Author: Prajatv Kannada

ಬೆಂಗಳೂರು: ಆರ್‌ಸಿಬಿ (RCB) ಅಭಿಮಾನಿಗಳೇ ಎಚ್ಚರವಾಗಿರಿ. ಬೆಂಗಳೂರಿನಲ್ಲಿ (Bengaluru) ಕ್ರಿಕೆಟ್ (Cricket) ಪಂದ್ಯಗಳ ನಕಲಿ ಟಿಕೆಟ್‌ಗಳು (Fake Tickets) ದುಬಾರಿ ಬೆಲೆಗೆ ಮಾರಾಟವಾಗುತ್ತಿರುವುದು ಬೆಳಕಿಗೆ ಬಂದಿದೆ. ಹೌದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ನಡೆದಿದ್ದ ಮುಂಬೈ ಹಾಗೂ ಆರ್‌ಸಿಬಿ ತಂಡಗಳ ನಡುವಿನ ಪಂದ್ಯದ ವೇಳೆ ಭಾರೀ ಸಂಖ್ಯೆಯಲ್ಲಿ ನಕಲಿ ಟಿಕೆಟ್ ಮಾರಾಟವಾಗಿದೆ. ಏ.2 ರಂದು ಆರ್‌ಸಿಬಿ ಮತ್ತು ಮುಂಬೈ ತಂಡದ ಪಂದ್ಯದ ವೇಳೆ ಹಲವು ಟಿಕೆಟ್‌ಗಳು ಸ್ಕ್ಯಾನ್ ಆಗುತ್ತಿರಲಿಲ್ಲ. ಟಿಕೆಟ್ ಸ್ಕ್ಯಾನ್ ಆಗದೇ ಇದ್ದರೂ ಸ್ಕ್ಯಾನರ್‌ನಲ್ಲಿ ತಾಂತ್ರಿಕ ದೋಷ ಇದ್ದಿರಬಹುದು ಎಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಅಭಿಮಾನಿಗಳನ್ನು ಒಳಗಡೆ ಬಿಟ್ಟಿದ್ದರು. ಆದರೆ ಈಗ ಟಿಕೆಟ್ ಯಾಕೆ ಸ್ಕ್ಯಾನ್ ಆಗಿಲ್ಲ ಎನ್ನುವುದ್ದಕ್ಕೆ ಕಾರಣ ಪತ್ತೆಯಾಗಿದೆ. ಆರ್‌ಸಿಬಿಯ ಮೊದಲ ಪಂದ್ಯಕ್ಕೆ ಬರೋಬ್ಬರಿ 7 ಸಾವಿರಕ್ಕೂ ಅಧಿಕ ನಕಲಿ ಟಿಕೆಟ್‌ಗಳು ಮಾರಾಟವಾಗಿದೆ. ಈ ನಕಲಿ ಟಿಕೆಟ್‌ಗಳ ಕ್ಯೂಆರ್ ಕೋಡ್ ಸ್ಕ್ಯಾನ್ ಆಗದೇ ಇದ್ದರೂ ತಾಂತ್ರಿಕ ಸಮಸ್ಯೆಯೆಂದು ಭಾವಿಸಿದ್ದ ಸಿಬ್ಬಂದಿ ಎಲ್ಲರನ್ನೂ ಸ್ಟೇಡಿಯಂನ ಒಳಗಡೆ ಪ್ರವೇಶಿಸಲು ಅನುಮತಿ ನೀಡಿದ್ದರು.…

