ವಾಷಿಂಗ್ಟನ್: ‘ಭಾರತವು ತನ್ನ ಅತ್ಯಂತ ಪರಿಣಾಮಕಾರಿ ಪಾಲುದಾರರಲ್ಲಿ ಒಂದಾಗಿದೆ’ ಎಂದು ಅಮೆರಿಕ ಮೆಚ್ಚುಗೆ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳ ಅಮೆರಿಕ ಪ್ರವಾಸವು ಆದ್ಯತೆಗಳ ಪಾಲುದಾರಿಕೆಯನ್ನು ಹೆಚ್ಚಿಸುವ ಅವಕಾಶವಾಗಿದೆ ಎಂದು ತಿಳಿಸಿದೆ. ಪ್ರಧಾನಿ ಅವರ ಭೇಟಿಯು ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ಭದ್ರತಾ ಪಾಲುದಾರಿಕೆಯನ್ನು ಬಲಪಡಿಸುವ ವಿಶ್ವಾಸವನ್ನೂ ಅಮೆರಿಕವು ವ್ಯಕ್ತಪಡಿಸಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಜೂನ್ ತಿಂಗಳಲ್ಲಿ ತಮ್ಮ ಮೊದಲ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಜೂನ್ 22ರಂದು ಬೈಡನ್ ಮತ್ತು ಜಿಲ್ ಅವರು ಮೋದಿಯವರಿಗೆ ಭೋಜನಕೂಟದ ಆತಿಥ್ಯ ನೀಡಲಿದ್ದಾರೆ. ‘ಭಾರತದೊಂದಿಗಿನ ನಮ್ಮ ಪಾಲುದಾರಿಕೆಯು ನಮ್ಮ ಅತ್ಯಂತ ಪರಿಣಾಮಕಾರಿ ಸಂಬಂಧಗಳಲ್ಲಿ ಒಂದಾಗಿದೆ ಮತ್ತು ನಾವು ಹಲವಾರು ಪ್ರಮುಖ ಆದ್ಯತೆಗಳಲ್ಲಿ ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತೇವೆ’ ಎಂದು ರಾಜ್ಯ ಇಲಾಖೆಯ ಉಪ ಪತ್ರಿಕಾ ಕಾರ್ಯದರ್ಶಿ ವೇದಾಂತ್ ಪಟೇಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ‘ಭಾರತ ಮತ್ತು ಅಮೆರಿಕದ ನಡುವಿನ…
Author: Prajatv Kannada
ಕೀವ್: ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಕ್ರೇನ್ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಾಧೀಶರನ್ನು ಕಾನೂನು ಜಾರಿ ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ. 2.7 ದಶಲಕ್ಷ ಡಾಲರ್ ಮೊತ್ತದ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ವೆಸೆಲೊದ್‍ನಿಯಾಝಿಯೆವ್‍ರನ್ನು ಬಂಧಿಸಲಾಗಿದೆ ಎಂದು ಉಕ್ರೇನ್‍ನ ಭ್ರಷ್ಟಾಚಾರ ನಿಗ್ರಹ ದಳದ ಹಿರಿಯ ಅಧಿಕಾರಿ ಒಲೆಕ್ಸಾಂಡರ್ ಕ್ಲಿಮೆಂಕೊ ಸುದ್ಧಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್‍ನಲ್ಲಿ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದ ನಿಯಾಝಿಯೆವ್‍ರನ್ನು 2017ರಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಲಾಗಿತ್ತು. ಅವರು 2.7 ದಶಲಕ್ಷ ಡಾಲರ್ ಲಂಚ ಸ್ವೀಕರಿಸುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.
ಮ್ಯಾನ್ಮಾರ್ನಲ್ಲಿ ಆರಂಭವಾಗಿರುವ ಮೋಕಾ ಚಂಡಮಾರುತದ ಅಬ್ಬರ ಇನ್ನೂ ನಿಂತಿಲ್ಲ. ಇದುವರೆಗೂ ಘಟನೆಯಲ್ಲಿ 81 ಮಂದಿ ಬಲಿಯಾಗಿದ್ದು 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ರಾಖೈನ್ ರಾಜ್ಯದ ರಾಜಧಾನಿ ಸಿಟ್ವೆಯ ಭಾಗಗಳು ಸಹ ಪ್ರವಾಹಕ್ಕೆ ಒಳಗಾಗಿದ್ದು, ಗಂಟೆಗೆ 130 ಮೈಲುಗಳಷ್ಟು ವೇಗವಾಗಿ ಗಾಳಿ ಬೀಸಿತ್ತು. ಬುಮಾ ಮತ್ತು ಸಮೀಪದ ಖೌಂಗ್ ಡೋಕ್ ಗ್ರಾಮಗಳಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ರಾಖೈನ್‌ನ ರಾಜಧಾನಿ ಸಿಟ್ವೆಯ ಉತ್ತರದಲ್ಲಿರುವ ರಾಥೆಡಾಂಗ್ ಟೌನ್‌ಶಿಪ್‌ನ ಹಳ್ಳಿಯಲ್ಲಿ ಧಾರ್ಮಿಕ ಕಟ್ಟಡವೊಂದು ಕುಸಿದು 13 ಜನರು ಸಾವನ್ನಪ್ಪಿದ್ದಾರೆ ಮತ್ತು ಪಕ್ಕದ ಹಳ್ಳಿಯಲ್ಲಿ ಕಟ್ಟಡವೊಂದು ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸಿಟ್ವೆ ಸಮೀಪದ ಬು ಮಾ ಗ್ರಾಮದ ಮುಖ್ಯಸ್ಥ ಕಾರ್ಲೋ ಹೇಳಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮೋಕಾ ಚಂಡಮಾರುತ ಮ್ಯಾನ್ಮಾರ್ ಪಶ್ಚಿಮ ಭಾಗದ ಕರಾವಳಿ ಹಾಗೂ ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ. ಮತ್ತೊಂದೆಡೆ ಬಾಂಗ್ಲಾ-ಮ್ಯಾನ್ಮಾರ್ಗೆ ಅಪ್ಪಳಿಸಿರುವ ಮೋಚಾ, ಭಾರತದ ಮಿಜೋರಾಂನಲ್ಲಿಯೂ ತೀವ್ರತರದ ಪರಿಣಾಮ ಉಂಟು ಮಾಡಿದೆ. 236ಕ್ಕೂ…
ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಇದೀಗ ಪರಭಾಷೆಯಲ್ಲೂ ಖ್ಯಾತಿ ಘಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇನ್ಸ್ಟಾಗ್ರಾಮ್ನಲ್ಲಿ ಬರೋಬ್ಬರಿ 3.8 ಕೋಟಿ ಹಿಂಬಾಲಕರಿದ್ದಾರೆ. ಈ ಮಧ್ಯೆ ರಶ್ಮಿಕಾ ಕಂಡ ತಕ್ಷಣ ಆಕೆಯ ಬಳಿ ಸೆಲ್ಫಿ ತೆಗೆದುಕೊಳ್ಳಲು ಸಾಕಷ್ಟು ಮಂದಿ ಮುಗಿ ಬೀಳುತ್ತಾರೆ. ಇದೀಗ ಅಂಥದ್ದೇ ಪ್ರಸಂಗವೊಂದು ಎದುರಾಗಿದೆ. ರಶ್ಮಿಕಾ ಅಭಿಮಾನಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಸೆಲ್ಫಿ ಕೇಳಿದರೆ ಬೇಸರ ಇಲ್ಲದೆ ಪೋಸ್ ಕೊಡುತ್ತಾರೆ. ಇತ್ತೀಚೆಗೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ರಶ್ಮಿಕಾ ಮರಳಿ ಬರುವಾಗ ಅಭಿಮಾನಿಯೋರ್ವ ಸೆಲ್ಫಿ ಕೇಳಲು ಬಂದಿದ್ದಾನೆ. ರಶ್ಮಿಕಾ ಸೆಲ್ಫಿಗೆ ಪೋಸ್ ಕೊಡೋಕೆ ರೆಡಿ ಆದರು. ಆದರೆ ಈ ವೇಳೆ ಅಭಿಮಾನಿಯನ್ನು ರಶ್ಮಿಕಾ ಬಾಡಿಗಾರ್ಡ್ ಪಕ್ಕಕ್ಕೆ ತಳ್ಳಿದ್ದು ಈ ವಿಡಿಯೋ ವೈರಲ್ ಆಗಿದೆ. ಬಾಡಿಗಾರ್ಡ್ ವರ್ತನೆ ನೋಡಿ ರಶ್ಮಿಕಾ ಮಂದಣ್ಣಗೆ ಶಾಕ್ ಆಗಿದೆ. ಮುಂದಕ್ಕೆ ನಡೆಯುತ್ತಾ ಅವರು ಹಿಂದಕ್ಕೆ ತಿರುಗಿ ನೋಡಿದ್ದಾರೆ. ಆದರೆ, ಆ ವ್ಯಕ್ತಿ ಕಾಣಿಸಿಲ್ಲ. ಬಳಿಕ…
ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸೈರನ್ ಹೆಸರಿನ ಸಿನಿಮಾದಲ್ಲಿ ಪ್ರವೀರ್ ಶೆಟ್ಟಿ ನಟಿಸಿದ್ದು, ಸಿನಿಮಾದ ಟ್ರೈಲರ್ ಅನ್ನು ಚಿತ್ರರಂಗದ ಹಲವು ಗಣ್ಯರು ಹಾಗೂ ಇತರೆ ಕ್ಷೇತ್ರದ ಗಣ್ಯರುಗಳು ಸೇರಿ ಬಿಡುಗಡೆ ಮಾಡಿದರು. ಪ್ರವೀರ್ ಶೆಟ್ಟಿ ನಟನೆಯ ಸೈರನ್ ಸಿನಿಮಾ ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿದ್ದು ಇತ್ತೀಚೆಗೆ ಬಿಡುಗಡೆ ಆಗಿರುವ ಟ್ರೈಲರ್ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ನಟ ಡಾಲಿ ಧನಂಜಯ್, , ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರ ಮೇ 26ರಂದು ಕೆ.ಆರ್ ಜಿ ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ಡೆಕ್ಕನ್ ಕಿಂಗ್ ಬ್ಯಾನರ್‌ನಲ್ಲಿ ಬಿಜು ಶಿವಾನಂದ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವನ್ನು ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ.…
ಸ್ಯಾಂಡಲ್‌ವುಡ್‌ನ ಬೆಸ್ಟ್ ಜೋಡಿ ಎನಿಸಿಕೊಂಡಿರುವ ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಜ್ಯೋತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಇದೇ ಖುಷಿಯಲ್ಲಿ ಪ್ರೇಮ್ ದಂಪತಿ ಬಾಲಿಗೆ ಹಾರಿದ್ದು ಅಲ್ಲಿನ ಸುಂದರ ಕ್ಷಣಗಳ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮನೆಯವರ ವಿರೋದದ ನಡುವೆಯೂ ಪ್ರೇಮ್- ಜ್ಯೋತಿ ಒಬ್ಬರನೊಬ್ಬರು ಪ್ರೀತಿಸಿ ಮದುವೆಯಾಗಿದ್ದರು. 2000ರಲ್ಲಿ ಪ್ರೇಮ್, ಜ್ಯೋತಿ ಜೊತೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸಾಕಷ್ಟು ಸಂಕಷ್ಟಗಳ ನಡುವೆ ನಟ ಪ್ರೇಮ್ ಚಿತ್ರರಂಗದಲ್ಲಿ ಗಟ್ಟಿ ನಟನಾಗಿ ಸ್ಥಾನ ಗಿಟ್ಟಿಸಿಕೊಂಡರು. ಪ್ರೇಮ್ ಶ್ರಮಕ್ಕೆ ಪತ್ನಿ ಜ್ಯೋತಿ ಅವರ ಕೊಡುಗೆ ಅಪಾರ. ಪ್ರೀತಿಸಿ ಮದುವೆಯಾಗಿ 25 ವರ್ಷಗಳು ಕಳೆದರೂ ಇಬ್ಬರ ನಡುವೆ ಪ್ರೀತಿ ಮಾಸಿಲ್ಲ. ನವಜೋಡಿಗಳಿಗೆ ನಾಚುವಂತೆ ಇಂದಿಗೂ ಇಬ್ಬರು ಜೊತೆಯಾಗಿ ಪ್ರೇಮ್- ಜ್ಯೋತಿ ಜೀವನ ಸಾಗಿಸುತ್ತಿದ್ದಾರೆ. ಸದ್ಯ ಪತ್ನಿ ಜೊತೆಗಿನ ಬಾಲಿ ಫೋಟೋ ಹಂಚಿಕೊಂಡು ನಟ ಪ್ರೇಮ್ ವಿಶ್ ಮಾಡಿದ್ದಾರೆ. ಬಾಲಿಯಲ್ಲಿ 25ನೇ ವರ್ಷ ವಿವಾಹ ಮಹೋತ್ಸವ ಕಾರ್ಯಕ್ರಮವನ್ನ ರೊಮ್ಯಾಂಟಿಕ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನ 16ನೇ ಆವೃತ್ತಿಯಲ್ಲಿ ಪ್ಲೇಆಫ್ ಪ್ರವೇಶಿಸಲು RCB ಮುಂದಿದೆ 2 ದೊಡ್ಡ ಸವಾಲುಗಳು. ಈ ಸವಾಲುಗಳನ್ನು ಮೆಟ್ಟಿ ನಿಂತರೆ ಫಾಫ್ ಡುಪ್ಲೆಸಿಸ್ ಬಳಗಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಇಲ್ಲಿ ಆರ್ಸಿಬಿ ಮುಂದಿರುವ ಮೊದಲ ಸವಾಲು ಸನ್ರೈಸರ್ಸ್ ಹೈದರಾಬಾದ್. ಮೇ 18 ರಂದು ಹೈದರಾಬಾದ್ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ಆಸೆ ಜೀವಂತವಿರಲಿದೆ. ಹೀಗಾಗಿಯೇ ಫಾಫ್ ಪಡೆಗೆ ಮುಂದಿನ ಮ್ಯಾಚ್ ಮಾಡು ಇಲ್ಲವೇ ಮಡಿ ಪಂದ್ಯ. ಇನ್ನು 2ನೇ ಸವಾಲು ಗುಜರಾತ್ ಟೈಟಾನ್ಸ್. ಮೇ 21 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿದರೆ ಆರ್ಸಿಬಿ ಪ್ಲೇಆಫ್ ಹಂತಕ್ಕೇರುವುದು ಬಹುತೇಕ ಖಚಿತ. ಏಕೆಂದರೆ ಅಂಕಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್ ಸೋತು, ಕೊನೆಯ ಪಂದ್ಯ ಗೆದ್ದರೂ…
ಸೂರ್ಯೋದಯ: 05.54 AM, ಸೂರ್ಯಾಸ್ತ : 06.38 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ವೈಶಾಖ ಮಾಸ, ಕೃಷ್ಣ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ತ್ರಯೋದಶಿ 10:28 PM ತನಕ ನಂತರ ಚತುರ್ದಶಿ ನಕ್ಷತ್ರ: ಇವತ್ತು ರೇವತಿ 07:39 AM ತನಕ ನಂತರ ಅಶ್ವಿನಿ ಯೋಗ: ಇವತ್ತು ಆಯುಷ್ಮಾನ್ 09:18 PM ತನಕ ನಂತರ ಸೌಭಾಗ್ಯ ಕರಣ: ಇವತ್ತು ಗರಜ 10:59 AM ತನಕ ನಂತರ ವಣಿಜ 10:28 PM ತನಕ ನಂತರ ವಿಷ್ಟಿ ರಾಹು ಕಾಲ: 12:00ನಿಂದ 01:30 ವರೆಗೂ ಯಮಗಂಡ: 07:30ನಿಂದ 09:00 ವರೆಗೂ ಗುಳಿಕ ಕಾಲ: 10:30ನಿಂದ12:00 ವರೆಗೂ ಅಮೃತಕಾಲ: 05.18 AM to 06.52 AM ಮೇಷ ರಾಶಿ: ವರ್ಷಾದಿಯಲ್ಲಿ ಮತ್ತು ವರ್ಷಾಂತ್ಯದಲ್ಲಿ ಗುರುಸ್ವಾಮಿ ಶುಭ ಫಲದಾಯಕನಾಗಿರುತ್ತಾನೆ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರ ಉದ್ಯಮದಾರರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಜನಪ್ರತಿನಿಧಿಗಳು ಸಾರ್ವಜನಿಕರೊಡನೆ ಸಹಬಾಳ್ವೆ ಮತ್ತು ಕೀರ್ತಿವಂತರಾಗುತ್ತಾರೆ, ಪ್ರಯತ್ನಿಸಿದ ಎಲ್ಲಾ ಕೆಲಸ…
