Author: Prajatv Kannada

ವೃಷಭ ಸಂಕ್ರಾಂತಿ,ಅಪರಾ ಏಕಾದಶಿ ಸೂರ್ಯೋದಯ: 05.54 AM, ಸೂರ್ಯಾಸ್ತ : 06.38 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ವೈಶಾಖ ಮಾಸ, ಕೃಷ್ಣ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ದಶಮಿ 02:46 AM ತನಕ ನಂತರ ಏಕಾದಶಿ ನಕ್ಷತ್ರ: ಇವತ್ತು ಪೂರ್ವಾ ಭಾದ್ರ 09:08 AM ತನಕ ನಂತರ ಉತ್ತರಾ ಭಾದ್ರ ಯೋಗ: ಇವತ್ತು ವೈಧೃತಿ 03:57 AM ತನಕ ನಂತರ ವಿಷ್ಕುಂಭ ಕರಣ: ಇವತ್ತು ವಿಷ್ಟಿ 02:46 AM ತನಕ ನಂತರ ಬವ 01:52 PM ತನಕ ನಂತರ ಬಾಲವ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 01.31 AM to 03.02 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:46 ನಿಂದ ಮ.12:38 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ…

Read More

ಸಿದ್ದರಾಮಯ್ಯ ಜೊತೆಗೆ ಜಮೀರ್ ಅಹ್ಮದ್ ಖಾನ್ ಕೂಡ ದೆಹಲಿಗೆ ತೆರಳಲಿದ್ದಾರೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಹೈಕಮಾಂಡ್ ಹೆಚ್ಚಿನ ಮೊರೆ ಹೋಗುವ ಸಾಧ್ಯತೆ ಇದೆ. ನಿನ್ನೆ ಲಿಖಿತ ರೂಪದಲ್ಲಿ ಬಹುತೇಕರಿಂದ ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದು ನಮೂದು ಮಾಡಲಾಗಿತ್ತು. ಶೇ.40 ಕ್ಕಿಂತ ಹೆಚ್ಚು ಮಂದಿ ಶಾಸಕರಿಂದ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ನಮೂದು ಮಾಡಲಾಗಿದೆ. ಹೀಗಾಗಿ ಸಿಎಂ ಸ್ಥಾನಕ್ಕಾಗಿ ವಿಶೇಷ ವಿಮಾನದ ಮೂಲಕ ಎಚ್ಎಎಲ್ ನಿಂದ ಸಿದ್ದರಾಮಯ್ಯ ದೆಹಲಿಗೆ ಹಾರಲಿದ್ದಾರೆ.

Read More

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಅಷ್ಟೇ ಅಲ್ಲದೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ತುಮಕೂರು, ರಾಮನಗರ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.ಡ್ಬೋದು ಈಗಾಗಲೇ ಮೋಕಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಕರಾವಳಿ ಭಾಗಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಆರಂಭವಾಗಿದೆ. ಅಲ್ಲದೆ ಹವಾಮಾನ ಇಲಾಖೆ ಕರಾವಳಿ ಭಾಗದ ಮೀನುಗಾರರಿಗೆ ಕೆಲವು ಎಚ್ಚರಿಕೆ ಸಂದೇಶವನ್ನು ನೀಡಿದೆ.

Read More

ಬೆಂಗಳೂರು: ಬಹುಮತಗಳಿಂದ ಗೆದ್ದು ಗದ್ದುಗೆ ಏರಲು ತಯಾರಾಗಿರುವ ಕಾಂಗ್ರೆಸ್‍ಗೆ (Congress) ಈಗ ಮುಖ್ಯಮಂತ್ರಿ ಕುರ್ಚಿ ತಲೆನೋವಾಗಿ ಪರಿಣಮಿಸಿದೆ. ಒಂದು ಕಡೆ ಡಿ.ಕೆ ಶಿವಕುಮಾರ್ (D.K Shivakumar)ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದರೆ ಇನ್ನೊಂದು ಕಡೆ ಸಿದ್ದರಾಮಯ್ಯ (Siddaramaiah) ಕುರ್ಚಿಗಾಗಿ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ವಾದ ಏನು? ಎಲ್ಲಾ ಕೆಲಸವನ್ನು ಪಕ್ಷದ ಅಧ್ಯಕ್ಷರೆ ಮಾಡಿದ್ದಾರೆ ಎನ್ನುವುದಾದರೆ, ಅವರು ಒಬ್ಬರೇ ಪ್ರಚಾರ ಮಾಡಬಹುದಿತ್ತು. ನಾನು ಚುನಾವಣಾ (Election) ಪ್ರಚಾರಕ್ಕೆ ಹೋಗುವ ಅಗತ್ಯ ಇರಲಿಲ್ಲ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಜನಪರವಾಗಿ ಮಾಡಲಾದ ಕೆಲಸಗಳು ಕೈ ಹಿಡಿದಿವೆ. ನನ್ನ ವರ್ಚಸ್ಸು ಜನರನ್ನು ಕಾಂಗ್ರೆಸ್ ಕಡೆಗೆ ತಿರುಗುವಂತೆ ಮಾಡಿದೆ ಎಂದು ಸಿದ್ದರಾಮಯ್ಯ ವಾದಿಸಿದ್ದಾರೆ. ಒಬ್ಬರ ನೇತೃತ್ವದಲ್ಲಿ ಚುನಾವಣೆ ನಡೆದಿಲ್ಲ. ನಾನು ಡಿ.ಕೆ ಶಿವಕುಮಾರ್ ಸೇರಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದೇವೆ. ನನ್ನ ಕೈಲಾದ ಮಟ್ಟಿಗೆ ಅಭ್ಯರ್ಥಿಗಳಿಗೆ ಆರ್ಥಿಕ ನೆರವು ನೀಡಿದ್ದೇನೆ. ಇಬ್ಬರ ಶ್ರಮದಿಂದ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ನಾನು ಪೂರ್ಣ 5 ವರ್ಷದ ಅವಧಿಗೆ ಸಿಎಂ…

