Author: Prajatv Kannada

ಮುಂಬೈ:  ಮಹಾರಾಷ್ಟ್ರದ ಮುಂಬೈನ ದಾದರ್ ಪ್ರದೇಶದಲ್ಲಿ 18 ವರ್ಷದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಆತ ಒಬ್ಬರ ಬಳಿ ಕೆಲಸ ಮಾಡುತ್ತಿದ್ದು, ಆರು ತಿಂಗಳ ಸಂಬಳ ನೀಡಿರಲಿಲ್ಲ. ಈ ಹಣವನ್ನು ಕೇಳಿದಾಗ ಹಣ ನಿಡುವ ಬದಲು ಯುವಕನ ತಲೆ ಬೋಳಿಸಿ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ. ಇದರಿಂದ ಮನನೊಂದು ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಯುವಕನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎನ್‌.ಎಂ ಜೋಶಿ ಮಾರ್ಗ್ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ.  ರಾಮ್‌ರಾಜ್ ಜೈಸ್ವರ್‌ ಅವರ ಪುತ್ರ ಪಂಕಜ್ ಮೃತ ಯುವಕನಾಗಿದ್ದಾನೆ.   ಪಂಕಜ್‌ನ್ನು (Pankaj) ನಾಯರ್‌ ಆಸ್ಪತ್ರೆಗೆ (Nair Hospital) ದಾಖಲಿಸಲಾಗಿತ್ತು. ಅಲ್ಲಿ ಹೋಗಿ ನೊಡಿದಾಗ,  ಆತನ ತಲೆಕೂದಲನ್ನು ಸಂಪೂರ್ಣವಾಗಿ ಬೋಳಿಸಿ ತಲೆಗೆ ಬೂದಿ ಬಳಿಯಲಾಗಿತ್ತು.  ಅಲ್ಲದೇ ಸಾವಿಗೂ ಮೊದಲು ಆತನನ್ನು ಸಂಪೂರ್ಣ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿತ್ತು ಎಂದು ಪಂಕಜ್ ತಂದೆ ದೂರಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎನ್‌ಎಂ ಮಾರ್ಗ್ (N.M. Marg) ಪೊಲೀಸರನ್ನು ಸಂಪರ್ಕಿಸಿದಾಗ…

Read More

ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ  ಬಿಜೆಪಿ ಪಕ್ಷದ ಅನಿಲ್ ಕುಮಾರ್ ಹಾಗೂ ಜೆಡಿಎಸ್ ಪಕ್ಷದ ಎಂ. ರವೀಶ್ ಕುಮಾರ್ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ನಗರದ ಆರಾಧ್ಯ ದೈವ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ದೇವಸ್ಥಾನದಿಂದ ತಾಲೂಕು ಕಚೇರಿವರೆಗೆ ವಿವಿಧ ವಾದ್ಯ ಕಲಾ ತಂಡಗಳೊಂದಿಗೆ, ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಬೆಂಬಲಿಗರೊಂದಿಗೆ, ಜೆಡಿಎಸ್ ಬಾವುಟಗಳನ್ನು ಹಿಡಿದು ಮೆರವಣಿಗೆ ಮೂಲಕ, ಆಗಮಿಸಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ(ಪಿಟಿ),ಮಾಜಿ ಎಂಎಲ್ಎ ಬಸವರಾಜ್ ಮಂಡಿಮಠ, ನಗರ ಸಭೆ ಸದಸ್ಯ ಪ್ರಮೋದ್ ಸೇರಿದಂತೆ, ಜೆಡಿಎಸ್ ಪಕ್ಷದ  ಮುಖಂಡರು ಭಾಗಿಯಾಗಿದ್ದರು. ಇದೇ ವೇಳೆ ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್  ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಜನಪದ ಯೋಜನೆಗಳೇ ನಮಗೆ ಶ್ರೀರಕ್ಷೆಯಾಗಿದ್ದು, ಜೆಡಿಎಸ್ ಪಕ್ಷದ ಪಂಚತಂತ್ರ ಯೋಜನೆಗಳಿಂದ ಕ್ಷೇತ್ರದ ಮತದಾರರು ನನ್ನನ್ನು…

