Author: Prajatv Kannada

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಸಂಕಷ್ಟ ಬೆಂಬಿಡದಂತೆ ಕಾಣ್ತಿದೆ. ಸ್ವಾತಂತ್ರ್ಯ ಹೋರಾಟಗಾರ ವಿ.ಡಿ ಸಾವರ್ಕರ್ (VD Savarkar) ಅವರ ಮೊಮ್ಮಗ, ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಹಿಂದೆ ರಾಹುಲ್‌ ಗಾಂಧಿ ಲಂಡನ್‌ಗೆ ತೆರಳಿದ್ದಾಗ ತಮ್ಮ ಭಾಷಣದಲ್ಲಿ ವಿ.ಡಿ ಸಾವರ್ಕರ್ ವಿರುದ್ಧ ತಪ್ಪು ಆರೋಪ ಮಾಡಿದ್ದಾರೆ ಎಂಬುದಾಗಿ ಈ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ ಎಂದು ಮೊಮ್ಮಗ ಸತ್ಯಕಿ ಸಾವರ್ಕರ್ (Satyaki Savarkar) ತಿಳಿಸಿದ್ದಾರೆ. ಸತ್ಯಕಿ ಪರ ವಕೀಲರು ಸಿಟಿ ಸಿವಿಲ್‌ ಕೋರ್ಟ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ (IPC) ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕೋರ್ಟ್‌ ಅಧಿಕಾರಿ ಇಂದು ಗೈರು ಹಾಜರಾಗಿದ್ದ ಕಾರಣ ಪ್ರಕರಣದ ಸಂಖ್ಯೆ ಪಡೆಯಲು ಶನಿವಾರ ಆಗಮಿಸುವಂತೆ ಸೂಚಿಸಲಾಗಿದೆ ಇನ್ನೂ ಕೇಸ್ ಸಂಖ್ಯೆ ಸಿಕ್ಕಿಲ್ಲ ಎಂದು ಸತ್ಯಕಿ ಸಾವರ್ಕರ್ ಹೇಳಿದ್ದಾರೆ. ರಾಗಾ ಹೇಳಿದ್ದೇನು? ಲಂಡನ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿಯವರು ಸಾವರ್ಕರ್ ವಿಷಯ ಪ್ರಸ್ತಾಪಿಸಿದ್ದರು. ʻತಾವು ಹಾಗೂ ತಮ್ಮ 5-6 ಮಂದಿ ಸ್ನೇಹಿತರು ಸೇರಿ ಓರ್ವ ಮುಸ್ಲಿಂ…

Read More

ಹೊಸದಿಲ್ಲಿ: ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಸುಮಾರು ಮೂರು ದಶಕಗಳಷ್ಟು ಹಿಂದಿನ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸಿದ ಕರ್ನಾಟಕದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ವಿವಾದಾತ್ಮಕ ನಿರ್ಧಾರ ಕೋರ್ಟ್ ಮೆಟ್ಟಿಲೇರಿದೆ. ಈ ನಿರ್ಧಾರ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಗುರುವಾರ ಒಪ್ಪಿಕೊಂಡಿದೆ. ಇದೇ ವಿಚಾರವನ್ನು ಬೇರೆ ನ್ಯಾಯಪೀಠದ ಮುಂದೆಯೂ ಪ್ರಸ್ತಾಪಿಸಲಾಗಿತ್ತು. ಆದರೆ ಪೀಠವು ಅದನ್ನು ವಿಚಾರಣೆಗೆ ಸ್ವೀಕರಿಸಿರಲಿಲ್ಲ ಎಂದು ಕಪಿಲ್ ಸಿಬಲ್ ಹೇಳಿದರು. ಅರ್ಜಿಯಲ್ಲಿನ ಎಲ್ಲ ದೋಷಗಳನ್ನು ಇನ್ನೂ ಸರಿಪಡಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಕಾರಣ ತಿಳಿಸಿದರು. ಆದರೆ ಸಿಬಲ್ ಅವರು ದೋಷಗಳನ್ನು ಸರಿಪಡಿಸಲಾಗಿದೆ ಎಂದು ಪೀಠಕ್ಕೆ ಮಾಹಿತಿ ನೀಡಿದರು. ಬಳಿಕ ಸಿಜೆಐ ಚಂದ್ರಚೂಡ್ ಅವರು ‘ನಾವು ಅದನ್ನು ಲಿಸ್ಟ್ ಮಾಡಲಿದ್ದೇವೆ’ ಎಂದು ತಿಳಿಸಿದರು. ಇದಕ್ಕೂ ಮುನ್ನ ಕರ್ನಾಟಕದಲ್ಲಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರವು ಒಬಿಸಿ ವರ್ಗದಿಂದ ಮುಸ್ಲಿಮರನ್ನು ಹೊರಗಿಡಲು ನಿರ್ಧರಿಸಿತ್ತು. 2ಬಿ ಕೆಟಗರಿ ಅಡಿ ಅವರಿಗೆ ನೀಡಲಾಗಿದ್ದ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಈ…

