ಬೆಂಗಳೂರು: ಬಿಜೆಪಿ ಯಿಂದ ಅಸಮಾಧಾನಗೊಂಡು ಒಬ್ಬೊಬ್ಬರಾಗಿ ಲಿಂಗಾಯತ ನಾಯಕರು ಪಕ್ಷ ತೊರೆಯುತ್ತಿದ್ದು, ಡ್ಯಾಮೇಜ್ ಕಂಟ್ರೋಲ್ ಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗಲಿಲ್ಲವೆಂಬ ಕಾರಣಕ್ಕೆ ಸಿಡಿದೆದ್ದಿದ್ದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಮೊದಲಾದವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ನಡುವೆ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಮತ್ತೊಬ್ಬ ಲಿಂಗಾಯಿತ ನಾಯಕ ಆಯನೂರು ಮಂಜುನಾಥ್ ಇಂದು ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಜೊತೆಗೆ ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದಾರೆ. ಈ ಎಲ್ಲ ವಿದ್ಯಮಾನಗಳು ಬಿಜೆಪಿ ಹಿರಿಯ ನಾಯಕರನ್ನು ಕಂಗೆಡಿಸಿದ್ದು, ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಲಿಂಗಾಯತ ಸಮುದಾಯ ಈ ಮೊದಲಿನಿಂದಲೂ ಬಿಜೆಪಿ ಜೊತೆಗೆ ನಿಂತಿದ್ದು, ಇದು ಚದುರಿ ಹೋಗದಂತೆ ನೋಡಿಕೊಳ್ಳುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು ಬಿಜೆಪಿ ಲಿಂಗಾಯತ ನಾಯಕರ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
Author: Prajatv Kannada
ಬೆಂಗಳೂರು: ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಲ್ಲಿ ಮಾಜಿ ಶಾಸಕ ಅನಿಲ್ ಲಾಡ್ ಅವರು ಮಂಗಳವಾರ ರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷ ತನಗೆ ಟಿಕೆಟ್ ನೀಡುತ್ತದೆ ಎನ್ನುವ ಭರವಸೆಯಲ್ಲಿದ್ದ ಮಾಜಿ ಶಾಸಕ ಅನಿಲ್ ಲಾಡ್ ಅವರಿಗೆ ಟಿಕೆಟ್ ನೀಡಿಲ್ಲ. ಇದರಿಂದ ತಮ್ಮ ಪಕ್ಷದ ವಿರುದ್ಧವೇ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ನಿಲ್ಲುವುದಾಗಿ ಅನಿಲ್ ಲಾಡ್ ಹೇಳಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಂಡಾಯ ಅಭ್ಯರ್ಥಿಯ ಬದಲು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ಮುಂಜಾನೆ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬಳ್ಳಾರಿ ಕ್ಷೇತ್ರದಿಂದಲೇ ಸ್ಪರ್ಧಿಸಲು ಬಿ ಫಾರ್ಮ್ ಪಡೆದುಕೊಂಡಿದ್ದಾರೆ. ಈ ಹಿಂದೆ ಬಳ್ಳಾರಿ ಕ್ಷೇತ್ರಕ್ಕೆ ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಭಕಾಶ್ ಮುನ್ನ ಎಂಬುವವರಿಗೆ ಟಿಕೆಟ್ ನೀಡಿತ್ತು. ಇದೀಗ ಅಭ್ಯರ್ಥಿಯನ್ನು ಬದಲಾಯಿಸಿ ಬಳ್ಳಾರಿ ಕ್ಷೇತ್ರಕ್ಕೆ ಅನಿಲ್ ಲಾಡ್ ಅವರಿಗೆ ಟಕೆಟ್ ನೀಡಿದೆ.
