ಅಬುಧಾಬಿ: ದುಬಾಯಿಯಲ್ಲಿ ಅಪರೂಪದ ಕಾರ್ ನಂಬರ್ ಪ್ಲೇಟನ್ನು ಶ್ರೀಮಂತ ವ್ಯಕ್ತಿ 123 ಕೋಟಿ ರೂ. ಪಾವತಿಸಿ ಖರೀದಿಸಿದ್ದು ವಿಶ್ವದಾಖಲೆಯಾಗಿದೆ. ಶನಿವಾರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಪಿ-7 ಎಂಬ ನಂಬರ್‌ಪ್ಲೇಟ್ 123 ಕೋಟಿ ರೂ.ಗೆ ಮಾರಾಟವಾಗಿದೆ. ಪಿ ಸಂಖ್ಯೆ ಬದಿಯಲ್ಲಿರುವುದರಿಂದ ಮೇಲ್ನೋಟಕ್ಕೆ ಇದರಲ್ಲಿರುವ 7 ಎಂಬ ನಂಬರ್ ಮಾತ್ರ ಎದ್ದುಕಾಣುತ್ತದೆ. ಈ ಹರಾಜು ಪ್ರಕ್ರಿಯೆಯಲ್ಲಿ ಸಂಗ್ರಹಿಸಿದ ಹಣವನ್ನು ದುಬೈ ದೊರೆ ಶೇಖ್ ಮುಹಮ್ಮದ್ ಬಿನ್ ರಶೀದ್ ಅವರ ಜಾಗತಿಕ ಆಹಾರ ನೆರವು ಯೋಜನೆಗೆ ಜಮೆಗೊಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಶ್ರೀಮಂತರು ತಮ್ಮ ಸ್ಥಾನಮಾನ ಪ್ರದರ್ಶಿಸಲು ಕಾರಿಗೆ ಬಳಸುವ ಫ್ಯಾನ್ಸಿ ನಂಬರ್ ಗಳನ್ನು ಯುಎಇಯಲ್ಲಿ ಹರಾಜು ಹಾಕಲಾಗುತ್ತದೆ. 2008ರಲ್ಲಿ ಅಬುಧಾಬಿಯಲ್ಲಿ `ನಂಬರ್ 1′ ಎಂಬ ಸಂಖ್ಯೆಯನ್ನು ಹೊಂದಿರುವ ನಂಬರ್‌ಪ್ಲೇಟ್ ಸುಮಾರು 117 ಕೋಟಿ ರೂ.ಗೆ ಹರಾಜಾಗಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಪಿ-7 ನಂಬರ್ ಪ್ಲೇಟ್ 123 ಕೋಟಿಗೆ ಹರಾಜಾಗುವ ಮೂಲಕ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದೆ.
Author: Prajatv Kannada
ಚೀನಾ: ಚೀನಾದ ವುಹಾನ್ ಮಾರುಕಟ್ಟೆಯಲ್ಲಿ ಕೋವಿಡ್ 19 ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿದೆ ಎಂಬ ಸಿದ್ಧಾಂತವನ್ನು ಚೀನಾದ ವಿಜ್ಞಾನಿಯೊಬ್ಬರು ನಿರಾಕರಿಸಿದ್ದು, ಈ ವೈರಸ್ ಮಾನವನಿಂದ ಹುಟ್ಟಿದ್ದು ಎಂದಿದ್ದಾರೆ. ಬೀಜಿಂಗ್ ಯೂನಿವರ್ಸಿಟಿ ಆಫ್ ಕೆಮಿಕಲ್ ಟೆಕ್ನಾಲಜಿಯ ಟಾಂಗ್ ಯಿಗಾಂಗ್ , ವುಹಾನ್‌ನ ಹುವಾನಾನ್ ಸೀಫುಡ್ ಮಾರ್ಕೆಟ್‌ನಿಂದ ತೆಗೆದ ವೈರಲ್ ಮಾದರಿಗಳ ಆನುವಂಶಿಕ ಅನುಕ್ರಮಗಳು ಕೋವಿಡ್ ಸೋಂಕಿತ ರೋಗಿಗಳಿಗೆ ಬಹುತೇಕ ಒಂದೇ ಎಂದು ಹೇಳಿದ್ದು, ಮನುಷ್ಯರಿಂದಲೇ ಕೋವಿಡ್ ಹುಟ್ಟಿಕೊಂಡಿರಬಹುದು ಎಂದಿದ್ದಾರೆ. ಚೀನೀ ಸ್ಟೇಟ್ ಕೌನ್ಸಿಲ್ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟಾಂಗ್ ಯಿಗಾಂಗ್, ವಿಜ್ಞಾನಿಗಳು