Author: Prajatv Kannada

ಬೆಂಗಳೂರು: ಎರಡು ಕಡೆ ಟಿಕೆಟ್ ಕೊಡ್ತಾರೆ ಅಂತಾ ನಾನು ಕನಸು ಮನಸಲ್ಲೂ ಅನ್ಕೊಂಡಿರಲಿಲ್ಲ. ವಿಧಿ ನಿಯಮ, ವರಿಷ್ಠರ ತೀರ್ಮಾನ ಎಂದು ಸಚಿವ ವಿ. ಸೋಮಣ್ಣ (V Somanna) ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಿಂದರಾಜನಗರ ನನ್ನ ಜನ್ಮ ಭೂಮಿ. ವರುಣಾ (Varuna), ಚಾಮರಾಜನಗರ (Chamarajanagar) ನನ್ನ ಕರ್ಮ ಭೂಮಿಯಾಗಿದೆ. ಭಗವಂತನ ಇಚ್ಛೆ ಹೇಗಿದಿಯೊ ನೋಡೋಣ. ನಾಳೆಯಿಂದ ವರುಣಾ, ಚಾಮರಾಜನಗರದಲ್ಲಿ ಪ್ರಚಾರ ಶುರು ಮಾಡುತ್ತೇನೆ ಎಂದು ಹೇಳಿದರು. ಗುಬ್ಬಿ, ಗೋವಿಂದರಾಜನಗರ ಮಗನಿಗೆ ಕೇಳಿದ್ದೇನೆ. ಈ ಬಗ್ಗೆ ಬಿಜೆಪಿ (BJP) ಹೈಕಮಾಂಡ್ ಜೊತೆಗೂ ಮಾತನಾಡಿದ್ದೇನೆ. ಮಗನಿಗೆ ಟಿಕೆಟ್ ಕೊಡೋದು ಬಿಡೋದು ಹೈಕಮಾಂಡ್‍ಗೆ ಬಿಟ್ಟದ್ದು, ಬೆಂಬಲಿಗರು ಸಂಯಮದಿಂದ ಇರಬೇಕು ಎಂದರು. ಗೋವಿಂದರಾಜನಗರ ಕ್ಷೇತ್ರ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಸೋಮಣ್ಣನ ಮನೆ ಮುಂದೆ ನೂರಾರು ಕಾರ್ಯಕರ್ತರು ಜಮಾಯಿಸಿದರು. ಸೋಮಣ್ಣ ಮಗ ಡಾ. ಅರುಣ್ ಸೋಮಣ್ಣರಿಗೆ ಗೋವಿಂದರಾಜನಗರದಿಂದಲೇ ಟಿಕೆಟ್ ನೀಡುವಂತೆ ಒತ್ತಾಯ ಮಾಡಿದರು. ಬೇರೆವರಿಗೆ ಟಿಕೆಟ್ ನೀಡಿದ್ರೆ ನಮ್ಮ ಬೆಂಬಲಿಗರಿಗೆ ಕೆಲಸ ಮಾಡಲ್ಲ ಎಂದು ಆಕ್ರೋಶ ಹೊರಹಾಕಿದರು.

