ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಸುಮಾರು ನಾಲ್ಕು ಸಾವಿರ ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಇಂದು (ಸೆಪ್ಟೆಂಬರ್ 4) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದು ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಾಗಿಯೇ ಇದ್ದಾರೆ. ಇದು ದರ್ಶನ್ ಗೆ ಕೊಂಚ ರಿಲೀಫ್ ನೀಡಿದೆ. ಈ ಮೊದಲು ಎಫ್‌ಐಆರ್ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು. ಇದನ್ನು ಚಾರ್ಜ್ಶೀಟ್ನಲ್ಲಿ ಬದಲಿಸಬಹುದು ಎಂದು ಊಹಿಸಲಾಗಿತ್ತು. ದರ್ಶನ್ ಎ1 ಹಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಎಸಿಪಿ ಚಂದನ್ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ. ಇದರಿಂದ ಪವಿತ್ರಾ ಅವರು ಎ1 ಆರೋಪಿ ಆಗಿ ಮುಂದುವರಿದಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಭಾಗಿಯಾದ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. 3…
Author: Prajatv Kannada
ಇಂದೋರ್:- ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿ, ಬೆಲ್ಟ್‌ನಿಂದ ಹೊಡೆದು ಅರ್ಧ ಗಂಟೆಗಳ ಕಾಲ ಬೆತ್ತಲೆಯಾಗಿ ನೃತ್ಯ ಮಾಡುವಂತೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಜರುಗಿದೆ. ಘಟನೆಗೆ ಸಂಬಂಧಿಸಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳು ಜೂನ್ 11ರಂದು ತನ್ನನ್ನು ಬಲವಂತವಾಗಿ ಗೋಡೌನ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಕನಾಡಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಟಿವಿಯಲ್ಲಿ ಅಶ್ಲೀಲ ವೀಡಿಯೋ ನೋಡಿದ ನಂತರ ಆರೋಪಿಗಳು ತನ್ನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. ಈ ದೂರನ್ನು ಪೊಲೀಸರು ಆರಂಭದಲ್ಲಿ ಗಂಭೀರವಾಗಿ ಪರಿಗಣಿಸಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿ ಆ ಮಹಿಳೆ ಮಧ್ಯಪ್ರದೇಶ ಹೈಕೋರ್ಟ್‌ಗೆ ತೆರಳಿದ ನಂತರ ಸೋಮವಾರ ತಡರಾತ್ರಿ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜುಲೈ 17ರಂದು ತಾನು ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಆಕೆಯ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಮಹಿಳೆಯ ದೂರನ್ನು 90 ದಿನಗಳಲ್ಲಿ ವಿಲೇವಾರಿ ಮಾಡಿ ಸೂಕ್ತ…
