ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಮುಂದಿನ ಸಿಎಂ ಯಾರಾಗ್ತಾರೆ ಎಂಬ ಪ್ರಶ್ನೆ ಎಲ್ಲರಿಗೂ ಕಾಡುತ್ತಿದೆ. ಹಾಗಾದ್ರೆ ಇಷ್ಟೊಂದು ಪೈಪೋಟಿಗೆ ಕಾರಣವಾಗಿರುವ ಮುಖ್ಯಮಂತ್ರಿ ಹುದ್ದೆಯ ವೇತನ ಎಷ್ಟು ಗೊತ್ತಾ? ಸಿಎಂ ಸಂಬಳ ನಿಮಗೆ ಗೊತ್ತಾದ್ರೆ ಇಷ್ಟೇನಾ ಎಂದು ನೀವು ಪ್ರಶ್ನಿಸಬಹುದು. ಹೌದು, ಕರ್ನಾಟಕದ ಮುಖ್ಯಮಂತ್ರಿಗಳಿಗೆ ಸದ್ಯ ತಿಂಗಳಿಗೆ ಮಾಸಿಕ 75 ಸಾವಿರ ರೂ. ವೇತನ ಸಿಗುತ್ತದೆ. 2022ಕ್ಕೂ ಮೊದಲು ಕರ್ನಾಟಕದ ಸಿಎಂ ವೇತನ 50 ಸಾವಿರ ರೂ. ಇತ್ತು. ಕರ್ನಾಟಕ ವಿಧಾನಮಂಡಲದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಅಧಿನಿಯಮಕ್ಕೆ 2022ರಲ್ಲಿ ತಿದ್ದುಪಡಿ ತಂದು ಮುಖ್ಯಮಂತ್ರಿ ಹಾಗೂ ಶಾಸಕರು, ಪರಿಷತ್ ಸದಸ್ಯರು, ಸ್ಪೀಕರ್ ಹಾಗೂ ವಿರೋಧ ಪಕ್ಷದ ನಾಯಕರ ವೇತನವನ್ನು ಹೆಚ್ಚಿಸಲಾಗಿತ್ತು. ಕೇವಲ ಮಾಸಿಕ ವೇತನ ಅಷ್ಟೇ ಅಲ್ಲದೇ ಅನೇಕ ಭತ್ಯೆಗಳನ್ನು ಸಿಎಂ ಪಡೆಯುತ್ತಾರೆ. ಮನೆ ಬಾಡಿಗೆ ಭತ್ಯೆ…
Author: Prajatv Kannada
ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಘೋಷಣೆ ಮಾಡಿದ್ದ ಗ್ಯಾರಂಟಿಗಳು ಇದೀಗ ಭಾರೀ ಚರ್ಚೆಯಲ್ಲಿವೆ.. ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಎಲ್ಲಾ ಗ್ಯಾರಂಟಿಗಳೂ ಜಾರಿ ಆಗಲಿವೆ ಅನ್ನೋ ಕಾತರದಲ್ಲಿ ಜನತೆ ಇದ್ದಾರೆ. ಕರೆಂಟ್ ಬಿಲ್ ಕಟ್ಟಬೇಕೋ, ಬೇಡವೋ ಚರ್ಚೆ ಕೂಡಾ ಶುರುವಾಗಿಬಿಟ್ಟಿದೆ. ಆದ್ರೆ ಈ ಎಲ್ಲಾ ಗ್ಯಾರಂಟಿಗಳ ಜಾರಿ ಸಾಧ್ಯವೇ? ಖಜಾನೆ ಮೇಲೆ ಎಷ್ಟು ಹೊರೆ ಬೀಳುತ್ತೆ? ಗ್ಯಾರಂಟಿ ಲಾಭ ಎಲ್ಲರಿಗೂ ಸಿಗುತ್ತಾ? ಇನ್‌ಕಂ ಟ್ಯಾಕ್ಸ್ ಕಟ್ಟೋರಿಗೂ ಫ್ರೀ ಸ್ಕೀಂ ಅನ್ವಯ ಆಗುತ್ತಾ? 1 – ರಾಜ್ಯದ ಪ್ರತಿ ಕುಟುಂಬಕ್ಕೆ 200 ಯುನಿಟ್ ಉಚಿತ ವಿದ್ಯುತ್ 2 – ಬಿಪಿಎಲ್ ಕುಟುಂಬದ ಪ್ರತಿ ಸದಸ್ಯನಿಗೂ ತಿಂಗಳಿಗೆ ತಲಾ 10 ಕೆಜಿ ಅಕ್ಕಿ 3 – ಪ್ರತಿ ಕುಟುಂಬದ ಗೃಹಿಣಿಗೆ ತಿಂಗಳಿಗೆ 2 ಸಾವಿರ ರೂ. 4 – ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3 ಸಾವಿರ ರೂ. 5 – ನಿರುದ್ಯೋಗಿ ಡಿಪ್ಲಮೋದಾರರಿಗೆ ತಿಂಗಳಿಗೆ 1,500 ರೂ. …
