ಬೆಂಗಳೂರು: ಅಂತೂ ಇಂತೂ ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಫೈನಲ್ ಆಗಲಿದೆ. ಮೇ.20ರಂದು 12.30ಕ್ಕೆ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಈ ಸಂಬಂಧ ಎಐಸಿಸಿ ಅಧ್ಯಕ್ಷರಿಂದ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಮೇ.202ರಂದು ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಒಟ್ಟಾರೆಯಾಗಿ ಕೆಲ ದಿನಗಳಿಂದ ನಡೆಯುತ್ತಿದ್ದಂತ ಕರ್ನಾಟಕ ಮುಂದಿನ ಸಿಎಂ ಆಯ್ಕೆ ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲೇ ಇಂದು ಸಂಜೆ 7ಕ್ಕೆ ಅಧಿಕೃತ ಘೋಷಣೆಗಾಗಿ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿರುವುದಾಗಿ ತಿಳಿದು ಬಂದಿದೆ. ಈ ಸಿಎಲ್ ಪಿ ಸಭೆಯಲ್ಲೇ ನಾಯಕರ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ.
Author: Prajatv Kannada
ಬೆಂಗಳೂರು: ಚುನಾವಣಾ ಫಲಿತಾಂಶ ಪ್ರಕಟವಾಗಿ 5 ದಿನಗಳ ಬಳಿಕ ಕೊನೆಗೂ ಸಿಎಂ (CM) ಕುರ್ಚಿಯ ಕದನ ಅಂತ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) 2ನೇ ಬಾರಿಗೆ ಅಧಿಕಾರ ಸ್ವೀಕರಿಸಲು ಮುಂದಾಗಿದ್ದು, ಡಿಕೆ ಶಿವಕುಮಾರ್ (DK Shivakumar) ಉಪ ಮುಖ್ಯಮಂತ್ರಿಯಾಗಲು (DCM) ಒಪ್ಪಿಗೆ ನೀಡಿದ್ದಾರೆ. ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಒಟ್ಟಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನದಲ್ಲೂ ಭರ್ಜರಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ನಿರ್ಧರಿಸಿದೆ. ಕಂಠೀರವ ಸ್ಟೇಡಿಯಂ ಬಳಿ ಸಿಎಂ ಸಿದ್ದರಾಮಯ್ಯ ಅವರ ಫ್ಲೆಕ್ಸ್‌ಗಳು ಈಗಾಗಲೇ ರಾರಾಜಿಸುತ್ತಿವೆ. 2ನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿರುವ ಸಿದ್ದರಾಮಯ್ಯಗೆ ಶುಭಾಶಯಗಳು ಎಂದು ಫ್ಲೆಕ್ಸ್‌ಗಳಲ್ಲಿ ಬರೆಯಲಾಗಿದೆ. ಶನಿವಾರ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮಕ್ಕೆ ಅಭಿಮಾನಿಗಳು, ಕಾರ್ಯಕರ್ತರು ಸೇರಿ ಸುಮಾರು 1 ಲಕ್ಷ ಮಂದಿ ಭಾಗವಹಿಸುವ ಸಾಧ್ಯತೆಯಿದೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ಬಳಿಕ ಸಿದ್ದರಾಮಯ್ಯನವರು ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿ 5 ವರ್ಷದ ಅವಧಿಯನ್ನು ಪೂರ್ಣಗೊಳಿಸಿದ್ದರು.
