ಮೈಸೂರು:- ಮೂಡಾ ಹಗರಣದ ಮೊದಲ ವಿಕೆಟ್ ಪತನವಾಗಿದ್ದು, ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್ ಮಾಡಲಾಗಿದೆ.ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿ ಸರ್ಕಾರ ಆದೇಶಿಸಿದೆ. KUDA ಕಾಯ್ದೆ ಕಲಂ 13 (1) ರಲ್ಲಿ ಪ್ರಾಧಿಕಾರದ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾ ಮತ್ತು ಆಡಳಿತಾಧಿಕಾರಿಯಾಗಿದ್ದು ಸಭೆಗೆ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಟಿಪ್ಪಣಿಯಲ್ಲಿ ದಾಖಲಿಸಿ ಮಂಡಿಸದೇ ಇರುವುದು ಮತ್ತು ಸರ್ಕಾರದಿಂದ ನೀಡಲಾದ ನಿರ್ದೇಶನಗಳ ಪಾಲನೆಯಾಗುತ್ತಿಲ್ಲದಿರುವುದನ್ನು ಗಮನಿಸಲಾಗಿದೆ ಸರ್ಕಾರವು ನೀಡುವ ಯಾವುದೇ ನಿರ್ದೇಶನಗಳನ್ನು ಪಾಲಿಸುವುದು KUDA ಕಾಯ್ದೆ ಕಲಂ 65ರನ್ವಯ ಪ್ರಾಧಿಕಾರದ ಜವಾಬ್ದಾರಿ. ಆದ್ರೆ ನಿಯಮಗಳಿಗೆ ಮತ್ತು ಸರ್ಕಾರದ ನಿರ್ದೇಶನಗಳಿಗೆ ವ್ಯತಿರಿಕ್ತವಾಗಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸುತ್ತಿರುವುದು ಮತ್ತು ಅದರಂತೆ ಕ್ರಮವಹಿಸುತ್ತಿರುವುದು ಕಂಡುಬಂದಿದೆ. ಅಲ್ಲದೇ ದಿನೇಶ್ ಕುಮಾರ್ ಅವರ ವಿರುದ್ಧ ಇನ್ನೂ ಅನೇಕ ಆರೋಪಗಳಿಂದ ಕರ್ತವ್ಯ ಲೋಪ ಎಸಗಿರುವುದು ಸಕ್ಷಮ ಪ್ರಾಧಿಕಾರಕ್ಕೆ ಮನವರಿಕೆಯಾಗಿದೆ. ಸದರಿ ಅವರು ಅಧಿಕಾರದಲ್ಲಿ ಮುಂದುವರಿದಲ್ಲಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರ…
Author: Prajatv Kannada
ದಾವಣಗೆರೆ:- ಸಿರಿಗೆರೆ ಶ್ರೀ ವಿರುದ್ಧ ಆಸ್ತಿ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಭಕ್ತರ ಕರಪತ್ರಕ್ಕೆ ಶಿವಮೂರ್ತಿ ಶಿವಾಚಾರ್ಯಶ್ರೀ ಪ್ರತಿಕ್ರಿಯೆ ನೀಡಿದ್ದಾರೆ.