Read More

ಚಿತ್ರದುರ್ಗ: ರಘು ಆಚಾರ್ ನಾಮ ಪತ್ರ ಸಲ್ಲಿಸುವ ವೇಳೆ ನಾನೂ ಕೂಡ ಭಾಗಿಯಾಗಿ ಚಿತ್ರದುರ್ಗದ ಜನತೆಗೆ ಮನವಿ ಮಾಡಿಕೊಳ್ಳಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಸವದತ್ತಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಚಿತ್ರದುರ್ಗದ ಕ್ಯಾದಿಗೆರೆ ಬಳಿ ಇರುವ ಜಿ.ರಘು ಆಚಾರ್ ನಿವಾಸಕ್ಕೆ ಭೇಟಿ ನೀಡಿದ್ದ ಹೆಚ್.ಡಿ ಕುಮಾರಸ್ವಾಮಿ, ರಘು ಆಚಾರ್ ಅವರ ಕುಟುಂಬದವರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾಮಪತ್ರಿಕೆ ಸಲ್ಲಿಕೆ ಕಾರ್ಯ ನಡೆಯುತ್ತಿದೆ, ರಘು ಆಚಾರ್ ಪಕ್ಷ ಸೇರ್ಪಡೆಯಿಂದಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರ್ನಾಲ್ಕು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಾತಾವರಣ ನಿರ್ಮಾಣ ಆಗಿದೆ. ಹೊಳಲ್ಕೆರೆ ಕ್ಷೇತ್ರದಿಂದ ಇಂದ್ರಜಿತ್ ನಾಯ್ಕ್ ಅವರನ್ನು ನಿಲ್ಲಿಸಲು ಮಾತುಕತೆ ನಡೆಸಲಾಗಿದೆ, ಹಿರಿಯೂರು, ಹೊಸದುರ್ಗ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಮಾತ್ರ ಸ್ವಲ್ಪ ಸಮಸ್ಯೆ ಇದೆ, ಈ ಬಗ್ಗೆ ರಘು ಆಚಾರ್, ಯತ್ನಟ್ಟಿ ಗೌಡ್ರು, ನಾನು ಎಲ್ಲಾ ಚರ್ಚೆ ಮಾಡಿದ್ದೇನೆ, ಸದ್ಯದಲ್ಲೇ ಆ ಕ್ಷೇತ್ರದ ಬಗ್ಗೆ…

Read More

ಶಿವಮೊಗ್ಗ: ಕೃಷಿ ಸಚಿವ ಬಿ.ಸಿ ಪಾಟೀಲ್ ಇಂದು ನಾಮ ಪತ್ರ ಸಲ್ಲಿಸುವ ಹಿನ್ನಲೆ ಕುಟುಂಬ ಸಮೇತರಾಗಿ ಅವರ  ಮನೆ ದೇವರಾದ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಮುಳಕೊಪ್ಪ ಗ್ರಾಮದ ಶ್ರೀ ಕೋಡಿ ಬಸವೇಶ್ವರ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು  ಬಿ.ಫಾರ್ಮ್ ನ್ನೂ ಪೂಜಿಸಿದರು. ಹಿರೇಕೆರೂರಿನ ತಹಶೀಲ್ದಾರ ಕಛೇರಿಯಲ್ಲಿ ಇಂದು  ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು ಬೃಹತ್ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಈ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕಲ್ಬುರ್ಗಿ ಸಂಸದರಾದ ಉಮೇಶ ಜಾಧವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೀಂದ್ರ, ಸಂಸದ ಶಿವಕುಮಾರ ಉದಾಸಿ ಅವರು ಉಪಸ್ಥಿತರಿರುತ್ತಾರೆ.

