ಬೆಂಗಳೂರು:- ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಗಳನ್ನು ಬೆಂಗಳೂರು ಸಿಟಿಯಲ್ಲಿ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಜೆಜೆ ನಗರ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರ ಬಳಿ ಇರುವ ಇ ಸಿಗರೇಟ್ಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಸೀಜ್ ಮಾಡುತ್ತಾರೆ. ಸೀಜ್ ಮಾಡಿದ ಇ ಸಿಗರೇಟ್ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಹರಾಜು ಹಾಕಲಾಗುತ್ತದೆ. ಹರಾಜಿನಲ್ಲಿ ಇ ಸಿಗರೇಟ್ಗಳನ್ನು ಖರೀದಿಸುವ ಖತರ್ನಾಕ್ ಗ್ಯಾಂಗ್ ಜೆಜೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಡೌನ್ನಲ್ಲಿ ಶೇಖರಿಸಿದ್ದರು. ಬಳಿಕ ಇ ಸಿಗರೇಟ್ಗಳನ್ನು ವಿಂಗಡಿಸುತ್ತಿದ್ದರು. ಬಳಸದ ಇ ಸಿಗರೇಟ್ಗಳನ್ನು 300-400 ರೂ. ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ತಿಳಿದು ದಾಳಿ ನಡೆಸಿದ ಜೆಜೆನಗರ ಪೊಲೀಸರು ಇಬ್ಬರು ಆರೋಪಿಗಳಿಂದ ಸುಮಾರು 110 ಇ ಸಿಗರೇಟ್ ವಶಪಡಿಸಿಕೊಂಡಿದ್ದಾರೆ.
Author: Prajatv Kannada
ಮಾಸ್ಕೋ: ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದ ಬಳಿ ನಾಪತ್ತೆಯಾಗಿದ್ದ ರಷ್ಯಾದ Mi-8T ಹೆಲಿಕಾಪ್ಟರ್ ಪತ್ತೆಯಾಗಿದ್ದು, ಹೆಲಿಕಾಪ್ಟರ್‌ನಲ್ಲಿದ್ದ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 22 ಜನರನ್ನು ಹೊತ್ತ ರಷ್ಯಾದ Mi-8T ಹೆಲಿಕಾಪ್ಟರ್ ಶನಿವಾರ ವಚ್ಕಜೆಟ್ಸ್ ವಾಲ್ಕೆನೊ ಎಂಬಲ್ಲಿಂದ ಹೊರಟು ನಾಪತ್ತೆಯಾಗಿತ್ತು. ಇದಾದ ಒಂದು ದಿನಗಳ ಬಳಿಕ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದಲ್ಲಿ ಪತನಗೊಂಡಿರುವುದು ಗೊತ್ತಾಗಿದೆ. ಅದಕ್ಕೆ ಪುರಕವಾಗಿ ಹೆಲಿಕಾಪ್ಟರ್‌ನ ಅವಶೇಷಗಳು ಸಿಕ್ಕಿವೆ. ಆದರೆ ಹೆಲಿಕಾಪ್ಟರ್‌ನಲ್ಲಿದ್ದ 22 ಮಂದಿಯೂ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ಭಾನುವಾರ ತಿಳಿಸಿದೆ. ಮಾಸ್ಕೋದಿಂದ ಸುಮಾರು 7,100 ಕಿ.ಮೀ (4,400 ಮೈಲುಗಳು) ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದಲ್ಲಿ ವಾರಾದ್ಯಂತದಲ್ಲಿ ಮಳೆ, ಗಾಳಿಯೊಂದಿಗೆ ಚಂಡಮಾರುತ ಹೆಚ್ಚಾಗಿತ್ತು. ಈ ಕಾರಣದಿಂದಾಗಿ ದುರಂತ ಸಂಭವಿಸಿದೆ ಅನ್ನೂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.
