ಹುಬ್ಬಳ್ಳಿ: ಬಿಜೆಪಿ ಸರ್ಕಾರವಿದ್ದಾಗ ನಮ್ಮ ಕೈಕೆಳಗೆ ಕೆಲಸ ಮಾಡಿದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಿಂದಿನ ಸಾಲಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ನಾನು ಮತ್ತು ಸದಾನಂದಗೌಡರು ಕುಳಿತುಕೊಳ್ಳಬೇಕು ಎಂದು ಅಣ್ಣಾಮಲೈ (Annamalai) ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ( Jagadish Shettar) ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯ ಬಿಜೆಪಿ (BJP) ಕೆಲವರ ಕಪಿಮುಷ್ಠಿಯಲ್ಲಿದೆ. ಇದರಿಂದ ಈ ರೀತಿ ಪರಿಸ್ಥಿತಿಯಿದೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಿದ್ದ ಅಣ್ಣಾಮಲೈ ಕರೆದುಕೊಂಡು ಹೋಗಿ ತಮಿಳುನಾಡಿನ (Tamil Nadu) ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರು. ಆದರೆ ಚುನಾವಣೆಯಲ್ಲಿ (Election) ಸೋಲಭವಿಸಿದರು. ಒಂದು ಸಲವು ಚುನಾವಣೆಯಲ್ಲಿ ಗೆಲ್ಲದ ಈ ವ್ಯಕ್ತಿಯನ್ನು ಚುನಾವಣೆಯ ಸಹ ಉಸ್ತುವಾರಿಯಾಗಿ ನೇಮಕ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಕೋರ್ ಕಮಿಟಿ ಸಭೆಯಲ್ಲಿ ಈವರೆಗೆ ಅಣ್ಣಾಮಲೈ ಒಂದು ಕ್ಷೇತ್ರದ ಬಗ್ಗೆ ವಿಮರ್ಶೆ ಮಾಡಿಲ್ಲ. ಅಂತವರ ಅವರ ಮುಂದೆ ಹಿರಿಯ ನಾಯಕರು ಸಣ್ಣ ಮಕ್ಕಳಂತೆ ಕುಳಿತುಕೊಳ್ಳಬೇಕು. ನಮ್ಮ ಕೈಕೆಳಗೆ ಕೆಲಸ ಮಾಡಿದ ಐಪಿಎಸ್ ಅಧಿಕಾರಿ ಮುಂದೆ ಕುಳಿತಿದ್ದರೆ ಅವರ ಹಿಂದಿನ ಸಾಲಿನಲ್ಲಿ…
Author: Prajatv Kannada
ಚಿಕ್ಕಮಗಳೂರು: ಕಳೆದ ಐದು ವರ್ಷದ ಅವಧಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಅವರ ಆಸ್ತಿ 1.41 ಕೋಟಿ ರೂ. ನಷ್ಟು ಹೆಚ್ಚಳವಾಗಿದೆ. ಇನ್ನು ಒಟ್ಟಾರೆ ಆಸ್ತಿಯಲ್ಲಿ ಅರ್ಧದಷ್ಟು ಸಾಲವನ್ನು ಸಿಟಿ ರವಿ ಹೊಂದಿದ್ದಾರೆ. ಶಾಸಕ ಸಿ.