ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಸಂಬಂಧ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಮುಕ್ತಾಯದ ಹಂತಕ್ಕೆ ಬಂದಿದ್ದು, ಇಂದು ಪ್ರೈಮರಿ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಇಂದು 3991 ಪುಟಗಳ ಚಾರ್ಜ್‌ಶೀಟ್ ಸಲ್ಲಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಪ್ರಕರಣದ ತನಿಖೆ ಕಂಪ್ಲೀಟ್ ಆಗಿದೆ. 17 ಆರೋಪಿಗಳ ವಿರುದ್ಧ ಹಲವು ಸಾಕ್ಷ್ಯಗಳು ಕಲೆ ಹಾಕಿದ್ದು, ಅಂತಿಮ ವರದಿ ರೆಡಿಯಾಗಿದೆ. ಒಟ್ಟು 3991 ಪುಟಗಳನ್ನ ಚಾರ್ಜ್ ಶೀಟ್ನಲ್ಲಿ ಅಳವಡಿಸಲಾಗಿದೆ. ಕೊಲೆ ಕೇಸ್ಗೆ ಸಂಬಂಧಿಸಿದಂತೆ 17 ಜನರನ್ನ ಬಂಧಿಸಲಾಗಿತ್ತು. ಕೆಲವರನ್ನ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. FSL ಮತ್ತು CFSLನಿಂದ ವರದಿ ಬಂದಿದೆ ಎಂದರು. CFSLನಿಂದ ಒಂದಷ್ಟು ವರದಿ ಬಾಕಿ ಇದೆ. ಸರ್ಕಾರಿ ಅಧಿಕಾರಿಗಳನ್ನೂ ಈ ಕೇಸ್ನಲ್ಲಿ ಸಾಕ್ಷಿಗಳನ್ನಾಗಿ ಮಾಡಿಕೊಳ್ಳಲಾಗಿದೆ. 231ಸಾಕ್ಷಿದಾರರನ್ನ ಉಲ್ಲೇಖ ಮಾಡಲಾಗಿದೆ. ಬೆಂಗಳೂರಿನ ಎಫ್ಎಸ್ಎಲ್ನಿಂದ ಎಲ್ಲಾ ವರದಿ ಬಂದಿವೆ. ಸಿಎಫ್ಎಸ್ಎಲ್ ನಿಂದ ಎಲೆಕ್ಟ್ರಾನಿಕ್ ಡಿವೈಸ್ಗಳ ವರದಿ ಬಂದಿದೆ.…
Author: Prajatv Kannada
ಚಿತ್ರದುರ್ಗದ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಮುಕ್ತಾಯದ ಹಂತಕ್ಕೆ ಬಂದಿದ್ದು, ಪೊಲೀಸರು ಇಂದು 3991 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಇದರ ಮಧ್ಯೆ ನಟ ದರ್ಶನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ದರ್ಶನ್ ತಪಾಸಣೆಗಾಗಿ ವೈದ್ಯರು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಸದ್ಯ ಜೈಲಿನಲ್ಲಿ ದರ್ಶನ್ಗೆ ವೈದ್ಯರು ರೂಟಿನ್ ಚೆಕಪ್ ಮಾಡಿದ್ದು, ಬಿಪಿ, ಶುಗರ್ ಸೇರಿದಂತೆ ಬೆನ್ನು ನೋವು ಇರುವ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದ್ದಾರೆ. ಚಾರ್ಜ್‌ಶೀಟ್ ಸಲ್ಲಿಕೆ ದಿನವೇ ದರ್ಶನ್ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಚಾರ್ಜ್‌ಶೀಟ್ ಸಲ್ಲಿಕೆಯಾಗಿರೋ ಬೆನ್ನಲ್ಲೇ ದರ್ಶನ್ಗೆ ಟೆನ್ಷನ್ ಶುರುವಾದ ಕಾರಣ ಆರೋಗ್ಯದಲ್ಲಿ ಬದಲಾವಣೆಯಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಏನಾಯಿತು? ಕೊಲೆಗೆ ಯಾರೆಲ್ಲ ಪ್ರಯತ್ನಿಸಿದರು? ತನಿಖೆ ವೇಳೆ ಸಿಕ್ಕ ಸಾಕ್ಷಿಗಳು ಸೇರಿದಂತೆ ಎಲ್ಲವೂ 4,800ಕ್ಕೂ ಪುಟಗಳ ಚಾರ್ಜ್ಶೀಟ್ನಲ್ಲಿ ಇರಲಿದೆ. ಇಂದು ಚಾರ್ಜ್‌ಶೀಟ್ ಕರೆಕ್ಷನ್ ಕೆಲಸ ನಡೆಯುತ್ತಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ)…
ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಡಿ ಗ್ಯಾಂಗ್ ವಿರುದ್ಧ 3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್, ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿನ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳ ಕುರಿತ ದೋಷಾರೋಪಣಾ ಪಟ್ಟಿಯನ್ನು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ನಮ್ಮ ಮೆಟ್ರೊ ರೈಲು ಕಾಮಗಾರಿಯ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಸುರಂಗ ಕೊರೆದು ಟಿಬಿಎಂ ತುಂಗಾ ಹೊರ ಬಂದಿದೆ. ನಾಗವಾರ ನಿಲ್ದಾಣದ ಕಟ್ ಮತ್ತು ಕವರ್ ಶಾಫ್ಟ್‌ನಲ್ಲಿ ಪೂರ್ಣ ಸುರಂಗ ಕೊರೆದು ತುಂಗಾ-ಟಿಬಿಎಂ ಹೊರಬಂದಿದೆ. 936.6 ಮೀ ಸುರಂಗ ಕೊರೆಯುವ ಕಾಮಗಾರಿಯನ್ನು ಯಂತ್ರ ಪೂರ್ಣಗೊಳಿಸಿದೆ. ಕಾಡುಗೊಂಡನಹಳ್ಳಿ ನಿಲ್ದಾಣದಲ್ಲಿ ಕಾಮಗಾರಿ ಪ್ರಾರಂಭ ಹಿನ್ನೆಲೆ ನಾಗವಾರ ನಿಲ್ದಾಣದ ಸೌತ್ ಕಟ್ ಮತ್ತು ಕವರ್ ಶಾಫ್ಟ್ ನಲ್ಲಿ ಪೂರ್ಣ ಮಾಡಲಾಗಿದೆ. ಒಟ್ಟು 20992 ಮೀ ಸುರಂಗ ಮಾರ್ಗದಲ್ಲಿ 20582.7 ಮೀ ಅಂದರೆ ಶೇ 98%. ಪೂರ್ಣ ಆಗಿದ್ದು, ಒಟ್ಟಾರೆ ರೀಚ್-6ರ ಸುರಂಗ ಮಾರ್ಗಕ್ಕಾಗಿ ನಿಯೋಜಿಸಲಾದ 9 ಟಿಬಿಎಂ ಇದಾಗಿದೆ ಎನ್ನಲಾಗಿದೆ. ಇಲ್ಲಿಯವರೆಗೆ 8 ಟಿಬಿಎಂಗಳು ಸುರಂಗ ಮಾರ್ಗದ ಕಾಮಗಾರಿ ಪೂರ್ಣಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚಿಗೆ ಸುರಿದ ಸತತ ಮಳೆಗೆ ಕಲಬುರಗಿ ಜಿಲ್ಲೆ ನಲುಗಿ ಹೋಗಿದ್ದು ಸಾವಿರಾರು ಎಕರೆ ಹೆಸರು ಉದ್ದು ಹಾಳಾಗಿದ್ದು ಅನ್ನದಾತ ಕಂಗಾಲಾಗಿದ್ದಾನೆ. ಕೈಗೆ ಬಂದಿದ್ದ ಹೆಸರು ಉದ್ದು ನೀರುಪಾಲಾಗಿದ್ದು ರೈತರಿಗೆ ಮುಂದೇನು ಅನ್ನೋ ಚಿಂತೆ ಕಾಡುತ್ತಿದೆ.. ಹೀಗೆ ಕಲ್ಯಾಣ ಕರ್ನಾಟಕ ಮುಳುಗಿದ್ರೂ ಸರ್ಕಾರ ಮಾತ್ರ ಮಲಗಿದಂತಿದೆ ಅನ್ನೋ ಆರೋಪ ಕೇಳಿ ಬರ್ತಿದೆ ಸರ್ಕಾರ ಕೂಡಲೇ ಸರ್ವೇ ಮಾಡಿ ಬೆಳೆ ಹಾನಿಗೆ ಪರಿಹಾರ ಕೊಡಬೇಕು ಅಂತ ರೈತರ ಬಳಗ ಆಗ್ರಹಿಸಿದೆ..
