Author: Prajatv Kannada

ಹಾಸನ:  ಯಾರೋ ಊರು ಬಿಡಿಸ್ತೀನಿ ಅಂದಿದ್ದರು. ಅವರು ಯೋಚನೆ ಮಾಡಿ ಮಾತಾಡುವಂತೆ ಚುನಾವಣೆ ಫಲಿತಾಂಶ ಬರುತ್ತದೆ. ಆ ಬಳಿಕ ಯಾರ‍್ಯಾರು ಎಲ್ಲೆಲ್ಲಿ ಇರ್ತಾರೆ ನೋಡಿ ಎಂದು ಬಿಜೆಪಿ ಅಭ್ಯರ್ಥಿ ಶಾಸಕ ಪ್ರೀತಂ ಜೆ ಗೌಡ ಹೇಳಿದ್ದಾರೆ. ಮತದಾನದ ಬಳಿಕ ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, 2018ರ ಚುನಾವಣೆಯಲ್ಲಿ ಓರ್ವ ಯುವಕ ಎಂದು ಮತ ಕೊಟ್ಟಿದ್ದರು. ಈ ಬಾರಿ ಕೆಲಸಗಾರ ಎಂದು ಮತ ಕೊಟ್ಟಿದ್ದಾರೆ. ಯಾರು ಜನರಿಗೆ ತೊಂದರೆ ಮಾಡಿದ್ದಾರೆ, ಪಾಳೆಗಾರಿಕೆ ಮಾಡ್ತಾ ಇದ್ದಾರೆ, ಅವರ ವಿರುದ್ಧ ಓರ್ವ ರಾಜಕಾರಣ ಮಾಡಬೇಕು ಎಂದು ಜನ ಮತ ನೀಡಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಜಾತಿ, ಮತ ಮೀರಿ ಅಭಿವೃದ್ಧಿ ಪರ ಜನರು ಮತ ಚಲಾಯಿಸಿದ್ದಾರೆ. ಬಹುತೇಕ ವರ್ಗದ ಜನ ನನಗೆ ಬೆಂಬಲ ನೀಡಿದ್ದು, ನಾನೇ ಗೆಲ್ಲುವೆ ಎಂದು ಹೇಳಿದ ಶಾಸಕ ಪ್ರೀತಂ ಗೌಡ, ಮತದಾನದ ಶೇಕಡವಾರು ಲೆಕ್ಕ ಬರೆದಂತೆಲ್ಲಾ ಜಾಸ್ತಿ ಆಗ್ತಾ ಇದೆ, ಹಾಗಾಗಿ ಪೂರ್ಣ ಲೆಕ್ಕ ಹಾಕಿಲ್ಲ. ಹಾಸನಾಂಬೆ ಆಶೀರ್ವಾದದಿಂದ ಯಾರೂ ಊಹೆ…

Read More

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಕ್ಷಣಕ್ಷಣಕ್ಕೂ ಕುತೂಹಲ ಹೆಚ್ಚಾಗುತ್ತಿದೆ. ಎಕ್ಸಿಟ್​​ಪೋಲ್​​ಗಳು ವಿವಿಧ ರೀತಿಯ ವರದಿ ನೀಡಿರುವ ಹಿನ್ನೆಲೆಯಲ್ಲಿ ಕಿತೂಹಲ ಹೆಚ್ಚಾಗಿದೆ. ಈ ಮಧ್ಯೆ, ಎರಡು ತಿಂಗಳ ಹಿಂದೆ ರಾಜ್ಯದ ರಾಜಕೀಯ ಭವಿಷ್ಯದ ಬಗ್ಗೆ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಜಿ ನೀಡಿದ್ದ ಹೇಳಿಕೆ (Kodi Mutt Seer Ppredictions) ಈಗ ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಅಧಿಕಾರ‌ ಮಾಡಲ್ಲ ಎಂದು ಜನವರಿಯಲ್ಲಿ ಶ್ರೀಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು. ಜತೆಗೆ, ಎರಡ್ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ ಎಂದೂ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭವಿಷ್ಯ ನುಡಿದಿದ್ದರು. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಚುನಾವಣೆವರೆಗೂ ಪಕ್ಷಾಂತರಗಳು ಇರುತ್ತವೆ. ಪಕ್ಷಗಳು ಕೂಡಿ ಹೋಗುವುದು ಕಷ್ಟ. ಚುನಾವಣೆವರೆಗೂ ಏನು ಹೇಳುವುದಕ್ಕೆ ಆಗುವುದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ‌‌‌. ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಫೆಬ್ರುವರಿಯಲ್ಲಿ ಕೋಡಿಮಠ…

Read More

ಬೆಂಗಳೂರು: ಕಾಂಗ್ರೆಸ್‌ನವರಿಗೆ (Congress) ಬಹುಮತ ಬರಲ್ಲ. ಹೀಗಾಗಿ ಬೇರೆ ಪಕ್ಷದವರ ಜೊತೆ ಮಾತನಾಡುವ ಪ್ರಯತ್ನ ಪಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಅವರಿಗೆ ಬಹುಮತವೂ ಬರುವುದಿಲ್ಲ ಎಂದು ಟಾಂಗ್ ಕೊಟ್ಟರು. ನಾವು ಗೆಲ್ಲುವ ವಿಶ್ವಾಸ ಇದೆ. ನಾವು ಬಹುಮತದ ಗಡಿ ದಾಟುತ್ತೇವೆ. ನಾನೇ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ವಿಶ್ವಾಸದಲ್ಲಿದ್ದಾರೆ. ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸದಲ್ಲಿದಾರೆ ವರಿಷ್ಠರು ಎಂದು ತಿಳಿಸಿದರು. ನಾನು ಮೊದಲಿಂದಲೂ ಒಂದೇ ಮಾತು ಹೇಳ್ತಾ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತೆ. ಎಲ್ಲ ಕ್ಷೇತ್ರ, ಬೂತ್‌ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ. ನಮಗೆ ವಿಶ್ವಾಸ ಇದೆ. ಮ್ಯಾಜಿಕ್ ನಂಬರ್ ಮುಟ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೈತ್ರಿ ಸಂದರ್ಭ ಬರಲ್ಲ. ಈಗ ನಮ್ಮ ಮುಂದೆ ಆ ಪ್ರಶ್ನೆ ಇಲ್ಲ. ನಾವು ಬಹುಮತ ದಾಟ್ತೀವಿ. ಕಾಂಗ್ರೆಸ್‌ನವರು ಏನೇ ಸಭೆ ಮಾಡಲಿ. ಅವರಿಗೆ…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತಮ್ಮ ಕಾರ್ಯಕರ್ತರಿಗೆ ಧೈರ್ಯ ತುಂಬೋಕೆ ಈ ರೀತಿ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾ ರೆ. ಸದಾಶಿವನಗರದಲ್ಲಿ ಮಾತನಾಡಿದ ಅವರು, ಈ ಎಕ್ಸಿಟ್ ಪೋಲ್ (Exit Poll) ಬಗ್ಗೆ ನಮಗೆ ನಂಬಿಕೆ ಇಲ್ಲ. ನಮ್ಮ ಸಂಖ್ಯೆ ಅದಲ್ಲ ನಮ್ಮ ಸಂಖ್ಯೆ 140. ನಮ್ಮಲ್ಲಿ ಯಾವ ಅಧಿಕಾರ ಹಂಚಿಕೆನೂ ಇಲ್ಲ. ಖರ್ಗೆ ಸಾಹೆಬ್ರು ಏನು ಹೇಳ್ತಾರೆ. ಸೋನಿಯಾ ಗಾಂಧಿ ಏನು ಹೇಳ್ತಾರೆ ಹೈಕಮಾಂಡ್ ಏನು ಹೇಳ್ತಾರೆ ಹಾಗೆ ಅಂದ್ರು. ಎಕ್ಸಿಟ್ ಪೋಲ್ ಸ್ಯಾಂಪಲ್ ಕಡಿಮೆ ಇದೆ, ನಮ್ಮ ಸ್ಯಾಂಪಲ್ ಜಾಸ್ತಿ ಇದೆ. ಸ್ಪಷ್ಟವಾದ ಬಹುಮತ ಕಾಂಗ್ರೆಸ್‍ಗೆ ಬರುತ್ತದೆ. ಇದು ನಮ್ಮ ಅಚಲವಾದ ನಂಬಿಕೆ. ಶನಿವಾರ 1 ಗಂಟೆ ಒಳಗೆ ಎಲ್ಲಾ ತೀರ್ಪು ಬರಲಿದೆ. ತೆರೆಮರೆಯಲ್ಲಿ ಯಾವ ಸಿದ್ಧತೆಯೂ ಇಲ್ಲಾ. ತೆರೆನೂ ಇಲ್ಲಾ ಮರೆನೂ ಇಲ್ಲಾ ಎಂದು ಹೇಳಿದರು. ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬೋಕೆ ಮಾತನಾಡಿದ್ದಾರೆ. ನನ್ನ ಪ್ರಾಣ ಇರುವವರೆಗೆ ನಾನು…

Read More

ಬೆಂಗಳೂರು: ಕರ್ನಾಟಕ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಬಹುಮತಕ್ಕೆ ಬೇಕಿರುವ ಸಂಖ್ಯಾಬಲ ಇರುವಂತೆ ನೋಡಿಕೊಳ್ಳಲು ಕಾಂಗ್ರೆಸ್‌ ಮತ್ತು ಬಿಜೆಪಿ ಮುಂದಾಗಿದ್ದು, ಫಲಿತಾಂಶಕ್ಕೂ ಮುನ್ನವೇ ಗೆಲ್ಲಬಹುದಾದ ಪಕ್ಷೇತರ ಅಭ್ಯರ್ಥಿಗಳಿಗೆ ಗಾಳ ಹಾಕುತ್ತಿವೆ. ಈಗಾಗಲೇ ಸಂಭಾವ್ಯ ವಿಜೇತ ಪಕ್ಷೇತರರನ್ನು ಸಂಪರ್ಕಿಸಿರುವ ಕಾಂಗ್ರೆಸ್‌, ಬಿಜೆಪಿ ನಾಯಕರು ತಮ್ಮ ಕಡೆ ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಕರ್ನಾಟಕದಲ್ಲಿ ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದೆ. ಎಕ್ಸಿಟ್‌ ಪೋಲ್‌ ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ಇದ್ದು, ಕಾಂಗ್ರೆಸ್‌ ಬಹುಮತದ ಹತ್ತಿರಕ್ಕೆ ಬರುವ ಸಾಧ್ಯತೆ ಇದೆ. ಒಂದಿಷ್ಟು ಸ್ಥಾನಗಳು ಕಡಿಮೆಯಾದರೂ ಆಗಬಹುದು ಎಂಬ ಹಿನ್ನೆಲೆ ಕಾಂಗ್ರೆಸ್‌ ನಾಯಕರು ಗೆಲ್ಲಬಹುದಾದ ಪಕ್ಷೇತರ ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಸ್‌ಐ ಚಿಕ್ಕನಗೌಡ ಅವರನ್ನು ಈಗಾಗಲೇ ಕಾಂಗ್ರೆಸ್‌ ನಾಯಕರು ಸಂಪರ್ಕಸಿದ್ದಾರೆ. ಎಸ್‌ಐ ಚಿಕ್ಕನಗೌಡ ಅವರು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಅವರಿಗೆ ಟಿಕೆಟ್‌ ನೀಡದೇ ಎಂಆರ್‌ ಪಾಟೀಲ್‌ಗೆ…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಎಲ್ಲರ ಚಿತ್ತ ಮತ ಎಣಿಕೆಯತ್ತ ನೆಟ್ಟಿದೆ. ಈ ನಡುವೆ ರೆಸಾರ್ಟ್ ರಾಜಕೀಯ ಆರಂಭಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಕಾಂಗ್ರೆಸ್ ಬಹುಮತ ಬರುವ ವಿಶ್ವಾಸದಲ್ಲಿದ್ದರೆ, ಬಿಜೆಪಿ ಸರ್ಕಾರದ ರಚನೆ ಮಾಡೇ ಮಾಡುತ್ತೇವೆ ಎಂಬ ವಿಶ್ವಾಸದಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಶಾಸಕರನ್ನು ಕಾಪಾಡಿಕೊಳ್ಳುವುದು ಬಹು ದೊಡ್ಡ ಸವಾಲಾಗಿದೆ. ಇನ್ನು ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್ ನಾಯಕರು ಹೈ ಅಲರ್ಟ್ ಆಗಿದ್ದಾರೆ. ಒಂದು ವೇಳೆ ಸಮೀಕ್ಷೆಯಂತೆ ಬಹುಮತ ಗಳಿಸಿದರೂ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಲು ಪ್ಲ್ಯಾನ್ ಮಾಡಲಾಗುತ್ತಿದೆ. ಆಪರೇಷನ್ ಕಮಲದಿಂದ ರಕ್ಷಣೆ ಪಡೆದುಕೊಳ್ಳಲು ತಮ್ಮ ಸರ್ಕಾರ ಆಡಳಿತದಲ್ಲಿ ಇರುವ ರಾಜಸ್ಥಾನ, ಛತ್ತೀಸ್ಗಢ ರಾಜ್ಯಗಳ ನಾಯಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಾತುಕತೆ ನಡೆಸಿದ್ದಾರೆ. ಒಂದು ವೇಳೆ ಇಂತಹ ಸ್ಥಿತಿ ನಿರ್ಮಾಣ ಆದಲ್ಲಿ, ಶಾಸಕರನ್ನು ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಕ್ಕೆ ಶಿಫ್ಟ್ ಮಾಡಲು ಕಾಂಗ್ರೆಸ್ ತಂತ್ರಗಾರಿಕೆ ನಡೆಸುತ್ತಿದೆ. ಈಗಾಗಲೇ ಎಲ್ಲಾ ಕೈ ಅಭ್ಯರ್ಥಿಗಳಿಗೆ ಸಂದೇಶ ರವಾನೆ…

