Author: Prajatv Kannada

ಬೆಂಗಳೂರು: ರಾಜ್ಯ ಅಭಿವೃದ್ಧಿ ಹೊಂದಲು ಬಿಜೆಪಿ ಗೆ ಮತ ಹಾಕಿ ಎಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಅವರು ಕರೆ ನೀಡಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕುಮಾರಸ್ವಾಮಿ ಬಡಾವಣೆಯಲ್ಲಿ ಬಿಜೆಪಿ ಗೆ ಮತ ಹಾಕುವಂತೆ ಜನತೆಯಲ್ಲಿ ಮನವಿ ಮಾಡಿ ಮಾತನಾಡಿದರು. ಬಿಜೆಪಿಯ ಆಡಳಿತವನ್ನು ರಾಜ್ಯದ ಜನತೆ ಮೆಚ್ಚಿದ್ದಾರೆ. ಹಾಗೂ ಮೋದಿಯ ಆಡಳಿತಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಹೀಗಾಗಿ  ಬಿಜೆಪಿ ಮತ್ತೆ ಹೆಚ್ಚು ಮತಗಳಿಂದ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರು ದುಡ್ಡು ಕೊಟ್ಟು ಮತದಾರರನ್ನು ಖರೀದಿಸಲು ಹೊರಟಿದ್ದಾರೆ. ಆದರೆ ಇದರಿಂದ ಯಾವುದೇ ರೀತಿ ಪ್ರಯೋಜನ ಇಲ್ಲ. ಮತದಾರರು ಅಭಿವೃದ್ಧಿ ಪರ ಕೈಜೋಡಿಸಲಿದ್ದಾರೆ. ಎಲ್ಲವೂ ಮೇ 12 ರ ನಂತರ ತಿಳಿಯಲಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More

2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಜಯನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕಿ ಸೌಮ್ಯ ರೆಡ್ಡಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಜಯನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಲು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಬಳಿಕ ಮಾತನಾಡಿದ ಸೌಮ್ಯ ರೆಡ್ಡಿ, ನಿಮ್ಮೆಲ್ಲರ ಪ್ರೀತಿಯ ಋಣಭಾರ ನನ್ನ ಮೇಲಿದ್ದು ಜಯನಗರದ ಸರ್ವತೋಮುಖ ಅಭಿವೃದ್ಧಿಗೆ ಮತ್ತೆ ಬೆಂಬಲ ನೀಡಿ ಆಶೀರ್ವದಿಸಿ ನಿಮ್ಮ ಋಣ ತೀರಿಸುವ ಅವಕಾಶ ನೀಡುವಂತೆ ಸವಿನಯವಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಮಾಜಿ ಪಾಲಿಕೆ ಸದಸ್ಯರಾದ ರಿಜ್ವಾನ್ ನವಾಬ್, ಎನ್.ನಾಗರಾಜ್, ದಿವಾಕರ್, ಬ್ಲಾಕ್ ಅಧ್ಯಕ್ಷರಾದ ಅರುಣ್ ಕುಮಾರ್, ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಎಲ್ಲಾ ಮುಂಚೂಣಿ ಘಟಕಗಳ ಸದಸ್ಯರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಪ್ರೀತಿಯ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Read More

