Author: Prajatv Kannada

ಚಿಕ್ಕಮಗಳೂರು: ಮಾಜಿ ಶಾಸಕ ವೈ.ಎಸ್.ವಿ ದತ್ತ (YSV Datta) ಅವರು ಮರಳಿ ಜೆಡಿಎಸ್‌ಗೆ (JDS) ಬಂದಿದ್ದಾರೆ. ಕಡೂರಿನಲ್ಲಿ (Kaduru) ಜೆಡಿಎಸ್ ಅಭ್ಯರ್ಥಿಯಾಗಿ ದತ್ತ ಸ್ಪರ್ಧೆ ಮಾಡಲಿದ್ದಾರೆ. ವೈ.ಎಸ್.ವಿ ದತ್ತ ಮನೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna), ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಇಂದು ಭೇಟಿ ನೀಡಿದರು. ಕಡೂರು ತಾಲೂಕಿನ ಯಗಟಿಯಲ್ಲಿರುವ ದತ್ತ ಅವರ ನಿವಾಸಕ್ಕೆ ತೆರಳಿ ಚರ್ಚಿಸಿದರು. ಕಡೂರಿನಲ್ಲಿ ದತ್ತ ಸ್ಪರ್ಧಿಸಲಿದ್ದಾರೆ ಎಂದು ಈ ವೇಳೆ ರೇವಣ್ಣ ಘೋಷಿಸಿದ್ದಾರೆ. ದತ್ತ ಅವರು ಇದೇ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಆಗ ಎಷ್ಟೇ ಕಷ್ಟ ಆದರೂ ಸರಿ ನಾನು ಬಂದೇ ಬರುತ್ತೇನೆ ಎಂದು ಹೆಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ ಎಂದು ರೇವಣ್ಣ ಹೇಳಿದ್ದಾರೆ. ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ದತ್ತ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಟಿಕೆಟ್ ನೀಡಲಿಲ್ಲ. ಹೀಗಾಗಿ ಬೇಸರಗೊಂಡು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್‌ನಲ್ಲೂ ಅವರಿಗೆ ಟಿಕೆಟ್ ಸಿಗಲಿಲ್ಲ. ಈ ವೇಳೆ ಬೇಸರ ವ್ಯಕ್ತಪಡಿಸಿದ ದತ್ತ…

Read More

ಚಿತ್ರದುರ್ಗ: ಭೋವಿ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡದ ಹಿನ್ನೆಲೆ ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ (Immadi Siddharameshwara Shri) ಅಸಮಾಧಾನ ಹೊರಹಾಕಿದ್ದಾರೆ. ಚಿತ್ರದುರ್ಗದ (chitradurga) ಭೋವಿ ಮಠದಲ್ಲಿ (Bovimath) ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅರವಿಂದ ಲಿಂಬಾವಳಿ ಮತ್ತು ಗೂಳಿಹಟ್ಟಿ ಶೇಖರ್ ಅವರನ್ನು ಕಡೆಗಣನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ ಅವರು ಹೆಚ್ಚಿನ ಅಂತರದಿಂದ ದಾಖಲೆಯ ಗೆಲುವು ಸಾಧಿಸಿದ್ದರು. ಅವರನ್ನು ಸಹ ಕಡೆಗಣನೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ಹಿಂದೆ 8 ರಿಂದ 10 ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿದ್ದರು. ಈ ಬಾರಿ ಎರಡೂ ರಾಷ್ಟ್ರೀಯ ಪಕ್ಷದ ವರಿಷ್ಠರಿಗೆ ಭೋವಿ ಸಮಾಜದ (Bovi community) ಮುಖಂಡರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೆವು. ಆದರೆ ಈ ಬಾರಿ ಸಮುದಾಯವನ್ನು ಎರಡು ರಾಷ್ಟ್ರೀಯ ಪಕ್ಷಗಳು ಕಡೆಗಣಿಸಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅರವಿಂದ ಲಿಂಬಾವಳಿ (Aravind Limbavali), ಗೂಳಿಹಟ್ಟಿ ಶೇಖರ್ (Gulihatti…