ಇತ್ತೀಚಿನ ವರದಿಯಲ್ಲಿ ಲೈಂಗಿಕವಾಗಿ ಸಕ್ರಿಯವಾಗಿರುವ ಹದಿಹರೆಯದವರಲ್ಲಿ ಕಾಂಡೋಮ್ ಬಳಕೆಯು ಯುರೋಪ್‌ನಲ್ಲಿ ಗಮನಾರ್ಹವಾಗಿ ಕಡಿಮೆಯಾಗಿದೆ ಎನ್ನುವ ಆತಂಕಕಾರಿ ವಿಚಾರವನ್ನು ವಿಶ್ವ ಆರೋಗ್ಯ ಸಂಸ್ಥೆಯು ವಿಚಾರವನ್ನು ಬಹಿರಂಗ ಪಡಿಸಿದೆ. ಮಧ್ಯ ಏಷ್ಯಾದ ಯುರೋಪಿಯನ್ ಪ್ರದೇಶದ 53 ದೇಶಗಳಲ್ಲಿ 42 ದೇಶಗಳಲ್ಲಿ 242,000 ಕ್ಕೂ ಹೆಚ್ಚು 15 ವರ್ಷ ವಯಸ್ಸಿನ ಹದಿಹರೆಯದವರ ಮೇಲೆ ನಡೆಸಿದ ಸಮೀಕ್ಷೆಯು ಆತಂಕಕಾರಿ ವಿಷಯವೊಂದು ಹೊರಬಿದ್ದಿದೆ. ಕಾಂಡೋಮ್ ಬಳಕೆ ಮಾಡದೇ ಇರುವುದರಿಂದ ಯುವಜನರಿಗೆ ಲೈಂಗಿಕವಾಗಿ ಹರಡುವ ಸೋಂಕುಗಳು (ಎಸ್‌ಟಿಐಗಳು ) ಮತ್ತು ಸುರಕ್ಷಿತವಲ್ಲದ ಗರ್ಭಧಾರಣೆಯ ಅಪಾಯವು ಹೆಚ್ಚಾಗುತ್ತಿದೆ. ಸಮಗ್ರ ಲೈಂಗಿಕ ಶಿಕ್ಷಣದ ಪ್ರಾಮುಖ್ಯತೆಯನ್ನು ಒತ್ತಿಹೇಳುವುದಲ್ಲದೆ, ಸರ್ಕಾರಗಳು, ಆರೋಗ್ಯ ಅಧಿಕಾರಿಗಳು ಮತ್ತು ಶಿಕ್ಷಣತಜ್ಞರಿಂದ ತಕ್ಷಣದ ಕ್ರಮ ತೆಗೆದುಕೊಳ್ಳದೇ ಹೋದರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ಎಚ್ಚರಿಸಿದೆ. ಅದಲ್ಲದೇ, ಲೈಂಗಿಕವಾಗಿ ಸಕ್ರಿಯವಾಗಿರುವ ಹದಿಹರೆಯದ ಹುಡುಗರಲ್ಲಿ ಕಾಂಡೋಮ್ ಬಳಸಿದ ಪ್ರಮಾಣವು 2014 ರಲ್ಲಿ 70 ಪ್ರತಿಶತದಿಂದ 2022 ರಲ್ಲಿ 61 ಪ್ರತಿಶತಕ್ಕೆ ಇಳಿದಿದೆ. ಅದೇ ಅವಧಿಯಲ್ಲಿ ಹುಡುಗಿಯರಲ್ಲಿ 63 ಪ್ರತಿಶದಿಂದ 57 ಪ್ರತಿಶತಕ್ಕೆ ಇಳಿಕೆ ಕಂಡಿದೆ…
ನವದೆಹಲಿ: ಮೂರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಉದ್ಘಾಟನೆ ವೇಳೆ ಮಾತನಾಡಿದ ಅವರು, ಈ ವರ್ಷದ ಬಜೆಟ್‌ನಲ್ಲಿ ಕರ್ನಾಟಕಕ್ಕೆ 7,000 ಕೋಟಿ ರೂ.ಗಿಂತ ಹೆಚ್ಚಿನ ಹಣ ನಿಗದಿಪಡಿಸಲಾಗಿದೆ. 2014 ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ, ಒಟ್ಟು 8 ವಂದೇ ಭಾರತ್ ರೈಲುಗಳು ಕರ್ನಾಟಕವನ್ನು ಸಂಪರ್ಕಿಸಿವೆ ಎಂದಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲು ದಕ್ಷಿಣದ ರಾಜ್ಯಗಳ ತ್ವರಿತ ಅಭಿವೃದ್ಧಿಯ ಅಗತ್ಯವನ್ನು ಒತ್ತಿ ಹೇಳಿದ ಮೋದಿ, ದಕ್ಷಿಣ ಭಾರತವು ಅಪಾರ ಪ್ರತಿಭೆ, ಸಂಪನ್ಮೂಲಗಳು ಮತ್ತು ಅವಕಾಶಗಳ ನಾಡು ಎಂದು ಬಣ್ಣಿಸಿದ್ದಾರೆ. ಈ ವರ್ಷ ತಮಿಳುನಾಡಿನ ರೈಲು ಬಜೆಟ್‌ಗೆ 6,000 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಮೀಸಲಿಡಲಾಗಿದೆ. ಇದು 2014 ಕ್ಕಿಂತ ಏಳು ಪಟ್ಟು ಹೆಚ್ಚು. ಈಗ ನೂತನ ವಂದೇ ಭಾರತ್ ರೈಲಿನಿಂದಾಗಿ ತಮಿಳುನಾಡಿನಲ್ಲಿ ಒಟ್ಟು ವಂದೇ ಭಾರತ್ ರೈಲುಗಳ ಸಂಖ್ಯೆ ಎಂಟಕ್ಕೆ ಏರಲಿದೆ ಎಂದು ತಿಳಿಸಿದ್ದಾರೆ. ತಿ ಮಾರ್ಗದಲ್ಲಿ ವಂದೇ ಭಾರತ್‌ಗೆ ಬೇಡಿಕೆ ಹೆಚ್ಚಾಗಿದೆ. ಸೆಮಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ಕಾನೂನು ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕೊಠಡಿಯಲ್ಲಿ ಬೆಳಕಿಗೆ ಬಂದಿದೆ. ರಾಮ್ ಮನೋಹರ್ ಲೋಹಿಯಾ ಕಾನೂನು ವಿವಿ ಹಾಸ್ಟೆಲ್ ಕೊಠಡಿಯಲ್ಲಿ ನೆಲದ ಮೇಲೆ ಕಾನೂನು ವಿದ್ಯಾರ್ಥಿನಿ ಅನಿಕಾ ರಸ್ತೋಗಿ ಶವವಾಗಿ ಪತ್ತೆಯಾಗಿದ್ದಾರೆ. 3ನೇ ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿನಿಯಾಗಿರುವ ಅನಿಕಾ, ಪ್ರಸ್ತುತ ದೆಹಲಿ NIA ಇನ್ಸ್ಪೆಕ್ಟರ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿರುವ ಸಂತೋಷ್ ರಸ್ತೋಗಿ ಅವರ ಪುತ್ರಿ. ಅನಿಕಾ ಶನಿವಾರ ತಡರಾತ್ರಿ ಹಾಸ್ಟೆಲ್ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಆಕೆಯನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟೊತ್ತಿಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಕೆಯ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಕೇಸ್ ದಾಖಲಿಸಿಕೊಂಡು ಆಶಿಯಾನಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅನಿಕಾ ಶನಿವಾರ ಬೇಗನೆ ಹಾಸ್ಟೆಲ್ ರೂಮ್ ಸೇರಿಕೊಂಡಿದ್ದರು. ಎಷ್ಟು ಬಾರಿ ಫೋನ್ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗಲಿಲ್ಲ. ಹಾಸ್ಟೆಲ್ ರೂಮ್ ಬಾಗಿಲು ಬಡಿದರೂ ಆಕೆ ತೆರೆಯದೇ ಇದ್ದಾಗ ಬಾಗಿಲು ಒಡೆದು ನೋಡಿದ್ದಾರೆ.…
ಶಿವಮೊಗ್ಗ:- ಜಿಲ್ಲೆಯ ಸಾಗರ ಪಟ್ಟಣದ ಸಾಗರ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ ಮಾಡಿರುವಂತಹ ಘಟನೆ ಜರುಗಿದೆ. ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಉಪನ್ಯಾಸಕ ಪುನೀತ್ ವಿರುದ್ಧ ಆರೋಪಿಸಲಾಗಿದೆ. ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪುನೀತ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು:- ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ, ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR ದಾಖಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿಗೆ ಠಕ್ಕರ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬೆಳಗಾವಿ:- ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಫುಲ್ ಆಯಕ್ಟೀವ್ ಆಗಿದ್ದು, ಬೀದಿಯಲ್ಲಿ ಸಂಚರಿಸುವ ಒಂಟಿ ಮಹಿಳೆಯರು ಹಾಗೂ ಖಾಲಿ ಮನೆಗಳೆ ಈ ಗ್ಯಾಂಗ್ ಟಾರ್ಗೆಟ್ ಆಗಿದೆ. ರಾತ್ರಿ ಹೊತ್ತು ಮನೆಗಳ ಮುಂಭಾಗ ಬೀಗ ಹಾಕಿದ್ದರೆ, ಹಗಲು ಹೊತ್ತು ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಾರೆ. ಮಹಾಂತೇಶ ನಗರ, ಅಮನ್ ನಗರದಲ್ಲಿ ಸೇರಿದಂತೆ ವಿವಿಧೆಡೆ ಮನೆಗಳ್ಳತನ ಮಾಡಿದ್ದಾರೆ. 2.5 ಲಕ್ಷ ರೂ. ಚಿನ್ನಾಭರಣ, 50 ಸಾವಿರ ಮೌಲ್ಯದ ಬೆಳ್ಳಿ ಹಾಗೂ 2.20 ಲಕ್ಷ ನಗದು ಸೇರಿ 7 ಲಕ್ಷ ಮೌಲ್ಯದ ವಸ್ತು ಎಗರಿಸಿ ಖದೀಮರು ಕಾಲ್ಕಿತ್ತಿದ್ದಾರೆ. ಜತೆಗೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಬೈಕ್ ಕದ್ದು ಹೋಗುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಲಬುರಗಿ: ಮೂರು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆ ಮುಂಜಾಗರುಕತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಕಲಬುರಗಿ ಜಿಲ್ಲಾಡಳಿತ ರಜೆ ಘೋಷಿಸಿದೆ.ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು ಹಲವೆಡೆ ಗ್ರಾಮಗಳಿಗೂ ನೀರು ನುಗ್ಗಿದೆ..ರಸ್ತೆ ಸಂಪರ್ಕ ಸಹ ಹದಗೆಟ್ಟಿದ್ದು ಮಳೆಯ ಅವಾಂತರ ಜನರನ್ನ ಹೈರಾಣಾಗುವಂತೆ ಮಾಡಿದೆ.. ಇದೇವೇಳೆ ಚಿತ್ತಾಪುರ ಅಫಜಲಪುರ ಜೇವರ್ಗಿ ತಾಲೂಕಿನ ಭೀಮಾ ನದಿ ಉಕ್ಕಿ ಹರಿಯುತಿದ್ದು ನದಿದಡಕ್ಕೆ ತೆರಳದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.. ಹವಾಮಾನ ಇಲಾಖೆ ಪ್ರಕಾರ ಎಲ್ಲೆಡೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ…
ಗದಗ:-ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ನಡುವೆ ಅಪಘಾತಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.ಗದಗ ಜಿಲ್ಲೆ ರೋಣ ತಾಲೂಕಿನ ಅಸೂಟಿ ಗ್ರಾಮದ ಬಳಿ ಘಟನೆ ಜರುಗಿದೆ. ಜಗದೀಶ ಚಲವಾದಿ (24) ಮೃತ ದುರ್ದೈವಿ ಎನ್ನಲಾಗಿದೆ. ಕರಮುಡಿ ಗ್ರಾಮದ ಯುವಕ ಎನ್ನಲಾಗಿದೆ. ಬೈಕ್ ಸವಾರ ಹೊಳೆಅಲೂರಿನಿಂದ ಕರಮುಡಿ ಗ್ರಾಮಕ್ಕೆ ತೆರಳ್ತಿದ್ದಾಗ ಈ ಘಟನೆ ನಡೆದಿದೆ.ರೋಣ ಡಿಪೋ ಸೇರಿದ ಸಾರಿಗೆ ಸಂಸ್ಥೆ ಬಸ್ ಇದಾಗಿದ್ದು, ಸ್ಥಳಕ್ಕೆ ರೋಣ ಪೊಲೀಸು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.