ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪರವಾಗಿ ಗುರುವಾರ (ಮೇ 4) ರಂದು ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮೋಹಕ ತಾರೆ ರಮ್ಯಾ (Ramya), ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ (Shivarajkumar) ಹಾಗೂ ನಟ ದುನಿಯಾ ವಿಜಯ್ (Duniya Vijay) ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಿಗ್ಗೆಯಿಂದ ಸಂಜೆವರೆಗೆ ವರುಣಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಸ್ಯಾಂಡಲ್‌ವುಡ್ ನಟರು ಸಿದ್ದರಾಮಯ್ಯ ಅವರಿಗೆ ಶಕ್ತಿ ತುಂಬಲಿದ್ದಾರೆ ವಿಧಾನಸಭಾ ಚುನಾವಣೆಗೆ ದಿನಗಣನೆ ಬಾಕಿಯಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಷಗಳ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೆಕೆಂದು ಪಣ ತೊಟ್ಟಿರುವ ಸಿದ್ದರಾಮಯ್ಯ ಅವರು ವರುಣಾದಲ್ಲಿ ಎರಡು ದಿನ ಮಾತ್ರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕಾಗಿರುವ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ, ಹ್ಯಾಟ್ರಿಕ್ ಹೀರೊ ಡಾ.ಶಿವರಾಜ್‌ಕುಮಾರ್ ಹಾಗೂ ನಟ ದುನಿಯಾ ವಿಜಯ್ ಸಿದ್ದರಾಮಯ್ಯ ಅವರ ಪರ ಪ್ರಚಾರಕ್ಕಿಳಿಯುತ್ತಿದ್ದಾರೆ. ಈಗಾಗಲೇ ಕೆಲವು ದಿನಗಳಿಂದ ನಟ ಕಿಚ್ಚ…
Author: Prajatv Kannada
ಬೆಂಗಳೂರು: ನಾವು ಈ ಬಾರಿ 130 ರಿಂದ 140 ಸೀಟ್ ಗೆಲ್ತೇವೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ (Former CM BS Yeddyurappa) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ(Kaveri Niwas in Bangalore) ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲ್ಲೂಕಿನಲ್ಲಿ ಇಂದು ಪ್ರಚಾರ ಮಾಡ್ತೇನೆ. ನಂತರ ದಾವಣಗೆರೆಗೆ ಹೋಗ್ತೇನೆ. ಎಲ್ಲೆಡೆ ನಮ್ಮ ಪರ ವಾತಾವರಣ ಇದೆ. ಹೀಗಾಗಿ ಈ ಬಾರಿ 130 ರಿಂದ 140 ಸೀಟ್ ಗೆಲ್ಲುವ ನಿರೀಕ್ಷೆ ಇದೆ. ಯಾರ ಬೆಂಬಲವೂ ಇಲ್ಲದೇ ಸರ್ಕಾರ ರಚಿಸ್ತೇವೆ ಎಂದರು. ಇನ್ನೂ ಬೆಂಗಳೂರಲ್ಲಿ ಮೋದಿ ಅವರು ರೋಡ್ ಶೋ ಮಾಡ್ತಿದ್ದಾರೆ. ಇದರಿಂದ ಪಕ್ಷದ ಮೇಲೆ ಪರಿಣಾಮ ಆಗಿ, ಪಕ್ಷ ಗೆಲುವಿಗೆ ಸಹಕಾರಿ ಆಗಲಿದೆ. ನರೇಂದ್ರ ಮೋದಿಯ ಅವರು ಮೇ 6 ರಂದು ನಡೆಯಲಿರುವ ರೋಡ್ ಶೋ ಬದಲಾವಣೆ ಆಗಿದ್ದು, ಶನಿವಾರ ಸಂಜೆ ಇದ್ದ ರೋಡ್ ಶೋ ಭಾನುವಾರ ಬೆಳಿಗ್ಗೆ ನಡೆಯಲಿದೆ ಎಂದರು. ಇನ್ನೂ ಭಜರಂಗ…
