ಲಖನೌ: ಐದು ಬಾರಿ ಐಪಿಎಲ್ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಸ್ಪೋಟಕ ಬ್ಯಾಟಿಂಗ್ ನಡೆಸಿ ಲಖನೌ ಸೂಪರ್ ಜಯಂಟ್ಸ್ ತಂಡದ 5 ರನ್ ರೋಚಕ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಮಾರ್ಕಸ್ ಸ್ಟೋಯ್ನಿಸ್ ಅವರನ್ನು ಅಭಿಮಾನಿಗಳು ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಇಲ್ಲಿನ ಏಕನಾ ಮೈದಾನದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಲಖನೌ ಸೂಪರ್ ಜಯಂಟ್ಸ್, ಕೇವಲ 35 ರನ್‌ಗಳಿಗೆ 3 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. 4ನೇ ವಿಕೆಟ್‌ಗೆ ನಾಯಕ ಕೃಣಾಲ್ ಪಾಂಡ್ಯ (49) ಜೊತೆಗೂಡಿದ ಮಾರ್ಕಸ್ ಸ್ಟೋಯ್ನಿಸ್ (89*) 82 ರನ್‌ಗಳ ನಿರ್ಣಾಯಕ ಜೊತೆಯಾಟವಾಡಿದ್ದರು. ಆ ಮೂಲಕ ತಂಡವನ್ನು ಅಪಾಯದಿಂದ ಪಾರು ಮಾಡಿದ್ದರು. 18ನೇ ಓವರ್‌ನಲ್ಲಿ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ ಮಾರ್ಕಸ್ ಸ್ಟೋಯ್ನಿಸ್, ಇಂಗ್ಲೆಂಡ್ ವೇಗಿ ಕ್ರಿಸ್ ಜೋರ್ಡನ್‌ಗೆ 24 ರನ್ ಚಚ್ಚುವ ಮೂಲಕ ತಂಡದ ಮೊತ್ತವನ್ನು 177 ರನ್ ಮೊತ್ತವನ್ನು ದಾಟಿಸಿದ್ದರು. ಮಾರ್ಕಸ್ ಸ್ಟೋಯ್ನಿಸ್ ಬ್ಯಾಟಿಂಗ್ ಪಂದ್ಯಕ್ಕೆ ಟರ್ನಿಂಗ್ ಪಾಯಿಂಟ್ ತಂದುಕೊಟ್ಟಿತ್ತು. ಏಕೆಂದರೆ…
Author: Prajatv Kannada
ಈ ಹಿಂದೆ ಕೇರಳದ ಉರಗಪ್ರಿಯ ಸುರೇಶ ಹಾವಿಗೆ ಮುತ್ತು ಕೊಟ್ಟ ವಿಡಿಯೋ ನೋಡಿದ ನೆನಪಿರಬಹುದು. ಇದೀಗ ನಿಕ್ ಎಂಬಾತ ಕೆರೆದಂಡೆಯ ಮೇಲೆ ಕುಳಿತು ಕಾಳಿಂಗ ಸರ್ಪದ ತಲೆಗೆ ಮುತ್ತಿಟ್ಟು ಸುದ್ದಿಯಲ್ಲಿದ್ದಾನೆ. ದೂರದಿಂದ ಹಾವನ್ನು ಕಂಡರೆ ಅಥವಾ ನೆನಪಿಸಿಕೊಂಡರೆ ಬೆಚ್ಚಿಬೀಳುವ ಅನೇಕರಿಗೆ ಈ ಮುತ್ತುಕೊಡುವ ಪರಿ ಕನಸಿನಲ್ಲಿಯೂ ಕಾಡಬಹುದೇ? ನೋಡಿ ಈ ವಿಡಿಯೋ. Video Player ಈ ವಿಡಿಯೋ ಅನ್ನು ಕಳೆದವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಈ ಕಾಳಿಂಗ ಸರ್ಪ ಬರೋಬ್ಬರಿ 12 ಅಡಿ ಉದ್ದ ಇದೆ. ನಿಧಾನವಾಗಿ ಚಲಿಸುವ ಅದನ್ನು ನಿಕ್ ಹಿಡಿಯುತ್ತಾನೆ. ಅದು ಹೆಡೆಯೆತ್ತಿ ನಿಲ್ಲುತ್ತದೆ. ಅದು ಅವನಿಗೆ ಬೆನ್ನು ಮಾಡಿದಾಗ ಮೆಲ್ಲಗೆ ಅವ ಅದರ ತಲೆಗೆ ಮುತ್ತನ್ನು ಕೊಡುತ್ತಾನೆ. ನೆಟ್ಟಿಗರು ಈ ವಿಡಿಯೋ ನೋಡಿ ಬೆಚ್ಚಿದ್ದಾರೆ. ಅನೇಕ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮೇ 31ರಂದು ಅಮೆರಿಕಕ್ಕೆ (America) ಭೇಟಿ ನೀಡಲಿದ್ದು, 10 ದಿನಗಳ ಕಾಲ ದೇಶಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ರಾಹುಲ್ ಗಾಂಧಿ ಜೂನ್ 4 ರಂದು ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಸುಮಾರು 5,000 ಅನುವಾಸಿ ಭಾರತೀಯರ (NRI) ಉದ್ದೇಶಿಸಿ ಮಾತನಾಡಲಿದ್ದಾರೆ. ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾದಲ್ಲಿ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಗಳಲ್ಲಿ ಚರ್ಚೆ ಮತ್ತು ಭಾಷಣ ನಡೆಸಲಿದ್ದಾರೆ. ಮಾತ್ರವಲ್ಲದೆ ರಾಜಕಾರಣಿಗಳು ಹಾಗೂ ಉದ್ಯಮಿಗಳನ್ನೂ ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಕಳೆದ ಬಾರಿ ರಾಹುಲ್ ಗಾಂಧಿ ಲಂಡನ್‌ಗೆ ತೆರಳಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಭಾಷಣ ನೀಡಿದ್ದರು. ಆ ಸಮಯ ಅವರು ಭಾರತ ಸರ್ಕಾರವನ್ನು ಟೀಕಿಸಿದ್ದರು. ಎಲ್ಲರಿಗೂ ತಿಳಿದಿರುವಂತೆ ಭಾರತೀಯ ಪ್ರಜಾಪ್ರಭುತ್ವ ಒತ್ತಡದಲ್ಲಿ ಹಾಗೂ ಆಕ್ರಮಣದಲ್ಲಿದೆ ಎಂಬುದು ಸಾಕಷ್ಟು ಸುದ್ದಿಯಲ್ಲಿದೆ. ನಾನು ಭಾರತದಲ್ಲಿ ವಿರೋಧ ಪಕ್ಷದ ನಾಯಕನಾಗಿದ್ದು, ಆ ಜಾಗದಲ್ಲಿ ಸರಿ ದಾರಿಗೆ ತರುವಂತಹ ಕೆಲಸ ಮಾಡುತ್ತಿದ್ದೇನೆ ಎಂದಿದ್ದರು. ಪ್ರಜಾಸತ್ತಾತ್ಮಕ ಸಂಸತ್ತಿಗೆ ಅಗತ್ಯವಿರುವ ಸಾಂಸ್ಥಿಕ ಚೌಕಟ್ಟು, ಮುಕ್ತ ಪತ್ರಿಕಾ,…