ಬೆಂಗಳೂರು: 2023ರ ಮೇ 13ರಂದು ಹೊರಬಿದ್ದ 16ನೇ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ(Karnataka Assembly Elections 2023 Result) ಹೀನಾಯವಾಗಿ ಸೋಲು ಕಂಡ ಮಾಜಿ ಸಚಿವ ಡಾ.ಕೆ.ಸುಧಾಕರ್(Dr K Sudhkar) ಅವರು ಸಮ್ಮಿಶ್ರ ಸರ್ಕಾರ ಪತನ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ(Siddaramaiah) ಕಾರಣ ಎಂಬಂತೆ ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಎಂದು ಟ್ವೀಟರ್ನಲ್ಲಿ ಸುಧಾಕರ್ ಪ್ರಶ್ನೆ ಮಾಡಿದ್ದಾರೆ. JDS-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ನಮ್ಮ ಸಮಸ್ಯೆ ಬಗ್ಗೆ, ನಮಗೆ ಆಗುತ್ತಿದ್ದ ಅನ್ಯಾಯಗಳ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಬಳಿ ಪ್ರಸ್ತಾಪ ಮಾಡುತ್ತಿದ್ದೆವು. ಸಿದ್ದರಾಮಯ್ಯ ಆಗ ಈ ಸರ್ಕಾರದಲ್ಲಿ ನನ್ನ ಮಾತು ನಡೆಯುತ್ತಿಲ್ಲ. ನನ್ನ ಕ್ಷೇತ್ರ, ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭಾ ಚುನಾವಣೆವರೆಗೂ ಸಹಿಸಿಕೊಳ್ಳಿ. ಲೋಕಸಭಾ ಚುನಾವಣೆ ಮುಗಿದ ಬಳಿಕ ಮೈತ್ರಿ ಸರ್ಕಾರ ಇರಲ್ಲ. ಹೆಚ್ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಇರಲು ಬಿಡಲ್ಲ ಎಂದು ಹೇಳ್ತಿದ್ದರು. ಸಿದ್ದರಾಮಯ್ಯ ಶಾಸಕರಿಗೆ ಸಮಾಧಾನ ಹೇಳಿ ಕಳುಹಿಸುತ್ತಿದ್ದರು. ಕಾರ್ಯಕರ್ತರು, ಮುಖಂಡರನ್ನು ಉಳಿಸಿಕೊಳ್ಳಲು ರಿಸ್ಕ್ ತೆಗೆದುಕೊಂಡ್ವಿ. ರಾಜೀನಾಮೆ ನೀಡಿ ಮತ್ತೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ಈ ನಡೆಯಲ್ಲಿ ಸಿದ್ದರಾಮಯ್ಯ ಪ್ರೇರಣೆ ಇದೆ. ಇದನ್ನು ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲ ಎನ್ನಲು ಸಾಧ್ಯವೇ? ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಡಾ.ಸುಧಾಕರ್ ಆರೋಪ ಮಾಡಿದ್ದಾರೆ. ಸುಧಾಕರ್ ಅವರ ಟ್ವೀಟ್ ಈ ರೀತಿ ಇದೆ 2018ರಲ್ಲಿ ಅಂದಿನ ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು. ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.
ಭೋಪಾಲ್: ವ್ಯಕ್ತಿಯೊಬ್ಬ ತನ್ನ 13 ವರ್ಷದ ಮಗಳ ಮೃತದೇಹವನ್ನು ಬೈಕಿನಲ್ಲೇ ಸಾಗಿಸಿದ ಘಟನೆಯೊಂದು ಮಧ್ಯಪ್ರದೇಶದ (Madhyapradesh) ಶಹದೋಲ್ ನಲ್ಲಿ ನಡೆದಿದೆ. ವ್ಯಕ್ತಿಯನ್ನು ಲಕ್ಷ್ಮಣ್ ಸಿಂಗ್ ಎಂದು ಗುರುತಿಸಲಾಗಿದ್ದು, ಇವರು ಕೋಟಾ ಗ್ರಾಮದವರು. ಸಿಂಗ್ ಮಗಳು ಮಾಧುರಿ ಅನಾರೋಗ್ಯದಿಂದ ರಾತ್ರಿ ಮೃತಪಟ್ಟಿದ್ದಾಳೆ. ಮಗಳು ಸಾವನ್ನಪ್ಪುತ್ತಿದ್ದಂತೆಯೇ ಸಿಂಗ್ ಸರ್ಕಾರಿ ಆಸ್ಪತ್ರೆಯ ಅಧಿಕಾರಿಗಳಲ್ಲಿ ಅಂಬುಲೆನ್ಸ್ ವ್ಯವಸ್ಥೆ ಮಾಡುವಂತೆ ಕೇಳಿಕೊಂಡಿದ್ದಾರೆ. ಈ ವೇಳೆ ಅಧಿಕಾರಿಗಳು 15 ಕಿ.ಮಿ ಒಳಗಡೆ ಮಾತ್ರ ಅಂಬುಲೆನ್ಸ್ (Ambulance) ಕೊಡುವುದಾಗಿ ತಿಳಿಸಿದ್ದಾರೆ. ಅಲ್ಲದೆ 15 ಕಿ.