ಲಕ್ನೋ: ತವರಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ ಜಯದ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡಕ್ಕೆ ಭಾರೀ ನಿರಾಸೆಯಾಗಿದೆ. ಮಳೆಯಿಂದಾಗಿ (Rain) ಪಂದ್ಯ ರದ್ದಾದ ಕಾರಣ ಇತ್ತಂಡಗಳು ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಉಳಿದುಕೊಂಡಿವೆ. ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದರು. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಂದೆ ಅಲ್ಪ ಮೊತ್ತ ಗಳಿಸುವಷ್ಟಕ್ಕೆ ಸೀಮಿತವಾಯಿತು. ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕನಿಷ್ಠ ಮೊತ್ತಕ್ಕೆ ಕಟ್ಟಿಹಾಕುವ ನಿರೀಕ್ಷೆಯಲ್ಲಿತ್ತು. ಆದರೆ ಯುವ ಆಟಗಾರ ಆಯುಷ್ ಬದೋನಿ (Ayush Badoni) ಚೆನ್ನೈ ಸೂಪರ್ ಕಿಂಗ್ಸ್ ತಂಡದ ಲೆಕ್ಕಾಚಾರವನ್ನ ತಲೆಕೆಳಗಾಗಿಸಿದರು. ಕೊನೆಯ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬದೋನಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ತಂಡ ಗೌರವಯುತ…
ಬೆಂಗಳೂರು: ರಾಜ್ಯದಲ್ಲಿ ಬಜರಂಗದಳ (Bajrang Dal) ಬ್ಯಾನ್ ಮಾಡುವ ವಿಚಾರ ರಾಜಕೀಯ ಪಡಸಾಲೆಯಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಕಾಂಗ್ರೆಸ್ (Congress) ಪಕ್ಷ ಬಿಡುಗಡೆ ಮಾಡಿರುವ ತನ್ನ ಪ್ರಣಾಳಿಕೆಯಲ್ಲಿ ‘ಬಜರಂಗದಳವನ್ನು ನಿಷೇಧ ಮಾಡಲಾಗುವುದು’ ಎಂದಿದೆ. ಇದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕೋಪಕ್ಕೆ ತುತ್ತಾಗಿದೆ. ಅದರಲ್ಲೂ ಬಿಜೆಪಿಯು ಇದನ್ನು ಚುನಾವಣಾ ಅಸ್ತ್ರವಾಗಿ ಕಾಂಗ್ರೆಸ್ ಮೇಲೆ ಪ್ರಯೋಗಿಸುತ್ತಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ರಮ್ಯಾ ವಿಭಿನ್ನವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಬಜರಂಗದಳವನ್ನು ಬ್ಯಾನ್ (Ban) ಮಾಡುತ್ತೇವೆ ಎಂದರೆ, ರಮ್ಯಾ ಈ ನಿಲುವು ಸರಿಯಾದದ್ದು ಅಲ್ಲ. ಒಂದು ಸಂಘಟನೆಯನ್ನು ಬ್ಯಾನ್ ಮಾಡಿದರೆ ಮತ್ತೊಂದು ಸಂಘಟನೆ ಹುಟ್ಟಿಕೊಳ್ಳುತ್ತದೆ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ, ಕೆಲವು ಸಲಹೆಗಳನ್ನೂ ರಮ್ಯಾ (Ramya) ಕೊಟ್ಟಿದ್ದಾರೆ. ಬನ್ನೂರಿನಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಬಂದಿದ್ದ ರಮ್ಯಾ, ಮಾಧ್ಯಮಗಳೊಂದಿಗೆ ಮಾತನಾಡಿ, ‘ದ್ವೇಷದ ಭಾಷಣ ಮಾಡುವವರ ವಿರುದ್ಧ ದೂರು ದಾಖಲಿಸಿ ಎಂದು ನ್ಯಾಯಾಲಯವೇ ಹೇಳಿದೆ. ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಕೂಡ ಇದೆ. ಅದನ್ನು…