Read More

ಬೆಂಗಳೂರು: ಬಹುನಿರೀಕ್ಷಿತ 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿ ನಡೆಯುತ್ತಿದೆ. ಇಲ್ಲಿವರೆಗೂ 10 ಪಂದ್ಯಗಳು ಮುಗಿದಿದ್ದು, ವಿಶ್ವದಾದ್ಯಂತ ಸಾಕಷ್ಟು ಅಭಿಮಾನಿಗಳು ಐಪಿಎಲ್ ಟೂರ್ನಿಯನ್ನು ಕಣ್ತುಂಬಿಸಿಕೊಳ್ಳುವ ಮೂಲಕ ಆನಂದಿಸುತ್ತಿದ್ದಾರೆ. ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಾಕಷ್ಟು ಟ್ರೆಂಡ್‌ ಇದೆ. ಇಲ್ಲಿಯವರೆಗೂ ಒಂದೇ ಒಂದು ಬಾರಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೆ ಇದ್ದರೂ ಆರ್‌ಸಿಬಿ, ಇತರೆ ಎಲ್ಲಾ ತಂಡಗಳಿಗಿಂತಲೂ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನು ಹೊಂದಿದೆ. ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌, ಟ್ವಿಟರ್ ಸೇರಿದಂತೆ ಸೋಶಿಯಲ್‌ ಮೀಡಿಯಾದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಕೋಟ್ಯಂತರ ಫಾಲೋವರ್ಸ್ ಇದ್ದಾರೆ. ಪಂದ್ಯ ಗೆದ್ದರೂ ಅಥವಾ ಸೋತರೂ ಆರ್‌ಸಿಬಿ ತಂಡವನ್ನು ಬೆಂಬಲಿಸುವ ಪ್ರಾಮಾಣಿಕ ಅಭಿಮಾನಿಗಳು ಇವರಾಗಿದ್ದಾರೆ. ಏಕೆಂದರೆ ಕಳೆದ 15 ಆವೃತ್ತಿಗಳಲ್ಲಿ ಒಮ್ಮೆಯೂ ಆರ್‌ಸಿಬಿ ಪ್ರಶಸ್ತಿ ಗೆದ್ದಿಲ್ಲವಾದರೂ ಅಭಿಮಾನಿಗಳ ಪ್ರೀತಿ, ಬೆಂಬಲ, ನಂಬಿಕೆ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಒಂದಲ್ಲ ಒಂದು ದಿನ ಆರ್‌ಸಿಬಿ ಕಪ್‌ ಗೆದ್ದೇ ಗೆಲ್ಲುತ್ತೆ ಎಂಬ ವಿಶ್ವಾಸದೊಂದಿಗೆ ಅಭಿಮಾನಿಗಳು ಮೈದಾನಕ್ಕೆ ಬಂದು ತಮ್ಮ…

Read More

ಅರೆ ಬರೆ ಬಟ್ಟೆ ಧರಿಸಿದ ನಟಿ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ್ ಸದ್ದು ಮಾಡುತ್ತಿರುತ್ತಾರೆ. ‘ಬಿಗ್​ ಬಾಸ್​ ಹಿಂದಿ ಒಟಿಟಿ’ ಶೋನಲ್ಲಿ ಸ್ಪರ್ಧಿಸಿದ ಬಳಿಕ ಉರ್ಫಿ ಜನಪ್ರಿಯತೆ ಹೆಚ್ಚಿದ್ದು ಆ ಬಳಿಕ ಉರ್ಫಿ ನಿತ್ಯ ತಮ್ಮ ಬಟ್ಟೆಯ ಕಾರಣದಿಂದಲೇ ಹೆಚ್ಚು ಸದ್ದು ಮಾಡುತ್ತಿರುತ್ತಾರೆ. ಯಾರೇ ಏನೇ ಅಂದರು ಕ್ಯಾರೆ ಎನ್ನದ ಉರ್ಫಿ ಮಾತ್ರ ತಮ್ಮ ಪಾಡಿಗೆ ತಾವು ಚಿತ್ರ ವಿಚಿತ್ರ ಬಟ್ಟೆ ಧರಿಸುತ್ತಿರುತ್ತಾರೆ. ಉರ್ಫಯನ್ನು ಅನೇಕರು ವಿರೋಧಿಸುತ್ತಾರೆ ಎಂಬುದು ನಿಜ. ಆದರೆ ಉರ್ಫಿ ಜಾವೇದ್​ ಬದುಕಿನಲ್ಲಿ ಅನೇಕ ಕಹಿ ಘಟನೆಗಳು ನಡೆದಿದ್ದು, ಆ ಬಗ್ಗೆ ‘ಹೂಮನ್ಸ್​ ಆಫ್​ ಬಾಂಬೆ’ಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. 15 ವರ್ಷದ ಬಾಲಕಿ ಆಗಿದ್ದಾಗಲೇ ಉರ್ಫಿ ಫೋಟೋವನ್ನು ಯಾರೋ ಕಿಡಿಗೇಡಿಗಳು ಅಶ್ಲೀಲ ವೆಬ್​ಸೈಟ್​ನಲ್ಲಿ ಅಪ್​ಲೋಡ್​ ಮಾಡಿದ್ದರು. ಇದರಿಂದ ಉರ್ಫಿ ಜಾವೇದ್​ ಅನೇಕ ತೊಂದರೆ ಅನುಭವಿಸಬೇಕಾಯಿತು ಎಂದು ನಟಿ ಹೇಳಿಕೊಂಡಿದ್ದಾರೆ. ‘ನನಗೆ 15 ವರ್ಷ ಆಗಿದ್ದಾಗ ಯಾರೋ ನನ್ನ ಫೋಟೋವನ್ನು ಅಶ್ಲೀಲ ಜಾಲತಾಣದಲ್ಲಿ…

