ಟ್ರೈಲರ್ ಮೂಲಕವೇ ಸಾಕಷ್ಟು ವಿವಾದ ಸೃಷ್ಟಿಸಿರುವ ‘ದಿ ಕೇರಳ ಸ್ಟೋರಿ’ ಚಿತ್ರ ನಿರ್ಮಾಪಕರ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ. ‘ಲವ್ ಜಿಹಾದ್’ ವಿಷಯವನ್ನು ಎತ್ತುವ ಮೂಲಕ ರಾಜ್ಯವನ್ನು ಧಾರ್ಮಿಕ ಉಗ್ರವಾದದ ಕೇಂದ್ರವೆಂದು ಬಿಂಬಿಸುವ ಸಂಘ ಪರಿವಾರದ ಕೆಲಸವನ್ನು ಸಿನಿಮಾದ ನಿರ್ಮಾಪಕರು ಕೈಗೆತ್ತಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಮತ್ತು ರಾಜ್ಯದ ವಿರುದ್ಧ ದ್ವೇಷದ ಪ್ರಚಾರ ಹರಡುವ ಉದ್ದೇಶದಿಂದ ಸಿನಿಮಾ ನಿರ್ಮಿಸಲಾಗಿದೆ ಎಂದು ಟ್ರೇಲರ್ ಮೂಲಕ ತಿಳಿಯುತ್ತದೆ. ‘ಲವ್ ಜಿಹಾದ್’ ವಿಚಾರವನ್ನು ತನಿಖಾ ಸಂಸ್ಥೆಗಳು, ನ್ಯಾಯಾಲಯಗಳು ತಿರಸ್ಕರಿಸಿದ್ದರೂ, ಕೇರಳ ರಾಜ್ಯವನ್ನು ಪ್ರಪಂಚದ ಮುಂದೆ ಅವಮಾನಿಸುವಂತೆ ಸಿನಿಮಾ ಮಾಡಲಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ದಿ ಕೇರಳ ಸ್ಟೋರಿ ಸಿನಿಮಾದ ಟ್ರೇಲರ್ ನೋಡಿದರೆ, ಜಾತ್ಯತೀತತೆಯ ನೆಲವಾದ ಕೇರಳದಲ್ಲಿ ಧಾರ್ಮಿಕ ಉಗ್ರವಾದದ ಕೇಂದ್ರವಾಗಿ ತನ್ನನ್ನು ತಾನು ಗುರುತಿಸಿಕೊಂಡಿರುವ ಸಂಘ ಪರಿವಾರದ ಪ್ರಚಾರವನ್ನು ಹರಡಲು ಚಿತ್ರ ಪ್ರಯತ್ನಿಸುತ್ತಿದೆ. ಸಂಘ ಪರಿವಾರವು ನಕಲಿ ಕಥೆಗಳು ಮತ್ತು ಚಲನಚಿತ್ರಗಳ ಮೂಲಕ ವಿಭಜನೆಯ…
Author: Prajatv Kannada
ಕಾಲಿವುಡ್ ನ ಖ್ಯಾತ ನಟ ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಭಿಕ್ಷುಕ-2 ಸಿನಿಮಾ ಮೂಲಕ ನಿರ್ದೇಶನದ ಅಖಾಡಕ್ಕೆ ಇಳಿದಿದ್ದಾರೆ. ಪಿಕೈಕ್ಕಾರನ್ ಸಿನಿಮಾದ ಸೀಕ್ವೆಲ್ ಆಗಿರುವ ಈ ಚಿತ್ರ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ತಯಾರಾಗಿದ್ದು, ಕನ್ನಡದಲ್ಲಿ ಭಿಕ್ಷುಕ-2 ಎಂಬ ಟೈಟಲ್ ಇಡಲಾಗಿದೆ. ಈ ಸಿನಿಮಾದ ಕನ್ನಡದ ಟ್ರೇಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡುವ ಮೂಲಕ ಆಂಟೋನಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಪಿಚೈಕ್ಕರನ್ ಮೊದಲ ಭಾಗ ಅಭೂತಪೂರ್ವ ಯಶಸ್ಸು ಕಂಡಿತ್ತು. ಈ ಚಿತ್ರ ವಿಜಯ್ ಅಂಥೋನಿಗೆ ಒಳ್ಳೆ ಹೆಸರು ತಂದುಕೊಟ್ಟಿತ್ತು. ಈಗ ಪಿಚೈಕ್ಕರನ್ ಸೀಕ್ವೆಲ್ ಮೂಲಕ ವಿಜಯ್ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ತಮ್ಮದೇ ವಿಜಯ್ ಆಂಟೋನಿ ಫಿಲ್ಮಂ ಕಾರ್ಪೊರೇಷನ್ ನಡಿ ಅವರೇ ನಿರ್ಮಿಸಿದ್ದು, ಪತ್ನಿ ಫಾತೀಮಾ ವಿಜಯ್ ಆಂಟೋನಿ ಭಿಕ್ಷುಕ-2 ಚಿತ್ರವನ್ನು ತೆರೆಗೆ ತರ್ತಿದ್ದಾರೆ. ಮಲೇಷ್ಯಾದಲ್ಲಿ ಭಿಕ್ಷುಕ-2 ಶೂಟಿಂಗ್ ನಡೆಯುತ್ತಿದ್ದ ವೇಳೆ ವಿಜಯ್ ಆಂಟೋನಿ ಗಂಭೀರ ಗಾಯಗೊಂಡಿದ್ದರು. ಶಸ್ತ್ರ ಚಿಕಿತ್ಸೆ ಬಳಿಕ ಚೇತರಿಕೆ ಕಂಡಿರುವ ಅವರೀಗ ಪ್ರಮೋಷನ್ ಕಾರ್ಯಕ್ಕೆ ಸಜ್ಜಾಗಿದ್ದಾರೆ.…
ಮುಂಬೈ: ಟಿಮ್ ಡೇವಿಡ್ (Tim David ) ಕೊನೆಯ ಓವರ್‌ನಲ್ಲಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ ಪರಿಣಾಮ ರಾಜಸ್ಥಾನ ರಾಯಲ್ಸ್ (Rajasthan Royals ) ವಿರುದ್ಧ ಮುಂಬೈ ಇಂಡಿಯನ್ಸ್ (Mumbai Indians) 6 ವಿಕೆಟ್‌ಗಳ ಜಯ ಸಾಧಿಸಿದೆ. ಗೆಲ್ಲಲು 213 ರನ್‌ಗಳ ಕಠಿಣ ಗುರಿಯನ್ನು ಪಡೆದ ಮುಂಬೈ 19.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಹೊಡೆದು ಪಂದ್ಯವನ್ನು ಗೆದ್ದುಕೊಂಡಿತು. ಕೊನೆಯ 24 ಎಸೆತಗಳಲ್ಲಿ ಮುಂಬೈ ಗೆಲ್ಲಲು 57 ರನ್‌ಗಳ ಅಗತ್ಯವಿತ್ತು. 17 ನೇ ಓವರ್‌ನಲ್ಲಿ 14 ರನ್, 18ನೇ ಓವರ್‌ನಲ್ಲಿ 11 ರನ್, 19ನೇ ಓವರ್‌ನಲ್ಲಿ 15 ರನ್ ಬಂದಿತ್ತು. ಕೊನೆ 6 ಎಸೆತಗಳಲ್ಲಿ 17 ರನ್ ಬೇಕಿತ್ತು. ಜೇಸನ್ ಹೋಲ್ಡರ್ ಎಸೆತ ಪ್ರಥಮ ಮೂರು ಎಸೆತವನ್ನು ಟಿಮ್ ಡೇವಿಡ್ ಸಿಕ್ಸರ್‌ಗೆ ಅಟ್ಟಿ ಜಯವನ್ನು ತಂದುಕೊಟ್ಟರು. ಟಿಮ್ ಡೇವಿಡ್ ಮತ್ತು ತಿಲಕ್ ವರ್ಮಾ ಮುರಿಯದ 5ನೇ ವಿಕೆಟಿಗೆ 23 ಎಸೆತಗಳಲ್ಲಿ 62 ರನ್ ಜೊತೆಯಾಟವಾಡಿದ ಪರಿಣಾಮ ಮುಂಬೈ ಜಯದ ನಗೆ ಬೀರಿದೆ. ಟಿಮ್…