ಮುಂಬೈ:– ಲೀವ್ ಇನ್ ರಿಲೇಷನ್ಶಿಪ್ನಿಂದಾಗಿ ಮುಂಬೈನ 46 ವರ್ಷದ ವ್ಯಕ್ತಿಯೊಬ್ಬ ಕಾನೂನಿನ ಕುಣಿಕೆಯಿಂದ ಪಾರಾಗಿದ್ದಾನೆ. ಅವನನ್ನು ಕಾಪಾಡಿದ್ದು ಈ ಒಂದೇ ಒಂದು ಒಪ್ಪಂದದ ಪತ್ರ. ಇತ್ತೀಚೆಗೆ ಮುಂಬೈ ಕೋರ್ಟ್ನಲ್ಲಿ 29 ವರ್ಷದ ಮಹಿಳೆ 46 ವರ್ಷದ ಪುರುಷನ ವಿರುದ್ಧ ನ್ಯಾಯಾಲಯದ ಮೆಟ್ಟಲೇರಿದ್ದಳು. ಈ ವ್ಯಕ್ತಿ ನನ್ನನ್ನು ಮದುವೆಯಾಗುವುದಾಗಿ ಅನೇಕ ಬಾರಿ ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ ಎಂದು ದೂರು ನೀಡಿದ್ದಳು. ಆಗ 46 ವರ್ಷದ ವ್ಯಕ್ತಿಯನ್ನು ಕಾಪಾಡಿದ್ದು ಅವನು ಈ ಸಂಬಂಧ ಬೆಳೆಸುವ ಮೊದಲೇ ಮಾಡಿಕೊಂಡಿದ್ದ ಒಂದು ಅಗ್ರೀಮೆಂಟ್. ಈ ಜೋಡಿ ಜೊತೆಯಾಗಿರಲು ಆರಂಭಿಸಿದ್ದೆ 2023ರ ಆಗಸ್ಟ್ 1 ರಿಂದ. ಇಬ್ಬರ ನಡುವೆ ಒಂದು ವರ್ಷದವರೆಗೂ ಕೂಡಿ ಬಾಳುವ ಒಪ್ಪಂದವಾಗಿತ್ತು. ಅದಕ್ಕೆ ಇಬ್ಬರೂ ಕೂಡ ಒಪ್ಪಿಗೆ ನೀಡಿ ಸಹಿ ಮಾಡಿ ಅದನ್ನು ಬಾಂಡ್ ರೂಪಕ್ಕೆ ಇಳಿಸಿದ್ದರು. ಒಂದು ವರ್ಷವಾದ ಬಳಿಕ ಮಹಿಳೆ ಪುರುಷನ ವಿರುದ್ಧ ಕೋರ್ಟ್ ಮೆಟ್ಟಿಲೇರುತ್ತಾಳೆ. ಮದುವೆಯಾಗುವುದಾಗಿ ನಂಬಿಸಿ ಒತ್ತಾಯ ಪೂರ್ವಕವಾಗಿ ನನ್ನನ್ನು ಈತ ದೈಹಿಕವಾಗಿ ನನ್ನ ಬಳಸಿಕೊಂಡಿದ್ದಾನೆ ಎಂದು ದೂರನ್ನಿಟ್ಟಿದ್ದಾಳೆ.…
ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಹೊಳೆಗಂಗೂರು ಗ್ರಾಮದಲ್ಲಿ ಸೋಮವಾರ ಸಂಜೆ ನೀರಿನ ತೊಟ್ಟಿಗೆ ಬಿದ್ದಿದ್ದ ಹಸುವೊಂದನ್ನು ಭದ್ರಾವತಿ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಹೊಳೆಗಂಗೂರು ಗ್ರಾಮದಲ್ಲಿ ಹೊಸದಾಗಿ ಮನೆ ಕಟ್ಟುತ್ತಿದ್ದು ಅದಕ್ಕಾಗಿ ಎಂಟು ಅಡಿ ಆಳದ ಸಂಪ್ ನಿರ್ಮಾಣ ಮಾಡಲಾಗಿತ್ತು. ಅದರ ಕೆಲಸ ಪೂರ್ಣಗೊಳ್ಳದ ಹಿನ್ನೆಲೆ ಅಡಕೆ ದಬ್ಬೆ ಹಾಕಿ ಮುಚ್ಚಲಾಗಿತ್ತು. ಮಾಮೂಲಿಯಂತೆ ಕೊಟ್ಟಿಗೆಗೆ ಹೋಗಬೇಕಿದ್ದ ಹಸು ಅಕಸ್ಮಾತ್ ಸಂಪ್ ಮೂಲಕ ಹೊರಟಿದೆ. ಅಡಕೆ ದೆಬ್ಬೆ ಮೇಲೆ ಕಾಲಿಟ್ಟ ಪರಿಣಾಮ ಏಕಾಏಕಿ ಗುಂಡಿಗೆ ಬಿದ್ದಿದೆ. ತಕ್ಷಣ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರು. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ಹಸುವಿಗೆ ಬೆಲ್ಟ್ ಕಟ್ಟಿ ಜೆಸಿಬಿ ಸಹಾಯದಿಂದ ಮೇಲಕ್ಕೆ ಎತ್ತಿದ್ದಾರೆ. ಹಸುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆರೋಗ್ಯದಿಂದ ಇದೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಎಸ್‌ಎಸ್‌ಒ ಹುಲಿಯಪ್ಪ, ಸಿಬ್ಬಂದಿ ಅಶೋಕ್ ಕುಮಾರ್, ಶೇಖರ್, ಸುರೇಶ್, ರಾಜ ನಾಯಕ್ ಸೇರಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಚಿತ್ರದುರ್ಗ: ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರವೇ ಮನೆ ಯಜಮಾನಿಯರ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದುವರೆಗೆ 11 ತಿಂಗಳ ಮೊತ್ತ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 ಸಾವಿರ ಕೋಟಿ ರೂ ಮೊತ್ತವನ್ನು ಯೋಜನೆಗೆ ವ್ಯಯಿಸಲಾಗಿದೆ ಎಂದರು.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಇಷ್ಟು ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್ ತಮ್ಮ ಪ್ರಭಾವ ಬಳಸಿಕೊಂಡು ಇಲ್ಲಿ ಬೇಕಾದೆಲ್ಲ ಪಡೆದುಕೊಂಡಿದ್ದರು. ಆದ್ರೆ ದರ್ಶನ್ ಫೋಟೋ ವೈರಲ್ ಆದ ಬೆನ್ನಲ್ಲೇ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇದರಿಂದ ದರ್ಶನ್ ಕಂಗಲಾಗಿದ್ದು ಒಂಟಿ ತನದಿಂದ ಕುಗ್ಗಿ ಹೋಗಿದ್ದಾರೆ. ಇದೀಗ ಜೈಲು ಅಧಿಕಾರಿಗಳ ಮುಂದು ದರ್ಶನ್ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಅಂತಿಮ ಹಂತ ತಲುಪಿದ್ದು ಜಾರ್ಜಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ವಾಗಿದ್ದಾರೆ. ಈ ಮಧ್ಯೆ ಬಳ್ಳಾರಿ ಜೈಲಿನ ನಿಯಮಗಳು ದರ್ಶನ್ ರನ್ನು ಮತ್ತಷ್ಟು ಕುಗಿಸಿವೆ. ಅಕ್ಕ ಪಕ್ಕದ ಸೆಲ್ ನಲ್ಲಿ ಯಾರು ಇಲ್ಲದೆ ದರ್ಶನ್ ಒಂಟಿಯಾಗಿದ್ದಾರೆ. ಕೇವಲ ಜೈಲು ಸಿಬ್ಬಂದಿಯೊಂದಿಗಷ್ಟೇ ಮಾತನಾಡಿ ಹೊರ ಜಗತ್ತಿನ ಮಾಹಿತಿ ಪಡೆಯುತ್ತಿದ್ದಾರೆ. ಇಷ್ಟು ದಿನ ಪುಸ್ತಕ ಯೋಗ ಧ್ಯಾನ ಅಂತ ಕಾಲ ಕಳೆಯುತ್ತಿದ್ದ ದರ್ಶನ್ ಈಗ ಜೈಲು ಅಧಿಕಾರಿಗಳಿಗೆ ಟಿವಿ ಬೇಕು ಎಂದು ಬೇಡಿಕೆಯಿಟ್ಟಿದ್ದಾರಂತೆ. ಒಂಟಿತನ, ಹತಾಶೆ, ಕುಟುಂಬದಿಂದ, ಸ್ನೇಹಿತರಿಂದ ದೂರಾಗಿರುವ…
ಮಂಡ್ಯ :- ಬೆಂಗಳೂರಿನ ಕಸಾಯಿಖಾನೆಗೆ ಆಕ್ರಮವಾಗಿ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ತಂಡ ರಕ್ಷಣೆ ಮಾಡಿದೆ. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದ ಬಳಿ 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ನಂತರ ಪುನೀತ್ ಕೆರೆಹಳ್ಳಿ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ ಪರಿಣಾಮ ತಕ್ಷಣವೇ ವಾಹನದ ಚಾಲಕ ಮನ್ಸೂರು ಅಹಮ್ಮದ್ನನ್ನು ಪೊಲೀಸರು ವಶಕ್ಕೆ ಪಡೆದು ತೆಗೆದುಕೊಂಡಿದ್ದಾರೆ. https://youtu.be/g1UjWZ44Ftg?si=DHJj8yiyfZRnIDLy ಈಚರ್ ವಾಹನದಲ್ಲಿ ಆಕ್ರಮವಾಗಿ 30ಕ್ಕೂ ಹೆಚ್ಚು ಗೋವುಗಳ ಸಾಗಾಟ ಮಾಡಲಾಗುತ್ತಿತ್ತು. ಇದರ ಖಚಿತ ಸುಳಿವು ದೊರೆತ ಪುನೀತ್ ಹಾಗೂ ತಂಡದವರು ಮದ್ದೂರಿನ ಪ್ರವಾಸಿ ಮಂದಿರದ ಬಳಿ ವಾಹನ ತಡೆದು ಪರಿಶೀಲನೆ ನಡೆಸಿದ ವೇಳೆ ಈ ಘಟನೆ ಬೆಳಕಿಗೆ ಬಂದಿದ್ದು, ವಾಹನವನ್ನು ಮದ್ದೂರು ಪೋಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ತುಮಕೂರು: ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದು 14 ವರ್ಷದ ಮಗಳು ಗರ್ಭ ಧರಿಸಿದ ಆಘಾತಕಾರಿ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಂಟು ತಿಂಗಳ ಹಿಂದೆ ಕೂಲಿ ಕೆಲಸಕ್ಕಾಗಿ ಹೊರ ರಾಜ್ಯದಿಂದ ಬಂದಿದ್ದ ಕುಟುಂಬ ಹೊನ್ನವಳ್ಳಿಯಲ್ಲಿ ನೆಲೆಸಿದೆ. ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ತನ್ನ ಮಗಳ ಮೇಲೆಯೇ ತಂದೆ ಕ್ರೌರ್ಯ ಮೆರೆದಿರುವುದು ತಿಳಿಯುತ್ತಿದ್ದಂತೆ ಪೋಕ್ಸೋ ಪ್ರಕರಣ ಹಾಗೂ ಅತ್ಯಾಚಾರ ಆರೋಪ ಅಡಿ ಕೇಸ್ ದಾಖಲಾಗಿದೆ. ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ.
ಚಿತ್ರದುರ್ಗ: ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರವೇ ಮನೆ ಯಜಮಾನಿಯರ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದುವರೆಗೆ 11 ತಿಂಗಳ ಮೊತ್ತ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 ಸಾವಿರ ಕೋಟಿ ರೂ ಮೊತ್ತವನ್ನು ಯೋಜನೆಗೆ ವ್ಯಯಿಸಲಾಗಿದೆ ಎಂದರು.
ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಗುತ್ತಿಹಳ್ಳ ಬಳಿ ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿಯಾಗಿದ್ದು, ಶಿವಮೊಗ್ಗ ತಾಲೂಕಿನ ಸಂಪಿಗೆಹಳ್ಳ ನಿವಾಸಿಯಾದ ಮಂಜುನಾಥ್ ಡೈರಿಗೆ ಹಾಲು ಹಾಕಿ, ಮನೆಗೆ ಬರುತ್ತಿದ್ದ ವೇಳೆ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಸ್ಥಳೀಯರು ತಕ್ಷಣವೇ ಗಾಯಾಳುವನ್ನ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದರು, ಹೆಚ್ಚಿನ ಚಿಕಿತ್ಸೆಗೆ ಮಂಜುನಾಥ್ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಗಂಭೀರ ಗಾಯಗೊಂಡಿದ್ದ ಮಂಜುನಾಥ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಮಂಜುನಾಥ್ ಮೃತದೇಹ ಮೆಗ್ಗಾನ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರಿಗೂ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.