Read More

ನಟಿ ಪವಿತ್ರಾ ಲೋಕೇಶ್ ಹಾಗೂ ನಟ ನರೇಶ್ ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ನರೇಶ್ ಹಾಗೂ ಪವಿತ್ರ ಲೋಕೇಶ್ ಸಿನಿಮಾ ಮಾಡುತ್ತಿದ್ದಾರೋ, ನಿಜವಾಗಿಯೂ ಮದುವೆ ಆಗಿದ್ದಾರೋ ಎನ್ನುವುದಕ್ಕೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಆದರೂ, ಈ ಜೋಡಿ ನಟನೆಯ ‘ಮತ್ತೆ ಮದುವೆ’ ಸಿನಿಮಾ ಟೀಸರ್ ಹಂತಕ್ಕೆ ಬಂದು ತಲುಪಿದ್ದು, ಇದೇ ಏಪ್ರಿಲ್ 13ರಂದು ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಇತ್ತೀಚೆಗಷ್ಟೇ ‘ಮತ್ತೆ ಮದುವೆ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. ನರೇಶ್ ಜೊತೆ ಪವಿತ್ರಾ ಲೋಕೇಶ್ ಜೋಡಿಯಾಗಿ ನಟಿಸಿರುವ ‘ಮತ್ತೆ ಮದುವೆ’ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಕ್ಯೂರಿಯಾಸಿಟಿಯನ್ನು ಹುಟ್ಟು ಹಾಕಿತ್ತು. ಏಕಕಾಲದಲ್ಲಿ ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಏಪ್ರಿಲ್ ಕೊನೆಯಲ್ಲಿ ಅಥವಾ ಮೇ…

Read More

ಕಾಲಿವುಡ್ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಇದೇ ಮೊದಲ ಬಾರಿಗೆ ಅಭಿಮಾನಿಯ ವಿರುದ್ಧ ಬಹಿರಂಗವಾಗಿ ಗರಂ ಆಗಿದ್ದಾರೆ. ಇದೇ ರೀತಿ ಮಾಡ್ತಾ ಇದ್ದರೆ ನಿಮ್ಮ ಮೊಬೈಲ್ ಒಡೆದು ಹಾಕ್ತೀನಿ ಎಂದು ಎಚ್ಚರಕೆ ನೀಡಿದ್ದಾರೆ. ಸದ್ಯ ನಯನತಾರಾ ಕೋಪ ಮಾಡಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇತ್ತೀಚೆಗಷ್ಟೇ ನಟಿ ನಯನತಾರಾ ಪತಿ ವಿಘ್ನೇಶ್ ಶಿವನ್ ಜೊತೆ ಕುಂಭಕೋಣಂ ಬಳಿಯ ಕಾಮಾಕ್ಷಿ ಅಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನೆಚ್ಚಿನ ನಟಿ ಬಂದಿರುವ ವಿಚಾರ ಸ್ಥಳೀಯರಿಗೆ ತಿಳಿಯುತ್ತಿದ್ದಂತೆಯೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದಾರೆ. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಶಾಂತವಾಗಿ ಇರುವಂತೆ ಎಷ್ಟೇ ಮನವಿ ಮಾಡಿದರೂ ಅಭಿಮಾನಿಗಳು ಕೇಳದಿದ್ದಾಗ ಅನಿವಾರ್ಯವಾಗಿ ಗರಂ ಆಗಿದ್ದಾರೆ. ಸೆಲ್ಪಿ ತೆಗೆದುಕೊಳ್ಳಲು ಎಲ್ಲರೂ ಸಾಲಾಗಿ ಬರುವಂತೆ ಮನವಿ ಮಾಡಿಕಪಂಡರು ಅಭಿಮಾನಿಗಳು ಕೇಳಿಲ್ಲ. ಪರಿಸ್ಥಿತಿಯನ್ನು ಅರಿತ ಅವರು ಸಮಾಧಾನ ಮಾಡಲು ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ಹಾಗಾಗಿ ತರಾತುರಿಯಲ್ಲಿ ಪೂಜೆ ಮುಗಿಸಿ ಹೊರಟಿದ್ದಾರೆ. ಈ ಸಂದರ್ಭದಲ್ಲಿ ವಿಡಿಯೋ ಮಾಡುತ್ತಾ…