ಬೀಜಿಂಗ್: ಹಿಂದೂ ಮಹಾಸಾಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚೀನಾದ ಮೀನುಗಾರಿಕಾ ದೋಣಿ ಮುಳುಗಿದ್ದು ಅದರಲ್ಲಿದ್ದ ಎಲ್ಲಾ 39 ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ. ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಮುಳುಗಡೆ ಸಂಭವಿಸಿದ್ದು ದೋಣಿಯಲ್ಲಿದ್ದ ಚೀನಾದ 17, ಇಂಡೋನೇಷ್ಯಾದ 17 ಮತ್ತು ಫಿಲಿಪೈನ್ಸ್‍ನ ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಚೀನಾದ ನಾಯಕ ಕ್ಸಿ ಜಿನ್‍ಪಿಂಗ್ ಮತ್ತು ಪ್ರಧಾನಿ ಲಿ ಕಿಯಾಂಗ್ ಅವರು ವಿದೇಶದಲ್ಲಿರುವ ಚೀನೀ ರಾಜತಾಂತ್ರಿಕರಿಗೆ, ಹಾಗೆಯೇ ಕೃಷಿ ಮತ್ತು ಸಾರಿಗೆ ಸಚಿವಾಲಯಗಳಿಗೆ ಬದುಕುಳಿದವರ ಹುಡುಕಾಟದಲ್ಲಿ ಸಹಾಯ ಮಾಡಲು ಮನವಿ ಮಾಡಿದ್ದಾರೆ. ಲುಪೆಂಗ್ಲೈಯುವಾನ್ಯು ಎಂಬ ದೋಣಿ ಶಾಂಡೊಂಗ್‍ನ ಪೂರ್ವ ಪ್ರಾಂತ್ಯದಲ್ಲಿ ನೆಲೆಗೊಂಡಿತ್ತು ಇದನ್ನು ಪೆಂಗ್ಲೈಯಿಂಗ್ಯು ಕಂ. ಲಿಮಿಟೆಡ್ ನಿರ್ವಹಿಸುತ್ತಿತ್ತು ಎಂದು ತಿಳಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
2023ರಲ್ಲಿ ಯುವ ಬ್ಯಾಟರ್ ಶುಭಮನ ಗಿಲ್ ಮುಟ್ಟಿದ್ದೆಲ್ಲವೂ ಚಿನ್ನ. ಈ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಿರುವ 23 ವರ್ಷದ ಯುವ ಬ್ಯಾಟರ್, ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲೂ ಶತಕದ ಖಾತೆ ತೆರೆದಿದ್ದಾರೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಶುಭಮನ್ ಗಿಲ್, 58 ಎಸೆತಗಳಲ್ಲಿ 101 ರನ್ ಬಾರಿಸಿ ಮಿಂಚಿದರು. ಇದರ ಬೆನ್ನಲ್ಲೇ ಗಿಲ್ ಆಟಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಟೀಮ್ ಇಂಡಿಯಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಗುಣಗಾನ ಮಾಡಿದ್ದು, ಯುವ ತಾರೆಯ ಬ್ಯಾಟಿಂಗ್ ಸಾಮರ್ಥ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ವಿರಾಟ್ ವಿಶೇಷ ಸಂದೇಶವನ್ನೂ ಬರೆದಿದ್ದಾರೆ. ಸನ್‌ರೈಸರ್ಸ್ ವಿರುದ್ಧದ ಪಂದ್ಯದದಲ್ಲಿ ಗಿಲ್ ಬಾರಿಸಿದ ಶತಕದ ಬಲದಿಂದ ಟೈಟನ್ಸ್ 188/9 ರನ್‌ಗಳ ದೊಡ್ಡ ಮೊತ್ತ ದಾಖಲಿಸಿ, ನಂತರ ಎದುರಾಳಿಯನ್ನು 154/9 ರನ್‌ಗಳಿಗೆ ನಿಯಂತ್ರಿಸಿ ಜಯ ದಕ್ಕಿಸಿಕೊಂಡಿತು. ಈ ಮೂಲಕ ಅಂಕಪಟ್ಟಿಯಲ್ಲಿ 18…
ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ನಟನೆಯ ‘ಡಾನ್’ ಹಾಗೂ ‘ಡಾನ್ 2’ ಸಿನಿಮಾ ಸೂಪರ್ ಹಿಟ್ ಆಗಿದ್ದು ಈ ಚಿತ್ರದಿಂದ ಶಾರುಖ್ ಖಾನ್ ಕೀರ್ತಿ ಮತ್ತಷ್ಟು ಹೆಚ್ಚಾಗಿತ್ತು. ಈ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಫರ್ಹಾನ್ ಅಖ್ತರ್ ಇದೀಗ ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಸಿನಿಮಾ ತಂಡದ ಕಡೆಯಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ‘ಡಾನ್ 3’ ಸಿನಿಮಾದಿಂದ ನಟ ಶಾರುಖ್ ಖಾನ್ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಸಂಭಾವನೆ ವಿಚಾರದಲ್ಲಿ ಕಿರಿಕ್ ಆದ ಕಾರಣದಿಂದಾಗಿ ಶಾರುಖ್ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಫರ್ಹಾನ್ ಅಖ್ತರ್ ಹಾಗೂ ರಿತೇಶ್ ಸಿದ್ವಾನಿ ಸೇರಿ ‘ಎಕ್ಸೆಲ್ ಎಂಟರ್ಟೇನ್ಮೆಂಟ್’ ನಿರ್ಮಾಣ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಇತ್ತೀಚೆಗೆ ಮಾತನಾಡಿದ್ದ ರಿತೇಶ್ ಅವರು ‘ಡಾನ್ 3’ ಬಗ್ಗೆ ಅಪ್ಡೇಟ್ ನೀಡಿದ್ದರು. ಫರ್ಹಾನ್ ಅವರು ಸದ್ಯ ‘ಡಾನ್ 3’ ಕೆಲಸಗಳಲ್ಲಿ ಬ್ಯುಸಿ ಇರುವ ವಿಚಾರವನ್ನು ಅವರು ಖಚಿತಪಡಿಸಿದ್ದರು. ಶಾರುಖ್ ಖಾನ್ ‘ಡಾನ್…
ವಿವಾದದ ಮೂಲಕವೇ ತೆರೆಗೆ ಬಂದ ದಿ ಕೇರಳ ಸ್ಟೋರಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ದೇಶದ ಅನೇಕ ಕಡೆಗಳಲ್ಲಿ ಚಿತ್ರ ಹೌಸ್ಫುಲ್ ಪ್ರದರ್ಶನ ಕಾಣುತ್ತಿದ್ದು ಇದುವರೆಗೂ 156 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರತಂಡಕ್ಕೆ ಭರ್ಜರಿ ಗೆಲುವು ಸಿಕ್ಕಿದೆ. ಸುದೀಪ್ತೋ ಸೇನ್ ನಿರ್ದೇಶನದ ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ನಟಿ ಅದಾ ಶರ್ಮಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರ ಬಿಡುಗಡೆ ಆಗಿ 13 ದಿನ ಕಳೆದಿದ್ದರೂ ಕೂಡ ‘ದಿ ಕೇರಳ ಸ್ಟೋರಿ’ ಸಿನಿಮಾದ ಅಬ್ಬರ ನಿಂತಿಲ್ಲ. ಪ್ರತಿ ದಿನವೂ ಈ ಚಿತ್ರ ಉತ್ತಮವಾಗಿ ಕಲೆಕ್ಷನ್ ಮಾಡುತ್ತಿದೆ. ಸದ್ಯ 156 ಕೋಟಿ ರೂಪಾಯಿ ಮಾಡಿರುವ ಈ ಚಿತ್ರದ ಮುಂದಿರುವ ಟಾರ್ಗೆಟ್ 200 ಕೋಟಿ ರೂಪಾಯಿ! ಇದೇ ರೀತಿ ಪ್ರದರ್ಶನ ಮುಂದುವರಿದರೆ ಶೀಘ್ರದಲ್ಲೇ ಈ ಚಿತ್ರ ದ್ವಿಶತಕ ಬಾರಿಸಲಿದೆ. ಈ ಮಧ್ಯೆ ಸಿನಿಮಾದ ಸೀಕ್ವೆಲ್ ಬಗ್ಗೆ ಸುದ್ದಿ ಕೇಳಿಬಂದಿದೆ. ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಮಹಿಳೆಯರ ಬ್ರೇನ್ವಾಶ್ ಬಗ್ಗೆ ತೋರಿಸಲಾಗಿದೆ. ಆದರೆ ಹುಡುಗರ ಬ್ರೇನ್ವಾಶ್…
ಬಾಲಿವುಡ್ ನಟಿ ನೇಹಾ ಧೂಪಿಯಾ ಮದುವೆಯಾಗಿ 8 ವರ್ಷಗಳ ಬಳಿಕ ತೆರೆ ಹಿಂದಿನ ತಮ್ಮ ಮದುವೆಯ ವಿಷಯವನ್ನು ಮಾತನಾಡಿದ್ದಾರೆ. ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನೇಹಾ ಧೂಪಿಯಾ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಟಾರ್ ನಟರಿಗೆ ನಾಯಕಿಯಾಗಿ ಮಿಂಚಿದ್ದ ನಟಿ, ಸಿನಿಮಾ ಕೆರಿಯರ್‌ನಲ್ಲಿ ಬೇಡಿಕೆ ಇರೋವಾಗಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅಷ್ಟೊಂದು ಗಡಿ ಬಿಡಿಯಲ್ಲಿ ಮದುವೆಯಾಗಿದ್ಯಾಕೆ.? ಎಂದು ನಟಿ ಇದೀಗ ಪ್ರತಿಕ್ರಿಯಿಸಿದ್ದಾರೆ. ಬೇಡಿಕೆ ಇರುವಾಗಲೇ ನೇಹಾ ಧೂಪಿಯಾ, ಅಂಗದ್ ಬೇಡಿ ಅವರನ್ನು ಮೇ 10, 2018ರಲ್ಲಿ ಮದುವೆಯಾದರು. ನೇಹಾ ಸಿಖ್ ಸಂಪ್ರದಾಯದಂತೆ ಎರಡು ಕುಟುಂಬಗಳ ಸಮ್ಮುಖದಲ್ಲಿ ಮದುವೆಯಾದರು. ಮದುವೆಗೂ ಮುನ್ನವೇ ತಾನು ಪ್ರೆಗ್ನೆಂಟ್ ಆಗಿದ್ದೆ, ಹಾಗಾಗಿ ಆತುರದಲ್ಲಿ ಮದುವೆಯಾಗುವ ಸಂದರ್ಭ ಎದುರಾಯಿತು ಎಂದಿದ್ದಾರೆ. ನಾನು ಪ್ರೆಗ್ನೆಂಟ್ ಆಗಿರುವ ವಿಷಯ ತಿಳಿದ ಪೋಷಕರು 2 ದಿನದಲ್ಲಿ ಮದುವೆಯಾಗಬೇಕು ಎಂದು ತಾಕೀತು ಮಾಡಿದರು. ಬಳಿಕ 72 ಗಂಟೆಯಲ್ಲಿ ನನ್ನ – ಅಂಗದ್ ಮದುವೆ ಆಪ್ತರ ಸಮ್ಮುಖದಲ್ಲಿ ನೆರವೇರಿತ್ತು.…