ಮೀ ಗಿಂತಲೂ ದೂರ ಕ್ರಮಿಸಬೇಕಾದರೆ ಹೆಚ್ಚಿನ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಮಗಳ ಶವವನ್ನು ಬೈಕಿನಲ್ಲಿಯೇ ಸಾಗಿಸುವ ಬಗ್ಗೆ ತೀರ್ಮಾನ ಮಾಡಿದ್ದಾರೆ. ಶಹದೋಲ್ ಕಲೆಕ್ಟರ್ ವಂದನಾ ವೈದ್ಯ ಅವರು ಮಗಳ ಮೃತದೇಹವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ವಾಹನದ ವ್ಯವಸ್ಥೆ ಮಾಡಿದರು. ಹೀಗಾಗಿ ಅಂತಿಮ ವಿಧಿ-ವಿಧಾನಗಳಿಗಾಗಿ ಮಗಳ ದೇಹವನ್ನು ಮನೆಗೆ ಕೊಂಡೊಯ್ಯಲು ಸಾಧ್ಯವಾಯಿತು ಎಂದು ಸಿಂಗ್ ತಿಳಿಸಿದರು. ಶಹದೋಲ್ ಕಲೆಕ್ಟರ್, ಸಿಂಗ್ ಕುಟುಂಬಕ್ಕೆ ಸ್ವಲ್ಪ ಆರ್ಥಿಕ ಸಹಾಯವನ್ನು ಮಾಡಿದರು.…
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಕುರ್ಚಿ ಕದನ ಕೊನೆಗೂ ಬಗೆಹರಿದಿದೆ. ಡಿಕೆ ಶಿವಕುಮಾರ್ (DK Shivakumar) ಅವರಿಗೆ ಉಪಮುಖ್ಯಮಂತ್ರಿ ಪಟ್ಟ ದೊರಕಿದೆ. ಆದರೆ ಇದು ನಮಗೆ ಸಂಪೂರ್ಣ ಖುಷಿ ಕೊಟ್ಟಿಲ್ಲ ಎಂದು ಸಂಸದ ಡಿಕೆ ಸುರೇಶ್ (DK Suresh) ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟಿರುವುದು ನನಗೆ ಸಂಪೂರ್ಣ ಸಂತೋಷವಿಲ್ಲ. ಆದರೆ ರಾಜ್ಯದ ಹಿತದೃಷ್ಟಿಯಿಂದ ನಾವು ನಮ್ಮ ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಇದನ್ನು ಒಪ್ಪಿಕೊಳ್ಳಬೇಕಾಯಿತು ಎಂದು ತಿಳಿಸಿದರು. ಸಂಭಾವನೆ ವಿಚಾರದಲ್ಲಿ ಕಿರಿಕ್: ‘ಡಾನ್ 3’ ಚಿತ್ರದಿಂದ ಹೊರ ಬಂದ ಶಾರುಖ್ ಖಾನ್ ಮುಂದೆ ಏನಾಗುತ್ತೆ ಎಂಬುದನ್ನು ನೋಡೋಣ. ಡಿಕೆ ಶಿವಕುಮಾರ್ ಅವರು ಸಿಎಂ ಆಗಬೇಕೆಂಬುದು ನನ್ನ ಹಾರೈಕೆ ಆಗಿತ್ತು. ಆದರೆ ಆ ಆಸೆ ಈಡೇರಲಿಲ್ಲ. ಕಾದು ನೋಡೋಣ ಎಂದು ಸುರೇಶ್ ಹೇಳಿದರು. ಕರ್ನಾಟಕ ವಿಧಾನಸಭಾ ಚುನಾವಣೆ (Assembly Election) ಯಲ್ಲಿ ಕಾಂಗ್ರೆಸ್ (Congress) ಗೆದ್ದು ಬೀಗಿದರೂ, ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿತ್ತು. ಸಿದ್ದರಾಮಯ್ಯ (Siddaramaiah)…
ಬೆಂಗಳೂರು: ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಆಯ್ಕೆ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (MLA Lakshman Savadi)ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಒಳ್ಳೆಯ ನಿರ್ಧಾರವನ್ನೇ ತೆಗೆದುಕೊಂಡಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದಾರೆ. ಅಮಿತ್ ಶಾ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ: ಗೆಲ್ಲಿಸಿ ದೊಡ್ಡ ವ್ಯಕ್ತಿಯನ್ನಾಗಿ ಮಾಡುತ್ತೇವೆ ಎಂದಿದ್ದರು! ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡುತ್ತಾರೆ. ನಾನು ಯಾವುದೇ ಸಚಿವಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದೇನೆ. ಹೈಕಮಾಂಡ್ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ. ಯಾವುದೇ ಷರತ್ತು ಹಾಕಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿಲ್ಲ ಎಂದರು.