Read More

ಕೋಲಾರ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದಿಂದ ಬಿ ಫಾರಂ ಪಡೆಯುವ ಕನಸು ಇಟ್ಟುಕೊಂಡಿದ್ದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮೋಹನ್ ಕೃಷ್ಣಾಗೆ ನಿರಾಸೆಯಾಗಿದೆ. ಬಿಜೆಪಿ ಟಿಕೆಟ್ ಮಾಜಿ ಶಾಸಕ ಸಂಪಂಗಿ ಮಗಳು ಅಶ್ವಿನಿ ಸಂಪಂಗಿ ಅವರ ಪಾಲಾಗಿದೆ. ಇದರಿಂದ ಅಸಮಾಧಾನಗೊಂಡ ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದಾರೆ. ಇದೀಗ ಕೆಜಿಎಫ್ ಕ್ಷೇತ್ರದಲ್ಲೂ ಸಹ ಬಿಜೆಪಿ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕ್ಷೇತ್ರದಲ್ಲಿ ನಾಲ್ಕೈದು ವರ್ಷಗಳಿಂದ ಸೇವೆ ಮಾಡುತ್ತಿರುವ ಮೋಹನ್ ಕೃಷ್ಣಗೆ ಟಿಕೆಟ್ ಕೈತಪ್ಪಲು ಸಂಸದ ಮುನಿಸ್ವಾಮಿ ಅವರೇ ನೇರ ಕಾರಣ ಎಂದು ಆರೋಪಿಸಿದ್ದಾರೆ.‌ ಅವರು ನಾಲಾಯಕ್ ಸಂಸದರು, ಅವರಿಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಸಂಸದರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇನ್ನು ಕೆಜಿಎಫ್ ಕ್ಷೇತ್ರದಲ್ಲಿ ಬಿಜೆಪಿಗೆ ನಾವು ಮತ ನೀಡುವುದಿಲ್ಲ. ಬಿಜೆಪಿ ನಾಲ್ಕನೇ ಸ್ಥಾನದಲ್ಲಿರುತ್ತದೆ. ಮೋಹನ್ ಕೃಷ್ಣ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ…