ಜನವರಿ 2020 ಮತ್ತು ಮಾರ್ಚ್ 2020 ರ ನಡುವೆ ವುಹಾನ್ ಮಾರುಕಟ್ಟೆಯಿಂದ 1,300 ಪರಿಸರ ಮತ್ತು ಹೆಪ್ಪುಗಟ್ಟಿದ ಪ್ರಾಣಿಗಳ ಮಾದರಿಗಳನ್ನು ತೆಗೆದುಕೊಂಡರು, ನಂತರ ಅವರು ಪರಿಸರದ ಮಾದರಿಗಳಿಂದ ವೈರಸ್‌ನ ಮೂರು ತಳಿಗಳನ್ನು ಪ್ರತ್ಯೇಕಿಸಿದರು. ಕೋವಿಡ್ ವೈರಸ್‌ನ ಮೂಲವು ರಕೂನ್ ನಾಯಿಗಳು ಎಂದು ಸೂಚಿಸಿದ ಇತ್ತೀಚಿನ ಅಧ್ಯಯನವನ್ನು ವಿಜ್ಞಾನಿ ನಿರಾಕರಿಸಿದ್ದು, ಚೈನೀಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಸಂಶೋಧಕ ಝೌ…
ಪಾಕಿಸ್ತಾನ: ಕ್ವೆಟ್ಟಾದ ಶಹರಾ-ಎ-ಇಕ್ಬಾಲ್ ಪ್ರದೇಶದಲ್ಲಿ ಪೊಲೀಸ್ ವಾಹನದ ಬಳಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಪೊಲೀಸರು ಮತ್ತು ಅಪ್ರಾಪ್ತ ಬಾಲಕಿ ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದು, 19 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾದ್ಯಮಗಳು ವರದಿ ಮಾಡಿವೆ. ಸ್ಫೋಟದಿಂದಾಗಿ ಈ ಪ್ರದೇಶದಲ್ಲಿ ಹಲವಾರು ವಾಹನಗಳು ಮತ್ತು ದ್ವಿಚಕ್ರ ವಾಹನಗಳು ಹಾನಿಗೊಳಗಾಗಿವೆ. ಗಾಯಾಳುಗಳನ್ನು ಸಮೀಪದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಂಗಾಮಿ ಪೊಲೀಸ್ ತನಿಖಾ ಅಧೀಕ್ಷಕರ ವಾಹನವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಕ್ವೆಟ್ಟಾದ ಕಂದಹರಿ ಬಜಾರ್‌ನಲ್ಲಿ ವಾಹನವನ್ನು ನಿಲ್ಲಿಸಲಾಗಿದ್ದು ಈ ವೇಳೆ ಸ್ಫೋಟ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶಫ್ಕತ್ ಹೇಳಿದ್ದಾರೆ. ಪೊಲೀಸ್ ವಾಹನದ ಹಿಂಭಾಗ ನಿಲ್ಲಿಸಲಾಗಿದ್ದು ಮೋಟಾರ್ ಸೈಕಲ್ ನಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು ಅಳವಡಿಸಿ ಸ್ಫೋಟ ನಡೆಸಲಾಗಿದೆ. ಸ್ಫೋಟಕ್ಕೆ ಮೂರರಿಂದ ನಾಲ್ಕು ಕಿಲೋ ಸ್ಫೋಟಕಗಳನ್ನು ಬಳಸಲಾಗಿದೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಬಲೂಚಿಸ್ತಾನದ ರಾಜಧಾನಿಯಲ್ಲಿ…