ಟಿ. ರವಿ ಅವರು ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಹಾಗೂ ಕುಟುಂಬಸ್ಥರ ಹೆಸರಿನಲ್ಲಿರುವ ಆಸ್ತಿ ಮತ್ತು ಸ್ವತ್ತುಗಳ ವಿವರವನ್ನು ಘೋಷಿಸಿದ್ದಾರೆ. ಈ ಬಾರಿ ಚಿಕ್ಕಮಗಳೂರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ ಸಿಟಿ ರವಿ ಸಲ್ಲಿಸಿದ ಆಸ್ತಿ ವಿವರದ ಪ್ರಮಾಣ ಪತ್ರದಲ್ಲಿ ತಮ್ಮ ಸ್ಥಿರ, ಚರ ಆಸ್ತಿ ಹಾಗೂ ಸಾಲದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಸದ್ಯ ಅವರ 6.42 ಕೋಟಿ ಒಡೆಯರಾಗಿದ್ದಾರೆ. ಸಿಟಿ ರವಿ ಆಸ್ತಿ 1.41 ಕೋಟಿ ಹೆಚ್ಚಳ ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡೇವಿಟ್ ಪ್ರಕಾರ, 2018ರ ಚುನಾವಣೆ ವೇಳೆ ಸಿ.ಟಿ.ರವಿಯವರದ್ದು 5.01 ಕೋಟಿ ಆಸ್ತಿ ಇತ್ತು. ಅದೀಗ 6.42 ಕೋಟಿಗೆ ಹೆಚ್ಚಳವಾಗಿದೆ. ಜತೆಗೆ, ಕಳೆದ ಚುನಾವಣೆಯಲ್ಲಿ ರವಿ ಅವರ…
ಬಾಗಲಕೋಟೆ: ನನ್ನ ಟಿಕೆಟ್ ಕೈತಪ್ಪಲು ಬಿಎಲ್ ಸಂತೋಷ್ ಕಾರಣ. ನನ್ನ ಈ ಸ್ಥಿತಿಗೆ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ವಾಗ್ದಾಳಿ ನಡೆಸಿದ್ದರು. ಶೆಟ್ಟರ್‌ನ ಈ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ನಾವು ಅವರ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ ಹಾಗೂ ರೋಡ್ ಶೋದಲ್ಲಿ ಭಾಗವಹಿಸಲು ಮುಧೋಳ ನಗರಕ್ಕೆ ಆಗಮಿಸಿದ ಬೊಮ್ಮಾಯಿ ಮಾಧ್ಯಮಗಳ ಜೊತೆ ಮಾತನಾಡುತ್ತ, ಜಗದೀಶ್ ಶೆಟ್ಟರ್ ಹೇಳಿಕೆ ಸರಿಯಲ್ಲ. ನಾವು ರಾಜ್ಯಮಟ್ಟದಿಂದ ಅವರ ಹೆಸರನ್ನು ಕಳುಹಿಸಿದ್ದೆವು. ಮೇಲ್ಮಟ್ಟದಲ್ಲಿ ಒಂದು ನೀತಿಯ ಮೇಲೆ ಟಿಕೆಟ್ ಫೈನಲ್ ಮಾಡಿದ್ದಾರೆ. ಈಗಾಗಲೇ ಆ ಬಗ್ಗೆ ಸಾಕಷ್ಟು ಬಾರಿ ಹೇಳಿದ್ದೇನೆ. ಅವರ ಆರೋಪದ ಬಗ್ಗೆ ನಾವೇನು ತಲೆಕೆಡಿಸಿಕೊಳ್ಳುವುದಿಲ್ಲ. ಉತ್ತರ ಕರ್ನಾಟಕದಲ್ಲಿ ಹೆಚ್ಚು ಸೀಟ್ ಗೆಲ್ಲಲು ರೂಪುರೇಷೆಗಳನ್ನು ಮಾಡಿದೆ. ಹೆಚ್ಚು ಸೀಟ್ ಗೆದ್ದೇಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಗದೀಶ್ ಶೆಟ್ಟರ್ ಬಿಜೆಪಿ (BJP) ತೊರೆದಿದ್ದರಿಂದ ಲಿಂಗಾಯತ ಮತಗಳಿಗೆ ಪೆಟ್ಟು…