ಡಿ. ಕೆ. ಶಿವಕುಮಾರ್ ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಾಂಗ್ರೆಸ್ ಹೈಕಮಾಂಡ್ ಜೊತೆ ಸಹ ಉತ್ತಮ ಬಾಂಧವ್ಯ ಹೊಂದಿದ್ದು ಇದೀಗ ಡಿಸಿಎಂ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಜೀವನ ಚರಿತ್ರೆ ಕನಕಪುರ ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಶ್ರೀ ಡಿ.ಕೆ. ಶಿವಕುಮಾರ್ (ಜನನ 15ನೇ ಮೇ 1962) ತಮ್ಮತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು. 18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ NSUI ಗೆ ಸೇರ್ಪಡೆಗೊಂಡು ಅನತಿ ಕಾಲದಲ್ಲಿಯೇ ಬೆಂಗಳೂರು ಜಿಲ್ಲೆಯ ಘಟಕದ ಅಧ್ಯಕ್ಷರಾದರು (1981-83). ತದನಂತರ ವಿದ್ಯಾಭ್ಯಾಸಕ್ಕೆಂದು ಬೆಂಗಳೂರು ಸೇರಿದ ಶ್ರೀ ಡಿ.ಕೆ. ಶಿವಕುಮಾರ್ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷರಾಗಿ ಕನಕಪುರ…
ಬೆಂಗಳೂರು: ಇನ್ನೇರಡು ದಿನದಲ್ಲಿ ಕಾಂಗ್ರೆಸ್ನಿಂದ ನೂತನ ರಾಜ್ಯ ಸರ್ಕಾರ ರಚನೆಯಾಗಲಿದ್ದು, ಈ ಮೂಲಕ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಅಂತಿಮವಾಗಿದೆ. ಈ ನಡುವೆ ಅಧಿಕೃತವಾಗಿ ಸರ್ಕಾರ ರಚನೆಗೆ ಕಾಂಗ್ರೆಸ್ ಮುಂದಾಗಿದ್ದು, ಜಿ.ಪರಮೇಶ್ವರ್(Dr. Parameshwar) ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕೃತ ಪ್ರತಿನಿಧಿಯಾಗಿ ಜಿ ಪರಮೇಶ್ವರ್ ರಾಜ್ಯಪಾಲರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರ ಪತ್ರ ನೀಡಿದ್ದಾರೆ. ಅಲ್ಲದೇ ಮೇ 20 ರಂದು ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಡೆಸಲು ಮನವಿ ಸಲ್ಲಿಸಿದ್ದಾರೆ. ಇನ್ನೇರಡು ದಿನದಲ್ಲಿ ಕಾಂಗ್ರೆಸ್ನಿಂದ ನೂತನ ರಾಜ್ಯ ಸರ್ಕಾರ ರಚನೆಯಾಗಲಿದ್ದು, ಮೂಲಕ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಅಂತಿಮವಾಗಿದೆ. ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ 30-30 ಸೂತ್ರದ ಅಡಿಯಲ್ಲಿ ಸಿಎಂ ಆಯ್ಕೆ ಮಾಡಲಾಗಿದ್ದು, ಮೊದಲ 30 ತಿಂಗಳು ಸಿದ್ದರಾಮಯ್ಯ ಅವರು ಸಿಎಂ ಆಗಿ, ನಂತರದ 30 ತಿಂಗಳು ಶಿವಕುಮಾರ್ ಸಿಎಂ ಆಗಿ ಅಡಳಿತವನ್ನು ನಡೆಸಲಿದ್ದಾರೆ ಎನ್ನಲಾಗಿದೆ. ಈ ನಡುವೆ ಮೇ 20ರಂದು ಸಿಎಂ ಆಗಿ ರಾಜ್ಯವನ್ನು ಮುನ್ನೆಡಸಿಲಿದ್ದಾರೆ.…
