Author: Prajatv Kannada

ಬೆಂಗಳೂರು: ರಾಜ್ಯದ ಜನ ಬಿಜೆಪಿ ಆಡಳಿತಕ್ಕೆ ಬೇಸತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗುತ್ತಿದ್ದಂತೆ ಬಿಜೆಪಿ ಆದಾಯ ತೆರಿಗೆ ಹಾಗೂ ಇತರ ಸಂಸ್ಥೆತಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ಬೆಂಬಲಿಗರನ್ನು ಬೆದರಿಸುವ ಯತ್ನ ಮಾಡುತ್ತಿದೆ. ನಿನ್ನೆ ಕೂಡ ಕೆಲವರು ನನ್ನ ಮನೆಗೆ ಬಂದಿದ್ದರು. ಐಟಿ ಅಧಿಕಾರಿಗಳು ನೀನು ಭಾರತ ಜೋಡೋ ಯಾತ್ರೆಗೆ ಕೋಟಿಗಟ್ಟಲೆ ಹಣ ನೀಡಿದ್ದೀಯಾ ಎಂದು ಹೆದರಿಸುತ್ತಿದ್ದಾರೆ.  ಅವರು ಎಷ್ಟಾದರೂ ದಾಳಿ ಮಾಡಿ ಬೆದರಿಕೆ ಹಾಕಲಿ, ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿ ಉತ್ತಮ ಆಡಳಿತ ನೀಡುತ್ತೇವೆ. ರಾಜ್ಯದ ಜನ ಬಿಜೆಪಿ ಆಡಳಿತಕ್ಕೆ ಬೇಸತ್ತಿದ್ದು, ರಾಜ್ಯದಲ್ಲಿ ಬದಲಾವಣೆ ತರಲಿದ್ದಾರೆ. ಮೇ 10ರಂದು ಕೇವಲ ಮತದಾನದ ದಿನ ಮಾತ್ರವಲ್ಲ, ರಾಜ್ಯದಲ್ಲಿ ಬದಲಾವಣೆ ತರುವ ದಿನ. ಭ್ರಷ್ಟಾಚಾರ ಬಡಿದೋಡಿಸುವ ದಿನ. ಎಲ್ಲರ ಮನೆಯಲ್ಲಿ ಜ್ಯೋತಿ ಹತ್ತಿಸುವ, ಎಲ್ಲಾ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ, ನಿರುದ್ಯೋಗಿ…

Read More

ಬೆಂಗಳೂರು: ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾದಲ್ಲಿ ಸಚಿವ ವಿ ಸೋಮಣ್ಣ ಸ್ಪರ್ದೆ ಮಾಡುತ್ತಿರುವ ವಿಚಾರವಾಗಿ ಮಾತನಾಡಿ, ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ‌ ಮಣ್ಣಿನ‌ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು?’ ಎಂದು ಹೇಳಿದ್ದಾರೆ. ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣನವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾಕ್ಕೆ ಕರೆತಂದು ಕಣಕ್ಕಿಳಿಸಿದೆ. ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ ಇದು. ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ’ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಸುಮಾರು 45 ಪ್ರಮುಖ ರೌಡಿಗಳನ್ನು ಗಡಿಪಾರು ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ 12 ರೌಡಿಗಳನ್ನ ಗಡಿಪಾರು ಮಾಡಲು ಆಯಾ ವಿಭಾಗದ ಡಿಸಿಪಿಗಳು ಆದೇಶ ಹೊರಡಿಸಿದ್ದಾರೆ. ಉಳಿದಂತೆ 33 ರೌಡಿಗಳ ಗಡಿಪಾರಿಗೆ ಸಿದ್ದತೆ ನಡಿತಾಯಿದ್ದು, ಕೌನ್ಸಿಲಿಂಗ್ ಆಗುತ್ತಿದೆಯಂತೆ. ಇನ್ನೊಂದು ವಾರದ ಒಳಗೆ ನಗರ ಪೊಲೀಸರು ಗಡಿಪಾರು ಮಾಡಲಿದ್ದಾರೆ. ಪೂರ್ವ ವಿಭಾಗ 12, ಪಶ್ಚಿಮ ವಿಭಾಗ 6, ಆಗ್ನೇಯ ವಿಭಾಗ 5, ಕೇಂದ್ರ ವಿಭಾಗ 4, ಈಶಾನ್ಯ ವಿಭಾಗ 4, ವೈಟ್ ಫೀಲ್ಡ್ ವಿಭಾಗ 5, ಉತ್ತರ ವಿಭಾಗ 5, ದಕ್ಷಿಣ ವಿಭಾಗ 4 ರೌಡಿಗಳನ್ನ ಗಡಿಪಾರು ಮಾಡಲಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಉಳಿದಿದ್ದು, ಅದರಂತೆ ಚುನಾವಣೆ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಈಗಾಗಲೇ ಸೂಕ್ತ ಕ್ರಮ‌ಕೈಗೊಳ್ಳಲಾಗಿದೆ.

Read More

ಬೆಂಗಳೂರು: ಟೆಂಡರ್ ಪ್ರಕ್ರಿಯೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಅಕ್ರಮ ಎಸಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಬೊಮ್ಮಾಯಿ ಸರ್ಕಾರ ಟೆಂಡರ್‌ಗಳಲ್ಲಿ 40% ಕಮಿಷನ್ ಪಡೆಯಲು ಕಾನೂನುಬಾಹಿರ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೆಲ್ಲವನ್ನು ನೋಡಿ ಸುಮ್ಮನೆ ಕೂತಿರುವ ಚುನಾವಣಾ ಆಯೋಗದ ಮೇಲೆ ನಂಬಿಕೆ ಕುಗ್ಗಿವೆ. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು. ಇನ್ನೂ ಚುನಾವಣೆ ದಿನಾಂಕ ಘೋಷಿಸುವ ಮುನ್ನ ಅನೇಕ ಟೆಂಡರ್ ಗಳನ್ನು ಸಮರ್ಪಕ ಪ್ರಕ್ರಿಯೆ ಮೂಲಕ ಹೊರಡಿಸಿಲ್ಲ. ಟೆಂಡರ್ ಅಂದಾಜು ಮೊತ್ತ, ಕಾಲಾವಧಿ ನಿಗದಿಯಾಗದೇ ಟೆಂಡರ್ ನೀಡಲಾಗಿದೆ. ಇಲಾಖೆವಾರು ಕಾಮಗಾರಿ ವೆಚ್ಚದ ಪರಿಶೀಲನೆ ಇಲ್ಲದೆ ಟೆಂಡರ್ ನೀಡಲಾಗಿದೆ. ಬೊಮ್ಮಾಯಿ ಸರ್ಕಾರ ಕೇವಲ 40% ಕಮಿಷನ್ ಪಡೆಯುವ ಏಕಮಾತ್ರ ಉದ್ದೇಶದಿಂದ ಈ ರೀತಿ ಅಕ್ರಮವಾಗಿ ಟೆಂಡರ್ ನೀಡಲಾಗಿದೆ. ಈ ವಿಚಾರವಾಗಿ ರಾಜ್ಯ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕೇಂದ್ರ…

Read More

ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮೊದಲೇ ಪ್ಲ್ಯಾನ್ ಮಾಡಿದ್ದರು ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಪದ್ಮನಾಭ ನಗರದಲ್ಲಿ ಮಾತನಾಡಿದ ಅವರು, ಜಗದೀಶ್‌ ಶೆಟ್ಟರ್‌ ಬಿಜೆಪಿಯಲ್ಲಿ ಎಲ್ಲವನ್ನೂ ಅನುಭವಿಸಿ ಹೋಗಿರೋದು ಆಶ್ಚರ್ಯ ಉಂಟುಮಾಡಿದೆ. ಮುಖ್ಯಮಂತ್ರಿ ಆಗಬೇಕು ಎನ್ನುವ ಕೊರಗು ಅವರಿಗೆ ಇದ್ದಿದ್ದರೆ ಕಾಂಗ್ರೆಸ್‌ಗೆ ಹೋಗಿದ್ದಾರೆ ಎನ್ನಬಹುದು. ಆದರೆ ಅವರಿಗೆ ಈ ರೀತಿಯಾದ ಕೊರಗು ಇರಲಿಲ್ಲ. ಅವರ ಕುಟುಂಬಕ್ಕೆ ಟಿಕೆಟ್ ಕೊಡುತ್ತೇವೆ ಎಂದರೂ ಹೋಗಿದ್ದಾರೆ. ಅವರ ಏರಿಯಾದಲ್ಲಿ ಏನೋ ಕೆಲಸ ಪೆಂಡಿಂಗ್ ಇದೆ ಎಂದಾಗಿದ್ದರೆ ಅವರ ಮಗ ಅಥವಾ ಶ್ರೀಮತಿ ಕೈಯಲ್ಲಿಯೇ ಮಾಡಿಸಬಹುದಿತ್ತು ಕಾಂಗ್ರೆಸ್‌ಗೆ ಹೋಗಿ ದುಡುಕಿನ ನಿರ್ಧಾರ ಮಾಡಿದ್ದಾರೆ. ಇದು ಒಳ್ಳೆಯದಲ್ಲ. ಅಧಿಕಾರವನ್ನು ಕೊಟ್ಟಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಹೋಗಿರುವುದು ಬಹಳ ನೋವಿನ ಸಂಗತಿ ಎಂದು ಜಗದೀಶ್‌ ಶೆಟ್ಟರ್‌ ವಿರುದ್ಧ ಸಚಿವ ಆರ್.ಅಶೋಕ್ ಕೆಂಡಾಮಂಡಲರಾಗಿದ್ದಾರೆ.

