Author: Prajatv Kannada

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ಕಾಂಗ್ರೆಸ್‌ (Congress) ಅಭ್ಯರ್ಥಿಗಳನ್ನು ಕಣಕ್ಕಿಳಿಸುವ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿದ್ದರಾಮಯ್ಯಗೆ (Siddaramaiah) ಕೋಲಾರ (Kolara) ಟಿಕೆಟ್‌ ಕೈತಪ್ಪಿದೆ. ವರುಣಾ (Varuna) ಜೊತೆಗೆ ಕೋಲಾರದಿಂದಲೂ ಸ್ಪರ್ಧಾಕಾಂಕ್ಷಿಯಾಗಿದ್ದ ಸಿದ್ದು ಆಸೆಗೆ ಹೈಕಮಾಂಡ್‌ ತಣ್ಣೀರೆರಚಿದೆ. ಕೋಲಾರದಲ್ಲಿ ಸಿದ್ದರಾಮಯ್ಯ ಬದಲಿಗೆ ಕೊತ್ತೂರ್‌ ಜಿ. ಮಂಜುನಾಥ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ವರುಣಾದಿಂದಲೇ ಸ್ಪರ್ಧಿಸಿ ಎಂದು ಹೈಕಮಾಂಡ್‌ ಸ್ಪಷ್ಟ ಸಂದೇಶ ಕೊಟ್ಟಿದೆ. ಸಿದ್ದರಾಮಯ್ಯ ವರುಣಾ ಹಾಗೂ ಕೋಲಾರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದರು. ಕೋಲಾರದಲ್ಲಿ ಸಮಾವೇಶ ಕೂಡ ನಡೆಸಿ ಶಕ್ತಿ ಪ್ರದರ್ಶಿಸಿದ್ದರು. ಕೋಲಾರದಿಂದ ಸ್ಪರ್ಧಿಸಲು ಸಿದ್ಧರಿದ್ದರೂ ಹೈಕಮಾಂಡ್‌ ನಾಯಕರು ಮಾತ್ರ ರೆಡ್‌ ಸಿಗ್ನಲ್‌ ತೋರಿಸಿದ್ದರು. ನೀವು ವರುಣಾದಿಂದಲೇ ಸ್ಪರ್ಧಿಸಿ ಎಂದು ಸೂಚನೆ ಕೊಟ್ಟಿದ್ದರು. ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಬ್ಯಾಲೆನ್ಸ್‌ ಮಾಡಲು ತುಂಬಾ ಕಷ್ಟ ಆಗುತ್ತದೆ. ವರುಣಾವನ್ನು ಮಾತ್ರ ಕೇಂದ್ರೀಕರಿಸಿದರೆ ಗೆಲುವು ಸುಲಭವಾಗಬಹುದು ಎಂದು ಹೈಕಮಾಂಡ್‌ ಸಲಹೆ ಕೊಟ್ಟಿತ್ತು.

Read More

ಬೆಂಗಳೂರು: ಕನ್ನಡ ನಟ, ಹೋರಾಟಗಾರ ಚೇತನ್ ಅಹಿಂಸಾ ಅವರಿಗೆ ಭಾರತದಲ್ಲಿ ಬಂದು ವಾಸಿಸಲು ನೀಡಲಾಗಿದ್ದ ಭಾರತೀಯ ಸಾಗರೋತ್ತರ ಪೌರತ್ವವನ್ನು (Overseas Citizenship of India – OCI) ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ಕುರಿತಂತೆ, ಏ. 14ರಂದು (ಶುಕ್ರವಾರ) ಅವರಿಗೆ ವಿದೇಶಿಗರ ಪ್ರಾದೇಶಿಕ ನೋಂದಾವಣಿ ಕಚೇರಿಯಿಂದ (Foreigners Regional Registration Office – FRRO) ವತಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಪೇಕ್ಷಿತ ಹಾಗೂ ಆಕ್ಷೇಪಾರ್ಹ ಬರಹಗಳನ್ನು ಹಾಕುವ ಮೂಲಕ, ಭಾರತದಲ್ಲಿ ಸಾಮಾಜಿಕ ಶಾಂತಿ ಹಾಗೂ ಸಾರ್ವಜನಿಕರ ನೆಮ್ಮದಿಗೆ ಧಕ್ಕೆ ತರುವುದನ್ನು ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ನೋಟಿಸ್ ನಲ್ಲೇನಿದೆ? ಏ. 14ರಂದು, ಚೇತನ್ ಅಹಿಂಸಾ ಅವರಿಗೆ ಪತ್ರವೊಂದು ಬಂದಿದೆ. ಅದು ಮಾ. 28ರಂದು ವಿದೇಶಿಗರ ಪ್ರಾಂತೀಯ ನೋಂದಾವಣೆ ಕಚೇರಿಯಿಂದ ಬಂದಿದ್ದ ನೋಟಿಸ್. ಅದರಲ್ಲಿ ಚೇತನ್ ಅಹಿಂಸಾ ಅವರ ಒಐಸಿ ರದ್ದುಗೊಳಿಸಿರುವುದನ್ನು ತಿಳಿಸಲಾಗಿದೆ. ಜೊತೆಗೆ, ‘ನಿಮಗೆ ನೀಡಲಾಗಿರುವ ಐಒಸಿ ಕಾರ್ಡನ್ನು ಇನ್ನು 15 ದಿನದಲ್ಲಿ ಕೇಂದ್ರ ಸರ್ಕಾರಕ್ಕೆ…

Read More

ಬೆಂಗಳೂರು: ಲಕ್ಷ್ಮಣ ಸವದಿ ಬಿಜೆಪಿ ತೊರೆದಿದ್ದಕ್ಕಾಗಿ ಪೀಡೆ ತೊಲಗಿತು ಎಂದು ಹೇಳಿಕೆ ಕೊಡುವ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ತಲೆಯ ಮೇಲೆ ತಾವೇ ಕಲ್ಲು ಹಾಕುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸವದಿ ಒಬ್ಬ ಗಾಣಿಗ ಲಿಂಗಾಯತ ಹಿರಿಯ ನಾಯಕ. ಬಿಜಾಪುರ, ಬಾಗಲಕೋಟೆ ಹಾಗೂ ಕೊಪ್ಪಳ ಭಾಗದಲ್ಲಿ ಗಾಣಿಗ ಲಿಂಗಾಯತರು ಇದ್ದಾರೆ. ಸುಮಾರು 10 ರಿಂದ 12 ಕ್ಷೇತ್ರಗಳಲ್ಲಿ ಸವದಿಗೆ ಪ್ರಭಾವ ಇದೆ. ಹೇಳದೇ ಕೇಳದೇ ಅವರನ್ನು ಡಿಸಿಎಂ ಸ್ಥಾನದಿಂದ ತೆಗೆದು ಹಾಕಿದ್ರು ಎಂದರು. ರಮೇಶ್ ಮಾತು ಅವರಿಗೇ ಹೊಡೆತ ಕೊಡುತ್ತದೆ. ಸವದಿ ಪರ ಮತ್ತಷ್ಟು ಅನುಕಂಪ ಸೃಷ್ಟಿಯಾಗುತ್ತದೆ. ಸವದಿ ಅವರು ಲಿಂಗಾಯತ ಸಮುದಾಯದ ಹಿರಿಯ ನಾಯಕರಾಗಿದ್ದಾರೆ. ಡಿಸಿಎಂ ಮಾಡಿ ಹೇಳದೇ ಕೇಳದೇ ತೆಗೆದು ಹಾಕಿದ್ರು. ಟಿಕೆಟ್ ಕೊಡ್ತೀವಿ ಅಂತಾ ಹೇಳಿ ಅನ್ಯಾಯ ಮಾಡಿದ್ರು. ಹೀಗಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಅವರ ಪಕ್ಷ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹೊಸ ಶಕ್ತಿ…

