Author: Prajatv Kannada

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಮನೆಯಲ್ಲಿ ನೂತನ ಶಾಸಕ ಬಿ.ವೈ.ವಿಜಯೇಂದ್ರ (Vijayendra) ಭೇಟಿ ನೀಡಿ ಸಾಂತ್ವನ ಹೇಳಿದರು. ಶಿವಮೊಗ್ಗದ ಕುಂಸಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕಳೆದ ಗುರುವಾರ ಎರಡು‌ ಖಾಸಗಿ ಬಸ್‌ಗಳ‌ ನಡುವಿನ ಭೀಕರ ಅಪಘಾತವಾಗಿತ್ತು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದರು. ಶಿಕಾರಿಪುರದ ಮೃತರ ಮನೆಗಳಿಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಈಸೂರು ಗ್ರಾಮದ ಮೃತ ಅರುಣ, ಚಿಕ್ಕಜೋಗಿಹಳ್ಳಿಯ ಮಹೇಶ್ವರಪ್ಪ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಶಿಕಾರಿಪುರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ವಿಜಯೇಂದ್ರ ವಿಜಯ ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ತನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಮೃತಪಟ್ಟವರ ಮನೆಗೆ ತೆರಳಿ ಮೃತರ ಕುಟುಂಬದವರಿಗೆ ಸಮಾಧಾನ ಹೇಳಿದ್ದಾರೆ.

Read More

ಮೈಸೂರು: ಚುನಾವಣೆಯಲ್ಲಿ ಕಾಂಗ್ರೆಸ್ (Congress) ಸ್ಪಷ್ಟ ಬಹುಮತ ಸಾಧಿಸಿದ ಬೆನ್ನಲ್ಲೇ ಮೈಸೂರಿನ ರಂಗಾಯಣ (Mysuru Rangayana) ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ (Addanda C Cariappa) ರಾಜೀನಾಮೆ (Resignation) ನೀಡಿದ್ದಾರೆ. ಅಡ್ಡಂಡ ಕಾರ್ಯಪ್ಪ ಮೈಸೂರು ರಂಗಾಯಣದ ನಿರ್ದೇಶಕರಾದ ಮೇಲೆ ಹಲವು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ‘ಟಿಪ್ಪು ನಿಜಕನಸುಗಳು’ ನಾಟಕ ರಚಿಸಿ ವಿವಾದವನ್ನು ಸೃಷ್ಟಿಸಿ ಬಳಿಕ ‘ಸಿದ್ದರಾಮಯ್ಯ ನಿಜ ಕನಸುಗಳು’ ಪುಸ್ತಕ ಬಿಡುಗಡೆ ಮಾಡಿ ತೀವ್ರ ಟೀಕೆಗೆ ಗುರಿಯಾಗಿದ್ದರು.ಚುನಾವಣೆಗೆ ಮುನ್ನ ಉರಿಗೌಡ ಹಾಗೂ ನಂಜೇಗೌಡ ಪಾತ್ರಗಳನ್ನು ಮುನ್ನಲೆಗೆ ತಂದು ಒಕ್ಕಲಿಗ ಹಾಗೂ ಮುಸ್ಲಿಮರನ್ನು ಎತ್ತಿಕಟ್ಟುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿತ್ತು. ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ ಸರ್ಕಾರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದೆ. ಇದು ಜನಾದೇಶ, ಇದನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ನನ್ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಡ್ಡಂಡ ಕಾರ್ಯಪ್ಪ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Read More

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಯವರನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ ನಡೆಸಲಾಯಿತು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಪರಮಾಪ್ತ ಭೋಜೇಗೌಡ, ಜೆಡಿಎಸ್ ಅಭ್ಯರ್ಥಿ ಇದ್ದರೂ ಸಿ.ಟಿ ರವಿ ವಿರುದ್ಧ ಭೋಜೇಗೌಡ (Bhoje Gowda) ಅಖಾಡಕ್ಕಿಳಿದಿದ್ದರು. ಈ ಮೂಲಕ ಸಿ.ಟಿ.ರವಿ ಸೋಲಿನ ಮಾಸ್ಟರ್ ಮೈಂಡ್ ಆಗಿದ್ದಾರೆ. ಹೀಗಾಗಿ ಜೆ.ಡಿ.ಎಸ್ ಕಾರ್ಯಕರ್ತರು ಭೋಜೇಗೌಡರಿಗೆ ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯಲ್ಲಿ ಸನ್ಮಾನ ಹಾಗೂ ಅಭಿಷೇಕ ಮಾಡಿದ್ದಾರೆ. ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದ ಭೋಜೇಗೌಡ, ಜೆಡಿಎಸ್ ನಿಂದ ಗೆದ್ದು ಕಾಂಗ್ರೆಸ್ಸಿನ ತಮ್ಮಯ್ಯ ಪರ ಮತಯಾಚಿಸಿದ್ದರು. ಬಳಿಕ ಸಿ.ಟಿ.ರವಿ ಬುದ್ಧಿವಂತರಿದ್ದಾರೆ ಎಂದು ಹಾಡಿ ಹೊಗಳಿದ ಭೋಜೇಗೌಡ, ಸಿ.ಟಿ.ರವಿ ಬಹಳ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಆಗಿದ್ದರು. ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ಯೋಗವೂ ಲಭಿಸಿತ್ತು. ಟೀಕೆಗಳು ತಪ್ಪಲ್ಲ, ಆದರೆ ಅದಕ್ಕೊಂದು ಇತಿಮಿತಿ ಇರುತಿತ್ತು. ರಾಜಕೀಯ ಅಸ್ತ್ರದ ಟೀಕೆ ಸರಿ, ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ ರವಿ ಸದನದ ಒಳಗೆ-ಹೊರಗೆ…

Read More

ಬೀದರ್: ವಿಧಾನಸಭೆಯ ಫಲಿತಾಂಶದ (Election Result) ಬೆನ್ನಲ್ಲೇ ಗಡಿ ಜಿಲ್ಲೆ ಬೀದರ್‌ನ (Bidar) ಬಿಜೆಪಿಯಲ್ಲಿ (BJP) ಭಿನ್ನಮತ ಸ್ಫೋಟವಾಗಿದೆ. ನನ್ನ ಜೊತೆಗೇ ಇದ್ದುಕೊಂಡು ಬೆನ್ನಿಗೆ ಚೂರಿ ಹಾಕಿದರು ಎಂದು ಸ್ವ ಪಕ್ಷದವರ ವಿರುದ್ಧವೇ ಪರಾಜಿತ ಬಿಜೆಪಿ ಅಭ್ಯರ್ಥಿ ಈಶ್ವರ್ ಸಿಂಗ್ ಠಾಕೂರ್ (Ishwar Singh Thakur) ಆಕ್ರೋಶ ಹೊರ ಹಾಕಿದ್ದಾರೆ. ಬೀದರ್‌ನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಈಶ್ವರ್ ಸಿಂಗ್ ಠಾಕೂರ್, ನನ್ನ ಜೊತೆಗೆ ಇದ್ದು 15 ರಿಂದ 20 ಜನ ಬೆನ್ನಿಗೆ ಚೂರಿ ಹಾಕಿದ್ದಾರೆ. ಬಿಜೆಪಿ ಮುಖಂಡ ಡಿಕೆ ಸಿದ್ರಾಮ್ ಸೇರಿದಂತೆ ಹಲವರು ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸಚಿವ ಭಗವಂತ್ ಖೂಬಾ ಒಂದು ಬಾರಿ ಮುಖ ತೋರಿಸಿ ಹೋದರು. ಆದರೆ ನನ್ನ ಪರವಾಗಿ ಖೂಬಾ ಕೆಲಸ ಮಾಡಿಲ್ಲ. ಬಿಜೆಪಿಯಲ್ಲಿ ಇದ್ದು ಈ ಬಾರಿ ಕೆಲವರು ಕೀಳು ಮಟ್ಟದ ರಾಜಕಾರಣ ಮಾಡಿದ್ದಾರೆ. ಆ ತಪ್ಪು ಮಾಡಿದವರಿಗೆ ಆ ಭಗವಂತನೇ ನೋಡಿಕೊಳ್ಳುತ್ತಾನೆ ಎಂದರು. ಪಾರ್ಟಿಯಲ್ಲಿ ಇದ್ದುಕೊಂಡೇ ಡಿಕೆ…