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) ಯಾರು ಊಹಿಸಲಾಗದಷ್ಟು ಹೀನಾಯವಾಗಿ ಬಿಜೆಪಿ(BJP) ಸೋತಿದೆ. ಕೇವಲ 66 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ತೃಪ್ತಿಪಟ್ಟಿದೆ. ಈ ಸೋಲಿನ ನಂತರ ನಿರೀಕ್ಷಿಸಿದಂತೆ ಪರಭಾವದ ಹೊಣೆಯನ್ನು ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಅವರು ಹೊತ್ತುಕೊಂಡಿದ್ದಾರೆ. ಇನ್ನು ರಾಜ್ಯದಲ್ಲಿ ಪಕ್ಷ ಸೋಲುತ್ತಿದ್ದಂತೆ ರಾಜ್ಯಾಧ್ಯಕ್ಷರ ಬದಲಾವಣೆಯ ಮಾತುಗಳು ಬಿಜೆಪಿ ಪಾಳಯದಲ್ಲಿ ಕೇಳಿಬರುತ್ತಿವೆ. ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಮಾತನಾಡಿ ನಳೀನ್ ಕುಮಾರ್ ಕಟೀಲ್ ಅವರ ಅವಧಿ ಈಗಾಗಲೇ ಮುಗಿದು ಹೋಗಿದೆ ಎಂದು ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚುನಾವಣಾ ದೃಷ್ಟಿಯಿಂದ ಅವರಿಗೆ ರಾಷ್ಟ್ರೀಯ ನಾಯಕರು ಜವಾಬ್ದಾರಿ ಕೊಟ್ಟಿದ್ದರು. ಮುಂದಿನ ತೀರ್ಮಾನವನ್ನು ರಾಷ್ಟ್ರೀಯ ನಾಯಕರೇ ಮಾಡುತ್ತಾರೆ ಎಂದರು. ವಿಪಕ್ಷ ನಾಯಕ ಯಾರು ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ವಿಪಕ್ಷ ನಾಯಕ ಯಾರು ಅಂತ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನವಾಗುತ್ತದೆ. ಅದಕ್ಕಿಂತ ಮೊದಲು…
ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣಗಳಾಗಿದ್ದ ಐದು ಗ್ಯಾರಂಟಿ ಘೋಷಣೆಗಳು ದೊಡ್ಡ ಸದ್ದು ಗದ್ದಲಕ್ಕೆ ಕಾರಣವಾಗಿದ್ದವು. ಆದರೆ ಇದೀಗ ಅದರ ಜಾರಿಗೆ ಕೆಲವೊಂದು ಕಂಡೀಷನ್ಸ್ ಅಪ್ಲೈ ಆಗಲಿದೆ ಎಂದು ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಜಿ ಪರಮೇಶ್ವರ್ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲ ಕ್ಯಾಬಿನೆಟ್ ನಲ್ಲಿ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ದರಾಗಿ ಇರುತ್ತೇವೆ ಹಾಗೂ ಮೊದಲ ಕ್ಯಾಬಿನೆಟ್ ನಲ್ಲಿ ಜಾರಿ ಮಾಡ್ತೀವಿ ಎಂದರು. ಗ್ಯಾರಂಟಿಗಳನ್ನ ಪ್ರಾಕ್ಟಿಕಲ್ ಆಗಿ ಜಾರಿ ಮಾಡುತ್ತೇವೆ. ಆಯಾ ಇಲಾಖೆ ಸಚಿವರು ಕೂತು ಇದರ ಬಗ್ಗೆ ವರ್ಕ್ ಮಾಡಿ ಜಾರಿ ಮಾಡ್ತೀವಿ. ಆದರೆ ಗ್ಯಾರಂಟಿಗಳಿಗೆ ಕಂಡಿಷನ್ ಇರುತ್ತದೆ. ಹಾಗೇ ಕೊಟ್ಟರೆ ಸುಮ್ಮನೆ ಕೊಟ್ಟರೆ ಎಲ್ಲರೂ ತೆಗೆದುಕೊಳ್ಳುತ್ತಾರೆ ಎಂದರು. ಇನ್ನು ಇದೇ ಸಂದರ್ಭದಲ್ಲಿ, ಸಿಎಂ ಆಯ್ಕೆ ವಿಚಾರವಾಗಿ ಮಾತನಾಡಿ, ಎಲ್ಲವೂ ಸುಸೂತ್ರವಾಗಿ ನಡೆಯಲಿದೆ. ಹೈಕಮಾಂಡ್ ಮಟ್ಟದಲ್ಲಿ ಈ ಕುರಿತಾಗಿ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ದೆಹಲಿಯಲ್ಲಿ ಸೋನಿಯಾ…