ಬೆಂಗಳೂರು: ‘ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ನಡೆದ ರಹಸ್ಯ ಮತದಾನದ ವೇಳೆ ಬಹುತೇಕ ಶಾಸಕರು ನನ್ನ ಪರ ಮತ ಚಲಾಯಿಸಿದ್ದಾರೆ. ನನ್ನನ್ನು ಮುಖ್ಯಮಂತ್ರಿ ಮಾಡುವುದರ ಪರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ’ ಎಂದು ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಹೇಳಿಕೆ ನೀಡಿದ್ದಾರೆ. ಅಲ್ಲದೆ, ‘ನಾನು ಮತ್ತು ಡಿ.ಕೆ. ಶಿವಕುಮಾರ್ ಮಾತ್ರವೇ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಗಳು’ ಎಂದು ಹೇಳುವ ಮೂಲಕ ಬೇರೆ ಯಾರೂ ಸ್ಪರ್ಧೆಯಲ್ಲಿಲ್ಲ ಎಂಬ ಸಂದೇಶವನ್ನೂ ರವಾನಿಸಿದರು. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದರೆ ನೀವು ಸಹಕಾರ ನೀಡುತ್ತೀರಾ? ಎಂಬ ಪ್ರಶ್ನೆಗೆ, ‘ಇದು ಊಹಾತ್ಮಕ ಪ್ರಶ್ನೆ’ ಎನ್ನುವ ಮೂಲಕ ಅಂತಹ ಪರಿಸ್ಥಿತಿಯೇ ಉದ್ಭವಿಸುವುದಿಲ್ಲ ಎಂದು ಹೇಳುವ ಮೂಲಕ ತಾವೇ ಮುಖ್ಯಮಂತ್ರಿಯಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಆಯ್ಕೆ ಸಂಬಂಧ ನಿರ್ಧಾರ ತೆಗೆದುಕೊಳ್ಳಲು ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಸೋಮವಾರ ಎಚ್‌ಎಎಲ್ ವಿಮಾನ ನಿಲ್ದಾಣದ ಮೂಲಕ ವಿಶೇಷ ವಿಮಾನದಲ್ಲಿ ದೆಹಲಿಗೆ ಹಾರಿದ ಅವರು, ಅದಕ್ಕೂ ಮೊದಲು ಆಂಗ್ಲ ಸುದ್ದಿವಾಹಿನಿಗೆ ಸಂದರ್ಶನ ನೀಡಿ ಮಾತನಾಡಿದರು.…
Author: Prajatv Kannada
ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ವಿಚಾರವಾಗಿ ಮಾಜಿ ಡಿಸಿಎಂ ಪರಮೇಶ್ವರ್(Former DCM Parameshwar) ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಎಲ್ಲವು ಸುಸೂತ್ರವಾಗಿ ನಡೆಯುತ್ತೆ. ಹೈಕಮಾಂಡ್ ಪ್ರೊಸೆಸ್ ನಡೆಸುತ್ತಿದ್ದು, ಈಗಾಗಲೇ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ದೆಹಲಿಯಲ್ಲಿ ಸೋನಿಯಾ, ರಾಹುಲ್, ಅಧ್ಯಕ್ಷರು ಕೂತು ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನೀವು ಅಂದುಕೊಂಡ ಹಾಗೆ ದೊಡ್ಡ ಹೋರಾಟ ಆಗೊಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಧ್ಯಕ್ಷರಿಗೆ ಸ್ಥಾನ ಕೊಡಬೇಕು. ಇದು ಇರೋ ಪದ್ದತಿ. ಸಿದ್ದರಾಮಯ್ಯ ಸಿಎಲ್ ಪಿ ಲೀಡರ್ ಕೆಲಸ ಮಾಡಿದ್ದಾರೆ. ಈ ಬಾರಿ ನಾವು ಸಾಮೂಹಿಕ ನಾಯಕತ್ವ ಅಂತ ಹೊಗಿದ್ವಿ. ಈಗ ಅಧಿಕಾರ ಬಂದಿದೆ ಹೈಕಮಾಂಡ್ ಯಾರು ಸಿಎಂ ಅಂತ ತೀರ್ಮಾನ ಮಾಡುತ್ತೆ ಎಂದರು. ಇನ್ನೂ ಸಿದ್ದರಾಮಯ್ಯ ಜೊತೆ ಶಾಸಕರು ಹೋಗಿ ಶಕ್ತಿ ಪ್ರದರ್ಶನ ಮಾಡ್ತಿರೋ ವಿಚಾರವಾಗಿ ಮಾತನಾಡಿ, ಅದು ಶಕ್ತಿ ಪ್ರದರ್ಶನ ಅಲ್ಲ ಕೆಲವು ಶಾಸಕರು ಅವರ ನಾಯಕರ ಜೊತೆ ಅಂತ ಹೋಗಿರುತ್ತಾರೆ. ಅದನ್ನ ಶಕ್ತಿ ಪ್ರದರ್ಶನ…
ಬೆಂಗಳೂರು: ಈ ಚುನಾವಣೆ ಬಿಜೆಪಿ ಪಾಲಿಗೆ ನಿರಾಶದಾಯಕ ಫಲಿತಾಂಶ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಬೇಸರ ಹೊರ ಹಾಕಿದ್ದಾರೆ. ಪಕ್ಷದ ಸೋಲನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ. ಪಕ್ಷದ ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಪರಾಮರ್ಶೆ ಮಾಡಿಕೊಳ್ಳುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಶ್ರಮಿಸುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಪಕ್ಷದ ಸೋಲಿಗೆ ಬಿ.ಎಲ್.ಸಂತೋಷ್ ಕಾರಣ ಎಂಬ ಆರೋಪವಿದೆ. ಸೋಲಿನ ಹೊಣೆ ರಾಜ್ಯ ಬಿಜೆಪಿ ಘಟಕದ್ದು. ಎಲ್ಲಿ ಏನು ತಪ್ಪಾಗಿದೆ ಅಂತ ನಾವು ವಿಮರ್ಶೆ ಮಾಡುತ್ತೇವೆ. ವಿಧಾನಸಭೆ ಚುನಾವಣೆ ಬೇರೆ, ಲೋಕಸಭೆ ಚುನಾವಣೆ ಬೇರೆ. ಬೇರೆ ಬೇರೆ ವಿಚಾರಗಳಲ್ಲಿ ಈ 2 ಚುನಾವಣೆಗಳು ನಡೆಯುತ್ತವೆ. ಈಗ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ 330ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ ಎಂದರು.
ಬೆಂಗಳೂರು: ರೆಡ್ಡಿ ಸಮುದಾಯದ ರಾಮಲಿಂಗಾರೆಡ್ಡಿಗೆ ಡಿಸಿಎಂ ಸ್ಥಾನ ಕೊಡಬೇಕು ಎಂದು ಕರ್ನಾಟಕ ರೆಡ್ಡಿ ಜನಸಂಘದ ನಿರ್ದೇಶಕ ರಾಮಚಂದ್ರರೆಡ್ಡಿ ಆಗ್ರಹಿಸಿದ್ದಾರೆ. ರಾಮಲಿಂಗಾರೆಡ್ಡಿಗೆ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ಇದೆ. ಸಿದ್ದರಾಮಯ್ಯ, ಡಿಕೆಶಿಗಿಂತಲೂ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಬಿಎಸ್ವೈ ಇದ್ದಾಗ ರೆಡ್ಡಿ ಸಮಾಜದ ಮೂವರನ್ನು ಮಂತ್ರಿ ಮಾಡ್ತಿದ್ದರು. ಕಳೆದ ಬಾರಿ ಒಬ್ಬರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಬಿಜೆಪಿ ಅನುಭವಿಸಿದೆ. ಹೀಗಾಗಿ ರಾಮಲಿಂಗಾರೆಡ್ಡಿಯನ್ನು ಉಪಮುಖ್ಯಮಂತ್ರಿ ಮಾಡಲೇಬೇಕು. ಇಬ್ಬರಿಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ರಾಮಚಂದ್ರರೆಡ್ಡಿ ಆಗ್ರಹಿಸಿದ್ದಾರೆ. ಈಗಾಗಲೇ ಎಐಸಿಸಿಗೆ ನಾವು ಪತ್ರ ಬರೆದು ಆಗ್ರಹ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಒಪ್ಪದಿದ್ರೆ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಲಿದೆ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ರೆಡ್ಡಿ ಸಮುದಾಯದಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು: ತೆರಿಗೆದಾರರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ (Fake bank account)ತೆರೆದು ಕೋಟ್ಯಂತರ ರುಪಾಯಿ ವರ್ಗಾಯಿಸಿಕೊಂಡು ವಂಚಿಸುತ್ತಿದ್ದ ಖತರ್ನಾಕ್ ವಂಚಕನೊಬ್ಬನನ್ನು ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು ಬಂಧಿಸಿದ್ದಾರೆ. 32 ವರ್ಷದ ದಿಲೀಪ್ ರಾಜೇಗೌಡ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು ವ್ಯಕ್ತಿಯೊಬ್ಬರ ಆದಾಯ ತೆರಿಗೆ ಮರುಪಾವತಿ ವಿವರಗಳನ್ನು ಬದಲಾಯಿಸಿ .1.41 ಕೋಟಿಯನ್ನು ನಕಲಿ ಬ್ಯಾಂಕ್ ಖಾತೆ ವರ್ಗಾಯಿಸಿಕೊಂಡು ವಂಚಿಸಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಅಧೀಕ್ಷಕ ಎಂ.ಡಿ.ಶರತ್ ಅವರ ನೇತೃತ್ವದಲ್ಲಿ ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ಧಾರವಾಡದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಿಇ ಪದವೀಧರನಾದ ದಿಲೀಪ್ ಆರಂಭದಲ್ಲಿ ಖಾಸಗಿ software ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಸರ್ಕಾರಿ ವೆಬ್‌ಸೈಟ್‌ಗಳ ಲೋಪಗಳನ್ನು ತಿಳಿದುಕೊಂಡು ವಂಚನೆಯನ್ನೇ ವೃತ್ತಿಯಾಗಿಸಿಕೊಂಡಿದ್ದ. ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ಪೋರ್ಟಲ್ ನ ನ್ಯೂನತೆ ತಿಳಿದುಕೊಂಡು ಆರು ಮಂದಿ ತೆರಿಗೆದಾರರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ತೆರೆದು ಸುಮಾರು .3.60 ಕೋಟಿ ಹಣ ವರ್ಗಾಯಿಸಿಕೊಂಡು…
ಬೆಂಗಳೂರು: ನಮ್ಮ ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಆರ್ ಟಿ ನಗರದಲ್ಲಿ ಮಾತನಾಡಿದ ಅವರು, ಇಂದು ಸುಧಾಕರ್ ಭೇಟಿ ಮಾಡಿದ್ದೀನಿ, ಸೋಮಣ್ಣ ನವರನ್ನೂ ಭೇಟಿ ಮಾಡ್ತೀನಿ. ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡ್ತಿದೀನಿ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಸೋಮಣ್ಣ ಅವರನ್ನೂ ಭೇಟಿ ಮಾಡ್ತೀನಿ. ಏಕಾಯ್ತು , ಏನು ಅಂತ ಪರಾಮರ್ಶೆ ಮಾಡಿದ್ದೇವೆ ಎಂದರು. ಇನ್ನೂ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಹಗ್ಗಜಗ್ಗಾಟ ವಿಚಾರವಾಗಿ ಪ್ರತಿಕ್ರಿಯಿಸಿ, ಅದು ಅವರ ಪಕ್ಷದ ವಿಚಾರ ನೋಡೊಣ ನಾನು ಕಾಯ್ತಿದೀನಿ ಎಂದರು. ಇನ್ನೂ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಅದು ಕೇಂದ್ರ ಸರ್ಕಾರದ ನಿರ್ಧಾರ ಆಲ್ ಸರ್ವೀಸ್ ಅದು , ಅವರು ಮಾಡಿದ್ದಾರೆ ಎಂದು ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು : ರಾಸಾಯನಿಕ ಮುಕ್ತ ಮಾವು ಮತ್ತು ಹಲಸಿನ ಹಣ್ಣುಗಳ ಮೇಳಕ್ಕೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮವು ಸಿದ್ಧತೆ ನಡೆಸುತ್ತಿದ್ದು, ಮೇ ಅಂತ್ಯದ ವೇಳೆಗೆ ಲಾಲ್‌ಬಾಗ್‌ನಲ್ಲಿ ಮೇಳ ನಡೆಸಲಾಗುತ್ತದೆ. ಘಮ ಘಮಿಸುವ ಬಾದಾಮಿ, ರಸಪುರಿ, ಸಿಂಧೂರ, ಮಲಗೋವ, ನೀಲಂ, ಮಲ್ಲಿಕಾ, ಆಮ್ರಪಾಲಿ, ಬಂಗನಪಲ್ಲಿ, ತೋತಾಪುರಿ ಸೇರಿದಂತೆ ನಾನಾ ತಳಿಯ ಹಣ್ಣುಗಳು ಮಾವು ಪ್ರಿಯರನ್ನು ತಣಿಸಲು ಮೇಳಕ್ಕೆ ಆಗಮಿಸಲು ಸಜ್ಜಾಗುತ್ತಿವೆ. ಜತೆಯಲ್ಲಿಸಾಂಪ್ರದಾಯಿಕ ಹಾಗೂ ಸಂಶೋಧನಾ ತಳಿಯ ನಾನಾ ಗಾತ್ರದ ಹಲಸು ಕೂಡ ಮೇಳಕ್ಕೆ ಬರಲು ಸಿದ್ಧವಾಗಿವೆ. ಇದರೊಂದಿಗೆ ಉಪ್ಪಿನಕಾಯಿ ಸೇರಿದಂತೆ ಮಾವಿನಿಂದ ತಯಾರಿಸಿದ ನಾನಾ ಪದಾರ್ಥಗಳನ್ನೂ ಮಾರಾಟ ಮಾಡಲಾಗುತ್ತದೆ. ಪ್ರತಿ ವರ್ಷದಂತೆ ಈ ಬಾರಿಯೂ ಹಣ್ಣುಗಳ ರಾಜ ಮಾವು ಹಾಗೂ ಹಲಸು ಮೇಳವನ್ನು ಲಾಲ್‌ಬಾಗ್‌ನಲ್ಲಿ ಹದಿನೈದು ದಿನಗಳ ಕಾಲ ಆಯೋಜಿಸಲಾಗುತ್ತದೆ. ರೈತರಿಂದ ನೇರವಾಗಿ ತಾಜಾ ಹಾಗೂ ಗುಣಮಟ್ಟದ ಹಣ್ಣುಗಳನ್ನು ಖರೀದಿಸಲು ಗ್ರಾಹಕರಿಗೆ ನೆರವಾಗುವುದು, ರೈತರಿಗೆ ಮಧ್ಯವರ್ತಿಗಳ ಹಾವಳಿಯಿಲ್ಲದೆ ಮಾರಾಟಕ್ಕೆ ನೆರವು ಕಲ್ಪಿಸುವುದು ಮೇಳದ ಉದ್ದೇಶ. ರಾಜ್ಯದಲ್ಲಿಸುಮಾರು 14-15 ಲಕ್ಷ ಟನ್ ಮಾವು…
ಅಧಿಕಾರಯುತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 60ನೇ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ರಾಯಲ್ಸ್ ಎದುರು 112 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಪಂದ್ಯದಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿ 171 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತು. ಬಳಿಕ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಅದ್ಭುತ ಬೌಲಿಂಗ್ ಪ್ರದರ್ಶನದ ಬಲದಿಂದ 10.3 ಓವರ್‌ಗಳಲ್ಲಿ 59ಕ್ಕೆ ಆಲ್‌ಔಟ್ ಮಾಡಿತು. ಇದು ಐಪಿಎಲ್ ಇತಿಹಾಸದ 3ನೇ ಅತ್ಯಂತ ಕಡಿಮೆ ಮೊತ್ತವಾಗಿದೆ. ಇನಿಂಗ್ಸ್ ಮಧ್ಯದಲ್ಲಿ ಶಿಮ್ರಾನ್ ಹೆಟ್ಮಾಯೆರ್, ಸ್ಪೋಟಕ ಬ್ಯಾಟಿಂಗ್ ನಡೆಸಿ 19 ಎಸೆತಗಳಲ್ಲಿ 35 ರನ್ ಸಿಡಿಸಿದ ಪರಿಣಾಮ ರಾಜಸ್ಥಾನ್ ರಾಯಲ್ಸ್ 50 ರನ್‌ಗಳ ಗಡಿ ದಾಟಲು ಸಾಧ್ಯವಾಯಿತು. ಇಲ್ಲವಾದರೆ ಐಪಿಎಲ್ ಇತಿಹಾಸದ ಅತ್ಯಂತ ಕಡಿಮೆ ಮೊತ್ತದ ದಾಖಲೆ ಆಗಿರುವ ಆರ್‌ಸಿಬಿ ತಂಡದ 49 ರನ್‌ಗಳ ದಾಖಲೆ ಅಳಿಸಿಹೋಗುವ ಎಲ್ಲಾ ಸಾಧ್ಯತೆ ಇತ್ತು. ಆದರೆ, ಆರ್‌ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪ್ರಕಾರ…