Read More

ಬೆಂಗಳೂರು: ರಾಜಧಾನಿ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ ಕಮಲ ಪಾಳಯವು ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಈ ಬಾರಿ ಮಾಜಿ ಕಾರ್ಪೊರೇಟರ್‌ಗಳು ಹಾಗೂ ಹೊಸ ಮುಖಗಳಿಗೆ ಮಣೆ ಹಾಕಿದೆ. ಟಿಕೆಟ್‌ ವಂಚಿತ ಆಕಾಂಕ್ಷಿಗಳು ಕುದಿಯುತ್ತಿದ್ದು, ಅಸಮಾಧಾನ ಸ್ಫೋಟಗೊಳ್ಳುವ ಸಾಧ್ಯತೆಗಳಿವೆ. ಬಿಜೆಪಿಯು ನಗರದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಹಾಲಿ ಶಾಸಕ ಅರವಿಂದ ಲಿಂಬಾವಳಿ ಪ್ರತಿನಿಧಿಸುವ ಮಹದೇವಪುರ, ಸಚಿವ ವಿ.ಸೋಮಣ್ಣ ಪ್ರತಿನಿಧಿಸುತ್ತಿದ್ದ ಗೋವಿಂದರಾಜನಗರ ಮತ್ತು ಹೆಬ್ಬಾಳ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸದಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಈ ಚುನಾವಣೆಯಲ್ಲಿಐದು ಮಂದಿ ಮಾಜಿ ಕಾರ್ಪೊರೇಟರ್‌ಗಳಿಗೆ ವಿಧಾನಸೌಧದ ಮೆಟ್ಟಿಲೇರಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಆಮ್‌ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ ರಾವ್‌ ಅವರನ್ನು ಚಾಮರಾಜಪೇಟೆ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ರಾಜಾಜಿನಗರ, ಬಸವನಗುಡಿ, ಚಿಕ್ಕಪೇಟೆ ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ನೀಡದೆ, ಬೇರೆಯವರನ್ನು ಕಣಕ್ಕಿಳಿಸಲಾಗುತ್ತದೆ. ಹಾಗೆಯೇ, ಬಿಜೆಪಿ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲೂಅಭ್ಯರ್ಥಿಗಳನ್ನು ಬದಲಿಸಲಾಗುತ್ತದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಜೆಪಿ…

Read More

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಗೆ 189 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಯಾರಿಗೆಲ್ಲಾ ಆದ್ಯತೆ ನೀಡಲಾಗಿದೆ. ಪಟ್ಟಿಯಲ್ಲಿರುವ ಪ್ರಮುಖ ಹತ್ತು ಅಂಶಗಳೇನು ಇಲ್ಲಿದೆ ಮಾಹಿತಿ. 52 ಹೊಸ ಮುಖಗಳಿಗೆ ಅವಕಾಶ ಈ ಬಾರಿ ಬಿಜೆಪಿ ಗುಜರಾತ್‌ ಮಾದರಿಯನ್ನು ಅನುಸರಿಸುವುದಾಗಿ ಹೇಳಿಕೆ ನೀಡಿತ್ತು. ಅದರಂತೆ, ಸಾಕಷ್ಟು ಮಂದಿ ಹಿರಿಯ ನಾಯಕರಿಗೆ ಕೋಕ್‌ಕೊಟ್ಟು ಬರೋಬ್ಬರಿ 52 ಮಂದಿ ಹೊಸಬರಿಗೆ ಅವಕಾಶ ನೀಡಲಾಗಿದೆ. ಈ ಪೈಕಿ ಯಡಿಯೂರಪ್ಪ ಮಗ ವಿಜಯೇಂದ್ರ ಅವರಿಂದ ಹಿಡಿದು ಸಂಘಟನೆಗಾಗಿ ದುಡಿದ ಸಾಕಷ್ಟು ಮಂದಿಗೆ ಅವಕಾಶ ನೀಡಲಾಗಿದೆ. ವೃತ್ತಿಪರರು ಸಮಾಜ ಸೇವಕರಿಗೆ ಅವಕಾಶ ಬಿಜೆಪಿ ಈ ಬಾರಿ ಅಭ್ಯರ್ಥಿಗಳ ಪೈಕಿ ವೃತ್ತಿಪರರಿಗೆ, ಸಮಾಜ ಸೇವಕರಿಗೆ ಅವಕಾಶ ನೀಡಿದೆ. ಪಟ್ಟಿಯಲ್ಲಿ 9 ಮಂದಿ ಡಾಕ್ಟರ್ ಗಳು, ಶಿಕ್ಷಣ ಕ್ಷೇತ್ರದ ಸೇವೆ ಸಲ್ಲಿಸುತ್ತಿರುವ ಮೂವರು, ತಲಾ ಒಬ್ಬರು ಮಾಜಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಅವಕಾಶ ನೀಡಿದೆ. 31 ಮಂದಿ ಸ್ನಾತಕೋತ್ತರ ಪದವೀಧರರು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪಟ್ಟು…

