ಮಂಗಳವಾರ ಮ್ಯಾನ್ಮಾರ್ ಸೇನೆಯು ನಡೆಸಿದ ವೈಮಾನಿಕ ದಾಳಿಯಲ್ಲಿ ಹಲವು ಮಕ್ಕಳು ಸೇರಿದಂತೆ 100 ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದಾಗಿ ಸ್ಥಳೀಯ ಮಾದ್ಯಮಗಳು ವರದಿ ಮಾಡಿವೆ. ಮಿಲಿಟರಿ ಆಡಳಿತದ ವಿರೋಧಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ಸೇನೆಯು ಮನಬಂದಂತೆ ದಾಳಿ ನಡೆಸಿದ್ದು ದಾಳಿಯಲ್ಲಿ 100 ಕ್ಕೂ ಹೆಚ್ಚು ಮಂದಿ ಮೃತಟ್ಟಿದ್ದಾರೆ. ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ವೇದಾಂತ್ ಪಟೇಲ್ ಪ್ರತಿಕ್ರಿಯಿಸಿದ್ದು, ಹಿಂಸಾತ್ಮಕ ದಾಳಿಗಳ ಆಡಳಿತವು ಮಾನವ ಜೀವನವನ್ನು ಕಡೆಗಣಿಸುತ್ತದೆ. ಅಂತಹ ಆಡಳಿತವನ್ನು ಬಲವಾಗಿ ಖಂಡಿಸುತ್ತೇವೆ ಎಂದಿದ್ದಾರೆ. ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್, ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
Author: Prajatv Kannada
ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆರೋಗ್ಯ ಸಾಕಷ್ಟು ಕ್ಷೀಣಿಸಿದೆ. ಪುಟಿನ್ ಆರೋಗ್ಯದ ಕುರಿತು ಬಿಡುಗಡೆ ಮಾಡಿರುವ ವರದಿಯಲ್ಲಿ ಪುಟಿನ್ ದೃಷ್ಟಿ ಮಂಜಾಗುತ್ತಿದ್ದು, ಕೈ, ಕಾಲಿನ ಸ್ವಾಧೀನ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ ಪುಟಿನ್‌ಗೆ ಅತಿಯಾದ ತಲೆನೋವು, ದೃಷ್ಟಿ ಮಂಜಾಗುವುದು ಹಾಗೂ ನಾಲಿಗೆ ಮರಗಟ್ಟುವಿಕೆ ಉಂಟಾಗುತ್ತಿದೆ ಎಂದು ವೈದ್ಯರು ಹೇಳಿರುವುದಾಗಿ ರಷ್ಯಾದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪುಟಿನ್ ಈಗಾಗಲೇ ಬಲಗೈ ಮತ್ತು ಬಲಗಾಲಿನ ಭಾಗಶಃ ಸ್ವಾಧೀನ ಕಳೆದುಕೊಳ್ಳುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ಆರೈಕೆ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಆದ್ರೆ ಕ್ರೆಮ್ಲಿನ್ ಮತ್ತು ರಷ್ಯಾದ ಆರೋಗ್ಯ ಸಚಿವರು ಇದನ್ನು ನಿರಾಕರಿಸಿದ್ದು ಪುಟಿನ್ ಆರೋಗ್ಯವಾಗಿದ್ದಾರೆ ಎಂದು ಸಮರ್ಥನೆ ನೀಡಿದ್ದಾರೆ. ಈ ಹಿಂದೆಯೇ ವೈದ್ಯರು ಕೌನ್ಸಿಲಿಂಗ್ ಮಾಡಿ, ಔಷಧಿ ತೆಗೆದುಕೊಂಡು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರು. ಆದರೆ ಪುಟಿನ್ ವಿಶ್ರಾಂತಿ ಪಡೆಯಲು ನಿರಾಕರಿಸಿ, ಉಕ್ರೇನ್ ವಿರುದ್ಧ ಯುದ್ಧದ ಬೆಳವಣಿಗೆಯಲ್ಲಿ ತೊಡಗಿಕೊಂಡಿದ್ದ ಪರಿಣಾಮ ಆರೋಗ್ಯ ಮತ್ತಷ್ಟು ಬಿಗಡಾಯಿಸಿಕೊಂಡಿದೆ ಎನ್ನಲಾಗುತ್ತಿದೆ. ಈ ಹಿಂದೆ ರಷ್ಯಾದ ಬೇಹುಗಾರಿಕಾ ಸಂಸ್ಥೆ ಎಫ್‌ಎಸ್‌ಬಿ…