Read More

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಅಕ್ರಮ ಅದಿರು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ, ಕಾಂಗ್ರೆಸ್ ಶಾಸಕ ನಾಗೇಂದ್ರ ಸೇರಿದಂತೆ 16 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದೆ. ಅರ್ಜಿ ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಲಾಗಿದೆ. ಗಣಿ ಮತ್ತು ಖನಿಜ ಅಭಿವೃದ್ಧಿ ನಿಯಂತ್ರಣಗಳ ಕಾಯ್ದೆ 1957 ಅಡಿ, ಸೆಕ್ಷನ್ 21 ಮತ್ತು 23 ಜೊತೆಗೆ 4(1), 4(1ಎ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ತಿಳಿಸಿದೆ. ವಿಧಾನಸಭೆ ಚುನಾವಣೆಗೆ ಜನಾರ್ದನ ರೆಡ್ಡಿ ಕೊಪ್ಪಳದ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದ್ದು, ಇದೀಗ ಕೋರ್ಟ್ ಆದೇಶದಿಂದ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ ಎಂದು ಮಾತು ಕೇಳಿ ಬಂದಿದೆ.

Read More

ವಾಷಿಂಗ್ಟನ್‌: ಎಂಜಾಯ್ ಮಾಡಬೇಕೆಂದು ಪ್ರವಾಸಕ್ಕೆ ತೆರಳಿದ್ದ ಮೂವರು ಯುವತಿಯರ ಜೀವನ ಪ್ರವಾಸದಲ್ಲಿಯೇ ಅಂತ್ಯವಾಗಿದೆ. ಅಮೆರಿಕದ ಈಕ್ವೆಡಾರ್‌ ಬೀಚ್‌ನಲ್ಲಿ ಮೂವರು ಯುವತಿಯರನ್ನು ಭೀಕರ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡೆನಿಸ್ ರೆಯ್ನಾ (19) ಯುಲಿಯಾನಾ ಮಾಸಿಯಾಸ್ (21) ಹಾಗೂ ನಯೆಲಿ ತಫಿಯಾ (22) ಮೃತ ಯುವತಿಯರು. ಮೂವರು ಯುವತಿಯರು ಪ್ರವಾಸಕ್ಕೆಂದು ತೆರಳಿದ್ದು ಏಪ್ರಿಲ್‌ 4ರಂದು ನಾಪತ್ತೆಯಾಗಿ, ಏಪ್ರಿಲ್‌ 5 ರಂದು ಹತ್ಯೆಗೀಡಾಗಿದ್ದರು. ಆದ್ರೆ ಅದಕ್ಕೂ ಮುನ್ನ ತಮ್ಮ ಆಪ್ತರಿಗೆ ʻಇಲ್ಲೇನಾದರು ಘಟನೆ ಸಂಭವಿಸಬಹುದು ಅನ್ನಿಸುತ್ತಿದೆʼ ಅಂತಾ ಸಂದೇಶ ಕಳುಹಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಹತ್ಯೆಯಾವದರಲ್ಲಿ ಮಾಸಿಯಾಸ್ ಗಾಯಕಿಯಾಗಿದ್ದು, ನಯೆಲಿ ತಫಿಯಾ ತಾಯಿ ಹಾಗೂ ಡೆನಿಸ್‌ ರೆಯ್ನಾ ಕೃಷಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಾಗಿದ್ದರು. ಮಾಹಿತಿ ಪ್ರಕಾರ, ಇದೇ ಏಪ್ರಿಲ್‌ 5 ರಂದು ಮೂವರು ಯುವತಿಯರನ್ನ ಚಿತ್ರಹಿಂಸೆ ನೀಡಿ ಯಾರೋ ಹತ್ಯೆ ಮಾಡಿದ್ದಾರೆ. ನಂತರ ಈಕ್ವೆಡಾರ್‌ನ ಕ್ವಿನಿಂಡೆ ಬಳಿಯ ಎಸ್ಮೆರಾಲ್ಡಾಸ್ ನದಿಯ ಬಳಿ ಹೂತುಹಾಕಿದ್ದಾರೆ. ಈ ಸ್ಥಳದಲ್ಲಿ ನಾಯಿಯೊಂದು ದುರ್ವಾಸನೆ ಹೊರಬರುತ್ತಿರುವುದನ್ನು ಗುರುತಿಸಿದ್ದು, ಇದನ್ನು ಕಂಡ…