ಕರ್ನಾಟಕ 2023 ರ ವಿಧಾನಸಭಾ ಚುನಾವಣೆಯ ಪ್ರಯುಕ್ತ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಕೃಷ್ಣ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಲ್ಕನೇ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದು, ನಿನ್ನೆ ಸಾಂಕೇತಿಕವಾಗಿ ಪ್ರಿಯಾಕೃಷ್ಣ ಅವರು ನಾಮಪತ್ರ ಸಲ್ಲಿಸಿದ್ದರು. ಇಂದು ಬೆಂಬಗಲಿಗರೊಂದಿಗೆ ಶಕ್ತಿ ಪ್ರದರ್ಶನ ಮಾಡಿದ್ದಾರೆ. 2018ರಲ್ಲಿ ಬಿಜೆಪಿಯ ಸೋಮಣ್ಣ ವಿರುದ್ಧ ಸೋತಿದ್ದರು. ಈ ಸಾರಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದಾರೆ. ಗೋವಿಂದರಾಜ ನಗರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಬರೋಬ್ಬರಿ 1,156.83 ಕೋಟಿ ಆಸ್ತಿ ಘೋಷಿಸುವ ಮೂಲಕ ಸಹಸ್ರ ಕೋಟಿ ಒಡೆಯ ಎಂದು ಕರೆಸಿಕೊಂಡಿದ್ದಾರೆ. ಆದರೆ, ಇವರ ತಂದೆ ವಿಜಯನಗರ ಅಭ್ಯರ್ಥಿ ಹಾಗೂ ಮಾಜಿ ಸಚಿವ ಎಂ. ಕೃಷ್ಣಪ್ಪ ಸುಮಾರು 400 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ.

Read More

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ‌ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಆರ್ಎಂವಿ ಬಡಾವಣೆಗೆ  1977ರಲ್ಲಿ ನೋಟಿಫೀಷನ್ ಮಾಡಲಾಗಿತ್ತು. ಬಿಡಿಎ ಅಧಿಕಾರಿಗಳ ವಿರೋಧದ ಮಧ್ಯೆ, 2010ರಲ್ಲಿ ಅಂದಿನ ಸಿಎಂ ಆಗಿದ್ದ ಬಿ ಎಸ್ ಯಡಿಯೂರಪ್ಪ ಅವರ ಸೂಚನೆ ಮೇರೆಗೆ 15 ಗುಂಟೆ ಅಕ್ರಮ ವಾಗಿ ಡಿ ನೋಟಿಫಿಕೇಶನ್ ಮಾಡಲಾಗಿತ್ತು. ನಂತರ ಮತ್ತೊಮ್ಮೆ 25 ಗುಂಟೆ ಜಮೀನು ಡಿನೋಟಿಫಿಷನ್ ಆರೋಪ ಕೇಳಿ ಬಂತು. ಉದ್ಯಮಿಗಳಿಗೆ ಜೊತೆ ಸೇರಿ ಅಕ್ರಮ ಎಸಗಿರುವ ಆರೋಪ ಮಾಡಲಾಗಿದ್ದು, ಅಕ್ರಮ ಡಿನೋಟಿಫಿಕೇಷನ್ ನಿಂದ ಸರ್ಕಾರಕ್ಕೆ‌74 ಕೋಟಿ ರೂ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆರೋಪದ ಬಗ್ಗೆ ತನಿಖೆ ಮಾಡುವಂತೆ ದಾಖಲೆ ಸಮೇತ ಅಬ್ರಹಾಂ ದೂರು  ನೀಡಿದ್ದು, ಬಿಎಸ್ ಯಡಿಯೂರಪ್ಪ ಜೊತೆಗೆ ಭೂ ಮಾಲೀಕರು ಹಾಗೂ ಬಿಲ್ಡರ್ ಗಳ ವಿರುದ್ಧವೂ ದೂರು ದಾಖಲಾಗಿದೆ. ದೂರು ಆಧರಿಸಿ ಲೋಕಾಯುಕ್ತ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು: KGF ಬಾಬು ಅವರ ಬೆಂಗಳೂರಿನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿದ ವೇಳೆ 2000ಕ್ಕೂ ಹೆಚ್ಚು ಡಿಮಾಂಡ್‌ ಡ್ರಾಫ್ಟ್‌, 5000 ಸೀರೆಗಳು ಜಪ್ತಿ ಮಾಡಲಾಗಿದೆ. ವಿಧಾನ ಸಭೆ ಚುನಾವಣೆ ಹೊತ್ತಲ್ಲೆ ಕೆಜಿಎಫ್‌ ಬಾಬು ಅವರಿಗೆ ಐಟಿ ಅಧಿಕಾರಿಗಳ ಶಾಕ್‌ ನೀಡಿದ್ದು, ಕೆಜಿಎಫ್‌ ಬಾಬು ಬೆಂಗಳೂರು ನಿವಾಸದ ಮೇಲೆ ದಾಳಿ ಮಾಡಿದಾಗ ಸೀರೆ ಸಾಮಾಗ್ರಿಗಳ ಪ್ಯಾಕಿಂಗ್‌ ಮೇಲೆ ಕೆಜಿಎಫ್‌ ಹೆಸರು ಫೋಟೋಗಳು ಪತ್ತೆಯಾಗಿದ ಬೆನ್ನಲ್ಲೆ ಜಪ್ತಿಯನ್ನು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೇ ಉಮ್ರಾ ಪೌಂಡೇಶನ್‌ ಹೆಸರಿನಲ್ಲಿ ತಲಾ 1,105 ಮೌಲ್ಯದ ಸೀರೆ ಸೇರಿದಂತೆ ವಸ್ತುಗಳನ್ನು ಜಪ್ತಿಯಾಗಿದೆ. ಕೆಜಿಎಫ್ ಬಾಬು ಅವರು ತಮ್ಮ ಎರಡನೇ ಪತ್ನಿ ಶಾಝಿಯಾ ತರನ್ನುಮ್‌ ಅವರನ್ನು ಪಕ್ಷೇತರರಾಗಿ ಕಣಕ್ಕೆ ಇಳಿಸಿದ್ದಾರೆ. ಶಾಝಿಯಾ ತರನ್ನುಮ್‌ ಅವರ ನಾಮಪತ್ರದ ಜತೆಗೆ ಸಲ್ಲಿಸಲಾದ ಅಫಿಡವಿಟ್‌ನಲ್ಲಿ ಕೆಜಿಎಫ್‌ ಬಾಬು ಅವರ ಆಸ್ತಿ ಮೌಲ್ಯ 1621 ಕೋಟಿ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ. ಅಧಿಕೃತವಾಗಿಯೇ ಇಷ್ಟೊಂದು ಆಸ್ತಿ ಇದೆ ಎಂದು ಹೇಳಿಕೊಂಡಿರುವ ಕೆಜಿಎಫ್‌ ಬಾಬು ಅವರ…