ಜೈಪುರ: ಅಜ್ಮೀರ್-ದೆಹಲಿ ಕಂಟೋನ್ಮೆಂಟ್ ಮಾರ್ಗದಲ್ಲಿ ರಾಜಸ್ಥಾನದ (Rajasthan) ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ (Vande Bharat Express) ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಬುಧವಾರ) ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ಈ ಮಾರ್ಗದಲ್ಲಿ ಓಡುತ್ತಿರುವ ಪ್ರಸ್ತುತ ವೇಗದ ರೈಲಿಗಿಂತ ಒಂದು ಗಂಟೆ ಮುಂಚಿತವಾಗಿ ರೈಲು ಪ್ರಯಾಣವನ್ನು ಪೂರ್ಣಗೊಳಿಸುತ್ತದೆ ಎಂದು ತಿಳಿಸಿದ್ದಾರೆ. ಇಂದು ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ರೈಲಿಗೆ ಚಾಲನೆ ನೀಡಿದರ. ರೈಲುಗಳು ಜೈಪುರ, ಅಲ್ವಾರ್ ಮತ್ತು ಗುರುಗ್ರಾಮ್ನಲ್ಲಿ ನಿಲುಗಡೆಯೊಂದಿಗೆ ಅಜ್ಮೀರ್ ಮತ್ತು ದೆಹಲಿ ಕಂಟೋನ್ಮೆಂಟ್ ನಡುವೆ ಕಾರ್ಯನಿರ್ವಹಿಸುತ್ತವೆ. ರೈಲು ದೆಹಲಿ ಕಂಟೋನ್ಮೆಂಟ್ ಮತ್ತು ಅಜ್ಮೀರ್ ನಡುವಿನ ದೂರವನ್ನು 5 ಗಂಟೆ 15 ನಿಮಿಷಗಳಲ್ಲಿ ಕ್ರಮಿಸುತ್ತದೆ. ಶತಾಬ್ದಿ ಎಕ್ಸ್ಪ್ರೆಸ್, ಪ್ರಸ್ತುತ ಈ ಮಾರ್ಗದಲ್ಲಿ ಅತ್ಯಂತ ವೇಗದ ರೈಲು ಆಗಿದ್ದು, ಇದು ಇದೇ ದೂರವನ್ನು 6 ಗಂಟೆ 15 ನಿಮಿಷಗಳಲ್ಲಿ ಕ್ರಮಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಅಜ್ಮೀರ್-ದೆಹಲಿ ಕಂಟೋನ್ಮೆಂಟ್ ವಂದೇ ಭಾರತ್ ಎಕ್ಸ್ಪ್ರೆಸ್ ಎತ್ತರದ ಓವರ್ಹೆಡ್ ಎಲೆಕ್ಟ್ರಿಕ್…
ಲಕ್ನೋ: ಬೀದಿ ನಾಯಿಗಳು ಹಿಂಡು ಹಿಂಡಾಗಿ 11 ವರ್ಷದ ಬಾಲಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಉತ್ತರಪ್ರದೇಶದ ಮಹಾರಾಜ್‌ಗಂಜ್‌ನ ಶಾಸ್ತ್ರಿನಗರದ ಇಂಟರ್‌ಮೀಡಿಯೇಟ್ ಕಾಲೇಜು ಮೈದಾನದಲ್ಲಿ ನಡೆದಿದೆ. ಆದರ್ಶ್ (11) ಮೃತ ಬಾಲಕ. ಈತ ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಮನೆಯಿಂದ ಮಾರುಕಟ್ಟೆಗೆ ತೆರಳಿದ್ದ. ಎಷ್ಟು ಹೊತ್ತಾದರೂ ಮನೆಗೆ ಹಿಂತಿರುಗದ ವೇಳೆ ಕುಟುಂಬಸ್ಥರು ಹುಡುಕಲು