Read More

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ರಣಕಣ ಸಿದ್ಧವಾಗಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ (BJP Candidates List) ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿವಿಧ ಆಯಾಮಗಳ ಜೊತೆಗೆ ಜಾತಿವಾರು ಲೆಕ್ಕಾಚಾರದಲ್ಲೂ ಟಿಕೆಟ್ ಬಿಡುಗಡೆ ಮಾಡಿ ಗೆಲುವಿಗೆ ರಣತಂತ್ರ ರೂಪಿಸಿದೆ. ಜಾತಿವಾರು ಲೆಕ್ಕಾಚಾರ ಏನು? ಬಿಜೆಪಿಗೆ (BJP) ಲಿಂಗಾಯತ ಸಮುದಾಯದವರೇ ಪ್ರಮುಖ ಗೆಲುವಿನ ಅಸ್ತ್ರ. ಹೀಗಾಗಿ ಈ ಬಾರಿಯೂ ಲಿಂಗಾಯತ ನಾಯಕರಿಗೆ ಹೆಚ್ಚು ಮಣೆ ಹಾಕಲಾಗಿದೆ. ಜೊತೆಗೆ ಹಿಂದುಳಿದ ವರ್ಗ, ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಆದ್ಯತೆ ನೀಡಲಾಗಿದೆ. ಯಾವ ಸಮುದಾಯಕ್ಕೆ ಎಷ್ಟು? ಬಿಜೆಪಿ ಈ ಬಾರಿ ಲಿಂಗಾಯತ- 52, ಓಬಿಸಿ- 32, ಎಸ್‌ಸಿ- 30, ಎಸ್‌ಟಿ- 16 ಸಮುದಾಯಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಅಷ್ಟೇ ಅಲ್ಲದೇ ಕುರುಬ ಸಮುದಾಯದ 7 ಮಂದಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಸಮುದಾಯದ ಸಿಂಧನೂರು ಕ್ಷೇತ್ರದ ಕರಿಯಪ್ಪ, ಕುಷ್ಟಗಿ ಕ್ಷೇತ್ರದ ದೊಡ್ಡನಗೌಡ ಪಾಟೀಲ್, ರಾಮದುರ್ಗದ ಚಿಕ್ಕರೇವಣ್ಣ, ಕೆ.ಆರ್.ಪುರದ ಬೈರತಿ ಬಸವರಾಜು, ಹೊಸಕೋಟೆಯ ಎಂಟಿಬಿ ನಾಗರಾಜು, ಕೋಲಾರದ ವರ್ತೂರು ಪ್ರಕಾಶ್, ಪಿರಿಯಾಪಟ್ಟಣ ಕ್ಷೇತ್ರದ…

Read More

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ಬಿಜೆಪಿ ಮಂಗಳವಾರ ರಾತ್ರಿ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಒಟ್ಟು 189 ಅಭ್ಯರ್ಥಿಗಳ ಪೈಕಿ 8 ಮಹಿಳೆಯರಿಗೆ ಟಿಕೆಟ್‌ (Karnataka BJP Women Candidates) ಘೋಷಿಸಿದೆ. ಘೋಷಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂವರು ಹಾಲಿ ಶಾಸಕಿಯರು ಬಿಜೆಪಿ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಶಿಕಲಾ ಜೊಲ್ಲೆ, ಪೂರ್ಣಿಮಾ ಶ್ರೀನಿವಾಸ್‌ ಹಾಗೂ ರೂಪಾಲಿ ಸಂತೋಷ್‌ ನಾಯ್ಕ್‌ ಹಾಲಿ ಶಾಸಕರು. ಈ ಬಾರಿ ಚುನಾವಣೆಯಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ. ಇದರೊಂದಿಗೆ 5 ಮಂದಿ ವಕೀಲರು, 9 ಮಂದಿ ವೈದ್ಯರು, ಒಬ್ಬರು ನಿವೃತ್ತ ಐಎಎಸ್‌, ಒಬ್ಬರು ಐಪಿಎಸ್‌ ಅಧಿಕಾರಿಗೆ ಟಿಕೆಟ್‌ ಘೋಷಣೆ ಮಾಡಿದೆ. ಯಾರಿಗೆ ಎಲ್ಲಿ ಬಿಜೆಪಿ ಟಿಕೆಟ್? 1. ನಿಪ್ಪಾಣಿ – ಶಶಿಕಲಾ ಜೊಲ್ಲೆ 2. ಹಿರಿಯೂರು – ಪೂರ್ಣಿಮಾ ಶ್ರೀನಿವಾಸ್ 3. ಸವದತ್ತಿ – ರತ್ನಾ ವಿಶ್ವನಾಥ್‌ ಮಾಮನಿ 4. ಕಾರವಾರ – ರೂಪಾಲಿ ನಾಯ್ಕ್ 5. ಸಂಡೂರು – ಶಿಲ್ಪಾ ರಾಘವೇಂದ್ರ 6. ನಾಗಮಂಗಲ…

