Author: Prajatv Kannada

ಧಾರವಾಡ: ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತದೆ. ಪ್ರಹ್ಲಾದ ಜೋಶಿ, ಬಿ.ಎಲ್.ಸಂತೋಷ ಯಾರೂ ಸಿಎಂ ಆಗುವುದಿಲ್ಲ. ಎರಡನೇ ಜನರೇಶನ್ನಿನ ಲಿಂಗಾಯತ ವ್ಯಕ್ತಿಯೇ ಸಿಎಂ ಆಗುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ನವಲಗುಂದದಲ್ಲಿ ಮಾತನಾಡಿದ ಅವರು, ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಿಜೆಪಿ ಪಕ್ಷ ತೊರೆದಿದ್ದಾರೆ. ಇಷ್ಟು ವರ್ಷ ಬಿಜೆಪಿಯಲ್ಲಿ ಸುಖ, ಸಂತೋಷ ಅನುಭವಿಸಿ ಹೋಗಿದ್ದಾರೆ. ಇದು ದುರದೃಷ್ಟಕರ. ಈ ದೇಶಕ್ಕೆ ನರೇಂದ್ರ ಮೋದಿ ಬೇಕಾಗಿದೆ. ರಾಜ್ಯಕ್ಕೆ ಬಿಜೆಪಿ ಸರ್ಕಾರ ಬೇಕಿದೆ. ಯಾರೇ ಪಕ್ಷ ಬಿಟ್ಟು ಹೋದರೂ ಬಿಜೆಪಿ ಸ್ಪಷ್ಟ ಬಹುಮತ ಬರುವುದು ಗ್ಯಾರಂಟಿ ಎಂದರು. ಬಿಜೆಪಿಗೆ ಹೊಸ ನಾಯಕತ್ವ ಬರುವುದಿದೆ. ಎರಡನೇ ಸಾಲಿನ ನಾಯಕತ್ವ ಬರಲಿದೆ. ಲಿಂಗಾಯತರಲ್ಲಿ ಇನ್ನೂ ಸಾಕಷ್ಟು ನಾಯಕರು ಬಿಜೆಪಿಯಲ್ಲಿದ್ದೇವೆ. ಲಿಂಗಾಯತರಿಗೆ ಅನ್ಯಾಯ ಆಗಿದೆ ಅನ್ಯಾಯ ಆಗಿದೆ ಎನ್ನುತ್ತಾರೆ ಯಾವುದೂ ಅನ್ಯಾಯ ಆಗಿಲ್ಲ. ಶೆಟ್ಟರ್ ಅವರು ಎಂಎಲ್‌ಎ, ಮಂತ್ರಿ, ಸಿಎಂ, ಸ್ಪೀಕರ್, ಡಿಸಿಎಂ ಆಗಿ ಸುಖ ಉಂಡಿದ್ದಾರೆ. ದುಡಿಯಲಾತದೇ ದುಃಖ ಪಡಲಾರದೇ ಸುಖ…

Read More

ಬೀದರ್ (ಏ.17): ಏ.18ರಂದು ಮಂಗಳವಾರ ನಾನು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದ್ದಾರೆ. 2023ರ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಷಯವಾಗಿ ಸೋಮವಾರ ಬೆಳಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ಮಂಗಳವಾರ 18ನೇ ತಾರೀಖು ಬೆಳಗ್ಗೆ 11 ಗಂಟೆಗೆ ಬೀದರ್ ನಗರದ ಒಲ್ಡ್ ಸಿಟಿ (ಹಳೆ ಸರ್ಕಾರಿ ಆಸ್ಪತ್ರೆ ಹತ್ತಿರ) ಯಲ್ಲಿರುವ ನಮ್ಮ ನಿವಾಸದಿಂದ ಪಾದಯಾತ್ರೆಯ ಮೂಲಕ ತಹಶಿಲ್ ಆಫೀಸ್ ಗೆ ಹೋಗಿ ಜಾತ್ಯಾತೀತ ಜನತಾದಳ ಪಕ್ಷದಿಂದ ನಾಮಪತ್ರ ಸಲ್ಲಿಸುತ್ತಿದ್ದೇನೆ. ತಾವೆಲ್ಲರೂ ಬಂದು ಆಶೀರ್ವಾದ ಮಾಡಬೇಕೆಂದು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ದರ್ಶನ: ಭವಾನಿ ಮಾತೆಯ ಅಪ್ಪಟ ಭಕ್ತರಾಗಿರುವ…

