ಚಿಕ್ಕಬಳ್ಳಾಪುರ: ಇಡೀ ರಾಜ್ಯದ ಗಮನ ಸೆಳೆದಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ. ಕೆ. ಸುಧಾಕರ್ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಮುನ್ನಡೆ ಸಾಧಿಸಿದ್ದಾರೆ. ಆಂಧ್ರ ಗಡಿಗೆ ಹೊಂದಿಕೊಂಡಂತಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆ ವೇಳೆ, ಹಣ, ಜಾತಿ, ಅಭಿವೃದ್ಧಿ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬಂದಿದ್ದವು. ಆರಂಭದಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ. ಕೆ. ಸುಧಾಕರ್ ಜಯಭೇರಿ ಬಾರಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾದ ಸುಧಾಕರ್, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪ ಚುನಾವಣೆ ಎದುರಾಯ್ತು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ಡಾ. ಕೆ. ಸುಧಾಕರ್, ರಾಜ್ಯ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು.
Author: Prajatv Kannada
ಶಿವಮೊಗ್ಗ: ರಾಜ್ಯಾದ್ಯಂತ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ವಿಧಾನಸಭಾ ಚುನಾವಣಾ ಮತದಾನಕ್ಕಿಂತ ಒಂದು ವಾರದಿಂದ ಮೊಲದೇ 80 ವರ್ಷ ಮೇಲ್ಪಟ್ಟ ವೃದ್ಧರು, ಪೊಲೀಸರು, ಚುನಾವಣಾ ಕಾರ್ಯಕ್ಕೆ ತೆರಳುವ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಈಗ ಮೊದಲು ಅಂಚೆ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 91, ಕಾಂಗ್ರೆಸ್ 100, ಜೆಡಿಎಸ್ 18 ಹಾಗೂ 2 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ರಾಜ್ಯಾದ್ಯಂತ ಮತ ಎಣಿಕೆ ಆರಂಭ: 100ಕ್ಕೂ ಅಧಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದೆ. ಇನ್ನೂ ಶಿಕಾರಿಪುರದಲ್ಲಿ ಬಿಜೆಪಿಯ ವಿಜಯೇಂದ್ರ ಮುನ್ನಡೆಯಾಗಿದ್ದಾರೆ.
KR Puram Assembly Election Result Live: ಕೆ.ಆರ್.ಪುರಂ ಬಿಜೆಪಿ ಭೈರತಿ ಬಸವರಾಜ್ ಮುನ್ನಡೆ ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಮುನ್ನಡೆ.
ಹುಬ್ಬಳ್ಳಿ: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು(Karnataka Assembly Elections 2023 Result)ಇಡೀ ರಾಜ್ಯದ ಚಿತ್ತ ಮತ ಎಣಿಕೆಯತ್ತ ನೆಟ್ಟಿದೆ. ಇಂದು ರಾಜಕೀಯ ನಾಯಕರ ಭವಿಷ್ಯ ಹೊರ ಬೀಳಲಿದ್ದು ಘಟಾನುಘಟಿ ನಾಯಕರು ದೇವರ ಮೊರೆ ಹೋಗಿದ್ದಾರೆ. ಬೆಳ್ಳಂ ಬೆಳಗ್ಗೆಯೇ ದೇವಸ್ಥಾನಗಳಿಗೆ ಹೋಗಿ ವಿಶೇಷ ಪೂಜೆಗಳನ್ನು ಮಾಡಿಸುತ್ತಿದ್ದಾರೆ. ಇನ್ನು ಮತ್ತೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿಯವರು(Basavaraj Bommai) ಕೂಡ ಹುಬ್ಬಳ್ಳಿಯ ವಿಜಯನಗರದಲ್ಲಿರೋ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶಿಗ್ಗಾಂವಿಗೆ ತೆರಳೋ ಮುನ್ನ ಆಂಜನೇಯನ ದರ್ಶನ ಮಾಡಿದ್ದಾರೆ. ಇನ್ನು ಮಾಧ್ಯಮಗಳಿಗೆ ಪ್ರಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಇವತ್ತು ಕರ್ನಾಟಕ ವಿಧಾನ ಸಭೆಯ ಫಲಿತಾಂಶದ ದಿನ. ಈ ಫಲಿತಾಂಶ ಬಹಳಷ್ಟು ಮುಖ್ಯ. ರಾಜ್ಯ, ಅಭಿವೃದ್ಧಿ, ಜನರ, ರಾಜಕೀಯ ದೃಷ್ಟಿಯಿಂದ ಬಹಳಷ್ಟು ಮುಖ್ಯ. ಮುಂದಿನ ಐದು ವರ್ಷದ ರಾಜ್ಯ ಅಭಿವೃದ್ಧಿ ಮತ್ತು ಸುರಕ್ಷಿತವಾಗಿ ನಾಡು ಮಾಡುವ ನಿಟ್ಟಿನಲ್ಲಿ ಜನ ಮತ ನೀಡಿದ್ದಾರೆಂಬ ನಂಬಿಕೆಯಿದೆ. ನಮ್ಮ ಬಿಜೆಪಿ ಸ್ಪಷ್ಟ ಬಹುಮತದಿಂದ ಜಯಸಾಧಿಸಲಿದೆ ಎಂಬ ವಿಶ್ವಾಸವಿದೆ.