Read More

ಬೆಂಗಳೂರಿನ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಖಾಸಗಿ ವಾಹಿನಿಯವ ಸೆಟ್ ಪ್ರಾಪರ್ಟಿ ಇಟ್ಟಿದ್ದ ರೂಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ರಾಪರ್ಟಿ ನಾಶವಾಗಿದೆ. 12 ಗಂಟೆ ವೇಳೆಗೆ ಸಡನ್ ಆಗಿ ಬೆಂಕಿ ಕಾಣಿಸಿಕೊಂಡು, ಕ್ಷಣಮಾತ್ರದಲ್ಲಿ ಪ್ರಾಪರ್ಟಿ ಇಟ್ಟಿದ್ದ ಗೋಡೌನ್ ತುಂಬಾ ಬೆಂಕಿ ಆವರಿಸಿದೆ. ಇನ್ನೂ ಅಬ್ಬಯ್ಯನಾಯ್ಡು ಸ್ಟುಡಿಯೋ ಗೋಡೌನ್ ಗೆ ಬೆಂಕಿ  ಬಿದ್ದ ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ಸಿಬ್ಬಂದಿಯು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಲ್ಲದೇ ಬೆಂಕಿ ಅವಘಡಕ್ಕೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಈಗಾಗಲೇ ಮೊದಲ ಪಟ್ಟಿಯಲ್ಲಿ 124 ಹಾಗೂ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್‌ ಈಗ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, ಇನ್ನು 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ. ಶುಕ್ರವಾರವಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಲಕ್ಷ್ಮಣ್‌ ಸವದಿಗೆ ಅಥಣಿ ಟಿಕೆಟ್‌ ನೀಡಲಾಗಿದೆ. ಸಿದ್ದರಾಮಯ್ಯನವರ ಎರಡು ಕ್ಷೇತ್ರ ಸ್ಪರ್ಧೆಗೆ ಸೊಪ್ಪುಹಾಕದ ಕಾಂಗ್ರೆಸ್‌ ಹೈಕಮಾಂಡ್‌ ಕೋಲಾರ ಕ್ಷೇತ್ರಕ್ಕೆ ಕೊತ್ತೂರು ಮಂಜುನಾಥ್‌ ಅವರಿಗೆ ಟಿಕೆಟ್‌ ನೀಡಿದೆ. ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಎದುರು ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್‌ ನೀಡಲಾಗಿದ್ದು, ಚಿಕ್ಕಪೇಟೆಗೆ ಆರ್ ವಿ ದೇವರಾಜ್ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಕುಂದಗೋಳದಲ್ಲಿ ಹಾಲಿ ಶಾಸಕಿ ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್‌ ನೀಡಲಾಗಿದ್ದು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಕಾಂಗ್ರೆಸ್‌ ಅಭ್ಯರ್ಥಿಗಳ ಮೂರನೇ ಪಟ್ಟಿ! ಅಥಣಿ: ಲಕ್ಷ್ಮಣ್‌ ಸವದಿ ರಾಯಭಾಗ (ಎಸ್‌ಸಿ): ಮಹಾವೀರ್‌…

Read More

ಬೆಂಗಳೂರು:ಅರಸೀಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ವಂಚಿತ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಸಂಬಂಧಿ ಎನ್‌ಆರ್‌ ಸಂತೋಷ್‌ ಅಧಿಕೃತವಾಗಿ ಜೆಡಿಎಸ್‌ ಸೇರಿದ್ದಾರೆ. ಶನಿವಾರ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ತೆನೆ ಹೊತ್ತ ಸಂತೋಷ್‌ಗೆ ಅರಸೀಕೆರೆ ಟಿಕೆಟ್‌ ಖಚಿತವಾಗಿದೆ ಎಂದು ತಿಳಿದುಬಂದಿದೆ. ಈ ಮೊದಲು ಅರಸೀಕೆರೆಯಲ್ಲಿ ಕೆಎನ್‌ ಶಿವಲಿಂಗೇಗೌಡರು ಜೆಡಿಎಸ್‌ನಿಂದಲೇ ಶಾಸಕರಾಗಿದ್ದರು. ಅವರು ಕಾಂಗ್ರೆಸ್‌ ಸೇರಿದ ಬಳಿಕ ಅಶೋಕ್‌ ಬಾಣಾವರ್‌ ಎಂಬುವವರನ್ನು ಜೆಡಿಎಸ್‌ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿತ್ತು. ಆದರೆ, ಈಗ ಎನ್‌ಆರ್‌ ಸಂತೋಷ್‌ ಅವರಿಗೆ ಟಿಕೆಟ್‌ ಫೈನಲ್‌ ಆಗಿದೆ ಎಂದು ಹೇಳಲಾಗುತ್ತಿದ್ದು, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಸಮ್ಮುಖದಲ್ಲಿ ಅಶೋಕ್‌ ಅವರನ್ನು ಮನವೊಲಿಸಿ ಸಂತೋಷ್‌ಗೆ ಟಿಕೆಟ್‌ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಮೂರು ವರ್ಷದಿಂದ ಅರಸೀಕೆರೆ ಕ್ಷೇತ್ರದಲ್ಲಿ ಸಂತೋಷ್‌ ಸಕ್ರಿಯರಾಗಿದ್ದರು. ಈ ಬಾರಿ ಬಿಜೆಪಿ ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಸಂತೋಷ್‌ ಬದಲಿಗೆ ಜಿವಿ ಬಸವರಾಜು ಅವರಿಗೆ ಟಿಕೆಟ್‌ ನೀಡಲಾಗಿತ್ತು. ಇದರಿಂದ ಬೇಸತ್ತ…

