ಬೆಂಗಳೂರು: ಟಿಕೆಟ್ ನೀಡುವುದಾಗಿ ಬಿಜೆಪಿ ಸಬೂಬು ಹೇಳುತ್ತಲೇ ಬಂದಿದ್ದು, ಅದಕ್ಕೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನ ಮಾಡಿದ್ದೇನೆ ಎಂದು ಬಿಬಿಎಂಪಿ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಬಸವನಗುಡಿಯಲ್ಲಿ ಮಾತನಾಡಿದ ಅವರು, ನಾನು ಬಸವನಗುಡಿ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, ಸೀನಿಯರ್ ಇದ್ದೇನೆ. ಈ ಹಿಂದೆ ಅವಕಾಶ ಕೊಡುವಂತೆ ಹಲವು ಬಾರಿ ಮನವಿ ಮಾಡಿದ್ದೆ. ಪ್ರತಿ ಬಾರಿಯೂ ಕೇಳುತ್ತಲೇ ಇದ್ದೇನೆ ಅವರು ಸಬೂಬು ಹೇಳಿಕೊಂಡು ಬರುತ್ತಲೇ ಇದ್ದಾರೆ. ಆದರೆ ಯಾಕೋ ಪಕ್ಷ ನನಗೆ ಮಣೆ ಹಾಕಿಲ್ಲ. ಆದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ. ಇನ್ನೂ ಬ್ಯಾಟರಾಯನಪುರ ಕ್ಷೇತ್ರದ ಬಳಿಕ ಬಸವನಗುಡಿ ಕ್ಷೇತ್ರದಲ್ಲಿ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಬಹಳ ವರ್ಷಗಳಿಂದ ಬಿಜೆಪಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಅವರು ಈ ಬಾರಿ ಟಿಕೆಟ್ ಸೀಗುತ್ತದೆ ಎಂಬ ಭರವಸೆಯಲ್ಲಿದ್ದರು. ಆದರೆ ಪಕ್ಷ ಬಿಜೆಪಿಯ ರವಿ ಸುಬ್ರಮಣ್ಯ ಎಂಬುವವರಿಗೆ ಟಿಕೆಟ್ ನೀಡಿದೆ. ಇದರಿಂದ ಬಂಡಾಯ ಎದ್ದಿರುವ…
Author: Prajatv Kannada
ಬೆಂಗಳೂರು: ವಿಫಲತೆ ಹಾಗೂ ಸಫಲತೆ ಇವೆರಡೂ ಜೀವನದ ಅವಿಭಾಜ್ಯ ಅಂಗ. ಮನುಷ್ಯನ ವಿಫಲತೆಗಳೇ ಗೆಲುವಿನ ಮೆಟ್ಟಿಲಾಗುವುದು. ವಿಭಿನ್ನ ಚಿಂತನೆ ಮತ್ತು ಸದೃಡ ಮನೋಕಾಮನೆ ಜೊತೆ ನಿರಂತರ ಪ್ರಯತ್ನ ಇದ್ದರೆ ಯಶಸ್ಸು ನಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಹೇಳಿದರು. ಅವರು ಇಂದು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ೨೦೨೧-೨೨ ಹಾಗೂ ೨೦೨೨-೨೩ನೆಯ ಸಾಲಿನ ʻಕನ್ನಡ ಪ್ರವೇಶ, ಕಾವ, ಜಾಣ, ರತ್ನ ಹಾಗೂ ಶಾಸನಶಾಸ್ತ್ರ ಡಿಪ್ಲೋಮಾʼ ಉತ್ತಮ ಸಾಧನೆ ಮಾಡಿದವರಿಗೆ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯತಾ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಪಿಎಚ್ಡಿ ಪದವಿ ಪಡೆದವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಭೆ ಎನ್ನುವುದು ಪ್ರತಿಯೊಬ್ಬರಲ್ಲಿ ಇದ್ದೇ ಇರುತ್ತದೆ. ವಾಸ್ತವದಲ್ಲಿ ಸುಪ್ತವಾಗಿದ್ದ ಪ್ರತಿಭೆಯನ್ನು ಪ್ರಯತ್ನ ಎನ್ನುವ ಒರೆಗೆ ಹಚ್ಚುವ ಮೂಲಕ ಜಗತ್ತಿಗೆ ತೋರಿಸ ಬೇಕಾಗಿದೆ, ಚಿನ್ನ ಭೂಗರ್ಭದಲ್ಲಿ ಇದ್ದರೆ,…