ನಗರದ ಸರ್ವಿಸ್ ರಸ್ತೆಯಲ್ಲಿ ಗುಂಡಿ ಗಂಡಾಂತರ ಜೋರಾಗಿದ್ದು, ಹೆದ್ದಾರಿಯಲ್ಲಿ ಬೃಹತ್ ಸ್ಲಾಬ್‌ಗಳು ಕುಸಿದು ಬಿದ್ದಿದೆ. ಕೆಲ ವರ್ಷಗಳ ಹಿಂದೆ ದಾಸರಹಳ್ಳಿಯ ಎಂಟನೇ ಮೈಲಿ ಬಳಿ ಫ್ಲೈಓವರ್ ರಸ್ತೆಯ ಪಿಲ್ಲರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಾಹನಗಳಿಗೆ ನಿಷೇಧ ಹೇರಲಾಯಿತು. ಇದರಿಂದಾಗಿ ಸಾಕಷ್ಟು ಸಮಸ್ಯೆಯಾಗಿ ಪ್ರತಿನಿತ್ಯ ಟ್ರಾಫಿಕ್ ಜಾಮ್‌ನಿಂದಾಗಿ ಸವಾರರು ಪರಿತಪ್ಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿ ಸುದ್ದಿಗೆ ಕಾರಣವಾಗಿತ್ತು. ಇತ್ತೀಚೆಗಷ್ಟೇ ನೆಲಮಂಗಲ ಹಾಗೂ ಗೊರಗುಂಟೆಪಾಳ್ಯ ನಡುವಿನ ರಾಷ್ಟ್ರೀಯ ಹೆದ್ದಾರಿಯು ಈ ಟ್ರಾಫಿಕ್ ಸಮಸ್ಯೆಗಳಿನ್ನು ತೆರವುಗೊಳಿಸಿ, ವಾಹನಗಳಿಗೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು. ಇಗೀಗ ಟೋಲ್ ಕಂಪನಿಯ ನಿರ್ಲಕ್ಷ್ಯದಿಂದ ಮತ್ತೊಂದು ಭಾರೀ ಅನಾಹುತಕ್ಕೆ ಕಾರಣವಾಗಿದೆ. ನೆಲಮಂಗಲದ ಕುಣಿಗಲ್ ಬೈಪಾಸ್, ಮಾಕಳಿ, ಮಾದನಾಯಕನಹಳ್ಳಿ, ಮಾದಾವಾರ ರಸ್ತೆಯ ಬಳಿ ಬೃಹತ್ ಗುಂಡಿಗಳಿಂದ ಸವಾರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಂದ ಪರಿಣಾಮ ರಸ್ತೆಯ ಪಕ್ಕದ ಬೃಹತ್ ಸ್ಲಾಬ್‌ಗಳು ಕುಸಿದು ವಾಹನ ಸವಾರರ ಜೀವಕ್ಕೆ ಮೃತ್ಯು ಕೂಪವಾಗಿ ಪರಿಣಮಿಸಿವೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುವ…
ಚಪಾತಿಗಳಲ್ಲಿ ಕೇವಲ ಕಾರ್ಬೋಹೈಡ್ರೇಟುಗಳು ಮಾತ್ರವಲ್ಲ ಇತರ ಅಗತ್ಯ ಪೋಷಕಾಂಶಗಳೂ ಸಮೃದ್ಧವಾಗಿವೆ. ಗೋಧಿಯಲ್ಲಿ ಪ್ರೋಟೀನ್, ಕೊಬ್ಬು, ರಂಜಕ, ಮೆಗ್ನೀಸಿಯಮ್, ಫೋಲೇಟ್ ಮತ್ತು ಕಬ್ಬಿಣದ ಅಂಶಗಳು ಉತ್ತಮ ಪ್ರಮಾಣದಲ್ಲಿವೆ. ಕಾರ್ಬೋಹೈಡ್ರೇಟುಗಳು, ಪ್ರೋಟೀನುಗಳು ಮತ್ತು ಕೊಬ್ಬನ್ನು ಮ್ಯಾಕ್ರೋನ್ಯೂಟ್ರಿಯೆಂಟ್ಸ್ ಎಂದು ಕರೆಯಲಾಗುತ್ತದೆ, ಅಂದರೆ ದೇಹದಲ್ಲಿ ವಿಭಿನ್ನ ಕಾರ್ಯಗಳನ್ನು ನಿರ್ವಹಿಸಲು ನಮ್ಮ ದೇಹಕ್ಕೆ ಇವು ಹೆಚ್ಚಿನ ಪ್ರಮಾಣದಲ್ಲಿ ಅಗತ್ಯವಿರುತ್ತದೆ. ತೂಕ ಇಳಿಸುವ ಪ್ರಯತ್ನದಲ್ಲಿ ಮೊದಲನೆಯದಾಗಿ, ನಿಮ್ಮ ದೈನಂದಿನ ಕಾರ್ಬೋಹೈಡ್ರೇಟುಗಳ ಸೇವನೆಯನ್ನು ನೀವು ಅಗತ್ಯಕ್ಕೆ ತಕ್ಕಷ್ಟೇ ಸೇವಿಸಬೇಕಾಗುತ್ತದೆ. ಅದರ ಆಧಾರದ ಮೇಲೆ ನೀವು ದಿನದಲ್ಲಿ ಎಷ್ಟು ಚಪಾತಿಗಳನ್ನು ಸೇವಿಸಬಹುದು ಎಂಬುದನ್ನು ನಿರ್ಧರಿಸಬಹುದು. ಮಹಿಳೆಯರು ದಿನಕ್ಕೆ ನಾಲ್ಕು ರೊಟ್ಟಿ ತಿನ್ನಬಹುದು. ಅಂದ್ರೆ ಮಧ್ಯಾಹ್ನ 2 ಮತ್ತು ರಾತ್ರಿ ಎರಡು ಚಪಾತಿ ತಿನ್ನಬಹುದು. ಪುರುಷರು ದಿನಕ್ಕೆ ಆರರಿಂದ 8 ರೊಟ್ಟಿ ತಿನ್ನಬಹುದು. ಮಧ್ಯಾಹ್ನ ಮತ್ತು ರಾತ್ರಿ ತಲಾ ಮೂರರಂತೆ ತಿನ್ನಬಹುದು. ನೀವು ಹೆಚ್ಚು ಭಾರದ ಕೆಲಸ ಮಾಡುತ್ತಿದ್ರೆ ರೊಟ್ಟಿಗಳ ಪ್ರಮಾಣ ಹೆಚ್ಚಬಹುದು. ಕೆಲವರು ಬೆಳಗ್ಗೆ ತಿಂಡಿಗೂ ಚಪಾತಿ ಬೇಕು ಎಂದು ಕೇಳುತ್ತಾರೆ. ರಾತ್ರಿ…
ಪ್ರಕೃತಿ ಮನುಷ್ಯನ ಆರೋಗ್ಯಕ್ಕಾಗಿ ಹಲವಾರು ನೈಸರ್ಗಿಕ ಸತ್ವಗಳನ್ನು ಉಡುಗೊರೆಯಾಗಿ ನೀಡಿದೆ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ದೊರೆಯುವ ಹಲವಾರು ಹಣ್ಣು-ಹಂಪಲುಗಳು, ಗಿಡಮೂಲಿಕೆಗಳು ಆರೋಗ್ಯ ವೃದ್ಧಿಸುವಲ್ಲಿ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ನಮ್ಮ ಸುತ್ತಲೂ ಸಾಮಾನ್ಯವಾಗಿ ಸಿಗುವ ದಾಳಿಂಬೆ ಹಣ್ಣು ತನ್ನಲ್ಲಿ ಹಲವಾರು ಆರೋಗ್ಯದಾಯಕ ಅಂಶಗಳನ್ನು ಹೊಂದಿದೆ. ಕೆಂಪನೆಯ ಈ ದಾಳಿಂಬೆ ಹಣ್ಣು ರುಚಿಯಲ್ಲಿ ಬೆಸ್ಟ್ ಅಂತಾ ಅನಿಸಿಕೊಳ್ಳುವುದರ ಜೊತೆಗೆ ಆರೋಗ್ಯ ಪ್ರಯೋಜನಗಳಿಗೂ ಹೆಸರುವಾಸಿಯಾಗಿದೆ. ದಾಳಿಂಬೆ ಬಿಡಿಸಿ ಅದರ ಕಾಳುಗಳನ್ನು ತಿನ್ನುವುದು ಎಷ್ಟು ರುಚಿ ನೀಡುತ್ತದೆಯೋ, ಅದರ ಜ್ಯೂಸ್, ಸಲಾಡ್ ಕೂಡ ಅತ್ಯದ್ಭುತವಾಗಿದೆ. ಹಣ್ಣಿನ ಜ್ಯೂಸ್‌ಗಳ ಸೇವನೆಗೆ ಬಂದಾಗ ದಾಳಿಂಬೆ ಹಣ್ಣಿನ ಜ್ಯೂಸ್ ಕೂಡ ಆರೋಗ್ಯಕರವಾಗಿದೆ. ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಅಂತಾ ಇಲ್ಲಿ ನೋಡಿ. ದಾಳಿಂಬೆ ಹಣ್ಣಿನ ಜ್ಯೂಸ್ ಪ್ರಯೋಜನಗಳು 1. ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ ದಾಳಿಂಬೆ ರಸವು ಉರಿಯೂತದ ಗುಣಲಕ್ಷಣಗಳನ್ನು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ, ಇದು ಕ್ಯಾನ್ಸರ್ ಸೇರಿ ಇತರ ಪರಿಸ್ಥಿತಿಗಳನ್ನು ತಡೆಯಲು ಸಹಾಯ ಮಾಡುತ್ತದೆ. ಜೊತೆಗೆ ಆಕ್ಸಿಡೇಟಿವ್…
ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಬಗ್ಗೆ ಕಮಿಷನರ್ ದಯಾನಂದ್ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಪ್ರಕರಣದ ತನಿಖೆ ಕಂಪ್ಲೀಟ್ ಆಗಿದೆ. 17ಆರೋಪಿಗಳ ವಿರುದ್ಧ ಹಲವು ಸಾಕ್ಷ್ಯಗಳು ಕಲೆ ಹಾಕಿದ್ದು ಅಂತಿಮ ವರದಿ ರೆಡಿಯಾಗಿದೆ. 3991ಪುಟಗಳನ್ನ ಚಾರ್ಜ್ ಶೀಟ್ ನಲ್ಲಿ ಅಳವಡಿಸಲಾಗಿದೆ. ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಹದಿನೇಳು ಜನರನ್ನ ಬಂಧಿಸಲಾಗಿತ್ತು. ಕೆಲವರನ್ನ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಎಫ್ ಎಸ್ ಎಲ್ ಮತ್ತು ಸಿಎಫ್ ಎಸ್ ಎಲ್ ನಿಂದ ವರದಿ ಬಂದಿದೆ. ಸಿಎಫ್ ಎಸ್ ಎಲ್ ನಿಂದ ಒಂದಷ್ಟು ವರದಿ ಬಾಕಿ ಇದೆ. ಸರ್ಕಾರಿ ಅಧಿಕಾರಿಗಳನ್ನೂ ಈ ಕೇಸ್ ನಲ್ಲಿ ಸಾಕ್ಷಿಗಳನ್ನಾಗಿ ಮಾಡಿಕೊಳ್ಳಲಾಗಿದೆ. 