Read More

ಮೈಸೂರು: ಸಚಿವ ಸೋಮಣ್ಣ ಸ್ಪರ್ಧೆಯಿಂದ ವರುಣಾ ಕ್ಷೇತ್ರ ಸಾಕಷ್ಟು ಹೈವೋಲ್ಟೇಜ್ ಪಡೆದುಕೊಂಡಿದೆ. ಸಿದ್ದು ಹಾಗೂ ಸೋಮಣ್ಣ ನಡುವಿನ ಕಾದಾಟಕ್ಕೆ ವರುಣಾ ಸಾಕ್ಷಿಯಾಗಲಿದೆ. ಈ ನಡುವೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸೋಮಣ್ಣ ಅವರಿಗೆ ಆತಂಕ ತಂದೊಡ್ಡುವಂಥ ಘಟನೆಯೊಂದು ನಡೆದಿದೆ. ಸೋಮಣ್ಣಗೆ ಸಿಗಲಿಲ್ವಾ ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಸಿಗಲಿಲ್ವಾ ಅನ್ನೋ ಮಾತು ಎಲ್ಲೆಡೆ ಜೋರಾಗಿಯೇ ಹರಿದಾಡುತ್ತಿದೆ. ಚಾಮುಂಡಿ ದರ್ಶನ ಪಡೆದ ಸೋಮಣ್ಣ ನಂತ್ರ ದೇಗುಲ ಮುಂಭಾಗದಲ್ಲಿ ಈಡುಗಾಯಿ ಒಡೆದ್ರು. ಈಡುಗಾಯಿಯ ಕಾಯಿ ಒಡೆಯಲೇ ಇಲ್ಲ.ಇಳಿ ತೆಗೆದು ಈಡುಗಾಯಿ ಒಡೆದಾಗ ಹೋಳಾಗದ ತೆಂಗಿನ ಕಾಯಿಯನ್ನ ನೋಡಿ ಸೋಮಣ್ಣ ವಿಚಲಿತ ರಾದ್ರು.ಮತ್ತೆ ಅದೇ ತೆಂಗಿನಕಾಯಿ ತೆಗೆದುಕೊಂಡು ಮತ್ತೊಮ್ಮೆ ಈಡುಗಾಯಿ ಹೊಡೆದ ಸೋಮಣ್ಣ ಕಾಯಿ ಹೋಳಾದ ಮೇಲೆ ನಿಟ್ಟುಸಿರುಬಿಟ್ರು. ಜೊತೆಗಿದ್ದವರಿಂದ ಸ್ಥೈರ್ಯ ತುಂಬುವ ಯತ್ನ ಯಾವಾಗ ಈಡುಗಾಯಿ ಒಡೆಯಲಿಲ್ಲವೋ ಸೋಮಣ್ಣನವರು ಅರೆಕ್ಷಣ ದಿಗ್ಭ್ರಾಂತರಾದರು. ಅದನ್ನು ಗಮನಿಸಿದ ಸೋಮಣ್ಣ ಜೊತೆಗಿದ್ದ ಕಾರ್ಯಕರ್ತರು, “ಏನೂ ಆಗಲ್ಲ ಸರ್, ಇನ್ನೊಂದು ಸಲ ಹೊಡೆಯಿರಿ’’ ಎಂದ ಸಮಾಧಾನ ಮಾಡಿದ್ರು. ಇನ್ನೊಂದ್ ಸಲ ಕಾಯಿ ತಗೊಂಡು…

Read More

ಮಂಡ್ಯ :  ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯು ಗುರುವಾರದಿಂದ ಆರಂಭವಾಗಿದ್ದು, ಮದ್ದೂರು ವಿಧಾನ ಸಭಾ ಕ್ಷೇತ್ರದಲ್ಲಿ ಮೊದಲ ದಿನ ಇಬ್ಬರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಮದ್ದೂರು ತಾಲ್ಲೂಕಿನ ಗುಡಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ಜಿ.ಬಿ. ಮಂಜುನಾಥ್ ಪತ್ನಿ ರಶ್ಮಿ ಹಾಗೂ ಬೆಂಬಲಿಗರೊಂದಿಗೆ ಆಗಮಿಸಿ ತಾಲ್ಲೂಕು ಕಛೇರಿಯಲ್ಲಿದ್ದ ಚುನಾವಣಾಧಿಕಾರಿ ಆರ್.ನಾಗರಾಜ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾನು ಗ್ರಾಮ ಪಂಚಾಯಿತಿ ಸದಸ್ಯನಾಗಿ ಜನಪರ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದೇನೆ. ಇದರ ಜೊತೆಗೆ ಮದ್ದೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಈ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ. ಕ್ಷೇತ್ರದಲ್ಲಿ ಇಲ್ಲಿಯವರೆಗೂ ಆಡಳಿತ ನಡೆಸಿರುವ ಜನಪ್ರತಿನಿಧಿಗಳು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮೀತಿ ಮೀರಿದ ಲಂಚಗುಳಿತನವನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಹಾಗೂ ರೈತರ ಬಹು ಬೇಡಿಕೆಯಾದ ಕಬ್ಬು ಮತ್ತು ಹಾಲಿಗೆ ಬೆಂಬಲ ಬೆಲೆ ನಿಗದಿ ಸೇರಿದಂತೆ ಎಲ್ಲಾ ನ್ಯೂನತೆಗಳನ್ನು ಸರಿಪಡಿಸುವ ಒಂದೇ ಗುರಿಯನ್ನು ಹೊಂದಿದ್ದೇನೆ. ನವ ಮದ್ದೂರು ಕಟ್ಟುವ ನನ್ನ ಸಂಕಲ್ಪಕ್ಕೆ…