ಬೆಂಗಳೂರು : ನಾ ಬರೋವರೆಗೂ ಮಾತ್ರ ನಿನ್ನ ಹವಾ, ನಾ ಬಂದ್ಮೇಲೆ ನಂದೇ ಹವಾ ಎಂದು ಸಚಿವ ಆರ್. ಅಶೋಕ್ ಸಿನಿಮಾ ಡೈಲಾಗ್ ಹೊಡೆದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲಿಪುರ ಗ್ರಾಮದಲ್ಲಿ ನಡೆದ ಕನಕಪುರ ಬಿಜೆಪಿ ಮುಖಂಡರ ಸಭೆಯಲ್ಲಿ ಸಚಿವ ಆರ್. ಅಶೋಕ ಡಿಕೆ ಶಿವಕುಮಾರ್ ವಿರುದ್ಧ ವಾಗ್ಧಾಳಿ ನಡೆಸಿದರು. ನಾ ಬರೋವರೆಗೂ ಮಾತ್ರ ನಿನ್ನ ಹವಾ, ನಾ ಬಂದ್ಮೇಲೆ ನಂದೇ ಹವಾ ಎಂದು ಸಚಿವ ಆರ್. ಅಶೋಕ್ ಸಿನಿಮಾ ಡೈಲಾಗ್ ಹೊಡೆಯುವ ಮೂಲಕ ಡಿಕೆಶಿಗೆ ಟಾಂಗ್ ನೀಡಿದ್ದಾರೆ.
ತುಮಕೂರು: ಚುನಾವಣಾ ಪ್ರಚಾರಕ್ಕೆ ಮಹಿಳೆಯರನ್ನು ಕರೆಸುವ ನೆಪದಲ್ಲಿ ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ತುಮಕೂರಿನ (Tumakuru) ನಗರ ವೃತ್ತದಲ್ಲಿ 5 ಸಾವಿರಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆ (Protest) ನಡೆಸಿದ್ದಾರೆ. ಜೆಡಿಎಸ್ (JDS) ಅಭ್ಯರ್ಥಿ ಗೋವಿಂದರಾಜು ವಿರುದ್ಧ ಸಾವಿರಾರು ಮಹಿಳೆಯರು ಕ್ರಮಕ್ಕೆ ಆಗ್ರಹಿಸಿದ್ದಾರೆ. ಗೋವಿಂದರಾಜು ಅವರನ್ನ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು ಅವರಿಗೆ ʻಬಿʼ ಫಾರಂ ಕೊಡದೇ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇಂಥಹ ವ್ತಕ್ತಿತ್ವ ಉಳ್ಳವರು ಶಾಸಕರಾದರೆ ಕ್ಷೇತ್ರದ ಮಹಿಳೆಯರು ಹಗಲು ಹೊತ್ತಿನಲ್ಲಿ ಭಯದಿಂದ ಓಡಾಡುವ ವಾತಾವರಣ ಸೃಷ್ಟಿಯಾಗುತ್ತದೆ ಅಸಮಾಧಾನ ಹೊರಹಾಕಿದ್ದಾರೆ. ಮಹಿಳೆಯೊಬ್ಬರನ್ನ ಪ್ರಚಾರಕ್ಕೆ ಕರೆಯುವ ನೆಪದಲ್ಲಿ ಗೋವಿಂದರಾಜು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೇ ಇವರ 8 ಪೋಲಿ ಆಡಿಯೋಗಳು ಬಿಡುಗಡೆಯಾಗಿದ್ದು, ಜನಪ್ರತಿನಿಧಿಯಾಗಲು ಹೊರಟವರ ಬಣ್ಣ ಬಯಲಾಗಿದೆ. ಈ ಕೂಡಲೇ ಗೋವಿಂದರಾಜು ಅವರನ್ನ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮಹಿಳೆಯರು ಆಗ್ರಹಿಸಿದ್ದಾರೆ.