Read More

ಸೂರ್ಯೋದಯ: 06.08 AM, ಸೂರ್ಯಾಸ್ತ : 06.32 PM ಶಾಲಿವಾಹನ ಶಕೆ1945, ಶೋಭಕೃನ್ನಾಮ ಸಂವತ್ಸರ, ಸಂವತ್2079,ಚೈತ್ರ ಮಾಸ, ವಸಂತ ಋತು,ಕೃಷ್ಣ ಪಕ್ಷ, ಉತ್ತರಾಯಣ ತಿಥಿ: ಇವತ್ತು ಅಷ್ಟಮಿ 01:34 AM ತನಕ ನಂತರ ನವಮಿ 11:13 PM ತನಕ ನಂತರ ದಶಮಿ ನಕ್ಷತ್ರ: ಇವತ್ತು ಉತ್ತರ ಆಷಾಢ  09:14 AM ತನಕ ನಂತರ ಶ್ರವಣ ಯೋಗ: ಇವತ್ತು ಸಿದ್ದಿ 09:37 AM ತನಕ ನಂತರ ಸಾಧ್ಯ ಕರಣ: ಇವತ್ತು ಕೌಲವ 01:34 AM ತನಕ ನಂತರ ತೈತಲೆ 12:24 PM ತನಕ ನಂತರ ಗರಜ 11:13 PM ತನಕ ನಂತರ ವಣಿಜ ರಾಹು ಕಾಲ:10:30  ನಿಂದ 12:00 ವರೆಗೂ ಯಮಗಂಡ: 03:00 ನಿಂದ 04:30 ವರೆಗೂ ಗುಳಿಕ ಕಾಲ:  07:30 ನಿಂದ 9:00 ವರೆಗೂ ಅಮೃತಕಾಲ: 03.14 AM to 04.44 AM , 09.54 PM to 11.24 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:51 ನಿಂದ ಮ.12:41 ವರೆಗೂ ಮೇಷ…

Read More

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕಟ್ಟಿಹಾಕಲು ಬಿಜೆಪಿ ಭರ್ಜರಿ ಪ್ಲ್ಯಾನ್ ಮಾಡಿದ್ದು, ಅದರಂತೆ ಬಿಜೆಪಿಯ ಇಬ್ಬರು ಪ್ರಭಾವಿ ನಾಯಕರಾದ ವಿ. ಸೋಮಣ್ಣ ಹಾಗೂ ಆರ್ ಅಶೋಕ್ ಅವರನ್ನು ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿಸಿದೆ. ಡಿಕೆಶಿ ವಿರುದ್ಧ ಕನಕಪುರದಲ್ಲಿ ಅಶೋಕ್ ಸ್ಪರ್ಧೆ ಮಾಡಿದರೆ, ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸೋಮಣ್ಣ ಅಖಾಡಕ್ಕಿಳಿದಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಕೂಡಾ ಚಿಂತನೆ ನಡೆಸುತ್ತಿದೆ. ಸದ್ಯ ಪದ್ಮನಾಭನಗರದಲ್ಲಿ ಆರ್‌. ಅಶೋಕ್ ವಿರುದ್ಧ ರಘುನಾಥ ನಾಯ್ಡು ಅವರು ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ. ಅವರಿಗೆ ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಬಿಫಾರಂ ಕೂಡಾ ನೀಡಲಾಗಿದೆ. ಆದ್ರೆ ಕೊನೆಯ ಗಳಿಗೆಯಲ್ಲಿ ಅಭ್ಯರ್ಥಿ ಬದಲಾವಣೆಯ ಸಾಧ್ಯತೆಗಳು ಕೂಡಾ ಅಲ್ಲಗಳೆಯುವ ಹಾಗಿಲ್ಲ. ಕನಕಪುರದಲ್ಲಿ ಡಿಕೆಶಿಗೆ ಟಕ್ಕರ್ ಕೊಡಲು ಸಜ್ಜಾಗಿರುವ ಆರ್‌. ಅಶೋಕ್‌ ಅವರನ್ನು ಪದ್ಮನಾಭನಗರದಲ್ಲಿ ಕಟ್ಟಿಹಾಕಲು ಡಿಕೆಶಿ ಸಹೋಹರರು ಚಿಂತನೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಂಸದ ಡಿಕೆ ಸುರೇಶ್ ಅವರನ್ನು…

