ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಪತನ ಆಗೋಕೆ ಸಿದ್ದರಾಮಯ್ಯನವರೇ ಪರೋಕ್ಷವಾಗಿ ಎಂದು ಬರೆದುಕೊಂಡಿದ್ದ ಮಾಜಿ ಸಚಿವ ಸುಧಾಕರ್ ಟ್ವೀಟ್‌ಗೆ ಚಿಕ್ಕಬಳ್ಳಾಪುರ (Chikkaballapur) ನೂತನ ಕಾಂಗ್ರೆಸ್ (Congress) ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಸುಧಾಕರ್ ಅವರೇ ಬಾಯಿ ಮುಚ್ಚಿಕೊಂಡು ಇರಿ ಎಂದು ಟಾಂಗ್ ನೀಡುವ ಮೂಲಕ ಬಾಯಿ ಮುಚ್ಚಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕು ಮೈಲಪನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ನಿಮ್ಮದೇ ಪಕ್ಷದ ಎಂಟಿಬಿ ನಾಗರಾಜ್ ಅವರೇ ನಿಮ್ಮ ಟ್ವೀಟ್‌ಗೆ ಕೌಂಟರ್ ಕೊಟ್ಟಿದ್ದಾರೆ ಇದು ಸಾಲದೇ . ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಗ್ಗೆ ಮಾತನಾಡಬೇಡಿ, ಬಾಯಿ ಮುಚ್ಚಿಕೊಂಡು ಇರಿ. ನಮ್ಮ ಪಕ್ಷದ ಆತಂರಿಕ ವಿಚಾರ ನಿಮಗ್ಯಾಕೆ ಬೇಕು? 3 ವರ್ಷದಿಂದ ಕಡಲೆಬೀಜ ತಿಂತಿದ್ರಾ ಎಂದು ಟಾಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನ ತಂದೆ-ತಾಯಿ ಇದ್ದಂತೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಯಾರೇ ಸಿಎಂ ಆದರೂ ಕೂಡ ನನಗೆ ಸಂತೋಷ. ಅವರಿಬ್ಬರು ನನಗೆ ಎರಡು ಕಣ್ಣುಗಳಿದ್ದಂತೆ ಎಂದರು. ಗ್ರಾಮದ ಮನೆ ಮನೆಗೂ ಭೇಟಿ ನೀಡಿದ ಪ್ರದೀಪ್ ಈಶ್ವರ್: ಚುನಾವಣಾ ಪ್ರಚಾರದ ವೇಳೆ ಕೊಟ್ಟ ಮಾತಿನಂತೆ…
Author: Prajatv Kannada
ಬಾಲಿವುಡ್ ನಟ ಹೃತಿಕ್ ರೋಷನ್ ಹೋದಲ್ಲಿ ಬಂದಲ್ಲೆಲ್ಲಾ ಗರ್ಲ್ ಫ್ರೆಂಡ್ ಜೊತೆ ಕಾಣಿಸಿಕೊಳ್ಳುತ್ತಿರುತ್ತಾರೆ. ಹೃತಿಕ್ ‘ಫೈಟರ್’ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು ಹೆಚ್ಚು ಹೆಚ್ಚು ಸದ್ದು ಮಾಡುತ್ತಿರುವುದು ಗೆಳತಿ ಸಬಾ ಕಾರಣದಿಂದಾಗಿ. ಇದೀಗ ಸಬಾ ಜೊತೆ ವಾಸಿಸಲು ಮದುವೆಗೂ ಮುನ್ನವೇ ಐಷಾರಾಮಿ ಅಪಾರ್ಟ್‌ಮೆಂಟ್‌ವೊಂದನ್ನ ಹೃತಿಕ್ ಖರೀದಿಸಿದ್ದಾರೆ. 