ವಿವಾದದ ನಡುವೆಯೂ ತೆರೆಗೆ ಬಂದ ದಿ ಕೇರಳ ಸ್ಟೋರಿ ಸಿನಿಮಾ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿದೆ. ಈ ಮಧ್ಯೆ ತಮಿಳಿನಲ್ಲೂ ಇಂಥದ್ದೇ ಮಾದರಿಯ ಚಿತ್ರವೊಂದು ರೆಡಿಯಾಗಿದ್ದು, ಈ ಚಿತ್ರ ಕೂಡ ವಿವಾದಕ್ಕೆ ಕಾರಣವಾಗಿದೆ. ಆ ಚಿತ್ರವನ್ನು ತಡೆಯಬೇಕು ಎಂದು ಮುಸ್ಲಿಂ ಸಮುದಾಯ ಆಗ್ರಹಿಸಿದೆ. ಕೆಲವು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿರುವ ತಮಿಳಿನ ಫರ್ಹಾನಾ ಸಿನಿಮಾ ಮುಸ್ಲಿಂ ವಿರೋಧ ಧೋರಣೆಯನ್ನು ತೋರುತ್ತಿದೆ. ಹಾಗಾಗಿ ಮೂಲಭೂತವಾದಿಗಳು ಚಿತ್ರವನ್ನು ವಿರೋಧಿಸುತ್ತಿದ್ದಾರೆ. ಈ ಚಿತ್ರ ಮುಸ್ಲಿಂ ಮಹಿಳೆಯ ಮತ್ತೊಂದು ಮುಖವನ್ನು ಅನಾವರಣ ಮಾಡಿದ್ದು ಇದೇ ಕಾರಣಕ್ಕೆ ಮುಸ್ಲಿಂ ಸಮುದಾಯ ಸಾಕಷ್ಟು ವಿರೋದ ಹುಟ್ಟುಹಾಕಿದೆ. ಮುಸ್ಲಿಂ ಮಹಿಳೆಯೊಬ್ಬರು ಬಡತನದ ಕಾರಣದಿಂದಾಗಿ ಲೈಂಗಿಕತೆ ಕುರಿತಾಗಿ ಮಾತನಾಡುವ ಕಾಲ್ ಸೆಂಟರ್ ಸೇರಿಕೊಳ್ಳುತ್ತಾಳೆ. ಅಲ್ಲಿಂದ ಆಕೆ ವೃತ್ತಿಗೆ ಸಂಬಂಧಿಸಿದ ಸಂಕಟಗಳು ಏನು, ಬ್ಲಾಕ್ ಮೇಲರ್ ಒಬ್ಬನ ಕಿರುಕುಳದಿಂದ ಆಕೆ ಹೇಗೆ ಪಾರಾಗುತ್ತಾಳೆ ಹೀಗೆ ಕಥೆಯನ್ನು ಒಳಗೊಂಡಿದೆ. ಈ ಕಥೆಗೆ ಇಂಡಿಯನ್ ನ್ಯಾಷನಲ್ ಲೀಗ್…
ಚಿತ್ರದುರ್ಗ: 2023ರ ರಾಜ್ಯ ವಿಧಾನಸಭಾ ಚುನಾವಣೆ ದೃಷ್ಟಿ ಇಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಯಶಸ್ಸು ತಂದುಕೊಟ್ಟಿದೆ. ಚಾಮರಾಜನಗರದಿಂದ ಆರಂಭಗೊಂಡ ಯಾತ್ರೆ ಜಮ್ಮು ಕಾಶ್ಮೀರದಲ್ಲಿ ಸಾಗಿತು. ಇತ್ತ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ಸಾಗಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ರಾಜ್ಯದಲ್ಲಿ ಸುಮಾರು 21 ದಿನಗಳ ಕಾಲ ಸಂಚರಿಸಿತು. ಸೆಪ್ಟೆಂಬರ್ 31, 2022ರಿಂದ ಆರಂಭವಾದ ಯಾತ್ರೆ ಅಕ್ಟೋಬರ್ 19, 2022ರವರೆಗೆ ರಾಜ್ಯದ ಒಟ್ಟು ಏಳು ಜಿಲ್ಲೆಗಳನ್ನು ಒಳಗೊಂಡ 511 ಕಿಲೋಮೀಟರ್ ದೂರವನ್ನು ಪ್ರಯಾಣಿಸಿದರು. ಚಾಮರಾಜನಗರ ಜಿಲ್ಲೆಯಿಂದ ಯಾತ್ರೆ ಆರಂಭಿಸಿದ ಕೇಂದ್ರ ನಾಯಕ ರಾಹುಲ್, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಂಚರಿಸಿದರು. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಗಡಿಭಾಗದ ಮೂಲಕ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ…