ಬೆಂಗಳೂರು : ಜನರು ವಿದ್ಯುತ್ ಬಿಲ್ ಕಟ್ಟಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ಸರ್ಕಾರ ಬಂದ ಮೇಲೆ ವಿದ್ಯುತ್ ಬಿಲ್ ಕಟ್ಟಬೇಡಿ ಎಂಬ ಮಾತನ್ನು ಸಿದ್ದರಾಮಯ್ಯ(Siddaramaiah) ಅವರೇ ಹೇಳಿದ್ದರು. ತಮಗೂ ಸೇರಿಸಿ ಎಲ್ಲರಿಗೂ ವಿದ್ಯುತ್ ಉಚಿತ ಎಂದಿದ್ದರು. ಹೀಗಾಗಿ, ಜನರು ಯಾಕೆ ಬಿಲ್ ಕಟ್ಟುತ್ತಾರೆ ಹೇಳಿ. ಕಟ್ಟಬಾರದು. ಕಟ್ಟುವ ಅಗತ್ಯವಿಲ್ಲ. ಜನರಿಗೂ ವಿನಂತಿ ಮಾಡುತ್ತೇನೆ. ನನ್ನ ಲೆಕ್ಕದಲ್ಲಿ ಯಾರಿಗೂ ಬಿಲ್ ಕಟ್ಟುವ ಅವಶ್ಯಕತೆಯಿಲ್ಲ ಎಂದು ಪ್ರತಿಪಾದಿಸಿದರು. ಪ್ರಶ್ನೆ ಯೊಂದಕ್ಕೆ ಉತ್ತರಿಸಿದ ಅವರು, ಜನರು ಅವರಿಗೆ ಬಹುಮತ ಕೊಟ್ಟಿದ್ದಾರೆ. ನಾವು ಅದನ್ನು ಸ್ವೀಕಾರ ಮಾಡಿ ವಿರೋಧ ಪಕ್ಷವಾಗಿ ರಚನಾತ್ಮಕ ಕೆಲಸ ಮಾಡಲಿದ್ದೇವೆ ಎಂದರು. ಮುಂದಿನ ವಾರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಆಯ್ಕೆ: ಮುಂದಿನ ವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ಈ ಒಂದು ವಾರ ನೂತನ ಶಾಸಕರು ತಮ್ಮ ಕ್ಷೇತ್ರದಲ್ಲಿದ್ದು ಜನರಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ…
Author: Prajatv Kannada
ಬೆಂಗಳೂರು: ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್(Governor Thawar Chand) ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಹಿರಿಯ ಮುಖಂಡ ಡಾ. ಜಿ ಪರಮೇಶ್ವರ್ ಅವರು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕೃತ ಪ್ರತಿನಿಧಿಯಾಗಿ ಜಿ ಪರಮೇಶ್ವರ್ ರಾಜ್ಯಪಾಲರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರ ಪತ್ರ ನೀಡಿದ್ದಾರೆ. ಅಲ್ಲದೇ ಮೇ 20 ರಂದು ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಡೆಸಲು ಮನವಿ ಸಲ್ಲಿಸಿದ್ದಾರೆ. ಇನ್ನೂ ಇನ್ನೇರಡು ದಿನದಲ್ಲಿ ಕಾಂಗ್ರೆಸ್ನಿಂದ ನೂತನ ರಾಜ್ಯ ಸರ್ಕಾರ ರಚನೆಯಾಗಲಿದ್ದು, ಮೂಲಕ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಅಂತಿಮವಾಗಿದೆ. ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ 30-30 ಸೂತ್ರದ ಅಡಿಯಲ್ಲಿ ಸಿಎಂ ಆಯ್ಕೆ ಮಾಡಲಾಗಿದ್ದು, ಮೊದಲ 30 ತಿಂಗಳು ಸಿದ್ದರಾಮಯ್ಯ ಅವರು ಸಿಎಂ ಆಗಿ, ನಂತರದ 30 ತಿಂಗಳು ಶಿವಕುಮಾರ್ ಸಿಎಂ ಆಗಿ ಅಡಳಿತವನ್ನು ನಡೆಸಲಿದ್ದಾರೆ ಎನ್ನಲಾಗಿದೆ. ಈ ನಡುವೆ ಮೇ 20ರಂದು ಸಿಎಂ ಆಗಿ ರಾಜ್ಯವನ್ನು ಮುನ್ನೆಡಸಿಲಿದ್ದಾರೆ.
