Author: Prajatv Kannada

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಾದ(Enforcement of Election Code of Conduct) ನಂತರ ಒಟ್ಟು 323 ಕೋಟಿ ರೂ.ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ (Chief Electoral Officer Manoj Kumar Meena) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಚೇರಿಯಲ್ಲಿ ಮಾತನಾಡಿದ ಅವರು,115.96 ಕೋಟಿ ರೂ.ನಗದು, 22.36 ಕೋಟಿ ರೂ.ಮೌಲ್ಯದ ಉಚಿತ ಕೊಡುಗೆ, ಉಡುಗೊರೆ ವಸ್ತುಗಳು, 76.07 ಕೋಟಿ ರೂ.ಮೌಲ್ಯದ 20.29 ಲಕ್ಷ ಲೀಟರ್ ಮದ್ಯ, 21.37 ಕೋಟಿ ರೂ.ಮೌಲ್ಯದ 1,689 ಕೆಜಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. 82.77 ಕೋಟಿ ರೂ.ಮೌಲ್ಯದ 162.26 ಕೆಜಿ ಚಿನ್ನ, 4.54 ಕೋಟಿ ರೂ.ಮೌಲ್ಯದ 656.13 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 323.09 ಕೋಟಿ ರೂ.ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ. ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಇಲಾಖೆಯು ಈವರೆಗೆ 2514 ಎಫ್‍ಐಆರ್ ಗಳನ್ನು ದಾಖಲಿಸಿದ್ದಾರೆ. 69,847…

Read More

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ((Kempegowda International Airport)) ಹೊಸ ಟರ್ಮಿನಲ್‌ 2ನಲ್ಲಿ ಮಳೆ ನೀರು ಸೋರಿಕೆ ಉಂಟಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ  ನೀರು ಸೋರಿಕೆ ಉಂಟಾಗಿದೆ.  ಕಳೆದ 2 ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್-2 ಉದ್ಘಾಟನೆ ಮಾಡಿದರು. ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ಮಳೆ ನೀರು ಸೋರಿಕೆಯಾಗಿದ್ದು, ಕೇವಲ 30 ನಿಮಿಷಗಳ ಕಾಲ ಸುರಿದ ಮಳೆಗೆ ಟರ್ಮಿನಲ್‌-2 ರಲ್ಲಿ ನೀರು ತುಂಬಿಕೊಂಡಿದೆ. ಹವಾಮಾನ ವರದಿಗಳು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ 25 ಮಿಮೀ ಮಳೆಯನ್ನು ದಾಖಲಿಸಿದರೆ, ವಿಮಾನ ನಿಲ್ದಾಣವು ರಾತ್ರಿ 7 ರಿಂದ 10 ರವರೆಗೆ ಕನಿಷ್ಠ 9.8 ಮಿಮೀ ಮಳೆಯನ್ನು ದಾಖಲಿಸಿದೆ. ಇನ್ನು ಹೊಸ ಟರ್ಮಿನಲ್‌ನ ಕರ್ಬ್‌ಸೈಡ್‌ನಲ್ಲಿ ಸೋರಿಕೆಯಾಗಿರುವುದನ್ನು ವಿಮಾನ ನಿಲ್ದಾಣದ ನಿರ್ವಾಹಕರಾದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ ಖಚಿತಪಡಿಸಿದೆ.