ಪ್ರಾರಂಭಿಸಿದ್ದಾರೆ. ಈ ವೇಳೆ ತಡರಾತ್ರಿಯಲ್ಲಿ ಕಚ್ಚಿದ ಗುರುತುಗಳೊಂದಿಗೆ ಆತನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಮುಖ ಮತ್ತು ಬಲಗೈ ಕಚ್ಚಿದ ಗುರುತುಗಳನ್ನು ಹೊಂದಿದ್ದು, ಬಾಲಕ ನಾಯಿಗಳ ವಿರುದ್ಧ ಸೆಣಸಾಡಿರುವಂತೆ ಕಂಡುಬಂದಿದೆ. ನಾಯಿಗಳ ಹಿಂಡು ದಾಳಿ ಮಾಡಿ ಬಾಲಕನನ್ನು ಕೊಂದು ಹಾಕಿದೆ. ಮೃತದೇಹವನ್ನು ಸ್ವಾಧೀನಪಡಿಸಿಕೊಂಡ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇನ್ಸ್ಪೆಕ್ಟರ್ ಕೊತ್ವಾಲಿ ರವಿ ರೈ ತಿಳಿಸಿದರು.
ನವದೆಹಲಿ: 4 ವರ್ಷ ಪ್ರೀತಿಸಿ ಇದೀಗ ಬ್ರೇಕಪ್ ಮಾಡಿಕೊಂಡಿದ್ದಕ್ಕೆ ರೊಚ್ಚಿಗೆದ್ದು ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಪ್ರಿಯತಮೆಗೆ ಚಾಕು ಇರಿದ ಘಟನೆ ಆಗ್ನೇಯ ದೆಹಲಿಯ ಬದರ್‍ಪುರ ಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಮದುವೆಯಾಗಲು ಒಪ್ಪದಿದ್ದಕ್ಕೆ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತೆ ತನ್ನ ಗೆಳತಿಯ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಅಂದರೆ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಳೆದ 4 ವರ್ಷಗಳಿಂದ ಆರೋಪಿ ಹಾಗೂ ಸಂತ್ರಸ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಬಾಲಕಿ ಬ್ರೇಕಪ್ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದಾಳೆ. ಮದುವೆಯಾಗಲು ಇಷ್ಟವಿಲ್ಲ ಎಂದು ಹೇಳಿದ್ದಾಳೆ. ಇದರಿಂದ ಸಿಟ್ಟಿಗೆದ್ದಿರುವ ಆರೋಪಿ ಆಕೆಯ ಮೇಲೆ ಮಾರಾಕಾಸ್ತ್ರದಿಂದ ದಾಳಿ ಮಾಡಿದ್ದಾನೆ. ಪರಿಣಾಮ ಬಾಲಕಿ ಕತ್ತು ಹಾಗೂ ತಲೆಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಆಕೆಯನ್ನು ಸ್ಥಳೀಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇತ್ತ ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಮದುವೆಯಾಗಲು ನಿರಾಕರಿಸಿದ್ದರಿಂದ ಆಕೆಯನ್ನು ಕೊಲೆ ಮಾಡಲು ನಿರ್ಧರಿಸಿದೆ. ಹೀಗಾಗಿ ಚಾಕುವಿನಿಂದ ಆಕೆಯ…