Read More

ಚೀನಾ: ರಾಜಧಾನಿ ಬೀಜಿಂಗ್ ನ ಆಸ್ಪತ್ರೆಯ ಒಳರೋಗಿ ವಿಭಾಗದ ಪೂರ್ವ ವಿಭಾಗದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 21 ಜನರು ಸಜೀವ ದಹನವಾಗಿದ್ದು, 70ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಬೀಜಿಂಗ್ ಡೈಲಿ ವರದಿ ಮಾಡಿದೆ. ಬೀಜಿಂಗ್’ನ ಚಾಂಗ್ಫೆಂಗ್ ಆಸ್ಪತ್ರೆಯಲ್ಲಿ ತುರ್ತು ತಂಡ ಧಾವಿಸಿದ್ದು, ಮಧ್ಯಾಹ್ನ 12:57 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮಧ್ಯಾಹ್ನ 13:33ರ ಸುಮಾರಿಗೆ ಬೆಂಕಿಯನ್ನ ನಂದಿಸಲಾಗಿದೆ. “ಇದು ದುರಂತ. ನನ್ನ ಮನೆಯ ಕಿಟಕಿಯಿಂದ ನಾನು ಅಪಘಾತವನ್ನು ನೋಡಿದ್ದು, ಬಹಳಷ್ಟು ಜನರು ಹವಾನಿಯಂತ್ರಣ ಘಟಕದ ಮೇಲೆ ಮಧ್ಯಾಹ್ನ ನಿಂತಿದ್ದರು ಮತ್ತು ಕೆಲವರು ಕಿಟಕಿಯಿಂದ ಜಿಗಿದಿದ್ದಾರೆ” ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಚೀನಾದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಅಪರೂಪವಾಗಿದ್ದು ಇದೀಗ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಬೆಂಕಿಗೆ ಕಾರಣ ಏನು ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ. ಬೆಂಕಿಯ ಕಾರಣವನ್ನು ಇನ್ನೂ ತನಿಖೆ ಮಾಡಲಾಗುತ್ತಿದೆ, ಏಕೆಂದರೆ ಚೀನಾದಲ್ಲಿ ಆಸ್ಪತ್ರೆಯಲ್ಲಿ ಬೆಂಕಿ ಅಪರೂಪ.