Read More

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ 40 ನಾಯಕರನ್ನೊಳಗೊಂಡ ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​, ಶಶಿ ತರೂರ್, ರಮ್ಯಾ, ಉಮಾಶ್ರೀ, ಜಗದೀಶ್​ ಶೆಟ್ಟರ್​, ಸತೀಶ್​ ಜಾರಕಿಹೊಳಿ, ಡಿ.ಕೆ.ಸುರೇಶ್​​, ವೀರಪ್ಪ ಮೊಯ್ಲಿ, ಡಾ.ಪರಮೇಶ್ವರ್​, ರಣದೀಪ್ ಸಿಂಗ್ ಸುರ್ಜೇವಾಲ, ಚಿದಂಬರಂ ಸೇರಿ 40 ನಾಯಕರನ್ನು ಹೆಸರಿಸಲಾಗಿದೆ.

Read More

ಅಭ್ಯರ್ಥಿಗಳ ವಿವರ ಹೀಗಿದೆ ನಿಪ್ಪಾಣಿ- ರಾಜು ಮಾರುತಿ ಪವಾರ್​ ಚಿಕ್ಕೋಡಿ ವಿಧಾನಸಭಾ ಕ್ಷೇತ್ರ-ಸದಾಶಿವ ವಾಳಕೆ ಕಾಗವಾಡ ವಿಧಾನಸಭಾ ಕ್ಷೇತ್ರ- ಮಲ್ಲಪ್ಪ ಎಂ ಚುಂಗ ಹುಕ್ಕೇರಿ ಕ್ಷೇತ್ರ- ಬಸವರಾಜಗೌಡ ಪಾಟೀಲ್​ ಅರಭಾವಿ ಕ್ಷೇತ್ರ- ಪ್ರಕಾಶ ಕಾಶ ಶೆಟ್ಟಿ ಶಿವಮೊಗ್ಗ ನಗರ- ಆಯನೂರು ಮಂಜುನಾಥ್​ ಯಮಕನಮರಡಿ ಕ್ಷೇತ್ರ -ಮಾರುತಿ ಮಲ್ಲಪ್ಪ ಅಷ್ಟಗಿ ಬೆಳಗಾವಿ ಉತ್ತರ ಕ್ಷೇತ್ರ- ಶಿವಾನಂದ ಮುಗಲಿಹಾಳ್​ ಬೆಳಗಾವಿ ದಕ್ಷಿಣ ಕ್ಷೇತ್ರ- ಶ್ರೀನಿವಾಸ್​ ತೋಳಲ್ಕರ್​ ಬೆಳಗಾವಿ ಗ್ರಾಮಾಂತರ ಕ್ಷೇತ್ರ- ಶಂಕರಗೌಡ ರುದ್ರಗೌಡ ಪಾಟೀಲ್ ರಾಮದುರ್ಗ ಕ್ಷೇತ್ರ- ಪ್ರಕಾಶ್​​ ಮುಧೋಳ

Read More

ಬೆಂಗಳೂರು: ಕೆಆರ್‌ಪಿಪಿ ಪಕ್ಷ ಸ್ಥಾಪಿಸಿ ರಾಜ್ಯ ವಿಧಾನಸಭೆ ಚುನಾವಣೆ ಅಖಾಡಕ್ಕೆ ಇಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ. ಪತ್ನಿ ಅರುಣಾ ಪರ ಪ್ರಚಾರ ಮಾಡುವ ಲೆಕ್ಕಚಾರದಲ್ಲಿದ್ದ ರೆಡ್ಡಿಗೆ ಸುಪ್ರೀಂಕೋರ್ಟ್ ಬಳ್ಳಾರಿಗೆ ಪ್ರವೇಶವನ್ನು ನಿರಾಕರಿಸಿದೆ. ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಾಮೀನು ಷರತ್ತು ಸಡಿಲಿಸುವಂತೆ ಕೋರಿ ಗಾಲಿ ಜನಾರ್ದನರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ. ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಹೊಸ ಅರ್ಜಿಯನ್ನು ಪುರಸ್ಕರಿಸಲು ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಸಿಟಿ ರವಿಕುಮಾರ್ ಅವರ ಪೀಠ ನಿರಾಕರಿಸಿದೆ. ಸುಪ್ರೀಂಕೋರ್ಟ್ ನಿರ್ಧಾರದಿಂದ ಜನಾರ್ದನ ರೆಡ್ಡಿಗೆ ಬಳ್ಳಾರಿ ಜಿಲ್ಲೆಯಲ್ಲಿ ಪತ್ನಿ ಅರುಣಾ ಸೇರಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡದಂತಹ ಪರಿಸ್ಥಿತಿಯಲ್ಲಿದ್ದಾರೆ. ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಪ್ರವೇಶಿಸದಂತೆ ಈ ಹಿಂದೆ ಷರತ್ತು ವಿಧಿಸಿ ಜಾಮೀನು ನೀಡಿತ್ತು. 2015, ಜನವರಿ 20ರ ಜಾಮೀನು ಆದೇಶವನ್ನು ಮಾರ್ಪಡಿಸಿದ್ದ ನ್ಯಾಯಾಲಯ, ಕರ್ನಾಟಕದ ಮಾಜಿ…