Read More

ಬೆಂಗಳೂರು: ಇತ್ತೀಚೆಗೆ, ಬಿಟಿಎಂ ಲೇಔಟ್ ನ ಬಿಜೆಪಿ ಘಟಕದಲ್ಲಿ ಗುರುತಿಸಿಕೊಂಡಿರುವ ಅನಿಲ್ ಶೆಟ್ಟಿ ಎಂಬುವರು ಟ್ವೀಟ್ ಮಾಡಿ, ನನ್ನ ಸೇವೆಯನ್ನು ಪರಿಗಣಿಸಿಯೂ ಪಕ್ಷ ನನಗೆ ಟಿಕೆಟ್ ಕೊಟ್ಟಿಲ್ಲ. ಆದರೂ, ನಾನು ಪಕ್ಷವನ್ನು ಬಿಡುವುದಿಲ್ಲ. ನಾನು ನನ್ನ ಪಕ್ಷಕ್ಕೆ ನಿಷ್ಠನಾಗಿರುತ್ತೇನೆ ಎಂದು ಹೇಳಿದ್ದರು. ಆ ಟ್ವೀಟ್ ಗೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೆ, ಇಂಥ ವ್ಯಕ್ತಿಗಳು ಸಮಾಜ ಸೇವೆ ಮಾಡುವಂತೆ ಪ್ರೋತ್ಸಾಹಿಸಬೇಕು ಎಂದು ಬಿಜೆಪಿ ಹಾಗೂ ಆರ್ ಎಸ್ ಎಸ್ ಗಣ್ಯರನ್ನು ಆಗ್ರಹಿಸಿದ್ದಾರೆ. ನಮ್ಮ ಇಂದಿನ ಭಾರತದ ರಾಜಕೀಯದಲ್ಲಿ, ಅನಿಲ್ ಶೆಟ್ಟಿಯವರಂಥ ಯುವ ನಾಯಕರು ಬೇಕು. ಪ್ರಜಾ ಸೇವೆಯೊಂದಕ್ಕೇ ತಮ್ಮನ್ನು ತಾವು ಮುಡಿಪಾಗಿಡುವಂಥ ಯುವ ನಾಯಕರ ಅವಶ್ಯಕತೆ ನಮ್ಮ ದೇಶಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಎಸ್ ಎಸ್ ನ ಸಹ ಸರಕಾರ್ಯವಾಹ ಮುಂಕುಂದ ಸಿ.ಆರ್ ಹಾಗೂ ಆರ್ ಎಸ್ ಎಸ್ ನ ಸರಕಾರ್ಯವಾಹ ದತ್ತಾತ್ರೇಯ…

Read More

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಅಧ್ಯಕ್ಷರಾಗಿದ್ದಾಗ ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್‌ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರಾಗಿದೆ. ಶಾಸಕ ವಿರೂಪಾಕ್ಷಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ನ್ಯಾ. ಜಯಂತ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. 5 ಷರತ್ತುಗಳನ್ನ ವಿಧಿಸಿ ಜಾಮೀನು ನೀಡಲಾಗಿದೆ. ಲಂಚ ಪಡೆದ ಪ್ರಕರಣದಲ್ಲಿ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಈಚೆಗೆ ಬಂಧಿಸಿದ್ದರು. ನಂತರ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ವಿರೂಪಾಕ್ಷಪ್ಪ ಜೊತೆ ಅವರ ಪುತ್ರ ಪ್ರಶಾಂತ್‌ ಮಾಡಾಳ್‌, ಅವರ ಖಾಸಗಿ ಕಚೇರಿಯ ಅಕೌಂಟೆಂಟ್‌ ಸುರೇಂದ್ರ, ಚಿತ್ರದುರ್ಗದ ಭೀಮಸಂದ್ರ ನಿವಾಸಿ ಸಿದ್ದೇಶ್‌, ಬೆಂಗಳೂರಿನ ಕರ್ನಾಟಕ ಅರೋಮಾಸ್‌ ಕಂಪನಿಯ ನೌಕರರಾದ ಆಲ್ಬರ್ಟ್‌ ನಿಕೋಲಸ್‌ ಮತ್ತು ಗಂಗಾಧರ ಅವರನ್ನು ಕೆಎಸ್‌ಡಿಎಲ್‌ ಕಚ್ಚಾವಸ್ತು ಪೂರೈಕೆಯಲ್ಲಿನ ಲಂಚ ಪ್ರಕರಣದಲ್ಲಿ ಮಾರ್ಚ್‌ 2ರಂದು ಬಂಧಿಸಲಾಗಿತ್ತು. ಅವರೆಲ್ಲರೂ ಈವರೆಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

