Author: Prajatv Kannada

ಬೆಂಗಳೂರು: ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ಪ್ರಚಾರ ಮಾಡಿದಾಗಿನಿಂದ ಸುದ್ದಿಯಲ್ಲಿದ್ದಾರೆ. ಅದರಲ್ಲೂ ‘ಬೊಮ್ಮಾಯಿ ಮಾಮ’ ಪರವಾಗಿ ಪ್ರಚಾರ ಮಾಡಿದಾಗಿನಿಂದ ಹಿಡಿದು ಅವರ ಈ ನಡೆಯ ಬಗ್ಗೆ ಪರ ವಿರೋಧಗಳು ಕೇಳಿ ಬರುತ್ತಿದ್ದವು. ಇಂದು ರಾಜ್ಯದ ಭವಿಷ್ಯ ನಿರ್ಧಾರ ಆಗುವ ದಿನ ಆಗಿದ್ದು ಕಿಚ್ಚ ಸುದೀಪ್ ಪುಟ್ಟೇನಹಳ್ಳಿ ಆಕ್ಸ್‌ಫರ್ಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂದರ್ಭ ಅವರು ತಮ್ಮ ಮಗಳ ಪ್ರಥಮ ಮತದಾನದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಂದರ್ಭ ಮಾತನಾಡಿದ ಕಿಚ್ಚ “ನನ್ ಮಗಳು ಫಸ್ಟ್ ಟೈಮ್ ವೋಟ್ ಮಾಡ್ತಿದಾಳೆ. ರೋಡ್ ತುಂಬಾ ವೀಡಿಯೋ ಮಾಡ್ತಾ ಬಂದೆ. ನನ್ನ ಮಗಳು ಏನೆ ಮಾಡಿದ್ರು ಅದನ್ನ ವೀಡಿಯೋ ಮಾಡಿ ಸೆಲೆಬ್ರೇಟ್ ಮಾಡ್ತೀನಿ, ಯಂಗ್​ಸ್ಟರ್ಗಳು ಕಲವ್ರು ಬಂದಿಲ್ಲ, ಅವರೂ ಬರ್ತಾರೆ ಬಿಡಿ. ಅದೇ ಊರಲ್ಲಿ ಹೋಗಿ ಮೈಕ್ ಹಾಕ್ಕೊಂಡ್ ನಿತ್ಕೊಂತಿನಿ. ನಾನು ಕ್ಯಾಂಪೇನ್ ಮಾಡಿರೋ ಜಾಗದಲ್ಲಿ ಬದಲಾವಣೆಗಳು ಆಗಬೇಕು. ನಾನು ಟೀಮ್​ನಲ್ಲಿ ಆಟಗಾರ ಆಗಿರಬೇಕು. ಕ್ಯಾಪ್ಟನ್,ಉಪಮುಖ್ಯಂಮತ್ರಿ ಆಗಲ್ಲ. ರಮ್ಯಾ ನನ್ನ ಫ್ರೆಂಡ್. ಮುಂದೆ ರಾಜಕೀಯ ಇಷ್ಟ ಆದ್ರೆ ಬರ್ತೀನಿ” ಎಂದಿದ್ದಾರೆ.

Read More

ಬೆಂಗಳೂರು: ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಬೆಂಗಳೂರಿನ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಬಸವನಗುಡಿಯಲ್ಲಿ ಮಾತನಾಡಿದ ಅವರು, ಇದ್ದಕ್ಕಿದ್ದಂತೆ, ಕಾಂಗ್ರೆಸ್ ಪಕ್ಷವು ಎಲ್ಲವನ್ನೂ ಪ್ರಾರ್ಥಿಸಲು ಪ್ರಾರಂಭಿಸಿದೆ. ಕಳೆದ ವಾರ ಬಜರಂಗ ಬಲಿ ದೇವಾಲಯಗಳಿಗೆ ಭೇಟಿ ನೀಡುವುದು ಅಥವಾ ಗ್ಯಾಸ್ ಸಿಲಿಂಡರ್‌ನಲ್ಲಿ ದೇವರನ್ನು ನೋಡುತ್ತಿರುವುದು. ಹಿಂದೂ ತತ್ವದ ಪ್ರಕಾರ ಎಲ್ಲದರಲ್ಲೂ ದೇವರು ಕಾಣುತ್ತಾರೆ. ಅದನ್ನೇ ಕಾಂಗ್ರೆಸ್ ಮಾಡುತ್ತಿದೆ” ಎಂದು ಪಕ್ಷದ ನಾಯಕರನ್ನು ಲೇವಡಿ ಮಾಡಿದ್ದಾರೆ. ” ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷವು ಎಲ್‌ಪಿಜಿ ಸಿಲಿಂಡರ್‌ಗಳಿಗೆ ಪ್ರಾರ್ಥನೆ ಸಲ್ಲಿಸುವುದನ್ನು ನಾವು ನಿಜವಾಗಿಯೂ ಸ್ವಾಗತಿಸುತ್ತೇವೆ. ಕಾಂಗ್ರೆಸ್ ಏನನ್ನಾದರೂ ಪೂಜೆಮಾಡುತ್ತಿರುವುದು ನಮಗೆ ಸಂತೋಷವಾಗಿದೆ” ಎಂದು ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