Read More

ಬೆಂಗಳೂರು: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda Airport)ಪ್ರಯಾಣಿಕರಿಂದ ಸುಲಿಗೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಅನಾರೋಗ್ಯ ಪೀಡಿತ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು  ಪ್ರಯಾಣಿಕರಿಂದ ಆರೋಪಿ ಹಣ ಸುಲಿಗೆಗೆ ಯತ್ನಿಸಿದ್ದ. ಈತನ ನಡವಳಿಕೆಯನ್ನು ಕಂಡ ಕೆಲವರು ಅನುಮಾನಗೊಂಡ ಪೊಲೀಸರಿಗೆ ಮಾಹಿತಿ ನೀಡಿದ್ದರು. ದೂರುಗಳ ನಂತರ, ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಆರೋಪಿ ವಿಘ್ನೇಶ್ನನ್ನು ಚೆನ್ನೈನಿಂದ ಕಸ್ಟಡಿಗೆ ತೆಗೆದುಕೊಂಡಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಭಾನುವಾರ ಆತನ ವಿರುದ್ಧ ಸೆಕ್ಷನ್ 420 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು: ಪರಿಶ್ರಮ ಹಾಗೂ ಪಕ್ಷ ನಿಷ್ಠೆಯಿಂದ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ(BJP National General Secretary CT Ravi) ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಜವಾಬ್ದಾರಿ ಸಿಕ್ಕ‌ಮೇಲೆ ಕ್ಷೇತ್ರದ ಕಡೆ ಓಡಾಟ ಕಡಿಮೆ ಆಯ್ತು. ಪರಿಸ್ಥಿತಿಯ ಪಿತೂರಿಯೂ ಆಗಿರಬಹುದು. ನಾನು ಯಾರ ಮೇಲೂ ಬೊಟ್ಟು ಮಾಡುವುದಿಲ್ಲ. ನಿರಂತರವಾಗಿ ಗೆಲ್ಲುವುದೊಂದೇ ನಾಯಕನ ಲಕ್ಷಣ ಅಲ್ಲ.‌ ಹೊಂದಾಣಿಕೆ ಮಾಡಿಕೊಂಡು ರಾಜಕೀಯ ಮಾಡೋಕೆ ನನಗೆ ಬರಲ್ಲ. ಹಾಗೆ ಮಾಡೋದಿದ್ದರೆ ನಾನು ಮಾಡಬಹುದಿತ್ತು. ಸಿದ್ಧಾಂತ, ಪಕ್ಷ ಮುಖ್ಯ. ವೈಯಕ್ತಿಕ ಹಿತಾಸಕ್ತಿ ಇಲ್ಲ. ನಿರಂತರವಾಗಿ ಗೆದ್ದವರು ಮಾತ್ರವೇ ನಾಯಕರಲ್ಲ. ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿಯಾದವರು ಇದ್ದಾರೆ. ಪರಿಶ್ರಮ ಹಾಗೂ ಪಕ್ಷ ನಿಷ್ಠೆಯಿಂದ ಕೆಲಸ ಮಾಡುತ್ತೇನೆ ಎಂದು ಹೇಳಿದರು. ನಾವು ಕೆಲಸ ಮಾಡಿಲ್ಲ ಅಂತ ಸೋತಿಲ್ಲ. ಸುಳ್ಳು ಸುದ್ದಿ ಹಾಗೂ ಹಣ ಕೊಟ್ಟು ಮಾಡಿಸಿದ ಸುದ್ದಿ ಈ ರೀತಿಯ ಫಲಿತಾಂಶ ಕೊಟ್ಟಿದೆ. ಚುನಾವಣೆಯಲ್ಲಿ ಸೋತಿರಬಹುದು, ಆದರೆ ನಾವು ಸತ್ತಿಲ್ಲ…

