Author: Prajatv Kannada

ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಹೊಳೆಗಂಗೂರು ಗ್ರಾಮದಲ್ಲಿ ಸೋಮವಾರ ಸಂಜೆ ನೀರಿನ ತೊಟ್ಟಿಗೆ ಬಿದ್ದಿದ್ದ ಹಸುವೊಂದನ್ನು ಭದ್ರಾವತಿ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಹೊಳೆಗಂಗೂರು ಗ್ರಾಮದಲ್ಲಿ ಹೊಸದಾಗಿ ಮನೆ ಕಟ್ಟುತ್ತಿದ್ದು ಅದಕ್ಕಾಗಿ ಎಂಟು ಅಡಿ ಆಳದ ಸಂಪ್ ನಿರ್ಮಾಣ ಮಾಡಲಾಗಿತ್ತು. ಅದರ ಕೆಲಸ ಪೂರ್ಣಗೊಳ್ಳದ ಹಿನ್ನೆಲೆ ಅಡಕೆ ದಬ್ಬೆ ಹಾಕಿ ಮುಚ್ಚಲಾಗಿತ್ತು. ಮಾಮೂಲಿಯಂತೆ ಕೊಟ್ಟಿಗೆಗೆ ಹೋಗಬೇಕಿದ್ದ ಹಸು ಅಕಸ್ಮಾತ್ ಸಂಪ್ ಮೂಲಕ ಹೊರಟಿದೆ. ಅಡಕೆ ದೆಬ್ಬೆ ಮೇಲೆ ಕಾಲಿಟ್ಟ ಪರಿಣಾಮ ಏಕಾಏಕಿ ಗುಂಡಿಗೆ ಬಿದ್ದಿದೆ. ತಕ್ಷಣ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರು. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ಹಸುವಿಗೆ ಬೆಲ್ಟ್ ಕಟ್ಟಿ ಜೆಸಿಬಿ ಸಹಾಯದಿಂದ ಮೇಲಕ್ಕೆ ಎತ್ತಿದ್ದಾರೆ. ಹಸುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆರೋಗ್ಯದಿಂದ ಇದೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಎಸ್‌ಎಸ್‌ಒ ಹುಲಿಯಪ್ಪ, ಸಿಬ್ಬಂದಿ ಅಶೋಕ್ ಕುಮಾರ್, ಶೇಖರ್, ಸುರೇಶ್, ರಾಜ ನಾಯಕ್ ಸೇರಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

Read More

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹೆಸರು ಕೇಳಿ ಬಂದಿದ್ದರಿಂದ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಿದ್ದಾರೆ. ಸುಮಾರು ಮೂರು ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ರನ್ನು ಇದೀಗ ಬಳ್ಳಾರಿ ಜೈಲಿಗೆ ಶಿಫ್ಟ್​ ಆಗಿದ್ದಾರೆ. ಸದ್ಯ ಈ ಪ್ರಕರಣದ ತನಿಖೆ ​​ಅಂತಿಮ ಹಂತದಲ್ಲಿದ್ದು, ಇಂದು ಚಾರ್ಜ್​​ಶೀಟ್​ ಸಲ್ಲಿಸಲು ಪೊಲೀಸರು ಸಜ್ಜಾಗಿದ್ದಾರೆ. ಅಂದ ಹಾಗೆ ಪೊಲೀಸ್​​ ಇಲಾಖೆ ಚಾರ್ಜ್​ಶೀಟ್​ಗಾಗಿ ಸಾಕಷ್ಟು ಹಣ ಖರ್ಚು ಮಾಡಿದೆ ಎನ್ನಲಾಗುತ್ತಿದೆ. ಪೊಲೀಸ್​ ಇಲಾಖೆಯು ಪ್ರಕರಣದ ತನಿಖೆಗೆ ₹5 ಲಕ್ಷ ಹಣ ಖರ್ಚು ಮಾಡಿದೆ ಎಂದು ತಿಳಿದುಬಂದಿದೆ. ಕೊಲೆ ಪ್ರಕರಣದ ಸಂಬಂಧ 22 ಬಂಡಲ್ ಚಾರ್ಚ್ ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದು, ಒಟ್ಟಾರೆ 90 ಸಾವಿರ ಪುಟಗಳಿಗೆ 90 ಸಾವಿರ ರೂಪಾಯಿ ಖರ್ಚು ಮಾಡಿದ್ದಾರೆ. ಉಳಿದ ಹತ್ತು ಸಾವಿರ ರೂಪಾಯಿ ಕವರ್ ಬೈಂಡಿಂಗ್​​ಗೆ ಎಂದು ಖರ್ಚು ಮಾಡಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ. 17 ಆರೋಪಿಗಳಿಗೂ ಒಂದೊಂದು ಕಾಪಿ ಚಾರ್ಜ್​ಶೀಟ್ ಸಲ್ಲಿಸಬೇಕು.…

Read More

ಮಲಯಾಳಂನ ಪ್ರೇಮಂ ಸಿನಿಮಾದ ಮೂಲಕ ಖ್ಯಾತಿ ಘಳೀಸಿದ ನಟ ನಿವಿನ್ ಪೌಲಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ನಟಿಯೊಬ್ಬರು ನಿವಿನ್ ಪೌಲಿ ವಿರುದ್ಧ ಗಂಭೀರ ಆರೋಪ ಮಾಡಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ. ಜಸ್ಟಿಸ್ ಹೇಮಾ ವರದಿಯ ಬಳಿಕ ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಘಟನೆಗಳು ನಡೆಯುತ್ತಿವೆ. ಮಹಿಳೆಯರು ತಮ್ಮ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯದ ಕುರಿತು ಮಾತನಾಡುತ್ತಿದ್ದಾರೆ. ಇದೀಗ ನಿವಿನ್ ಪೌಲಿ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪ ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ. ‘ಹೇಮಾ ಕಮಿಟಿ ವರದಿ’ಯಲ್ಲಿ ಮಲಯಾಳಂ ಚಿತ್ರರಂಗ ಕರಾಳ ಮುಖ ಬಯಲಾಗಿದೆ. ಈಗ ನಟಿಯೊಬ್ಬರು ‘ಪ್ರೇಮಂ’ ಸಿನಿಮಾದ ಖ್ಯಾತಿಯ ಹೀರೋ ನಿವಿನ್​ ಪೌಲಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಿನಿಮಾದ ಮಾತುಕಥೆ ಸಲುವಾಗಿ ದುಬೈಗೆ ತೆರಳಿದ್ದಾಗ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಮಹಿಳೆ ಆರೋಪಿಸಿದ್ದಾರೆ. ಈ ಕೇಸ್​ನಲ್ಲಿ ನಟ ನಿವಿನ್​ ಪೌಲಿ 6ನೇ ಆರೋಪಿ ಆಗಿದ್ದಾರೆ. ಶ್ರೇಯಾ ಎಂಬ ಮಹಿಳೆ ಎ1 ಆಗಿದ್ದಾರೆ. ನಿರ್ಮಾಪಕ…

Read More

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಗ್ಯಾಂಗ್ ​ನ ಮೂವರು ಆರೋಪಿಗಳು ಭಾಗಿಯಾಗಿಲ್ಲ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಿಖಿಲ್ ನಾಯ್ಕ್, ಕೇಶವಮೂರ್ತಿ ಹಾಗೂ ಕಾರ್ತಿಕ್ ಕೊಲೆಯಲ್ಲಿ ಭಾಗಿಯಾಗಿಲ್ಲ ಅನ್ನೋದನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಈ ಮೂವರು ರೇಣುಕಾಸ್ವಾಮಿಯನ್ನು ತಾವೇ ಕೊಲೆ ಮಾಡಿದ್ದಾಗಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದರು. ಮೃತದೇಹ ಸಾಗಾಟ ಹಾಗೂ ಶರಣಾಗತಿ ಆಗಲು ಮೂವರು ಒಟ್ಟಿಗೆ ಇದ್ದರು. ಆದರೆ ಕೊಲೆಯಲ್ಲಿ ಮೂವರ ಪಾತ್ರ ಏನೂ ಇಲ್ಲ ಎಂಬುವುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಈ ಮೂವರ ವಿರುದ್ಧ ಚಾರ್ಜ್​​​ ಶೀಟ್​​​ನಲ್ಲಿ 201 ಅಡಿ ಸಾಕ್ಷಿ ನಾಶ ಆರೋಪವಿದೆ. ಮೂವರ ವಿರುದ್ಧ ಸಾಕ್ಷ್ಯ ನಾಶ ಮಾಡಿದ ಆರೋಪ ಪ್ರಸ್ತಾಪ ಮಾಡಲಾಗಿದೆ ಸಾಕ್ಷಿ ನಾಶ ಹಾಗೂ ಪೊಲೀಸರಿಗೆ ಸುಳ್ಳು ಮಾಹಿತಿ ಆರೋಪ ಇರುವುದರಿಂದ ಇವರಿಗೆ ಬೇಗ ಜಾಮೀನು…

Read More

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಆರೋಪ ಒಪ್ಪಿಕೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಶುರುವಾಗಿದೆ. ಮುಡಾ ಸೈಟ್ ಪ್ರಕರಣವನ್ನು ಬಯಲಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರ್ ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಬೆದರಿಕೆ ಹಾಕಲ್ಪಟ್ಟಿರುವ ಆರೋಪ ವ್ಯಕ್ತವಾಗಿದೆ. ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿ ಬೈಕ್ ಗಳಲ್ಲಿ ಬಂದಿದ್ದ ಅಪರಿಚಿತರು ಬೆದರಿಕೆ ಹಾಕಿದ್ದಾರೆ ಎಂದು ಗಂಗರಾಜು ಆರೋಪ ಮಾಡಿದ್ದಾರೆ. ಹೀಗಾಗಿ ಪ್ರಕರಣ ಹೈಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿರುವಾಗಲೇ ಬೆದರಿಕೆ ಹಾಕಲ್ಪಟ್ಟಿರುವ ವಿಚಾರ ಇಡೀ ಪ್ರಕರಣಕ್ಕೆ ಮತ್ತೊಂದು ತಿರುವು ಕೊಡುವ ಸಾಧ್ಯತೆ ಇದೆ. ಇದೇ ವೇಳೆ ಗಂಗರಾಜು ಸೇರಿದಂತೆ ದೂರುದಾರರಿಗೆ ಸಿಎಂ ಕಡೆಯಿಂದ ಅಥವಾ ಸಿಎಂ ಹೆಸರಿನಲ್ಲಿ ಅಪಾಯ ಉಂಟಾಗುವ ಆತಂಕ ವ್ಯಕ್ತಪಡಿಸಿರುವ ಬಿಜೆಪಿ ಸೂಕ್ತ ರಕ್ಷಣೆ ಕೊಡುವಂತೆ ಆಗ್ರಹಿಸಿದೆ. ಇನ್ನು ಸಿಎಂ ಸಿದ್ದರಾಮಯ್ಯ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ. ಈ ಒಂದು ಆದೇಶ ಸಿಎಂಗೆ ಮುಳ್ಳಾಗುತ್ತಾ ಎಂಬ ಪ್ರಶ್ನೆ ಎದುರಾಗಿದೆ. ಈ…

Read More

ಬೆಂಗಳೂರು:- ಐಷಾರಾಮಿ ಬದುಕು, ವೃತ್ತಿ ಜೀವನ ಆರಂಭವಾದಾಗಿನಿಂದ ದರ್ಶನ್ ಅಕ್ಷರಶಃ ಚಕ್ರವರ್ತಿಯಂತೆ, ಸ್ಯಾಂಡಲ್​ವುಡ್​ನ ಅನಭಿಷಕ್ತ ದೊರೆಯಂತೆ ಮರೆದು ಬಿಟ್ಟವರು. ಆದ್ರೆ ಈಗ ಕಾಲಚಕ್ರ ಬದಲಾಗಿದೆ. ಹಾಗೆಲ್ಲ ಬದುಕಿದ ದರ್ಶನ್ ಈಗ ಹೇಗೇಗೋ ಬದುಕುತ್ತಿದ್ದಾರೆ. ದರ್ಶನ್​ರ ಈಗಿನ ಬದುಕಿಗೆ ಮೂಕ ಸಾಕ್ಷಿಯಾಗಿ ನಿಂತಿದೆ ಬಳ್ಳಾರಿ ಕೇಂದ್ರ ಕಾರಾಗೃಹ ಜೈಲು. ಬಳ್ಳಾರಿ ಜೈಲಲ್ಲಿರೋ ದರ್ಶನ್‌, ಒಂಟಿತನ, ಸೊಳ್ಳೆಕಾಟ, ಹೊಟ್ಟೆ ಸಮಸ್ಯೆ, ನಿತ್ಯ ಕರ್ಮದ ಸಮಸ್ಯೆ ಸೇರಿದಂತೆ ಅಷ್ಟದಿಗ್ಬಂಧನದಲ್ಲಿ ಸಿಲುಕಿ ವಿಲವಿಲ ಒದ್ದಾಡ್ತಿದ್ದಾರೆ. ಹಾಗಾದ್ರೆ, ಬಳ್ಳಾರಿ ಜೈಲಲ್ಲಿ ದರ್ಶನ್‌ಗೆ ಯಾವ್‌ ಯಾವ ರೀತಿನ ನರಕ ದರ್ಶನವಾಗ್ತಿದೆ ಗೊತ್ತಾ? ಅದ್ಯಾವಾಗ ದರ್ಶನ್​ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಎತ್ತಂಗಡಿ ಆದ್ರೋ ಆಗಿಂದ ಅಕ್ಷರಶಃ ಕುಗ್ಗಿ ಹೋಗ್ತಿದ್ದಾರೆ. ಜೈಲು ಅಂದ್ರೆ ಏನು ಅನ್ನೋದು ಈಗ ಅನುಭವಕ್ಕೆ ಬರುತ್ತಿದೆ. ನರಕ ಕೂಪಕ್ಕೆ ಸಾಕ್ಷಾತ್​ ಉದಾಹರಣೆಯಂತಿರೋ ಆ ಜೈಲಿಗೆ ಶಿಫ್ಟಾಗಿ ನಾಲ್ಕೈದು ದಿನಗಳಾಗಿರಬಹುದಷ್ಟೇ ಆದ್ರೆ ಈ ನಾಲ್ಕೈದು ದಿನಗಳನ್ನ ಅಕ್ಷರಶಃ ನಾಲ್ಕೈದು ವರ್ಷಗಳಂತೆ ಕಳೀತಿದ್ದಾರೆ ದರ್ಶನ್​. ಇಲ್ಲಿದ್ದಾಗ ಕುಡಿಯೋಕೆ, ತಿನ್ನೋಕೆ, ಧಮ್​ ಹೊಡೆಯೋಕೆ…

Read More

ಬೆಂಗಳೂರು:- ಬಿಜೆಪಿ ಶಾಸಕ ಸುರೇಶ್ ಕುಮಾರ್‌ಗೆ ಅನಾರೋಗ್ಯ ಹಿನ್ನೆಲೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸುರೇಶ್ ಕುಮಾರ್ ಅವರು ತೀವ್ರ ಜ್ವರಕ್ಕೆ ತುತ್ತಾಗಿದ್ದರಂತೆ. ಜ್ವರದಿಂದ ಬಳಲುತ್ತಿದ್ದ ಸುರೇಶ್‌ ಕುಮಾರ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುರೇಶ್ ಕುಮಾರ್ ಅವರ ಮೆದುಳಿಗೂ ಜ್ವರ ತಗುಲಿರುವ ಕಾರಣ ICUನಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Read More

ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು ಕಳ್ಳಾಟವಾಡ್ತಿದ್ದ ಬ್ಯಾಂಕ್​ಗಳಿಗೆ ಬಿಸಿ ಮುಟ್ಟಿಸಿದ್ದು, ಸರ್ಕಾರದ ಖಜಾನೆಗೆ 22 ಕೋಟಿ ರೂ ಹರಿದು ಬಂದಿದೆ. ಈ ಹಿಂದೆ ಮಾಡಿದ್ದ ಎರಡು ಪ್ರತ್ಯೇಕ ನಿಶ್ಚಿತ ಠೇವಣಿಗಳನ್ನು ಹಿಂದಿರುಗಿಸಲು ಎಸ್ ಬಿಐ ಹಾಗೂ ಪಿಎನ್ ಬಿ ನಿರಾಕರಿಸಿದ್ದವು. ಇದರ ಬೆನ್ನಲ್ಲೇ ಈ ಎರಡೂ ಬ್ಯಾಂಕಿನಲ್ಲಿ ಇರಿಸಿರುವ ಸರ್ಕಾರದ ಎಲ್ಲ ಠೇವಣಿಗಳನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಬ್ಯಾಂಕ್​ಗಳು ಸರ್ಕಾರಕ್ಕೆ ನಿಶ್ಚಿತ ಠೇವಣಿಯನ್ನು ಮರುಪಾವತಿಸಿವೆ. ಈ ಮೂಲಕ ಸರ್ಕಾರಕ್ಕೆ 22 ಕೋಟಿ ರೂಪಾಯಿ ಬಂದಿದೆ. ರಾಜ್ಯ ಸರ್ಕಾರದ ಒಂದೇ ಒಂದು ಆದೇಶಕ್ಕೆ ಬೆದರಿದ ಬ್ಯಾಂಕ್​ಗಳು ವರ್ಷಗಟ್ಟಲೇ ಬಾಕಿಯಿದ್ದ 22 ಕೋಟಿ ರೂ. ಹಣ ಸರ್ಕಾರದ ಖಜಾನೆಗೆ ಜಮೆ ಮಾಡಿವೆ. ಎಸ್‌ಬಿಐನಿಂದ 9.67 ಕೋಟಿ ರೂಪಾಯಿ ಸರ್ಕಾರದ ಖಜಾನೆಗೆ ಜಮೆಯಾಗಿದೆ. ಇನ್ನು ಪಿಎನ್‌ಬಿನಿಂದ ಒಂದು ವರ್ಷದ ಬಡ್ಡಿ ಸಹಿತ 13.9 ಕೋಟಿ ರೂ. ಜಮೆಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸರ್ಕಾರಕ್ಕೆ ಬರಬೇಕಿದ್ದ 22 ಕೋಟಿ ರೂ. ಹಣವನ್ನು…

Read More

ಬೆಂಗಳೂರು:- ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿರುವ ರಾಜ್ಯ ಸರ್ಕಾರ, ಡೆಂಗ್ಯೂ ನಿಯಂತ್ರಣ ವಿಚಾರವಾಗಿ ಸಾರ್ವಜನಿಕರನ್ನ ಎಚ್ಚರಗೊಳಿಸುವ ಪ್ರಯತ್ನಕ್ಕೆ ಕೈಹಾಕಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ಸಾಂಕ್ರಾಮಿಕ ರೋಗವನ್ನಾಗಿ ಘೋಷಿಸುವುದರ ಜೊತೆಗೆ ಡೆಂಗ್ಯೂ ನಿಯಂತ್ರಣ ಮಾರ್ಗಸೂಚಿಗಳನ್ನ ಪಾಲಿಸದವರಿಗೆ ದಂಡ ಕೂಡ ಹಾಕಲಾಗುವುದು ಎಂದರು. ಇದರಿಂದ ಆರೋಗ್ಯ ಇಲಾಖೆಗೆ ಡೆಂಗ್ಯೂ ಸಳ್ಳೆ ಉತ್ಪತ್ತಿ ತಾಣಗಳನ್ನ ಹತೋಟಿಗೆ ತರುವ ನಿಟ್ಟಿನಲ್ಲಿ ಕಾನೂನಿನ ಅಸ್ತ್ರ ಬಳಸಬಹುದಾಗಿದೆ. ಈ ಹಿಂದೆ ಬೆಂಗಳೂರು ಮತ್ತು ಮಂಗಳೂರು ಬಿಟ್ಟರೆ ರಾಜ್ಯದ ಬೇರೆ ಪ್ರದೇಶಗಳಲ್ಲಿ ಕಾನೂನಿನ ರೀತಿ ಕ್ರಮ ಕೈಗೊಳ್ಳಲು ಅವಕಾಶ ಇರಲಿಲ್ಲ ಎಂದರು. ಡೆಂಗ್ಯೂ ಮಾರ್ಗಸೂಚಿಗಳನ್ನ ಪಾಲಿಸದಿದ್ದರೆ, ಗ್ರಾಮೀಣ ಪ್ರದೇಶದ ಮನೆಗಳಿಗೆ 200 ರೂ. ಹಾಗೂ ನಗರ ಪ್ರದೇಶಗಳಲ್ಲಿ 400 ರೂಪಾಯಿ ದಂಡ ವಿಧಿಸಲಾಗುವುದು. ಅಲ್ಲದೇ ಶಾಲಾ ಕಾಲೇಜು, ಹೊಟೆಲ್, ಲಾಡ್ಜ್, ರೆಸಾರ್ಟ್ ಗಳು ಸೇರಿದಂತೆ ವಾಣಿಜ್ಯ ಸಂಘ, ಸಂಸ್ಥೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ 500 ಹಾಗೂ ನಗರ…