ಮೋಹಿನೀ ಏಕಾದಶಿ, ಸೂರ್ಯೋದಯ: 05.59 AM, ಸೂರ್ಯಾಸ್: 06.35 ಪಿಎಂ ಶಾಲಿವಾಹನ ಶಕೆ1945, ಶೋಭಕೃನ್ನಾಮ ಸಂವತ್ಸರ, ಸಂವತ್2079,ವೈಶಾಖ ಮಾಸ, ಶುಕ್ಲ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ಏಕಾದಶಿ 10:09 PM ತನಕ ನಂತರ ದ್ವಾದಶಿ ನಕ್ಷತ್ರ: ಇವತ್ತು ಪುಬ್ಬಾ 05:51 PM ತನಕ ನಂತರ ಉತ್ತರ ಫಾಲ್ಗುಣಿ ಯೋಗ: ಇವತ್ತು ಧ್ರುವ11:45 AM ತನಕ ನಂತರ ವ್ಯಾಘಾತ ಕರಣ: ಇವತ್ತು ವಣಿಜ 09:22 AM ತನಕ ನಂತರ ವಿಷ್ಟಿ 10:09 PM ತನಕ ನಂತರ ಬವ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 01:30 ನಿಂದ 03:00 ವರೆಗೂ ಅಮೃತಕಾಲ: 10.50 AM to 12.35 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:47 ನಿಂದ ಮ.12:38 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ,…
ಬೆಂಗಳೂರು: ಜೆಡಿಎಸ್ ಕಾಂಗ್ರೆಸ್‌ನ ಬಿ ಟೀಂ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ರಾಜ್ಯ ಜೆಡಿಎಸ್ ಘಟಕ ಆಕ್ರೋಶ ಹೊರ ಹಾಕಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್, ಪ್ರಧಾನಿ ನರೇಂದ್ರ ಮೋದಿ ಮಾತಿಗೆ ಟ್ವೀಟ್ ಮೂಲಕ ತಿರುಗೇಟು ನೀಡಿದೆ. “ಬಿಜೆಪಿ ಕರ್ನಾಟಕ ರಾಜ್ಯದಲ್ಲಿ ಪಾರದರ್ಶಕ ಆಡಳಿತ ನಡೆಸಿದ ಬಗ್ಗೆ ರಾಜ್ಯದ ಜನರು ಚೆನ್ನಾಗಿ ಗಮನಿಸಿದ್ದಾರೆ. ಡಬಲ್ ಇಂಜಿನ್ ಸರಕಾರ ಬಂದ್ಮೇಲೆ ರಾಜ್ಯಕ್ಕೆ ಟ್ರಬಲೇ ಹೆಚ್ಚು. ಸುಸ್ಥಿರ ಆಡಳಿತ ಬಗ್ಗೆ ಮಾತಾಡಿದ ನರೇಂದ್ರ ಮೋದಿ ರಾಜ್ಯವನ್ನು ಕರೆಪ್ಶನ್ ಕ್ಯಾಪಿಟಲ್ ಮಾಡಿದವರ ಬಗ್ಗೆ ಮಾತಾಡಿಲ್ಲ ಯಾಕೆ?” ಎಂದು ಬಿಜೆಪಿ ಮತ್ತು ಮೋದಿಯನ್ನು ಪ್ರಶ್ನೆ ಮಾಡಿದೆ. ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಹೊರಗಿನಿಂದ ನೋಡಲು ಮಾತ್ರ ಬೇರೆ-ಬೇರೆ ಆದರೆ ಆಂತರಿಕವಾಗಿ ಒಂದೇ”. “ಜೆಡಿಎಸ್‌ಗೆ ನೀಡುವ ಒಂದೊಂದು ವೋಟು ಸಹ ಕಾಂಗ್ರೆಸ್‌ಗೆ ಸೇರುತ್ತದೆ”. “ಜೆಡಿಎಸ್ ಕಾಂಗ್ರೆಸ್‌ನ ಬಿ ಟೀಂ” ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದ ಮೂಲದಲ್ಲಿಯೇ ಇದೆ ಎಂಬ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಹೇಳಿಕೆಗೆ ರಾಜ್ಯ ಕಾಂಗ್ರೆಸ್ (State Congress)ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನರೇಂದ್ರ ಮೋದಿ ಅವರೇ, ನೆರೆ, ಕರೋನಾದಂತಹ ಸಂದರ್ಭದಲ್ಲಿ ಕನ್ನಡಿಗರ ಕಡೆ ತಿರುಗಿಯೂ ನೋಡದವರು ಈಗ ಚುನಾವಣೆಗೆ ಬಂದಿದ್ದೀರಿ, ಸಂತೋಷ. ನಿಮ್ಮ ಟೆಲಿಪ್ರಾಂಪ್ಟರ್‌ನಲ್ಲಿ ಬಿಜೆಪಿ ಸರ್ಕಾರದ ಒಂದೇ ಒಂದು ಸಾಧನೆ ಬಗ್ಗೆ ಮಾತಿಲ್ಲವೇಕೆ? ಡಬಲ್ ಇಂಜಿನ್ ಯೋಜನೆ ಬಗ್ಗೆ ಚಕಾರವಿಲ್ಲ ಏಕೆ? ಮುಂದಿನ ಜನಹಿತದ ದೃಷ್ಟಿಕೋನದ ಬಗ್ಗೆಯೂ ಮಾತಿಲ್ಲ ಏಕೆ?’ ಎಂದು ಪ್ರಶ್ನೆ ಮಾಡಿದೆ. ಯುವಕರು, ಮಹಿಳೆಯರು, ರೈತರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸೇರಿದಂತೆ ಸಮಾಜದ ಎಲ್ಲಾ ವರ್ಗದ ಏಳಿಗೆಗಾಗಿ ಕಾಂಗ್ರೆಸ್ ಸ್ಪಷ್ಟ ದೃಷ್ಟಿಕೋನದಲ್ಲಿ ಗ್ಯಾರಂಟಿಗಳನ್ನು ಮುಂದಿಟ್ಟು ಮತ ಕೇಳುತ್ತಿದೆ. ಇದುವರೆಗೂ ಬಿಜೆಪಿ ಭರವಸೆ ಮೂಡಿಸುವ ಯೋಜನೆಯನ್ನು ಜನರ ಮುಂದಿಟ್ಟಿಲ್ಲ. ಬಿಜೆಪಿಗೆ ಜನಹಿತ ಬೇಕಿಲ್ಲ ಎಂಬುದು ಇದರಲ್ಲೇ ಸ್ಪಷ್ಟವಾಗುತ್ತದೆ’ ಎಂದು ಕಾಂಗ್ರೆಸ್ ತಿರುಗೇಟು ಕೊಟ್ಟಿದೆ.