231 ಸಾಕ್ಷಿದಾರರನ್ನ ಉಲ್ಲೇಖ ಮಾಡಲಾಗಿದೆ. ಬೆಂಗಳೂರಿನ ಎಫ್ ಎಸ್ ಎಲ್ ನಿಂದ ಎಲ್ಲಾ ವರದಿ ಬಂದಿವೆ. ಸಿಎಫ್ ಎಸ್ ಎಲ್ ಹೈದ್ರಾಬಾದ್ ನಿಂದ ಎಲೆಕ್ಟ್ರಾನಿಕ್ ಡಿವೈಸ್ ಗಳ ವರದಿ ಬಂದಿದೆ. ಇನ್ನೂ ಒಂದಷ್ಟು ವರದಿ ಬರಬೇಕಿದೆ. ಸಾಕಷ್ಟು ತಾಂತ್ರಿಕ ಸಾಕ್ಷಿಗಳು ದೊರೆತಿವೆ. ತನಿಖೆಯಲ್ಲಿ…
ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ ನಾಮ, ಋತು: ವರ್ಷ ಋತು ಅಯಣ: ದಕ್ಷಿಣ ಮಾಸ: ಶ್ರಾವಣ ಪಕ್ಷ :ಶುಕ್ಲ ತಿಥಿ: ಪಾಡ್ಯಾ, ನಕ್ಷತ್ರ: ಉತ್ತರ ಪಾಲ್ಗುನಿ ಮೇಷ ರಾಶಿ: ಚಲನಚಿತ್ರ ನಿರ್ಮಾಪಕರಿಗೆ ಆರ್ಥಿಕ ತೊಂದರೆ ಕಾಡಲಿದೆ, ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳು ಎಚ್ಚರಿಕೆಯಿಂದ ನಿರ್ವಹಿಸಿ, ಕಾಂಡಿಮೆಂಟ್ಸ್ ವ್ಯಾಪಾರಸ್ಥರಿಗೆ ಆದಾಯ ಉತ್ತಮ, ಕಲಾವಿದರಿಗೆ ಹಣಕಾಸಿನಲ್ಲಿ ತೊಂದರೆ, ಪ್ಲಿವುಡ್ಸ, ಬಂಗಾರ ಆಭರಣ ತಯಾರಿ ಮಾಡುವವರಿಗೆ ಧನಲಾಭ, ಸಂತಾನ ನಿರೀಕ್ಷಣೆ ಶೀಘ್ರ ಸಿಹಿ ಸುದ್ದಿ , ಮದುವೆ ಚರ್ಚೆ ಭರದಿಂದ ನಡೆಯಲಿದೆ, ಕಚೇರಿ ಕೆಲಸ ಕಾರ್ಯಗಳಲ್ಲಿ ಜಯ, ಕುಟುಂಬದೊಂದಿಗೆ ತೃಪ್ತಿದಾಯಕ ಬದುಕು, ವ್ಯಾಪಾರದಲ್ಲಿ ಹಣಕಾಸಿನ ಪ್ರಗತಿ, ಉದ್ಯೋಗ ಭಾಗ್ಯ, ಉನ್ನತ ವ್ಯಾಸಂಗ ವಿದೇಶಕ್ಕೆ ಹೋಗಲು ವಿಳಂಬ, ಸರಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಬಹುದು, ತಾವು ಪ್ರಯತ್ನಿಸಿದ ಯೋಜನೆ ಫಲಶ್ರುತಿ, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಸಾಕಷ್ಟು ಲಾಭದ ನಿರೀಕ್ಷೆ ಇದೆ, ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು)…