Read More

ಚಂದನವನದ ಖ್ಯಾತ ಹಿರಿಯ ನಟಿ ಲೀಲಾವತಿ ಕುರಿತು ಒಂದಲ್ಲ ಒಂದು ಸುದ್ದಿಗಳು ಹರಿದಾಡುತ್ತಲೆ ಇರುತ್ತದೆ. ಸದ್ಯ ಲೀಲಾವತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು,  ಮಗ ನಟ ವಿನೋದ್ ರಾಜ್​ ಕುಮಾರ್ ತಾಯಿ ಆರೈಕೆ ಮಾಡುತ್ತಿದ್ದಾರೆ. ಲೀಲಾವತಿ ಇದುವರೆಗೆ ತಮ್ಮ ಪತಿಯ ಬಗ್ಗೆ ಎಂದು ಮಾತಾಡಿಲ್ಲ. ಲೀಲಾವತಿ ಮದುವೆ ವಿಚಾರ ಅನೇಕ ಬಾರಿ ಸುದ್ದಿಯಾಗಿದೆ. ಇದೀಗ ಸ್ಯಾಂಡಲ್​ವುಡ್ ನಿರ್ದೇಶಕರೊಬ್ಬರು ನಟಿ ಲೀಲಾವತಿ ಹಾಗೂ ವಿನೋದ್ ರಾಜ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಸ್ಯಾಂಡಲ್​ವುಡ್ ನಿರ್ದೇಶಕ ಪ್ರಕಾಶ್ ರಾಜ್ ಮೆಹೋ ಸೋಶಿಯಲ್ ಮೀಡಿಯಾದಲ್ಲಿ ಸ್ಪೋಟಕ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ ಕುಟುಂಬಕ್ಕೆ ಆಪ್ತರಾಗಿರೋ ನಿರ್ದೇಶಕ ಪ್ರಕಾಶ್ ರಾಜ್ ಮೆಹೋ ಅವರು ಲೀಲಾವತಿಗೆ ಈ ಹಿಂದೆ ಮದುವೆ ಆಗಿತ್ತು. ಅಷ್ಟೇ ಅಲ್ಲದೇ ನಟ ವಿನೋದ್​ ರಾಜ್​ ಅವರಿಗೂ ಮದುವೆ ಆಗಿದ್ದು, ಓರ್ವ ಮಗನಿದ್ದಾನೆ ಎನ್ನುವ ಸುದ್ದಿಯಲ್ಲಿ ಸಾಕ್ಷಿ ಸಮೇತ ಬಿಚ್ಚಿಟ್ಟಿದ್ದಾರೆ. ವಿನೋದ್​ ರಾಜ್ ಅವರ ಫ್ಯಾಮಿಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದುವರೆಗಿನ ವಿವಾದಕ್ಕೆ ಎಷ್ಟೇ ಸ್ಪಷ್ಟನೆ ಕೊಟ್ಟರೂ ಕೆಲವರು ಒಪ್ಪುತ್ತಿರಲಿಲ್ಲ…