ನಾವು ಕೆಲ ಆಸ್ತಿಗಳನ್ನು ಖರೀದಿಸಿದ್ದೇವೆ. ನಮ್ಮ ಹೆಸರಿಗೆ, ಮಠದ ಹೆಸರಿಗೆ, ಶಿಷ್ಯರ ಹೆಸರಿಗೆ ಮಾಡಿಸಿದ್ದೇವೆ. ಮಠಕ್ಕೆ ಸಂಬಂಧಿಸಿದ ಎಲ್ಲಾ ಆಸ್ತಿ ಮಠಕ್ಕೆ ಸೇರಿದ್ದು. ಮಠದ ಕಾರ್ಯದರ್ಶಿ ಆಗಿದ್ದ ಸಿದ್ದಯ್ಯ ಹೆಸರಿಗೂ ಆಸ್ತಿ ಮಾಡಿಸಿದ್ದೆವು. ಆಸ್ತಿ ತನಗೆ ಸೇರಿದ್ದು ಎಂದು ಮಾಜಿ ಕಾರ್ಯದರ್ಶಿ ಸಿದ್ದಯ್ಯ ಕೊರ್ಟ್ಗೆ ಹೋಗಿದ್ದರು. ಕೋರ್ಟ್ನಲ್ಲಿ ಸಿದ್ದಯ್ಯನ ಅರ್ಜಿ ವಜಾ ಆಯಿತು. ಮಠದ ಆಸ್ತಿ ಕಬಳಿಸಲು ಯತ್ನಿಸಿದ್ದ ಸಿದ್ದಯ್ಯ ವಿರುದ್ಧ ಹೋರಾಡಿ, ನಮ್ಮ ವಿರುದ್ಧ ಅಲ್ಲ ಎಂದಿದ್ದಾರೆ. ದಾವಣಗೆರೆ ರೆಸಾರ್ಟ್ನಲ್ಲಿ ಸಭೆ ಮಾಡಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಬಾಯಿ ಮುಚ್ಚಿಕೊಂಡು ತೆಪ್ಪಗಿದ್ದಾಗಲೇ ಈ ವಿಚಾರಕ್ಕೆ ಕೊನೆ. ಸಭೆ ಮಾಡಿದವರು ಗ್ರಾಮಗಳಿಗೆ ಹೋಗುತ್ತೇವೆಂದು ಹೇಳಿದ್ದರು. ಗ್ರಾಮಗಳಿಗೆ ಹೋದರೆ ಚಕ್ರವ್ಯೂಹದಲ್ಲಿ ಸಿಲುಕುತ್ತಾರೆ. ವಿವಿಧ ಗ್ರಾಮಗಳ ಜನರು ಇಂದು ನಮ್ಮನ್ನು ಬೆಂಬಲಿಸಿ ಪತ್ರ ನೀಡಿದ್ದೀರಿ. ಎಲ್ಲಾ ಪತ್ರಗಳು ಬಹುತೇಕ ಒಂದೇ ಮಾದರಿಯಲ್ಲಿವೆ. ನಾವೇ ಡ್ರಾಫ್ಟ್ ಮಾಡಿಸಿ…
ಶಿವಮೊಗ್ಗ:- ಜೈಲಿನಲ್ಲಿ ಬೀಡಿ, ಸಿಗರೇಟಿಗಾಗಿ ಕೈದಿಗಳು ಪ್ರತಿಭಟನೆ ಮಾಡಿದ ಘಟನೆ ಜರುಗಿದೆ. ನಿಷೇಧಿತ ವಸ್ತುಗಳು ಎಂಬ ಕಾರಣಕ್ಕೆ ಬೀಡಿ, ಸಿಗರೇಟು ಕೊಂಡೊಯ್ಯಲು ಕೈಗಾರಿಕ ಭದ್ರತಾ ಪಡೆ ಮತ್ತು ಜೈಲು ಸಿಬ್ಬಂದಿ ನಿರ್ಬಂಧ ವಿಧಿಸಿದ್ದಾರೆ. ಹಾಗಾಗಿ ಕೈದಿಗಳಿಗೆ ಬೀಡಿ, ಸಿಗರೇಟ್ ದೊರೆಯುತ್ತಿಲ್ಲ. ಬೀಡಿ, ಸಿಗರೇಟು ಕೊಡಬೇಕು ಎಂದು ಆಗ್ರಹಿಸಿ ಕೈದಿಗಳು ಸೋಮವಾರ ಬೆಳಗ್ಗೆ ಉಪಹಾರ ತ್ಯಜಿಸಿ ಪ್ರತಿಭಟಿಸಿದ್ದಾರೆ. ಬಳಿಕ ಜೈಲು ಅಧಿಕಾರಿಗಳು ತಿಳಿ ಹೇಳಿದ್ದರಿಂದ ಕೈದಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ ಎನ್ನಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಸಿಗರೇಟು ಸೇದುತ್ತಿರುವ ಫೋಟೊ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶಿವಮೊಗ್ಗ ಜೈಲಿನ ಮೇಲೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ಬೀಡಿ, ಸಿಗರೇಟು, ಬೆಂಕಿ ಪೊಟ್ಟಣಗಳು ಸಿಕ್ಕಿದ್ದವು. ಸದ್ಯ ಜೈಲು ಭದ್ರತೆ ನೋಡಿಕೊಳ್ಳುತ್ತಿರುವ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.
ಮೈಸೂರು:- ಮುಡಾ ಕೇಸ್ ಗೆ ಸಂಬಧಪಟ್ಟಂತೆ ದೂರು ನೀಡಿ 6 ದಿನ ಕಳೆದರೂ ಕ್ರಮ ಕೈಗೊಳ್ಳದ ಹಿನ್ನೆಲೆ, ಪೊಲೀಸ್ ಆಯುಕ್ತರಿಗೆ ಸ್ನೇಹಮಯಿ ಕೃಷ್ಣ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಂಡತಿ ಶ್ರೀಮತಿ ಪಾರ್ವತಿ ಮತ್ತು ಲಕ್ಷ್ಮಣ್ರವರ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರರ್ಜಿ ನೀಡಿರುವುದು ನಿಮಗೆ ತಿಳಿದ ವಿಷಯ. ದೂರರ್ಜಿ ನೀಡಿ ಆರು ದಿನಗಳಾಗುತ್ತಾ ಬಂದಿದ್ದರೂ ಗಂಭೀರವಾಗಿ ಪರಿಗಣಿಸಿದಂತೆ ಕಂಡು ಬಂದಿರುವುದಿಲ್ಲ. ನಿನ್ನೆ ರಾತ್ರಿ ಪಾರ್ವತಿರವರು ಮೈಸೂರಿಗೆ ಬಂದಿದ್ದು, ಇಂದು ಬೆಳಗ್ಗೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಲಿದ್ದಾರೆ ಎಂಬುದು ತಿಳಿದುಬಂದಿದೆ. ಆದ್ದರಿಂದ ಆರೋಪಿತರಾದ ಪಾರ್ವತಿರವರನ್ನು ಈ ದಿನ ತಾವೇ ಖುದ್ದಾಗಿ ನನ್ನ ಆರೋಪಕ್ಕೆ ಪೂರಕವಾಗಿ ವಿಚಾರಣೆಗೆ ಒಳಪಡಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.” ಏಕೆಂದರೆ ಪಾರ್ವತಿರವರು ಮುಖ್ಯಮಂತ್ರಿಗಳ ಹೆಂಡತಿಯಾಗಿರುವುದರಿಂದ ಅವರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸ್ ನಿರೀಕ್ಷಕರು ಮತ್ತು ಸಹಾಯಕ ಪೊಲೀಸ್ ಆಯುಕ್ತರು ಹಿಂಜರಿಯುವ ಸಾಧ್ಯತೆ ಇರುವುದರಿಂದ ತಾವೇ ವಿಚಾರಣೆ ನಡೆಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ” ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು:- ಮುಡಾ,ವಾಲ್ಮೀಕಿ ಹಗರಣಗಳ ಸುಳಿಗೆ ಸಿಕ್ಕ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ KIDB ಯ CA ಸೈಟ್ ಗಳ ಅಕ್ರಮದ ತಲೆನೋವು ಶುರುವಾಗಿದೆ. ಸಚಿವರಾದ ಪ್ರಿಯಾಂಕ ಖರ್ಗೆ, MB ಪಾಟೀಲ್ ಗೆ ವಿವರಣೆ ಕೇಳಿ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಈ ಮಧ್ಯೆ ವಿಪಕ್ಷಗಳ ವಿರುದ್ಧ ತೊಡೆ ತಟ್ಟಲು ಕಾಂಗ್ರೆಸ್ ಮುಂದಾಗಿದ್ದು ಬಿಜೆಪಿ- ಜೆಡಿಎಸ್ ಅವಧಿಯಲ್ಲಾದ ಹಗರಣಗಳ ತನಿಖಾ ವರದಿಯ ಅಸ್ತ್ರ ಪ್ರಯೋಗಿಸ್ತಿದೆ ಕೈಪಡೆ…. ಕಾಂಗ್ರೆಸ್ ಸರ್ಕಾರಕ್ಕೆ ಕಳೆದ 6-7 ತಿಂಗಳಿನಿಂದ ಹಗರಣಗಳ ಕಂಟಕ ಎದುರಾಗಿದೆ ಮೂಡಾ, ವಾಲ್ಮೀಕಿ ಹಗರಣಗಳ ನಂತರ KIDBಯ CA ಸೈಟ್ ಗಳ ಅಕ್ರಮದ ಘಾಟು ಜೋರಾಗ್ತಿದೆ. ಮಲ್ಲಿಕಾರ್ಜುನ ಖರ್ಗೆ ಪುತ್ರ ರಾಹುಲ್ ಖರ್ಗೆಗೆ ಕೊಟ್ಟ 5 ಎಕರೆ ಜಾಗ ವಿವಾದದ ಕೇಂದ್ರ ಬಿಂದುವಾಗಿದೆ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು ಕೊಟ್ಟ ಹಿನ್ನೆಲೆ ಸರ್ಕಾರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ರಾಜ್ಯಪಾಲರು ವಿವರಣೆ ಕೇಳಿದ್ದಾರೆ….. ರಾಜ್ಯಪಾಲರ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಕೆರಳಿ ಕೆಂಡವಾಗಿದ್ದಾರೆ ರಾಜ್ಯಪಾಲರಿಗೆ ಎರಡು…