ರಾಮನಗರ: ಚನ್ನಪಟ್ಟಣ ಕ್ಷೇತ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿದೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿಪಿ ಯೋಗೇಶ್ವರ್ ಕಣದಲ್ಲಿದ್ದು, ಪ್ರಸ್ತುತ ನಡೆಯುತ್ತಿರುವ ಮತ ಎಣಿಕೆಯಲ್ಲಿ ಹಾವು ಏಣಿ ಆಟ ಶುರುವಾಗಿದೆ.ಅಂಚೆ ಮತಗಳಲ್ಲಿ ಮಾಜಿ ಸಿಎಂ ಎಚ್ಡಿಕೆ ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಮತಯಂತ್ರದ ಮತ ಎಣಿಕೆ ಆರಂಭವಾಗಿದ್ದು, ಎಚ್ಡಿಕೆಯನ್ನು ಹಿಂದಿಕ್ಕಿ ಸಿ.ಪಿ. ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ರಾಮನಗರ ಕ್ಷೇತ್ರದಲ್ಲಿ ಎಚ್ಡಿಕೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮುನ್ನಡೆಯನ್ನು ಸಾಧಿಸಿದ್ದಾರೆ.
ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಸದ್ಯ ಅಂಚೆ ಮತ ಎಣಿಕೆ ಕಾರ್ಯ ನಡೆಯುತ್ತಿದೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಮುನ್ನಡೆಯಾಗಿದ್ದು, ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.
Gokak Assembly Election Result Live: ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿಗೆ ಹಿನ್ನಡೆ ಗೋಕಾಕ್: ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿಗೆ ಹಿನ್ನಡೆ
2023ರ ಕರ್ನಾಟಕ ವಿಧಾನಸಭೆ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗಿದೆ 224 ಕ್ಷೇತ್ರಗಳಲ್ಲಿ 223ರಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದರೆ, ಬಿಜೆಪಿ 224ರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಳಿಸಿದೆ. ಮುನ್ನಡೆ – ಬಿಜೆಪಿ: 99 ಕಾಂಗ್ರೆಸ್ : 114 ಜೆಡಿಎಸ್: 29 ಇತರೆ 04 ಬೆಳಗ್ಗೆ 9 ಗಂಟೆವರೆಗೆ ನಡೆದ ಮತ ಮಣಿಕೆ ಪ್ರಕ್ರಿಯೆ ಪ್ರತೀ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಹಾಗೂ ಫಲಿತಾಂಶದ ನಿಖರವಾದ ಇಂಚಿಂಚೂ ಮಾಹಿತಿ, ಲೈವ್ ಅಪ್ ಡೇಟ್ ಗಾಗಿ prajaatvkannadanews ಫಾಲೋ ಮಾಡಿ
ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ (HD Kumaraswamy) ಅವರು ಮತದಾನ ಮುಗಿದ ಬಳಿಕ ಸಿಂಗಾಪುರಕ್ಕೆ ತೆರಳಿದ್ದರು. ಮೇ 10ರ ರಾತ್ರಿ ಅವರು ವಿಮಾನ ಏರಿದ್ದರು. ಅವರು ಅಲ್ಲಿಗೆ ತೆರಳಿದ್ದು ಏಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಇದಕ್ಕೆ ಅವರ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿದೆ. ತಾವು ಅಲ್ಲಿಗೆ ತೆರಳಿದ್ದು ಏಕೆ ಎಂಬುದನ್ನು ಅವರು ವಿವರಿಸಿದ್ದಾರೆ. ಇಂದು (ಮೇ 13) ಮತ ಎಣಿಕೆ ಆರಂಭ ಆಗಿದ್ದು, ಅದಕ್ಕೂ ಮೊದಲು ಅವರು ಬೆಂಗಳೂರಿಗೆ ಮರಳಿದ್ದಾರೆ. ಕಳೆದ ಒಂದು ತಿಂಗಳಿಂದ ಕುಮಾರಸ್ವಾಮಿ ಅವರು ಪ್ರಚಾರದಲ್ಲಿ ಬ್ಯುಸಿ ಆಗಿದ್ದರು. ವಿವಿಧ ಕ್ಷೇತ್ರಗಳಿಗೆ ತೆರಳಿ ಅವರು ಮತಯಾಚನೆ ಮಾಡಿದ್ದರು. ಚುನಾವಣೆ ಪ್ರಚಾರದ ಮಧ್ಯೆಯೇ ಒಮ್ಮೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಮತದಾನ ಪೂರ್ಣಗೊಂಡ ಬಳಿಕ ಅವರು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಿದ್ದಾರೆ. ‘ಆರೋಗ್ಯ ತಪಾಸಣೆ ಮಾಡಬೇಕಿತ್ತು, ವಿಶ್ರಾಂತಿ ಪಡೆಯಬೇಕಿತ್ತು. ಎರಡು ದಿನ ಅದನ್ನು ಮಾಡಿದ್ದೇನೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಮೈತ್ರಿಗೆ ಸಿದ್ಧ ಕುಮಾರಸ್ವಾಮಿ ಅವರು ಇತ್ತೀಚೆಗೆ ಮೈತ್ರಿಗೆ ಸಿದ್ಧ ಎನ್ನುವ ಮಾತನ್ನು…
ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರಗೆ ಮುನ್ನಡೆ ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರಗೆ ಮುನ್ನಡೆ