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ(Karnataka Assembly Elections 2023) ನಡೆಯುತ್ತಿದೆ. ಇದರ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಕೋವಿಡ್, ಡೆಂಘಿ ಭೀತಿ ಜೊತೆಗೆ ಇದೀಗಾ ಹಳದಿ ಜ್ವರದ ಆತಂಕ ಉದ್ಭವಿಸಿದೆ(Yellow Fever). ಸುಡಾನ್ ನಿಂದ ಬಂದವರು ಹಳದಿ ಜ್ವರದ ಆತಂಕ ಹೊತ್ತು ತಂದಿದ್ದು, 45 ಶಂಕಿತರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ರಾಜಧಾನಿಗೆ ಹಳದಿ ಜ್ವರದ ಭೀತಿ? ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಹಳದಿ ಜ್ವರದ ಭೀತಿ ಎದುರಾಗಿದೆ. ಆಪರೇಷನ್ ಕಾವೇರಿ ಕಾರ್ಯಚರಣೆಯಡಿ ಐಟಿ ಸಿಟಿಗೆ ಬಂದಿಳಿದ ಸುಡಾನ್ ಮೂಲದ 45 ಮಂದಿ ಶಂಕಿತರನ್ನು ಆರೋಗ್ಯ ಇಲಾಖೆ ಕ್ವಾರಂಟೈನ್ ಮಾಡಿದೆ. ದಕ್ಷಿಣ ಆಫ್ರಿಕಾ, ದಕ್ಷಿಣ ಅಮೆರಿಕಾ, ಉಗಾಂಡ, ನೈಜೀರಿಯಾ, ಕೀನ್ಯಾ ಸೇರಿದಂತೆ ಕೆಲ ದೇಶಗಳಲ್ಲಿ ಯಲ್ಲೋ ಫೀವರ್ ವೈರಸ್ ಆರ್ಭಟಿಸಿದೆ. ಹಳದಿ ಜ್ವರ ಕಾಣಿಸಿಕೊಂಡಿರುವ ಹೈ ರಿಸ್ಕ್ ದೇಶಗಳಿಂದ ಬರುವವರಿಗೆ ಎಲ್ಲೋ ಫೀವರ್ ವ್ಯಾಕ್ಸಿನ್ ಕಡ್ಡಾಯ ಮಾಡಲಾಗಿದೆ. ಆದರೆ ಆಪರೇಷನ್ ಕಾವೇರಿ ಕಾರ್ಯಚರಣೆಯಡಿ ಸುಡಾನ್ನಿಂದ 362 ಮಂದಿ ಆಗಮಿಸಿದ್ದಾರೆ. ಈ ಪೈಕಿ 45 ಜನರ…
ಬೆಂಗಳೂರು: ಬೆಂಗಳೂರಿನ ಸಿಟಿ ಮಾರ್ಕೆಟ್‌ನ(City Market) ಹೂವಿನ ಮಾರುಕಟ್ಟೆಯಲ್ಲಿ ಹೂವಿನ ಹಾರಕ್ಕೆ (Flower garland) ಬೇಡಿಕೆ ಬಂದಿದೆ. ಬಹಿರಂಗ ಪ್ರಚಾರಕ್ಕೆ ಅಧಿಕೃತ ಚಾಲನೆ ಸಿಕ್ಕ ಬೆನ್ನಲ್ಲೇ ಹಾರಕ್ಕೆ ಪ್ರತಿ ದಿನ ಬೇಡಿಕೆ ಬರುತ್ತಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರು ಬಗೆ ಬಗೆಯ ಹಾರಗಳಿಗೆ ಆರ್ಡರ್ ಕೊಡುತ್ತಿದ್ದಾರೆ. 10, 15, 20 ಅಡಿ ಎತ್ತರದ ಕಸ್ಟಮೈಸ್ಡ್ ಹಾರಗಳಿಗೆ ಆರ್ಡರ್ ನೀಡಲಾಗುತ್ತಿದೆ. 15 ಅಡಿ ಎತ್ತರದ ಹೂವಿನ ಹಾರವನ್ನು 15 ಸಾವಿರಕ್ಕೆ ಮಾರಾಟ ಮಾಡಲಾಗುತ್ತಿದೆ. ಪ್ರತಿ ದಿನ 170 ರಿಂದ 200 ಹೂವಿನ ಹಾರಗಳು ಕೆ.ಆರ್. ಮಾರ್ಕೆಟ್‌ನಲ್ಲಿ (City Market)ವ್ಯಾಪಾರವಾಗುತ್ತಿದೆ. ಉಳಿದಂತೆ ಗುಲಾಬಿ ಹಾರ, ಚೆಂಡು ಹೂವಿನ ಹಾರ, ಮಲ್ಲಿಗೆ ಹಾರ ಹೀಗೆ ಬಗೆಬಗೆಯ ಹಾರಗಳು ಮಾರುಕಟ್ಟೆಯಲ್ಲಿದೆ. ಇಂತಹ ಹೂವಿನ ಹಾರಗಳಿಗೆ 3 ಸಾವಿರದಿಂದ 15 ಸಾವಿರ ರೂಪಾಯಿವರೆಗೂ ದರ ನಿಗದಿ ಮಾಡಲಾಗಿದೆ. ಒಂದೆಡೆ ವ್ಯಾಪಾರಿಗಳಿಗೆ ಸಂತಸ ತಂದಿದ್ದರೆ, ಮತ್ತೊಂದೆಡೆ ಪೂಜೆ, ಮನೆಯ ಸಮಾರಂಭಗಳಿಗೆ ಹೂವಿನ ಹಾರ ಖರೀದಿಗೆ ಬರುವ ಜನ ಸಾಮಾನ್ಯರಿಗೆ ಬೆಲೆ ಏರಿಕೆ…