Read More

ಬೆಂಗಳೂರು: ಅಳೆದೂ ತೂಗಿ ಕೊನೆಗೂ ಬಿಜೆಪಿ ಕರ್ನಾಟಕ ಚುನಾವಣೆಗೆ (Karnataka Election 2023) ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. (BJP Karnataka Election Candidates) 224 ಕ್ಷೇತ್ರಗಳ ಪೈಕಿ 189 ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ್ದು ಇನ್ನು 35 ಕ್ಷೇತ್ರಗಳನ್ನು ಉಳಿಸಿಕೊಂಡಿದೆ. ಟಿಕೆಟ್‌ ಬಾಕಿ ಇರುವ ಕ್ಷೇತ್ರಗಳು ಯಾವುವು?: ದೇವರಹಿಪ್ಪರಗಿ, ಬಸವನಬಾಗೇವಾಡಿ, ನಾಗಠಾಣ, ಇಂಡಿ, ಗುರುಮಿಟ್ಕಲ್, ಸೇಡಂ, ಬೀದರ್ ನಗರ, ಭಾಲ್ಕಿ, ಮಾನ್ವಿ, ಗಂಗಾವತಿ, ಕೊಪ್ಪಳ, ರೋಣ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್, ಕಲಘಟಗಿ, ಹಾನಗಲ್, ಹಾವೇರಿ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಮಾಯಕೊಂಡ, ಚನ್ನಗಿರಿ, ಶಿವಮೊಗ್ಗ ನಗರ, ಬೈಂದೂರು, ಮೂಡಿಗೆರೆ, ಗುಬ್ಬಿ,ಶಿಡ್ಲಘಟ್ಟ, ಕೆಜಿಎಫ್, ಹೆಬ್ಬಾಳ, ಗೋವಿಂದ ರಾಜನಗರ, ಕೃಷ್ಣ ರಾಜ, ಅರಸೀಕೆರೆ, ಹೆಚ್ ಡಿ ಕೋಟೆ, ಮಹಾದೇವಪುರ, ಶ್ರವಣಬೆಳಗೊಳ. 35 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಟಿಕೆಟ್‌ ಘೋಷಣೆಯಾಗಲಿದ್ದು, ಈ ಪೈಕಿ 19 ಹಾಲಿ ಶಾಸಕರ ಕ್ಷೇತ್ರಗಳು ಸೇರಿವೆ ಎನ್ನುವುದೂ ವಿಶೇಷ.