Read More

ಹುಬ್ಬಳ್ಳಿ: ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ತಮ್ಮ ಹುಬ್ಬಳ್ಳಿಯಲ್ಲಿರುವ (Hubballi) ನಿವಾಸಕ್ಕೆ ಆಗಮಿಸುತ್ತಲೇ ಅವರ ಪತ್ನಿ ಶಿಲ್ಪಾ ಜಗದೀಶ್ (Shilpa Jagadish) ಅವರು ತಮ್ಮ ಪತಿಯನ್ನು ತಬ್ಬಿ ಕಣ್ಣೀರಿಟ್ಟಿದ್ದಾರೆ. ಶೆಟ್ಟರ್ ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸುತ್ತಲೇ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇಷ್ಟು ದಿನ ಬಿಜೆಪಿ ಘೋಷಣೆ ಕೂಗುತ್ತಿದ್ದ ಬೆಂಗಲಿಗರು ಇಂದು ಕಾಂಗ್ರೆಸ್ ಘೋಷಣೆ ಕೂಗಿದ್ದಾರೆ. ಈ ವೇಳೆ ಭಾವುಕರಾದ ಶೆಟ್ಟರ್ ಪತ್ನಿ ಶಿಲ್ಪಾ ಜಗದೀಶ್ ಪತಿಯನ್ನು ತಬ್ಬಿ ಕಣ್ಣೀರು ಹಾಕಿದರು. ಪತ್ನಿಗೆ ಸಮಾಧಾನಪಡಿಸಲು ಮುಂದಾದ ಶೆಟ್ಟರ್ ಕೂಡಾ ಈ ವೇಳೆ ಗದ್ಗದಿತರಾದರು. ಇಬ್ಬರು ಕಣ್ಣೀರು ಹಾಕಿದ್ದನ್ನು ನೋಡಿದ ಶೆಟ್ಟರ್ ಬೆಂಬಲಿಗರು ಕೂಡಾ ಕಣ್ಣೀರಾಗಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಇಂದು ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಕಳೆದ ಹಲವಾರು ತಿಂಗಳುಗಳಿಂದ ನನಗೆ ತೊಂದರೆ ಕೊಡುವ ಕೆಲಸ ಆಗಿದೆ. ಬಿಜೆಪಿಯಲ್ಲಿ ಅಪಮಾನ ಆಗುವ ರೀತಿ ನಡೆದುಕೊಂಡಿದ್ದಾರೆ. ಹೀಗಾಗಿ ಮನನೊಂದು ಕಾಂಗ್ರೆಸ್…

Read More

ಬಳ್ಳಾರಿ: ರಾಜ್ಯ ರಾಜಕೀಯದಲ್ಲಿ ಚುನಾವಣಾ ಹೊತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಗೆ ಶಾಕ್ ಮೇಲೆ ಶಾಕ್ ಗಳನ್ನು ನಾಯಕರು ನೀಡುತ್ತಿದ್ದಾರೆ. ಈಗಾಗಲೇ ಹಲವರು ಟಿಕೆಟ್ ಅಸಮಾಧಾನದಿಂದ ಪಕ್ಷ ತೊರೆದಿದ್ದರು. ಈ ಸರಣಿ ಮತ್ತೆ ಮುಂದುವರೆಯಲಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಅನಿಲ್ ಲಾಡ್ ಕೈ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಬಳ್ಳಾರಿ ನಗರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ನಿರೀಕ್ಷೆಯಲ್ಲಿ ಮಾಜಿ ಶಾಸಕ ಅನಿಲ್ ಲಾಡ್ ಇದ್ದರು. ಆದ್ರೇ ಕಾಂಗ್ರೆಸ್ ಪಕ್ಷದ ಟಿಕೆಟ್ ಅವರಿಗೆ ಕೈ ತಪ್ಪಿತ್ತು. ಈ ಕಾರಣದಿಂದಲೇ ಬಳ್ಳಾರಿ ನಗರದಲ್ಲಿ ಕಾಂಗ್ರೆಸ್ ಬಂಡಾಯದ ಬಿಸಿ ಎದುರಾಗಿದೆ. ಮಾಜಿ ಶಾಸಕ ಅನಿಲ್ ಲಾಡ್ ಅವರು ಬಳ್ಳಾರಿ ನಗರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಅನಿಲ್ ಲಾಡ್ ರಾಜೀನಾಮೆಯನ್ನು ಕೂಡ ನೀಡಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಶೀಘ್ರವೇ ನಿರ್ಧಾರವನ್ನು ಅವರು ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ.