Read More

ಚಿತ್ರದುರ್ಗ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election) ಹಿನ್ನೆಲೆ ಟಿಕೆಟ್‌ ಕೈತಪ್ಪಿದ ಆಕಾಂಕ್ಷಿಗಳಿಂದ ಮೂರು ಪ್ರಮುಖ ಪಕ್ಷಗಳಿಗೆ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್‌ (Congress) ಪಾಳಯದಲ್ಲಿ ಬಂಡಾಯ ಶಮನಕ್ಕೆ ಕಾರ್ಯತಂತ್ರ ರೂಪಿಸಲಾಗಿದೆ. ಬಂಡಾಯಗಾರರನ್ನು ತಣ್ಣಗಾಗಿಸುವ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar) ಗಿಮಿಕ್‌ ಮಾಡ್ತಿದ್ದಾರಾ ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದೆ. ಹೌದು, ಮೊಳಕಾಲ್ಮೂರು ಬಂಡಾಯ ಶಮನ ಯಶಸ್ವಿಯಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಹಾಕಿದ್ದ ಪೋಸ್ಟ್‌ ಸುಳ್ಳೆಂದು ಟಿಕೆಟ್‌ ಆಕಾಂಕ್ಷಿಯಾಗಿದ್ದ ಯೋಗೇಶ್‌ ಬಾಬು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಡಿಕೆಶಿ ಅವರು ಗಿಮಿಕ್‌ ಮಾಡ್ತಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್‌ ಮಾಜಿ ಶಾಸಕ ಎನ್‌.ವೈ.ಗೋಪಾಲಕೃಷ್ಣ ಅವರಿಗೆ ಟಿಕೆಟ್‌ ನೀಡಲಾಗಿದೆ. ಟಿಕೆಟ್ ಸಿಗದೆ ನೊಂದಿದ್ದ ಯೋಗೇಶ್ ಬಾಬು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. ಬಂಡಾಯ ಶಮನಕ್ಕೆ ಮುಂದಾಗಿರುವ ಡಿಕೆಶಿ ಪೋಸ್ಟ್‌ವೊಂದನ್ನು ಹಾಕಿದ್ದರು. ಟಿಕೆಟ್‌ ಸಿಗದೆ ನೊಂದಿದ್ದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಯೋಗೇಶ್‌…

Read More

ರಾಮನಗರ: ಕನಕಪುರದಲ್ಲಿ (Kanakapura) ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್‌ (DK Shivakumar) ಆಥಿತ್ಯ ಸ್ವೀಕರಿಸ್ತೀವಿ, ಮಿಲ್ಟ್ರಿ ಹೋಟೆಲ್‌ ಊಟಾನೂ ಮಾಡ್ತೀವಿ, ವೋಟನ್ನೂ ತಗೋಂಡು ಚುನಾವಣೆ ಗೆಲ್ತೀವಿ ಎಂದು ಸಚಿವ ಅಶ್ವಥ್‌ ನಾರಾಯಣ (Aswath Narayan) ತಿರುಗೇಟು ನೀಡಿದ್ದಾರೆ. ʻಬಿಜೆಪಿ ಅಭ್ಯರ್ಥಿಗೆ ಕನಪುರದಲ್ಲಿ ಒಳ್ಳೆಯ ಆಥಿತ್ಯ ಕೊಡ್ತಿವಿʼ ಎಂಬ ಡಿಕೆಶಿ ಹೇಳಿಕೆ ಕುರಿತು ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಥಿತ್ಯವನ್ನೂ ಸ್ವೀಕರಿಸ್ತೀವಿ. ಮಿಲ್ಟ್ರಿ ಹೋಟೆಲ್ (Military Hotels) ಊಟಾನೂ ಮಾಡ್ತೀವಿ, ವೋಟನ್ನೂ ತಗೋಡು ಚುನಾವಣೆಯಲ್ಲೂ ಗೆಲ್ತೀವಿ, ಈ ಬಾರಿ ಜಯಭೇರಿ ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕನಕಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆರ್.ಅಶೋಕ್ ಸ್ಪರ್ಧೆ ಕುರಿತು ಮಾತನಾಡಿ, ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ವಿರುದ್ಧದ ಅಲೆ ಇದೆ. ಜನರಿಗೆ ಸಂಪೂರ್ಣ ಅತೃಪ್ತಿ ಇದೆ. ಹಾಗಾಗಿ ಅಲ್ಲಿ ಬಿಜೆಪಿ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ. ಹಾಗಾಗಿ ನಮ್ಮ ಪಕ್ಷದ ಹಿರಿಯ ನಾಯಕ ಆರ್.ಅಶೋಕ್ ಅವರನ್ನ ಕಣಕ್ಕಿಳಿಸಿದ್ದೇವೆ ಎಂದಿದ್ದಾರೆ. ರಾಮನಗರ ಜಿಲ್ಲೆಯ 4 ಕ್ಷೇತ್ರಗಳಲ್ಲೂ…