ಬೆಂಗಳೂರು: ದೆಹಲಿಯ ವಿಶೇಷ ವಿಮಾನವೊಂದರಲ್ಲಿ ಹೊರಟಿರುವ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇನ್ನು ಸ್ನಲ್ಪ ಹೊತ್ತಿನಲ್ಲಿ ನಗರದ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ (HAL airport) ಲ್ಯಾಂಡ್ ಆಗಲಿದ್ದಾರೆ. ಅವರನ್ನು ಸ್ವಾಗತಿಸಲು ಭರ್ಜರಿ ತಯಾರಿಗಳು ನಡೆದಿವೆ. ತಲೆ ಮೇಲೆ ದೇವರನ್ನು ಹೊತ್ತು ಕುಣಿಯುವ ತಂಡ, ಡೊಳ್ಳು ಕುಣಿತದ ತಂಡಗಳು ಸಾಂಪ್ರದಾಯಿಕ ಉಡುಗೆ ಮತ್ತು ವಾದ್ಯಮೇಳಗಳೊಂದಿಗೆ ಏರ್ಪೋಟ್ ಹೊರಗಡೆ ರೆಡಿಯಾಗಿ ನಿಂತಿವೆ. ಟ್ರಕ್ ಗಟ್ಟಲೆ ಬಗೆಬಗೆಯ ಹೂಗಳನ್ನು ತರಿಸಲಾಗಿದೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಯೋಜನೆಯೂ ಇದೆ ಅಂತ ಹೇಳಲಾಗುತ್ತಿದೆ.
ದೇವನಹಳ್ಳಿ: ದೆಹಲಿಯಿಂದ ಆಗಮಿಸಿ ಏರ್ಪೋಟ್ ನಲ್ಲಿ ಕೆಹೆಚ್ ಮುನಿಯಪ್ಪ (KH Muniappa) ಅವರು, ಹೈಕಮಾಂಡ್ ಸೂತ್ರದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ನಾವು ಏನು ಹೇಳಲು ಆಗುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ದಲಿತ ಡಿಸಿಎಂ ರೇಸ್ನಲ್ಲಿ ನಾನೇನು ಇಲ್ಲ. ನಾನು ದೇಶದಲ್ಲಿ ಮಂತ್ರಿಯಾಗಿದ್ದವನು. ರಾಜ್ಯದಲ್ಲಿ ನನಗೆ ಮಂತ್ರಿಸ್ಥಾನ ಬೇಕು ಅಂತೇನಿಲ್ಲ. ನೀವು ರಾಜ್ಯದಲ್ಲಿ ಸ್ಪರ್ಧೆ ಮಾಡಿ ಅಂತ ಹೈಕಮಾಂಡ್ ಹೇಳಿತ್ತು. ಅದ್ರಂತೆ ನಾನು ಸ್ವರ್ಧಿಸಿ ಗೆದ್ದೀದ್ದೇನೆ. ಉಳಿದದ್ದು ಹೈಕಮಾಂಡ್ಗೆ ಬಿಟ್ಟದ್ದು ಎಂದರು.