Read More

ಬೆಂಗಳೂರು: ಬಜರಂಗ ದಳಕ್ಕೂ ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ ಎಂದು  ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ(Randeep Singh Surjewala) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು, ಹನುಮಾನ್‌ ಚಾಲೀಸಾ ಪಠಿಸುತ್ತೇವೆ ಎನ್ನುತ್ತಿರುವ ಬಿಜೆಪಿ(BJP)ಯವರಿಗೆ ಹನುಮಾನ್‌ ಚಾಲೀಸಾ ಪಠಣೆ ಗೊತ್ತಿಲ್ಲ. ಅವರಿಗೆ ಗೊತ್ತಿರುವುದು ಚಾಲೀಸ್‌ ಪರ್ಸೆಂಟೇಜ್‌ ಪಡೆಯುವುದು ಮಾತ್ರ. ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷದಲ್ಲಿ ರಾಜ್ಯದಲ್ಲಿ 1500 ದೇವಾಲಯ ಕೆಡವಿದೆ. ಹೀಗಿದ್ದರೂ ಈಗ ಮಾತನಾಡುತ್ತಿರುವವರು ಯಾಕೆ ಪ್ರತಿಭಟನೆ ಮಾಡಲಿಲ್ಲ?’ ಎಂದು ಕಿಡಿಕಾರಿದರು. ಬಿಜೆಪಿಯು ಕಳೆದ 4 ವರ್ಷದಲ್ಲಿ ಅತ್ಯಂತ ಪುರಾತನ ಹನುಮ ದೇವಾಲಯಗಳನ್ನು ಕೆಡವಿದೆ. ನಂಜನಗೂಡಿನಲ್ಲಿ ಸಾವಿರಾರು ವರ್ಷ ಇತಿಹಾಸದ ಹನುಮಂತನ ದೇವಾಲಯ ಕೆಡವಿದೆ. ಇದರ ವಿರುದ್ಧ ವಿಎಚ್‌ಪಿ, ಬಜರಂಗ ದಳ ಯಾಕೆ ವಿರೋಧಿಸಲಿಲ್ಲ? ಬೆಂಗಳೂರಿನಲ್ಲಿ ಮೆಟ್ರೋ ನಿರ್ಮಾಣಕ್ಕೆ ಯಡಿಯೂರಪ್ಪ, ಬೊಮ್ಮಾಯಿ ಅವರು 2020ರಲ್ಲಿ 150 ವರ್ಷಗಳ ಹಳೆಯ ಹನುಮಂತನ ದೇವಾಲಯ ಕೆಡವಿದ್ದರು. ಇದರ ಬಗ್ಗೆ ಬಜರಂಗ ದಳ ಹೋರಾಟ ಮಾಡಿತ್ತೇ? ಆಗ ಹನುಮಾನ್‌ ಚಾಲೀಸಾ…

Read More

ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಗೆ(Karnataka Election) ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯದಲ್ಲಿ ಚುನಾವಣೆ ಕಾವು ದಿನೇ ದಿನೇ ರಂಗೇರಿದೆ. ಇದೀಗ ಚುನಾವಣೆ ಹೊತ್ತಲ್ಲೇ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರನ್ನ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಭಾರತೀ ನಗರ ಠಾಣೆ  ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಬಳಿ ಹೋಗಿ ನಿಮ್ಮ ಒಂದು ವೋಟರ್​ ಐಡಿಗೆ(Voter ID) 2 ಸಾವಿರ ರೂ. ಹಣ ಕೊಡುತ್ತೆವೆ ಎಂದು ಹೇಳಿ ವೋಟರ್ ಐಡಿ ಸಂಗ್ರಹಿಸುತ್ತಿದ್ದರು. ಈ ಸಂಬಂಧ ಶಿವಾಜಿನಗರ ಕಾಂಗ್ರೆಸ್ ಕಾರ್ಯಕರ್ತ ದೂರು ನೀಡಿದ್ದು, ದೂರಿನ ಮೇರೆಗೆ ನಾಲ್ವರನ್ನ ವಶಕ್ಕೆ ಪಡೆಯಲಾಗಿದೆ. ಈ ವೇಳೆ 15ಕ್ಕೂ ಹೆಚ್ಚು ವೋಟರ್ ಐಡಿ, ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಪ್ರತಿ ಪಕ್ಷಗಳು ಮತದಾರರನ್ನು ತಮ್ಮತ್ತ ಸೆಳೆಯಲು ಸಾಕಷ್ಟು ಕಸರತ್ತು ಮಾಡುತ್ತಿವೆ. 18 ವರ್ಷ ವಯಸ್ಸು ಪೂರೈಸಿದವರು ಅಥವಾ ಅದಕ್ಕಿಂತ…