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ಪ್ರಶಸ್ತಿಗೆ ಡಾ.ಮನು ಬಳಿಗಾರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ (Dr. Mahesh Joshi) ಹೇಳಿದ್ದಾರೆ. ಚಾಮರಾಜ ಪೇಟೆಯಲ್ಲಿ (Chamarajpet)ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಪ್ರದಾನ ಮಾಡುವ ಶತಮಾನೋತ್ಸವ ದತ್ತಿ ಪ್ರಶಸ್ತಿಯ 2022ನೇ ಸಾಲಿನ ಪ್ರಶಸ್ತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ ಆಯ್ಕೆಯಾಗಿದ್ದಾರೆ. ಮೇ 5 ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಂದು ಪ್ರಶಸ್ತಿಯನ್ನು ಪ್ರದಾನ ಮಾಡಲಾ ಗುವುದು ಎಂದರು. ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗಾಗಿ ಮೀಸಲಿಟ್ಟಿರುವ ಎನ್.ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಹಾಗೂ ವಿ. ಗೌರಮ್ಮ ಗಂಗಾಧರಯ್ಯ ಸಿಬ್ಬಂದಿ ಸೇವಾ ದತ್ತಿ ಪ್ರಶಸ್ತಿ ಪ್ರಕಟಿಸಲಾಗಿದೆ. 2022ನೇ ಸಾಲಿನ ಎನ್. ರಮಾದೇವಿ ವಿಶ್ವೇಶ್ವರಯ್ಯ ದತ್ತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿ ಹೆಚ್.ಮಂಜುಳಾ 2022ನೆಯ ಸಾಲಿನ ವಿ. ಗೌರಮ್ಮ ಗಂಗಾಧರಯ್ಯ ಸಿಬ್ಬಂದಿ ಸೇವಾ ದತ್ತಿ ಪ್ರಶಸ್ತಿಗೆ ಪರಿಷತ್ತಿನ ಹಿರಿಯ ಸಿಬ್ಬಂದಿ…
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಬೆಂಗಳೂರು (Bengaluru) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ದಿನಗಳಿಂದ ಉರಿ ಬಿಸಿಲಲ್ಲಿ ಬೆಂದಿದ್ದ ನಗರಕ್ಕೆ ಭಾನುವಾರ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರಿನಲ್ಲಿ ಭಾನುವಾರ 2 ಸೆಂ.ಮೀ ಮಳೆ ದಾಖಲಾಗಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಮಳೆಯ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ರಾಯಚೂರು, ದಾವಣಗೆರೆ, ಚಾಮರಾಜನಗರ, ರಾಮನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು, ತುಮಕೂರು, ಹಾಸನ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಕೊಂಚ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿಗೆ ಇಂದಿನಿಂದ ಎರಡು ದಿನಗಳ ಮಳೆಯ ಅಲರ್ಟ್ ನೀಡಲಾಗಿದ್ದು, ಬೀದರ್, ಕಲಬುರುಗಿ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಅಲ್ಲದೇ ಕರಾವಳಿ ಭಾಗದಲ್ಲಿ ಸಾಧಾರಣ…