Read More

ಕಾರವಾರ: ಚಿತ್ರದುರ್ಗದ (Chitradurga) ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ರವರು (Goolihatti Shekar) ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ (Resignation) ನೀಡಿದ್ದಾರೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಗೆ (Sirsi) ಆಗಮಿಸಿದ ಗೂಳಿಹಟ್ಟಿ ಶೇಖರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ (Vishweshwar Hegde Kageri) ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಗೆ (Election) ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ. ಎಸ್‌ಸಿ (SC) ಜನಾಂಗದವರು ಎಸ್‌ಸಿ ಕ್ಷೇತ್ರದಲ್ಲಿ ನಿಲ್ಲಬೇಕು, ಎಸ್‌ಟಿ (ST) ಕ್ಷೇತ್ರದಲ್ಲಿ ಎಸ್‌ಟಿ ಜನಾಂಗದವರು ಚುನಾವಣೆಗೆ ನಿಲ್ಲಬೇಕು. ಜನರಲ್‌ನವರು (General) ಜನರಲ್‌ನಲ್ಲಿ ನಿಲ್ಲಬೇಕು ಎಂಬ ನಿಯಮ ನಾವೇ ಮಾಡಿಕೊಂಡಿದ್ದೇವೆ. ಈ ನಿಯಮದಡಿ ಪಕ್ಷ ಸಿದ್ಧಾಂತ ಹಾಗೂ ಸಾಮಾಜಿಕ ನ್ಯಾಯದ ನಿಯಮ ಮಾಡಿಕೊಂಡಿದೆ ಎಂದರು. ಎಸ್‌ಸಿ ಜನಾಂಗದವನಾಗಿ ಜನರಲ್‌ನಲ್ಲಿ ಟಿಕೆಟ್ ಕೇಳಿರುವುದು ನನ್ನ ತಪ್ಪು. ಪಕ್ಷದಲ್ಲಿ ಸಾಮಾಜಿಕ ನ್ಯಾಯ ಮತ್ತು ತತ್ವ ಸಿದ್ಧಾಂತಗಳು ಅವರದ್ದೇ ಆಗಿರುತ್ತದೆ. ಪಕ್ಷದ ಜನರಲ್‌ನಲ್ಲಿ ಟಿಕೆಟ್ ಕೇಳಿದ್ದರಿಂದ ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿದೆ.…