Read More

ಖಾರ್ಟೌಮ್: ಕಳೆದ ಮೂರು ದಿನಗಳಿಂದ ಸೇನಾ ಪಡೆ ಹಾಗೂ ಅರೆ ಸೇನಾ ಪಡೆಗಳ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಸುಮಾರು 200 ಮಂದಿ ಮೃತಪಟ್ಟಿದ್ದು, 1,800 ಜನರು ಗಾಯಾಗೊಂಡಿರುವ ಕುರಿತು ವರದಿಯಾಗಿದೆ. ಯುದ್ಧದಲ್ಲಿ ಆಸ್ಪತ್ರೆಗಳು ಹಾನಿಗೀಡಾಗಿದ್ದು, ವೈದ್ಯಕೀಯ ಸಾಮಗ್ರಿ ಹಾಗೂ ಆಹಾರ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿದೆ ಎಂದು ವರದಿಯಾಗಿದೆ. 2021ರಲ್ಲಿ ಕ್ಷಿಪ್ರ ಕ್ರಾಂತಿಯ ಮೂಲಕ ಅಧಿಕಾರವನ್ನು ವಶಪಡಿಸಿಕೊಂಡಿದ್ದ ಎರಡು ಸೇನಾ ಪಡೆಗಳ ಮುಖ್ಯಸ್ಥರ ನಡುವೆ ಅಧಿಕಾರಕ್ಕಾಗಿ ನಡೆಯುತ್ತಿದ್ದ ಹಗ್ಗಜಗ್ಗಾಟವು ಮಾರಣಾಂತಿಕ ಹಿಂಸಾಚಾರವಾಗಿ ಸ್ಫೋಟಗೊಂಡಿದ್ದು, ಸುಡಾನ್ ಸೇನಾ ಮುಖ್ಯಸ್ಥ ಮುಹಮ್ಮದ್ ಫತಾ ಅಲ್-ಬುರ್ಹಾನ್ ಹಾಗೂ ಶಕ್ತಿಶಾಲಿ ಅರೆ ಸೇನಾ ಪಡೆಯಾದ ಕ್ಷಿಪ್ರ ನೆರವು ಪಡೆಯ ಮುಖ್ಯಸ್ಥರಾದ ಅವರ ಸಹಾಯಕ ಸೇನಾಧಿಕಾರಿ ಮುಹಮ್ಮದ್ ಹಮ್ದನ್ ಡಾಂಗ್ಲೊ ನಡುವೆ ಹಣಾಹಣಿ ನಡೆಯುತ್ತಿದೆ. ತೀವ್ರ ಅಸ್ಥಿರತೆ ಎದುರಿಸುತ್ತಿರುವ ಸುಡಾನ್ ದೇಶದ ರಾಜಧಾನಿಯಲ್ಲಿ ನಡೆಯುತ್ತಿರುವ ಕಾಳಗವು ಅಭೂತಪೂರ್ವವಾಗಿದ್ದು, ಕದನ ವಿರಾಮ ಘೋಷಿಸುವಂತೆ ಪ್ರಾದೇಶಿಕ ಹಾಗೂ ಜಾಗತಿಕ ರಾಯಭಾರ ಮಾತುಕತೆಗಳು ನಡೆಯುತ್ತಿದ್ದರೂ ಕಾಳಗವು ಮತ್ತಷ್ಟು ಸುದೀರ್ಘ ಕಾಲ ಮುಂದುವರಿಯುವ ಸಾಧ್ಯತೆ ಇದೆ ಎಂದು…

Read More

ಖಾರ್ಟೌಮ್: ಕಳೆದ ನಾಲ್ಕು ದಿನಗಳಿಂದ ಸುಡಾನ್ ನಲ್ಲಿ ಸೇನಾ ಪಡೆ ಹಾಗೂ ಅರೆ ಸೇನಾ ಪಡೆಗಳ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದವರು ಅನ್ನ ಆಹಾರವಿಲ್ಲದೆ ಸಿಲುಕಿಕೊಂಡಿದ್ದಾರೆ. ಅವರನ್ನು ಮರಳಿ ತರಲು ಸರ್ಕಾರವಿನ್ನೂ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ಈ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌, ‘ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬೇಡಿ‘ ಎಂದು ತಿರುಗೇಟು ನೀಡಿದ್ದಾರೆ. ಆಡಳಿತ ಚುಕ್ಕಾಣಿ ಹಿಡಿಯುವ ಸಲುವಾಗಿ ಸುಡಾನ್‌ನಲ್ಲಿ ಸೇನಾಪಡೆ ಮತ್ತು ಅರೆಸೇನಾ ಪಡೆಗಳ ನಡುವೆ ಕಳೆದ ಐದಾರು ದಿನಗಳಿಂದ ಯುದ್ದ ನಡೆಯುತ್ತಿದೆ. ಯುದ್ಧ ಪೀಡಿತ ಸುಡಾನ್‌ನಲ್ಲಿ ಕರ್ನಾಟಕದ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ 31 ಜನರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಅಸಮಾಧಾನ ಹೊರಹಾಕಿದ್ದಾರೆ.

Read More