ಚುನಾವಣೆಗೆ ಇನ್ನು ಬೆರಳೆಣಿಕೆ ದಿನಗಳು ಬಾಕಿ ಉಳಿದಿವೆ. ಎಲ್ಲ ಪಕ್ಷದ ಅಭ್ಯರ್ಥಿಗಳು ಬೈಕ್ ರ್ಯಾಲಿಗಳ ಮಾಡುವ ಮೂಲಕ ಮತ ಭೇಟೆ ಮಾಡುತ್ತಿದ್ದಾರೆ.ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಗೌಡ ಇಂದು ತಮ್ಮ ಕ್ಷೇತ್ರದ ಅರಕೆರೆ ವಾರ್ಡನ ಆಂಜನೇಯ ದೇವಾಸ್ಥಾನದಲ್ಲಿ ಪೂಜೆ ಮಾಡಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.ಅರಕೆರೆಯಿಂದ ಹೊರಟ ಬೈಕ್ ರ್ಯಾಲಿ ಬಿ ಟಿ ಎಸ್ ಬಡಾವಣೆ ಹುಳಿಮಾವು ನ್ಯಾನಪ್ಪಹಳ್ಳಿ ಮೂಲಕ ಬೊಮ್ಮನ ಹಳ್ಳಿ ತಲುಪಿದರು. ಇದೆ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಗೌಡ ಮೂರು ದಿನಗಳಿಂದ ಸುರಿಯತ್ತಿರುವ ಮಳೆಗೆ ಕ್ಷೇತ್ರದಲ್ಲಿ ಜನರು ಪರದಾಡುವಂತ್ತಾಗಿದ್ದು ಮಾಜಿ ಶಾಸಕರು ಮಾಡಿರುವ ಅಭಿವೃದ್ದಿ ಮಂತ್ರಗಳು ಯಾವುದು ಕೆಲಸ ಮಾಡಿಲ್ಲ ಇನ್ನು ಮುಂದೆ ಯಾವುದೆ ಮಂತ್ರಗಳು ನಡೆಯುವುದಿಲ್ಲ ಅವರ ಸರ್ಕಾರ ಇದ್ದಾಗ ತಮಗೆ ಬೇಕಾದ ಸ್ನೇಹಿತರಿಗೆ ಸಂಬಂಧಿಕರಿಗೆ ಕಾಂಟ್ರಾಕ್ಟ್ ಗಳನ್ನು ಕೊಟ್ಟು ನಮ್ಮ ಪಕ್ಷದ ಕಾರ್ಯಕರ್ತರು ಪ್ರೆಶ್ನೆ ಮಾಡಲು ಹೋದಾಗ ಅವರನ್ನು ಹೊಡೆದು ಬೆದರಿಕೆ ಹಾಕಿ ಪೋಲಿಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ…
ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ(Congress manifesto) ಬಜರಂಗದಳ ನಿಷೇಧ ಪ್ರಸ್ತಾಪ ವಿರೋಧಿಸಿ ಇಂದು ಬೆಂಗಳೂರು ಸೇರಿ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣವನ್ನು ಬಜರಂಗದಳ ಆಯೋಜಿಸಿದೆ. ಇಂದು ಸಂಜೆ 7 ಗಂಟೆಗೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ನಡೆಯಲಿದ್ದು, ಈ ಮೂಲಕ ಕಾಂಗ್ರೆಸ್‌ಗೆ ತಿರುಗೇಟು ನೀಡಲು ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಮುಂದಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಪೋಸ್ಟ್ ಒಂದನ್ನು ಪ್ರಕಟಿಸಿದ್ದಾರೆ. ಬಜರಂಗದಳ ಇಂದು ಸಂಜೆ 7 ಗಂಟೆಗೆ ರಾಜ್ಯದಾದ್ಯಂತ ಸಾಮೂಹಿಕ ಹನುಮಾನ್ ಚಾಲಿಸಾ ಪಠಣವನ್ನು ಆಯೋಜಿಸಿದೆ. ಇದು ಧರ್ಮಕ್ಕೆ ಸಂಕಟವೆರಗಿರುವ ಸಮಯ. ಒಟ್ಟಾಗಿ ನಿಲ್ಲುವುದೊಂದೇ ಪರಿಹಾರ. ನಮ್ಮೆಲ್ಲ ಭೇದಗಳನ್ನು ಒತ್ತಟ್ಟಿಗಿಟ್ಟು ಧರ್ಮ ರಕ್ಷಣೆಗೆ ಜೊತೆಯಾಗೋಣ, ಕೈ ಜೋಡಿಸೋಣ ಎಂದು