2023ರ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್ ದೇಶದಲ್ಲಿ ನಡೆದಿದ್ದು ಭಾರತದ ಸೆಲೆಬ್ರಿಟಿಗಳು ಹೆಜ್ಜೆ ಹಾಕಿದ್ದಾರೆ. ಇದೇ ಮೊದಲ ಭಾರಿಗೆ ನಟಿ ಹಾಗೂ ಮಾಡೆಲ್ ಮನುಷಿ ಚಿಲ್ಲರ್ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ರ್ಯಾಂಪ್ ವಾಕ್ ಮಾಡಿದ್ದಾರೆ. 2017 ರಲ್ಲಿ ಮಾನುಷಿ ಛಿಲ್ಲರ್ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡರು. ಈ ಮೂಲಕ ಮಾನುಷಿ ವಿಶ್ವ ಸುಂದರಿ ಸ್ಪರ್ಧೆಯನ್ನು ಗೆದ್ದ ಭಾರತದ ಆರನೇ ಪ್ರತಿನಿಧಿ ಎನಿಸಿಕೊಂಡರು. ಮಾಜಿ ವಿಶ್ವ ಸುಂದರಿ ಮಾನುಷಿ ಛಿಲ್ಲರ್ ಫೋವಾರಿಯ ಬಿಳಿ ಬಣ್ಣದ ಗೌನ್‌ನಲ್ಲಿ ಕ್ಯಾನೆಸ್‌ಗೆ ಪಾದಾರ್ಪಣೆ ಮಾಡಿದ್ದಾರೆ. ನಟಿ ಅನುಷ್ಕಾ ಶರ್ಮಾ ಕೂಡ ಇದೇ ಮೊದಲ ಭಾರಿಗೆ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಹೆಜ್ಜೆ ಹಾಕಿದ್ದಾರೆ. ಸೈಫ್ ಪುತ್ರಿ ನಟಿ ಸಾರಾ ಅಲಿ ಖಾನ್ ಈ ಭಾರಿಯ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಹೆಜ್ಜೆ ಹಾಕಿದ್ದಾರೆ. ಕ್ಯಾನೆಸ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ 2023 ರ ಚೊಚ್ಚಲ ಪ್ರದರ್ಶನದಲ್ಲಿ ಲೆಹೆಂಗಾದಲ್ಲಿ ಮನಮೋಹಕವಾಗಿ ಕಾಣಿಸಿಕೊಂಡಿದ್ದಾರೆ. 76ನೇ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ…
ಬೆಂಗಳೂರು: ಈರುಳ್ಳಿ ಬೆಲೆ ಏಕಾಏಕಿ ಕುಸಿತಕಂಡಿದ್ದು ಇದರಿಂದ ಈರುಳ್ಳಿ ಬೆಳಗಾರರು ಕಂಗಾಲಾಗಿದ್ದಾರೆ. ಕಳೆದ ವಾರ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಿಂದ ಈರುಳ್ಳಿ ದೊಡ್ಡ ಪ್ರಮಾಣದಲ್ಲಿ ರಾಜಧಾನಿಯ ಮಾರುಕಟ್ಟೆಗೆ ದಾಸ್ತಾನು ಬಂದಿದೆ. ನಗರದ ಯಶವಂತಪುರ ಹಾಗೂ ದಾಸರಹಳ್ಳಿ ಎಪಿಎಂಸಿಗೆ ಬರುತ್ತಿದೆ. ಹೀಗಾಗೀ ಈರುಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಸೀಸನ್ ಅಲ್ಲದ ಕಾರಣ ಕಳೆದ ಒಂದೆರಡು ತಿಂಗಳಿಂದ ಯಶವಂತಪುರ ಮಾರುಕಟ್ಟೆಯ ಈರುಳ್ಳಿ ವಿಭಾಗದಲ್ಲಿ ವಹಿವಾಟು ಕುಸಿತವಾಗಿದೆ. ಏಕಾಏಕಿ ಸೋಮವಾರದಿಂದ ಇಲ್ಲಿಗೆ ದುಪ್ಪಟ್ಟು ಪ್ರಮಾಣದಲ್ಲಿ ಈರುಳ್ಳಿ ಬರುತ್ತಿದ್ದು ಕಡಿಮೆ ಗುಣಮಟ್ಟದ ಹೆಚ್ಚು ಈರುಳ್ಳಿ ಬಂದಿರುವ ಕಾರಣಕ್ಕೆ ಬೆಲೆಯೂ ಗಣನೀಯವಾಗಿ ಕಡಿಮೆಯಾಗಿದೆ. ಎಪಿಎಂಸಿಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 8-10 ರೂ. ಗೆ ಮಾರಾಟವಾಗುತ್ತಿದ್ದು ಕಳಪೆ ಈರುಳ್ಳಿ ಬೆಲೆ 5-8 ದರದಲ್ಲಿ ಹರಾಜು ಹಾಕಲಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಗುಣಮಟ್ಟದ ಈರುಳ್ಳಿಗೆ ಕೆಜಿಗೆ 20 ರೂ. ಗೆ ಮಾರಾಟವಾಗುತ್ತಿದ್ದು ಕಳಪೆ ಈರುಳ್ಳಿಗೆ 10-12 ರೂ. ಮಾತ್ರವೇ ಮಾರಾಟ ಮಾಡಲಾಗುತ್ತಿದೆ. 100 ರೂ.ಗೆ ಏಳು-ಎಂಟು ಕೇಜಿ…