ಬೆಂಗಳೂರು: ಚುನಾವಣೆ ಪ್ರಚಾರ ನನಗೇನು ಹೊಸದಲ್ಲ. ಈ ಹಿಂದೆಯೂ ನನ್ನ ಸ್ನೇಹಿತರ ಪರವಾಗಿ ಪ್ರಚಾರ ಮಾಡಿದ್ದೇನೆ. ಶಿಗ್ಗಾಂವಿ ಕ್ಷೇತ್ರದಿಂದ ಚುನಾವಣಾ ಪ್ರಚಾರ ಶುರು ಮಾಡುತ್ತೇನೆ ಸಿಎಂ ಬೊಮ್ಮಾಯಿ ಹೇಳಿದ ಕಡೆ ನಾನು ಪ್ರಚಾರ ಮಾಡುತ್ತೇನೆ. ಪಾದಯಾತ್ರೆ, ರೋಡ್ ಶೋ ಎಲ್ಲವೂ ಇರುತ್ತೆ. ಮೇ 7ರವರೆಗೆ ಚುನಾವಣಾ ಪ್ರಚಾರ ಇರುತ್ತೆ ಅಂತ ಹೇಳಿದ್ದಾರೆ ಎಂದು ನಟ ಕಿಚ್ಚ ಸುದೀಪ್ ಹೇಳಿದರು. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನನಗೆ ಬೇರೆ ಕಡೆಯಿಂದಲೂ ಪ್ರಚಾರ ಮಾಡುವಂತೆ ಕೇಳುತ್ತಿದ್ದರು. ಪ್ರತಿ ಬಾರಿಯೂ ಕೇಳುತ್ತಾರೆ, ಅದರಂತೆ ಈ ಬಾರಿಯೂ ಕೇಳಿದ್ದಾರೆ. ಆದರೆ ಈ ಸಾರಿ ನಾನು ಇದನ್ನೇ ಆಯ್ಕೆ ಮಾಡಿದ್ದೇನೆ. ಈಗಾಗಗಲೇ ಕಾರಣನೂ ಹೇಳಿದ್ದೇನೆ ಎಂದರು. ಕ್ಯಾಂಪೇನಿಂಗ್ ನನಗೇನು ಹೊಸದಲ್ಲ. ಇವತ್ತು ಶಿಗ್ಗಾಂವಿ ಆರಂಭ ಮಾಡುತ್ತಿದ್ದೇವೆ. ಪಾದಯಾತ್ರೆ, ರೋಡ್ ಶೋ ಎಲ್ಲಾ ಇರುತ್ತೆ. 7 ನೇ ತಾರೀಖಿನವರೆಗೂ ಪ್ರಚಾರ ಇರುತ್ತೆ ಅಂತ ಹೇಳಿದ್ದಾರೆ. ಯಾರ ಪರವಾಗಿ ಪ್ರಚಾರ ಮಾಡಬೇಕು, ಹೇಗೆ ಪ್ರಚಾರ ಮಾಡಬೇಕು ಅನ್ನೋದನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕೇವಲ 20 ದಿನಗಳು ಮಾತ್ರ ಬಾಕಿ ಇವೆ. ಎಲ್ಲೆಡೆ ರಾಜಕೀಯ ಪಕ್ಷಗಳ ಪ್ರಚಾರ ಜೋರಾಗಿದೆ. ಇದರ ನಡುವೆ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದು ಪದೇ ಪದೇ ದಾಳಿ ನಡೆಸುತ್ತಿದ್ದಾರೆ(IT Raid). ಕಳೆದ ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಈಗ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕೆಜಿಎಫ್ ಬಾಬು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ 50 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ.ಇಂದು ಮುಂಜಾನೆಯಿಂದಲೇ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್ನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ಸೇರಿ ರಾಜ್ಯಾದ್ಯಂತ ಹಲವಾರು ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ದಾಳಿ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ಬೆಂಗಳೂರು: ದೇವರಾಜ್ ಅರಸು ಟ್ರಕ್ ಟರ್ಮಿನಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಶಾಂತಿನಗರ ದಲ್ಲಿರುವ ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಕೋಟಿಗಟ್ಟಲೆ ಬಿಲ್ ಮಂಜೂರು ಮಾಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ದೇವರಾಜ್ ಅರಸು ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು : ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ಹಿನ್ನೆಲೆ ಇಂದು ಶಿಗ್ಗಾಂವಿಗೆ ಆಗಮಿಸಲಿರುವ ನಟ ಕಿಚ್ಚ ಸುದೀಪ್ ಸಿಎಂ ಬೊಮ್ಮಾಯಿ ಪರ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಮತ್ತೊಮ್ಮೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 19 ರ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಚಿತ್ರನಟ ಸುದೀಪ್ ಸೇರಿದಂತೆ ಹಲವು ಸಿನಿ ತಾರೆಯರು ಭಾಗಿಯಾಗಲಿದ್ದಾರೆ. ನಾಮಪತ್ರ ಸಲ್ಲಿಕೆ ಮುಗಿದ ಬಳಿಕ ನಟ ಕಿಚ್ಚ ಸುದೀಪ್ ಅವರು ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಟ ಸುದೀಪ್ ಸೇರಿದಂತೆ 10 ಕ್ಕೂ ಹೆಚ್ಚು ಸಚಿವರು ಭಾಗವಹಿಸಲಿದ್ದಾರೆ. ಸಿಎಂ ಬೊಮ್ಮಾಯಿ ಅವರೊಂದಿಗೆ ಇಂದು ಬೆಳಗ್ಗೆ 10.30 ಕ್ಕೆ ಹುಬ್ಬಳ್ಳಿಯಿಂದ ಹೊರಟು ಶಿಗ್ಗಾಂವಿಗೆ 10.50 ಕ್ಕೆ…
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಇದೀಗ ಗ್ಯಾಸ್ ಸಿಲಿಂಡರ್ ಕೂಡಾ ಚುನಾವಣಾ ವಿಚಾರವಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿಚಾರವನ್ನೇ ಪ್ರಧಾನವಾಗಿ ಬಿಂಬಿಸಲು ಕಾಂಗ್ರೆಸ್, ಜೆಡಿಎಸ್, ಎಎಪಿ ಸೇರಿದಂತೆ ಪ್ರಮುಖ ಪ್ರತಿಪಕ್ಷಗಳು ಮುಂದಾಗಿವೆ. ಆದ್ರೆ, ವಿರೋಧ ಪಕ್ಷಗಳ ಆರೋಪಕ್ಕೆ ತಕ್ಕ ತಿರುಗೇಟು ಕೊಡಲು ಬಿಜೆಪಿ ಕೂಡಾ ತಯಾರಿ ಮಾಡಿಕೊಳ್ತಿದೆ. ಉಜ್ವಲಾ ಯೋಜನೆಯಡಿ ಸರ್ಕಾರ ನೀಡಿದ ಲಕ್ಷಾಂತರ ಉಚಿತ ಅಡುಗೆ ಅನಿಲ ಸಂಪರ್ಕಗಳನ್ನೇ ಬಿಜೆಪಿ ತನ್ನ ಸಮರ್ಥನೆಯ ಪ್ರತ್ಯಸ್ತ್ರವನ್ನಾಗಿ ಬಳಕೆ ಮಾಡಿಕೊಂಡಿದೆ. ಕಾಂಗ್ರೆಸ್ ಪಕ್ಷದಿಂದ ಸಿಲಿಂಡರ್ ಬಾಂಬ್..! ‘ಮತದಾರರೇ.. ಚುನಾವಣೆಗೆ ಕೆಲವೇ ದಿನ ಬಾಕಿ ಉಳಿದಿದೆ. ನೀವು ಮತ ಹಾಕುವ ಮುನ್ನ ನಿಮ್ಮ ಮನೆಯಲ್ಲಿ ಇರುವ ಗ್ಯಾಸ್ ಸಿಲಿಂಡರ್‌ಗಳತ್ತ ಒಮ್ಮೆ ನೋಡಿ, ನಂತರ ತೀರ್ಮಾನ ಮಾಡಿ’ ಎಂದು ಕೆಲವು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜನತೆಗೆ ಕರೆ ನೀಡಿದ್ದರು. ಅಡುಗೆ ಅನಿಲದ ಬೆಲೆ ಏರಿಕೆ ವಿಚಾರವಾಗಿ ದನಿ ಎತ್ತಿರುವ ಕಾಂಗ್ರೆಸ್, ಚುನಾವಣೆ ವೇಳೆ ಬಿಜೆಪಿ ವಿರುದ್ಧ ಇದನ್ನೇ ತಮ್ಮ…