2014ರಲ್ಲಿ ಪತ್ನಿ ಸುಸೇನ್ ಖಾನ್ ಗೆ ಡಿವೋರ್ಸ್ ನೀಡಿದ ಬಳಿಕ ಹೃತಿಕ್ ಸಬಾ ಆಜಾದ್ ಜೊತೆ ಡೇಟಿಂಗ್‌ನಲ್ಲಿದ್ದಾರೆ. ಈಗಾಗಲೇ ಇಬ್ಬರು ಲಿವಿನ್ ರಿಲೇಷನ್‌ಶಿಪ್‌ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಸಬಾಗಾಗಿ ಹೃತಿಕ್ ದುಬಾರಿ ಮನೆ ಉಡುಗೊರೆಯಾಗಿ ನೀಡಿದ್ದಾರೆ. ಹೃತಿಕ್ ರೋಷನ್ ಮತ್ತು ಸಬಾ ಆಜಾದ್ ಇಬ್ಬರೂ ಒಟ್ಟಿಗೆ ಇರಲು ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ್ದಾರಂತೆ. ಇಬ್ಬರೂ ಸದ್ಯದಲ್ಲೇ ಹೊಸ ಮನೆಗೆ ಶಿಫ್ಟ್ ಆಗುತ್ತಿದ್ದಾರೆ ಎನ್ನಲಾಗಿದೆ. ಮುಂಬೈನ ಜುಹು – ವರ್ಸೋವ ರಸ್ತೆಯಲ್ಲಿ ಹೃತಿಕ್ ಮತ್ತು ಸಬಾ ಹೊಸ ಮನೆ ಇದ್ದು 3 ಫ್ಲೋರ್ ಇರುವ ಅಪಾರ್ಟ್‌ಮೆಂಟ್ ಇದಾಗಿದೆ. ಬರೋಬ್ಬರಿ 100 ಕೋಟಿ ರೂಪಾಯಿಗೆ ಈ ಹೊಸ ಮನೆ…
ಶಿಮ್ಲಾ: ರಿಲೀ ರೆಸ್ಸೋ, ಪೃಥ್ವಿ ಶಾ ಸ್ಫೋಟಕ ಅರ್ಧ ಶತಕ ಹಾಗೂ ಇಶಾಂತ್ ಶರ್ಮಾ ಮತ್ತು ನಾರ್ಟ್ಜೆ ಬಿಗಿ ಬೌಲಿಂಗ್ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತು. ಇದರಿಂದ ಪಂಜಾಬ್‌ನ ಪ್ಲೇ ಆಫ್ ಕನಸು ಭಗ್ನಗೊಂಡಿತು. ಬುಧವಾರ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 213 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಆ ಬಳಿಕ ಧವನ್ ಪಡೆಯನ್ನು 8 ವಿಕೆಟ್‌ಗಳಿಗೆ 198 ರನ್‌ಗಳಿಗೆ ಕಟ್ಟಿಹಾಕಿ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವಾರ್ನರ್ ಪಡೆ ಉತ್ತಮ ಬ್ಯಾಟಿಂಗ್ ಮಾಡಿತು. ಆರಂಭಿಕರಾಗಿ ಫೀಲ್ಡಿಗಿಳಿದ ಡೇವಿಡ್ ವಾರ್ನರ್ ಮತ್ತು ಪೃಥ್ವಿ ಶಾ ಉತ್ತಮ ಶುಭಾರಂಭ ನೀಡಿದರು. ಮೊದಲ ವಿಕೆಟ್‌ಗೆ 94 ರನ್ ಜೊತೆಯಾಟವಾಡಿ ತಂಡಕ್ಕೆ ನೆರವಾದರು. 46 ರನ್ ಪೇರಿಸಿದ್ದ ವಾರ್ನರ್ ಚೆಂಡನ್ನು ಬೌಂಡರಿಗೆ ಅಟ್ಟಲು ಮುಂದಾಗಿ…
ಲಖನೌ: ಮಂಗಳವಾರ ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕನಾ ಮೈದಾನದಲ್ಲಿ ನಡೆದಿದ್ದ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಲಖನೌ ಸೂಪರ್ ಜಯಂಟ್ಸ್ ತಂಡ 5 ರನ್‌ಗಳಿಂದ ಗೆಲುವು ಸಾಧಿಸಿತು. ಈ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಲಖನೌ ಸೂಪರ್ ಜಯಂಟ್ಸ್ ತಂಡ, ಐಪಿಎಲ್ ಪ್ಲೇಆಫ್‌ಗೆ ಇನ್ನಷ್ಟು ಸನಿಹವಾಯಿತು. ಈ ಪಂದ್ಯದ ಸೋಲು ಮುಂಬೈ ಇಂಡಿಯನ್ಸ್‌ಗೆ ಭಾರಿ ಹಿನ್ನಡೆಯನ್ನು