ಬೆಂಗಳೂರು: ನೀವು ನೌಕರಿ ಹುಡುಕತಾ ಇದ್ದಿರಾ. SSLC / PUC ಯಾವುದೇ ಪದವಿ ಆಗಿದ್ರೆ ಕೂಡಲೆ ಇಲ್ಲಿ ಭೇಟಿ ಕೊಡಿ. ಇಲ್ಲಿ ವಾಕ್ ಇನ್ ಸಂದರ್ಶನವಿದ್ದು, ಪುರುಷರು ಮತ್ತು ಮಹಿಳೆಯರಿಗೆ ನೇಮಕಾತಿ ಆರಂಭವಾಗಿದೆ. ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಮ್ಯಾನೇಜರ್, ಸಹಾಯಕ ಮ್ಯಾನೇಜರ್, ಎಚ್.ಆರ್ ಮ್ಯಾನೇಜರ್, ಮೇಲ್ವಿಚಾರಕ, ಕ್ಯಾಷಿಯರ್, ಸೇಲ್ಸ್ ಎಕ್ಚಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ. ಸೇರಿದಂತೆ ಅನೇಕ ಹುದ್ದೇಗಳಿಗೆ ಇಲ್ಲಿ ಅವಕಾಶವಿದೆ. SSLC /PUC ಯಾವುದೇ ಪದವಿ ಮಾಡಿದ್ರು ಇಲ್ಲಿ ಕೆಲಸವಿದ್ದು. ಜೊತೆಗೆ ವಸತಿ + ಸ್ಥಿರ ಮತ್ತು ಆಕರ್ಷಕ ಸಂಬಳ + PF + ಪ್ರೋತ್ಸಾಹ ಧನ ಕೊಡಲಾಗುತ್ತದೆ. ದಿನಾಂಕ- 16-04-2023 ರಂದು ಮಧ್ಯಾಹ್ನ 12 ಗಂಟೆಯಿಂದ ದ 2 ಗಂಟೆವರೆಗೆ ಸಂದರ್ಶನವಿದ್ದು, ನೌಕರಿ ಹುಡುಕುತ್ತಿರುವವರು ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನ ನಡೆಯುವ ಸ್ಥಳ: #616, ಜಿಎಮ್ ಆಸ್ಪತ್ರೆಯ ಹತ್ತಿರ, ವಿನಾಯಕ ಲೇಔಟ್, ನಾಗರಬಾವಿ, ಬೆಂಗಳೂರು – 72, ಹೆಚ್ಚಿನ ಮಾಹಿತಿಗಾಗಿ ಇಲ್ಲಿರುವ ನಂಬರಿಗೆ ಸಂಪರ್ಕಿಸಬಹುದಾಗಿದೆ. 9740626853 ಜೊತೆಗೆ ನಿಮ್ಮ…
ಮೈಸೂರು: ವರುಣಾದಲ್ಲಿ (Varuna) 15 ವರ್ಷಗಳ ಅಪ್ಪ ಮಗನ ದರ್ಬಾರ್‌ಗೆ ಅಂತ್ಯ ಕಾಲ ಬಂದಿದೆ. ಬಿಜೆಪಿ (BJP) ಅಭ್ಯರ್ಥಿ ಸೋಮಣ್ಣನವರಿಗೆ (V.Somanna) ಒಳ್ಳೆಯ ಅಭಿಪ್ರಾಯವಿದೆ. ಹಳೆ ಮೈಸೂರು ಭಾಗದಲ್ಲಿ 8ರಿಂದ 10 ಸ್ಥಾನ ಬಿಜೆಪಿಗೆ ಬರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ (Prathap Simha) ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ (Mysuru) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬರಲು ದೇಶದ್ರೋಹಿಗಳ ಜೊತೆ ಕಾಂಗ್ರೆಸ್ ಕೈಜೋಡಿಸುತ್ತಿದೆ. ಪಿಎಫ್‌ಐ (PFI), ಕೆಎಫ್‌ಡಿ (KFD) ಹಾಗೂ ಎಸ್‌ಡಿಪಿಐ (SDPI) ಸಂಘಟನೆಯ ಕಾರ್ಯಕರ್ತರು ಸಿದ್ದರಾಮಯ್ಯನವರಿಗೆ ದತ್ತು ಮಕ್ಕಳಿದ್ದಂತೆ. ಪಿಎಫ್‌ಐ ಮತ್ತು ಕೆಎಫ್‌ಡಿಯನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (D.K.Shivakumar) ಅವರು ಕರ್ನಾಟಕದಲ್ಲಿ ತಾಲಿಬಾನ್ (Taliban) ಸರ್ಕಾರ ತರಲು ಹೊರಟಿದ್ದಾರೆ. ಸಮಾಜಘಾತುಕ ಸಂಘಟನೆಯ ಬೆಂಬಲದೊಂದಿಗೆ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ ಎಂದರು. ಎಸ್‌ಡಿಪಿಐನವರು ಕಾಂಗ್ರೆಸ್‌ಗೆ ಬೆಂಬಲ ಕೊಡಬೇಕು ಎಂದು ಜಿ.ಪರಮೇಶ್ವರ್ (G.Parameshwar) ಕರೆ ಕೊಟ್ಟಿದ್ದಾರೆ. ಪಿಎಫ್‌ಐ ಮತ್ತು ಕೆಎಫ್‌ಡಿ ಸಂಘಟನೆಗಳು…