Read More

ಮಲಯಾಳಂನಲ್ಲಿ ಜಸ್ಟೀಸ್ ಹೇಮಾ ಸಮಿತಿ ವರದಿ ಸಂಚಲನ ಸೃಷ್ಟಿಸಿದೆ. ಚಿತ್ರರಂಗದಲ್ಲಿ ನಟಿಯರ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳದ ಕುರಿತು ಹೇಮಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ವರದಿಯ ಬಳಿಕ ಸಾಕಷ್ಟು ಮಂದಿಯ ತಲೆದಂಡವಾಗಿದೆ. ಹೇಮಾ ವರದಿಯಂತೆ ಇತರ ಭಾಷೆಗಳ ಚಿತ್ರರಂಗದಲ್ಲೂ ವರದಿಗಳು ಜಾರಿಯಾಗಬೇಕು ಎಂದು ಸಾಕಷ್ಟು ಮಂದಿ ಮಾತನಾಡಿದ್ದಾರೆ. ಇದೀಗ ನಟಿ ಶೃತಿ ಹರಿಹರನ್ ಕೂಡ ಹೇಮಾ ಸಮಿತಿ ಮಾದರಿಯಲ್ಲಿ ಸ್ಯಾಂಡಲ್ ವುಡ್ ನಲ್ಲೂ ಸಮಿತಿ ಆಗಬೇಕು ಎಂದಿದ್ದಾರೆ. ‘ಹೇಮಾ ಸಮಿತಿಯ ವರದಿ​ ಬಗ್ಗೆ ತುಂಬಾನೇ ಗೌರವ ಇದೆ. ಇಷ್ಟು ದಿನಗಳಿಂದ ಈ ಬಗ್ಗೆ ನಾವು ಇದನ್ನು ಮುಚ್ಚುಮರೆಯಲ್ಲಿ ಮಾತನಾಡುತ್ತಿದ್ದೆವು. ಸೆಕ್ಷುವಲ್ ಫೇವರ್ ಅತಿಯಾಗಿದೆ ಎಂದು ಹೇಳುತ್ತಿದ್ದೆವು. ಈ ವಿಚಾರವನ್ನು ಆಪ್ತ ಬಳಗದಲ್ಲಿ ಕೆಲವರು ಜೋಕ್ ಕೂಡ ಮಾಡುತ್ತಿದ್ದರು. ಆದರೆ, ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರೆ ನಿಜಕ್ಕೂ ಹೆಮ್ಮೆಯ ವಿಚಾರ’ ಎಂದು ಶೃತಿ ಹರಿಹರನ್ ಹೇಳಿದ್ದಾರೆ. ‘ಹೇಮಾ ವರದಿ ಮಲಯಾಳಂ ಚಿತ್ರರಂಗದ ಗೌರವ ಕಡಿಮೆ ಮಾಡುತ್ತಿದೆ, ಮಲಯಾಳಂ ಚಿತ್ರರಂಗದ ಘನತೆಗೆ…

Read More