Read More

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಕಣಕ್ಕಿಳಿಯಲು ಲಕ್ಷ್ಮಣ ಸವದಿ ಹಾಗೂ ಮಹೇಶ್ ಕುಮಟಳ್ಳಿ ಆಕಾಂಕ್ಷಿಗಳಾಗಿದ್ದು, ಈ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಬಿಜೆಪಿ ನಾಯಕರಿಗೆ ತಲೆ ನೋವಾಗಿ ಪರಿಣಮಿಸಿದೆ. ತಮ್ಮ ಆಪ್ತ ಮಹೇಶ್ ಕುಮಟಳ್ಳಿ(Mahesh Kumathalli) ಅವರಿಗೆ ಟಿಕೆಟ್ ಕೊಡಿಸಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದು, ಲಕ್ಷ್ಮಣ ಸವದಿ ಕೂಡ ಟಿಕೆಟ್ ಗಾಗಿ ಒತ್ತಡ ಹೇರುತ್ತಿದ್ದಾರೆ. ಇದರ ಮಧ್ಯೆ ಮಹೇಶ್ ಕುಮಟಳ್ಳಿಯವರಿಗೇ ಬಿಜೆಪಿ ಟಿಕೆಟ್ ಸಿಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ((Laxman Savadi) ಅವರನ್ನು ಕಾಂಗ್ರೆಸ್ನ ಪ್ರಮುಖ ನಾಯಕರು ಸಂಪರ್ಕ ಮಾಡಿದ್ದು, ಪಕ್ಷಕ್ಕೆ ಸೆಳೆಯಲು ನಿರಂತರ ಕಸರತ್ತು ನಡೆಸಿದ್ದಾರೆ. ಈಗಾಗಲೇ ಸವದಿ ಸಹ ಕೊಪ್ಪಳ ಕಾಂಗ್ರೆಸ್ ಶಾಸಕರೊಬ್ಬ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸೋನಿಯಾ, ರಾಹುಲ್ ಸಮ್ಮುಖದಲ್ಲೇ ಲಕ್ಷ್ಮಣ ಸವದಿ ಅವರನ್ನು ಪಕ್ಷ ಸೇರ್ಪಡೆ ಮಾಡಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ಪ್ಲಾನ್ ಮಾಡಿದ್ದಾರೆ. ಇತ್ತ ಸವದಿ ಸಹ ಬಿಜೆಪಿ…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಬಿಜೆಪಿ ಹೈಕಮಾಂಡ್, ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ನೋಡಿಕೊಳ್ಳುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. ಕರ್ನಾಟಕದಲ್ಲಿ ಕೇವಲ ಮತಗಳನ್ನು ಸೆಳೆಯುವ ಮುಖಕ್ಕಾಗಿ ಯಡಿಯೂರಪ್ಪನವರನ್ನು ಬಳಸಿಕೊಳ್ಳುತ್ತಿರುವ ಹೈಕಮಾಂಡ್, ರಾಜ್ಯ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರಗಳ ಬಗ್ಗೆ ದೆಹಲಿಯಲ್ಲಿ ನಡೆಸಲಾಗುತ್ತಿರುವ ಮಹತ್ವದ ಸಭೆಗಳಿಂದ ಅವರನ್ನು ದೂರವಿಟ್ಟಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿಗೆ ಯಡಿಯೂರಪ್ಪ ಬೇಕಿರುವುದು ಓಟು ಗಳಿಕೆಗೆ ಮುಖ ತೋರಿಸಲು ಮಾತ್ರ! ಟಿಕೆಟ್ ಹಂಚಿಕೆಯ ಸಭೆಗೆ ಮಾತ್ರ ಬಿಎಸ್ ಯಡಿಯೂರಪ್ಪ ಹೊರಗೆ, ಪ್ರಹ್ಲಾದ್ ಜೋಶಿ, ಬಿ.ಎಲ್.ಸಂತೋಷ್, ಸಿ.ಟಿ.ರವಿ, ಕಟೀಲು ಒಳಗೆ! ಯಡಿಯೂರಪ್ಪ ಅವರಿಗೆ ಈಗ ಮಾರ್ಗದರ್ಶಕ ಮಂಡಳಿಯೂ ಇಲ್ಲ, ಬಿಜೆಪಿಗೆ ಮಾರ್ಗದರ್ಶನ ಬೇಕಿಲ್ಲ. ಬಿಎಸ್ ಯಡಿಯೂರಪ್ಪನವರ ರಾಜಕೀಯ ಬದುಕಿಗೆ ದುರಂತ ಅಂತ್ಯ ತೋರಿಸುತ್ತಿದೆ ಬಿಜೆಪಿ’ ಎಂದು ಹೇಳಿದೆ. ಬಿಜೆಪಿಯೊಳಗೆ ಯಡಿಯೂರಪ್ಪನವರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂಬ ಕಾಂಗ್ರೆಸ್ಸಿನ ಆರೋಪ ಹೊಸತೇನಲ್ಲ. ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳದ ದಿನದಿಂದಲೂ ಇಂಥದ್ದೊಂದು ಆರೋಪವನ್ನು ಕಾಂಗ್ರೆಸ್ ಮಾಡುತ್ತಾ ಬಂದಿದೆ.…