ಬೆಂಗಳೂರು:- ಪ್ರಾಸಿಕ್ಯೂಷನ್ ಭೀತಿ ವಿಚಾರವಾಗಿ ತಮ್ಮ ವಿರುದ್ಧದ ಆರೋಪಕ್ಕೆ ಸಚಿವ ಎಂಬಿ ಪಾಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ. ನಾನಾಗಲಿ, ನಮ್ಮ ಕುಟುಂಬದವರಾಗಲಿ ಸರ್ಕಾರದಿಂದ ಒಂದೇ ಒಂದು ಸೈಟ್ ಪಡೆದುಕೊಂಡಿಲ್ಲ ಎಂದರು. ಜಿ-ಕೆಟಗರಿ, ಕೆಹೆಚ್ಬಿ, ಕೆಐಎಡಿಬಿಯ ಸೈಟ್ ಪಡೆದಿಲ್ಲ. ನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ ಸುಮಾರು 25-30 ವರ್ಷಗಳಿಂದ ಪರಸ್ಪರ ಒಡನಾಟವಿದೆ ಎಂದು ಹೇಳಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ಪ್ರೆಸ್ಟೀಜ್, ಬ್ರಿಗೇಡ್, ಎಂಬೆಸಿ ಮಂತ್ರಿ, ಬಾಗ್ಮನೆ ಸಮೂಹಗಳು ಅಪಾರ ಕೊಡುಗೆ ನೀಡಿವೆ. ಎಲ್ಲ ಸರ್ಕಾರಗಳ ಆಡಳಿತಾವಧಿಯಲ್ಲೂ ಸೈಟ್ ಪಡೆದಿವೆ. ಈ ಸಂಸ್ಥೆಗಳು ಅಭಿವೃದ್ಧಿಗೆ ಕೊಡುಗೆ ನೀಡಿರುವುದನ್ನು ವಿಧಾನಪರಿಷತ್ತ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ. ಬಾಗ್ಮನೆ ವ್ಯವಹಾರಕ್ಕೂ ನಮ್ಮ ಕುಟುಂಬಕ್ಕೂ ಸಂಬಂಧವಿಲ್ಲ. ಸರ್ಕಾರದ ಮಟ್ಟದಲ್ಲಿ ಆಗುವ ನಿರ್ಧಾರಗಳಿಗೂ ಸಂಬಂಧವಿಲ್ಲ. ಬಾಗ್ಮನೆ ಸಂಸ್ಥೆಯವರು ಬೆಂಗಳೂರಿನ ಏರೋಸ್ಪೇಸ್ ಪಾರ್ಕಿನಲ್ಲಿ ಕೈಗಾರಿಕಾ ನಿವೇಶನ ಕೋರಿ ಸರ್ಕಾರಕ್ಕೆ ಅರ್ಜಿ ಹಾಕಿದ್ದರು. ನಾವು ಸಂಸ್ಥೆಯ ಅರ್ಹತೆ, ಸಾಧನೆ ಪರಿಗಣಿಸುತ್ತೇವೆ ಅಷ್ಟೇ. ಇಂತಹ ಸರಳ ಸತ್ಯ ಗೊತ್ತಾಗದೆ ಇರುವುದು ಆಶ್ಚರ್ಯಕರ ಎಂದು…
ಬೆಂಗಳೂರು:- ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ ಉತ್ಪಾದಿಸುವ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದೆ. ಹೌದು.. ನಂದಿನಿ ಹಾಲನ್ನು ರಾಷ್ಟ್ರ ರಾಜಧಾನಿ ದೆಹಲಿಗೂ ಕಳುಹಿಸುವಂತೆ ದೆಹಲಿ ಸರ್ಕಾರ ಮನವಿ ಮಾಡಿದೆ. ಪ್ರತಿನಿತ್ಯ ದೆಹಲಿಗೆ 1 ಲಕ್ಷ ಲೀಟರ್ ಹಾಲನ್ನು ಸರಬರಾಜು ಮಾಡುವಂತೆ ದೆಹಲಿ ಸರ್ಕಾರದಿಂದ ಮನವಿ ಮಾಡಲಾಗಿದೆ. ದೇಶದ ಮೆಟ್ರೋ ಪಾಲಿಟಿನ್ ಸಿಟಿಯಾಗಿರುವ ದೆಹಲಿ ಕೇಂದ್ರಾಡಳಿತ ಪ್ರದೇಶ ಆಗಿದ್ದರೂ ಪ್ರತ್ಯೇಕ ಸರ್ಕಾರದ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಇನ್ನು ದೆಹಲಿಗೆ ಹತ್ತಿರದಲ್ಲಿರುವ ಗುಜರಾತ್ ರಾಜ್ಯದ ಅಮುಲ್ ಹಾಲು, ಮದರ್ ಡೈರಿಯ ಹಾಲನ್ನು ದೆಹಲಿಗೆ ಸರಬರಾಜು ಮಾಡಲಾಗುತ್ತಿದೆ. ಈಗ ದೆಹಲಿ ಸರ್ಕಾರದಿಂದಲೂ ಕೆಎಂಎಪ್‌ನ ನಂದಿನಿ ಹಾಲಿಗೆ ಡಿಮ್ಯಾಂಡ್ ಬಂದಿದೆ. ರಾಜಧಾನಿ ದೆಹಲಿಯಲ್ಲಿ ಅಮುಲ್ ಹಾಗೂ ಮದರ್ ಡೈರಿ ಹಾಲನ್ನು ಹಿಂದಿಕ್ಕಿ ತನ್ನದೇ ದಾಖಲೆ ಬರೆಯಲು ಕರ್ನಾಟಕದ ನಂದಿನಿ ಹಾಲು ಸಿದ್ಧಗೊಂಡಿದೆ. ಮುಂದಿನ ತಿಂಗಳು ಅಕ್ಟೋಬರ್‌ನಿಂದ ದೆಹಲಿಯಲ್ಲಿ ಹಾಲು ಹಾಗೂ ಮೊಸರು ಮಾರಾಟಕ್ಕೆ ಸಜ್ಜಾಗಿರುವ…