Read More

ಕಲಬುರಗಿ: ಬ್ರಾಹ್ಮಣ ಸಮಾಜದ ಹಿರಿಯ ಮುಖಂಡರು ಹಾಗೂ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಕೃಷ್ಣಾಜಿ ಕುಲಕರ್ಣಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ ಸಿಂಗ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಸಂಧರ್ಭದಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ ರೇವೂರ,ರಾಜ್ಯ ಉಪಾಧ್ಯಕ್ಷರಾದ ಮಾಲಿಕಯ್ಯಾ ಗುತ್ತೇದಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು, ಪದಾಧಿಕಾರಿಗಳು & ಬ್ರಾಹ್ಮಣ ಸಮಾಜದ ಮುಖಂಡರು, ಮತ್ತಿತರರು ಉಪಸ್ಥಿತರಿದರು.

Read More

ರಾಮನಗರ: ಬೊಂಬೆಗಳ ತಯಾರಿಕೆಯಲ್ಲಿ ವಿಶ್ವಖ್ಯಾತಿ ಪಡೆದಂತೆ, ಹೋರಾಟದಲ್ಲೂ ತನ್ನದೇ ಆದ ಹೆಸರು ಗಳಿಸಿರೋ ಚನ್ನಪಟ್ಟಣ (Channapatna) ವಿಧಾನಸಭಾ ಕ್ಷೇತ್ರ, ರಾಜಕೀಯವಾಗಿಯೂ ವಿಶಿಷ್ಟಗಳಿಂದ ಕೂಡಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (C.P.Yogeshwara) ಸ್ಪರ್ಧೆ ಮಾಡುವ ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣ. ಜೆಡಿಎಸ್‌ನಿಂದ (JDS) ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿಯಿಂದ (BJP) ಸಿ.ಪಿ.ಯೋಗೇಶ್ವರ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಈ ಬಾರಿ ಬೊಂಬೆ ಆಡಿಸುವವರು ಯಾರು ಎಂಬ ಕುತೂಹಲ ಹೆಚ್ಚಾಗಿದೆ. ದೊಡ್ಡಗೌಡ್ರ ನಾಮಬಲ, ವೈಯಕ್ತಿಕ ವರ್ಚಸ್ಸಲ್ಲಿ ಹೆಚ್‌ಡಿಕೆ ಫೈಟ್ ಒಕ್ಕಲಿಗ ಪ್ರಾಬಲ್ಯವಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸಾಂಪ್ರದಾಯಿಕ ಮತಗಳನ್ನ ಹೊಂದಿದೆ. ಮಾಜಿ ಸಿಎಂ ಕುಮಾರಸ್ವಾಮಿ ಈ ಕ್ಷೇತ್ರದಿಂದ ಇದು ನನ್ನ ಕಡೇ ಚುನಾವಣೆ. ಮುಂದಿನ ಭಾರಿ ಇಲ್ಲಿ ಸ್ಥಳೀಯ ಕಾರ್ಯಕರ್ತರನ್ನು ನಿಲ್ಲಿಸುತ್ತೇನೆ ಎನ್ನುವ ಮೂಲಕ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಿದ್ದಾರೆ. ಪಂಚರತ್ನ, ಬಮೂಲ್ ಉತ್ಸವಗಳ ಮೂಲಕ ಕ್ಷೇತ್ರದಲ್ಲಿ ಜೆಡಿಎಸ್ ಅಲೆ ಎಬ್ಬಿಸಿದ್ದಾರೆ. ಹೆಚ್ಡಿಕೆಗೆ ಸಿಎಂ ಸ್ಥಾನ ದೊರೆಯುತ್ತದೆ ಎಂಬ ನಿರೀಕ್ಷೆಯು ಮತದಾರರಿಗಿದೆ. ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕುಮಾರಸ್ವಾಮಿ ಚುನಾವಣೆಯಲ್ಲಿ…