Read More

ಬೆಂಗಳೂರು: ರಾಜ್ಯ ಚುನಾವಣೆ ಹೊತ್ತಿನಲ್ಲಿ ಬೆಂಗಳೂರು ಸೇರಿ ರಾಜ್ಯದಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು, ಚುನಾವಣೆ ಆಯೋಗಕ್ಕೆ ಮತ್ತೆ ಕೊರೊನಾ ಟೆನ್ಷನ್ ಶುರುವಾಗಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಕಳೆದ ಒಂದು ವಾರ ದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ  ಕಂಡು ಬಂದಿದ್ದು, ಹೀಗಾಗಿ ಮತ್ತೆ ಮುನ್ನೆಚ್ಚರಿಕೆ ಕ್ರಮ ಗಳನ್ನ ಕೈಗೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ಚುನಾವಣೆ ರ್ಯಾಲಿ, ಮತದಾನ ವೇಳೆ ಕೋವಿಡ್ ಪ್ರಕರಣಗಳು ಸಂಖ್ಯೆ ಏರಿಕೆ ಭೀತಿ ಶುರುವಾಗಿದೆ. ಇನ್ನೂ ಈಗಾಗಲೇ ಆರೋಗ್ಯ ಇಲಾಖೆಯಿಂದ ಕೋವಿಡ್ 19 ಮಾರ್ಗಸೂಚಿ ಪ್ರಕಟವಾಗಿದ್ದು, ಆದರೆ ಕಟ್ಟುನಿಟ್ಟಾಗಿ ಪಾಲನೆಯಾಗದ ಹಿನ್ನೆಲೆ ಮತ್ತಷ್ಟು ನಿಯಮಗಳನ್ನ ಜಾರಿ ಮಾಡಲು ಚಿಂತನೆ ನಡೆಸಿದೆ. ಚುನಾವಣೆ ಪ್ರಚಾರದ ಅಬ್ಬರದಲ್ಲಿ ಕೋವಿಡ್ ಬಗ್ಗೆ ಜನ ಮರೆತಿದ್ದು, ಹೀಗಾಗಿ ಶೀಘ್ರದಲ್ಲೇ ಮತ್ತೊಂದು ಕೋವಿಡ್ ಮಾರ್ಗಸೂಚಿ ಬಿಡುಗಡೆ ಸಾದ್ಯತೆ ಇದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಚುನಾವಣಾ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ಕಡ್ಡಾಯ ಮಾಡಲು ಸೂಚಿಸಿದೆ. ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಕೋವಿಡ್ ಹರಡುವಿಕೆಯ ಪ್ರಕ್ರಿಯೆ ಹೆಚ್ಚಾದಲ್ಲಿ…