ಅಹ್ಮದಾಬಾದ್ : ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ತನ್ನ 20 ಓವಚರ್‌ಗಳಲ್ಲಿ 9 ವಿಕೆಟ್‌ಗೆ 188 ರನ್‌ಗಳ ದೊಡ್ಡ ಮೊತ್ತವನ್ನೇ ಕಲೆಹಾಕಿತು. ಏಕಾಂಗಿ ಹೋರಾಟ ನಡೆಸಿದ ಯುವ ಓಪನರ್ ಶುಭಮನ್ ಗಿಲ್, 58 ಎಸೆತಗಳಲ್ಲಿ 101 ರನ್ ಸಿಡಿಸಿ ತಂಡದ ದೊಡ್ಡ ಮೊತ್ತಕ್ಕೆ ಕಾರಣರಾದರು. ಇದು ಅವರ ಐಪಿಎಲ್ ಕೆರಿಯರ್‌ನ ಮೊದಲ ಶತಕವಾಗಿದೆ. ಇದಕ್ಕೂ ಮುನ್ನ ಅಜೇಯ 94 ರನ್ ಅವರ ಬೆಸ್ಟ್ ಸ್ಕೋರ್ ಆಗಿತ್ತು. ಅವರಿಗೆ ಇನಿಂಗ್ಸ್ ಮಧ್ಯದಲ್ಲಿ ಸಾಯ್ ಸುದರ್ಶನ್ (47) ಉತ್ತಮ ಸಾಥ್ ಲಭ್ಯವಾಯಿತು. ಸನ್‌ರೈಸರ್ಸ್ ಹೈದರಾಬಾದ್ ಪರ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್, 30ಕ್ಕೆ 5 ವಿಕೆಟ್ ಪಡೆದು ಮಿಂಚಿದರು. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಈವರೆಗೆ 61 ಪಂದ್ಯಗಳು ನಡೆದರೂ ಪ್ಲೇ-ಆಫ್ಸ್‌ಗೆ ಒಂದು ತಂಡವೂ ಅಧಿಕೃತವಾಗಿ ಕಾಲಿಟ್ಟಿಲ್ಲ. ಡಿಫೆಂಡಿಂಗ್ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ 16 ಅಂಕಗಳೊಂದಿಗೆ ಅಂಕಪಟ್ಟಿಯ ಅಗ್ರಸ್ಥಾನದಲ್ಲಿ ಇದೆಯಾದರೂ, ಫ್ಲೇ-ಆಫ್ಸ್ ಟಿಕೆಟ್ ಸಿಕ್ಕಿಲ್ಲ. ಹೀಗಾಗಿ ಸನ್‌ರೈಸರ್ಸ್…
ಟಾಲಿವುಡ್ ಅಂಗಳದಲ್ಲಿ ಮತ್ತೊಂದು ಬ್ರೇಕ್ ಅಪ್ ಸುದ್ದಿ ಹರಿದಾಡುತ್ತಿದೆ. ತೆಲುಗಿನ ಖ್ಯಾತ ನಟ ಶರ್ವಾನಂದ್ ಇತ್ತೀಚಿಗಷ್ಟೇ ಅದ್ದೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಆದರೆ ಈ ಎಂಗೇಜ್ ಮೆಂಟ್ ಮುರಿದು ಬಿದಿದ್ದೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟ ಶರ್ವಾನಂದ್, ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು. ಇತ್ತೀಚಿಗಷ್ಟೇ ರಕ್ಷಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದರು. ಈ ವರ್ಷದ ಆರಂಭ ಜನವರಿಯಲ್ಲಿ ಗುರುಹಿರಿಯರು ಸಮ್ಮತಿಸಿದ ಹುಡುಗಿ ರಕ್ಷಿತಾ ಶರ್ವಾನಂದ್ ಎಂಗೇಜ್ ಆಗಿದ್ದರು. ಆದರೆ ಈಗ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆ ಈ ನಿಶ್ಚಿತಾರ್ಥ ಮುರಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ. ಈ ಸುದ್ದಿಯನ್ನ ಶರ್ವಾನಂದ್ ಕಡೆಯವರು ಸ್ಪಷ್ಟನೆ ನೀಡಿದ್ದು ಶರ್ವಾನಂದ್- ರಕ್ಷಿತಾ ನಡುವೆ ಸಂಬಂಧ ಚೆನ್ನಾಗಿದೆ. ಸದ್ಯ ನಟ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಷ್ಟೇ, ಲಂಡನ್‌ನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ. ಸದ್ಯ ಒಪ್ಪಿಕೊಂಡಿರುವ ಸಿನಿಮಾಗಳನ್ನ ಮುಗಿಸಿ, ಮದುವೆ ಆಗ್ತಾರೆ ಎಂದಿದ್ದಾರೆ.…