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗಲಿದ್ದು, ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ, ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕಲಬುರಗಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉತ್ತರ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು,…
ಬೆಂಗಳೂರು:- ನಗರದ ಯಶವಂತಪುರ ಸರ್ಕಲ್ ಬಳಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಮುಂಜಾನೆ 3.45ರಲ್ಲಿ ಬೈಕ್ಗೆ ಗುದ್ದಿದ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು, ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಪೊಲೀಸರು, ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದು ಫ್ಲೈಓವರ್ ಮೇಲೆ ಡಿವೈಡರ್ನಿಂದ ಹಾರಿ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದ್ದು ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು:- ಆನ್ಲೈನ್ ಟ್ರೇಡಿಂಗ್ ನೆಪದಲ್ಲಿ ಜನರಿಗೆ ಕೋಟ್ಯಂತರ ರೂ. ವಂಚನೆ ಮಾಡಿದ ಆರೋಪದಡಿ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಶಶಿಕುಮಾರ್, ಸಚಿನ್, ಕಿರಣ್, ಚರಣ್ ರಾಜ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಸದ್ಯ ಬಂಧಿತ ಆರೋಪಿಗಳನ್ನು ಬೆಂಗಳೂರು ಇಡಿ ಕೋರ್ಟ್ಗೆ ಹಾಜರು ಪಡಿಸಿದ್ದು ಆರೋಪಿಗಳನ್ನು 7 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳು ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ ಜನರಿಂದ ಕೋಟ್ಯಂತರ ಹಣ ಪಡೆದು ವಂಚನೆ ಮಾಡುತ್ತಿದ್ದರು. ನಕಲಿ ಕಂಪನಿಗಳ ಹೆಸರಲ್ಲಿ ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ನಕಲಿ ದಾಖಲೆ ನೀಡಿ ಹತ್ತಾರು ಬ್ಯಾಂಕ್ಗಳಲ್ಲಿ ಅಕೌಂಟ್ ತೆರೆದಿದ್ದರು. ಜನರಿಂದ ಹಣ ಪಡೆದ ಕೂಡಲೇ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ನಂತರ ಹಣ ಜಮಾ ಮಾಡಿದವರ ನಂಬರ್ ಬ್ಲಾಕ್ ಮಾಡ್ತಿದ್ರು. ಈ ಬಗ್ಗೆ ಬೆಂಗಳೂರು ಸೈಬರ್ ಠಾಣೆಗಳಲ್ಲಿ ಹಲವು ದೂರು ದಾಖಲಾಗಿದ್ದವು. ವಿವಿಧ ಬ್ಯಾಂಕ್ ಖಾತೆಗಳಿಂದ ಕೋಟ್ಯಂತರ ಹಣ ವರ್ಗಾವಣೆ ಹಿನ್ನೆಲೆ ಸೈಬರ್ ಕ್ರೈಂ ಪೊಲೀಸರು ಬೇನಾಮಿ ಹಣದ ಬಗ್ಗೆ ಇಡಿಗೆ…