Read More

ಬೆಂಗಳೂರು: ಇಂದು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ HAL ನಲ್ಲಿ ಮಾತನಾಡಿದ ಅವರು, ಇಂದು ಸಂಜೆ 4ಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಭೇಟಿಯಾಗಿ, ರಾಜೀನಾಮೆ ಸಲ್ಲಿಸುವೆ. ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ. ಬಿಜೆಪಿ ತೊರೆಯಲು ನಿನ್ನೆಯೇ ನಿರ್ಧಾರ ಮಾಡಿದ್ದೇನೆ. ಹಾಗಾಗಿ ಬಿಜೆಪಿಯ ಯಾವುದೇ ನಾಯಕರನ್ನು ಭೇಟಿಯಾಗಲ್ಲ. ನಾನು ಇನ್ನೂ ಬಿಜೆಪಿ ಮನೆಯಲ್ಲೇ ಇದ್ದೇನೆ, ಬೇರೆ ಮಾತಾಡಲ್ಲ. ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ನಂತರ ಬೇರೆ ವಿಚಾರದ ಚರ್ಚೆ ಎಂದು ಹೇಳಿದ್ದಾರೆ.ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಭೇಟಿ ಬಗ್ಗೆ ಆಲೋಚನೆ ಮಾಡುತ್ತೇನೆ. ಚನ್ನರಾಜ ಹಟ್ಟಿಹೊಳಿ ನನ್ನ ಜೊತೆ ಬಂದಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭೇಟಿಯಾಗೋಣ ಅಂತಾ ಅವರೇ ಹೇಳುತ್ತಿದ್ದಾರೆ. ರಾಜೀನಾಮೆ ಬಳಿಕ ಕೆಲವು ವಿಚಾರ ಅವರ ಜೊತೆ ಹಂಚಿಕೊಳ್ಳುತ್ತೇನೆ. ಆ ವಿಚಾರಗಳಿಗೆ ಅವರು ಒಪ್ಪಿದರೆ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇನ್ನೂ ಅಥಣಿ…

Read More

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 5 ರಿಂದ ಆರಂಭವಾಗಿದ್ದು, ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮಾರ್ಚ್ 09 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಏಪ್ರಿಲ್ 5 ರಿಂದ 65 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಶುರುವಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನುಏಪ್ರಿಲ್ ತಿಂಗಳ 3 ನೇ ವಾರದಲ್ಲಿ ಪ್ರಕಟಿಸುವ ಉದ್ದೇಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಂದಿದೆ. ಮೇ. 5 ರಿಂದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2023 ಆರಂಭವಾಗಲಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂದಿನ ಐದಾರು ದಿನಗಳಲ್ಲಿ ಮೌಲ್ಯಮಾಪನ ಕಾರ್ಯ ಮುಗಿಸಿ, ಏಪ್ರಿಲ್ 3 ನೇ…

Read More

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ನಾಮಪತ್ರ ( Nomination File) ಸಲ್ಲಿಕೆ ಆರಂಭವಾಗಿದೆ. ಮೊದಲ ದಿನವಾದ ಗುರುವಾರ ಬಿಜೆಪಿ ಸೇರಿದಂತೆ ಹಲವು ಪಕ್ಷಗಳಿಂದ ನಾಮಪತ್ರವನ್ನು ಅಭ್ಯರ್ಥಿಗಳು ಸಲ್ಲಿಸಿದ್ದಾರೆ. ಮೊದಲ ದಿನವೇ ರಾಜ್ಯದ ವಿವಿಧೆಡೆ 221 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗವು ಮಾಹಿತಿಯನ್ನು ನೀಡಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಮೊದಲ ದಿನ 197 ಪುರುಷ ಅಭ್ಯರ್ಥಿಗಳು, 24 ಮಹಿಳಾ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿರುವುದಾಗಿ ತಿಳಿಸಿದೆ. ಗುರುವಾರ ಬಿಜೆಪಿ ಪಕ್ಷದಿಂದ 27 ಅಭ್ಯರ್ಥಿಗಳು, ಕಾಂಗ್ರೆಸ್ ಪಕ್ಷದಿಂದ 26, ಎಎಪಿ ಪಕ್ಷದಿಂದ 10, ಬಿಎಸ್ಪಿ ಪಕ್ಷದಿಂದ ಒಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ 100 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು ಮೊದಲ ದಿನವೇ ರಾಜ್ಯಾಧ್ಯಂತ 221 ಮಂದಿ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸರುವುದಾಗಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಮಾಹಿತಿಯನ್ನು ನೀಡಿದೆ. ಅಂದಹಾಗೇ ವಿಧಾನಸಭಾ ಚುನಾವಣೆಗೆ ( Assembly…