Read More

ಆಸ್ಕರ್ ಪ್ರಶಸ್ತಿ ಪಡೆದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿಯ ರಿಯಲ್ ನಾಯಕ ಬೊಮ್ಮನ್ ಹಾಗೂ ನಾಯಕಿ ಬೆಳ್ಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಲಿದ್ದಾರೆ. ಬೊಮ್ಮನ್ ಹಾಗೂ ಬೆಳ್ಳಿ ಇರುವ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಅಲ್ಲಿಯೇ ಅವರಿಗೆ ಸನ್ಮಾನ ಮಾಡಲಿದ್ದಾರೆ. ಈ ಹಿಂದೆ ಸೋಷಿಯಲ್ ಮೀಡಿಯಾ ಮೂಲಕ ಈ ದಂಪತಿಗೆ ಮೋದಿ ಶುಭಾಶಯ ಕೋರಿದ್ದು ಇದೀಗ ಖುದ್ದು ಭೇಟಿಯಾಗಿ ಗೌರವ ಸಲ್ಲಿಸುತ್ತಿದ್ದಾರೆ. ಈ ಬಾರಿ ಆರ್ ಆರ್ ಆರ್ ಹಾಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿಗೆ ಆಸ್ಕರ್ ಪ್ರಶಸ್ತಿಗಳು ಬಂದ ಬೆನ್ನಲ್ಲೇ ಅಭಿಮಾನದ ಮಹಾಪೂರವೇ ಹರಿದು ಬಂದಿತ್ತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಬಹುತೇಕ ಗಣ್ಯರು ಎರಡೂ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಆಸ್ಕರ್ ಪ್ರಶಸ್ತಿ ವಿಜೇತ ಡಾಕ್ಯುಮೆಂಟರಿಯ ಕಥಾ ನಾಯಕ ಮತ್ತು ನಾಯಕಿಗೆ ಭರ್ಜರಿ ಬಹುಮಾನ ಘೋಷಿಸಿದ್ದರು. ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯ ನಿಜವಾದ ಹೀರೋ ಬೊಮ್ಮನ್ ಮತ್ತು ಹೀರೋಯಿನ್ ಬೆಳ್ಳಿ ಎಂಬ ಮಾವುತ ದಂಪತಿಗಳು.…

Read More

ಸ್ಯಾಂಡಲ್ ವುಡ್ ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಕನ್ನಡದ ಚಿತ್ರಗಳನ್ನು ಕಡೆಗಣಿಸಿ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕನ್ನಡದ ಯಾವುದೇ ನಟರ ಹುಟ್ಟುಹಬ್ಬವಿದ್ದರು ರಶ್ಮಿಕಾ ವಿಶ್ ಮಾಡುವುದಿಲ್ಲ. ಆದರೆ ನಿನ್ನೆ ತಾನೆ ಹುಟ್ಟುಹಬ್ಬ ಆಚರಿಸಿಕೊಂಡಿರುವ ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಗೆ ರೊಮ್ಯಾಂಟಿಕ್ ಆಗಿ ಶುಭ ಹಾರೈಸಿದ್ದಾರೆ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಪುಷ್ಪ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದರು. ಈ ಸಿನಿಮಾ ರಶ್ಮಿಕಾಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಹಾಗಾಗಿ ರಶ್ಮಿಕಾ ಅಲ್ಲು ಅರ್ಜುನ್ ಬರ್ತಡೆಗೆ ರಶ್ಮಿಕಾ ವಿಶ್ ಮಾಡ್ತಾರೆ? ಮಾಡಿದರೆ ಯಾವ ರೀತಿ ವಿಶ್ ಮಾಡ್ತಾರೆ ಎಂಬ ಕುತೂಹಲವಿತ್ತು. ಅದಕ್ಕೀಗ ತೆರೆ ಬಿದಿದ್ದು, ‘ನನ್ನ ಪುಷ್ಪರಾಜ್ ನಿಗೆ ಹುಟ್ಟು ಹಬ್ಬದ ಶುಭಾಶಯಗಳು’ ಎಂದು ರಶ್ಮಿಕಾ ಶುಭ ಕೋರಿದ್ದಾರೆ. ಅಲ್ಲು ಹುಟ್ಟು ಹಬ್ಬಕ್ಕೆ ಪುಷ್ಪ ಚಿತ್ರತಂಡ ಗ್ಲಿಮ್ಸ್ ಬಿಡುಗಡೆ ಮಾಡಿದೆ. ಹೊಸ ರೀತಿಯಲ್ಲೇ ಕಾನ್ಸೆಪ್ಟ್ ಮಾಡಿ ಅದನ್ನು ವಿಡಿಯೋ ರೂಪಕ್ಕೆ ತಂದು, ವಿಡಿಯೋದ ಕೊನೆಯಲ್ಲಿ ಅಲ್ಲು ಅರ್ಜುನ್…