ಅಫ್ಘಾನಿಸ್ತಾನ ನಿತ್ಯ ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು ಇದರಿಂದ ಜನ ಬೇಸತ್ತು ಹೋಗಿದ್ದಾರೆ. ಇದೀಗ ಹೆರಾತ್ ಪ್ರಾಂತ್ಯದಲ್ಲಿ ವಾಸಿಸುವವರಿಗೆ ತಾಲಿಬಾನ್ ಮತ್ತೊಂದು ಆದೇಶವನ್ನು ಹೊರಡಿಸಿದ್ದು, ಇದು ತೆರೆದ ರೆಸ್ಟೋರೆಂಟ್ಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಹೇಳಲಾಗಿದೆ. ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ತಾಲಿಬಾನ್ ಲಿಂಗ ಪ್ರತ್ಯೇಕತೆಯ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಪುರುಷರು ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಕುಟುಂಬ ಸದಸ್ಯರೊಂದಿಗೆ ತಿನ್ನಲು ಅನುಮತಿ ನಿರಾಕರಿಸಿದೆ. ಅಲ್ಲದೆ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಉದ್ಯಾನವನಕ್ಕೆ ಹೋಗುವುದನ್ನು ನಿಷೇಧಿಸಿದೆ. ಉದ್ಯಾನಗಳು ಮತ್ತು ಹಸಿರು ಪ್ರದೇಶಗಳನ್ನು ಹೊಂದಿರುವ ಯಾವುದೇ ರೆಸ್ಟೋರೆಂಟ್‌ಗೆ ಯಾವುದೇ ಮಹಿಳೆ ಅಥವಾ ಕುಟುಂಬಕ್ಕೆ ಭೇಟಿ ನೀಡಲು ಸಾಧ್ಯವಾಗುವುದಿಲ್ಲ ಎಂದು ಆ ಆದೇಶ ಹೇಳುತ್ತದೆ. ಇಂತಹ ಸ್ಥಳಗಳಲ್ಲಿ ಪುರುಷರು ಮತ್ತು ಮಹಿಳೆಯರು ಭೇಟಿಯಾಗುತ್ತಾರೆ ಎಂಬ ಧಾರ್ಮಿಕ ಸಂಘಟನೆಗಳ ಸದಸ್ಯರು ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆಗಸ್ಟ್ 2021 ರಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಫ್ಘಾನಿಸ್ತಾನದಲ್ಲಿ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ. ಇತ್ತೀಚೆಗೆ ಶಿಕ್ಷಣಕ್ಕೆ…
ನವದೆಹಲಿ: ಕರ್ನಾಟಕ ಬಿಜೆಪಿ (Karnataka BJP) ನಾಯಕರ ಕುಟುಂಬ ರಾಜಕಾರಣಕ್ಕೆ (Family Politics) ಪ್ರಧಾನಿ ನರೇಂದ್ರ ಮೋದಿ (PM Narendra Modi) ಗರಂ ಆಗಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಕರ್ನಾಟಕ ಚುನಾವಣೆಯಲ್ಲಿ (Karnataka Election) ಟಿಕೆಟ್ ಹಂಚಿಕೆ ಸಂಬಂಧ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಸರಣಿ ಸಭೆ ನಡೆಸುತ್ತಿದ್ದಾರೆ. ಭಾನುವಾರ ಮೈಸೂರಿನ ಕಾರ್ಯಕ್ರಮ ಮುಗಿಸಿ ದೆಹಲಿಗೆ ತೆರಳಿದ ಬಳಿಕ ಪ್ರಧಾನಿ ಮೋದಿ, ಜೆಪಿ ನಡ್ಡಾ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಭೆ ನಡೆದಿತ್ತು. ಈ ವೇಳೆ ರಾಜ್ಯ ನಾಯಕರು ತಂದ ಸಮೀಕ್ಷಾ ವರದಿ ಮತ್ತು ಅಭ್ಯರ್ಥಿಗಳ ಪಟ್ಟಿಯನ್ನು ನೋಡಿ ಮೋದಿ ಅಸಮಾಧಾನಗೊಂಡಿದ್ದಾರೆ. ಹಲವು ನಾಯಕರು ಪುತ್ರರಿಗೆ ಟಿಕೆಟ್ ಕೇಳಿದ ಹಿನ್ನೆಲೆಯಲ್ಲಿ ಕೆಲ ಕ್ಷೇತ್ರಗಳಿಗೆ ಪುತ್ರರ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಈ ನಾಯಕರ ನಡೆಯನ್ನು ಕಂಡು ಅಸಮಾಧಾನಗೊಂಡ ಮೋದಿ, ಕುಟುಂಬ ರಾಜಕಾರಣ ವಿರುದ್ಧ ಮಾತನಾಡುವ ನಾವೇ ಮಕ್ಕಳಿಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದರೆ ಹೇಗೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ನೀವು ಮಾಡಿದ ಎಲ್ಲಾ ಸಮೀಕ್ಷೆಗಳು ಪ್ರಮುಖ…
ಇತ್ತೀಚಿನ ದಿನಗಳಲ್ಲಿ ಎಚ್3ಎನ್2 ವೈರಸ್ (H3N2 Virus) ಹರಡುವಿಕೆಯು ಹೆಚ್ಚಾಗಿದ್ದು ದೀರ್ಘಕಾಲದ ವರೆಗೆ ಇರುವ ರೋಗಲಕ್ಷಣಗಳಿಂದಾಗಿ ಜನರು ಕೋವಿಡ್ ಇರಬಹುದಾ ಎಂದು ಗೊಂದಲಕ್ಕೊಳಗಾಗಿದ್ದಾರೆ. ಎಚ್3ಎನ್2 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದರೊಂದಿಗೆ, COVID-19 ಪ್ರಕರಣಗಳು ಸಹ ಹೆಚ್ಚುತ್ತಿವೆ ಮತ್ತು ಕೇಂದ್ರ-ರಾಜ್ಯ ಸರ್ಕಾರಗಳು ಸಮಾನವಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿವೆ. ಈ ಬಾರಿಯ ಹವಾಮಾನ ಬದಲಾವಣೆಯಿಂದಾಗಿ ಒಂದು ದಿನ ಚಳಿ, ಒಂದು ದಿನ ಬಿಸಿಲು. ಈ ಬದಲಾವಣೆಯಿಂದಾಗಿ ಜ್ವರ, ಸೋಂಕಿನ ಪ್ರಕರಣಗ ಳು ಆರಂಭವಾಗಿದೆ. ಈ ಜ್ವರ ಮೂಲತಃ ಇನ್ಫ್ಲುಯೆನ್ಸ ವೈರಸ್ನಿಂದ ಉಂಟಾಗುವ ಉಸಿರಾಟದ ಕಾಯಿಲೆಯಾಗಿದೆ. ಸಾಮಾನ್ಯವಾಗಿ, ಟೈಪ್ ಎ ಮತ್ತು ಬಿ ಕಾಲೋಚಿತ ಸಾಂಕ್ರಾಮಿಕ ರೋಗ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತವೆ. ಅಲ್ಲದೆ ಕೆಲವು ರೋಗಿಗಳು H3N2 ವೈರಸ್ ಸೋಂಕಿಗೆ ಒಳಗಾಗಿ ಆ ಬಳಿಕ ಕಾಣಸಿಗುವ ಪರಿಣಾಮಗಳನ್ನು ವರದಿ ಮಾಡಲು ಪ್ರಾರಂಭಿಸಿದ್ದಾರೆ. ಸಾಮಾನ್ಯವಾಗಿ ಎಚ್3ಎನ್2 ವೈರಸ್ನಗೆ ಇಂತಿಷ್ಟೇ ಅವಧಿ ಎಂದು ಇಲ್ಲ. ಆದರೆ ವೈದ್ಯರ ಪ್ರಕಾರ, ಇದು ಹೆಚ್ಚಾಗಿ 5 ರಿಂದ 15 ದಿನಗಳವರೆಗೆ ಇರುತ್ತದೆ.…