ಬೆಂಗಳೂರು: ತಾವು ಸೋತರೂ ಪಕ್ಷಕ್ಕೆ ಲಾಭ ಮಾಡಿಕೊಟ್ಟರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಿ, ಉತ್ತಮ ಸ್ಥಾನಮಾನ ಕಲ್ಪಿಸಲು ‘ಕೈ’ ಪಡೆ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 30 ವರ್ಷಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ಶೆಟ್ಟರ್ ಬಿಜೆಪಿ ಕಟ್ಟಿದವರಲ್ಲಿ ಒಬ್ಬರು. ಕೊನೇ ಘಳಿಗೆಯಲ್ಲಿ ಪಕ್ಷ ಗೌರವದಿಂದ ನಡೆದುಕೊಳ್ಳಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್‌ಗೆ ಜಿಗಿದಿದ್ದರು. ಆದರೆ, ಸೆಂಟ್ರಲ್ ಕ್ಷೇತ್ರದಲ್ಲಿ ಸೋತರೂ ಅವರು ಕಾಂಗ್ರೆಸ್ ಸೇರಿದ್ದರ ಲಾಭ ಪಕ್ಷಕ್ಕಾಗಿದೆ. ಸುತ್ತಮುತ್ತಲಿನ ನಾಲ್ಕಾರು ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ಬರಲು ಇವರ ಆಗಮನವೂ ಕಾರಣವಾಗಿದೆ. ಕಾಂಗ್ರೆಸ್ಸಿನೊಂದಿಗೆ ಇರದ ಲಿಂಗಾಯತ ಸಮುದಾಯ ಈ ಸಲ ಪಕ್ಷಕ್ಕೆ ಬೆಂಬಲ ನೀಡಿದೆ ಎಂದರೆ ಅದಕ್ಕೆ ಶೆಟ್ಟರ್ ಕೂಡ ಕಾರಣ ಎನ್ನುವುದನ್ನು ಕಾಂಗ್ರೆಸ್ ಮನಗಂಡಿದೆ. ಆದಕಾರಣ ಶೆಟ್ಟರ್ ಸೋತಿದ್ದಾರೆ ಎಂದು ಯಾವುದೇ ಸ್ಥಾನಮಾನ ನೀಡದಿದ್ದರೆ ಮುಂದೆ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹೊಡೆತ ಬೀಳಬಹುದು. ಸದ್ಯ ಅವರನ್ನು ಎಂಎಲ್ಸಿ ಮಾಡಿ ಸರ್ಕಾರದಲ್ಲಿ ಉನ್ನತ ಹುದ್ದೆ ನೀಡಿದರೆ ಪಕ್ಷಕ್ಕೂ ಅನುಕೂಲವಾಗುತ್ತದೆ…
ಬೆಂಗಳೂರು: ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್‌ಎಸ್‌ಎಸ್ ನಾಯಕರನ್ನು ಭೇಟಿ ಮಾಡಿ ಚುನಾವಣೆಯ ಸೋಲು ಮತ್ತು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಬಲಪಡಿಸುವ ಸಂಬಂಧ ಚರ್ಚೆ ನಡೆಸಿದರು. ಚಾಮರಾಜಪೇಟೆಯಲ್ಲಿರುವ ಸಂಘ ಪರಿವಾರದ ಕೇಂದ್ರ ‘ಕೇಶವ ಕೃಪ’ಕ್ಕೆ ಭೇಟಿ ಮಾಡಿದ ಬೊಮ್ಮಾಯಿ ಅವರು ಪರಿವಾರದ ಮುಖಂಡರ ಮುಂದೆ ಸೋಲಿನ ಕಾರಣಗಳನ್ನು ಒಂದೊಂದಾಗಿ ವಿವರಿಸಿದರು. ಕಾಂಗ್ರೆಸ್ಸಿನ ಗ್ಯಾರಂಟಿ ಭರವಸೆಗಳು ಜನರ ಮನಸ್ಸು ಗೆದ್ದವು. ಅವುಗಳನ್ನು ಈಡೇರಿಸುವುದು ಕಷ್ಟಎಂದರೂ ಜನರು ಅವುಗಳನ್ನು ಒಪ್ಪಿದರು. ಜತೆಗೆ ಲಿಂಗಾಯತ ಸಮುದಾಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಹಬ್ಬಿಸಿದೆ ಎನ್ನಲಾದ ಸುಳ್ಳು ಸುದ್ದಿಗಳು ಮತ್ತು ಟಿಕೆಟ್ ಹಂಚಿಕೆಯಲ್ಲಿನ ಗೊಂದಲ ಪಕ್ಷಕ್ಕೆ ಪೆಟ್ಟು ಕೊಟ್ಟಿತು. ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿದವು. ಜತೆಗೆ ನಮ್ಮ ಸರ್ಕಾರದ ವಿರುದ್ಧ ಸತತವಾಗಿ ಭ್ರಷ್ಟಾಚಾರ ಆರೋಪವನ್ನು ಮಾಡುತ್ತಲೇ ನಷ್ಟತಂದೊಡ್ಡಿದರು ಎಂಬ ಮಾಹಿತಿಯನ್ನು ಬೊಮ್ಮಾಯಿ ನೀಡಿದರು ಎನ್ನಲಾಗಿದೆ. ಇದೇ ವೇಳೆ ಬೊಮ್ಮಾಯಿ ಅವರ ಸಮಜಾಯಿಷಿಗೆ ಸಂಘ ಪರಿವಾರದ ಮುಖಂಡರು ಅಷ್ಟಾಗಿ ಸಮ್ಮತಿಸದಿದ್ದರೂ ಮುಂಬರುವ ಲೋಕಸಭಾ ಚುನಾವಣೆ ಗುರಿಯಾಗಿಸಿಕೊಂಡು ಈಗಿನಿಂದಲೇ ಪಕ್ಷ ಸಂಘಟನೆ ಬಲಪಡಿಸುವತ್ತ ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು ಎಂದು ತಿಳಿದು ಬಂದಿದೆ. ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಾಯಿ ಅವರು, ಆರ್‌ಎಸ್‌ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಬರುವಂತಹ ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆಯಾಗಿದೆ ಎಂದರು. ರಾಜ್ಯಾಧ್ಯಕ್ಷರು, ವರಿಷ್ಠರು ಜತೆಗೆ ಹಲವಾರು ಬಾರಿ ಚರ್ಚಿಸಿ ಬಿಜೆಪಿಯನ್ನು ಹೇಗೆ ಸಂಘಟನೆ ಮಾಡಬೇಕು ಎನ್ನುವ ತೀರ್ಮಾನ ಮಾಡುತ್ತೇವೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ ಸಭೆಯನ್ನು ರಾಜ್ಯಾಧ್ಯಕ್ಷರು ಕರೆಯಲಿದ್ದಾರೆ ಎಂದು ತಿಳಿಸಿದರು.
