಅಕ್ರಮವಾಗಿ ಸಾಗಿಸುತ್ತಿದ್ದ 2.28 ಕೋಟಿ ರೂ. ಮೌಲ್ಯದ 4.2 ಕೆಜಿ ಚಿನ್ನದ ಧೂಳನ್ನು (Gold Dust) ವಶಪಡಿಸಿಕೊಂಡಿರುವ ಘಟನೆ ಮುಂಬೈನಲ್ಲಿ (Mumbai) ನಡೆದಿದೆ. ಮಸ್ಕತ್‌ನಿಂದ ಆಗಮಿಸಿದ ಭಾರತೀಯ ಪ್ರಜೆಯೊಬ್ಬರು ಚಿನ್ನದ ಧೂಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು, ಅದನ್ನು ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಧೂಳಿನ ಬೆಲೆ ಸುಮಾರು 2.28 ಕೋಟಿ ರೂ. ಗಳಾಗಿದ್ದು, ವ್ಯಕ್ತಿ ತನ್ನ ಜೀನ್ಸ್, ಒಳ ಉಡುಪು ಮತ್ತು ಮೊಣಕಾಲಿನ ಕ್ಯಾಪ್‌ಗಳ ಒಳಗೆ ಹೊಲಿದ ಪ್ಯಾಕೆಟ್‌ಗಳಲ್ಲಿ ತುಂಬಿಸಿ ಸಾಗಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ವ್ಯಕ್ತಿಯಿಂದ ಚಿನ್ನವನ್ನು ವಶಪಡಿಸಿಕೊಳ್ಳುತ್ತಿರುವ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.
Author: Prajatv Kannada
ನವದೆಹಲಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ (PCA Act) ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು (Jallikattu) ಕ್ರೀಡೆಯ ಜೊತೆಗೆ ಕಂಬಳಕ್ಕೂ (Kambala) ಇದ್ದ ಕಂಟಕ ನಿವಾರಣೆಯಾಗಿದೆ. ನ್ಯಾಯಮೂರ್ತಿ ಕೆ.ಎಂ.ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ಸಂವಿಧಾನ ಪೀಠವು (Constitution Bench) ಎತ್ತುಗಳ ನೋವು ಮತ್ತು ಸಂಕಟವನ್ನು ಕಡಿಮೆ ಮಾಡಲು ಕಾಯ್ದೆಯ ತಿದ್ದುಪಡಿ ಮಾಡಲಾಗಿದೆ. ನಿಯಮದ ಅನುಸಾರ ಜಲ್ಲಿಕಟ್ಟು ಮುಂದುವರೆಸಬಹುದು ಎಂದು ಅಭಿಪ್ರಾಯಪಟ್ಟಿದೆ. ರಾಜ್ಯದ ಕಾಯ್ದೆಯಲ್ಲಿ ಯಾವುದೇ ಲೋಪವಿಲ್ಲ. ನಿಯಮಗಳ ಪ್ರಕಾರ ಭಾಗವಹಿಸುವಿಕೆಯನ್ನು ಅನುಮತಿಸಲಾಗುವುದು. ಕಾಯ್ದೆಯೂ ಸಂವಿಧಾನದ 48 ನೇ ವಿಧಿ ಗೋಹತ್ಯೆ ವಿಚಾರಕ್ಕೆ ಇದು ಸಂಬಂಧಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ ಕರ್ನಾಟಕ (Karnataka) ಮತ್ತು ಮಹಾರಾಷ್ಟ್ರದಲ್ಲಿ (Maharashtra) ನಡೆಸಲಾಗುವ ಕಂಬಳ ಮತ್ತು ಎತ್ತಿನ ಬಂಡಿ (Bull cart racing) ಓಟಕ್ಕೂ ಅನುಮತಿಸುವ ಕಾನೂನನ್ನು…
ವಾಷಿಂಗ್ಟನ್: ನ್ಯೂಯಾರ್ಕ್ ಪೊಲೀಸ್ ಇಲಾಖೆಯ ಕ್ಯಾಪ್ಟನ್ ಆಗಿ ಇತ್ತೀಚೆಗಷ್ಟೇ ಬಡ್ತಿ ಪಡೆದು ಸುದ್ದಿಯಾಗಿದ್ದ ಭಾರತ ಮೂಲದ ಪೊಲೀಸ್ ಅಧಿಕಾರಿ, ಕ್ಯಾಪ್ಟನ್ ಪ್ರತಿಮಾ ಭುಲ್ಲಾರ್ ಮಲ್ಡೊನಾಡೋ, ಎನ್‌ವೈಡಿಪಿಯಲ್ಲಿ ಅತ್ಯುನ್ನತ ಹುದ್ದೆಪಡೆದ ದಕ್ಷಿಣ ಏಷ್ಯಾದ ಮೊದಲ ಮಹಿಳೆಯೆಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮೂಲ ಪಂಜಾಬ್ ಪ್ರತಿಮಾ ಅವರನ್ನು ಕಳೆದ ತಿಂಗಳಷ್ಟೇ ಕ್ಯಾಪ್ಟನ್ ಹುದ್ದೆಗೆ ಬಡ್ತಿಯನ್ನು ಘೋಷಿಸಲಾಗಿತ್ತು. ನ್ಯೂಯಾರ್ಕ್‌ನಲ್ಲಿ ಸಿಖ್ ಸಮುದಾಯ ಹೆಚ್ಚಾಗಿರುವ ಪ್ರದೇಶದಲ್ಲೇ ಅವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಈ ಮೂಲಕ ಸೌತ್ ರಿಚ¾ಂಡ್‌ಹಿಲ್‌ನ 102ನೇ ಪೊಲೀಸ್ ತುಕಡಿಯನ್ನು ಪ್ರತಿಮಾ ಮುನ್ನಡೆಸಲಿದ್ದಾರೆ.
ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಿವಾಸದಲ್ಲಿ ಭಯೋತ್ಪಾದಕರು ಅಡಗಿಕುಳಿತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭಯೋತ್ಪಾದಕರನ್ನು ಸರ್ಕಾರಕ್ಕೆ ಒಪ್ಪಿಸುವುದಕ್ಕೆ ನಿಗದಿಪಡಿಸಿದ ಗಡುವು ಕೊನೆಗೊಂಡಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸರು ಖಾನ್ ಮನೆಯನ್ನು ಸುತ್ತುವರಿದಿದ್ದು, ಯಾವುದೇ ಸಮಯದಲ್ಲಿ ಕಾರ್ಯಾಚರಣೆ ಕೈಗೊಳ್ಳುವ ನಿರೀಕ್ಷೆ ಇದೆ. ಮೇ 9ರಂದು ಸೇನಾ ನೆಲೆಗಳ ಮೇಲಿನ ದಾಳಿಯಲ್ಲಿ ಭಾಗಿಯಾಗಿರುವ 8 ಶಂಕಿತರನ್ನು ಜಮಾನ್ ಪಾರ್ಕ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಜಮಾನ್ ಪಾರ್ಕ್‌ನಲ್ಲಿ ಪೊಲೀಸರು ಶಸ್ತ್ರಸಜ್ಜಿತರಾಗಿ ಸಿದ್ಧವಾಗಿದ್ದಾರೆ. ಇಮ್ರಾನ್ ಖಾನ್ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಸ್ಥಳಗಳಲ್ಲಿ ಜಾಮರ್‌ಗಳನ್ನು ಅಳವಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹಸನ್ ಭಟ್ಟಿ ತಿಳಿಸಿದ್ದಾರೆ. ಪೊಲೀಸರು ಕೆಲ ಬಂಧಿತ ಆರೋಪಿಗಳನ್ನು ಜಮಾನ್ ಪಾರ್ಕ್‌ಗೆ ಕರೆತಂದು ಅವರನ್ನೇ ಬಂಧಿಸಿ, ಕೆಲ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಸಾಭೀತುಪಡಿಸಲು ಹೊರಟಿದ್ದಾರೆ’ ಎಂದು ಇಮ್ರಾನ್ ಪಕ್ಷ ಆರೋಪಿಸಿದೆ. ಖಾನ್ ಅವರ ಸೋದರಳಿಯ ಹಸನ್ ನಿಯಾಜಿ ಸೇರಿದಂತೆ ಕನಿಷ್ಠ 30-40 ಭಯೋತ್ಪಾದಕರು ಜಮಾನ್…
ಆರೋಗ್ಯ ತಜ್ಞರ ಪ್ರಕಾರ, ಭಾರತದಲ್ಲಿ ಯುವಜನರಲ್ಲಿ ಹೃದಯಾಘಾತದ ಘಟನೆಗಳು ಹೆಚ್ಚುತ್ತಿವೆ. ಮುಂಬೈನ ಆಸ್ಪತ್ರೆಯೊಂದು ತನ್ನ ಎಮರ್ಜೆನ್ಸಿ ವಾರ್ಡ್‌ನಲ್ಲಿ ಕಳೆದ 2 ತಿಂಗಳಲ್ಲಿ ಹೃದಯಾಘಾತದ ಪ್ರಕರಣಗಳು ಶೇಕಡಾ 15-20 ರಷ್ಟು ಹೆಚ್ಚಾಗಿದೆ ಮತ್ತು ಹೆಚ್ಚಿನ ಪೀಡಿತ ರೋಗಿಗಳು 25 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನವರು ಎಂದು ಬೆಚ್ಚಿಬೀಳಿಸೋ ವರದಿ ಮಾಡಿದೆ. ಜೀವನಶೈಲಿಯ ಪಾತ್ರ ಅನೇಕ ವೈದ್ಯರು ಜೀವನಶೈಲಿಯ ಸಮಸ್ಯೆಗಳನ್ನು ಯುವ ಹೃದಯಾಘಾತದ ಪ್ರಕರಣಗಳಿಗೆ ಕಾರಣವಾಗುವ ಪ್ರಮುಖ ಅಂಶಗಳು ಎಂದು ಹೇಳುತ್ತಾರೆ. ಬದಲಾಗುತ್ತಿರುವ ಕಾಲದಲ್ಲಿ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರಲ್ಲಿ ತೀವ್ರ ಬದಲಾವಣೆ ಕಂಡುಬಂದಿದೆ ಮತ್ತು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಯುವಕರು ಪಾರ್ಶ್ವವಾಯುವಿಗೆ ತುತ್ತಾಗುತ್ತಿದ್ದಾರೆ ಎಂದೂ ಹೇಳಿದ್ದಾರೆ.