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರಕ್ಕೆ ರಘುನಾಥ್ ನಾಯ್ಡು ಅವರಿಗೆ ನೀಡಲಾಗಿದ್ದ ಬಿ ಫಾರಂ ಅನ್ನು ದಿಢೀರನೆ ಹಿಂಪಡೆಯಲಾಗಿದೆ. ಕೆಪಿಸಿಸಿ ಕಚೇರಿಯಿಂದ ರಘುನಾಥ್ ಅವರಿಗೆ ಬಿ ಫಾರಂ ಹಿಂದಕ್ಕೆ ನೀಡುವಂತೆ ಸೂಚನೆ ಹೋಗಿದ್ದು, ತಕ್ಷಣವೇ ರಘುನಾಥ್ ಅವರು ತಮಗೆ ನೀಡಲಾಗಿದ್ದ ಬಿ ಫಾರಂ ಅನ್ನು ಕೆಪಿಸಿಸಿ ಕಚೇರಿಗೆ ತಂದುಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪದ್ಮನಾಭ ನಗರದಲ್ಲಿ ಬಿಜೆಪಿ ನಾಯಕ, ಹಾಲಿ ಕಂದಾಯ ಸಚಿವ ಆರ್. ಅಶೋಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅವರನ್ನು ಅತ್ತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರ ವಿರುದ್ಧವೂ ಕಣಕ್ಕಿಳಿಸಲಾಗಿದೆ. ಆ ಕ್ಷೇತ್ರದ ಮೇಲೆ ಹಿಡಿತವಿರುವ ಶಿವಕುಮಾರ್ ಅವರಿಂದ ಈ ಬಾರಿ ಕ್ಷೇತ್ರವನ್ನು ಕಸಿದುಕೊಳ್ಳಲು ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಅವರ ಮೇಲೆ ಮಾನಸಿಕ ಒತ್ತಡ ಹೇರಿ ಅವರನ್ನು ಅದೇ ಕ್ಷೇತ್ರದಲ್ಲಿ ಕಟ್ಟಿ ಹಾಕಲೆಂದೇ ಅಶೋಕ್ ಅವರನ್ನು ಕಣಕ್ಕಿಳಿಸಲಾಗಿದೆ. ಆದರೆ, ಇದರ ವಿರುದ್ಧ ಪ್ರತಿ ಅಸ್ತ್ರ ಹೂಡಿರುವ ಶಿವಕುಮಾರ್, ಕನಕಪುರದಲ್ಲಿ ತಮ್ಮನ್ನು ಕಟ್ಟಿ ಹಾಕಲು…
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಡ್ಡಾ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ವಾಗತಿಸಿದರು. ಜೆ.ಪಿ.ನಡ್ಡಾ ಅವರನ್ನು ಸ್ವಾಗತಿಸಿ ಕರೆದುಕೊಂಡು ಹೋಗಲು ನಳೀನಕುಮಾರ ಕಟೀಲ, ಮಹೇಶ್ ತೆಂಗಿನಕಾಯಿ, ಎಮ್.ಆರ್.ಪಾಟೀಲ್, ಅರವಿಂದ ಬೆಲ್ಲದ, ಪ್ರದೀಪ್ ಶೆಟ್ಟರ್ ಆಗಮಿಸಿದ್ದಾರೆ. ಇಂದಿನಿಂದ ಎರಡೂ ಕಾಲ ಧಾರವಾಡ, ಹಾವೇರಿ ಜಿಲ್ಲೆಯ ಪ್ರವಾಸದಲ್ಲಿರುವ ಜೆ.ಪಿ.ನಡ್ಡಾ,ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಬಿ.ವಿ.ಬಿ.ಕಾಲೇಜಿನಲ್ಲಿ ಸಂವಾದ ನಡೆಸಲಿದ್ದಾರೆ. ಪ್ರಬುದ್ಧರ ಜೊತೆಗೆ ಸಂವಾದ ನಡೆಸಿದ ಬಳಿಕ ಸಂಜೆ ಖಾಸಗಿ ಹೋಟೆಲ್‌ನಲ್ಲಿ ಸರಣಿ ಸಭೆ ಮಾಡಲಿದ್ದಾರೆ. ಇನ್ನೂ ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಜಿಲ್ಲಾ ಮಂಡಲ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಲಿರುವ ಜೆ.ಪಿ.ನಡ್ಡಾ, ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಡ್ಯಾಮೇಜ್ ಕಂಟ್ರೋಲ್‌ಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಅಲ್ಲದೇ ಬಿಜೆಪಿಯ ಪದಾಧಿಕಾರಿಗಳಿಗೆ ಬೂಸ್ಟರ್ ಡೋಸ್ ಕೊಡಲು ಜೆ.ಪಿ.ನಡ್ಡಾ ಮುಂದಾಗಿದ್ದಾರೆ.