Read More

ಉಡುಪಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಚುನಾವಣಾ ಪ್ರಚಾರಕ್ಕಾಗಿ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡ ಈ ಬಾರಿ ರಾಜ್ಯದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಮೇ 4ರಂದು ಕರಾವಳಿ ಜಿಲ್ಲೆ ಉಡುಪಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದ್ದು ಮೋದಿ ಭಾಗವಹಿಸಲಿದ್ದಾರೆ. ಯೋಗಿ ಆದಿತ್ಯನಾಥ ಅವರು ಪ್ರಧಾನಿಗೆ ಸಾಥ್ ನೀಡಲಿದ್ದಾರೆ ಎಂದು ‘ಪಿಟಿಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ. ಚುನಾವ ಮತದಾನಕ್ಕೆ ಕೇವಲ ಒಂದು ವಾರ ಬಾಕಿ ಇರುವ ಸಂದರ್ಭದಲ್ಲೇ ಮೋದಿಯವರು ಉಡುಪಿಗೆ ಭೇಟಿ ನೀಡುತ್ತಿರುವುದು ಬಿಜೆಪಿ ಪಾಲಿಗೆ ಮಹತ್ವದ್ದಾಗಲಿದೆ ಎನ್ನಲಾಗಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವು ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಪೈಕಿ ನಾಲ್ಕು ಕ್ಷೇತ್ರಗಳು ಉಡುಪಿಯಲ್ಲಿವೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ಸುಮಾರು 15ರಿಂದ 20…

Read More

ಬೀದರ್: ವಿಶ್ವಗುರು ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣ (Basavakalyan) ಕ್ಷೇತ್ರದಲ್ಲಿ ಎಲ್ಲಾ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಬಿಜೆಪಿಯಿಂದ (BJP)ಮತ್ತೊಮ್ಮೆ ಶರಣು ಸಲಗರ್ (Sharanu Salagar) ಅಗ್ನಿ ಪರೀಕ್ಷೆಗೆ ಇಳಿದರೆ ಕಾಂಗ್ರೆಸ್‌ನಿಂದ (Congress) ಮಾಜಿ ಸಿಎಂ ಎನ್ ಧರಂ ಸಿಂಗ್ (Dharam Singh) ಪುತ್ರ ವಿಜಯ್ ಸಿಂಗ್ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್‌ನಿಂದ (JDS) ಈಗಾಗಲೇ ಸೈಯದ್ ಯಾಸ್ರಬ್ ಅಲಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. 2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಿಂದ ಬಸವಕಲ್ಯಾಣ ಕ್ಷೇತ್ರದಲ್ಲಿ ಹುಲಸೂರು ಮತ ಕ್ಷೇತ್ರದ ಕೆಲವು ಗ್ರಾಮಗಳ ವಿಲೀನಗೊಂಡಿದೆ. ಹೀಗಾಗಿ ಕ್ಷೇತ್ರದ ಸ್ವರೂಪವೂ ಬದಲಾಗಿದೆ. ಒಟ್ಟಾರೆ ಬಸವಕಲ್ಯಾಣ ಕ್ಷೇತ್ರ ಜಿಲ್ಲೆಯ ಪ್ರಮುಖ ರಾಜಕೀಯ ಚಟುವಟಿಕೆ ಕೇಂದ್ರವಾಗಿ ಮಾರ್ಪಟ್ಟಿದೆ. 1957ರಿಂದ ಬಸವಕಲ್ಯಾಣ ಕ್ಷೇತ್ರ ಒಟ್ಟು 15 ಚುನಾವಣೆಗಳನ್ನು ಕಂಡಿದ್ದು 16ನೇ ಚುನಾವಣೆಗೆ ಕ್ಷೇತ್ರದಲ್ಲಿ 2.41 ಲಕ್ಷ ಮತದಾರರಿದ್ದಾರೆ. ಮತದಾರ 5 ಬಾರಿ ಕಾಂಗ್ರೆಸ್‍ನ ಕೈ ಹಿಡಿದರೆ, 7 ಬಾರಿ ಜನತಾ ಪರಿವಾರಕ್ಕೆ ಮಣೆ ಹಾಕಿದ್ದಾನೆ. ಒಂದು ಬಾರಿ ಪಕ್ಷೇತರ, ಎರಡು ಸಲ ಕಮಲ ಅರಳಿದೆ. ಜಿಲ್ಲೆಯಲ್ಲೇ…