ಚಿತ್ರದುರ್ಗ: ಪಕ್ಷಾಂತರದ ಸಾಧಕ ಬಾಧಕ ಚುನಾವಣೆ ಬಳಿಕ ತಿಳಿಯಲಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಚಿತ್ರದುರ್ಗ (Chitradurga) ತಾಲೂಕಿನ ಕ್ಯಾದಿಗ್ಗೆರೆ ಬಳಿಯ ಹೆಲಿಪ್ಯಾಡ್‌ಗೆ ಆಗಮಿಸಿದ್ದ ಹೆಚ್‌ಡಿಕೆ ಮಾಜಿ ಎಂಎಲ್‌ಸಿ ರಘು ಆಚಾರ್ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ವೇಳೆ ಪಕ್ಷಾಂತರ ಸಹಜವಾಗಿ ನಡೆಯುತ್ತದೆ. ಆದರೆ ಅದರ ಸಾಧಕ ಬಾಧಕ ಚುನಾವಣೆ ಬಳಿಕ ಅವರಿಗೆ ಅರ್ಥವಾಗಲಿದೆ ಎಂದು ಹೇಳಿದರು. ಕೋಟೆ ನಾಡಿನ ಮಾಜಿ ಎಂಎಲ್‌ಸಿ ರಘು ಆಚಾರ್ ಜೆಡಿಎಸ್ (JDS) ಸೇರ್ಪಡೆಯಿಂದ ಈ ಭಾಗದಲ್ಲಿ ಬಲ ಬಂದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 3-4 ಸ್ಥಾನಗಳಲ್ಲಿ ಜೆಡಿಎಸ್ ಗೆಲ್ಲುವ ಭರವಸೆ ಇದೆ. ಏಪ್ರಿಲ್ 19ಕ್ಕೆ ರಘು ಆಚಾರ್ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ನಾನು ಅವರೊಂದಿಗೆ ಬರುತ್ತೇನೆ ಎಂದು ತಿಳಿಸಿದರು. ಹೊಳಲ್ಕೆರೆಯಲ್ಲಿ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಇಂದ್ರಜಿತ್ ನಾಯ್ಕ್…
ಹುಬ್ಬಳ್ಳಿ: ಆಮ್ ಆದ್ಮಿ ಪಕ್ಷದಿಂದ ಅಧಿಕೃತ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ. ಅಂದು ನಡೆಯುವ ರಾರಯಲಿಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪಾಲ್ಗೊಳ್ಳುವರು ಎಂದು ಆಮ್ ಆದ್ಮಿ ಪಕ್ಷದ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರದ ಅಭ್ಯರ್ಥಿ ವಿಕಾಸ ಸೊಪ್ಪಿನ ಪರ ಮತಯಾಚನೆ ಮಾಡುವರು. ಗೋಕುಲ್ ರಸ್ತೆಯ ಅಕ್ಷಯ ಪಾರ್ಕ್ನಿಂದ ಸಿದ್ಧಾರೂಡ ಮಠ ಇಂಡಿ ಪಂಪ್, ಪತೇಶಾವಲಿ ದರ್ಗಾ ಮೂಲಕ ಹಳೇ ಹುಬ್ಬಳ್ಳಿ ವೃತ್ತಕ್ಕೆ ಆಗಮಿಸಲಿದೆ. ನಂತರ ಅಲ್ಲಿ ನಡೆಯುವ ಸಭೆಯಲ್ಲಿ ಭಗವಂತ ಮಾನ್ ಮಾತನಾಡುವರು. ಈ ರಾರಯಲಿಯಲ್ಲಿ 3 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳುವ ಸಾಧ್ಯತೆ.