ಬರೆದುಕೊಂಡಿದ್ದಾರೆ. ಅದಲ್ಲದೇ ಬಜರಂಗದಳ ಬ್ಯಾನ್ ಮಾಡ್ತೀರಾ ಎಂದು ಪ್ರಶ್ನೆಯನ್ನು ಕೂಡ ಕೇಳಿದ್ದಾರೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ(Bangalore) ನಾಳೆ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಸಂಬಂಧ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ಬುದ್ಧ ಪೂರ್ಣಿಮೆ ಪ್ರಯುಕ್ತ ನಾಳೆ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು(Selling meat) ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಬಿಬಿಎಂಪಿ(BBMP) ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಬಿಬಿಎಂಪಿ ಪಶುಪಾಲನೆ ವಿಭಾಗದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಚಿತ್ತಾಪುರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ (Priyank K harge) ಅವರಿಗೆ ಚುನಾವಣಾ ಆಯೋಗ (Election Commission) ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪಿಯೂಷ್ ಗೋಯಲ್ (Piyush Goyal) ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ನೋಟಿಸ್ ಜಾರಿಯಾಗಿದೆ. ಕಾಂಗ್ರೆಸ್ ನಾಯಕರು ದೂರು ನೀಡಿದ ಹಿನ್ನೆಲೆಯಲ್ಲಿ ಕೊಪ್ಪಳ (Koppala) ಜಿಲ್ಲೆಯ ಯಲಬುರ್ಗ ದಲ್ಲಿ ಮಾಡಿದ ಭಾಷಣದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೂ ನೋಟಿಸ್ ಜಾರಿ ಮಾಡಲಾಗಿದೆ. ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಗಳು ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ಮೇ 4 ರೊಳಗೆ ಸ್ಪಷ್ಟನೆ ನೀಡಲು ಸೂಚನೆ ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ಮೋದಿ ಅವರನ್ನು ‘ನಾಲಾಯಕ್’ ಎಂದು ಕರೆದಿದ್ದರು. ಯತ್ನಾಳ್ ಅವರು ಮೋದಿ ವಿಶ್ವ ನಾಯಕ. ಅಂಥ ನಾಯಕನನ್ನು…
ದೊಡ್ಡಬಳ್ಳಾಪುರ: ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದ ಅಲ್ಪಸಂಖ್ಯಾತರ ಘಟಕದ 25ಕ್ಕೂ ಹೆಚ್ಚು ಜೆಡಿಎಸ್ ಮುಖಂಡರು ಬುಧವಾರ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡರ ನೇತೃತ್ವದಲ್ಲಿ ಮತ್ತೆ ಮಾತೃ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂಧರ್ಭದಲ್ಲಿ ಹರೀಶ್ ಗೌಡ ಮಾತನಾಡಿ 25 ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು ಮತ್ತೆ ಮಾತೃ ಪಕ್ಷಕ್ಕೆ ಮರಳಿದ್ದಾರೆ.. ಕಾಂಗ್ರೆಸ್ ನ ದುಷ್ಟ ಶಕ್ತಿಗಳಿಂದ ಕೆಲ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡಯಾಗಿದ್ದರು.