Read More

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನೇ ದಿನೇ ಏರಿಕೆಯಾಗುತ್ತಿದ್ದು, ಹೈಕಮಾಂಡ್‌ನಿಂದ ಬಿ.ಫಾರಂ ಗಿಟ್ಟಿಸಿರುವ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಕೆಗೆ ಮುಂದಾಗಿದ್ದಾರೆ. ಅದರ ಭಾಗವಾಗಿ ಸೋಮವಾರ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಆರ್‌.ಅಶೋಕ್‌ ಉಮೇದುವಾರಿಕೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬನಶಂಕರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ದೇವೇಗೌಡ ಪೆಟ್ರೋಲ್‌ ಬಂಕ್‌ನಿಂದ ಕಿಮ್ಸ್‌ ಕಾಲೇಜಿನವರೆಗೂ ಮೆರವಣಿಗೆ ನಡೆಸಿ ಬನಶಂಕರಿ ಎರಡನೇ ಹಂತದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಆರ್‌.ಅಶೋಕ್‌ಗೆ ಸಂಸದ ತೇಜಸ್ವಿ ಸೂರ್ಯ, ಪಕ್ಷದ ಮುಖಂಡರು, ಕಾರ್ಯಕರ್ತರು ಸಾಥ್‌ ನೀಡಿದರು. ಇನ್ನೂ ಶಾಸಕ ಎಂ.ಕೃಷ್ಣಪ್ಪ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಬೆಂಬಲಿಗರು ಹಾಗೂ ಕುಟುಂಬದ ಸದಸ್ಯರೊಂದಿಗೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾರ್ಯಕರ್ತರ ಬೃಹತ್‌ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ಎ.ಮುರಳಿ ಅವರು ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ…

Read More

ಬೆಂಗಳೂರು: ವಿಧಾನಸಭೆ ಚುನಾವಣೆಗೆ (Assembly Election) ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು (Candidates) ಈಗಾಗಲೇ ತಮ್ಮ ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಸೋಮವಾರ ನಾಮಪತ್ರ ಸಲ್ಲಿಸಿರುವ ಘಟನಾನುಘಟಿ ಅಭ್ಯರ್ಥಿಗಳ ಪ್ರಮುಖ ಆಸ್ತಿ (Property) ವಿವರಗಳು ಇದೀಗ ಬಹಿರಂಗವಾಗಿದೆ. ರಾಜಕೀಯ ಕುಬೇರರು: ಎಂಟಿಬಿ ನಾಗರಾಜ್, ಹೊಸಕೋಟೆ ಅಭ್ಯರ್ಥಿ: * ಒಟ್ಟು ಆಸ್ತಿ ಮೌಲ್ಯ 1,510 ಕೋಟಿ ರೂ. * ಚರಾಸ್ತಿ ಮೌಲ್ಯ 372 ಕೋಟಿ ರೂ. * ಸ್ಥಿರಾಸ್ತಿ ಮೌಲ್ಯ 792 ಕೋಟಿ ರೂ. * ಪತ್ನಿ ಹೆಸರಲ್ಲಿ 437 ಕೋಟಿ ಮೌಲ್ಯದ ಆಸ್ತಿ * ಸಾಲ 71 ಕೋಟಿ ರೂ. * ಕಾರುಗಳ ಮೌಲ್ಯ 1.72 ಕೋಟಿ ರೂ. ಕುಮಾರಸ್ವಾಮಿ, ಚನ್ನಪಟ್ಟಣ ಅಭ್ಯರ್ಥಿ: * ಒಟ್ಟು ಆಸ್ತಿ ಮೌಲ್ಯ – 46.57 ಕೋಟಿ ರೂ. * 750 ಗ್ರಾಂ ಚಿನ್ನ, ಸಾಲ 17 ಕೋಟಿ * ಪತ್ನಿ ಹೆಸರಲ್ಲಿ 124 ಕೋಟಿ ಮೌಲ್ಯದ ಆಸ್ತಿ, 3.8 ಕೆಜಿ ಚಿನ್ನ * ಕುಮಾರಸ್ವಾಮಿ ವಿರುದ್ಧ…

Read More