Read More

ಬಳ್ಳಾರಿ: ಮಾಜಿ ಸಚಿವ ಗಣಿ ಧಣಿ ಗಾಲಿ ಜನಾರ್ಧನ ರೆಡ್ಡಿ (Janardhan Reddy) ಬಿಜೆಪಿಯಿಂದ (BJP) ಹೊರ ಬಂದು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ” (KRPP) ವನ್ನು ಸ್ಥಾಪಿಸಿದ್ದಾರೆ. ಕಲ್ಯಾಣ ಕರ್ನಾಟಕವನ್ನು ಗುರಿಯಾಗಿಸಿಕೊಂಡು ಪಕ್ಷ ಸ್ಥಾಪಿಸಿದ್ದು, ಈ ಬಾರಿಯ ಚುನಾವಣೆಗೆ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳನ್ನು ಸುತ್ತುತ್ತಿದ್ದು, ಇದು ರಾಷ್ಟ್ರೀಯ ಪಕ್ಷಗಳಿಗೆ ತೆಲೆನೋವಾಗಿದೆ. ಜನಾರ್ದನ ರೆಡ್ಡಿ ಪಕ್ಷ, ಬಿಜೆಪಿ ಪಾಲಿಗೆ ಮುಳುವಾಗು ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯ ಕೆಲ ಮತಗಳು ರೆಡ್ಡಿ ಪಾಲಾಗುವ ಸಂಭವವಿದೆ. ಜನಾರ್ದನ ರೆಡ್ಡಿ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧವಾಗಿದ್ದಾರೆ. ಇದರಿಂದ ಈ ಕ್ಷೇತ್ರಗಳಲ್ಲಿ ಬಿಜೆಪಿಯ ಮತಗಳು ಇಬ್ಬಾವಾಗಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಇನ್ನು ಜನಾರ್ದನ ರೆಡ್ಡಿ ಈಗಾಗಲೇ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಲಕ್ಮೀ ಅರುಣಾ ಅವರನ್ನು, ಬಿಜೆಪಿ ಅಭ್ಯರ್ಥಿ, ಸಹೋದರ ಸೋಮಶೇಖರ ರೆಡ್ಡಿ ವಿರುದ್ಧ ಕಣಕ್ಕಿಳಿಸಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಅತ್ತೆ ಮತ್ತು ಮೈದುನ ನಡುವೆ ಪೈಪೋಟಿ…

Read More

ಹುಬ್ಬಳ್ಳಿ: ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ. ಆದರೆ ನನಗೆ ಸಕಾರಾತ್ಮ ಜನರ ವಿಶ್ವಾಸ ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ. ಕಾಂಗ್ರೆಸ್ ಗೆ ಸೇರ್ಪಡೆಯಾದ ಕೂಡಲೇ ಬಿಜೆಪಿಯನ್ನು ಬೈಯಬೇಕೆಂದಿಲ್ಲ. ಬಿಜೆಪಿಯನ್ನು ಬೈಯಲ್ಲ ಆದರೆ ಕೆಲ ವ್ಯಕ್ತಿಗಳು ಇದ್ದಾರಲ್ಲಾ, ಅವರ ಬಗ್ಗೆ ಬೇಸರವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,‌ ಬೆಂಗಳೂರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ‌. ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸೇರ್ಪಡೆಯಾಗಿದ್ದೇನೆ‌. ಬಿಜೆಪಿ ಕಟ್ಟಿ ಬೆಳೆಸಿದ ನನಗೆ ಉಸಿರುಗಟ್ಟುವಂತಾಯಿತು ಹೀಗಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಅವರು ಹೇಳಿದರು. ನನ್ನ ಬೆಂಬಲಿಗರನ್ನು ಎಷ್ಟು ದಿನ ಬೆದರಿಸಿ ಇಟ್ಟುಕೊಳ್ಳಲು ಸಾಧ್ಯ.? ಅವರು ದೈಹಿಕವಾಗಿ ಅಲ್ಲಿರಬಹುದು. ಮಾನಸಿಕವಾಗಿ ನಮ್ಮ ಜೊತೆಗೇ ಇದ್ದಾರೆ. ಬಲವಂತವಾಗಿ ಹಿಡಿದಿಟ್ಟಿಕೊಳ್ಳಲು ಸಾಧ್ಯವಿಲ್ಲ ಒಂದಲ್ಲ ಒಂದು ದಿನ‌ ಹೊರಗೆ ಬರುತ್ತಾರೆ ಎಂದು ಅವರು ಅಭಿಮಾನಿಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