Read More

ಹುಬ್ಬಳ್ಳಿ: ನೀವು ಹಿರಿಯ ನಾಯಕ ಬೇರೆಯವರಿಗೆ ಅವಕಾಶ ಮಾಡಿಕೊಡಿ ಎಂದು ಹೈಕಮಾಂಡ್‌ ಹೇಳಿದೆ. ಹೈಕಮಾಂಡ್‌ ನಾಯಕರ ಮಾತು ಕೇಳಿ ನನಗೆ ನೋವಾಗಿದೆ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಈ ಮೂಲಕ ಈ ಬಾರಿ ಬಿಜೆಪಿಯಿಂದ ನನಗೆ ಟಿಕೆಟ್‌ ಸಿಗುವುದು ಅನುಮಾನ ಎಂದು ಪರೋಕ್ಷ ಸೂಚನೆಯನ್ನು ಶೆಟ್ಟರ್‌ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಗ್ಗೆ ಹೈಕಮಾಂಡ್‌ನಿಂದ ನನಗೆ ಕರೆ ಬಂದಿದ್ದು ನಿಜ. ಆಗ ಬೇರೆಯವರಿಗೆ ಅವಕಾಶ ಮಾಡಿಕೊಂಡಿ ಎಂದು ವರಿಷ್ಠರು ಹೇಳಿದ್ದಾರೆ. ಆ ಮಾತು ಕೇಳಿ ನನಗೆ ನೋವಾಗಿದೆ. ಕಳೆದ 30 ವರ್ಷಗಳಿಂದ ಪಕ್ಷ ಸಂಘಟಿಸಿದ್ದೇನೆ. ಬಿಎಸ್‌ ಯಡಿಯೂರಪ್ಪ ಅವರ ಜೊತೆ ನಿಂತು ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟಿಸಿದ್ದೇನೆ ಎಂದು ಹೇಳಿದ್ದಾರೆ. HD Revanna: ಸಾಮಾನ್ಯ ಕಾರ್ಯಕರ್ತ ಅಂದ್ರೇ ಯಾರು? ಎಚ್‌ಡಿಕೆ ವಿರುದ್ಧ ಎಚ್‌ಡಿ ರೇವಣ್ಣ ಪರೋಕ್ಷ ಅಸಮಾಧಾನ ನಾನು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ವರಿಷ್ಠರಿಗೆ ಹೇಳಿದ್ದೇನೆ. ನಾನು ಸೆಂಟ್ರಲ್‌ ಕ್ಷೇತ್ರದಿಂದ ಸ್ಪರ್ಧಿಸಿಯೇ ಸ್ಪರ್ಧಿಸುತ್ತೇನೆ. ಮತ್ತೊಂದು ಬಾರಿ ದೊಡ್ಡ…

Read More

ಹುಬ್ಬಳ್ಳಿ: ನಾವೆಲ್ಲರೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಗರು. ಶೆಟ್ಟರ್ ಅವರು ಎಲ್ಲಿ ಇರುತ್ತಾರೋ ನಾವು ಅಲ್ಲಿಯೇ ಅವರೊಂದಿಗೆ ಇರುತ್ತೇವೆ. ಹೈ ಕಮಾಂಡ್ ಯಾವುದೇ ಪರಿಸ್ಥಿತಿಯಲ್ಲಿಯೂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುವುದು ಖಂಡಿತ. ಈಗ ಎದ್ದಿರುವ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಬಿಜೆಪಿ ಮುಖಂಡ ನಾಗೇಶ ಕಲಬುರಗಿ ಹೇಳಿದರು. ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಶಾಸಕರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಿಎಂ ಆಗಿ ಕೂಡ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಇಲ್ಲಿರುವ ಒಬ್ಬ ಸಣ್ಣ ಹುಡುಗನನ್ನು ಕೇಳಿದರೂ ಜಗದೀಶ್ ಶೆಟ್ಟರ್ ಬಗ್ಗೆ ಹೇಳುತ್ತಾರೆ. ಈ ನಿಟ್ಟಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿರುವ ಜನನಾಯಕನಿಗೆ ಟಿಕೆಟ್ ಸಿಗುವುದು ಖಂಡಿತ ಎಂದರು. Video Player 00:00 01:39 ನಾವೆಲ್ಲರೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಗರು. ಅವರನ್ನು ಮತ್ತೊಮ್ಮೆ ಶಾಸಕರನ್ನಾಗಿ ಮಾಡುವುದು ನಮ್ಮ ಉದ್ದೇಶ ಈ ನಿಟ್ಟಿನಲ್ಲಿ ನಾವೆಲ್ಲರೂ ಅವರಿಗೆ ಬೆಂಬಲ ನೀಡುತ್ತೇವೆ ಎಂದು ಅವರು ಹೇಳಿದರು.…

Read More