Read More

ಬೆಂಗಳೂರು: ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್‍ನಲ್ಲಿ (Congress) ಈಗ ಮುಖ್ಯಮತ್ರಿ ಪಟ್ಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಬಳಿ ಸಿಎಂ ಹುದ್ದೆ ನನಗೆ ನೀಡುವಂತೆ ಡಿಕೆ ಶಿವಕುಮಾರ್ ಪಟ್ಟು ಹಿಡಿದ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಡಿಕೆಶಿ ವಾದ ಏನು? ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ನನ್ನ ಶ್ರಮ ಎಲ್ಲರಿಗೂ ಗೊತ್ತಿದೆ. ಅಲ್ಲದೆ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಮುಖ್ಯಮಂತ್ರಿ ಮಾಡುವ ಪದ್ಧತಿಯಿದೆ. ಅದರಂತೆ ನನ್ನನ್ನು ಮುಖ್ಯಮಂತ್ರಿ ಮಾಡುವುದು ಸರಿಯಾದ ನಿರ್ಧಾರ. ಕಾಂಗ್ರೆಸ್ ಕಷ್ಟ ಅನುಭವಿಸುವಾಗ ಎಲ್ಲರೂ ಪಕ್ಷವನ್ನು ಕೈ ಬಿಟ್ಟು ನಡೆದರು. ಆಗ ನಾನು ಪಕ್ಷದ ನೇತೃತ್ವವನ್ನು ವಹಿಸಿಕೊಂಡು ಮುನ್ನೆಡೆಸಿಕೊಂಡು ಹೋಗಿದ್ದೇನೆ. ಅಲ್ಲದೇ ಭಾರತ್ ಜೋಡೋ (Bharat Jodo Yatra), ಮೇಕೆ ದಾಟು (Mekedatu) ಸೇರಿದಂತೆ ಪಕ್ಷದ ಹಲವು ಕಾರ್ಯಕ್ರಮಗಳಿಗೆ ನನ್ನ ಕೈಯಿಂದ ಹಣ ಹಾಕಿ ಯಶಸ್ವಿ ಮಾಡಿದ್ದೇನೆ. ಚುನಾವಣೆಯಲ್ಲಿ ಅಭ್ಯರ್ಥಿಗಳ…

Read More

ಬೆಂಗಳೂರು: ವಿಧಾನಸಭೆ ಚುನಾವಣೆಯ ಫಲಿತಾಂಶ (Karnataka Election Results) ಪ್ರಕಟಗೊಂಡ ಕೆಲವೇ ಗಂಟೆಗಳ ಬಳಿಕ ಬಿಜೆಪಿ ಕಾರ್ಯಕರ್ತರೊಬ್ಬರ (BJP Worker) ಹತ್ಯೆಯಾಗಿದೆ. ಸರ್ಕಾರ ರಚಿಸುವ ಮೊದಲೇ ಬಿಜೆಪಿ ಕಾರ್ಯಕರ್ತರ ಹತ್ಯೆಯ ಗ್ಯಾರಂಟಿ ಈಡೇರಿಸಿದ್ದಾರೆ ಎಂದು ಅಶ್ವಥ್ ನಾರಾಯಣ (Ashwath Narayan) ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಾರಾಯಣ, ಸರ್ಕಾರ ರಚಿಸುವ ಮೊದಲೇ ಬಿಜೆಪಿ ಕಾರ್ಯಕರ್ತರ ಹತ್ಯೆಯ ಗ್ಯಾರಂಟಿಯನ್ನು ಈಡೇರಿಸಿದ ಕಾಂಗ್ರೆಸ್ಸಿಗರು ದ್ವೇಷದ ಹಾಗೂ ದರ್ಪದ ರಾಜಕಾರಣವನ್ನು ಅವರ ಎಂದಿನ ಚಾಳಿಯಂತೆ ಮುಂದುವರಿಸಿದ್ದಾರೆ. ಹೊಸಕೋಟೆಯ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿ, ಕೊಲೆ ಮಾಡಿರುವುದು ಖಂಡನೀಯ. ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದೇನೆ ಎಂದು ಬರೆದಿದ್ದಾರೆ. ಘಟನೆಯೇನು? ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೊಸಕೋಟೆಯಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರ ಬೆಂಬಲಿಗನ ಕೊಲೆ ನಡೆದಿದೆ. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ಪಟಾಕಿ ಹಚ್ಚಿ ಸಂಭ್ರಮಿಸುತ್ತಿದ್ದ ವೇಳೆ ಆರಂಭವಾದ ಘಟನೆ…