Read More

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ (Nalin Kumar Kateel) ಹಾಗೂ ಡಿವಿ ಸದಾನಂದ ಗೌಡರ (DV Sadananda Gowda) ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಹಿಂದೂ (Hindu) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ನಳಿನ್‌ ಕುಮಾರ್‌ ಮತ್ತು ಡಿವಿಎಸ್‌ ಫೋಟೋ ಇರುವ ಬ್ಯಾನರ್‌ ಅನ್ನು ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಪುತ್ತೂರಿನ (Putturu) ಬಸ್ ನಿಲ್ದಾಣದ ಬಳಿ ಹಾಕಲಾಗಿದೆ. ಪುತ್ತೂರಿನಲ್ಲಿ ಅರುಣ್ ಪುತ್ತಿಲ ಅವರಿಗೆ ನೀಡದೇ ಅಶಾ ತಿಮ್ಮಪ್ಪ ಗೌಡರಿಗೆ ಟಿಕೆಟ್‌ ನೀಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಟಿಕೆಟ್‌ ನೀಡದ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಬಂಡಾಯವಾಗಿ ಸ್ಪರ್ಧಿಸಿದ ಪರಿಣಾಮ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ 4,295 ಮತಗಳ ಅಂತರದಿಂದ ಜಯಗಳಿಸಿದ್ದರು. ಅಶೋಕ್‌ ಕುಮಾರ್‌ ರೈ 65,923 ಮತಗಳನ್ನು ಪಡೆದರೆ ಅರುಣ್‌ ಕುಮಾರ್‌ ಪುತ್ತಿಲ 61,628 ಮತಗಳನ್ನು ಗಳಿಸಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಆಶಾ ತಿಮ್ಮಪ್ಪ 36,733 ಮತಗಳನ್ನು ಪಡೆದು…

Read More

ಮೈಸೂರು: ಮೈಸೂರಲ್ಲಿ ಪ್ರಧಾನಿ ಮೋದಿಯವರು ರೋಡ್‌ ಶೋ ಮಾಡಿದ್ದ ರಸ್ತೆಯು ಅಪವಿತ್ರವಾಗಿದೆ ಎಂದು ಕಾಂಗ್ರೆಸ್‌ ಕಾರ್ಯರ್ತರು, ಸಗಣಿ, ಗಂಜಲ ಹಾಕಿ ತೊಳೆದು ಸ್ವಚ್ಛ ಮಾಡಿದ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಮೈಸೂರಿನ ಕಾಂಗ್ರೆಸ್‌ ಕಾರ್ಯಕರ್ತರು ಮೋದಿಯವರು ರೋಡ್‌ ಶೋ ಮಾಡಿ ದಸರಾ ಮೆರವಣಿಗೆ ರಾಜ ಮಾರ್ಗಕ್ಕೆ ಕಳಂಕ ತಂದಿದ್ದಾರೆಂದು ಕಿಡಿಕಾರಿದರು. ಬಳಿಕ ಅವರೇ ರಸ್ತೆ ಶುದ್ಧಿ ಮಾಡಿದ್ದಾರೆ. ಗಂಜಲ, ಸಗಣಿ ನೀರಿನಿಂದ ರಾಜ ಮಾರ್ಗವನ್ನ ಶುಚಿಗೊಳಿಸಿದ್ದಾರೆ. ಮೈಸೂರಿನ ಕೆ.ಆರ್ ವೃತ್ತ, ಸಯ್ಯಾಜೀರಾವ್ ರಸ್ತೆಯನ್ನ ಕೈ ಕಾರ್ಯಕರ್ತರು ಶುದ್ಧಿ ಮಾಡಿದ್ದಾರೆ. ಚಾಮುಂಡೇಶ್ವರಿ ಶಾಪದಿಂದ ಕರ್ನಾಟಕದಲ್ಲಿ ಬಿಜೆಪಿ ನೆಲಕಚ್ಚಿದೆ. ನಾಡದೇವಿ ಚಾಮುಂಡೇಶ್ವರಿ ಮೆರವಣಿಗೆ ಸಾಗುವ ದಾರಿಯಲ್ಲಿ ಮೋದಿ ಬಂದಿದ್ದು ಅಪವಿತ್ರ, ರಾಜ ಮಹಾರಾಜರು ಸಾಗಿದ್ದ ಮಾರ್ಗ, ಈಗ ತಾಯಿ ಚಾಮುಂಡೇಶ್ವರಿ ಸಾಗುವ ಮಾರ್ಗ, ಅಂತಹ ಮಾರ್ಗದಲ್ಲಿ ಮೋದಿ ಸಾಗಿದ್ದು ಅಪಶಕುನ. ಇದರಿಂದಾಗಿಯೇ ಬಿಜೆಪಿ ಸೋತಿದೆ. ನಮ್ಮ ಮೈಸೂರು ಪವಿತ್ರವಾಗಿರಬೇಕು ಎಂದು ಕೈ ಕಾರ್ಯಕರ್ತರು ಘೋಷಣೆ ಕೂಗುತ್ತಾ ರಸ್ತೆ ಶುಚಿಗೊಳಿಸಿದ್ದಾರೆ. ಹಳೇ ಮೈಸೂರು ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿರುವ…