Read More

ಮೈಸೂರು:  ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಟಿಕೆಟ್‌ಗೆ ಪಟ್ಟು ಹಿಡಿದಿದ್ದ ಭವಾನಿ ರೇವಣ್ಣ ಅವರು ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್‌ ಪಡದೇ ತೀರುವ ಹಠಕ್ಕೆ ಬಿದ್ದಿದ್ದ ಎಚ್‌ಡಿ ರೇವಣ್ಣ ಕುಟುಂಬ ಕೊನೆಗೆ ಕ್ಷೇತ್ರ ಬದಲಿಸಿ ಸ್ಪರ್ಧೆ ಮಾಡುವ ನಿರ್ಧಾರ ಮಾಡಿದೆ ಎನ್ನಲಾಗಿದೆ. ಮಾಜಿ ಸಚಿವರಾಗಿರುವ ಎಚ್‌ಡಿ ರೇವಣ್ಣ ತಮ್ಮ ಪತ್ನಿಗೆ ಟಿಕೆಟ್‌ ನೀಡದಿದ್ದರೆ ನಾನು ಕೂಡ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಇನ್ನು ಮಕ್ಕಳಾದ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರೆ ಕುಟುಂಬದಲ್ಲಿ ಹೊಸದಾಗಿ ಎಂಎಲ್‌ಸಿ ಆಗಿರುವ ಸೂರಜ್‌ ರೇವಣ್ಣ ಕೂಡ ಅದೇ ದಾರಿ ಹಿಡಿದಿದ್ದರು. ಆದರೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಎಚ್‌ಡಿ ಕುಮಾರಸ್ವಾಮಿ ಅವರೂ ಕೂಡ ಪಟ್ಟು ಬಿಡದೇ ಸಾಮನ್ಯ ಕಾರ್ಯಕರ್ತರಿಗೆ ಟಿಕೆಟ್‌ ನೀಡುವುದಾಗಿ ಹೇಳಿದ್ದರು. ಅಲ್ಲದೆ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಗೆಲ್ಲುವುದಿಲ್ಲ. ಹಾಸನ ಕ್ಷೇತ್ರದಲ್ಲಿ ಕಾರ್ಯಕರ್ತರ…

Read More

ಚಾಮರಾಜನಗರ: ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ‌ಮಾಡಿ ಪ್ರತಿಷ್ಠೆ ಪಣಕ್ಕಿಡಲು ಹೊರಟಿರುವ ಮಾಜಿ ಸಚಿವ ವಿ.ಸೋಮಣ್ಣ (V.Somanna) ಅವರನ್ನು ಕಟ್ಟಿ ಹಾಕಲು ಕಾಂಗ್ರೆಸ್ (Congress) ರಣತಂತ್ರ ಹೆಣೆಯುತ್ತಿದೆ. ವರುಣಾದಲ್ಲಿ ಹೆಚ್ಚು ಕೇಂದ್ರೀಕರಿಸದಂತೆ ಚಾಮರಾಜನಗರದಲ್ಲಿ (Chamarajanagara) ಕಟ್ಟಿ ಹಾಕಲು ರಣವ್ಯೂಹ ರಚಿಸಿದೆ. ಸಿದ್ದರಾಮಯ್ಯ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡಲು ಬಿಜೆಪಿ ಸೋಮಣ್ಣಗೆ ಟಿಕೆಟ್ ಕೊಟ್ಟಿದೆ. ಆದರೆ, ವರುಣಾಗೆ ಸೋಮಣ್ಣ ಹೋಗದಂತೆ ಚಾಮರಾಜನಗರದಲ್ಲೇ ಕಟ್ಟಿ ಹಾಕಲು ಕಾಂಗ್ರೆಸ್ ಮುಂದಾಗಿದ್ದು ಇದಕ್ಕೇ ಬಿಜೆಪಿ ಬಂಡಾಯವೇ ಬಂಡವಾಳವಾಗಿದೆ. ಸೋಮಣ್ಣಗೆ ಚಾಮರಾಜನಗರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಫೋಟವಾಗಿದೆ. ಟಿಕೆಟ್ ವಂಚಿತ ನಾಗಶ್ರೀ ಪ್ರತಾಪ್ ಅವರ ಬೆಂಬಲಿಗರು ಈಗಾಗಲೇ ಕೆರಳಿ ಕೆಂಡವಾಗಿದ್ದು, ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಕೆಆರ್‌ಐಡಿಎಲ್ ಅಧ್ಯಕ್ಷ ರುದ್ರೇಶ್ ಬಹಿರಂಗವಾಗಿಯೇ ಸೋಮಣ್ಣ ವಿರುದ್ಧ ಹರಿಹಾಯ್ದಿದ್ದು, ಗಂಭೀರ ಆರೋಪಗಳನ್ನು ಮಾಡಿದ್ದಾರೆ.

Read More