Read More

ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಟ ರಿಷಿ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದ ನಟ. ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಿಷಿ ಇದೀಗ ರಾಮನ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಿಷಿ ಇಬ್ಬರು ನಾಯಕಿಯರ ಜೊತೆ ಡುಯೆಟ್ ಹಾಡಲಿದ್ದಾರೆ. ರಾಮನ ಅವತಾರ ಸಿನಿಮಾದಲ್ಲಿ ರಿಷ ಜೊತೆ ನಟಿ ಶುಭ್ರ ಅಯ್ಯಪ್ಪ ಹಾಗೂ ಪ್ರಣಿತಾ ಸುಭಾಷ್ ಬಣ್ಣ ಹಚಿದ್ದಾರೆ. ಜೊತೆಗೆ ನಟ ಅರುಣ್ ಸಾಗರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಜೊತೆ ಸಹಾಯಕ ನಿರ್ದೇಶಕರಾಗಿ ಹಾಗೂ ಬರಹಗಾರನಾಗಿ ಕೆಲಸ ಮಾಡಿರುವ ಅನುಭವವಿರುವ ವಿಕಾಸ್ ಈ ಸಿನಿಮಾದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದುಕೊಂಡಿದ್ದಾರೆ. ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ಇದೀಗ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ…

Read More

ತೆಂಗಿನ ಎಣ್ಣೆಯು ಸಾಕಷ್ಟು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ನೀವು ಇದನ್ನು ತಲೆಕೂದಲಿಗೆ ಮಾತ್ರವಲ್ಲ ಚರ್ಮಕ್ಕೂ ಬಳಸಬಹುದು. ಚರ್ಮದ ಸಮಸ್ಯೆಗಳನ್ನು ತೊಡೆದುಹಾಕಲು ಬಯಸಿದರೆ, ನೀವು ತೆಂಗಿನ ಎಣ್ಣೆಯನ್ನು ನಿಮ್ಮ ಚರ್ಮಕ್ಕೆ ಹಚ್ಚಬಹುದು. ತ್ವಚೆಗೆ ತೆಂಗಿನ ಎಣ್ಣೆ ತೆಂಗಿನ ಎಣ್ಣೆಯು ಚರ್ಮಕ್ಕೂ ತುಂಬಾ ಉಪಯುಕ್ತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತೆಂಗಿನೆಣ್ಣೆಯೊಂದಿಗೆ ಈ ಕೆಲವು ವಸ್ತುಗಳನ್ನು ಬೆರೆಸಿ ತ್ವಚೆಗೆ ಹಚ್ಚಿದರೆ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ತ್ವಚೆಯ ಮೇಲೆ ತೆಂಗಿನ ಎಣ್ಣೆಯನ್ನು ಬಳಸುವುವದಾದರೆ ಯಾವೆಲ್ಲಾ ವಸ್ತುಗಳನ್ನು ಬೆರೆಸಬಹುದು ಎಂಬುದನ್ನು ತಿಳಿಯೋಣ. ತೆಂಗಿನ ಎಣ್ಣೆಯೊಂದಿಗೆ ಅರಿಶಿನ ತೆಂಗಿನ ಎಣ್ಣೆಯೊಂದಿಗೆ ಅರಿಶಿನವನ್ನು ನಿಮ್ಮ ತ್ವಚೆಯ ಮೇಲೆ ಹಚ್ಬಬಹುದು. ನಿಮಗೆ ಗೊತ್ತಿರುವ ಹಾಗೆ ಅರಿಶಿನವೂ ಸಾಕಷ್ಟು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ಬಹಳ ಹಿಂದಿನಿಂದಲೂ ಇದನ್ನು ತ್ವಚೆಯ ಆರೈಕೆಗೆ ಬಳಸಲಾಗುತ್ತಿದೆ. ಅರಿಶಿನ ಮತ್ತು ಕೊಬ್ಬರಿ ಎಣ್ಣೆ ಮುಖವನ್ನು ಮೃದುವಾಗಿಸುವುದು ಮಾತ್ರವಲ್ಲದೆ ಮುಖದ ಹೊಳಪನ್ನು ಹೆಚ್ಚಿಸುತ್ತದೆ. ನೀವು ಈ ಮಿಶ್ರಣವನ್ನು ವಾರಕ್ಕೊಮ್ಮೆ ಬಳಸಬಹುದು. ಈ ಸಂದರ್ಭದಲ್ಲಿ, ಮೂರು ಚಮಚ ತೆಂಗಿನ ಎಣ್ಣೆಯಲ್ಲಿ ಚಿಟಿಕೆ ಅರಿಶಿನವನ್ನು ಬೆರೆಸಿ…

Read More