ಹುಬ್ಬಳ್ಳಿ: ಸುಮಾರು 30 ನಿಮಿಷಗಳ ಕಾಲ ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ನಡೆಸಿದ ಪ್ರಲ್ಹಾದ್ ಜೋಶಿ ಹೈಕಮಾಂಡ್ ಟಿಕೆಟ್ ನೀಡುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷಕ್ಕೆ ಅವರ ಸೇವೆಯ ಅಗತ್ಯವಿದೆ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಹಾಲಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ವಿಚಾರ ಕೇಂದ್ರದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಜಗದೀಶ್ ಶೆಟ್ಟರ್ ಅವರ ಜೊತೆ ಮಾತುಕತೆ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೆಟ್ಟರ್ ಬಿಜೆಪಿ ಬಿಡುವ ಮಾತೇ ಇಲ್ಲ…
ಕೈವ್: ಪೂರ್ವ ಉಕ್ರೇನ್ ನಗರದ ಸ್ಲೋವಿಯನ್ಸ್ಕ್‌ನಲ್ಲಿರುವ ವಸತಿ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ 8 ಜನರು ಸಾವನ್ನಪ್ಪಿದ್ದು, 21 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ನಗರದ ಮೇಲೆ ಏಳು ಕ್ಷಿಪಣಿಗಳನ್ನು ಹಾರಿಸಲಾಗಿದ್ದು, S-300 ಕ್ಷಿಪಣಿಗಳು, 10 ಅಪಾರ್ಟ್ಮೆಂಟ್ ಕಟ್ಟಡಗಳು ಹಾಗೂ ಇತರೆ ಸೈಟ್‌ಗಳನ್ನು ಧ್ವಂಸ ಮಾಡಿವೆ. ಇದರಿಂದಾಗಿ ಕಟ್ಟಡಗಳ ಮಹಡಿಗಳು ಕುಸಿದಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಬದುಕುಳಿದವರಿಗಾಗಿ ರಕ್ಷಣಾ ತಂಡವು ಶೋಧ ಕಾರ್ಯ ನಡೆಸುತ್ತಿದೆ. ಈಗಾಗಲೇ ತುರ್ತು ಕಾರ್ಯಾಚರಣೆಗಳು ಆರಂಭಗೊಂಡಿದ್ದು, ಅವಶೇಷಗಳನ್ನು ಹೊರತೆಗೆಯುವ ವೇಳೆ 2 ವರ್ಷದ ಮಗುವೊಂದು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವುದು ಕಂಡುಬಂದಿದೆ. ತಕ್ಷಣವೇ ಮಗುವನ್ನು ಅವಶೇಷಗಳ ಮಧ್ಯದಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಮಗು ಸಾವನ್ನಪ್ಪಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಟೋಕಿಯೋ: ಪಶ್ಚಿಮ ಜಪಾನ್‌ನ ವಕಯಾಮಾದಲ್ಲಿ ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ ಭಾಷಣ ಮಾಡುತ್ತಿದ್ದ ವೇಳೆ ಹತ್ತಿರದಲ್ಲೇ ಸ್ಫೋಟ ಸಂಭವಿಸಿರುವುದಾಗಿ ವರದಿಯಾಗಿದೆ. ಕಿಶಿಡಾ ಭಾಷಣದ ವೇಳೆ ಸ್ಫೋಟಕ ವಸ್ತುವನ್ನು ಎಸೆಯಲಾಗಿದ್ದು, ತಕ್ಷಣವೇ ಕಿಶಿಡಾ ಅವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಲು ಪೊಲೀಸರು ನಿರಾಕರಿಸಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ ಪ್ರಧಾನಿ ಭಾಷಣ ಮಾಡುತ್ತಿದ್ದ ವೇಳೆ ಅನುಮಾನಾಸ್ಪದ ವಸ್ತುವನ್ನು ಪ್ರಧಾನಿ ಎಡೆಗೆ ಎಸೆಯಲಾಗಿದೆ. ಈ ವೇಳೆ ಸ್ಥಳದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಸದ್ಯ ಘಟನಾ ಸ್ಥಳದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಅಧಿಕಾರಿಗಳು ಸ್ಥಳದಲ್ಲಿದ್ದ ಒರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ ಎನ್ನಲಾಗುತ್ತಿದೆ.
ವಾಷಿಂಗ್ಟನ್: 27,000 ಸಿಬ್ಬಂದಿಗಳನ್ನು ಕೆಲಸದಿಂದ ತೆಗೆಯಲು ಕಷ್ಟವಾಗುತ್ತಿದೆ.. ಆದರೆ ಅವರೆಲ್ಲರಿಗೂ ಉತ್ತಮವಾಗಿ ಪಾವತಿಸುತ್ತೇವೆ ಎಂದು ಅಮೆಜಾನ್ ಸಿಇಒ ಆಂಡಿ ಜಾಸ್ಸಿ ಹೇಳಿದ್ದಾರೆ. ಅಮೆಜಾನ್ ಕಂಪನಿಯು ಈ ಹಿಂದೆ ಎದುರಿಸಿದ ಸವಾಲಿನ ಅವಧಿಗಳನ್ನು ವಿವರಿಸುವ ವಾರ್ಷಿಕ ಪತ್ರವನ್ನು ಷೇರುದಾರರಿಗೆ ಬರೆದಿದ್ದು, ಇತ್ತೀಚಿನ ವೆಚ್ಚ ಕಡಿತದ ಪ್ರಯತ್ನಗಳು ಟೆಕ್ ದೈತ್ಯ ಬೆಳವಣಿಗೆಗೆ ಸಹಾಯ ಮಾಡುತ್ತವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇ-ಕಾಮರ್ಸ್ ದೈತ್ಯದ ಅಧಿಕೃತ ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಿದ ಈ ಪತ್ರದಲ್ಲಿ ಅವರು 27,000 ಉದ್ಯೋಗಿಗಳನ್ನು ವಜಾಗೊಳಿಸುವ ನಿರ್ಧಾರ “ಕಠಿಣ” ಆದರೆ ದೀರ್ಘಾವಧಿಯಲ್ಲಿ ಕಂಪನಿಗೆ ಲಾಭವಾಗಲಿದೆ ಎಂದು ತಿಳಿಳಿದ್ದಾರೆ. ಕಳೆದ ಹಲವಾರು ತಿಂಗಳುಗಳಲ್ಲಿ, ನಾವು ಕಂಪನಿಯಾದ್ಯಂತ ಆಳವಾದ ನೋಟವನ್ನು ತೆಗೆದುಕೊಂಡಿದ್ದೇವೆ, ವ್ಯವಹಾರದ ಮೂಲಕ ವ್ಯವಹಾರ, ಆವಿಷ್ಕಾರದ ಮೂಲಕ ಆವಿಷ್ಕಾರ, ಮತ್ತು ಸಾಕಷ್ಟು ಆದಾಯ, ಕಾರ್ಯಾಚರಣೆಯ ಆದಾಯ, ಉಚಿತ ಹಣದ ಹರಿವನ್ನು ಹೆಚ್ಚಿಸಲು ಪ್ರತಿ ಉಪಕ್ರಮದ ದೀರ್ಘಾವಧಿಯ ಸಾಮರ್ಥ್ಯದ ಬಗ್ಗೆ ನಮಗೆ ಬದ್ಧತೆ ಇದೆಯೇ ಎಂದು ನಮ್ಮನ್ನು ನಾವು ಕೇಳಿಕೊಂಡಿದ್ದೇವೆ. ಹೂಡಿಕೆ ಮಾಡಿದ ಬಂಡವಾಳದ ಮೇಲೆ ಹಿಂತಿರುಗಿಸುತ್ತದೆ…