Read More

ಬೆಂಗಳೂರು: ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ (Karnataka Assembly Election 2023) ಮತದಾನ ಮುಗಿದಿದ್ದು, ನಾಳೆ (ಮೇ.13) ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆ ನಿನ್ನೆ (ಮೇ.11) ರಿಲ್ಯಾಕ್ಸ್​​ ಮೂಡಿಗೆ ಜಾರಿದ್ದ ರಾಜಕೀಯ ನಾಯಕರು ಇಂದು (ಮೇ.12) ಮತ್ತೆ ಫಾರ್ಮ್​​ಗೆ ಬಂದಿದ್ದಾರೆ. ರಾಜ್ಯದ ಚುಕ್ಕಾಣಿಯನ್ನು ಹಿಡಿಯಲು ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಪಕ್ಷಗಳು ತಂತ್ರಗಳನ್ನು ಹೆಣೆಯುತ್ತಿವೆ. “ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ” ಎಂಬ ಘೋಷವಾಕ್ಯದಂತೆ ಸರ್ಕಾರ ರಚಿಸಲು ಬಿಜೆಪಿ (BJP) ಯೋಜನೆ ರೂಪಿಸುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮುಖ್ಯಮಂತ್ರಿ ಮಂತ್ರಿ ಬಸವರಾಜ ಬೊಮ್ಮಾಯಿಯವರು(Basavaraj Bommai), ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಅವರನ್ನು ಕುಮಾರಕೃಪಾ ರಸ್ತೆಯ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸಚಿವ ಭೈರತಿ ಬಸವರಾಜ, ಸಚಿವ ಮುರುಗೇಶ್ ನಿರಾಣಿ, ಲೆಹರ್ ಸಿಂಗ್, ಎ.ಟಿ. ರಾಮಸ್ವಾಮಿ ಸಾಥ್​ ನೀಡಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಜೆಡಿಎಸ್(JDS) ಪಕ್ಷ ಕಿಂಗ್ ಮೇಕರ್ ಆಗಲಿದೆ ಎಂದು ಸಿ.ಎಂ. ಇಬ್ರಾಹಿಂ(CM Ibrahim) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ದುಡ್ಡು ಕೊಟ್ಟು ಸರ್ವೆ ಮಾಡಿಸಿವೆ. ಆದರೆ ನಮ್ಮ ಬಳಿ ಏನೂ ಇಲ್ಲ. ಹಣ ಇರುವುದರಿಮದ ಎರಡೂ ಪಕ್ಷಗಳು ಸರ್ವೆ ಮಾಡಿಸಿಕೊಂಡಿವೆ. ಜನರಲ್ಲಿ ಗೊಂದಲ(Karnataka Election) ಸೃಷ್ಟಿಸುವ ಕೆಲಸವನ್ನು ರಾಷ್ಟ್ರೀಯ ಪಕ್ಷಗಳು ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಪಕ್ಷ ಯಾವುದಕ್ಕೂ ಹಿಗ್ಗುವುದಿಲ್ಲ, ಕುಗ್ಗುವುದೂ ಇಲ್ಲ. ನಮ್ಮ ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಬಲಿಯಾಗಲ್ಲ. ಈ ಬಾರಿ ಜೆಡಿಎಸ್ ಪಕ್ಷವೇ ಕಿಂಗ್ ಮೇಕರ್ ಆಗಲಿದೆ ಎಂದು ಬೆಂಗಳೂರಿನ ನಿವಾಸದಲ್ಲಿ ಸಿಎಂ ಇಬ್ರಾಹಿಂ ಅವರು ಹೇಳಿದ್ದಾರೆ.