ತಿರುನಂತಪುರಂ: ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ ಕೇರಳ ಕಾಂಗ್ರೆಸ್ ನಾಯಕರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದಾರೆ. ಇಲ್ಲಿನ ಕಾಲ್‌ಪೆಟ್ಟಾ ಪಟ್ಟಣದಲ್ಲಿ ʻಸತ್ಯಮೇವ ಜಯತೆʼ ರೋಡ್ ಶೋ (Rahul Gandhi RoadShow) ನಡೆಸಿದ ರಾಹುಲ್ ಗಾಂಧಿ, ಬಳಿಕ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿ, ಬಿಜೆಪಿ ವಿರುದ್ಧ ಕೆಂಡಕಾರಿದ್ದಾರೆ. ಸಂಸದ ಎಂಬುದು ಕೇವಲ ಒಂದು ಟ್ಯಾಗ್, ಒಂದು ಸ್ಥಾನ, ಹುದ್ದೆ ಅಷ್ಟೇ. ಬಿಜೆಪಿಯವರು ಆ ಟ್ಯಾಗ್ ಅನ್ನು ಕಿತ್ತುಕೊಳ್ಳಬಹುದು, ಮನೆಯನ್ನ ಕಸಿದುಕೊಳ್ಳಬಹುದು ಅಥವಾ ನನ್ನನ್ನ ಜೈಲಿಗೂ ಹಾಕಿಸಬಹುದು. ಆದರೆ ವಯನಾಡಿನ ಜನರನ್ನ ಪ್ರತಿನಿಧಿಸೋದನ್ನ ತಡೆಯೋಕೆ ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ. ನಾನು ಹಲವು ವರ್ಷಗಳಿಂದ ಬಿಜೆಪಿ ವಿರುದ್ಧ ಹೋರಾಡುತ್ತಿದ್ದೇನೆ, ಇಷ್ಟು ವರ್ಷಗಳಾದರೂ ಅವರು ತಮ್ಮ ಎದುರಾಳಿಯನ್ನ ಅರ್ಥಮಾಡಿಕೊಳ್ಳಲು ಸಾಧ್ಯವಾಗದಿರುವುದು, ನಾನು ಅವರಿಗೆ ಹೆದರುವುದಿಲ್ಲ ಎಂಬುದನ್ನ ಅರ್ಥಮಾಡಿಕೊಳ್ಳದೇ ಇರೋದು ನನಗೆ ಆಶ್ಚರ್ಯ ಎನಿಸಿದೆ. ವಯನಾಡಿನಲ್ಲಿ ಪ್ರವಾಹ ಬಂದಾಗ ನೂರಾರು ಜನರು ತಮ್ಮ ಮನೆಗಳನ್ನ ಕಳೆದುಕೊಂಡಿದ್ದರು. ಆ…
ನವದೆಹಲಿ: ಕೊನೆಗೂ ಬಿಜೆಪಿ ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections) ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕರಾದ ಧರ್ಮೇಂದ್ರ ಪ್ರಧಾನ್ (Dharmendra Pradhan) ಹಾಗೂ ಅರುಣ್ ಸಿಂಗ್ (Arun Singh) ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದಾರೆ. ಮೊದಲ ಹಂತದಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದು, ಇನ್ನುಳಿದ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಾಕಿ ಉಳಿಸಿಕೊಂಡಿದೆ. ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಆದ್ಯತೆ ನೀಡಿದೆ. ಅಲ್ಲದೇ, 8 ಮಂದಿ ಮಹಿಳೆಯರು, 5 ಮಂದಿ ವಕೀಲರು, 9 ಮಂದಿ ವೈದ್ಯರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರೊಂದಿಗೆ ಒಬ್ಬರು ನಿವೃತ್ತ ಐಎಎಸ್, ಒಬ್ಬರು ಐಪಿಎಸ್ ಅಧಿಕಾರಿಗೆ ಟಿಕೆಟ್ ಘೋಷಣೆ ಮಾಡಿದೆ.