ಮೈಸೂರು: ನನ್ನ ಬಗ್ಗೆ ವರುಣಾ (Varuna) ಜನರಿಗೆ ಅಪಾರವಾದ ಪ್ರೀತಿಯಿದೆ. ನನ್ನ ಮತ್ತು ವರುಣಾ ಸಂಬಂಧವನ್ನು ಕಿತ್ತುಹಾಕಲು ಯಾರಿಂದಲೂ ಸಾಧ್ಯವಿಲ್ಲ. ಯಾರೇ ಬರಲಿ, ಯಾರೇ ಅಭ್ಯರ್ಥಿಗಳನ್ನು ಬದಲಾಯಿಸಲಿ ಏನೇ ಆದರೂ ನನ್ನ ಗೆಲುವು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾದ ಸೋಮಣ್ಣನವರಿಗೂ (V.Somanna) ವರುಣಾ ಕ್ಷೇತ್ರಕ್ಕೂ ಸಂಬಂಧವಿಲ್ಲ. ಬಿಜೆಪಿಯವರು ಅವರನ್ನು ಬಲತ್ಕಾರವಾಗಿ ಈ ಕ್ಷೇತ್ರದಲ್ಲಿ ನಿಲ್ಲಿಸಿದ್ದಾರೆ. ಅವರು ನಮ್ಮ ಜಿಲ್ಲೆಯವರೂ ಅಲ್ಲ. ಅವರು ರಾಮನಗರ (Ramanagara) ಜಿಲ್ಲೆಯವರಾಗಿದ್ದು, ಬೆಂಗಳೂರಿನಲ್ಲಿ (Bengaluru) ರಾಜಕಾರಣ ಮಾಡಿದ್ದಾರೆ. ವರುಣಾ ಕ್ಷೇತ್ರಕ್ಕೆ ಒಬ್ಬ ದುಡ್ಡಿರುವ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎನ್ನುವ ಸಲುವಾಗಿ ಸೋಮಣ್ಣನವರನ್ನು ಇಲ್ಲಿ ನಿಲ್ಲಿಸಿದ್ದಾರೆ ಎಂದು ಟೀಕೆ ಮಾಡಿದರು. ವರುಣಾವನ್ನು ತಾಲೂಕು ಕೇಂದ್ರವನ್ನಾಗಿ ಮಾಡುತ್ತೇವೆ ಎಂಬ ಸಿಎಂ ಭರವಸೆಯ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ 4 ವರ್ಷಗಳ ಆಡಳಿತದಲ್ಲಿ ಯಾಕೆ ಮಾಡಲಿಲ್ಲ? ವರುಣಾ ತಾಲೂಕು ಕೇಂದ್ರ ಎಂಬುದು ಗೊತ್ತಾಗಲಿಲ್ಲ ಎಂದರೆ ಅವರು ರಾಜೀನಾಮೆ…