Read More

ಬೆಂಗಳೂರು: ನಟ, ನಿರ್ದೇಶಕ ಪ್ರೇಮ್ ಹಾಗೂ ನಟಿ ರಕ್ಷಿತಾ ದಂಪತಿ ಒಟ್ಟಾಗಿ ಬಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಮತಗಟ್ಟೆಯಲ್ಲಿದ ಜನರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ನಿರ್ದೇಶಕ ಪ್ರೇಮ್, ದುಡ್ಡು ಪಡೆದುಕೊಂಡು ಯಾರೂ ಮತ ಹಾಕಬೇಡಿ. ಒಬ್ಬೊಬ್ಬರು ಮನೆ ಹತ್ತಿರ ವೋಟ್ ಹಾಕಿ ಎಂದು ಬರುತ್ತಾರೆ. ಇನ್ನು ಕೆಲವರು ಬಂದು ಇದು ನನ್ನ ಕೊನೆಯ ಚುನಾವಣೆ. ಹೀಗಾಗಿ ಮತ ಹಾಕಿ ಎನ್ನುತ್ತಾರೆ. ಆದರೆ ಯಾವುದೇ ಕಾರಣಕ್ಕೂ ನಿಮ್ಮ ಹಕ್ಕನ್ನು ಮಾರಿಕೊಳ್ಳಬೇಡಿ. ಒಳ್ಳೆಯ ವ್ಯಕ್ತಿ, ಕೆಲಸ ಮಾಡುವ ಅಭ್ಯರ್ಥಿಗೆ ಮತ ನೀಡಿ ಎಂದು ಹೇಳಿದರು. ಮತದಾನ ಪ್ರತಿಯೊಬ್ಬರ ಅಧಿಕಾರ ಆಗಿದ್ದು, ಪ್ರತಿಯೊಬ್ಬ ನಾಗರೀಕರೂ ಅವಕಾಶ ಬಳಸಿಕೊಳ್ಳಬೇಕು. ಯಾರು ಚೆನ್ನಾಗಿ ಕೆಲಸ ಮಾಡುತ್ತಾರೆ, ಒಳ್ಳೆಯ ಅಭಿವೃದ್ಧಿ ಮಾಡುವವರಿಗೆ ಮತ ನೀಡಿ ಎಂದು ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.