Read More

ರಾಣೇಬೆನ್ನೂರ ಎನ್ ಸಿ ಪಿ ಅಭ್ಯರ್ಥಿ ಆರ್ ಶಂಕರ ಇಂದು ರಾಣೇಬೆನ್ನೂರು ಮತಕ್ಷೇತ್ರದ ಲಿಂಗದಹಳ್ಳಿ,ಕೋಟಿಹಾಳ,ನಿಟಪಳ್ಳಿ,ಹೊಳೆಅನ್ವೆರಿ,ಮಲಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅದ್ದೂರಿ ಪ್ರಚಾರ ನಡಸಿದರು‌. ಈ ವೇಳೆ ಮಾತನಾಡಿದ ಎನ್ ಸಿ ಪಿ ಅಭ್ಯರ್ಥಿ ಆರ್ ಶಂಕರ್ ರಾಣೇಬೆನ್ನೂರ ತಾಲೂಕಿನ ಯುವಕರಿಗೆ ಉದ್ಯೋಗ ಸೃಷ್ಠಿಸುವ ಜವಬ್ದಾರಿ ನನ್ನದು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನನ್ನನ್ನು ಬೆಂಬಲಿಸಿ ಆಶೀರ್ದಿಸಬೇಕು ಎಂದು ಮನವಿ ಮಾಡಿದರು

Read More

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿಯಲ್ಲಿ ಟಿಕೆಟ್ ನೀಡದ ಕಾರಣ, ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದು, ಈಗಾಗಲೇ ಭರ್ಜರಿ ಪ್ರಚಾರ ಕೂಡ ನಡೆಸಿದ್ದು, ನೂರಾರು ಶೆಟ್ಟರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಹೌದು,,, ನಗರದ ಹೊಸೂರಿನಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ, ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ, 12 ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ದೇವೇಂದ್ರ ಹರಿವಾಣ ತಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಈ ಚುನಾವಣೆ ಸೆಮಿಫೈನಲ್‌ ಇದ್ದ ಹಾಗೆ, ಮುಂದೆ 24 ರಲ್ಲಿ ಫೈನಲ್ ಪಂದ್ಯ ಇದೆ ಎಂದು ಪರೋಕ್ಷವಾಗಿ ಕೆಲ ನಾಯಕರಿಗೆ ಎಚ್ಚರಿಕೆ ನೀಡಿದರು. ಈ ಪ್ರಚಾರ ಸಭೆಯಲ್ಲಿ ಉಭಯ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಲ್ತಾಫ್ ಹಳ್ಳೂರ , ಅನಿಲಕುಮಾರ್ ಪಾಟೀಲ , ಕಾಂಗ್ರೆಸ್ ಮುಖಂಡರಾದ ಸತೀಶ ಮಹರವಾಡೆ , ಮಂಜುನಾಥ…

Read More

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನಂತರವೂ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ತೆಗೆದಿಲ್ಲ, ಹಾಗೆ ಮಾಡುವುದು ನನ್ನ ಸಂಸ್ಕೃತಿ ಅಲ್ಲ, ನನ್ನ ಜಾಯಮಾನಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಾಲಿ ಹಿರಿಯ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಧಾರ ಕೈಗೊಂಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತಮ್ಮ ಕಚೇರಿಯಲ್ಲಿರುವ ಪ್ರಧಾನಿ ಮೋದಿ ಫೋಟೋ ತೆಗೆಯೋಲ್ಲ, ಅದು ನನ್ನ ಸಂಸ್ಕೃತಿಯಲ್ಲ- ಬಿಜೆಪಿ ಮಾಜಿ ನಾಯಕ ಜಗದೀಶ್ ಶೆಟ್ಟರ್ ನಿಲುವು ರಾಜಕೀಯ ವಲಯದಲ್ಲಿ ಚರ್ಚೆಗೆ ಅನುವು ಮಾಡಿಕೊಟ್ಟಿದೆ‌. ಮೋದಿ ಅವರ ಫೋಟೋ ತೆಗೆದಿಲ್ ದಶಕಗಳಿಂದಲೂ ತಾನು ಸೇವೆ ಸಲ್ಲಿಸಿದ ಭಾರತೀಯ ಜನತಾ ಪಕ್ಷವು ಬಿಜೆಪಿಹಾಲಿ ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ತನ್ನ ಸ್ವಕ್ಷೇತ್ರವಾದ ಹುಬ್ಬಳ್ಳಿ ಧಾರವಾಢ ಸೆಂಟ್ರಲ್ ಟಿಕೆಟ್ ನಿರಾಕರಿಸಿದ ನಂತರ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹಾಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ. ಆದರೆ ಇನ್ನೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್…