ತಂದೊಡ್ಡಿದೆ. ಈ ಪಂದ್ಯದಲ್ಲಿ ಗೆಲುವು ಪಡೆದಿದ್ದರೆ ಮುಂಬೈ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರುವ ಅವಕಾಶವಿತ್ತು. ಅಂದ ಹಾಗೆ ಮುಂಬೈ ಇಂಡಿಯನ್ಸ್ ತಂಡದ (-0.128) ರನ್‌ರೇಟ್ ಕಡಿಮೆ ಇದೆ. ಒಂದು ವೇಳೆ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಗೆಲುವು ಪಡೆದರೂ ಕಡಿಮೆ ರನ್‌ರೇಟ್‌ನಿಂದಾಗಿ ಮುಂಬೈಗೆ ಐಪಿಎಲ್ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (+0.166) ಹಾಗೂ ಪಂಜಾಬ್ ಕಿಂಗ್ಸ್ (-0.268) ತಂಡಗಳು ತಮ್ಮ ಮುಂದಿನ ಎರಡೂ ಪಂದ್ಯಗಳಲ್ಲಿ ಗೆದ್ದರೆ ಮುಂಬೈ ಇಂಡಿಯನ್ಸ್ ತನ್ನ ಕೊನೆಯ ಪಂದ್ಯದಲ್ಲಿ ದೊಡ್ಡ ಅಂತರದಲ್ಲಿ…
ಸೂರ್ಯೋದಯ: 05.54 AM, ಸೂರ್ಯಾಸ್ತ : 06.39 ಪಿಎಂ ಶಾಲಿವಾಹನ ಶಕೆ1945, ಶೋಭಕೃನ್ನಾಮ ಸಂವತ್ಸರ, ಸಂವತ್2079,ವೈಶಾಖ ಮಾಸ, ಕೃಷ್ಣ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ಚತುರ್ದಶಿ 09:42 PM ತನಕ ನಂತರ ಅಮವಾಸ್ಯೆ ನಕ್ಷತ್ರ: ಇವತ್ತು ಅಶ್ವಿನಿ 07:22 AM ತನಕ ನಂತರ ಭರಣಿ ಯೋಗ: ಇವತ್ತು ಸೌಭಾಗ್ಯ 07:37 PM ತನಕ ನಂತರ ಶೋಭಾನ ಕರಣ: ಇವತ್ತು ವಿಷ್ಟಿ 10:02 AM ತನಕ ನಂತರ ಶಕುನಿ 09:42 PM ತನಕ ನಂತರ ಚತುಷ್ಪಾದ ರಾಹು ಕಾಲ: 01:30 ನಿಂದ 03:00 ವರೆಗೂ ಯಮಗಂಡ: 06:00 ನಿಂದ 07:30 ವರೆಗೂ ಗುಳಿಕ ಕಾಲ: 10:30 ನಿಂದ 12:00 ವರೆಗೂ ಅಮೃತಕಾಲ: 12.15 AM to 01.50 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:46 ನಿಂದ ಮ.12:38 ವರೆಗೂ ಶ್ರೀ ಸೋಮಶೇಖರ್B.Sc ( ವಂಶಪಾರಂಪರಿತ) ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು. Mob.No.93534 88403 ಮೇಷ ರಾಶಿ: (ಅಶ್ವಿನಿ ಭರಣಿ…
ಬೆಂಗಳೂರು: ಸಿಎಂ ಕುರ್ಚಿ ಕದನ ಕೊನೆಗೂ ಅಂತ್ಯ ಕಂಡಿದೆ. ತಾವೇ ಸಿಎಂ (CM) ಆಗಬೇಕೆಂದು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ (DK Shivakumar) ಕೊನೆಗೂ ಸಿದ್ದರಾಮಯ್ಯ (Siddaramaiah) ಅವರಿಗೆ ಸ್ಥಾನ ಬಿಟ್ಟು ಕೊಟ್ಟು ಡಿಸಿಎಂ (DCM) ಆಗಲು ಒಪ್ಪಿಗೆ ನೀಡಿದ್ದಾರೆ. ಕೆಲವೊಂದು ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗುತ್ತದೆ ಎಂದು ಡಿಕೆಶಿ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಡಿಕೆಶಿ, ಕರ್ನಾಟಕದ ಜನತೆಗೆ ಬದ್ಧರಾಗಿರಬೇಕು. ಪಾರ್ಲಿಮೆಂಟ್ ಎಲೆಕ್ಷನ್ ಇನ್ನೇನು ಹತ್ತಿರದಲ್ಲೇ ಇದೆ. ಹೀಗಾಗಿ ನಾವು ಬೇರೇನೂ ಮಾಡಲು ಸಾಧ್ಯವಿಲ್ಲ. ನಾನು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗಿದೆ. ಪಕ್ಷದಲ್ಲಿ ಹೆಚ್ಚಿನವರು ನಿರ್ಧರಿಸಿದಂತೆ ನಡೆದುಕೊಳ್ಳಲೇ ಬೇಕಾಗಿದೆ ಎಂದು ಹೇಳಿದರು. ಪಕ್ಷದ ಹಿರಿಯರು ಮಾಡಿರುವ ಸೂತ್ರವನ್ನು ಈಗ ಒಪ್ಪಿಕೊಳ್ಳಲೇಬೇಕು. ಕೆಲವೊಮ್ಮೆ ಅವರು ಏನು ಹೇಳುತ್ತಾರೋ ಅದನ್ನು ನಾವು ಕೇಳಲೇ ಬೇಕಾಗುತ್ತದೆ. ಅಂತಿಮವಾಗಿ ನಮಗೆ ದೊಡ್ಡ ಜವಾಬ್ದಾರಿಯಿದೆ.…
ಬೆಂಗಳೂರು: ತುಷಾರ್ ಗಿರಿನಾಥ್ ಅವಧಿಯಲ್ಲಿನ ಅಕ್ರಮಗಳ ಕುರಿತು ವಿಶೇಷ ತನಿಖೆ ನಡೆಯಲಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಮೇಶ್ ಬಾಬು(Ramesh Babu) ಮನವಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ತುಷಾರ್ ಗಿರಿನಾಥ್ (Tushar Girinath)ತಮ್ಮ ಅಧಿಕಾರದ ಅವಧಿಯಲ್ಲಿ ಕಾಮಗಾರಿಗಳ ಸಹಿತವಾಗಿ ಹಲವಾರು ಅಕ್ರಮಗಳಿಗೆ ಅವಕಾಶ ಕೊಟ್ಟಿರುವ ಆರೋಪವಿದೆ. ಅಲ್ಲದೆ, ಬಿಬಿಎಂಪಿ ವ್ಯಾಪ್ತಿಯ ಚುನಾವಣಾ ಅಧಿಕಾರಿಯಾಗಿ ಚಿಲುಮೆ ಖಾಸಗಿ ಸಂಸ್ಥೆಗೆ ಮತದಾರರ ಪಟ್ಟಿಯ ಖಾಸಗಿ ವಿವರಗಳನ್ನು ಸಂಗ್ರಹಿಸುವ ಅವಕಾಶ ನೀಡುವುದರ ಮೂಲಕ ಅಕ್ರಮ ಎಸಗಿದ ಆರೋಪ ಅವರ ಮೇಲಿದ್ದು, ಇದೆಲ್ಲವನ್ನೂ ಮುಂದಿಟ್ಟುಕೊಂಡು ತನಿಖೆ ನಡೆಸಬೇಕು ಎಂದು ರಮೇಶ್‍ಬಾಬು ಒತ್ತಾಯಿಸಿದರು. ಹೊಸ ಸರಕಾರ ಆಡಳಿತಾತ್ಮಕವಾಗಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಪಾಲಿಕೆಗೆ ಸಂಬಂಧಪಟ್ಟಂತೆ ಇವರು ಯಾವುದೇ ಆರ್ಥಿಕ ನಿರ್ಣಯಗಳನ್ನು ತೆಗೆದುಕೊಳ್ಳದಂತೆ ನಿರ್ದೇಶನ ನೀಡಿ. ಮತದಾರರ ಪಟ್ಟಿಯ ಅಕ್ರಮಗಳಿಗೆ ಸಂಬಂಧಪಟ್ಟಂತೆ ರಾಜ್ಯ ಸರಕಾರದ ವತಿಯಿಂದ ತನಿಖೆ ಕೈಗೊಳ್ಳಲು ಅವಶ್ಯಕವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಮೇಶ್‍ಬಾಬು ಆಗ್ರಹಿಸಿದರು.
ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಬ್ಲಾಕ್ ಮೇಲ್ ತಂತ್ರ ಅನುಸರಿಸುತ್ತಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆರೋಪ ಮಾಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಈ ಬಾರಿ ನಾನು ಸಿಎಂ ಆಗಿಲ್ಲ ಅಂದರೆ ನನ್ನ ಜನ್ಮದಲ್ಲಿ ಸಿಎಂ ಆಗೋಕೆ ಸಾಧ್ಯವೇ ಇಲ್ಲ ಎಂದು ಗೊತ್ತಾಗಿ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ಸಿ ಎಂ ಆಗಿ, ಪ್ರತಿಪಕ್ಷ ನಾಯಕರಾಗಿ ಈಗ ಮತ್ತೆ ಸಿಎಂ ಆಗಲು ಹೊರಟಿದ್ದಾರೆ. 2009 ರಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಸಿದ್ದರಾಮಯ್ಯ ಬ್ಲಾಕ್ ಮೇಲ್ ಮಾಡಿದ್ದರು” ಎಂದು ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ ನಲ್ಲಿ ವಿರೋಧ ಪಕ್ಷ ಸ್ಥಾನ ಕೊಟ್ಟರೆ ಇರುತ್ತೇನೆ, ಇಲ್ಲ ಅಂದರೆ ನನ್ನ ದಾರಿ ನೋಡಿಕೊಳ್ಳುತ್ತೇನೆ ಎಂದಿದ್ದರು. ಹಾಗಾಗಿ ಅಂದು ಪ್ರತಿಪಕ್ಷ ನಾಯಕರಾಗಿದ್ದ ಖರ್ಗೆ ಅವರನ್ನು ಲೋಕಸಭೆಗೆ ಕಳುಹಿಸಿ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷ ನಾಯಕರನ್ನಾಗಿ ಮಾಡ ಲಾಯಿತು. ಈಗಲೂ ಅದೇ ರೀತಿ ಬ್ಲಾಕ್ ಮೇಲ್ ತಂತ್ರ ಮಾಡುತ್ತಿದ್ದಾರೆ. ನನ್ನ…
ನವದೆಹಲಿ: ಮುಖ್ಯಮಂತ್ರಿ ಹುದ್ದೆ ತನಗೆ ಸಿಗಬೇಕೆಂದು ಪಟ್ಟು ಹಿಡಿದು ಸಿದ್ದರಾಮಯ್ಯಗೆ (Siddaramaiah) ಚೆಕ್‌ಮೇಟ್ ಕೊಟ್ಟಿದ್ದ ʼಕನಕಪುರದ ಬಂಡೆʼ ಒಂದು ಕರೆಯಿಂದ ಕರಗಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಬುಧವಾರ ಏನಾಯ್ತು? ಬುಧವಾರ ಬೆಳಗ್ಗೆಯಿಂದ ರಾತ್ರಿಯವರೆಗೆ ಸಿಎಂ ಆಯ್ಕೆ ಕಸರತ್ತು ನಡೆಯಿತು. ರಾಹುಲ್ ಗಾಂಧಿ (Rahul Gandhi) ತಮ್ಮ ನಿವಾಸದಲ್ಲಿ ಸಿದ್ದರಾಮಯ್ಯ ಜೊತೆ ಮೊದಲು ಮಾತನಾಡಿದರು. ಬಳಿಕ ಡಿಕೆ ಶಿವಕುಮಾರ್ (DK Shivakumar) ಜೊತೆ ಸಂಧಾನ ಮಾತುಕತೆ ನಡೆಸಿದರು. ಈ ಸಂಧಾನ ಮಾತುಕತೆ ಡಿಕೆಶಿ ಒಪ್ಪಿಗೆ ಸೂಚಿಸದೇ ನೇರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನಿವಾಸಕ್ಕೆ ತೆರಳಿದರು. ಇಲ್ಲಿ ನನಗೆ ಸಿಎಂ ಪಟ್ಟ ನೀಡದೇ ಇದ್ದರೂ ಪರ್ವಾಗಿಲ್ಲ ನೀವು ಸಿಎಂ ಆಗಿ ಎಂದು ಹೊಸ ದಾಳ ಉರುಳಿಸಿ ತೆರಳಿದ್ದರು. ತಡರಾತ್ರಿ ಏನಾಯ್ತು? ಒಂದು ಕಡೆ ಸಿದ್ದರಾಮಯ್ಯ ತಂಡ ಇನ್ನೊಂದು ಕಡೆ ಡಿಕೆಶಿ ತಂಡ ದೆಹಲಿಯಲ್ಲಿ ಬೀಡು ಬಿಟ್ಟು ಹೈಕಮಾಂಡ್ ಆದೇಶಕ್ಕೆ ಕಾಯುತ್ತಿತ್ತು. ರಾತ್ರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ನಿವಾಸದಲ್ಲಿ ನಡೆದ ಹೈಕಮಾಂಡ್ ಸಭೆಗೆ…
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಬಹುತೇಕ ಆಯ್ಕೆ ಖಚಿತವಾಗಿದೆ. ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಪಟ್ಟ ದೊರೆತಿದೆ. ಇದು ಇಂದು ಸಂಜೆ 7ಕ್ಕೆ ಬೆಂಗಳೂರಿನಲ್ಲಿ ನಡೆಯುವಂತ ಶಾಸಕಾಂಗ ಪಕ್ಷದ ಸಭೆಯಲ್ಲಿ ಫೈನಲ್ ಆಗಿ ಅಧಿಕೃತ ಘೋಷಣೆಯಾಗಲಿದೆ. ಅದಕ್ಕೂ ಮುನ್ನ ಇಂದು ಬೆಳಿಗ್ಗೆ 9.30ಕ್ಕೆ ದೆಹಲಿಯಲ ಕೆ.ಸಿ ವೇಣುಗೋಪಾಲ್ ನಿವಾಸದಲ್ಲಿ ಸಿಎಂ ಗದ್ದುಗೆ ಗುದ್ದಾಟ ಶಮನಕ್ಕೆ ಬ್ರೇಕ್ ಹಾಕಲು ಬ್ರೇಕ್ ಫಾಸ್ಟ್ ಮೀಟಿಂಗ್ ಅರೆಂಜ್ ಮಾಡಲಾಗಿದೆ. ವೇಣುಗೋಪಾಲ್ ನಿವಾಸದಲ್ಲಿ ನಡೆಯುತ್ತಿರುವಂತ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ವಿಶೇಷ ಆಹ್ವಾನವನ್ನು ನೀಡಲಾಗಿದೆ. ಡಿಕೆಶಿ ಹಾಗೂ ಸಿದ್ಧರಾಮಯ್ಯಗೆ ವಿಶೇಷ ಆಹ್ವಾನವನ್ನು ನೀಡಲಾಗಿದೆ. ಈ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗಿಯಾಗಲಿರುವಂತ ನಾಯಕರೊಂದಿಗೆ ಕಾಂಗ್ರೆಸ್ ನಾಯಕರು ಅಂತಿಮ ಚರ್ಚೆ ನಡೆಸಿ, ಕರ್ನಾಟಕದ ಮುಂದಿನ ಸಿಎಂ ಹುದ್ದೆಗಾಗಿ ನಡೆಯುತ್ತಿರುವಂತ ಗುದ್ದಾಟಕ್ಕೆ ಬ್ರೇಕ್ ಕೂಡ ಹಾಕಲಿದ್ದಾರೆ ಎನ್ನಲಾಗುತ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನಿವಾಸದಲ್ಲಿ ನಡೆಯುತ್ತಿರುವಂತ ಇಂದು ಬೆಳಿಗ್ಗೆಯ ಉಪಹಾರ ಕೂಟವು…