Read More

ಕೊಪ್ಪಳ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುವುದಾದರೆ ಕಾಂಗ್ರೆಸ್ ಪಕ್ಷಕ್ಕೆ ನನ್ನ ಪಕ್ಷವಾದ ಕೆಆರ್ ಪಿಪಿ ಪಕ್ಷವು ಬೆಂಬಲ ಘೋಷಿಸಲಿದೆ ಎಂದು ಕೆಆರ್ ಪಿಪಿ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ತಿಳಿಸಿದ್ದಾರೆ. ಗಂಗಾವತಿಯಲ್ಲಿ ಮತ ಚಲಾಯಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ವಿಚಾರ ತಿಳಿಸಿದರು. “ಫಲಿತಾಂಶದ ನಂತರ ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ‌ ನೀಡಬೇಕಾದ ಅವಶ್ಯಕತೆ ಇದ್ದು, ಕಾಂಗ್ರೆಸ್ ಪಕ್ಷ ಬೆಂಬಲಿಸಿಲು ಕೇಳಿದರೆ, ಸಿದ್ದರಾಮಯ್ಯ ಸಿಎಂ ಆಗುವ ಸಂದರ್ಭ ಏನಾದರೂ ಇದ್ದರೇ ಖಂಡಿತವಾಗಿ ಬೆಂಬಲ ಸೂಚಿಸುತ್ತೇನೆ’’ ಎಂದು ಹೇಳಿದರು. ಅಚ್ಚರಿಯೆಂದರೆ, ಹಿಂದೆ 2012ರ ಸಮಯದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ, ಸಿದ್ದರಾಮಯ್ಯ ಹಾಗೂ ಗಾಲಿ ಜನಾರ್ದನ ರೆಡ್ಡಿಯವರಿಗೆ ಸದನದಲ್ಲಿ ಭಾರೀ ಮಾತಿನ ಚಕಮಕಿ ನಡೆದಿತ್ತು. ಆಗ, ಜನಾರ್ದನ ರೆಡ್ಡಿಯವರು ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಬಳ್ಳಾರಿಗೆ ಬಂದು ಕಾಂಗ್ರೆಸ್ ಸಮಾವೇಶ ಮಾಡಿ ಎಂದು ಸವಾಲು ಹಾಕಿದ್ದರು. ಇದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿತ್ತು. ರೆಡ್ಡಿಯವರ ಸವಾಲಿಗೆ ಸಿದ್ದರಾಮಯ್ಯನವರು ಸದನದಲ್ಲೇ ಸೆಡ್ಡು ಹೊಡೆದು ನಾವು (ಕಾಂಗ್ರೆಸ್) ಬಳ್ಳಾರಿಯಲ್ಲಿ…

Read More

ವಿಜಯಪುರ: ತಪ್ಪು ಮಾಹಿತಿಯಿಂದ ಗ್ರಾಮಸ್ಥರೇ ಮತಯಂತ್ರಗಳನ್ನು (Voting Machine) ಒಡೆದು ಪುಡಿಪುಡಿ ಮಾಡಿದ ಘಟನೆ ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ. Video Player 00:00 00:46 ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗಳ ಮೇಲೂ ಹಲ್ಲೆ ಮಾಡಲಾಗಿದೆ. ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆ ಮಾಡಲು ಇವಿಎಂ, ವಿವಿಪ್ಯಾಟ್ ‌ಮಶೀನ್‌ಗಳನ್ನು ರಿಸರ್ವ್ ಇಡಲಾಗಿತ್ತು. ಆದ್ರೆ ವಾಪಸ್ ತರೋದನ್ನ ಗಮನಿಸಿ ಜನರು ಸಿಬ್ಬಂದಿಗಳನ್ನ…

Read More

ಮಂಡ್ಯ: ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ (Sumalata) ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ದೊಡ್ಡರಸಿಕೆರೆ ಗ್ರಾಮದ ಮತದಾನ (Election) ಕೇಂದ್ರದಲ್ಲಿ ಮತ (Voting) ಚಲಾಯಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಕೂಡ. ಹಾಗಾಗಿ ತಪ್ಪದೇ ಎಲ್ಲರೂ ಮತದಾನ ಮಾಡಿ. ಯಾರು ವೋಟು ಹಾಕುವುದಿಲ್ಲವೋ ಅವರು ಪ್ರಶ್ನೆ ಮಾಡುವ ಹಕ್ಕನ್ನೇ ಕಳೆದುಕೊಳ್ಳುತ್ತಾರೆ’ ಎಂದು ಮಾತನಾಡಿದರು. ಕುಟುಂಬ ಸಮೇತ ಸಾಮಾನ್ಯರಂತೆ ಮತದಾನ ಕೇಂದ್ರಕ್ಕೆ ಬಂದ ಡಾಲಿ ಧನಂಜಯ್ ಮತದಾನ ಮಾಡಿದ್ದಾರೆ. ಸಹೋದರಿ, ಸಹೋದರ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಅರಸಿಕೆರೆ ತಾಲ್ಲೂಕು ಕಾಳೇನಹಳ್ಳಿ ಮತದಾನ ಕೇಂದ್ರಕ್ಕೆ ಆಗಮಿಸಿದ್ದ ಧನಂಜಯ್, ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಬಂದಿದ್ದ ರಿಷಬ್ ಶೆಟ್ಟಿ ಮತದಾನ ಮಾಡುವ…