ಮೆದುಳಿಗೆ ರಕ್ತವನ್ನು ಪೂರೈಸುವ ರಕ್ತನಾಳಗಳಲ್ಲಿನ ಅಡಚಣೆಯಿಂದ ಉಂಟಾಗುವ ರಕ್ತಕೊರತೆಯ ಪಾರ್ಶ್ವವಾಯು ಅತ್ಯಂತ ಸಾಮಾನ್ಯವಾದ ಪಾರ್ಶ್ವವಾಯು ಎಂದೂ ವೈದ್ಯರು ಹೇಳುತ್ತಾರೆ. “ಜಡ ಜೀವನಶೈಲಿಯ ಹೆಚ್ಚಳವು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸ್ಟ್ರೋಕ್ ಪ್ರಕರಣಗಳಿಗೆ ಪ್ರಾಥಮಿಕ ಕಾರಣವಾಗಿದೆ. ಧೂಮಪಾನ, ಮದ್ಯಪಾನ, ವ್ಯಾಯಾಮದ ಕೊರತೆಯಿಂದಾಗಿ ಹೆಚ್ಚಿದ BMI, ಮಧುಮೇಹ, ಅಧಿಕ ರಕ್ತದೊತ್ತಡ, ಡಿಸ್ಲಿಪಿಡೆಮಿಯಾ,…
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಭೂತಪೂರ್ವ ಗೆಲುವು ಸಾಧಿಸಿದೆ. ಅನೌಪಚಾರಿಕ ಶಾಸಕಾಂಗ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಡುವೆ ಹೊಸ ಸರ್ಕಾರದ ಬಳಿ ಹಲವರು ಬೇಡಿಕೆಗಳನ್ನು ಇಡುತ್ತಿದ್ದು, ನಟ, ಹೋರಾಟಗಾರ ಚೇತನ್ ಹೊಸ ಸರ್ಕಾರದ ಮುಂದೆ ಒತ್ತಾಯವೊಂದನ್ನು ಇರಿಸಿದ್ದಾರೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ 5 ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿರುವ ಚೇತನ್, ಈ ಹಿಂದಿನ ಸರ್ಕಾರ ತಂದಿದ್ದ, ಗೋಹತ್ಯೆ ವಿರೋಧಿ ಮಸೂದೆ ಮತ್ತು ಮತಾಂತರ ವಿರೋಧಿ ಮಸೂದೆಯನ್ನು ತೆಗೆದುಹಾಕಬೇಕು ಎಂದಿದ್ದಾರೆ. ಮಾತ್ರವಲ್ಲದೆ ಹಿಂದಿನ ಬಿಜೆಪಿ ಸರ್ಕಾರ ರದ್ದು ಮಾಡಿದ್ದ 4% ಮುಸ್ಲಿಂ OBC ಮೀಸಲಾತಿಯನ್ನು ಮರುಸ್ಥಾಪಿಸಬೇಕು. ಜಾತಿ ಗಣತಿಯನ್ನು ಬಹಿರಂಗಪಡಿಸಬೇಕು. ಪರಿಶಿಷ್ಟ ಪಂಗಡ ಒಳ ಮೀಸಲಾತಿ ಮತ್ತು ಖಾಸಗಿ ವಲಯದ ಮೀಸಲಾತಿಯನ್ನು (ಜಾತಿ/ಪ್ರದೇಶ/ಇತ್ಯಾದಿ) ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. 2021 ರಲ್ಲಿ ವಿಧಾನಸಭೆ ಹಾಗೂ ಪರಿಷತ್ನಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಚರ್ಚೆಯ ಬಳಿಕ ಗೋಹತ್ಯೆ ಕಾಯ್ದೆಯನ್ನು ತರಲಾಗಿತ್ತು. ಆಗಲೂ ಚೇತನ್ ಅಹಿಂಸ…
ಬಾಲಿವುಡ್ ನಟ ಸಲ್ಮಾನ್ ಖಾನ್ ಸದ್ಯ ‘ಟೈಗರ್ 3’ ಸಿನಿಮಾದ ಶೂಟಿಂಗ್‌ನಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಸಿನಿಮಾದ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಅವರ ಎಡ ಭುಜಕ್ಕೆ ಗಾಯವಾಗಿದ್ದು ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ವಿಶ್ರಾಂತಿ ಪಡೆಯುತ್ತಿದ್ದಾರೆ. ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಚಿತ್ರದ ಸೋಲಿನ ನಂತರ ‘ಟೈಗರ್ 3’ ಸಿನಿಮಾದ ಚಿತ್ರೀಕರಣದಲ್ಲಿ ಸಲ್ಮಾನ್ ಭಾಗಿಯಾಗಿದ್ದಾರೆ. ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್, 5 ಕೆಜಿ ತೂಕದ ಡಂಬೆಲ್ ಅನ್ನು ಎತ್ತಿದ ಬಳಿಕ ಅವರ ಎಡ ಭುಜಕ್ಕೆ ಏಟಾಗಿದೆ. ಗಾಯಗಳಾಗಿದ್ದು ಅದಕ್ಕೆ ಸೂಕ್ತ ಚಿಕಿತ್ಸೆಯನ್ನ ಕೂಡ ಪಡೆದಿದ್ದಾರೆ. ಈ ಕುರಿತು ನಟ ಪೋಸ್ಟ್ ಹಂಚಿಕೊಂಡಿದ್ದಾರೆ. ನೀವು ಪ್ರಪಂಚದ ಭಾರವನ್ನು ನಿಮ್ಮ ಹೆಗಲ ಮೇಲೆ ಹೊತ್ತುಕೊಂಡಿದ್ದೀರಿ ಎಂದು ನೀವು ಭಾವಿಸಿದರೆ, ಇಹಲೋಕ ತ್ಯಜಿಸಿ 5 ಕೆಜಿ ಡಂಬೆಲ್ ಎತ್ತಿ ತೋರಿಸಿ ಎಂದಿದ್ದಾರೆ. ಹುಲಿ ಗಾಯಗೊಂಡಿದೆ ಎಂದು ಸಲ್ಮಾನ್ ಖಾನ್ ಬರೆದುಕೊಂಡಿದ್ದಾರೆ. ಸಲ್ಮಾನ್ ಖಾನ್ ಪೋಸ್ಟ್ ಗೆ ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದು ಬೇಗ ಚೇತರಿಸಿಕೊಳ್ಳುವಂತೆ…
ಹೈದರಾಬಾದ್ : ವಿರಾಟ್ ಕೊಹ್ಲಿ (100 ರನ್, 63 ಎಸೆತ, 12 ಫೋರ್, 4 ಸಿಕ್ಸರ್) ಮತ್ತು ಫಾಫ್ ಡು ಪ್ಲೆಸಿಸ್ (71 ರನ್ 47 ಎಸೆತ, 7 ಫೋರ್, 2 ಸಿಕ್ಸರ್) ಅವರ 172 ರನ್‌ಗಳ ಅಮೋಘ ಜತೆಯಾಟದ ಬಲದಿಂದ ಮಿಂಚಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್‌ಗಳಿಂದ ಹೈದರಾಬಾದ್ ತಂಡದ ಸವಾಲನ್ನು ಹತ್ತಿಕ್ಕಿತು. ಈ ಜಯದೊಂದಿಗೆ ಒಟ್ಟಾರೆ 14 ಅಂಕಗಳನ್ನು ಕಲೆಹಾಕಿದ ಆರ್‌ಸಿಬಿ, ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿಯುವ ಮೂಲಕ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿಟ್ಟುಕೊಂಡಿತು. ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯು ಕ್ರೀಡಾಂಗಣದಲ್ಲಿ ಗುರುವಾರ (ಮೇ 18) ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಹೆನ್ರಿಚ್ ಕ್ಲಾಸೆನ್ (104) ಬಾರಿಸಿದ ಅವರ ಚೊಚ್ಚಲ ಶತಕದ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 186 ರನ್‌ಗಳ ದೊಡ್ಡ ಮೊತ್ತವನ್ನೇ ಪೇರಿಸಿತು. ಇದಕ್ಕೆ ಪ್ರತಿಯಾಗಿ ಬೆಂಗಳೂರು ತಂಡ 4 ಎಸೆತಗಳು ಬಾಕಿ ಇರುವಂತೆಯೇ…