ವಿವಾದದ ಮೂಲಕವೇ ತೆರೆಗೆ ಬಂದು ಬಳಿಕ ಸಕ್ಸಸ್ ಫುಲ್ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಸಿನಿಮಾ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದು ಮಾಡುತ್ತಿದೆ. ಇದೀಗ ಕೇರಳ ಸ್ಟೋರಿ ನೋಡಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚಿತ ವ್ಯವಸ್ಥೆ ಮಾಡಿದ್ದಾರೆ. ವಿಜಯಪುರ ನಗರದ ಅಪ್ಸರಾ ಚಿತ್ರಮಂದಿರದಲ್ಲಿ 12 ಗಂಟೆಯ ಶೋವನ್ನು ಪ್ರೇಕ್ಷಕರು ಉಚಿತವಾಗಿ ನೋಡಬಹುದಾಗಿದೆ. ಮಂಗಳವಾರ, ಬುಧವಾರ ಹಾಗೂ ಶುಕ್ರವಾರ 3 ದಿನಗಳ ಕಾಲ ಉಚಿತವಾಗಿ ಪ್ರೇಕ್ಷಕರು ವೀಕ್ಷಿಸಲು ಅನುವು ಮಾಡಿ ಕೊಡಲಾಗಿದೆ. ಇದರಿಂದ ಪ್ರೇಕ್ಷಕರು ಖುಷ್ ಆಗಿದ್ದಾರೆ. ಸೋಮವಾರ ಉಡುಪಿಯ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಕೇರಳ ಸ್ಟೋರಿ ಚಿತ್ರದ ಪ್ರಚಾರ ಕಾರ್ಯ ಭಿನ್ನವಾಗಿ ನಡೆದಿದೆ. ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳದ ಭಕ್ತರೇ ಹೆಚ್ಚು. ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ಚಿತ್ರ ನೋಡಿ ಎಂದು ಬರೆಯಲಾದ ಬೋರ್ಡ್ ಪ್ರವಾಸಿಗರ ಗಮನ ಸೆಳೆದಿದೆ.
ಐಪಿಎಲ್ನ 62ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಕೂಡ ಮುರಿದಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ವಿಶೇಷ ಎಂದರೆ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರೂ ಗಿಲ್ ಈ ವೇಳೆ ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ. ಇದುವೇ ಈಗ ದಾಖಲೆಯಾಗಿದೆ. ಅಂದರೆ ಐಪಿಎಲ್ನಲ್ಲಿ ಸಿಕ್ಸ್ ಬಾರಿಸದೇ ಅತೀ ವೇಗವಾಗಿ ಅರ್ಧಶತಕ ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2010 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಚಿನ್ ತೆಂಡೂಲ್ಕರ್ ಕೇವಲ 23 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ವೇಳೆ ಅವರು ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ. ಇದೀಗ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ…