ನವದೆಹಲಿ: ಕೊನೆಗೆ ಸರಣಿ ಸಭೆಯ ಬಳಿಕ ಕರ್ನಾಟಕ ಚುನಾವಣೆಗೆ (Karnataka Election 2023) ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇನ್ನೂ 35 ಕ್ಷೇತ್ರಗಳನ್ನು ಹೈಕಮಾಂಡ್ ಬಾಕಿ ಉಳಿಸಿಕೊಂಡಿದೆ. ಕಳೆದ ಮೂರು ದಿನಗಳಿಂದ ಬಿಜೆಪಿ ಹೈಕಮಾಂಡ್ (BJP High Command) ಸರಣಿ ಸಭೆ ನಡೆಸುತ್ತಿತ್ತು. ಈ ಬಾರಿ ಬಿಜೆಪಿ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ನಾಯಕರು ಹೊಸ ಮುಖಗಳಿಗೆ ಮಣೆ ಹಾಕಿದ್ದಾರೆ. ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಹಾಗೂ ಅರುಣ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪ್ರಜಾಪ್ರಭುತ್ವ ಪಕ್ಷವಾಗಿ ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ. 31 ಜಿಲ್ಲೆಯಲ್ಲೂ ಅಭಿಪ್ರಾಯ ಪಡೆದಿದೆ. 25,೦೦೦ ಸ್ವಯಂ ಸೇವಕರು ಕೆಲಸ ಮಾಡಿದ್ದಾರೆ. ಜಿಲ್ಲಾ ನಾಯಕರಿಂದಲೂ ಅಭಿಪ್ರಾಯ ಪಡೆಯಲಾಗಿದೆ. ಎಲ್ಲ ರಾಷ್ಟ್ರೀಯ ಪ್ರಮುಖ ನಾಯಕರ ಇನ್ ಪುಟ್ ಪಡೆದುಕೊಂಡಿದೆ ಎಂದರು. 189 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುತ್ತಿದ್ದೇವೆ. ಯುವ, ಹೊಸತನ, ಹೊಸ ಯೋಚನೆ, ಮುಂದಿನ ಪೀಳಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆಯಾಗಿದೆ. ಹೊಸ ಪೀಳಿಗೆಯನ್ನು ವಿಧಾನಸಭೆ…
ಮೈಸೂರು: ವಿಧಾನಸಭಾ ಎಲೆಕ್ಶನ್ ರಂಗೇರಿದೆ. ಬಿಜೆಪಿಯ ಹುರಿಯಾಳುಗಳ ಮೊದಲ ಪಟ್ಟಿ ರಿಲೀಸ್ ಆಗಿದೆ. ಮೊದಲ ಹಂತದಲ್ಲಿ 189 ಮಂದಿ ಅಭ್ಯರ್ಥಿಗಳ ಹೆಸರು ಫೈನಲ್ ಆಗಿದೆ. ಮೈಸೂರು ಜೆಲ್ಲೆಯ 11 ವಿಧಾನಸಭಾ ಕ್ಷೇತ್ರದ ಪೈಕಿ 9 ಕ್ಷೇತ್ರಗಳಿಗೆ ಕಮಲ ಕಲಿಗಳ ಹೆಸರನ್ನ ಘೋಷಣೆ ಮಾಡಲಾಗಿದೆ. ಮೈಸೂರಿನ ಪ್ರತಿಷ್ಠಿತ ವರುಣಾ ಕ್ಷೇತ್ರದಿಂದ ವಸತಿ ಸಚಿವ ವಿ ಸೋಮಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಸಿದ್ದರಾಮಯ್ಯ ಇದೇ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು ಇಬ್ಬರ ನಡುವೆ ಜಿದ್ದಾಜಿದ್ದಿನ ಕದನ ಸಾಕ್ಷಿಯಾಗುವ ನಿರೀಕ್ಷೆ ಇದೆ. ಮತ್ತೊಂದೆಡೆ , ಜೆಡಿಎಸ್ ನಾಯಕ ಜಿಟಿ ದೇವೇಗೌಡ ಸ್ಪರ್ಧೆ ಮಾಡ್ತಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ವಾಸು ಅವರ ಪುತ್ರ ಕವೀಶ್ ಗೌಡ ಅವರನ್ನ ಆಯ್ಕೆ ಮಾಡಲಾಗಿದೆ. ಕಳೆದ 3 ತಿಂಗಳ ಹಿಂದೆ ವಾಸು ಪುತ್ರ ಕವೀಶ್ ಬಿಜೆಪಿ ಸೇರ್ಪಡೆಯಾಗಿದ್ರು.ಇನ್ನುಳಿದಂತೆ ಚಾಮರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ನಾಗೇಂದ್ರಟಿ. ನರಸೀಪುರದಿಂದ – ಡಾ. ರೇವಣ್ಣ, ಪಿರಿಯಾಪಟ್ಟಣ – ಸಿ. ಹೆಚ್. ವಿಜಯಶಂಕರ್, ಕೆಆರ್ ನಗರ – ವೆಂಕಟೇಶ್…
ಶಿವಮೊಗ್ಗ: ಕಾಂಗ್ರೆಸ್ (Congress) ನಾಯಕರ ಎದೆ ನಡುಗಿಸುವಂತಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ (BJP) ಬಿಡುಗಡೆ ಮಾಡಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S.Eshwarappa) ಶಿವಮೊಗ್ಗದಲ್ಲಿ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ (BJP candidates list) ಬಿಡುಗಡೆ ಮಾಡಿದ್ದಾರೆ. ಹಾಗಾಗಿ ಚುನಾವಣೆಯಲ್ಲಿ (Election) ರಾಜ್ಯದ ಜನರ ಮನಸ್ಸನ್ನು ಗೆದ್ದು ಪೂರ್ಣ ಬಹುಮತದಿಂದ ಬಿಜೆಪಿ ಆಯ್ಕೆಯಾಗಲಿದೆ. ಬಿಡುಗಡೆಯಾದ ಪಟ್ಟಿಯಿಂದ ಬಹಳ ಖುಷಿಯಾಗಿದೆ ಎಂದಿದ್ದಾರೆ. ಕರ್ನಾಟಕದಲ್ಲಿ ಈವರೆಗೂ ಬಿಜೆಪಿಗೆ ಪೂರ್ಣ ಬಹುಮತ ಬಂದಿಲ್ಲ. ಬಿಜೆಪಿ ಆಡಳಿತ ಮಾಡಲಿ ಎಂದು ಜನ ಆದೇಶ ಕೊಟ್ಟಿದ್ದರು. ಈ ಬಾರಿ ಆದೇಶದೊಂದಿಗೆ ಪೂರ್ಣ ಬಹುಮತವನ್ನು ಕೊಡಿ ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ. ಬಿಜೆಪಿ ನಿಂತ ನೀರಲ್ಲ. ಇಲ್ಲಿ ಹೊಸ ಅಭ್ಯರ್ಥಿಗಳು ಬರುತ್ತಾರೆ. ಜೊತೆಗೆ ಹಳಬರು ಇರುತ್ತಾರೆ. ಎಲ್ಲರಿಗೂ ಅನುಕೂಲವಾಗುವಂತಹ ಪಟ್ಟಿ ಬಿಡುಗಡೆ ಆಗಿದೆ. ಹಿಂದುಳಿದ ವರ್ಗದವರಿಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಪಟ್ಟಿಯಲ್ಲಿ ವೈದ್ಯರು, ನಿವೃತ್ತ ಐಎಎಸ್ ಅಧಿಕಾರಿ ಹಾಗೂ ನಿವೃತ್ತ…