ಕೋಲಾರ: ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ದಿನವಾದ ಸೋಮವಾರ ಒಟ್ಟು 21 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 36 ನಾಮಪತ್ರಗಳು ಸಲ್ಲಿಕೆಯಾಗಿವೆ. ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಂಜುನಾಥ್ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಶೀಗೇಹಳ್ಳಿ ಸುಂದರ್‌ರವರು ನಾಮಪತ್ರ ಸಲ್ಲಿಸಿದ್ದಾರೆ. ಶ್ರೀನಿವಾಸಪುರ ವಿಧಾನಸಭಾ ಮತಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಡಾ.ವೈ.ವಿ ವೆಂಕಟಾಚಲ ಅವರು ನಾಮಪತ್ರ ಸಲ್ಲಿಸಿದ್ದಾರೆ. ಕೋಲಾರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ವರ್ತೂರು ಪ್ರಕಾಶ್ ಹಾಗೂ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅವರು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ. ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್‌ಎನ್ ನಾರಾಯಣಸ್ವಾಮಿ, ಜೆಡಿಎಸ್ ಅಭ್ಯರ್ಥಿಯಾಗಿ ಎಂ. ಮಲ್ಲೇಶಬಾಬು ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಎಂ.ನಾರಾಯಣಸ್ವಾಮಿ ರವರು ನಾಮಪತ್ರ ಸಲ್ಲಿಸಿದ್ದಾರೆ. Video Player 00:00 00:42 ಇನ್ನು ಮಾಲೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಜಿಈ ರಾಮೇಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆವೈ ನಂಜೇಗೌಡ, ಬಿಜೆಪಿ ಅಭ್ಯರ್ಥಿಯಾಗಿ ಕೆ ಎಸ್…
ಬೆಂಗಳೂರು: ವಿಧಾನಸಭಾ ಚುನಾವಣೆಯ (Karnataka Election) ಸಮಯದಲ್ಲಿ ಧಾರವಾಡಕ್ಕೆ ತೆರಳಲು ಅನುಮತಿ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು ಕಾಂಗ್ರೆಸ್‌ಗೆ (Congress) ಹಿನ್ನಡೆಯಾಗಿದೆ. ಧಾರವಾಡ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣ (Yogesh Gowda Murder Case) ಸಂಬಂಧ ಧಾರವಾಡ ಪ್ರವೇಶಕ್ಕೆ (Dharwad Entry) ಅನುಮತಿ ಕೋರಿ ವಿನಯ್ ಕುಲಕರ್ಣಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಲ್ಲಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 15 ರಂದು ವಿನಯ್ ಕುಲಕರ್ಣಿ ಅವರ ಅರ್ಜಿಯ ವಿಚಾರಣೆಯನ್ನು ಪೂರ್ಣ ಮಾಡಿದ್ದ ಕೋರ್ಟ್ ಏಪ್ರಿಲ್ 18ಕ್ಕೆ ತೀರ್ಪು ಕಾಯ್ದಿರಿಸಿತ್ತು. ಸಿಬಿಐ ವಾದ ಏನಿತ್ತು? ಯೋಗೇಶ್ ಗೌಡ ಪ್ರಕರಣದ 120 ಸಾಕ್ಷಿಗಳ ಪೈಕಿ 90 ಮಂದಿ ಧಾರವಾಡದವರೇ ಆಗಿದ್ದಾರೆ. ವಿನಯ್ ಕುಲಕರ್ಣಿಗೆ ಕ್ಷೇತ್ರಕ್ಕೆ ಪ್ರವೇಶ ನೀಡಿದರೆ ಆದೇಶ ದುರುಪಯೋಗವಾಗಬಹುದು. ಮುಂದೆ ವಿಚಾರಣೆಗೆ ಸಮಸ್ಯೆಯಾಗಬಹುದು. ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಯಿದೆ. ಯಾವುದೇ ಕಾರಣಕ್ಕೂ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಸಿಬಿಐ ಪರ ವಕೀಲರು ಬಲವಾದ ವಾದ ಮಂಡಿಸಿದ್ದರು.…