ನಿರ್ದೇಶಕರ ಅದೃಷ್ಟದ ನಟಿಯಾಗಿದ್ದ ನಟಿ ಪೂಜಾ ಹೆಗ್ಡೆ ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಸೋಲು ಅನುಭವಿಸುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳ ಸೋಲಿನಿಂದ ಬೆಸತ್ತಿರೋ ಪೂಜಾ ಹೆಗ್ಡೆ ಇದೀಗ ಹೊಸ ನಿರ್ಧಾರವೊಂದನ್ನ ತೆಗೆದುಕೊಂಡಿದ್ದಾರೆ. ಸಿನಿಮಾಗಳ ಸೋಲಿನ ಬಳಿಕ ಪೂಜಾ ಐಟಂ ಹಾಡಿಗೆ ಹೆಜ್ಜೆ ಹಾಕಲು ನಿರ್ಧಾರಿಸಿದ್ದಾರೆ. ಅಲ್ಲು ಅರ್ಜುನ್ ಜೊತೆ ‘ಅಲ್ಲಾ ವೈಕುಂಠಪುರಂ’ ಸಿನಿಮಾದಲ್ಲಿ ನಾಯಕಿಯಾಗಿ ಸಕ್ಸಸ್ ಕಂಡ ಪೂಜಾ ಹೆಗ್ಡೆಗೆ ಸಾಲು ಸಾಲು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಸಿನಿಮಾ ಆಯ್ಕೆಗಳಲ್ಲಿ ಪೂಜಾ ಎಡವಿದ್ರಾ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ. ‘ಅಲ್ಲಾ ವೈಕುಂಠಪುರಂ’ ಚಿತ್ರದ ನಂತರ ಪೂಜಾ ನಟಿಸಿದ ಅಷ್ಟೂ ಸಿನಿಮಾಗಳು ಚಿತ್ರಮಂದಿರದಲ್ಲಿ ಮಕಾಡೆ ಮಲಗಿತ್ತು. ಇತ್ತೀಚಿಗೆ ‘ಕಿಸಿ ಕಾ ಭಾಯ್ ಕಿಸಿ ಕೀ ಜಾನ್’ ಚಿತ್ರ ಕೂಡ ಫ್ಲಾಪ್ ಆಗಿದೆ. ಸಲ್ಮಾನ್ ಖಾನ್‌ಗೆ ಜೋಡಿಯಾಗಿ ಪೂಜಾ ನಟಿಸಿದ್ದರು. ಆದರೆ ಆ ಸಿನಿಮಾ ಕೂಡ ಬಾಕ್ಸ್ ಆಪೀಸ್ ನಲ್ಲಿ ಸೋಲು ಕಂಡಿತ್ತು. ಇದೇ ಕಾರಣಕ್ಕೆ ಪೂಜಾ ಐಟಂ ಹಾಡಿಗೆ ಹೆಜ್ಜೆ ಹಾಕಲು ಮುಂದಾಗಿದ್ದಾರೆ.…
ಲಾಹೋರ್: ಭ್ರಷ್ಟಚಾರ ಪ್ರಕರಣದಲ್ಲಿ ಬಂಧನಕೊಳಗಾಗಿ ಬಿಡುಗಡೆ ಆಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ, ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ಸಲ್ಲಿಸಿದ ಅರ್ಜಿಯ ಮೇಲಿನ ತೀರ್ಪನ್ನು ಲಾಹೋರ್ ಹೈಕೋರ್ಟ್ ಕಾಯ್ದಿರಿಸಿದೆ. ಅಲ್ ಖಾದಿರ್ ಟ್ರಸ್ಟ್ ಕೇಸ್ ಪ್ರಕರಣದಲ್ಲಿ ಬಂಧಿತರಾಗಿದ್ದಂದಿನಿಂದ ಅವರ ವಿರುದ್ಧ ದಾಖಲಾಗಿರುವ ಪ್ರತಿಯೊಂದು ಪ್ರಕರಣಕ್ಕೂ ಇದು ಅನ್ವಯಿಸುತ್ತದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಭೂ ಹಗರಣ ಪ್ರಕರಣದಲ್ಲಿ ಖಾನ್ ಅವರ ಬಂಧನದ ನಂತರ ಪ್ರತಿಭಟನೆಗಳು ಹುಟ್ಟಿಕೊಂಡ ಹಿನ್ನೆಲೆಯಲ್ಲಿ, ಮಾಜಿ ಪ್ರಧಾನಿ ವಿರುದ್ಧ ಇತರ ಪ್ರಕರಣಗಳನ್ನು ಸಹ ದಾಖಲಿಸಲಾಯಿತು. ಏತನ್ಮಧ್ಯೆ, ವಿಚಾರಣೆಯ ಆರಂಭದಲ್ಲಿ ಪಿಟಿಐ ಮುಖ್ಯಸ್ಥರ ಗೈರುಹಾಜರಿಯ ಬಗ್ಗೆ ನ್ಯಾಯಾಲಯವು ವಿಚಾರಿಸಿತು, ಖಾನ್ ಅವರ ವಕೀಲರು ತಮ್ಮ ಕಕ್ಷಿದಾರರು ಬೆಳಿಗ್ಗೆ 11 ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದು ಪ್ರತಿಕ್ರಿಯಿಸಿದರು. ಪಂಜಾಬ್‌ನ ಹಂಗಾಮಿ ವಕೀಲರ ಮಧ್ಯಂತರ ಸರ್ಕಾರವು ಇಮ್ರಾನ್ ಖಾನ್ ಅವರ ಜಾಮೀನು ವಿನಂತಿಯನ್ನು ವಿರೋಧಿಸಿದ್ದು, ಇದು ಸ್ವೀಕಾರಾರ್ಹವಲ್ಲ ಎಂದು ಪ್ರತಿಪಾದಿಸಿತ್ತು. ಜಿಯೋ ನ್ಯೂಸ್ ಪ್ರಕಾರ, ಇಮ್ರಾನ್ ಖಾನ್ ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲ ಮತ್ತು…