ಬೆಂಗಳೂರು: ನನ್ನ ನಿರೀಕ್ಷೆ ಹುಸಿಯಾಗಿದೆ, ಮಾಧ್ಯಮಗಳ ನಿರೀಕ್ಷೆ ನಿಜವಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿ(HD Kumaraswamy) ಹೇಳಿದರು. ಈ ಸಂಬಂಧ ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಚುನಾವಣಾ ಸೋಲಿನ ಪರಾಮರ್ಶೆ ವಿಚಾರಕ್ಕೆ ಸಂಬಂಧಿಸಿ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜೊತೆ ನಿಲ್ತೇವೆ. ನಾನು ಕಳೆದ 6 ತಿಂಗಳಿಂದ ಶ್ರಮಪಟ್ಟು ಕೆಲಸ ಮಾಡಿದ್ದೆ. ಪಂಚರತ್ನ ಯೋಜನೆಗಳು ಜನರಗೆ ಇಡಿಸಲಿಲ್ಲ ಅನ್ಸುತ್ತೆ. ಕಾಂಗ್ರೆಸ್ನ ಗ್ಯಾರಂಟಿಗಳ ನಂಬಿ ಮತಹಾಕಿದ್ದಾರೆ. ಪಕ್ಷದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಏನೆಲ್ಲಾ ಆಗಿದೆ ಅನ್ನೊದರ ಬಗ್ಗೆ ಮಾಹಿತಿ ಕಲೆ ಹಾಕ್ತೇನೆ. ಈ ರೀತಿಯ ಫಲಿತಾಂಶ ನಮ್ಮ ಪಕ್ಷಕ್ಕೆ ಹೊಸದೇನಲ್ಲ. ದೇವೇಗೌಡರು ಎರಡು ಬಾರಿ ಸೋತ ಬಳಿಕವೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿತ್ತು. ಜನ ಮುಂದಿನ ದಿನಗಳಲ್ಲಿ ಮತ್ತೆ ಜೆಡಿಎಸ್ ಬೇಕು ಅಂತ ಬಯಸ್ತಾರೆ ಎಂದು ಹೆಚ್ಡಿ ಕುಮಾರಸ್ವಾಮಿ ತಿಳಿಸಿದರು.
ಬೆಂಗಳೂರು: ರಾಜ್ಯದ ಜನರ ಭವಿಷ್ಯತ್ತಿಗಾಗಿ ಕಾಂಗ್ರೆಸ್ ಕುಟುಂಬ ನುಡಿದಂತೆ ನಡೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ (BK Hariprasad)ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು,, ನೂತನವಾಗಿ ಆಯ್ಕೆಯಾದ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಕಾಂಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್ ಅಭಿನಂದಿಸಿದ್ದಾರೆ. ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಜನರ ನಿರೀಕ್ಷೆ ಹಾಗೂ ನಮ್ಮ ಭರವಸೆಯನ್ನ ಈಡೇರಿಸುವ ಮೂಲಕ ದೇಶಕ್ಕೆ ಮಾದರಿ ಆಡಳಿತವನ್ನ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದ ಜನರ ಭವಿಷ್ಯತ್ತಿಗಾಗಿ ಕಾಂಗ್ರೆಸ್ ಕುಟುಂಬ ನುಡಿದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು: ಇನ್ನೂ ಮುಂಗಾರು ಪ್ರಾರಂಭ ಆಗಿಲ್ಲ, ಈಗಾಗಲೇ ಬಿತ್ತನೆ ಬೀಜ, ಗೊಬ್ಬರ, ಕೃಷಿ ಸಾಲಕ್ಕೆ ಅರ್ಜಿ ಕರೆಯಬೇಕಾಗಿತ್ತು. ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಅದರ ಕಡೆ ಗಮನ ಕೊಡಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕಾಂಗ್ರೆಸ್ ಅವರ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಆಪಾದನೆ ಮಾಡಿದೆ. ಬಿಜೆಪಿ ಮೇಲೆ ಗೂಬೆ ಕೂರಿಸುವುದು ಬಿಟ್ಟು ತಕ್ಷಣವೇ ಸರ್ಕಾರ ರಚನೆ ಮಾಡಿ. ಕಾಂಗ್ರೆಸ್ ಹೇಳಿರುವ ಐದು ಗ್ಯಾರಂಟಿಗಳನ್ನು ತಕ್ಷಣ ಜಾರಿ ಮಾಡಬೇಕು. ಜನರಲ್ಲಿ ಇರುವ ಗೊಂದಲವನ್ನು ಪರಿಹರಿಸಬೇಕು ಎಂದರು.
ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆಂದು ನೋಡೊಣ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನಕ್ಕೂ ಮೊದಲು ಲಿಂಗಾಯತ ಸಮುದಾಯದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಬಹಳ ಮಾತನಾಡಿದ್ದಾರೆ. ಅವರು ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಯಾವ ಯಾವ ಹುದ್ದೆಗಳನ್ನು ಕೊಡುತ್ತಾರೆಂದು ಕಾದು ನೋಡೋಣ ಎಂದರು. ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರು ಮತ್ತು ರಾಜ್ಯದ ಅಭಿವೃದ್ಧಿ ಮಾಡಲಿ. ಪಕ್ಷದಲ್ಲಿ ಹೊಂದಾಣಿಕೆ ಸರಿ ಇಲ್ಲ ಎನ್ನುವುದನ್ನು ತೋರಿಸುತ್ತದೆ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ.ಸರ್ಕಾರ ರಚಿಸುವ ಮೂಲಕ ಜನರ ಸೇವೆ ಮಾಡಲಿ ಎಂದು ಬೊಮ್ಮಾಯಿ ಹೇಳಿದರು.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Elections 2023 Result) ಮೇ.13 ರಂದು ಬಂದಿದ್ದು, ಅದರಂತೆ ಸಿದ್ದರಾಮಯ್ಯ(Siddaramaiah) 2 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇನ್ನು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್(Dk Shivakumar) ಎಂದು ಘೋಷಿಸಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್(G Parameshwara) ‘ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು, ನಾನು ಈ ಹಿಂದೆ ಕೂಡ ಉಪ ಮುಖ್ಯಮಂತ್ರಿಯಾಗಿದ್ದೆ. ಎಲ್ಲ ಸಮುದಾಯಗಳನ್ನು ಪರಿಗಣಿಸಿ ಡಿಸಿಎಂ ಸ್ಥಾನ ಕೊಡಬೇಕಾಗುತ್ತದೆ. ಒಬ್ಬರು ಮಾತ್ರ ಅಧಿಕಾರದಲ್ಲಿ ಇರಬೇಕೆಂಬುದು ಸೂಕ್ತವಲ್ಲ, ಎಲ್ಲರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರು(HD Deve Gowda) ಮಣ್ಣಿನ ಮಗ ಎಂದೆ ಪ್ರಖ್ಯಾತಿ. ರೈತರ ಅಳುವಿಗೆ ಧ್ವನಿ ಕೊಟ್ಟ ನೇಕಾರ, ಹೌದು ಒಂದು ಸಣ್ಣ ಹಳ್ಳಿಯಿಂದ ದೇಶದ ಅತ್ಯುನ್ನತ ಸ್ಥಾನವನ್ನ ಅಲಂಕರಿಸುವ ಮಟ್ಟಕ್ಕೆ ಬೆಳೆದಿರುವ ನಾಯಕ. ಇಂದು(ಮೇ 18) ಅವರು 91ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹೆಚ್.ಡಿ.ದೇವೇಗೌಡರ ಅವರು ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಸುಧಾರಕರು ಹಾಗೂ ಭಾರತದ ಭವ್ಯ ಸಂಸ್ಕಂತಿ ಪರಂಪರೆಯ ಪ್ರಶಂಸಕರು. ಇವರು ಮೇ 18, 1933ರಂದು ಕರ್ನಾಟಕದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ಪಡೆದಿರುವ ಶ್ರೀ ದೇವೇಗೌಡರು 20 ವರ್ಷದ ಯುವಕನಾಗಿದ್ದಾಗಲೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದರು. ದೇಶದ ಪ್ರಧಾನಿಯಾಗುವ ಮೂಲಕ ಕರ್ನಾಟಕದ ಕೀರ್ತಿಯನ್ನ ದೇಶಕ್ಕೆ ಪರಿಚಯಿಸಿದ್ದ ದೇವೇಗೌಡರು. ಮುಖ್ಯಮಂತ್ರಿಯಾಗಿ, ಸಚಿವರಾಗಿ, ಶಾಸಕನಾಗಿ, ಸಂಸದನಾಗಿ, ರೈತ ನಾಯಕನಾಗಿ, ಹೋರಾಟಗಾರನಾಗಿ ಅವರು ಮಾಡಿರುವ ಸೇವೆ ಅಸಂಖ್ಯಾತ. ಕೆಂಪುಕೋಟೆಯಲ್ಲಿ ಪ್ರಧಾನಿಯಾಗಿ ರಾಷ್ಟ್ರಧ್ವಜ ಹಾರಿಸಿದ ಮೊದಲ ಮತ್ತು ಸದ್ಯದ ಏಕೈಕ ಕನ್ನಡಿಗ ಹೆಚ್ಡಿ ದೇವೇಗೌಡ ಅವರು ಇಂದು…