Read More

ಹುಬ್ಬಳ್ಳಿ : ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಅತ್ಯಂತ ಹೆಚ್ಚು ಪ್ರಭಾವಿ ನಾಯಕ ಜಗದೀಶ್ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ ಆಗುತ್ತಲೇ ಬಿಜೆಪಿ ಅಲರ್ಟ್ ಆಗಿದೆ. ಬಿಜೆಪಿಯ ಮೇಲೆ ಲಿಂಗಾಯತ ಸಮುದಾಯ ತೀವ್ರ ಮುನಿಸಿಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ  ರಾಜಕೀಯ ಬೆಳವಣಿಗಳು ನಡೆಯುತ್ತಿದ್ದು,  ಇದನ್ನೆಲ್ಲ ಶಮನ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಬಿಜೆಪಿಗೆ ತೀವ್ರ ಹಿನ್ನೆಡೆಯ ಆತಂಕ ಎದುರಾಗಿದೆ.  ಜಗದೀಶ್ ಶೆಟ್ಟರ್ ಪಕ್ಷ ತೊರೆದಿದ್ದರ ಎಫೆಕ್ಟ್ ಉತ್ತರ ಕರ್ನಾಟಕ ವ್ಯಾಪ್ತಿಸದಂತೆ ಬಿಜೆಪಿ ತೆರೆಮರೆಯಲ್ಲಿ ಯೋಜನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಏ.18 ರಂದು ಸಾಯಂಕಾಲ ಜೆ.ಪಿ.ನಡ್ಡಾ ಹುಬ್ಬಳ್ಳಿಗೆ ಬರಲು ವೇಳೆ ನಿಗದಿ ಪಡಿಸಲಾಗಿದೆ . ಎರಡು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹುಬ್ಬಳ್ಳಿಯಲ್ಲಿಯೇ ಬೀಡು ಬಿಡಲಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ನಡೆಯುವ ಎರಡೂ…

Read More

ರಾಮನಗರ: ರಾಮನಗರ (Ramanagara) ಕ್ಷೇತ್ರದ ಜೆಡಿಎಸ್ (JDS) ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಹೋಗುವ ವೇಳೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರ ನಿವಾಸದಲ್ಲಿ ಭಾವುಕ ವಾತಾವರಣ ಸೃಷ್ಟಿಯಾಗಿತ್ತು. ಸೋಮವಾರ ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮಾಜಿ ಪ್ರಧಾನಿ ದೇವೆಗೌಡರಿಂದ (HD Devegowda) ಬಿ. ಫಾರಂ ಪಡೆದು ಆಶೀರ್ವಾದ ಪಡೆದುಕೊಳ್ಳಲು ಬಂದಿದ್ದರು. ಈ ವೇಳೆ ಹೆಚ್.ಡಿ ದೇವೇಗೌಡರು ಬಿ. ಫಾರಂ ನೀಡುತ್ತಿದ್ದಂತೆ ನಿಖಿಲ್ ಭಾವುಕರಾಗಿ ಕಣ್ಣೀರು ಹಾಕಿದರು ಅದಾದ ಬಳಿಕ ಹೆಚ್‍ಡಿಡಿ ಅವರಿಂದ ಬಿ. ಫಾರಂ ಪಡೆದರು. ಚುನಾವಣೆಯಲ್ಲಿ ಗೆಲುವು ಸಾಧಿಸಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಚೆನ್ನಮ್ಮರ ಆಶೀರ್ವಾದ ಪಡೆದರು. ನಿಖಿಲ್ ಕುಮಾರಸ್ವಾಮಿ ಬಿ ಫಾರಂ ಪಡೆಯುವ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ಹಾಗೂ ಪತ್ನಿ ರೇವತಿ ಭಾಗಿಯಾಗಿದ್ದರು.