Read More

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಿದೆ. ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಜಗದೀಶ್ ಶೆಟ್ಟರ್(Jagadish Shettar) ಬಿಜೆಪಿ ವಿರುದ್ಧ ಅಸಮಾಧಾನಗೊಂಡು ಸದ್ಯ ಕಾಂಗ್ರೆಸ್ ಸೇರಿದ್ದು ಹು-ಧಾ ಸೆಂಟ್ರಲ್​ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯ ವಿಧಾನಸಭಾ ಚುನಾವಣೆ ಎದುರಿಸಲಿದ್ದಾರೆ. ಇದರ ಜೊತೆಗೆ ಇದು ನನ್ನ ಕೊನೆಯ ಚುನಾವಣೆ( Jagadish Shettar Announce Retirement) ಎಂದು ಘೋಷಿಸಿದ್ದಾರೆ. ಜನರಿಗೆ ನೀಡಲಾದ ಕರ ಪತ್ರದಲ್ಲಿ ಇದು ನನ್ನ ಕೊನೆ ಚುನಾವಣೆ ಎಂದು ಘೋಷಿಸಿದ್ದಾರೆ. ನಾನು ಏಳನೇ ಬಾರಿ ಚುನಾವಣೆ ಎದುರಿಸುತ್ತಿದ್ದೇನೆ. ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಕೆಟ್ಟು ಹೋಗಿರುವ ವ್ಯವಸ್ಥೆ ಸರಿಪಡಿಸುವ ಉದ್ದೇಶ ಇದೆ ಎಂದು ಸುದೀರ್ಘವಾದ ಕರ ಪತ್ರದ ಮೂಲಕ ಹು-ಧಾ ಸೆಂಟ್ರಲ್​ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮತ ಹಾಕುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ತೊರೆದ ಬಗ್ಗೆಯೂ ಕರಪತ್ರದಲ್ಲಿ ಶೆಟ್ಟರ್(shetter) ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ 4 ದಶಕಗಳ ಕಾಲ ಪಕ್ಷವನ್ನು ಕಟ್ಟಿ ಬೆಳೆಸಿದ್ದೇವೆ. ನಾನು ವಿನಾಕಾರಣ ಬಿಜೆಪಿ ತೊರೆದಿಲ್ಲ. ಬೆವರು ಸುರಿಸಿ ಕಟ್ಟಿದ ಮನೆ ಬಿಡುವುದು…

Read More

ಕಲಬುರಗಿ: ಕಲಬುರಗಿಗೆ ಇಂದು ಚುನಾವಣೆ ಚಾಣಕ್ಯ ಅಮಿತ್ ಶಾ (Amit Shah) ಎಂಟ್ರಿ ನೀಡುತ್ತಿದ್ದು ಜೇವರ್ಗಿ ಮತ್ತು ಅಫಜಲಪುರದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ಸಂಜೆ ನಾಲ್ಕ ಗಂಟೆಗೆ ಜೇವರ್ಗಿಯಲ್ಲಿ ಸಾರ್ವಜನಿಕ ಸಭೆ ನಡೆಸಿ ಸಂಜೆ 5.30 ಕ್ಕೆ ಅಫಜಲಪುರದಲ್ಲಿ ಸಭೆ ನಡೆಸಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ‌ ಮಾಡಲಿದ್ದಾರೆ. ಬಳಿಕ ರಾತ್ರಿ ಕಲಬುರಗಿ ನಗರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಇನ್ನು ಇಂದು ಕನಕಪುರ ಕ್ಷೇತ್ರದಲ್ಲಿ ನಿಗದಿಯಾಗಿದ್ದ ಕೇಂದ್ರ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರ ಮುಂದೂಡಿಕೆಯಾಗಿದೆ. ಮೇ 8ರಂದು ಕನಕಪುರದಲ್ಲಿ ಅಮಿತ್ ಶಾ ಪ್ರಚಾರ ಸಾಧ್ಯತೆ ಇದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ 6 ದಿನಗಳು ಮಾತ್ರ ಬಾಕಿ ಇವೆ. ಮೇ 10ರಂದು ಮತದಾನ ನಡೆಯಲಿದ್ದು ಮೇ 13ಕ್ಕೆ ಫಲಿತಾಂಶ ಹೊರ ಬೀಳಲಿದೆ. ಈಗಾಗಲೇ ಕಾಂಗ್ರೆಸ್–ಬಿಜೆಪಿ ಕೇಂದ್ರ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್​ಡಿ ಕುಮಾರಸ್ವಾಮಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪ್ರಚಾರ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಂತೆ ರಾಜ್ಯದಲ್ಲಿ ಕೋಲಾಹಲ ಎದ್ದಿತ್ತು. ಬಜರಂಗದಳ ನಿಷೇಧದ ಬೆಂಕಿ ಹಬ್ಬಿತ್ತು. ಹೀಗಾಗಿ ಸಂಜೆ 7 ಗಂಟೆಗೆ ಹನುಮಾನ್​ ಚಾಲೀಸಾ​ ಪಠಣ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಕಳೆದ 2 ದಿನಗಳಿಂದ ಪ್ರಚಾರ ನಡೆಸಿ ಇಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಕಲಬುರಗಿಯಲ್ಲಿ ಚುನಾವಣೆ ಚಾಣಕ್ಯ ಅಮಿತ್ ಶಾ ಅಬ್ಬರಿಸಲಿದ್ದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಂದು ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ.