Read More

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ (Election) ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಿದ್ದು, ಸಿಎಂ ಪಟ್ಟ ಯಾರಿಗೆ ಒಲಿಯುತ್ತದೆ ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡಿದೆ. ಇದರ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರ ನಿವಾಸಕ್ಕೆ ಕಾಲಜ್ಞಾನ ಗುರುಜಿ ಆಗಮಿಸಿ ಶುಭ ಹಾರೈಸಿದ್ದಾರೆ. ಹಲವು ವರ್ಷಗಳಿಂದ ಡಿಕೆಶಿ ಅವರ ಭವಿಷ್ಯದ ಬಗ್ಗೆ ತಿಳಿಸುತ್ತಿದ್ದ ವಿಜಯ್‌ರಾಜ್ ಗುರೂಜಿ (Vijayraj Guruji) ಸೋಮವಾರ ಎಲೆಕ್ಟ್ರಾನಿಕ್ ಸಿಟಿಯಿಂದ ಡಿಕೆಶಿ ನಿವಾಸಕ್ಕೆ ಆಗಮಿಸಿದ್ದಾರೆ. ಮುಂಜಾನೆ 4:15ರ ಸುಮಾರಿಗೆ ಆಗಮಿಸಿದ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆಶಿಗೆ ಶುಭ ಹಾರೈಸಿದ್ದಾರೆ. ಕಾಲಜ್ಞಾನದ ಬಗ್ಗೆ ಪಾಂಡಿತ್ಯ ಪಡೆದಿರುವ ವಿಜಯ್‌ರಾಜ್ ಗುರೂಜಿ ಪ್ರಸ್ತುತ ಡಿಕೆಶಿಗೆ ಬುಧ ಮತ್ತು ಆದಿತ್ಯ ಪಂಚಮಯೋಗವಿದೆ ಎಂದು ತಿಳಿಸಿ ಅವರಿಗೆ ಹಾರ ಹಾಕಿ ಆಶಿರ್ವಾದ ಮಾಡಿ ಅಲ್ಲಿಂದ ತೆರಳಿದ್ದಾರೆ. ನಿಮ್ಮ ಜಾತಕದಲ್ಲಿ ಗುರುವಾರದ ದಿನ ತುಂಬಾ ಒಳ್ಳೆಯದಿದೆ. ಅಂದೇ ಶುಭ ಕೆಲಸ ಆರಂಭಿಸಿ ಎಂಬ ಸಲಹೆಯನ್ನು ಡಿಕೆಶಿಗೆ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಗುರುವಾರ ನೂತನ ಸಿಎಂ ಪ್ರಮಾಣವಚನ…

Read More

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ (Karnataka CM) ಹಾಗೂ ಸಂಪುಟ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸಮಾರಂಭ ದಲ್ಲಿ ಭಾಗವಹಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಕಾಂಗ್ರೆಸ್‌ ಆಹ್ವಾನ ಕಳುಹಿಸಿದೆ. ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆ ಒಂದೆರೆಡು ದಿನದಲ್ಲಿ ರೂಪುಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಬಹುಮತದ ಜಯ ಸಾಧಿಸಿದ ಬಳಿಕ, ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ.ಶಿವಕುಮಾರ್‌ (DK Shivakumar) ಸಿಎಂಗಾದಿ ರೇಸ್‌ನಲ್ಲಿದ್ದಾರೆ. ಇಂದು ಸಿಎಲ್‌ಪಿ ಸಭೆ ನಡೆಯಲಿದೆ. ಸಭೆ ಕುರಿತು ದೆಹಲಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,   ವರದಿಯನ್ನು ಹೈಕಮಾಂಡ್‌ಗೆ ಹಸ್ತಾಂತರಿಸಲಿದ್ದು, ನಂತರ ಸಿಎಂ ಹೆಸರನ್ನು ಘೋಷಿಸಲು ಹೈಕಮಾಂಡ್ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ. ಕರ್ನಾಟಕದ ಜನರು ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದಿದ್ದಾರೆ. ಜನರು ನಮಗೆ ದಾಖಲೆಯ ಮತಗಳನ್ನು ನೀಡಿದ್ದಾರೆ. ನಾವು ಸಚಿವ ಸಂಪುಟ ರಚನೆಯ ನಂತರ ನಮ್ಮ…

Read More