Read More

ಹಾವೇರಿ: ಜಗದೀಶ್ ಶೆಟ್ಟರ್ (Jagadish Shettar) ದೇಶದ ಪ್ರಧಾನಿಯಾಗಲು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ (BC Patil) ವ್ಯಂಗ್ಯವಾಡಿದರು. ಹಿರೇಕೆರೂರ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ (BJP) ಜಗದೀಶ್‌ ಶೆಟ್ಟರ್ ರಾಜ್ಯದ ಉನ್ನತ ಸ್ಥಾನಗಳನ್ನು ಅನುಭವಿಸಿ ಇಂದು ಕಾಂಗ್ರೆಸ್ (Congress) ಸೇರ್ಪಡೆ ಆಗುತ್ತಿರುವುದು ನಿಜಕ್ಕೂ ಖಂಡನೀಯ. ಬಿಜೆಪಿ ಇಷ್ಟೆಲ್ಲ ಅನುಭವಿಸಿದ ನಂತರವೂ ಹೀನಾಯ ಪರಿಸ್ಥಿತಿಯಲ್ಲಿರುವ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದಾರೆ ಅಂದರೆ ಬಹುಶಃ ಅವರಿಗೆ ರಾಜ್ಯದ ಮುಖ್ಯಮಂತ್ರಿ ಅಥವಾ ದೇಶದ ಪ್ರಧಾನಿ ಮಾಡುವ ಮಾತನ್ನು ಕಾಂಗ್ರೆಸ್‌ನವರು ಕೊಟ್ಟಿರಬಹುದು. ಅದಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ಹೇಳಿದರು. ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧೋಗತಿಗೆ ಬಂದಿದೆ. ಯಾರು ಬರ್ತಿರಾ ಬನ್ನಿ ಬನ್ನಿ ಅಂತಾ ಟಿಕೆಟ್ ಹಿಡ್ಕೊಂಡ್ ನಿಂತಿದ್ದಾರೆ. ಬಸ್ ಸ್ಟ್ಯಾಂಡ್‌ನಲ್ಲಿ ಟಿಕೆಟ್ ಎನ್ನುವ ಹಾಗೇ ಕಾಂಗ್ರೆಸ್ ನಾಯಕರು ಟಿಕೆಟ್ ಕೊಡುವುದಕ್ಕೆ ನಿಂತಿದ್ದಾರೆ. ಸವದಿ, ಶೆಟ್ಟರ್ ತೆಗೆದುಕೊಂಡಿರುವ ನಿರ್ಧಾರ ನಿಜಕ್ಕೂ ಖಂಡನೀಯ. ಸೋತಿದ್ರು ಸಹಿತ ಅವರನ್ನು ಡಿಸಿಎಂ ಮಾಡಿ ಎಂಎಲ್‌ಸಿ…

Read More

ವಿಜಯಪುರ: ವಿಧಾನಸಭಾ ಚುನಾವಣೆ ಟಿಕೆಟ್ ದೊರೆತಿಲ್ಲ ಎಂಬ ಕಾರಣಕ್ಕೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಅಯೋಧ್ಯೆ, ಹಿಂದುತ್ವದ ಬಗ್ಗೆಯೆಲ್ಲಾ ಮಾತನಾಡುತ್ತಿದ್ದಿರಿ. ಬಿಜೆಪಿ ನಿಮ್ಮನ್ನು ಸಿಎಂ, ಡಿಸಿಎಂ ಅನ್ನಾಗಿ ಮಾಡಿತ್ತು. ಇಷ್ಟೆಲ್ಲಾ ಅನುಭವಿಸಿ ಈಗ ಕಾಂಗ್ರೆಸ್ ಗೆ ಹೋಗ್ತಿದ್ದಾರಲ್ಲ? ನಿಮ್ಗೆಲ್ಲಾ ಮಾನ, ಮರ್ಯಾದೆ, ಸ್ವಾಭಿಮಾನ ಅನ್ನುವುದು ಇದ್ಯಾ ಎಂದು ಪ್ರಶ್ನಿಸಿದರು. ಈ ಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದ ಸರಕಾರ ಬರುತ್ತದೆ. ಇವರು ಯಾರು ಹೋದ್ರೂ ಇಲ್ಲಿ ಯಾರ ಡೆಪಾಸಿಟ್ ಗೂ ತೊಂದರೆ ಆಗುವುದಿಲ್ಲ. ಪ್ರಾಮಾಣಿಕರಿಗೆ ಹೊಸ ಅವಕಾಶ ನೀಡಬೇಕೆಂಬ ಕಾರಣಕ್ಕೆ ಪಕ್ಷ ಈ ಬಾರಿ ನಿರ್ಣಯ ತೆಗೆದುಕೊಂಡಿದೆ. ಎಲ್ಲ ಕಸವನ್ನು, ವೇಸ್ಟ್ ಬಾಡಿಗಳನ್ನು ತೆಗೆದು ಸ್ವಚ್ಛವಾದ ಕರ್ನಾಟಕ ಕೊಡಲು ಬಿಜೆಪಿ ಗಟ್ಟಿ ನಿರ್ಣಯ ತೆಗೆದುಕೊಂಡಿದೆ. ರಾಜ್ಯದಲ್ಲಿ ನಿಮ್ಮ ಅಧ್ಯಾಯ ಕೊನೆಯಾಗುತ್ತದೆ. ಏನೋ ದುಡುಕಿನಿಂದ ಈ ನಿರ್ಣಯ ಮಾಡಿದ್ದೀರಿ.…

Read More