Read More

ಕಲಬುರಗಿ: ಕಾಂಗ್ರೆಸ್ (Congress) ಶಾಸಕ ಹಾಗೂ ಚಿತ್ತಾಪುರ (Chittapura) ಅಭ್ಯರ್ಥಿಯಾಗಿರುವ ಪ್ರಿಯಾಂಕ್ ಖರ್ಗೆ (Priyank Kharge) ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಒಂದೆಡೆ ಚುನಾವಣೆ (Election) ಹತ್ತಿರ ಬರುತ್ತಿದ್ದು, ಇನ್ನೊಂದೆಡೆ ತಮ್ಮ ಪತ್ನಿ ಶ್ರುತಿ ಖರ್ಗೆ (Shruthi Kharge) ಅನಾರೋಗ್ಯದಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಶ್ರುತಿ ಖರ್ಗೆ ಬ್ರೈನ್ ಟ್ಯೂಮರ್‌ನಿಂದ (Brain Tumor) ಬಳಲುತ್ತಿದ್ದು, ಮುಂಬೈನ (Mumbai) ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದು ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿ ಅಲ್ಲದೇ ಒಡಹುಟ್ಟಿದ ಸಹೋದರ ಕೂಡಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪತ್ನಿ ಹಾಗೂ ಆರೋಗ್ಯ ವಿಚಾರಣೆಗಾಗಿ ಪ್ರಿಯಾಂಕ್ ಖರ್ಗೆ ಒಂದು ದಿನ ಆಸ್ಪತ್ರೆಗೆ ತೆರಳಿದರೆ ಮತ್ತೊಂದು ದಿನ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ನಾಮಪತ್ರ ಸಲ್ಲಿಕೆಯ ಬಳಿಕ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಕ್ಷೇತ್ರದಲ್ಲೇ ಪ್ರವಾಸ ಮಾಡುತ್ತಿದ್ದಾರೆ. ಈ ಬಾರಿ ಬಿಜೆಪಿ (BJP) ನಾಯಕರು ಪ್ರಿಯಾಂಕ್ ಖರ್ಗೆಯವರನ್ನು ಟಾರ್ಗೆಟ್ ಆಗಿ ಇರಿಸಿಕೊಂಡು ಸೋಲಿಸುವ ಪ್ಲಾನ್ ಮಾಡಿಕೊಂಡಿದ್ದಾರೆ. ಪತ್ನಿಯ ಆರೋಗ್ಯ ದೃಷ್ಟಿಯಿಂದ ಪ್ರಿಯಾಂಕ್ ಖರ್ಗೆ ಯಾವುದೇ ಕಾರ್ಯಕ್ರಮದಲ್ಲಿ ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಕಳೆದ…

Read More