Read More

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ(Karnataka Election) ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಈ ನಡುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yediyurappa) ಅವರ ಕಾವೇರಿ ನಿವಾಸಕ್ಕೆ ಸಿಎಂ ಬೊಮ್ಮಾಯಿ(Bommai) ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ. ನಾಳೆಯ ಚುನಾವಣೆ ಫಲಿತಾಂಶ ಬಳಿಕ ಯಾವ ರೀತಿ ರಣತಂತ್ರ ರೂಪಿಸಬೇಕು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಬಿ.ಎಸ್. ಯಡಿಯೂರಪ್ಪ ಅವರ ಭೇಟಿಗೂ ಮುನ್ನ ಮಾತನಾಡಿದ ಸಿಎಂ ಬೊಮ್ಮಾಯಿ, ಅತಂತ್ರ ವಿಧಾನಸಭೆಗೆ ಯಾವುದೇ ಅವಕಾಶವಿಲ್ಲ, ನಾವು ಆರಾಮವಾಗಿ ಸರ್ಕಾರ ರಚಿಸಲಿದ್ದೇವೆ. ಡಿ.ಕೆ.ಶಿವಕುಮಾರ್ ನಾಳೆಯವರೆಗೆ ತಮ್ಮ 141 ಸ್ಥಾನಗಳ ಬಗ್ಗೆ ಸಂತೋಷವಾಗಿರಲಿ. ಶಾಸಕಾಂಗ ಪಕ್ಷದ ಸಭೆ ಕರೆದು ಸಿಎಂ ಅಭ್ಯರ್ಥಿ ಯಾರು ಎಂಬುದನ್ನು ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Read More

ಬೆಂಗಳೂರು: ಮೊನ್ನೇ ಬುಧವಾರವಷ್ಟೇ(ಮೇ.10) ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದೆ. ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್‌ಗೆ (Congress) ಅಧಿಕಾರದ ಗದ್ದುಗೆ ಎಂಬ ಭವಿಷ್ಯ ನುಡಿದಿವೆ. ಹೀಗಾಗಿ ಕೈ ಪಾಳಯದಲ್ಲಿ ಹುರುಪು ಹೆಚ್ಚಿಸಿದೆ. ಇನ್ನು ಕೆಲವು ಸಮೀಕ್ಷೆಗಳು ಬಿಜೆಪಿ ಅಧಿಕಾರದ ಸನಿಹಕ್ಕೆ ಬರಲಿದೆ ಎಂದಿವೆ. ಕೆಲ ಕೆಲ ಸಮೀಕ್ಷೆಗಳು ಈ ಬಾರಿ ಅತಂತ್ರ ಫಲಿತಾಂಶ ಎಂದು ಸರ್ವೇ ರಿಪೋರ್ಟ್ ನೀಡಿವೆ. ಮತದಾನೋತ್ತರ ಸಮೀಕ್ಷೆ ಕಾಂಗ್ರೆಸ್ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಚಟುವಟಿಕೆ ಗರಿಗೆದರುವಂತೆ ಮಾಡಿದೆ. ಇದರಿಂದ ಕಾಂಗ್ರೆಸ್(Congress) ​, ತನ್ನ ಅಭ್ಯರ್ಥಿಗಳಿಗೆ ಫಲಿತಾಂಶಕ್ಕೂ ಮುನ್ನವೇ ಮಹತ್ವದ ಸಂದೇಶವನ್ನು ರವಾನಿಸಿದೆ. ನಾಳೆ ಮತದಾರನ ತೀರ್ಪು ಹೊರಬೀಳಲಿದೆ. ಏನ್ ಬೇಕಾದ್ರೂ ಆಗುವ ಸಾಧ್ಯತೆ ಇದೆ. ಹೀಗಾಗಿ ಕೈ ಪಡೆ ಫುಲ್ ಅಲರ್ಟ್ ಆಗಿದೆ. ನಿನ್ನೆ ರಾತ್ರಿ ಸಿದ್ದರಾಮಯ್ಯರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಜತೆ ಹೋವೋಲ್ಟೇಜ್ ಸಭೆ ನಡೆಸಿದ್ದು, ಸಭೆಯಲ್ಲಿ ಸ್ವತಂತ್ರವಾಗಿ ಕಾಂಗ್ರೆಸ್ ಪಕ್ಷ ಗೆದ್ದರೆ ಮುಂದೆ ಏನ್ ಮಾಡಬೇಕು. ಅತಂತ್ರವಾದ್ರೆ ಯಾವ ರಣತಂತ್ರ ರೂಪಿಸಬೇಕು ಎನ್ನುವ…

Read More