Read More

ಬೆಂಗಳೂರು: ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿರುವ ಜೆಡಿಎಸ್‌ ಈ ಬಾರಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಷ್ಟು ಮಂದಿ ಕುಟುಂಬ ಹಿನ್ನೆಲೆ ಹೊಂದಿರುವವರಿಗೆ ಟಿಕೆಟ್‌ ನೀಡಲಾಗಿದೆ ಎಂದು ಬಹಿರಂಗಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ಕರ್ನಾಟಕಕ್ಕೆ ಬಂದಾಗೆಲ್ಲಾ ಕುಟುಂಬ ರಾಜಕಾರಣ ಎಂದು ನಿರಂತರ ಬೊಬ್ಬಿರಿಯುವ ಗೃಹ ಸಚಿವ ಅಮಿತ್‌ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಹೇಳುವುದು ಒಂದು, ಮಾಡುವುದು ಒಂದು. ರಾಜ್ಯ ಚುನಾವಣೆಗೆ ಬಿಜೆಪಿ ಕರ್ನಾಟಕದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿರುವ ಪಟ್ಟಿ ನೀಡಿದ್ದೇವೆ, ಬಿಜೆಪಿ ನಾಯಕರು ನೈತಿಕತೆಯನ್ನು ಪ್ರಶ್ನಿಸಿಕೊಳ್ಳಲಿ ಎಂದು ತಿರುಗೇಟು ನೀಡಿದೆ. ಜೆಡಿಎಸ್‌ ಬಿಡುಗಡೆ ಮಾಡಿರುವ ಪಟ್ಟಿ ಈಗಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕುಟುಂಬ ರಾಜಕಾರಣದ ಕೂಸು, ಅವರ ತಂದೆ ಮಾಜಿ ಸಿಎಂ ಆಗಿದ್ದವರು 2. ಬಿಎಸ್‌ ಯಡಿಯೂರಪ್ಪ ತನ್ನ ಪುತ್ರನಿಗೆ ಶಾಸಕ ಟಿಕೆಟ್ ಕೊಡಿಸಲು ಯಶಸ್ವಿಯಾಗಿದ್ದು, ಅವರ ಮತ್ತೊಬ್ಬ ಪುತ್ರ ಸಂಸದರಾಗಿದ್ದಾರೆ. 3. ಶಾಸಕ ರವಿ…

Read More

ಬೆಂಗಳೂರು: ನಗರದಲ್ಲಿ ಇಂದು ಅಕ್ರಮವಾಗಿ ಆಟೋದಲ್ಲಿ ಸಾಗಿಸುತ್ತಿದ್ದಂತ 1 ಕೋಟಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಮೂಲಕ ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಠಾಣೆ ಸಮೀಪವೇ ಆಟೋವೊಂದು ಕೆಟ್ಟು ನಿಂತಿತ್ತು. ಸಮೀಪ ತೆರಳಿದಂತ ಹಲಸೂರು ಗೇಟ್ ಚೆಕ್ ಪೋಸ್ಟ್ ಪೊಲೀಸರು ಆಟೋವನ್ನು ಪರಿಶೀಲಿಸಿದಾಗ ಸೂಕ್ತ ದಾಖಲೆ ಇಲ್ಲದಂತ 1 ಕೋಟಿ ನಗದು ಪತ್ತೆಯಾಗಿದೆ. ಆಟೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದಂತ 1 ಕೋಟಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅಲ್ಲದೇ ಅಕ್ರಮವಾಗಿ 1 ಕೋಟಿ ಹಣ ಸಾಗಿಸುತ್ತಿದ್ದಂತ ಪ್ರವೀಣ್, ಸುರೇಶ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Read More