ಹೈದರಾಬಾದ್ : ವಿರಾಟ್ ಕೊಹ್ಲಿ (100) ಮತ್ತು ಫಾಫ್ ಡು ಪ್ಲೆಸಿಸ್ (71) ಅವರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದ ಅಬ್ಬರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರ್ಣಾಯಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಎದುರು 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿತು. ಈ ಮೂಲಕ ಐಪಿಎಲ್ 2023 ಟೂರ್ನಿಯ ಅಂಕಪಟ್ಟಿಯಲ್ಲಿ ಆರ್ಸಿಬಿ ಮರಳಿ ಅಗ್ರ 4ರಲ್ಲಿ ಸ್ಥಾನ ಪಡೆದುಕೊಂಡಿದೆ. ಇದೀಗ ಆರ್ಸಿಬಿ ತನ್ನ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದುರು (ಮೇ 21) ಜಯ ದಾಖಲಿಸಿದರೆ ಐಪಿಎಲ್ ಪ್ಲೇ ಆಫ್ ಹಂತಕ್ಕೆ ಅರ್ಹತೆ ಪಡೆದುಕೊಳ್ಳಲಿದೆ. ಅಮೋಘ ರನ್ ಚೇಸ್ ಗೆಲುವಿಗೆ 187 ರನ್ಗಳ ಕಠಿಣ ಗುರಿ ಬೆನ್ನತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಪೋಟಕ ಆರಂಭ ಪಡೆಯಿತು. ಮೊದಲ ವಿಕೆಟ್ಗೆ ದಾಖಲೆಯ ಜೊತೆಯಾಟ ಕಟ್ಟಿದ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್, 17.5 ಓವರ್ಗಳಲ್ಲಿ 172 ರನ್ಗಳ ಮನಮೋಕ ಪಾಲುದಾರಿಕೆ ನಿಭಾಯಿಸಿದರು. ಇದು ಐಪಿಎಲ್ 2023 ಟೂರ್ನಿಯಲ್ಲಿ ಯಾವುದೇ ವಿಕೆಟ್ಗೆ ದಾಖಲಾದ ಗರಿಷ್ಠ…
ಬೆಂಗಳೂರು: ‘ಬಹುದೊಡ್ಡ ಜನಾಶಿರ್ವಾದದೊಂದಿಗೆ ನಾಳೆ ರಚನೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ನೂತನ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೆರಿಸುತ್ತೇವೆ’ ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿ, “ಕರ್ನಾಟಕ ರಾಜ್ಯದ ಎಲ್ಲಾ ಜನತೆಗೆ, ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ನೀವು ಬಯಸಿದ ಸರ್ಕಾರ. ಜನರ ಧ್ವನಿ ರಾಜ್ಯ ಸರ್ಕಾರದ ಧ್ವನಿಯಾಗಲಿದೆ. ನಾವು ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಕೊಟ್ಟ ಮಾತು ಉಳಿಸಿಕೊಳ್ಳು ತ್ತೇವೆ. ಈ ಸರ್ಕಾರ ನಾಳೆ ರಚನೆ ಆಗುತ್ತಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಎಲ್ಲಾ ನಾಯಕರು ಆಗಮಿಸುತ್ತಿದ್ದಾರೆ. ರಾಷ್ಟ್ರದ ಅನೇಕ ನಾಯಕರಿಗೆ ಆಹ್ವಾನ ನೀಡಲಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮಾಧ್ಯಮಗಳ ಮೂಲಕ ಆಹ್ವಾನ ನೀಡುತ್ತಿದ್ದೇನೆ. ಈ ಕಾರ್ಯಕ್ರಮಕ್ಕೆ ಆಗಮಿಸುವರು…