Read More

2023 ವಿಧಾನಸಭಾ ಚುನಾವಣೆ ಕಾವು ಜೋರಾಗಿದೆ.. ಈಗಾಗಲೇ ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡ್ತಿದ್ದಾರೆ.. ಇಂದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್ ಶ್ರೀನಿವಾಸ ಅವರು ಸಾವಿರಾರು ಕಾರ್ಯಕರ್ತರನ್ನ ಸೇರಿಸಿ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.. ಯೆಸ್2023  ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತಹದ್ದು.. ಮೂರು ಪಕ್ಷದ ಅಭ್ಯರ್ಥಿಗಳು ಶಕ್ತಿ ಪ್ರದರ್ಶನ ಮೂಲಕ ನಾಮಪತ್ರ ಸಲ್ಲಿಕೆ ಮಾಡ್ತಿದ್ದಾರೆ.. ಅದರಂತೆ ಇಂದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್ ಶ್ರೀನಿವಾಸ ನಾಮಪತ್ರ ಸಲ್ಲಿಕೆ ಮಾಡಿದರು.. ನಾಮಪತ್ರ ಸಲ್ಲಿಸುವ ಮುನ್ನ ನೆಲಮಂಗಲದ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರನ್ನು ಸೇರಿಸಿ ಮೆರವಣಿಗೆ ಮಾಡಿ ನಾಮಪತ್ರ ಸಲ್ಲಿದ್ದರು.. ನಾಮಪತ್ರ ಸಲ್ಲಿದ ಬಳಿಕ ಮಾತನಾಡಿದ ಅವರು ಕಳೆದ ಹತ್ತು ವರ್ಷಗಳಿಂದ ಜೆಡಿಎಸ್ ಪಕ್ಷದ ಶಾಸಕರು ಕ್ಷೇತ್ರದಲ್ಲಿ ಎನು ಅಭಿವೃದ್ಧಿ ಮಾಡಿಲ್ಲ.. ಈ ಬಾರಿ ನಾನು ಆಯ್ಕೆ ಆಗ್ತಿನಿ ಅನ್ನುವ ವಿಶ್ವಾಸ ನನಗೆ ಇದೆ..…

Read More

ಬೆಂಗಳೂರು: ರಾಜ್ಯದ ಜನ ಬಿಜೆಪಿ ಆಡಳಿತಕ್ಕೆ ಬೇಸತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗುತ್ತಿದ್ದಂತೆ ಬಿಜೆಪಿ ಆದಾಯ ತೆರಿಗೆ ಹಾಗೂ ಇತರ ಸಂಸ್ಥೆತಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ಬೆಂಬಲಿಗರನ್ನು ಬೆದರಿಸುವ ಯತ್ನ ಮಾಡುತ್ತಿದೆ. ನಿನ್ನೆ ಕೂಡ ಕೆಲವರು ನನ್ನ ಮನೆಗೆ ಬಂದಿದ್ದರು. ಐಟಿ ಅಧಿಕಾರಿಗಳು ನೀನು ಭಾರತ ಜೋಡೋ ಯಾತ್ರೆಗೆ ಕೋಟಿಗಟ್ಟಲೆ ಹಣ ನೀಡಿದ್ದೀಯಾ ಎಂದು ಹೆದರಿಸುತ್ತಿದ್ದಾರೆ.  ಅವರು ಎಷ್ಟಾದರೂ ದಾಳಿ ಮಾಡಿ ಬೆದರಿಕೆ ಹಾಕಲಿ, ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿ ಉತ್ತಮ ಆಡಳಿತ ನೀಡುತ್ತೇವೆ. ರಾಜ್ಯದ ಜನ ಬಿಜೆಪಿ ಆಡಳಿತಕ್ಕೆ ಬೇಸತ್ತಿದ್ದು, ರಾಜ್ಯದಲ್ಲಿ ಬದಲಾವಣೆ ತರಲಿದ್ದಾರೆ. ಮೇ 10ರಂದು ಕೇವಲ ಮತದಾನದ ದಿನ ಮಾತ್ರವಲ್ಲ, ರಾಜ್ಯದಲ್ಲಿ ಬದಲಾವಣೆ ತರುವ ದಿನ. ಭ್ರಷ್ಟಾಚಾರ ಬಡಿದೋಡಿಸುವ ದಿನ. ಎಲ್ಲರ ಮನೆಯಲ್ಲಿ ಜ್ಯೋತಿ ಹತ್ತಿಸುವ, ಎಲ್ಲಾ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ, ನಿರುದ್ಯೋಗಿ…

Read More