ನವದೆಹಲಿ: ಡಿ.ಕೆ ಶಿವಕುಮಾರ್ (DK Shivakumar) ನನ್ನ ಅಣ್ಣ, ಬಹಳಷ್ಟು ಕಷ್ಟ ಪಟ್ಟಿದ್ದಾರೆ. ಹಾಗಾಗಿ ಅವರೇ ಸಿಎಂ ಆಗಬೇಕು ಎಂದು ಸಂಸದ ಡಿ.ಕೆ ಸುರೇಶ್ (D.K Suresh) ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ನಿರೀಕ್ಷೆ ಪ್ರಕಾರ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು. ಸತತವಾಗಿ 3 ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದ್ದಾರೆ. ಪಕ್ಷ ಸಂಕಷ್ಟದಲ್ಲಿ ಇತ್ತು. ಸೋನಿಯಾ ಗಾಂಧಿ (Sonia Gandhi) ಯವರಿಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಯವರಿಗೆ ಮಾತನ್ನ ಕೊಟ್ಟಿದ್ರು. ಆ ಮಾತಿನಂತೆ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ ಎಂದರು. ಮುಂದಿನ ತೀರ್ಮಾನ ಪಕ್ಷದ ವರಿಷ್ಟರು ತೆಗೆದುಕೊಳ್ಳುತ್ತಾರೆ. ಒಟ್ಟಾರೆ ನಮ್ಮ ಜವಾಬ್ದಾರಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವುದಾಗಿತ್ತು. ಆ ಕೆಲಸವನ್ನು ಸಂಕಷ್ಟ ಸಮಯದಲ್ಲೂ ಸಹ ನಾವು ಮಾಡಿದ್ದೇವೆ ಎಂದು ಹೇಳಿದರು.
ಕಂಪ್ಲಿ: ತಿರುಪತಿಗೆ ಹೋಗಿ ಹಿಂತಿರುಗುವ ವೇಳೆ ಕ್ರೂಸರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಕಂಪ್ಲಿ ಪಟ್ಟಣದ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಆಂದ್ರಪ್ರದೇಶದ ವೈಎಸ್‌ಆರ್ ಜಿಲ್ಲೆಯ ಕೊಂಡಾಪುರ ಮಂಡಲದ ಏಟೂರು ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಕ್ರೂಸರ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಕ್ರೂಸರ್‌ನಲ್ಲಿದ್ದ 17ಜನರಲ್ಲಿ ಕಂಪ್ಲಿಯ ಮಹಿಳೆ ಸೇರಿ ಏಳು ಜನ ಮೃತಪಟ್ಟಿದ್ದಾರೆ. ಗುತ್ತಿಗೆದಾರ ಜಿ.ಭಾಸ್ಕರರೆಡ್ಡಿ ಇವರ ಪತ್ನಿ ಲಕ್ಷಿ (40) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರ ಮಕ್ಕಳಾದ ಮೇಘನಾರೆಡ್ಡಿ(19), ಶಿಲ್ಪಾರೆಡ್ಡಿ (17) ಗಂಭೀರವಾಗಿ ಗಾಯಗೊಂಡಿದ್ದು ಅನಂತಪುರದ ಕೀಮ್ಸ್ ಸವೇರಾ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಮೃತಳ ಅಂತ್ಯಕ್ರಿಯೆ ವೈಎಸ್‌ಆರ್ ಜಿಲ್ಲೆಯ ಜಮ್ಮಲಮಡುಗು ಪಟ್ಟಣದಲ್ಲಿ ಜರುಗಿದೆ. ರಸ್ತೆ ಅಪಘಾತ ವಿಷಯ ತಿಳಿದು ಗುತ್ತಿಗೆದಾರ ಜಿ.ಭಾಸ್ಕರರೆಡ್ಡಿ ಘಟನಾ ಸ್ಥಳಕ್ಕೆ ತೆರಳಲು ಬೈಕ್‌ನಲ್ಲಿ ಸಾಗಿದ್ದಾಗ ಬಳ್ಳಾರಿ ಬಳಿಯ ಶ್ರೀನಿವಾಸ್ ಕ್ಯಾಂಪ್ ಹೊರವಲಯದಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.