ನವದೆಹಲಿ: ಪರಾರಿಯಾಗಿರುವ ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಸಿಂಗ್‌ನ ಆಪ್ತ ಸಹಾಯಕ ಪಪ್ಪಲ್ಪ್ರೀತ್ ಸಿಂಗ್‌ನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಸೋಮವಾರ ಬಂಧಿಸಲಾಗಿದೆ. ಕಳೆದ ತಿಂಗಳು ಜಲಂಧರ್‌ನಲ್ಲಿ ಪೋಲೀಸರ ಬಲೆಯಿಂದ ಅಮೃತ್‌ಪಾಲ್ ಸಿಂಗ್ ಹಾಗೂ ಪಪ್ಪಲ್ಪ್ರೀತ್ ಸಿಂಗ್ ನಾಟಕೀಯವಾಗಿ ತಪ್ಪಿಸಿಕೊಂಡಿದ್ದರು. ಬಳಿಕ ಇಬ್ಬರೂ ಒಟ್ಟಿಗೆ ತಲೆಮರೆಸಿಕೊಂಡಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳಲು ಬೇರೆ ಬೇರೆ ಮಾರ್ಗಗಳನ್ನು ಕಂಡುಹಿಡಿದು ಸ್ಥಳ ಬದಲಾವಣೆ ಮಾಡುತ್ತಿದ್ದರು. ಇದೀಗ ಪಂಜಾಬ್ ಪೊಲೀಸರ ಗುಪ್ತಚರ ಘಟಕ ಪಪ್ಪಲ್ಪ್ರೀತ್ ಸಿಂಗ್‌ನನ್ನು ಬಂಧಿಸಿದೆ. ಅಮೃತ್‌ಪಾಲ್ ಸಿಂಗ್ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ತನ್ನ ಗುರುತು ಯಾರಿಗೂ ಸಿಗದಂತೆ ವೇಷಗಳನ್ನು ಬದಲಿಸಿಕೊಂಡು, ಪಂಜಾಬ್ ಮಾತ್ರವಲ್ಲದೇ ದೆಹಲಿಯಲ್ಲಿಯೂ ತಿರುಗಾಡಿರುವುದು ಕೆಲ ದಿನಗಳ ಹಿಂದೆ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿತ್ತು. ಆತ ಪೊಲೀಸರ ಬಂಧನದಿಂದ ತಪ್ಪಿಸಿಕೊಂಡು 3 ವಾರ ಆಗಿದ್ದರೂ ಇಲ್ಲಿಯವರೆಗೆ ಅಧಿಕಾರಿಗಳಿಂದ ಆತನನ್ನು ಹಿಡಿಯಲು ಸಾಧ್ಯವಾಗಿಲ್ಲ. ಇದೀಗ ಅಮೃತ್‌ಪಾಲ್ ಸಿಂಗ್‌ನ ಪತ್ತೆಗಾಗಿ ಪಂಜಾಬ್ ಪೊಲೀಸರಿಗೆ ಏಪ್ರಿಲ್ 14 ರಂದು ಬೈಸಾಖಿ ಆಚರಣೆ ವರೆಗೆ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ. ಇದೀಗ ಪಪ್ಪಲ್ಪ್ರೀತ್ ಸಿಂಗ್‌ನ ಬಂಧನವಾಗಿದ್ದು, ಈಗಲಾದರೂ ಅಮೃತ್‌ಪಾಲ್…
ಇಟಾನಗರ: ಅರುಣಾಚಲ ಪ್ರದೇಶ ಭೇಟಿಗೆ ಚೀನಾ (China) ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದರು. ಅರುಣಾಚಲ ಪ್ರದೇಶದ (Arunachal Pradesh) ಗಡಿ ಗ್ರಾಮವಾದ ಕಿಬಿತೂದಿಂದ ವೈಬ್ರಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ನಮ್ಮ ಒಂದು ಇಂಚು ಭೂಮಿಯನ್ನು ಯಾರೂ ಕಬಳಿಸಲು ಸಾಧ್ಯವಿಲ್ಲ. 2014ರ ಮೊದಲು, ಇಡೀ ಈಶಾನ್ಯ ಪ್ರದೇಶವು ಪ್ರಕ್ಷುಬ್ಧ ಪ್ರದೇಶವೆಂದು ಕರೆಯಲ್ಪಟ್ಟಿತು. ಆದರೆ ಕಳೆದ 9 ವರ್ಷಗಳಲ್ಲಿ, ಪ್ರಧಾನಿ ಮೋದಿಯವರ ಯೋಜನೆಯಿಂದಾಗಿ, ಈಶಾನ್ಯವನ್ನು ಈಗ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರದೇಶವೆಂದು ಪರಿಗಣಿಸಲಾಗಿದೆ ಎಂದು ಹೇಳಿದರು. ಐಟಿಬಿಪಿ ಯೋಧರು ಹಾಗೂ ಸೇನೆಯು ನಮ್ಮ ಗಡಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರಣದಿಂದ ಇಂದು ದೇಶದ ಜನರು ಅವರ ಮನೆಗಳಲ್ಲಿ ಶಾಂತಿಯುತವಾಗಿ ಮಲಗಲು ಸಾಧ್ಯವಾಗಿದೆ ಎಂದು ಇಂದು ನಾವು ಹೆಮ್ಮೆಯಿಂದ ಹೇಳಬಹುದಾಗಿದೆ ಎಂದು ಸೇನೆ ಹಾಗೂ ಗಡಿ ಪೊಲೀಸರನ್ನು ಶ್ಲಾಘಿಸಿದರು. ಕಳೆದ ವಾರ ಅರುಣಾಚಲ ಪ್ರದೇಶದ ಕೆಲವು ಸ್ಥಳಗಳನ್ನು ಚೀನಾ ತನ್ನ ಭೂಪ್ರದೇಶದ ಭಾಗವೆಂದು ಹೇಳಿಕೊಳ್ಳುವ…
ಲಕ್ನೋ: ಟಿವಿ ಧಾರವಾಹಿ ರಾಮಾಯಣದ (Ramayana) ಡಬ್ಬಿಂಗ್ ವೀಡಿಯೋವನ್ನು ಬಾರ್‌ನ (Bar) ದೊಡ್ಡ ಪರದೆಯಲ್ಲಿ ಪ್ಲೇ ಮಾಡಿದ ವ್ಯಕ್ತಿಯನ್ನು ಬಂಧಿಸಿದ ಘಟನೆ ನೋಯ್ಡಾದಲ್ಲಿ ನಡೆದಿದೆ. ಉತ್ತರ ಪ್ರದೇಶದ ನೋಯ್ಡಾದ (Noida) ಗಾರ್ಡನ್ಸ್ ಗ್ಯಾಲೇರಿಯಾ ಮಾಲ್‍ನಲ್ಲಿರುವ ಲಾರ್ಡ್ ಆಫ್ ದಿ ಡ್ರಿಂಕ್ಸ್ ರೆಸ್ಟೊ-ಬಾರ್‍ನಲ್ಲಿ ಈ ಘಟನೆ ನಡೆದಿದೆ. ಶ್ರೀರಾಮ ಹಾಗೂ ರಾವಣನ ಪಾತ್ರಗಳಿಗೆ ಆಧುನಿಕ ಸಂಗೀತವನ್ನು ನೀಡುವ ಮೂಲಕ ಪ್ಲೇ ಮಾಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸ್ (Police) ಅಧಿಕಾರಿಯೊಬ್ಬರು ಮಾತನಾಡಿ, ವಿಷಯ ತಿಳಿದ ತಕ್ಷಣ ಸೆಕ್ಟರ್ 39 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ರೆಸ್ಟೋರೆಂಟ್‍ನ ಮ್ಯಾನೇಜರ್ ಎಂದು ಗುರುತಿಸಲಾಗಿದೆ.
ಮುಂಬೈ: ಮೊಬೈಲ್ (Mobile) ಬಳಸಲು ಅನುಮತಿ ನೀಡದ್ದಕ್ಕೆ ಬೇಸರಗೊಂಡ ಬಾಲಕಿಯೊಬ್ಬಳು (Girl) 7 ಅಂತಸ್ತಿನ ಕಟ್ಟಡದಿಂದ (Building) ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ನಡೆದಿದೆ. ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ಬಾಲಕಿಯ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಬಾಲಕಿಯ ಕುಟುಂಬಸ್ಥರು ಆಕೆಯ ಮೊಬೈಲ್ ಅನ್ನು ಕಿತ್ತುಕೊಂಡಿದ್ದರಿಂದ ಬೇಸರಗೊಂಡಿದ್ದಳು ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.