Read More

ರಾಮನಗರ: ಡಿಕೆ ಶಿವಕುಮಾರ್ (DK Shivakumar) ತಮ್ಮ ಹುಟ್ಟೂರು ದೊಡ್ಡಲಹಳ್ಳಿಯಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ತೆರಳಿ ಮತ ಚಲಾಯಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ತಮ್ಮೂರಿನ ಬಗ್ಗೆ ಬಹಳ ಹೆಮ್ಮೆಯಿಂದ ಮಾತಾಡಿದರು. ರಾಜ್ಯದೆಲ್ಲೆಡೆ ಮತದಾನದ (voting) ಸಂಭ್ರಮ ನಡೆಯುತ್ತಿದೆ, ಬದಲಾವಣೆಯ ಗಾಳಿ ಬೀಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. Video Player 00:00 00:57 ಕಾಂಗ್ರೆಸ್ ಪಕ್ಷ ಇತರ ಪಕ್ಷಗಳಂತೆ ಕೇವಲ ಭರವಸೆ ನೀಡುವ ಪಕ್ಷವಲ್ಲ, ನೀಡಿದ ಭರವಸೆಗಳನ್ನು ಈಡೇರಿಸುವ ಪಕ್ಷ. ಪಕ್ಷದ ಚಿಹ್ನೆ ಹಸ್ತದಲ್ಲಿರುವ 5 ಬೆರಳುಗಳ ಸೂಚಕವಾಗಿ 5 ಗ್ಯಾರಂಟಿಗಳನ್ನು (guarantees) ನೀಡಿದ್ದೇವೆ, ಅವುಗಳನ್ನ ಈಡೇರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದರು. ರಾಜ್ಯದ ಮತದಾರರು ತಮ್ಮ ವಿವೇಕ, ವಿವೇಚನೆ ಮತ್ತು ಜ್ಞಾನ ಬಳಸಿ ಭ್ರಷ್ಟ ಸರ್ಕಾರವನ್ನು ಹೊಡೆದೋಡಿಸುವ ಪವಿತ್ರ ದಿನ ಇದಾಗಿದೆ ಎಂದು ಶಿವಕುಮಾರ್ ಹೇಳಿದರು.

Read More

ಬೆಂಗಳೂರು: ಯುವಕರು ತಪ್ಪದೇ ಮತದಾನ ಮಾಡಬೇಕೆಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನವಿ ಮಾಡಿದ್ದಾರೆ. ಬ್ಯಾಟರಾಯನಪುರ ಕ್ಷೇತ್ರದಲ್ಲಿರುವ ರಾಚೇನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್, ಪತ್ನಿ ಗೀತಾ ಹಾಗೂ ಮಗಳ ಜತೆ ಆಗಮಿಸಿ ಮತದಾನ ಮಾಡಿದ್ದಾರೆ. ಮತದಾನ ಕರ್ತವ್ಯ ಪೂರೈಸಿದ ನಂತರ ಜನತೆಗೆ ಮತದಾನದ ಮಹತ್ವವನ್ನು ಹೇಳಿದ್ದಾರೆ. ‘ಯುತ್ಸ್ ಎಲ್ಲಾ ಬಂದು ಮತದಾನ ಮಾಡಿ. ಒಂದು ವೋಟ್​ನಿಂದ ಒಳ್ಳೆ ವ್ಯಕ್ತಿಯನ್ನ ಆಯ್ಕೆ ಮಾಡಲು ಸಾಧ್ಯ. ನಾವಿಬ್ಬರೂ ವೋಟ್ ಮಾಡಿದ್ದೇವೆ. ದಯವಿಟ್ಟು ಎಲ್ಲರೂ ವೋಟ್ ಮಾಡಿ ಕರ್ತವ್ಯ ನಿರ್ವಹಿಸಿ. ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡಿದರೆ ಒಳ್ಳೆಯ ಅಭ್ಯರ್ಥಿ ಆಯ್ಕೆಯಾಗ್ತಾರೆ. ಯುವಕರು ಈ ದಿನವನ್ನು ವ್ಯರ್ಥ ಮಾಡದೇ ನಿಮ್ಮ ಮತವನ್ನು ಬಳಸದೇ ಇರಬೇಡಿ’ ಎಂದು ಶಿವಣ್ಣ ಕರೆ ನೀಡಿದರು.

