ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಅವರು ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಅಣ್ಣ, ತಮ್ಮ ಪರಸ್ಪರ ಹೋರಾಟಕ್ಕೆ ನಿಂತಿದ್ದರು. ಸೊರಬ ಕ್ಷೇತ್ರದಲ್ಲಿ ನಡೆಯುತ್ತಿರುವ ಹೋರಾಟ ಸಹೋದರರ ನಡುವೆಯ ಜಟಾಪಟಿಯಾಗಿದೆ. ಮೊದಲ ಸುತ್ತಿನ ಮತ ಏಣಿಕೆಯಿಂದಲೂ ಮುನ್ನಡೆ ಕಾದುಕೊಂಡಿದ್ದ ಮಧು ಬಂಗಾರಪ್ಪ ಅವರು ಗೆಲುವಿನ ನಗು ಬೀರಿದ್ದಾರೆ.
Author: Prajatv Kannada
Indi Election Result Live: ಇಂಡಿ ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ್ ಗೆಲುವು ವಿಜಯಪುರ: ಇಂಡಿ ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ್ ಗೆಲುವು ಸಾಧಿಸಿದ್ದಾರೆ.
Athani Election Result Live: ಅಥಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಜಯ ಬೆಳಗಾವಿ: ಅಥಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿಯವರು ವಿಜಯಶಾಲಿಯಾಗಿದ್ದಾರೆ. 59,000ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಅವರನ್ನು ಸೋಲಿಸಿದ್ದಾರೆ.
Kalaburgi Election Result Live: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಗೆಲುವು ಕಲಬುರಗಿ: ಚಿತ್ತಾಪುರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ16,000 ಮತಗಳ ಅಂತರದಿಂದ ಜಯ
ಬೆಂಗಳೂರು: ಕನಕಪುರ (Kanakapura) ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿಕೆ ಶಿವಕುಮಾರ್ (DK Shivakumar) 1 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಬಾರಿ ಡಿಕೆ ಶಿವಕುಮಾರ್ ಅವರನ್ನು ಸೋಲಿಸಲು ಬಿಜೆಪಿ ಸಾಕಷ್ಟು ಪ್ರಯತ್ನ ಮಾಡಿತ್ತು. ಈ ಹಿನ್ನೆಲೆಯಲ್ಲೇ ಬಿಜೆಪಿಯ (BJP) ಪ್ರಮುಖ ನಾಯಕ ಆರ್. ಅಶೋಕ್ (R Ashok) ಅವರನ್ನು ಕನಕಪುರ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಮಾಡಿತ್ತು. ಆದರೆ ಡಿಕೆ ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿ, ನಾಮಪತ್ರ ಸಲ್ಲಿಸಿದ ಬಳಿಕ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು. ಅದಾದ ಬಳಿಕವೂ ಡಿಕೆಶಿ ಮಾತಿನಂತೆ ನಡೆದುಕೊಂಡಿದ್ದು, ಪ್ರಚಾರದ ಕೊನೆಯ ದಿನವಷ್ಟೇ ಕನಕಪುರ ಕ್ಷೇತ್ರಕ್ಕೆ ಬಂದು ಭರ್ಜರಿ ಪ್ರಚಾರ ನಡೆಸಿದ್ದರು. ಇದೀಗ ಕನಕಪುರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಮತದಾರರು ಡಿಕೆಶಿಯ ಕೈಹಿಡಿದಿದ್ದಾರೆ. ಕನಕಪುರ ಕ್ಷೇತ್ರದಲ್ಲಿ ಬಿಜೆಪಿಯ ಆರ್. ಅಶೋಕ್ ಹಾಗೂ ಜೆಡಿಎಸ್‍ನ (JDS) ಬಿ. ನಾಗರಾಜು ವಿರುದ್ಧ ಡಿಕೆ ಶಿವಕುಮಾರ್ ಸ್ಪರ್ಧಿಸಿದ್ದರು. ಆರ್. ಅಶೋಕ್ 3ನೇ ಸ್ಥಾನ ಪಡೆದಿದ್ದಾರೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಅತೀ ದೊಡ್ಡ ಗೆಲುವಿನ ಪಕ್ಷವಾಗಿ ಕಾಂಗ್ರೆಸ್ (Congress)ಹೊರಹೊಮ್ಮಿದೆ. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುವಷ್ಟು ಮತದಾರ ಪಕ್ಷವನ್ನು ಕೈ ಹಿಡಿದಿದ್ದಾನೆ. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಕಾಂಗ್ರೆಸ್ ಗೆಲ್ಲಿಸಿದ್ದಕ್ಕೆ ಕರ್ನಾಟಕದ ಜನತೆಗೆ ಧನ್ಯವಾಗಳನ್ನು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ‘ಜನರು ಒಳ್ಳೆ ಕೆಲಸ ಮಾಡಿದರೆ ಒಳ್ಳೆಯವರ ಕೈ ಹಿಡಿತಾರೆ. ಸೋಲಲಿ ಗೆಲ್ಲಲಿ ಜನರ ಮಧ್ಯೆ ಇರಬೇಕು. ಇದು ಕೇವಲ ಒಬ್ಬರ ಗೆಲುವಲ್ಲ, ಎಲ್ಲರೂ ಒಗ್ಗೂಡಿ ಕೆಲಸ ಮಾಡಿದ್ದಾರೆ. ಹಾಗಾಗಿ ಗೆದ್ದಿದ್ದೇವೆ. ಜೊತೆಗೆ ನಮ್ಮ ಗ್ಯಾರಂಟಿ ಕೂಡ ಕೆಲಸ ಮಾಡಿದೆ. ಗ್ಯಾರಂಟಿಗಳಿಗೆ ಜನ ಸ್ಪಂದಿಸಿದ್ದಾರೆ’ ಎಂದರು. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕುರಿತು ಮಾತನಾಡಿದ ಖರ್ಗೆ, ‘ಯಾವುದಕ್ಕೂ ವ್ಯಕ್ತಿಗತವಾಗಿ ಮೋದಿ ವಿರುದ್ದ ಮಾತನಾಡಲ್ಲ. ಆದರೆ ಮೋದಿಯವರು ಇಲ್ಲಿಯೇ ಓಣಿ ಓಣಿ ತಿರುಗಿದ್ದು ಸರಿ ಅನಿಸಿಲ್ಲ. ಅವರ ಕ್ಯಾಂಪೇನ್ ಮಾಡುವ ಅವರ ಸ್ಟೈಲ್ ಗೆ ನಾನು ಯಾವುದೇ ಟೀಕೆ ಮಾಡುವುದಿಲ್ಲ.…
ಶಿವಮೊಗ್ಗ : ಕೃಷಿಭೂಮಿ ಹೋರಾಟಗಳಿಂದ ಹೆಸರುವಾಸಿಯಾಗಿರುವ ಸಹ್ಯಾದ್ರಿ ಬೆಟ್ಟಗಳ ತಪ್ಪಲು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಿಮ್ಮನೆ ರತ್ನಾಕರ್ ವಿರುದ್ಧ ಆರಗ ಜ್ಞಾನೇಂದ್ರ 11 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ. ಸತತ ಐದನೇ ಬಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪರಸ್ಪರ ಸ್ಪರ್ಧಿಸಿದ್ದರು. ಈ ಹಿಂದೆ ಮೂರು ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರೆ ಕಿಮ್ಮನೆ ಎರಡು ಬಾರಿ ಗೆದ್ದಿದ್ದಾರೆ. ಒಟ್ಟಾರೆ 4 ಬಾರಿ ತೀರ್ಥಹಳ್ಳಿ ಕ್ಷೇತ್ರವನ್ನು ಆರಗ ಜ್ಞಾನೇಂದ್ರ ಪ್ರತಿನಿಧಿಸಿದ್ದಾರೆ. ವಿಶೇಷವಾಗಿ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ, ಎಐಸಿಸಿ ಅಧ್ಯಕ್ಷ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿದರೆ ರಾಜ್ಯದಲ್ಲಿ 10ನೇ ಬಾರಿ ವಿಧಾನಸಭೆಗೆ ಸ್ಪರ್ಧಿಸುತ್ತಿರುವವರಲ್ಲಿ ಆರಗ ಜ್ಞಾನೇಂದ್ರ ಪ್ರಮುಖರು. ಮಲ್ಲಿಕಾರ್ಜುನ ಖರ್ಗೆಯವರು 10 ಬಾರಿ ವಿಧಾನಸಭೆಗೆ ಸ್ಪರ್ಧಿಸಿ ದಾಖಲೆ ನಿರ್ಮಿಸಿದ್ದಾರೆ. ಈಗ ಆರಗ ಜ್ಞಾನೇಂದ್ರ ಕೂಡ 10ನೇ ಬಾರಿ ವಿಧಾನಸಭೆಗೆ ಸ್ಪರ್ಧಿಸಿದ್ದಾರೆ. ಜೊತೆಗೆ, 10 ಬಾರಿಯೂ ಒಂದೇ ಪಕ್ಷ ಮತ್ತು ಒಂದೇ ಚಿಹ್ನೆಯಡಿ ಸ್ಪರ್ಧೆ ಮಾಡಿದ್ದಾರೆ. 1983ರಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ…