ಬೆಂಗಳೂರು: ಬಿಜೆಪಿ ಹಾಳಾಗಲು ಬಿ.ಎಲ್.ಸಂತೋಷ್ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಈ ಮೊದಲು ಬಿಜೆಪಿಯಲ್ಲಿ ತಮಗೆ ನೀಡಿದ್ದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. 10 ತಿಂಗಳು ಮುಖ್ಯಮಂತ್ರಿಯಾಗಿದ್ದೆ. ರೈತರ 25 ಸಾವಿರ ರೂ.ಸಾಲ ಮನ್ನಾ ಮಾಡಿದ್ದೆ, 25 ಸಾವಿರ ಮಂದಿ ದಿನಗೂಲಿ ನೌಕರರನ್ನು ಖಾಯಂ ಮಾಡಿದ್ದೇನೆ. ಅವಕಾಶ ಸಿಕ್ಕಾಗ ಈ ರೀತಿ ಹಲವಾರು ಜನಪರ ಕೆಲಸ ಮಾಡಿದ್ದೇನೆ. ನನ್ನ ಪ್ರಾಮಾಣಿಕತೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಶ್ಲಾಘಿಸಿದ್ದಾರೆ ಎಂದು ಹೇಳಿದರು. ಬಿಜೆಪಿ ಸಂಘಟನಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನನಗೆ ಟಿಕೆಟ್ ಕೈ ತಪ್ಪಲು ಕಾರಣ. ಈಗ ನನ್ನನ್ನು ಅವಕಾಶವಾದಿ ಎಂದು ಟೀಕೆ ಮಾಡಲಾಗುತ್ತಿದೆ. ಅಧಿಕಾರದ ಲಾಲಸೆ ಇದ್ದಿದ್ದರೆ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಮಾರನೆಯ ದಿನವೇ ಸಚಿವನಾಗುವುದಿಲ್ಲ ಎಂದು ಘೋಷಣೆ ಮಾಡುತ್ತಿದ್ದೇನೆ? ಅಧಿಕಾರದ ಆಸೆ ಇದ್ದರೆ ನಾನು ಸಚಿವನಾಗಬಹುದಿತ್ತು, ಪ್ರಭಾವಿ ಖಾತೆ ನಿಭಾಯಿಸಬಹುದಿತ್ತು ಎಂದರು. ನನಗೆ ಟಿಕೆಟ್…
ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಹೀಗಾಗಲೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಅದರ ಭಾಗವಾಗಿ ಬಸವನಗುಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕೆವಿ ಅರಮನೆ ಶಂಕರ್ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಗಿರಿನಗರದ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರೊಂದಿಗೆ ಕಾಲ್ನಡಿಗೆಯ ಜಾಥಾದೊಂದಿಗೆ ಚೆನ್ನಮ್ಮನಕೆರೆ ಅಚ್ಚುಕಟ್ಟಿನಲ್ಲಿರುವ ಬಿಬಿಎಂಪಿ ಆಫೀಸ್ ನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಟಿ. ಎ. ಶರವಣ ಅವರು ಭಾಗಿಯಾಗಿದ್ದರು. ಇನ್ನೂ ಕರ್ನಾಟಕ 2023 ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ.
ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಯುಕ್ತ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಅವರು ನಾಮಪತ್ರಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಗಣೇಶನಿಗೆ ಪೂಜೆ ಸಲ್ಲಿಸಿ ಕೋರಮಂಗಲದ ಬಿಜೆಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಈ ಭಾರಿಯೂ ನಾವೇ ಅಧಿಕಾರಕ್ಕೆ ಬರ್ತೇವೆ. ನಾನು ೯ ನೇ ಬಾರಿ ಸ್ಪರ್ಧೆ ಮಾಡಿದವನು. ಹೀಗಾಗಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದರು. ಇನ್ನೂ 145 ರಿಂದ 150 ಸೀಟು ಗಳನ್ನು ಈ ಭಾರಿ ಗೆಲ್ತೇವೆ ಎಂದು ಬಿಜೆಪಿಯವರು ಸುಮ್ಮನೆ ಹೇಳಿಕೊಂಡು ತಿರುಗ್ತಾರೆ. ಆದರೆ ರಾಜ್ಯದ ಜನರ ಒಲವು ನಮ್ಮ ಕಡೆಗಿದೆ. ಬೆಲೆ ಏರಿಕೆಯಿಂದ ಜನ ರೋಸಿಹೋಗಿದ್ದಾರೆ. ಹಾಗಾಗಿ ನಾವೇ ಅಧಿಕಾರಕ್ಕೆ ಬರ್ತೇವೆ. ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದಲ್ಲಿ ದೊಡ್ಡವರು ಇದ್ದಾರೆ. ನಮಗೆ ಸರ್ಕಾರ ಬರಬೇಕು ಅಷ್ಟೇ. ನನಗೆ ಯಾವುದೇ ಸಿಎಂ ಆಸೆ ಇಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇನ್ನೂ ಇದೇ ವೇಳೆ ಪಕ್ಷದಲ್ಲಿ…