Read More

ಬೆಂಗಳೂರು: ಟೀಮ್​ ಇಂಡಿಯಾದ ಮಾಜಿ ಆಟಗಾರರಾದ ರಾಹುಲ್​ ಡ್ರಾವಿಡ್​ ಅವರು ತಮ್ಮ ಹಕ್ಕನ್ನು ಚಲಾಯಿಸಿದರು. ಪ್ರಸ್ತುತ ಟೀಮ್​ ಇಂಡಿಯಾದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರು ಮಲ್ಲೇಶ್ವರಂ ಕ್ಷೇತ್ರದ ಡಾಲರ್ಸ್ ಕಾಲೋನಿ ಮತಗಟ್ಟೆ 53ರಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು. ಇನ್ನೂ ನಟ ಉಪೇಂದ್ರ, ರಕ್ಷಿತ್​ ಶೆಟ್ಟಿ, ರಿಷಭ್​ ಶೆಟ್ಟಿ, ರಮೇಶ್​ ಅರವಿಂದ್​, ಶ್ರೀ ಮುರುಳಿ, ಅಮೂಲ್ಯ, ಮಾಲಾಶ್ರೀ, ಹರ್ಷಿಕಾ ಪೂಣಚ್ಚ, ನಟ ನೆನಪಿರಲಿ ಪ್ರೇಮ್​, ಡಾಲಿ ಧನಂಜಯ್​, ವಿಕ್ಕಿ ವರುಣ್​, ಕೃಷಿ ತಾಪಂಡ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈಗಾಗಲೇ ತಮ್ಮ ಮತವನ್ನು ಚಲಾಯಿಸಿದ್ದಾರೆ.

Read More

ಬೀದರ್ : ಮತದಾನ ಮಾಡಲು ಜನರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ಆರೋಪದ ಮಧ್ಯೆ ತಾಳಿ ಕಟ್ಟಿ ನೇರವಾಗಿ ಮದುವೆ ಡ್ರೆಸ್‌ನಲ್ಲೇ ವರ ಮತದಾನ ಕೇಂದ್ರಕ್ಕೆ ಬಂದು ತನ್ನ ಮತದಾನದ (Vote) ಹಕ್ಕು ಚಲಾಯಿಸಿದ್ದಾರೆ. ವರ ಕಾರ್ತಿಕ್‌ ಪಾಟೇಲ್‌ ಮತದಾನ ಮಾಡಿದ ವ್ಯಕ್ತಿ. ಬೀದರ್‌ನ (Bidar) ಓಲ್ಡ್ ನಾವದಗಿಯಲ್ಲಿರುವ ತಮ್ಮ ಮನೆಯಲ್ಲೇ ಮದುವೆಯಿತ್ತು. ಈ ವೇಳೆ ಕಾರ್ತಿಕ್‌ ವಧುವಿಗೆ ತಾಳಿ ಕಟ್ಟಿ ಬಳಿಕ ಕುಟುಂಬ ಸಮೇತರಾಗಿ ನೇರವಾಗಿ ಮತಗಟ್ಟೆಗೆ ಬಂದಿದ್ದಾರೆ. ನಂತರ ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಕಾರ್ತಿಕ್‌ ಪಾಟೀಲ್‌ ಅವರು, ಇದು ಪ್ರಜಾಪ್ರಭುತ್ವದ ಹಬ್ಬ. ಹೀಗಾಗಿ ಎಲ್ಲರೂ ತಪ್ಪದೆ ಮತದಾನ ಮಾಡಬೇಕು. ನಾನು ಕೂಡಾ ತಾಳಿ ಕಟ್ಟಿ ನೇರವಾಗಿ ಮತಗಟ್ಟೆ ಬಂದು ಮತದಾನ ಮಾಡಿದ್ದು ನಾವು ಅಭಿವೃದ್ಧಿಗಾಗಿ ಮತದಾನ ಮಾಡೋಣ ಎಂದು ವರ ಸಮಾಜಕ್ಕೆ ಮತದಾನ ಮಹತ್ವದ‌ ಸಂದೇಶ ನೀಡಿದರು

Read More