ಬೆಂಗಳೂರು: ಬಿಜೆಪಿ ಅಭ್ಯರ್ಥಿ ಎಸ್ ಸುರೇಶ್ ಕುಮಾರ್ ಅವರು ರಾಜಾಜಿನಗರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲು ಕಂಡಿದ್ದಾರೆ. ಇನ್ನೂ ಮತ ಎಣಿಕೆ ಆರಂಭದಿಂದಲೂ ಇಬ್ಬರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಒಂದು ಸುತ್ತಿನಲ್ಲಿ ಪಟ್ಟಣ್ಣ, ಮತ್ತೊಂದು ಸುತ್ತಿನಲ್ಲಿ ಸುರೇಶ್ ಕುಮಾರ್ ಅವರು ಮುನ್ನಡೆ ಪಡೆಯುತ್ತಿದ್ದರು. ಅಂತಿಮ ಎರಡು ಸುತ್ತಿನಲ್ಲಿ ಸುರೇಶ್ ಕುಮಾರ್ ಅವರಿಗೆ ವಿಜಯಮಾಲೆ ಒಲಿದಿದೆ. ಇನ್ನೂ 2023 ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಕ್ಷೇತ್ರಗಳಲ್ಲಿ ರಾಜ್ಯ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿ ಅರಳಿದ ಕಮಲವನ್ನು ಕಾಂಗ್ರೆಸ್ ಮುದುಡಿಸಿದೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆ ಬಿಜೆಪಿ ಹಿನ್ನೆಡೆ, ಕಾಂಗ್ರೆಸ್ ಮುನ್ನಡೆ ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗಿದೆ 224 ಕ್ಷೇತ್ರಗಳಲ್ಲಿ 223ರಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದರೆ, ಬಿಜೆಪಿ 224ರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಳಿಸಿದೆ. ಮುನ್ನಡೆ – ಬಿಜೆಪಿ: 63 ಕಾಂಗ್ರೆಸ್ : 135 ಜೆಡಿಎಸ್: 22 ಇತರೆ 04 ಬೆಳಗ್ಗೆ 02 ಗಂಟೆವರೆಗೆ ನಡೆದ ಮತ ಮಣಿಕೆ ಪ್ರಕ್ರಿಯೆ ಪ್ರತೀ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಹಾಗೂ ಫಲಿತಾಂಶದ ನಿಖರವಾದ ಇಂಚಿಂಚೂ ಮಾಹಿತಿ, ಲೈವ್ ಅಪ್ ಡೇಟ್ ಗಾಗಿ prajaatvkannadanews ಫಾಲೋ ಮಾಡಿ
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದರು. ರಾಜ್ಯ ವಿಧಾನಸಭಾ ಚುನಾವಣೆಯ (Karnataka Election) ಫಲಿತಾಂಶ ಬಹುತೇಕ ಖಚಿತವಾಗಿದೆ. ಸ್ಪಷ್ಟ ಬಹುಮತ ಕಾಂಗ್ರೆಸ್‌ಗೆ ಬಂದಿದ್ದು, ಅಧಿಕಾರ ಹಿಡಿಯಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಟ್ವೀಟ್‌ನಲ್ಲಿ ಏನಿದೆ?: ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು. ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರ್ಕಾರಕ್ಕೆ ಶುಭವಾಗಲಿ.…