Read More

ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ 20 ವರ್ಷದ ವಿವಾಹಿತ ಮಹಿಳೆಗೆ ಉದ್ಯಮಿಯೊಬ್ಬರು ಲೈಂಗಿಕ (sexually) ಕಿರುಕುಳ ನೀಡಿದ್ದಾರೆ ಎಂದು  ಆರೋಪ ಕೇಳಿಬಂದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಘಟನೆ ನಡೆದಿದೆ. ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ ಹೆಗ್ಡೆ ವಿರುದ್ಧ ಮೈಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮತ್ತು ಆಕೆಯ ಗಂಡನಿಂದ ದೂರು ನೀಡಲಾಗಿದೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾರೆ. ಉದ್ಯಮಿ ತನ್ನ ಕಾರಿನಲ್ಲಿ ಕಿರುಕುಳ ನೀಡುವಾಗ ಯುವತಿ ಕಿರುಚಾಡಿ ಕಾರಿನಿಂದ ಹೊರಬಂದಿದ್ದಾರೆ. ಬೈಕ್​ನಲ್ಲಿ ಬಂದ ಯುವಕರಿಂದ ಮಹಿಳೆಯ ರಕ್ಷಣೆ ಮಾಡಲಾಗಿದೆ. ತನ್ನ ಸೂಪರ್ ಮಾರ್ಕೇಟ್​ನ ಬಿಲ್ಲಿಂಗ್ ತೋರಿಸೋದಾಗಿ ಕಾರಿನಲ್ಲಿ ಕರೆದೊಯ್ದು ಕಿಡ್ನಾಪ್ ಆರೋಪ ಸಹ ಮಹಿಳೆ ಮಾಡಿದ್ದಾರೆ.

Read More

ಬೆಂಗಳೂರು ಗ್ರಾಮಾಂತರ: ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ, ಮಗನೇ ದೊಡ್ಡಪ್ಪನನ್ನ ಕೊಲೆಮಾಡಿರುವ ಘಟನೆ ಜಿಲ್ಲೆಯ ಹೊಸಕೋಟೆ (Hoskote) ತಾಲೂಕಿನ ಡಿ.ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ (56) ಮೃತ ರ್ದುದೈವಿ. ಹೌದು ಮೇ.10 ರಂದು ನಡೆದಿದ್ದ ವಿಧಾನಸಭೆ ಚುನಾವಣೆ ಫಲಿತಾಂಶ ಮೇ.13 ಹೊರಬಿದ್ದಿದೆ. ಅದರಂತೆ ಕಳೆದ ರಾತ್ರಿ ಚುನಾವಣೆಯಲ್ಲಿ ಓಟ್ ಹಾಕಿಲ್ಲ ಎನ್ನುವ ವಿಚಾರಕ್ಕೆ ಮೃತ ಕೃಷ್ಣಪ್ಪ ಹಾಗೂ ಸಹೋದರ ಗಣೇಶಪ್ಪ ನಡುವೆ ಗಲಾಟೆಯಾಗಿದೆ. ಇದನ್ನ ಗಮನಿಸಿದ ಗಣೆಶಪ್ಪನ ಮಗ ಆದಿತ್ಯಾ ಎಂಬವವನು ದೊಡ್ಡಪ್ಪನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ಘಟನೆ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

ಬೆಂಗಳೂರು: ಸಿದ್ದರಾಮಯ್ಯ, ಡಿಕೆಶಿ ನನ್ನ ಎರಡು ಕಣ್ಣುಗಳಿದ್ದಂತೆ ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ. ನನಗೆ ಇಬ್ಬರೂ ಕೂಡಬೇಕು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ’ ಎಂದು ತಿಳಿಸಿದರು. ಶಾಸಕರು ಚೀಟಿಯಲ್ಲಿ ಸಿಎಂ ಯಾರಾಗಬೇಕೆಂದು ಗುಪ್ತ ಮತದಾನ ಮಾಡಿದ್ದಾರೆ. ಎಲ್ಲ ಶಾಸಕರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ’ ಎಂದರು ಹೇಳಿದರು. ಇನ್ನೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ನಿಯೋಜಿಸಿದ ಮೂವರು ವೀಕ್ಷಕರು ರವಿವಾರ ತಡರಾತ್ರಿಯವರೆಗೂ ಪಕ್ಷದ ಶಾಸಕರಿಂದ ಲಿಖಿತ ಅಭಿಪ್ರಾಯ ಸಂಗ್ರಹಿಸಿದ್ದಾರೆ.

Read More

ಬೆಂಗಳೂರು: ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ರಾಜ್ಯಕ್ಕೆ ಕೀರ್ತಿ ತರುವೆ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ (Praveen Sood)ಹೇಳಿದರು. ಈ ಸಂಬಂಧ ಬೆಂಗಳೂರಿನ ಕಚೇರಿಯಲ್ಲಿ ಮಾತನಾಡಿದ ಅವರು, ಸಿಬಿಐ ನಿರ್ದೇಶಕನಾಗುವ ನಿರೀಕ್ಷೆ ಇರಲಿಲ್ಲ. ನನ್ನ ಆಯ್ಕೆ ಅಚ್ಚರಿ ನನಗೆ ಅಚ್ಚರಿಯಾಗಿದೆ ಎಂದರು. ‘ಮೇ.25 ರಂದು ದೆಹಲಿಗೆ ತೆರಳಿ ಸಿಬಿಐ ನಿರ್ದೇಶಕನಾಗಿ ಅಧಿಕಾರ ಸ್ವೀಕರಿಸಲಿದ್ದೇನೆ. ನನ್ನ ಸೇವೆ ಗುರುತಿಸಿ ಕೇಂದ್ರ ಸರ್ಕಾರ ಮಹತ್ವದ ಹೊಣೆಗಾರಿಕೆ ನೀಡಿದೆ. ಆ ನಂಬಿಕೆಗೆ ಚ್ಯುತಿ ಬಾರದಂತೆ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ನಾನು ಪೊಲೀಸ್‌ ಅಧಿಕಾರಿಯಾಗಿ ಸುದೀರ್ಘವಾಗಿ ಸೇವೆ ಸಲ್ಲಿಸಿರುವ ಕರ್ನಾಟಕ ರಾಜ್ಯಕ್ಕೂ ಕೀರ್ತಿ ತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿಬಿಐ ಹಾಗೂ ಪೊಲೀಸ್‌ ಕಾರ್ಯನಿರ್ವಹಣೆ ವಿಭಿನ್ನವಾಗಿದೆ. ಸದ್ಯ ಸಿಬಿಐ ನಿರ್ದೇಶಕ ಕೆಲಸದ ಬಗ್ಗೆ ಯಾವುದೇ ಪೂರ್ವಯೋಜನೆಗಳನ್ನು ನಾನು ಹಾಕಿಕೊಂಡಿಲ್ಲ. ನನಗೆ ನೀಡಿರುವ ಜವಾಬ್ದಾರಿಯನ್ನು ಶ್ರದ್ಧೆಯಿಂದ ಕೆಲಸ ಮಾಡಿ ಘಟನೆ ತರುತ್ತೇನೆ ಎಂದು ಹೇಳಿದರು.

Read More