Read More

ಕೆ.ಆರ್.ಪುರ.: ರಾಜಕೀಯವಾಗಿ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಮಹದೇಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಮಾದಿಗ ಸಮುದಾಯದ ಮುಖಂಡರಿಗೆ  ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳು ಟಿಕೆಟ್ ನೀಡಿ ಒಳ ಮೀಸಲಾತಿ ಅನುಗುಣವಾಗಿ ಗುರುತಿಸಬೇಕೆಂದು ಬೆಂಗಳೂರು ಪೂರ್ವ ತಾಲೂಕು ಆದಿಜಾಂಭವ ಜನ ಸಂಘ, ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಒತ್ತಾಯ ಮಾಡಿದರು. ಕೆಆರ್ ಪುರದಲ್ಲಿರುವ ಬೆಂಗಳೂರು ಪೂರ್ವ ತಾಲೂಕು ಕಚೇರಿಯಲ್ಲಿ  ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪೂರ್ವ ತಾಲೂಕು ಅಧ್ಯಕ್ಷ ವಿ.ಕೃಷ್ಣಮೂರ್ತಿ, ಮಹದೇಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಮಾದಿಗ ಸಮುದಾಯದ ಮುಖಂಡರಿಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ   ಟಿಕೆಟ್ ನೀಡುವ ಮೂಲಕ ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು. Video Player 00:00 00:19 2008 ರಲ್ಲಿ ವರ್ತೂರು ವಿಧಾನಸಭಾ ಕ್ಷೇತ್ರದಿಂದ ಪುನರ್ ವಿಂಗಡನೆ ನಂತರ ರಚನೆಯಾದ  ಸತತವಾಗಿ  ಮಹದೇವಪುರ ಮೀಸಲು ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಭೋವಿ ಜನಾಂಗ ದವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗುತ್ತಿದೆ,…

Read More

ತೆಲುಗು ಚಿತ್ರರಂಗದ ಖ್ಯಾತ ನಟಿ ಸಮಂತಾ ಎಷ್ಟೇ ತೊಂದರೆಗಳು ಎದುರಾದರೂ ಯಾವುದಕ್ಕೂ ಅಂಜದೆ ಮುಂದೆ ಸಾಗುತ್ತಿದ್ದಾರೆ. ಸಾಕಷ್ಟು ನೋವುಗಳ ನಡುವೆಯೂ ದಿಟ್ಟ ತನದಿಂದ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ನಿನ್ನೆ ತಾನೆ ಸಮಂತಾ ನಟನೆಯ ಶಾಕುಂತಲಂ ಸಿನಿಮಾ ರಿಲೀಸ್ ಆಗಿದೆ. ಶಾಕುಂತಲಂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಚಿತ್ರಕ್ಕೆ ಬರುತ್ತಿರುವ ಕಾಮೆಂಟ್ಸ್‌ನಿಂದಾಗಿ ಖುಷಿಯಲ್ಲಿರುವ ಸಮಂತಾ ಬಗ್ಗೆ ನಿರ್ಮಾಪಕನೊಬ್ಬ ಕಟುವಾಗಿ ಮಾತನಾಡಿದ್ದಾರೆ. ನಟಿ ಸಮಂತಾಳದ್ದು ಅಜ್ಜಿ ಮುಖ, ಅವಳ ವೃತ್ತಿ ಜೀವನ ಮುಗಿದಿದೆ ಎಂದು ಹೇಳುವ ಮೂಲಕ ನಿರ್ಮಾಪಕ ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ತೆಲುಗು ನಿರ್ಮಾಪಕ ಚಿಟ್ಟಿಬಾಬು ಸಮಂತಾ ವಿರುದ್ಧ ಮಾತನಾಡಿದ್ದಾರೆ. ಶಾಕುಂತಲೆ ಅಪ್ರತಿಮ ಸೌಂದರ್ಯವತಿ, ಆದರೆ ಸಮಂತಾಗೆ ಆ ಪಾತ್ರ ಸೂಟ್‌ ಆಗಲ್ಲ. ಸಮಂತಾ ಮುಖ ಕಿತ್ತುಹೋಗಿದೆ. ಅದಕ್ಕಾಗಿ ಜನರನ್ನು ಸೆಳೆಯಲು ನಾನು ಸತ್ತುಹೋಗುತ್ತೇನೆ ಅದೂ ಇದು ಎಂದು ಹೈ ಡ್ರಾಮಾ ಮಾಡ್ತಿದ್ದಾರೆ. ಈ ಹಿಂದೆ ಯಾವುದೋ ಸಿನಿಮಾಕ್ಕೆ ಬೆಡ್ ಮೇಲೆ ಮಲಗಿ ಡಬ್ಬಿಂಗ್ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಳು. ಇದೆಲ್ಲಾ ಅವರ ಪ್ರಚಾರ ಗಿಮಿಕ್. ಹಿಂದೆ…

Read More