ಕಳೆದ 20 ವರ್ಷಗಳಿಂದ ನಮ್ಮ ಜೆಡಿಎಸ್ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದರು.ಆದರೆ ಕಾಣದ ಕೈಗಳು ಇವರಿಗೆ ಇಲ್ಲ ಸಲ್ಲದ ಕಾರಣಗಳನ್ನು ನೀಡಿ ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಸಿದ್ದರು..ಕುಮಾರಸ್ವಾಮಿ ನೇತೃತ್ವದಲ್ಲಿ ಸಂದಾನ ನಡೆದಿದ್ದು ಇವರಿಗೆ ಪಕ್ಷದಲ್ಲಿ ಸೂಕ್ತವಾದ ಅವಕಾಶ ನೀಡುತ್ತೇವೆ ಎಂದು ಹೇಳಿದರು. Video Player 00:00 01:18 ತಾಲೂಕಿನಲ್ಲಿ ಜೆಡಿಎಸ್ ಪರವಾದ ಅಲೆಯಿದೆ ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚುಜನ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ, ಕಳೆದ ಮೂರು ಚುನಾವಣೆಗಳಿಗಿಂತ ಹೆಚ್ಚಿನ ಪ್ರಭಾವ ಹೊಂದಿದೆ. ಅಭ್ಯರ್ಥಿಗೆ ನೀಡುವಷ್ಟೆ ಗೌರವವನ್ನು ಕಾರ್ಯಕರ್ತರಿಗೂ ನೀಡುತ್ತಿದ್ದೂ…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ (College Student Bus Pass) ಅವಧಿಯನ್ನು KSRTC ವಿಸ್ತರಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2022-23ನೇ ಸಾಲಿನ ಮಾರ್ಚ್ 2023ರವರೆಗೆ ಬಸ್ ಪಾಸ್ ಪಡೆದಿರುವ ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಬಿ.ಫಾರ್ಮ್ ಹಾಗೂ ಮುಂತಾದ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಜುಲೈ 2023ರ ಅಂತ್ಯದವರೆಗೂ ಪರೀಕ್ಷೆ ಇದೆ. ಈ ಕಾರಣದಿಂದ ಒಂದು ಅಥವಾ ಎರಡು ತಿಂಗಳ ಅವಧಿಗೆ ತರಗತಿಗಳು ನಡೆಯುತ್ತಿರುವ ಬಗ್ಗೆ ಖಚಿತಪಡಿಸಿಕೊಂಡು, ನಿಯಮಾನುಸಾರ ಹಣ ಪಾವತಿಸಿಕೊಂಡು ರಶೀದಿ ಪಡೆದು, DK Sivakumar: ನಾವೂ ಆಂಜನೇಯನ ಭಕ್ತರೇ, ಹನುಮನಿಗೂ, ಬಜರಂಗದಳಕ್ಕೂ ಏನು ಸಂಬಂಧ?: ಡಿಕೆ ಶಿವಕುಮಾರ್ ಪ್ರಶ್ನೆ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ, ಪ್ರಯಾಣಿಸಲು ಅವಕಾಶ (Opportunity to travel)ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದೆ.ಇನ್ನೂ ಕೆಲವು ಕೋರ್ಸ್ ಗಳ ವಿದ್ಯಾರ್ಥಿಗಳ ಪಾಸುಗಳು ಏಪ್ರಿಲ್ 2023ರವರೆಗೆ ಇರುತ್ತದೆ. ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಬೇಡಿಕೆ ಸಲ್ಲಿಸುತ್ತಿರುವುದರಿಂದ, ಪರೀಕ್ಷಾ…